Tag: jammu kashmir

  • ಹೃದಯಾಘಾತದಿಂದ ಬಾಗಲಕೋಟೆ ಮೂಲದ ಯೋಧ ನಿಧನ

    ಹೃದಯಾಘಾತದಿಂದ ಬಾಗಲಕೋಟೆ ಮೂಲದ ಯೋಧ ನಿಧನ

    ಬಾಗಲಕೋಟೆ: ಹೃದಯಾಘಾತದಿಂದ ಬಾಗಲಕೋಟೆ ಮೂಲದ ಯೋಧ ಮೃತಪಟ್ಟಿರುವ ಘಟನೆ ಜಮ್ಮುಕಾಶ್ಮೀರದ ಶ್ರಿನಗರದ ಮಿಲಿಟರಿ ಬಟಾಲಿಯನ್ ನಲ್ಲಿ ನಡೆದಿದೆ.

    ಸಿಎಆರ್‍ಪಿಎಫ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಎಲ್.ಟಿ ನಂಬರ್ 1 ತಾಂಡಾದ ನಿವಾಸಿ ಭೀಮಸಿಂಗ್ ರಾಠೋಡ್(54) ಮೃತಪಟ್ಟಿದ್ದಾರೆ.

    ಶ್ರೀನಗರದ ಬಟಾಲಿಯನ್ 73ರಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರಿಗೆ ಮಂಗಳವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ಇತ್ತ ಮೃತ ಯೋಧ ಭೀಮಸಿಂಗ್ ಅವರನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

  • ಲಿಂಗನಮಕ್ಕಿಯಿಂದ ನೀರು ತರೋ ಬದಲು ಬೆಂಗಳೂರಿಗೆ ಪರ್ಯಾಯ ವ್ಯವಸ್ಥೆ ಮಾಡಿ: ಬಿಎಸ್‍ವೈ

    ಲಿಂಗನಮಕ್ಕಿಯಿಂದ ನೀರು ತರೋ ಬದಲು ಬೆಂಗಳೂರಿಗೆ ಪರ್ಯಾಯ ವ್ಯವಸ್ಥೆ ಮಾಡಿ: ಬಿಎಸ್‍ವೈ

    ಬೆಂಗಳೂರು: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ತರುವ ಯೋಜನೆ ಕುರಿತು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

    ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ಸಂಸ್ಮರಣಾ ದಿನಾಚರಣೆ ವೇಳೆ ಮಾತನಾಡಿದ ಅವರು, ಲಿಂಗನಮಕ್ಕಿಯಿಂದ ನೀರು ಹರಿಸುವ ಯೋಜನೆ ಅಸಮಂಜಸವಾಗಿದ್ದು, ಬೆಂಗಳೂರಿಗೆ ನೀರು ತರಲು ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸರ್ಕಾರ ವಿಶೇಷ ಗಮನ ಕೊಡಬೇಕು. ವಾಸ್ತವ ಸಮಸ್ಯೆ ಬಗೆಹರಿಸದೇ ಹಳ್ಳಿ ವಾಸ್ತವ್ಯ ಮಾಡುತ್ತೇನೆ. ಶಾಲೆಯಲ್ಲಿ ಮಲಗುತ್ತೇನೆ ಎಂಬುದು ಮೂರ್ಖತನ. ಇದು ಮುಖ್ಯಮಂತ್ರಿಗಳಿಗೆ ಶೋಭೆ ತರುವಂಥದ್ದಲ್ಲ ಎಂದು ಕಿಡಿಕಾರಿದರು.

    ಈ ಹಿಂದೆ ಮುಖ್ಯಮಂತ್ರಿಗಳು ವಾಸ್ತವ್ಯ ಮಾಡಿದ ಗ್ರಾಮಗಳ ಸ್ಥಿತಿ ಹೇಗಿದೆ ಎಂದು ತಿಳಿದಿದೆ. ನಾನು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ವಿಪಕ್ಷ ನಾಯಕನಾಗಿಯೂ ಒಳ್ಳೆಯ ಕೆಲಸ ಮಾಡಿದ ಅಧಿಕಾರಿಗಳನ್ನು ಶ್ಲಾಘಿಸಿದ್ದೇನೆ. ಕೆಲಸ ಮಾಡದ ಕಡೆಗಳಲ್ಲಿ ಛೀಮಾರಿ ಹಾಕಿದ್ದೇನೆ. ವಿಪಕ್ಷ ನಾಯಕನಾಗಿ ನಾನು ಹೇಗೆ ಇರಬೇಕು ಎಂದು ಮುಖ್ಯಮಂತ್ರಿಗಳಿಂದ ಕಲಿಯಬೇಕಿಲ್ಲ. ಟೀಕೆ ಮಾಡುವ ಬದಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಭಿವೃದ್ಧಿ ಕೆಲಸದ ಕಡೆ ಗಮನಹರಿಸಲಿ. ಕಬ್ಬು ಬೆಲೆ ಬಾಕಿಗೆ ರೈತರು ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದ್ದು, ಇನ್ನಾದರೂ ರೈತರ ಬಾಕಿ ಕೊಟ್ಟು ರೈತರ ನೆರವಿಗೆ ಬರಲಿ ಎಂದು ಟೀಕಿಸಿದ್ದಾರೆ.

