Tag: jammu kashmir

  • ಜಮ್ಮು ಕಾಶ್ಮೀರದ ಗಡಿಯೇತರ ಜಿಲ್ಲೆಗಳಲ್ಲಿ ಶಾಲೆಗಳು ರೀ ಓಪನ್

    ಜಮ್ಮು ಕಾಶ್ಮೀರದ ಗಡಿಯೇತರ ಜಿಲ್ಲೆಗಳಲ್ಲಿ ಶಾಲೆಗಳು ರೀ ಓಪನ್

    -ಸಹಜ ಸ್ಥಿತಿಯತ್ತ ಮರಳುತ್ತಿರುವ ಶ್ರೀನಗರ

    ಶ್ರೀನಗರ: ಭಾರತ (India) ಹಾಗೂ ಪಾಕಿಸ್ತಾನ (Pakistan) ಕದನ ವಿರಾಮ ಘೋಷಿಸಿದ ಬಳಿಕ ಇದೀಗ ಜಮ್ಮು ಮತ್ತು ಕಾಶ್ಮೀರದ (Jammu Kashmir) ಗಡಿಯೇತರ ಜಿಲ್ಲೆಗಳಲ್ಲಿ ಶಾಲೆಗಳು ಪುನರಾರಂಭಗೊಂಡಿದ್ದು (School Reopen), ಶ್ರೀನಗರ (Srinagar) ಸಹಜ ಸ್ಥಿತಿಯತ್ತ ಮರಳುತ್ತಿದೆ.

    ಏ.22ರಂದು ಪಹಲ್ಗಾಮ್‌ನಲ್ಲಿ (Pahalgam) ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಜೋರಾಗಿತ್ತು. ಮೇ 7ರಂದು ಭಾರತೀಯ ಸೇನೆ `ಆಪರೇಷನ್ ಸಿಂಧೂರ’ (Operation Sindoor) ಹೆಸರಿನಲ್ಲಿ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಸೇಡು ತೀರಿಸಿಕೊಂಡಿತ್ತು. ಅದಾದ ಬಳಿಕ ಭಾರತ -ಪಾಕ್ ಯುದ್ಧ ಭೀತಿಯಿಂದಾಗಿ ಅಲ್ಲಿನ ಶಾಲೆಗಳನ್ನು ಬಂದ್ ಮಾಡಲಾಗಿತ್ತು.ಇದನ್ನೂ ಓದಿ: Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

    ಈ ಕುರಿತು ಜಮ್ಮು ವಿಭಾಗೀಯ ಆಯುಕ್ತರು ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿದ ಬಳಿಕ ಗಡಿಯೇತರ ಜಿಲ್ಲೆಗಳಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುತ್ತಿದೆ. ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್ ಜಿಲ್ಲೆಗಳನ್ನು ಗಡಿ ಜಿಲ್ಲೆಗಳೆಂದು ಗುರುತಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಶಾಲೆಗಳು ಸದ್ಯಕ್ಕೆ ಪುನರಾರಂಭಗೊಳ್ಳುವುದಿಲ್ಲ ಎಂದು ತಿಳಿಸಿದರು.

    ಪ್ರಸ್ತುತ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ, ಜಮ್ಮು ಪ್ರಾಂತ್ಯದ ಯಾವುದೇ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಪುನರಾರಂಭಿಸಲಾಗುವುದಿಲ್ಲ ಎಂದರು.

    ಭಾರತ-ಪಾಕ್ ಉದ್ವಿಗ್ನತೆಯಿಂದಾಗಿ ಮುಚ್ಚಲ್ಪಟ್ಟಿದ್ದ ಕೆಲವು ವಿಮಾನ ನಿಲ್ದಾಣಗಳು ಕಾರ್ಯಾರಂಭಿಸಿದ್ದು, ಈಗಾಗಲೇ ಏರ್ ಇಂಡಿಯಾ (Air India) ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ವಿಮಾನಗಳನ್ನು ಪ್ರಾರಂಭಿಸುವತ್ತ ಕೆಲಸ ಮಾಡುತ್ತಿದೆ. ಸದ್ಯ ಎರಡು ದಿನಗಳಿಂದ ಯಾವುದೇ ದಾಳಿಯಾಗದ ಹಿನ್ನೆಲೆ ಶ್ರೀನಗರ ಸಹಜ ಸ್ಥಿತಿಗೆ ಮರಳುತ್ತಿದ್ದು, ಪ್ರಮುಖ ಪ್ರವಾಸಿ ಸ್ಥಳಗಳನ್ನು ಪುನರಾರಂಭಿಸಲಾಗುತ್ತಿದೆ. ಅಲ್ಲಲ್ಲಿ ಪ್ರವಾಸಿಗರು ಕಂಡು ಬರುತ್ತಿದ್ದು, ಸಾಮಾನ್ಯ ವ್ಯಾಪಾರ ವಹಿವಾಟು ಮತ್ತೆ ಆರಂಭಗೊಂಡಿದೆ.ಇದನ್ನೂ ಓದಿ: ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

  • ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ (Shopian) ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹತನಾಗಿದ್ದಾರೆ.

    ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಭದ್ರತಾ ಪಡೆಗಳು ತಿಳಿಸಿವೆ. ಇದನ್ನೂ ಓದಿ: INS ವಿಕ್ರಾಂತ್ ಎಲ್ಲಿದೆ ಹೇಳಿ – ಪಿಎಂ ಕಚೇರಿ ಅಧಿಕಾರಿಯಂತೆ ಕರೆ ಮಾಡಿದ್ದವ ಅರೆಸ್ಟ್‌

    ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದರು. ಇದು ಪರಸ್ಪರರ ನಡುವೆ ಗುಂಡಿನ ಚಕಮಕಿಗೆ ಕಾರಣವಾಯಿತು.

    ಏ.22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಶಂಕಿಸಲಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಪೋಸ್ಟರ್‌ಗಳನ್ನು ಭದ್ರತಾ ಪಡೆಗಳು ಪೋಸ್ಟ್ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ 3 ಉಗ್ರರ ಫೋಟೋ ರಿಲೀಸ್ – ಸುಳಿವು ಕೊಟ್ಟವರಿಗೆ 20 ಲಕ್ಷ ಬಹುಮಾನ

  • ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

    ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

    ಶ್ರೀನಗರ: ಮೋದಿ (Narendra Modi) ಭಾಷಣದ ಬೆನ್ನಲ್ಲೇ ಪಾಕಿಸ್ತಾನ (Pakistan) ಮತ್ತೆ ಕದನ ವಿರಾಮ (Ceasefire Violation) ಉಲ್ಲಂಘಿಸಿದೆ. ಜಮ್ಮು ಹಾಗೂ ಪಂಜಾಬ್‌ನಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದೆ.

    ಜಮ್ಮು, ಸಾಂಬಾ ಸೇರಿದಂತೆ ಹಲವೆಡೆ ಡ್ರೋನ್‌ಗಳು ಹಾರಾಟ ನಡೆಸಿವೆ. ಅಲ್ಲದೇ ಪಂಜಾಬ್‌ನ ಅಮೃತಸರದಲ್ಲೂ ಡ್ರೋನ್‌ಗಳ ಹಾರಾಟ ಕಂಡುಬಂದಿದೆ. ಡ್ರೋನ್ ಹಾರಾಟ ಹಿನ್ನೆಲೆ ಅಮೃತಸರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮಾತ್ರವಲ್ಲದೇ ಮನೆಯಿಂದ ನಾಗರಿಕರು ಹೊರಬಾರದಂತೆ ಸೂಚನೆ ನೀಡಲಾಗಿದೆ. ಸಾಂಬಾ ಪ್ರದೇಶದಲ್ಲಿ ಬ್ಲಾಕ್‌ಔಟ್ ಘೋಷಿಸಲಾಗಿದೆ. ಇದನ್ನೂ ಓದಿ: ಪಾಕ್‌ ಜೊತೆ ಮಾತುಕತೆ ನಡೆದ್ರೆ ಭಯೋತ್ಪಾದನೆ, POK ಬಗ್ಗೆ ಮಾತ್ರ: ಮೋದಿ ಖಡಕ್‌ ಮಾತು