    ಖುದ್ದಾಗಿ ಮಾತನಾಡುತ್ತೇನೆ: ಜನೌಷಧಿ ಅಂಗಡಿ ಮುಂದಿದ್ದ ಬಿಜೆಪಿ ಬಾವುಟ ತೆರವುಗೊಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್ ಹಿರಿಯರು, ಅನುಭವಿಗಳು ಈ ರೀತಿ ಮಾಡಿರಲು ಸಾಧ್ಯವಿಲ್ಲ. ಒಂದು ವೇಳೆ ಮಾಡಿದ್ದರೆ ಅದು ಅಸಮಂಜಸ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟರು.

    ಬಿಜೆಪಿ ರಾಷ್ಟ್ರೀಯ ಪಕ್ಷ, ಪರಮೇಶ್ವರ್ ಅವರು ಆ ರೀತಿ ಹೇಳಲು ಸಾಧ್ಯವಿಲ್ಲ. ಅವರು ಹಿರಿಯ ಮತ್ತು ಅನುಭವಿ ರಾಜಕಾರಣಿ. ಒಂದು ವೇಳೆ ಈ ರೀತಿ ಮಾಡಿದ್ದರೆ ಅದು ಸಮಂಜಸವಲ್ಲ. ಈ ಕುರಿತು ನಾನೇ ಖುದ್ದಾಗಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದರು.

    ಕಾಂಗ್ರೆಸ್ಸಿನಿಂದ ಅವಮಾನ: ಡಾ.ಶ್ಯಾಮಪ್ರಸಾದ್ ಮುಖರ್ಜಿಯವರಿಗೆ ಕಾಂಗ್ರೆಸ್ ಎಲ್ಲ ಸಂದರ್ಭದಲ್ಲೂ ಅವಮಾನಿಸಿದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ಸರ್ದಾರ್ ವಲ್ಲಭಬಾಯ್ ಪಟೇಲ್ ರೀತಿಯಲ್ಲೇ ಕಾಂಗ್ರೆಸ್‍ನಿಂದ ಶ್ಯಾಮಪ್ರಸಾದ್ ಮುಖರ್ಜಿಯವರಿಗೆ ಅನ್ಯಾಯ ಮಾಡಲಾಲಾಗಿದೆ ಎಂದರು.

    ಮುಖರ್ಜಿಯವರ ಅನುಮಾನಾಸ್ಪದ ಸಾವಿನ ಕುರಿತು ಅಂದಿನ ಕಾಂಗ್ರೆಸ್ ಸರ್ಕಾರ ತನಿಖೆಯನ್ನು ನಡೆಸಲಿಲ್ಲ. ನೆಹರು ಅವರಿಗೆ ಪರ್ಯಾಯ ನಾಯಕರಾಗಿ ಹೊರಹೊಮ್ಮುತ್ತಿದ್ದ ಕಾರಣ ಮುಖರ್ಜಿಯವರನ್ನು ತುಳಿಯುವ ಪ್ರಯತ್ನ ಮಾಡಲಾಯಿತು. ಜೂನ್ 23 ರಂದು ಶಾಮಪ್ರಸಾದ್ ಮುಖರ್ಜಿಯವರ ಪುಣ್ಯತಿಥಿ. ಅವರ ಜೀವನ, ಸಾಧನೆ ಹಾಗೂ ಬಲಿದಾನ ನಮ್ಮೆಲ್ಲ ಕಾರ್ಯಕರ್ತರಿಗೆ ಪ್ರೇರಣೆ. ಕಾಂಗ್ರೆಸ್‍ಗೆ ಪರ್ಯಾಯ ರಾಜಕೀಯ ಪಕ್ಷ ಕಟ್ಟಿದವರು ಶ್ಯಾಮಪ್ರಸಾದ್. ಭಾರತದ ಏಕತೆಗೆ ಪೂರಕವಲ್ಲದ 370 ವಿಧಿ ರದ್ದಾಗಬೇಕು ಎಂದು ಹೋರಾಟ ಮಾಡಿದ್ದರು. ಈಗ ಜಮ್ಮು ಕಾಶ್ಮೀರದ ಪರಿಸ್ಥಿತಿ ನೋಡಿದರೆ, ಅವರ ಹೋರಾಟದ ಮಹತ್ವ ತಿಳಿಯುತ್ತದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟರು.

    ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ಅಡಿ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯತತ್ಪರರಾಗಿದ್ದಾರೆ. ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿ, ಬದಲಾವಣೆಯ ಗಾಳಿ ಬೀಸುವಂತೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿ ಉಪಾಧ್ಯಕ್ಷ ಗೋವಿಂದ ಕಾರಜೋಳ ಮಾತನಾಡಿ, ಕಾಂಗ್ರೆಸ್‍ನವರು ಅಸ್ಪೃಶ್ಯತೆಯನ್ನು ಜೀವಂತವಾಗಿಟ್ಟು ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡರು. ಅದರೆ ಆರ್‍ಎಸ್‍ಎಸ್ ಮತ್ತು ಬಿಜೆಪಿ ದೀನದಲಿತರ ಏಳಿಗೆಗೆ ಶ್ರಮಿಸುತ್ತಿದೆ. ಸಮಾನ ಭಾವನೆಯಿಂದ ನೋಡುತ್ತಿದೆ ಎಂದು ತಿಳಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ವೈದ್ಯರಿಂದ ಮಹಿಳಾ ರೋಗಿಯ ತಪಾಸಣೆಯ ವಿಡಿಯೋ ಅಪ್ಲೋಡ್

    ವೈದ್ಯರಿಂದ ಮಹಿಳಾ ರೋಗಿಯ ತಪಾಸಣೆಯ ವಿಡಿಯೋ ಅಪ್ಲೋಡ್

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಚಿಕಿತ್ಸೆಗೆ ಬಂದಿದ್ದ ಮಹಿಳಾ ರೋಗಿಯ ತಪಾಸಣೆಯ ವಿಡಿಯೋವನ್ನು ಸೆರೆ ಹಿಡಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

    ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದೆ. ಸಂತ್ರಸ್ತೆಯೊಬ್ಬಳು ಈ ಕುರಿತು ದೂರು ನೀಡಿದಾಗ ವೈದ್ಯರ ಕೃತ್ಯ ಪೊಲೀಸರ ಗಮನಕ್ಕೆ ಬಂದಿದೆ.

    ವೈದ್ಯನೊಬ್ಬ ಮಹಿಳೆಗೆ ತಪಾಸಣೆ ಮಾಡುತ್ತಿದ್ದ ದೃಶ್ಯವನ್ನು ವಿಡಿಯೋ ಮಾಡಿದ್ದಾನೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗಿದ್ದು, ಮಹಿಳೆಯ ಗಮನಕ್ಕೆ ಬಂದಿದೆ. ಇದರಿಂದ ಆಘಾತಕ್ಕೆ ಒಳಗಾದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ವರದಿಯಾಗಿದೆ.

    ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ರಜೌರಿ ಜಿಲ್ಲೆಯ ಕ್ಲಿನಿಕ್‍ನಲ್ಲಿ ವಿಡಿಯೋ ಮಾಡಿರುವು ಸ್ಪಷ್ಟವಾಗಿದೆ. ಈ ಪ್ರಕರಣದಲ್ಲಿ ನಾಲ್ವರು ವೈದ್ಯರು ಭಾಗಿಯಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ.

  • ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ!

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ಸದೆಬಡಿದ ಭದ್ರತಾ ಪಡೆ!

    ಪುಲ್ವಾಮಾ: ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

    ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ.

    ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ ತಂಡ ಮತ್ತು ಉಗ್ರರ ನಡುವೆ ಬೆಳಗ್ಗಿನ ಜಾವ 2.10ರ ಹೊತ್ತಿಗೆ ಗುಂಡಿನ ಚಕಮಕಿ ಶುರುವಾಗಿತ್ತು. ಈ ದಾಳಿಯಲ್ಲಿ ಒಟ್ಟು ಮೂವರು ಉಗ್ರರು ಗಂಭೀರ ಗಾಯಗೊಂಡಿದ್ದರು ಎನ್ನಲಾಗುತ್ತಿದೆ. ಆದರೆ ಈವರೆಗೆ ಕೇವಲ ಇಬ್ಬರು ಉಗ್ರರ ಮೃತದೇಹ ಮಾತ್ರ ಸ್ಥಳದಲ್ಲಿ ಪತ್ತೆಯಾಗಿದೆ.

    ಮೃತ ಉಗ್ರರಲ್ಲಿ ಒಬ್ಬನನ್ನು ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ ಶೌಖತ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

    ಇದೇ ಗುರುವಾರದಂದು ಪುಲ್ವಾಮದಲ್ಲಿ ಮೂವರು ಉಗ್ರರನ್ನು ಸೇನೆ ಎನ್‍ಕೌಂಟರ್ ಮಾಡಿ ಹತ್ಯೆಗೈದಿತ್ತು. ಈ ವೇಳೆ ಓರ್ವ ಯೋಧರು ಹಾಗೂ ಓರ್ವ ಸಾರ್ವಜನಿಕ ಕೂಡ ಗುಂಡೇಟಿಗೆ ಹುತಾತ್ಮರಾಗಿದ್ದರು.