    ಸುಮಾರು 50-60 ಪಾಕ್ ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಮೂಲಗಳು ತಿಳಿಸಿವೆ. ಸದ್ಯ ಪಾಕ್‌ನ ಎಲ್ಲಾ ಡ್ರೋನ್‌ಗಳನ್ನು ಭಾರತದ ಏರ್ ಡಿಫೆನ್ಸ್ ಸಿಸ್ಟಂ ನೆಲಕ್ಕೆ ಉರುಳಿಸಿದೆ. ಪಾಕ್ ಡ್ರೋನ್ ದಾಳಿ ಬೆನ್ನಲ್ಲೇ ದೆಹಲಿ-ಅಮೃತಸರದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಇಂಡಿಗೋ ವಿಮಾನ ಮತ್ತೆ ದೆಹಲಿಗೆ ವಾಪಸ್ ಆಗಿದೆ. ಇದನ್ನೂ ಓದಿ: ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ

    ಇದಕ್ಕೂ ಮುನ್ನ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಿಮ್ಮ ನ್ಯೂಕ್ಲಿಯರ್ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರುವುದಿಲ್ಲ. ಭಯೋತ್ಪಾದಕತೆ ಮತ್ತು ಮಾತುಕತೆ ಒಂದೇ ಸಮಯದಲ್ಲಿ ನಡೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ವ್ಯಾಪಾರ ನಡೆಯಲು ಸಾಧ್ಯವಿಲ್ಲ. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ ಅದು ಭಯೋತ್ಪಾದನೆ ಮತ್ತು ಪಿಒಕೆ ಬಗ್ಗೆ ಮಾತ್ರ ಎಂದು ನಾನು ಅಂತರರಾಷ್ಟ್ರೀಯ ಸಮುದಾಯಕ್ಕೆ ಹೇಳಲು ಬಯಸುತ್ತೇನೆ. ಕಾಶ್ಮೀರದ ಬಗ್ಗೆ ನಮಗೆ ಸ್ಪಷ್ಟವಾದ ನಿಲುವು ಇದೆ. ಪಿಒಕೆ ಮರಳುವುದು ಒಂದು ಬಾಕಿಯಿದೆ. ಅವರು ಭಯೋತ್ಪಾದಕರನ್ನು ಹಸ್ತಾಂತರಿಸುವ ಬಗ್ಗೆ ಮಾತನಾಡಿದರೆ, ನಾವು ಮಾತನಾಡಬಹುದು ಅಷ್ಟೇ ಎಂದು ಖಡಕ್ ಸಂದೇಶ ರವಾನಿಸಿದ್ದರು. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಯಶಸ್ಸಿಗೆ ಕಾರಣರಾದ ಸೈನಿಕರಿಗೆ ಸೆಲ್ಯೂಟ್‌: ಮೋದಿ

  • ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

    ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

    ಶ್ರೀನಗರ: ಜಮ್ಮು & ಮತ್ತು ಕಾಶ್ಮೀರದ ವಾಯುಪ್ರದೇಶದ ಮೂಲಕ ಸ್ಟಾರ್‌ಲಿಂಕ್‌ ಉಪಗ್ರಹಗಳು ಹಾದುಹೋಗಿದ್ದನ್ನು ಕಂಡು ಸ್ಥಳೀಯರು ಪಾಕ್‌ನ ಡ್ರೋನ್‌ ದಾಳಿ ಎಂದು ಭಯಭೀತರಾದ ಘಟನೆ ನಡೆದಿದೆ.

    ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಉಪಗ್ರಹಗಳು ಜಮ್ಮು ಮತ್ತು ಕಾಶ್ಮೀರದ ವಾಯುಪ್ರದೇಶದ ಮೂಲಕ ಹಾದುಹೋದವು. ಇದು ಡ್ರೋನ್‌ ಇರಬಹುದು ಎಂದು ಸ್ಥಳೀಯರು ತಪ್ಪಾಗಿ ಭಾವಿಸಿದ್ದಾರೆ ಎಂದು ವರದಿಯಾಗಿದೆ.

    ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತು. ಇದು ಉಭಯ ದೇಶಗಳ ನಡುವೆ ಸಂಘರ್ಷಕ್ಕೆ ಕಾರಣವಾಯಿತು. ಪಾಕ್‌ ಗಡಿ ಭಾಗದಲ್ಲಿ ಡ್ರೋನ್‌ ದಾಳಿ ಮುಂದುವರಿಸಿತ್ತು. ಭಾರತ ಕೂಡ ತಕ್ಕ ಪ್ರತ್ಯುತ್ತರ ನೀಡಿತ್ತು. ಇದು ಭಾರತದ ಗಡಿ ಭಾಗದಲ್ಲಿ ಭಯದ ವಾತಾವರಣ ಸೃಷ್ಟಿಸಿತ್ತು.

  • ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

    ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಕಾಶ್ಮೀರ ಗಡಿಭಾಗವಾದ ಆರ್‌ಎಸ್ ಪುರದಲ್ಲಿ (RS Pura) ಭಾರತದ ವಿರುದ್ಧ ಪಾಕಿಸ್ತಾನ (Pakistan) ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧ (BSF Soldier) ಹುತಾತ್ಮರಾಗಿದ್ದಾರೆ.

    ದೀಪಕ್ ಚಿಮಂಗ್‌ಖಾಮ್ (Deepak Chimngakham) ಹುತಾತ್ಮರಾದ ಯೋಧ. ಮೇ 10ರಂದು ಭಾರತದ ವಿರುದ್ಧ ಪಾಕ್ ಗುಂಡಿನ ದಾಳಿ ನಡೆಸಿತ್ತು. ಪಾಕ್ ವಿರುದ್ಧ ಪ್ರತಿದಾಳಿ ನಡೆಸುವ ಸಂದರ್ಭ ದೀಪಕ್ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪಾಕ್‌ನ 35-40 ಸೈನಿಕರು ಬಲಿ – ಆಪರೇಷನ್‌ ಸಿಂಧೂರ ಬಗ್ಗೆ ಇಂಚಿಂಚು ಮಾಹಿತಿ ಕೊಟ್ಟ ಇಂಡಿಯನ್‌ ಆರ್ಮಿ

    ಬಿಎಸ್‌ಎಫ್ ಮಹಾನಿರ್ದೇಶಕರು ಸೇರಿದಂತೆ ಎಲ್ಲಾ ಸೈನಿಕರು ಹುತಾತ್ಮರಾದ ದೀಪಕ್‌ಗೆ ಸಂತಾಪ ಸೂಚಿಸಿದ್ದಾರೆ. ದೀಪಕ್ ಅಂತ್ಯಕ್ರಿಯೆಯನ್ನು ಸೋಮವಾರ ಪಲೌರಾದ ಫ್ರಂಟಿಯರ್ ಪ್ರಧಾನ ಕಛೇರಿ ಜಮ್ಮುವಿನಲ್ಲಿ ಸೇನಾ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಬಿಎಎಸ್‌ಎಫ್ ಡಿಜಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಜೊತೆಗಿನ ಸಂಘರ್ಷದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ: ಭಾರತೀಯ ಸೇನೆ

  • ಭಾರತ-ಪಾಕ್ ಸಂಘರ್ಷ | ನವಜಾತ ಶಿಶು, ಪತ್ನಿ ಜೊತೆ ಕಾಲ ಕಳೆಯಬೇಕಿದ್ದ ಯೋಧ ಕರ್ತವ್ಯಕ್ಕೆ ವಾಪಸ್

    ಭಾರತ-ಪಾಕ್ ಸಂಘರ್ಷ | ನವಜಾತ ಶಿಶು, ಪತ್ನಿ ಜೊತೆ ಕಾಲ ಕಳೆಯಬೇಕಿದ್ದ ಯೋಧ ಕರ್ತವ್ಯಕ್ಕೆ ವಾಪಸ್

    ಕಲಬುರಗಿ: ಭಾರತ-ಪಾಕ್ ನಡುವಿನ (India-Pakistan) ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಭಾರತೀಯ ಸೇನೆ (Indian Army) ರಜೆಯಲ್ಲಿರುವ ಯೋಧರನ್ನು ಮರಳಿ ಕರೆಸಿಕೊಳ್ಳುತ್ತಿದೆ. ಹೀಗಾಗಿ ಕುಟುಂಬಸ್ಥರನ್ನು ಬಿಟ್ಟು ಕರ್ತವ್ಯಕ್ಕೆ ವಾಪಸ್ಸಾಗುತ್ತಿದ್ದಾರೆ.

    ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲೂಕಿನ ಧುತ್ತರಗಾವ್ ಗ್ರಾಮದ ಹಣಮಂತರಾಯ್ ಔಸೆ ಅವರು ಕಳೆದ 20 ವರ್ಷಗಳಿಂದ ಸಿಆರ್‌ಪಿಎಫ್ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದು, ಸದ್ಯ ಜಮ್ಮುವಿನ (Jammu) ಶ್ರೀನಗರದಲ್ಲಿ (Srinagar) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೆಂಡತಿಯ ಹೆರಿಗೆಗಾಗಿ 1 ತಿಂಗಳ ರಜೆ ಪಡೆದು ಏ.25 ರಂದು ಊರಿಗೆ ಬಂದಿದ್ದರು.ಇದನ್ನೂ ಓದಿ: ಇನ್ನು ಮುಂದೆ ನಾನು ಪಾಕ್‌ಗೆ ಹೋಗಲ್ಲ: ಡೇರಿಲ್ ಮಿಚೆಲ್

    ಒಂದು ವಾರದ ಹಿಂದೆಯಷ್ಟೇ ಗಂಡು ಮಗು ಜನಿಸಿದ್ದು, ನವಜಾತ ಶಿಶು ಹಾಗೂ ಪತ್ನಿಯೊಂದಿಗೆ ಕಾಲ ಕಳೆಯಬೇಕಿದ್ದ ಹಣಮಂತರಾಯ್ ಔಸೆ ಅವರಿಗೆ ಇದೀಗ ಭಾರತೀಯ ಸೇನೆಗೆ ಮರಳಿ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದೆ. ಗಡಿಯಲ್ಲಿ ಯುದ್ಧ ಕಾರ್ಮೋಡ ಮುಂದುವರಿದ ಹಿನ್ನೆಲೆ ರಜೆಯಲ್ಲಿರುವ ಯೋಧರನ್ನು ಮರಳಿ ಕರೆಸಿಕೊಳ್ಳುತ್ತಿದ್ದು, ಕುಟುಂಬಕ್ಕಿಂತ ದೇಶ ಸೇವೆಯೇ ಮೊದಲು ಎಂದು ಕರ್ತವ್ಯಕ್ಕೆ ಮರಳುತ್ತಿದ್ದಾರೆ. ಕಲಬುರಗಿಯಿಂದ ರೈಲು ಮೂಲಕ ಹೈದ್ರಾಬಾದ್‌ಗೆ ತೆರಳಿ ಅಲ್ಲಿಂದ ಜಮ್ಮುವಿಗೆ ಪ್ರಯಾಣ ಬೆಳಸಲಿದ್ದು, ಕಲಬುರಗಿ ರೈಲು ನಿಲ್ದಾಣದಲ್ಲಿ ಸನ್ಮಾನ ಮಾಡಿ ಕುಟುಂಬಸ್ಥರು ಕಳುಹಿಸಿಕೊಟ್ಟಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಿಎಸ್‌ಎಫ್ ಯೋಧ ಸಿದ್ದಪ್ಪ ಅವರು ರಜೆಗೆಂದು ಊರಿಗೆ ಬಂದಿದ್ದರು. ಸದ್ಯ ಸೇನೆಯ ತುರ್ತು ಕರೆಯ ಮೇರೆಗೆ ಕಲಬುರಗಿ ರೈಲು ನಿಲ್ದಾಣದಿಂದ ಹೈದ್ರಾಬಾದ್‌ಗೆ ಹೋಗಿ, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.ಇದನ್ನೂ ಓದಿ: ಬ್ರಹ್ಮೋಸ್‌ ದಾಳಿಗೆ ಬೆಚ್ಚಿ ಗೋಗರೆದು ಕದನ ವಿರಾಮ ಮಾಡಿಸಿದ್ದ ಪಾಕ್‌!

  • ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

    ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

    ಶ್ರೀನಗರ: ಭಾರತ ಮತ್ತು ಪಾಕಿಸ್ತಾನ (India Pakistan Conflict) ಔಪಚಾರಿಕವಾಗಿ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವೇ ಗಂಟೆಗಳ ನಂತರ ಶನಿವಾರ ಸಂಜೆ ಶ್ರೀನಗರವು ದೊಡ್ಡ ಸ್ಫೋಟಗಳಿಂದ ನಡುಗಿದೆ. ಹಠಾತ್ ಸ್ಫೋಟಗಳನ್ನು ಗಮನಿಸಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕದನ ವಿರಾಮವನ್ನು ಪ್ರಶ್ನಿಸಿದ್ದಾರೆ.

    ಇದು ಕದನ ವಿರಾಮವಲ್ಲ. ಶ್ರೀನಗರದ ಮಧ್ಯಭಾಗದಲ್ಲಿರುವ ವಾಯು ರಕ್ಷಣಾ ಘಟಕಗಳು ಇದೀಗಷ್ಟೇ ತೆರೆದುಕೊಂಡಿವೆ ಎಂದು ಸಿಎಂ ಒಮರ್‌ ಅಬ್ದುಲ್ಲಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್‌ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು

    ಕದನ ವಿರಾಮಕ್ಕೆ ಈಗಷ್ಟೇ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳ ಸದ್ದು ಕೇಳಿಬಂದಿದೆ!!! ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.

    ಕದನ ವಿರಾಮ ಮತ್ತೆ ಉಲ್ಲಂಘಿಸಿ ಪಾಕಿಸ್ತಾನ ಬಾಲ ಬಿಚ್ಚಿದೆ. ಜಮ್ಮುವಿನ ಅಖ್ನೂರ್‌, ಕನಾಚಕ್‌, ಪರ್ಗ್ವಾಲ್‌, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ.

    ಜಮ್ಮುವಿನ ಅಖ್ನೂರ್‌ನಲ್ಲಿ ಸಂಜೆ 7:45 ಕ್ಕೆ ಕದನ ವಿರಾಮ ಉಲ್ಲಂಘನೆಯಾದ ವರದಿಯಾಗಿದೆ. ಹಲವಾರು ಬಾರಿ ಜೋರಾಗಿ ಸ್ಫೋಟಗಳು ಕೇಳಿಬಂದವು. ಅಖ್ನೂರ್, ಕನಾಚಕ್, ಪರ್ಗ್ವಾಲ್ ಮತ್ತು ರಾಮನಗರ ವಲಯಗಳಲ್ಲಿ ಫಿರಂಗಿ ಶೆಲ್ ದಾಳಿ ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದ ಸುಮಾರು 2 ಗಂಟೆ 45 ನಿಮಿಷಗಳ ನಂತರ ಈ ಘಟನೆ ಸಂಭವಿಸಿದೆ. ಪಾಕ್‌ನ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇದನ್ನೂ ಓದಿ: ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

  • ನಾವಿರುವ ಸ್ಥಳದಲ್ಲಿ ಗುಂಡಿನ ಶಬ್ಧಗಳು ಕೇಳುತ್ತಿದೆ: ಓಮರ್ ಅಬ್ದುಲ್ಲಾ

    ನಾವಿರುವ ಸ್ಥಳದಲ್ಲಿ ಗುಂಡಿನ ಶಬ್ಧಗಳು ಕೇಳುತ್ತಿದೆ: ಓಮರ್ ಅಬ್ದುಲ್ಲಾ

    ಶ್ರೀನಗರ: ನಾವಿರುವ ಸ್ಥಳದಲ್ಲಿ ಗುಂಡಿನ ಶಬ್ಧಗಳು ಕೇಳುತ್ತಿದೆ ಎಂದು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ (Omar Abdullah) ತಿಳಿಸಿದ್ದಾರೆ.