  • ಕಾಶ್ಮೀರದಲ್ಲಿ ಸಾವಿನಂಚಿನಲ್ಲಿದ್ದ ತಾಯಿ, ಮಗುವಿಗೆ ರಕ್ತ ನೀಡಿ ಜೀವ ಉಳಿಸಿದ ಯೋಧ

    ಕಾಶ್ಮೀರದಲ್ಲಿ ಸಾವಿನಂಚಿನಲ್ಲಿದ್ದ ತಾಯಿ, ಮಗುವಿಗೆ ರಕ್ತ ನೀಡಿ ಜೀವ ಉಳಿಸಿದ ಯೋಧ

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರೀಯ ಮೀಸಲು ಪಡೆಯ ಯೋಧರೊಬ್ಬರು ಇಲ್ಲಿನ ಸ್ಥಳೀಯ ಗರ್ಭಿಣಿಗೆ ರಕ್ತದಾನ ಮಾಡಿ ತಾಯಿಯೊಂದಿಗೆ ಮಗುವಿನ ಜೀವವನ್ನೂ ಉಳಿಸಿ ಎಲ್ಲರ ಮನ ಗೆದ್ದಿದ್ದಾರೆ.

    25 ವರ್ಷದ ಮಹಿಳೆಯೊಬ್ಬರಿಗೆ ಡೆಲಿವರಿ ಸಮಯದಲ್ಲಿ ಸಮಸ್ಯೆಯಾಗಿ, ಅವರ ದೇಹದಲ್ಲಿ ರಕ್ತದ ಕೊರತೆ ಉಂಟಾಗಿತ್ತು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ 53ನೇ ಬೆಟಾಲಿಯನ್‍ನ ಸಿಆರ್‌ಪಿಎಫ್ ಯೋಧ ಗೋಯಲ್ ಶೈಲೇಶ್ ಅವರು ಮಹಿಳೆಗೆ ರಕ್ತ ನೀಡಿ, ತಾಯಿ ಮತ್ತು ಮಗುವಿನ ಪ್ರಾಣವನ್ನು ಉಳಿಸಿದ್ದಾರೆ.

    ಡೆಲಿವರಿ ಸಮಯದಲ್ಲಿ ಮಹಿಳೆಯ ದೇಹದಲ್ಲಿ ರಕ್ತದ ಅಭಾವ ಉಂಟಾದಾಗ ಗುಲ್‍ಶಾನ್ ನಿವಾಸಿಗಳಾದ ಆಕೆಯ ಕುಟುಂಬಸ್ಥರು ‘ಮದಾದ್ಗರ್’ ಮೂಲಕ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಸಂಪರ್ಕಿಸಿದ್ದಾರೆ. ‘ಮದಾದ್ಗರ್’ ಕಾಶ್ಮೀರದ ಜನತೆಗೆ ವೈದ್ಯಕೀಯ ತುರ್ತು ಸೇವೆ ಒದಗಿಸಲು ಸಿಆರ್‌ಪಿಎಫ್ ಸ್ಥಾಪಿಸಿದ ಸಹಾಯವಾಣಿಯಾಗಿದ್ದು, ಕರೆ ಬಂದ ತಕ್ಷಣ ಯೋಧ ಆಸ್ಪತ್ರೆಗೆ ತೆರಳಿ ಸಹಾಯ ಮಾಡಿ ಎರಡು ಜೀವಗಳಿಗೆ ಪುನರ್ಜನ್ಮ ನೀಡಿದ್ದಾರೆ.

    ಈ ಬಗ್ಗೆ ಸಿಆರ್‌ಪಿಎಫ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಯೋಧನಿಗೆ ಅಭಿನಂದನೆ ಅರ್ಪಿಸಿದೆ. ಇದು ರಕ್ತದ ಸಂಬಂಧ. 53ನೇ ಬೆಟಾಲಿಯನ್ ಕಾನ್‍ಸ್ಟೇಬಲ್ ಗೋಹಿಲ್ ಶೈಲೇಶ್ ಅವರು ಡೆಲಿವರಿ ಸಮಯದಲ್ಲಿ ತೊಂದರೆ ಅನಿಭವಿಸುತ್ತಿದ್ದ 25 ವರ್ಷದ ಮಹಿಳೆಗೆ ರಕ್ತದಾನ ಮಾಡಿದ್ದಾರೆ. ಅವರ ರಕ್ತವು ತಾಯಿ ಹಾಗೂ ಮಗು ಇಬ್ಬರ ಜೀವವನ್ನು ಉಳಿಸಿ ಒಂದು ಬಂಧವನ್ನು ಸೃಷ್ಟಿಸಿದೆ ಎಂದು ಬರೆದು ಯೋಧ ರಕ್ತ ನೀಡುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿದೆ.

    ಯೋಧನ ಈ ನಿಸ್ವಾರ್ಥ ಸಹಾಯಕ್ಕೆ ಎಲ್ಲೆಡೆಯಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಯೋಧನ ಕಾರ್ಯಕ್ಕೆ ನೆಟ್ಟಿಗರು ಸಲಾಂ ಹೊಡೆಯುತ್ತಿದ್ದಾರೆ.

  • ಪುಲ್ವಾಮಾದಲ್ಲಿ ಸೇನೆಯಿಂದ ನಾಲ್ವರು ಉಗ್ರರ ಎನ್‍ಕೌಂಟರ್!

    ಪುಲ್ವಾಮಾದಲ್ಲಿ ಸೇನೆಯಿಂದ ನಾಲ್ವರು ಉಗ್ರರ ಎನ್‍ಕೌಂಟರ್!

    ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಗುಂಡಿನ ಚಕಮಕಿ ನಡೆದಿದೆ.

    ಪುಲ್ವಾಮಾ ಜಿಲ್ಲೆಯ ಲಸ್ಸಿಪುರದ ಪ್ರದೇಶದಲ್ಲಿ ನಡೆದ ಈ ಗುಂಡಿನ ಕಾಳಗದಲ್ಲಿ ಲಕ್ಷರ್-ಇ- ತೊಯ್ಬಾದ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    2 ಎಕೆ ರೈಫಲ್ಸ್, 1 ಎಸ್‍ಎಲ್ ಆರ್ ಹಾಗೂ ಪಿಸ್ತೂಲನ್ನು ಈಗಾಗಲೇ ವಶಪಡಿಸಿಕೊಂಡಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಒಟ್ಟಿನಲ್ಲಿ ಪದೇ ಪದೇ ಗಡಿ ಉಲ್ಲಂಘಿಸುವ ಉಗ್ರರಿಗೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುತ್ತಿದ್ದಾರೆ.

    40 ಯೋಧರು ಹುತಾತ್ಮ:
    ಫೆ. 14ರ ಪ್ರೇಮಿಗಳ ದಿನವಾದ ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು.

    ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು. ಆ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧದ ವಾತಾವರಣವೇ ನಿರ್ಮಾಣವಾಗಿತ್ತು. ಅಲ್ಲದೆ ಭಾರತೀಯ ಯೋಧರು ಪಾಕ್ ಗಡಿಯೊಳಗೆ ನುಗಿ ಉಗ್ರರ ಅಡಗುತಾಣಗಳನ್ನು ಹೊಡೆದಿರುಳಿಸಿತ್ತು.

  • ಪುಲ್ವಾಮಾ ದಾಳಿಯ ಸಂಚುಕೋರ ಮುದಾಸೀರ್ ಎನ್‌ಕೌಂಟರ್‌‌ಗೆ ಬಲಿ

    ಪುಲ್ವಾಮಾ ದಾಳಿಯ ಸಂಚುಕೋರ ಮುದಾಸೀರ್ ಎನ್‌ಕೌಂಟರ್‌‌ಗೆ ಬಲಿ

    – ವೀರ ಯೋಧರಿಂದ ಮೂವರು ಉಗ್ರರು ಮಟಾಷ್

    ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ 40 ಯೋಧರ ಸಾವಿಗೆ ಕಾರಣವಾದ ಮಾಸ್ಟರ್ ಮೈಂಡ್ ಉಗ್ರ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ.

    ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ. ಜೈಶ್-ಇ-ಮೊಹಮ್ಮದ್ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಮುದಾಸೀರ್ ಅಹ್ಮದ್ ಖಾನ್ ಅಲಿಯಾಸ್ ಮೋದ್ ಭಾಯ್, ಸೇರಿದಂತೆ ಮೂವರು ಉಗ್ರರು ಮೃತಪಟ್ಟಿದ್ದಾರೆ. ಇವರೆಲ್ಲರೂ ದಕ್ಷಿಣ ಕಾಶ್ಮೀರದ ಥ್ರಾಲ್ ನಲ್ಲಿ ಮಧ್ಯರಾತ್ರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

    ಈ ಮೂಲಕ ಭಾರತೀಯ ಸೇನೆ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಮೂಲಗಳ ಪ್ರಕಾರ ಉಗ್ರರ ಶವಗಳ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

    40 ಯೋಧರು ಹುತಾತ್ಮ:
    ಫೇ. 14ರ ಪ್ರೇಮಿಗಳ ದಿನವಾದ ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯೋಧ ಕಿಡ್ನಾಪ್ ಆಗಿಲ್ಲ, ಸುರಕ್ಷಿತವಾಗಿದ್ದಾರೆ: ರಕ್ಷಣಾ ಇಲಾಖೆ ಸ್ಪಷ್ಟನೆ