    ಭಾರತದ ವಿರುದ್ಧ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ಮುಂದುವರಿಸಿದೆ. ಶುಕ್ರವಾರ ರಾತ್ರಿ ಜಮ್ಮು ಕಾಶ್ಮೀರ, ಪಂಜಾಬ್, ಗುಜರಾತ್, ಪೂಂಚ್, ಉರಿ, ಸಾಂಬಾ, ಫಿರೋಜ್‌ಪುರ ಸೇರಿದಂತೆ ಹಲವೆಡೆ ಪಾಕ್ ಮತ್ತೆ ಡ್ರೋನ್ ದಾಳಿ ಹಾಗೂ ಶೆಲ್ ದಾಳಿ ನಡೆಸಿದೆ. ಜಮ್ಮು ಕಾಶ್ಮೀರದಲ್ಲಿ (Jammu Kashmir) ಭಾರೀ ಸ್ಫೋಟದ ಸದ್ದು ಕೇಳಿದ ಹಿನ್ನೆಲೆ ಬ್ಲ್ಯಾಕ್‌ಔಟ್ ಘೋಷಿಸಲಾಗಿದೆ. ಸೈರನ್‌ಗಳನ್ನು ಮೊಳಗಿಸಿದ ಬಳಿಕ ಜಮ್ಮು ಸಿಎಂ ಓಮರ್ ಅಬ್ದುಲ್ಲಾ ಹೈ ಅಲರ್ಟ್ ಘೋಷಿಸಿ, ಜನರು ಮನೆಯೊಳಗೇ ಸುರಕ್ಷಿತವಾಗಿ ಇರುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಫಿರೋಜ್‌ಪುರದ ಮನೆ ಮೇಲೆ ಬಿದ್ದ ಪಾಕ್‌ ಡ್ರೋನ್‌ – ಮೂವರಿಗೆ ಗಾಯ, ಓರ್ವ ಗಂಭೀರ

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ನಗರದಾದ್ಯಂತ ಸೈರನ್ ಸದ್ದು ಕೇಳಿ ಬರುತ್ತಿದೆ. ಪ್ರತಿಯೊಬ್ಬರಲ್ಲೂ ನಾನು ಒಂದು ಮನವಿ ಮಾಡುತ್ತೇನೆ. ಜಮ್ಮುವಿನ ಪ್ರತಿಯೊಂದು ನಗರದ ನಿವಾಸಿಗಳು ಮನೆಯಲ್ಲೇ ಇರಿ. ಮುಂದಿನ ಕೆಲವು ಗಂಟೆಗಳ ಕಾಲ ಮನೆಯಿಂದ ಹೊರಗೆ ಬರಬೇಡಿ. ಯಾವುದೇ ವದಂತಿ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಅನಧಿಕೃತವಾದ ಯಾವುದೇ ಸುದ್ದಿಗಳನ್ನು ನಂಬಬೇಡಿ ಎಂದು ಒಮರ್ ಅಬ್ದುಲ್ಲಾ ಜನರ ಬಳಿ ಕೇಳಿಕೊಂಡಿದ್ದಾರೆ. ಇದನ್ನೂ ಓದಿ:‌ `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿ ಮಿತ್ರರಾಷ್ಟ್ರಗಳ ಬಳಿ ಸಾಲಕ್ಕಾಗಿ ಅಂಗಲಾಚಿದ ಪಾಕ್ – ಟ್ರೋಲ್

  • ಭಾರತ-ಪಾಕ್ ಗಡಿಯಲ್ಲಿರುವ 24 ವಿಮಾನ ನಿಲ್ದಾಣಗಳು ಮೇ 15ರವರೆಗೆ ಬಂದ್

    ಭಾರತ-ಪಾಕ್ ಗಡಿಯಲ್ಲಿರುವ 24 ವಿಮಾನ ನಿಲ್ದಾಣಗಳು ಮೇ 15ರವರೆಗೆ ಬಂದ್

    ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಹೆಚ್ಚಾಗುತ್ತಿರುವ ಬೆನ್ನಲ್ಲೇ ಭಾರತ ಮತ್ತು ಪಾಕ್ ಗಡಿಯ ಬಳಿಯ 24 ವಿಮಾನ ನಿಲ್ದಾಣಗಳು (Airport) ಮೇ 15ರವರೆಗೆ ಬಂದಾಗಲಿವೆ.

    ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಬಂದ್ ವಿಸ್ತರಣೆ ಮಾಡಲಾಗಿದೆ. ಮೇ 15ರ ಬೆಳಗ್ಗೆ 5:30 ರವರೆಗೂ ಬಂದ್ ವಿಸ್ತರಿಸಲಾಗಿದೆ. ವಿಮಾನಯಾನ (Ministry of Civil Aviation) ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಇದರ ಬಗ್ಗೆ ತಿಳಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಿಂದ ಜಮ್ಮು & ಕಾಶ್ಮೀರ, ಪೂಂಚ್, ಉರಿ ಮೇಲೆ ಶೆಲ್ ದಾಳಿ

    ಶ್ರೀನಗರ, ಜಮ್ಮು , ಅಮೃತಸರ, ಲೇಹ್, ಚಂಡೀಗಢ, ಧರ್ಮಶಾಲಾ, ಬಿಕಾನೇರ್, ರಾಜ್‌ಕೋಟ್, ಜೋಧ್‌ಪುರ ಮತ್ತು ಕಿಶನ್‌ಗಢ ವಿಮಾನ ನಿಲ್ದಾಣಗಳನ್ನು ಮೇ 15ರವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ. ತಾತ್ಕಾಲಿಕ ವಿಮಾನ ನಿಲ್ದಾಣ ಮುಚ್ಚುವಿಕೆಯಿಂದಾಗಿ ಈ ಸ್ಥಳಗಳಿಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಮೇ 15ರಂದು ಬೆಳಿಗ್ಗೆ 5.29 ರವರೆಗೆ ರದ್ದುಗೊಳಿಸಲಾಗುತ್ತದೆ ಎಂದು ಇಂಡಿಗೊ ಏರ್‌ಲೈನ್ಸ್ (Indigo Airlines) ತಿಳಿಸಿದೆ. ಈ ದಿನಗಳಲ್ಲಿ ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರು ಟಿಕೆಟ್ ರದ್ದುಗೊಳಿಸಿದರೆ ಪೂರ್ಣ ರೀತಿಯಲ್ಲಿ ಹಣ ಮರುಪಾವತಿ ಮಾಡಲಾಗುವುದು ಎಂದು ಇಂಡಿಗೊ ತಿಳಿಸಿದೆ.  ಇದನ್ನೂ ಓದಿ: ಭಾರತದ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಪಾಕ್‌ ದಾಳಿ: ಕೇಂದ್ರ ಸರ್ಕಾರ ವಾಗ್ದಾಳಿ

  • ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

    ಭಾರತದ 36 ಕಡೆ 400 ಮಿಸೈಲ್‌ನಿಂದ ಪಾಕ್ ದಾಳಿ: ಕರ್ನಲ್ ಸೋಫಿಯಾ ಖುರೇಷಿ

    – ಪಾಕ್‌ನ ಎಲ್ಲಾ ಮಿಸೈಲ್ ನಾಶ ಮಾಡಿದ್ದೇವೆ

    ನವದೆಹಲಿ: ಭಾರತದ 36 ಕಡೆ 400 ಮಿಸೈಲ್ ಬಳಸಿಕೊಂಡು (Missile Attack) ಗುರುವಾರ ರಾತ್ರಿ ಪಾಕಿಸ್ತಾನ ದಾಳಿ ನಡೆಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ( Colonel Sofiya Qureshi) ಅಧಿಕೃತ ಮಾಹಿತಿ ನೀಡಿದ್ದಾರೆ.

    ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ರಾತ್ರಿ 8ರಿಂದ 9 ಗಂಟೆಗೆ ಆರಂಭವಾಗಿ ಮಧ್ಯರಾತ್ರಿವರೆಗೂ ಭಾರತದ ಮೇಲೆ ಪಾಕಿಸ್ತಾನ ನಿರಂತರ ದಾಳಿ ನಡೆಸಿದೆ. 36 ಕಡೆ 300ರಿಂದ 400 ಪಾಕ್ ಡ್ರೋನ್ ಮಿಸೈಲ್ ದಾಳಿ ಮಾಡಿದೆ. ಪಾಕ್‌ನ ಎಲ್ಲಾ ಮಿಸೈಲ್‌ಗಳನ್ನು ನಾಶ ಮಾಡಲಾಗಿದೆ. ಅಲ್ಲದೇ ಗುಂಡಿನ ದಾಳಿಯನ್ನೂ ಮಾಡಿದೆ. ಪಾಕಿಸ್ತಾನ ಎಲ್‌ಒಸಿಯಲ್ಲಿ ಗುಂಡಿನ ದಾಳಿ ಮಾಡಿದೆ. ಪಂಜಾಬ್, ಭಟಿಂಡಾ