    ಯೋಧ ಕಿಡ್ನಾಪ್ ಆಗಿಲ್ಲ, ಸುರಕ್ಷಿತವಾಗಿದ್ದಾರೆ: ರಕ್ಷಣಾ ಇಲಾಖೆ ಸ್ಪಷ್ಟನೆ

    ಶ್ರೀನಗರ: ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರನ್ನು ಉಗ್ರರು ಅಪಹರಣಗೈದಿದ್ದಾರೆ ಎನ್ನುವ ಒಂದು ಸುದ್ದಿ ಪ್ರಕಟವಾಗಿತ್ತು. ಆದರೆ ಯೋಧ ಅಪಹರಣಗೊಂಡಿಲ್ಲ ಅವರು ಸುರಕ್ಷಿತವಾಗಿದ್ದಾರೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

    ಜಮ್ಮು ಕಾಶ್ಮೀರದ ಲೈಟ್ ಇನ್‍ಫ್ಯಾಂಟ್ರಿಗೆ ಸೇರಿದ ಯಾಸೀನ್ ಭಟ್ ಅವರನ್ನು ಉಗ್ರರು ಕಿಡ್ನಾಪ್ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿತ್ತು.

    ಈ ಸುದ್ದಿಗೆ ಸ್ಪಷ್ಟನೆ ನೀಡಿದ ರಕ್ಷಣಾ ಇಲಾಖೆ, ಬದ್ಗಾಮ್ ಬಳಿಯ ಖಾಜಿಪೋರದಿಂದ ಯೋಧರೊಬ್ಬರನ್ನು ಅಪಹರಣ ಮಾಡಲಾಗಿದೆ ಎನ್ನುವ ಸುದ್ದಿ ನಿಜವಲ್ಲ. ಅವರು ಸುರಕ್ಷಿತವಾಗಿದ್ದು, ವದಂತಿಗಳನ್ನು ನಂಬಬೇಡಿ ಎಂದು ತಿಳಿಸಿದೆ.

    ಕಳೆದ ವರ್ಷ ಜೂನ್ ತಿಂಗಳಿನಲ್ಲೂ ಯೋಧರೊಬ್ಬರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ್ದರು. ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಔರಂಗಜೇಬ್ ಅವರನ್ನು ಅಪಹರಣ ಮಾಡಿದ್ದರು.

    23 ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ್ದ ಔರಂಗಜೇಬ್ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಪುಲ್ವಾಮಾದಲ್ಲಿ ಶಸ್ತ್ರ ಸಜ್ಜಿತ ಉಗ್ರರು ಸುತ್ತುವರಿದು ಅಪಹರಣ ಮಾಡಿ ಹತ್ಯೆಗೈದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೈಶ್ ಉಗ್ರರಿಬ್ಬರನ್ನು ಹತ್ಯೆಗೈದ ಭದ್ರತಾ ಪಡೆ

    ಜೈಶ್ ಉಗ್ರರಿಬ್ಬರನ್ನು ಹತ್ಯೆಗೈದ ಭದ್ರತಾ ಪಡೆ

    ಶ್ರೀನಗರ: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತದ ಭದ್ರತಾ ಪಡೆ ಎನ್‍ಕೌಂಟರ್ ಮಾಡಿದೆ. ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಶೊಪಿಯಾನ್ ಎಂಬಲ್ಲಿ ಈ ಎನ್‍ಕೌಂಟರ್ ನಡೆದಿದೆ.

    ಶೊಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವದಿಂದಲೇ ಗುಂಡಿನ ಸದ್ದು ಕೇಳತೊಡಗಿತ್ತು. ಬೆಳಗ್ಗೆ 4.20ಕ್ಕೆ ಆರಂಭವಾದ ಗುಂಡಿನ ದಾಳಿ 8.30ಕ್ಕೆ ಅಂತ್ಯಗೊಂಡಿದೆ. ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನ ಎನ್ ಕೌಂಟರ್ ಮಾಡಲಾಗಿದೆ. ದಾಳಿ ನಡೆದ ಪ್ರದೇಶದಲ್ಲಿ ಕೆಟ್ಟೆಚ್ಚರ ವಹಿಸಲಾಗಿದೆ. ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಈ ಗುಂಡಿನ ದಾಳಿಯಲ್ಲಿ ಭಾರತೀಯ ಐವರು ಯೋಧರು ಗಾಯಗೊಂಡಿದ್ದು, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಮೂವರು ಯೋಧರ ಆರೋಗ್ಯ ಸ್ಥಿರವಾಗಿದೆ. ಉಗ್ರರು ಶೊಪಿಯಾನ್ ಜಿಲ್ಲೆಯಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಸಿಆರ್ ಪಿಎಫ್ ಮತ್ತು ವಿಶೇಷ ತನಿಖಾ ತಂಡ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಉಗ್ರರು ಗುಂಡಿನ ದಾಳಿ ನಡೆಸುತ್ತಿರುವಾಗಲೇ ನಮ್ಮ ಯೋಧರು ಸಹ ಪ್ರತಿದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಎಲ್‍ಒಸಿ(ಗಡಿ ನಿಯಂತ್ರಣಾ ರೇಖೆ) ಯ ಸುಮಾರು 50 ಕಡೆಗಳಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ನಿರಂತರವಾಗಿ ಶೆಲ್ ದಾಳಿ ಕೂಡ ಮಾಡಿದೆ. ಪಾಕಿಸ್ತಾನ ಸೇನೆಯ ಉದ್ಧಟತನಕ್ಕೆ ಭಾರತ ಕೂಡ ಅದೇ ದಾಟಿಯಲ್ಲಿ ಉತ್ತರ ನೀಡುತ್ತಿದೆ. ಪಾಕ್ ಸೇನೆಯ ಮೇಲೆ ನಿರಂತರ ಗುಂಡಿನ ದಾಳಿ ನಡೆಸಿದೆ. ಮಂಗಳವಾರ ಸಂಜೆ 5.30ಕ್ಕೆ ಫಿರಂಗಿ ಮೂಲಕ ದೊಡ್ಡ ಶೆಲ್ ದಾಳಿ ಪ್ರಾರಂಭಿಸುವ ಮೂಲಕ ಅಖನೂರ್, ನೌಶೇರಾ, ಕೃಷ್ಣಾ ಘಾಟಿ ಸೆಕ್ಟರ್ ಗಳಲ್ಲಿ ಪಾಕ್ ಪುಂಡಾಟ ಮೆರೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `How is The Josh Sir’- ಭಾರತೀಯ ವೀರಯೋಧರಿಗೆ ಬಿಗ್ ಸೆಲ್ಯೂಟ್

    `How is The Josh Sir’- ಭಾರತೀಯ ವೀರಯೋಧರಿಗೆ ಬಿಗ್ ಸೆಲ್ಯೂಟ್

    ಬೆಂಗಳೂರು: ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನೋರ್ವನ ಆತ್ಮಾಹುತಿ ದಾಳಿಯಿಂದಾಗಿ 40 ಮಂದಿ ಯೋಧರು ಹುತಾತ್ಮರಾದ ಬೆನ್ನಲ್ಲೇ ಇದೀಗ ಭಾರತೀಯ ಸೇನೆ ಪ್ರತಿಕಾರ ತೀರಿಸಿದ್ದು, ಇಡೀ ದೇಶವೇ ವೀರ ಯೋಧರಿಗೆ ಬಿಗ್ ಸೆಲ್ಯೂಟ್ ಹೊಡೆಯುತ್ತಿದೆ.

    ಹೌದು. ಪುಲ್ವಾಮಾ ದಾಳಿಗೆ ಭಾರತೀಯ ಸೇನೆ ಪ್ರತೀಕಾರ ನೀಡಿದೆ ಎಂಬ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಎಲ್ಲರ ವಾಟ್ಸಪ್ ಹಾಗೂ ಫೇಸ್ ಬುಕ್ ನಲ್ಲಿ `How is The Josh Sir’ ಎಂದು ಬರೆದುಕೊಂಡು ಭಾರತೀಯ ಯೋಧರಿಗೆ ಬಿಗ್ ಸೆಲ್ಯೂಟ್ ಹೊಡೆಯುತ್ತಿದ್ದಾರೆ. ಈ ಮೂಲಕ ನಮ್ಮ ಸೈನಿಕರಿಗೆ ಧನ್ಯವಾದ ತಿಳಿಸುತ್ತಿದ್ದಾರೆ.

    ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 200-300 ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗುತ್ತಿದೆ. ಮೊದಲಿಗೆ ಮುಂಜಾನೆ 3.45ರ ಸುಮಾರಿಗೆ ಬಾಲ್‍ಕೋಟ್ ಮೇಲೆ ದಾಳಿ ಮಾಡಿದೆ. ಬಳಿಕ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಲಾಗಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.

    ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ ಶಿಬಿರದ ಮೇಲೆ 100 ಕೆಜಿಯ 10 ಬಾಂಬ್ ಸಿಡಿಸಲಾಗಿದ್ದು, ಉಗ್ರರ ತಾಣದ 500 ಮೀ. ವ್ಯಾಪ್ತಿ ಧ್ವಂಸಗೊಂಡಿದೆ ಎನ್ನಲಾಗುತ್ತಿದ್ದು, ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದ್ರೆ ಪುಲ್ವಾಮಾ ದಾಳಿಯ 12 ನೇ ದಿನಕ್ಕೆ ಭಾರತೀಯ ಪ್ರತಿಕಾರ ತೀರಿಸಿರುವುದು ಸ್ಪಷ್ಟವಾಗಿದ್ದು, ಈ ಬಗ್ಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು `ಇದು ಮೋದಿ ಭಾರತ’ ಎಂದು ಹೇಳುವ ಮೂಲಕ ದಾಳಿ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

    ಬಾಂಬ್ ದಾಳಿಯ ವೇಳೆ ಮಿರಾಜ್ ಗೆ ಸುಖೋಯ್ ಯುದ್ಧ ವಿಮಾನ ಕೂಡ ಬೆಂಗಾವಲಾಗಿತ್ತು. ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿರಾಜ್-2000, ಏಕಕಾಲಕ್ಕೆ 1000 ಕೆ.ಜಿ ಲೇಸರ್ ಗೈಡೆಡೆ ಬಾಂಬ್ ಹಾಕಬಹುದಾದ ಸಾಮಥ್ರ್ಯ ಹೊಂದಿದೆ. ಹೀಗಾಗಿ ಈ ವಿಮಾನಕ್ಕೆ ಭಾರತೀಯ ವಾಯು ಸೇನೆ ` ವಜ್ರ’ ಎಂದು ಹೆಸರಿಟ್ಟಿದೆ. ಸದ್ಯ ದೇಶದ ವಾಯುನೆಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಯೋಧರು ಹುತಾತ್ಮ:
    ಫೆ.14 ರ ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‍ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು.

    ಸ್ಫೋಟದ ತೀವ್ರತೆ ಎಷ್ಟು ಇತ್ತು ಎಂದರೆ ಸೈನಿಕರ ದೇಹದ ಭಾಗಗಳು ಹೈವೇಯ 100 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಸ್ಫೋಟಕಗೊಂಡ ಬಳಿಕ ಉಳಿದ ಬಸ್ಸುಗಳು ನಿಂತ ಮೇಲೆ ಅವುಗಳ ಮೇಲೂ ಉಗ್ರರು ದಾಳಿ ನಡೆಸಿದ್ದರು ಪೂರ್ವನಿಯೋಜಿತ ಕೃತ್ಯವಾಗಿದ್ದರಿಂದ ಸೈನಿಕರ ವಾಹನವನ್ನು ಉಗ್ರರು ಹಿಂಬಾಲಿಸಿಕೊಂಡು ಬಂದಿದ್ದರು. ಆತ್ಮಾಹುತಿ ದಾಳಿಕೋರ ಬಸ್ಸಿಗೆ ಕಾರನ್ನು ಡಿಕ್ಕಿ ಹೊಡೆದ ಬಳಿಕ ಉಳಿದ ಬಸ್ಸುಗಳು ನಿಂತ ಕೂಡಲೇ ಉಗ್ರರು ಗುಂಡಿನ ದಾಳಿ ಮಾಡಿದ್ದರು. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಿತ್ತು. ಉಗ್ರರ ಈ ದಾಳಿಗೆ ಸಾಕ್ಷ್ಯ ಎಂಬಂತೆ ಬಸ್ಸಿನ ಹಿಂಭಾಗದಲ್ಲಿ ಬುಲೆಟ್ ಗುರುತು ಬಿದ್ದಿತ್ತು. ವಿಪರೀತ ಮಂಜು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಶ್ರೀನಗರ ಹೆದ್ದಾರಿ ಕಳೆದ ಎರಡು ದಿನಗಳಿಂದ ಮುಚ್ಚಲ್ಪಟ್ಟಿತ್ತು.

    ಉರಿ ದಾಳಿ:
    ಜಮ್ಮು ಕಾಶ್ಮೀರದ ಉರಿ ಸೇನಾ ನೆಲೆಯ ಮೇಲೆ 2016ರ ಸೆಪ್ಟೆಂಬರ್ 18ರಂದು ನಾಲ್ವರು ಉಗ್ರರು ದಾಳಿ ನಡೆಸಿ 18 ಮಂದಿ ಯೋಧರನ್ನು ಹತ್ಯೆ ಮಾಡಿದ್ದರು. ಭಾರತೀಯ ಸೇನೆ ಸಮವಸ್ತ್ರ ಧರಿಸಿ ಅಕ್ರಮವಾಗಿ ಒಳ ನುಗ್ಗಿದ್ದ ಈ ಪಾಪಿಗಳು ಯೋಧರು ಮಲಗಿದ್ದಾಗ ದಾಳಿ ನಡೆಸಿ ಕೃತ್ಯ ಎಸಗಿದ್ದರು. ಇಲ್ಲಿಯವರೆಗೆ ದೇಶದ ಇತಿಹಾಸಲ್ಲಿ ಅತಿ ದೊಡ್ಡ ದಾಳಿ ಎಂಬ ಕುಖ್ಯಾತಿ ಗಳಿಸಿತ್ತು. ಈಗ ಇದಕ್ಕಿಂತಲೂ ಅತಿ ದೊಡ್ಡ ದಾಳಿ ನಡೆದಿದ್ದು ಉಗ್ರರ ಪಾಪಿ ಕೃತ್ಯಕ್ಕೆ ಅಮಾಯಕ 39 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv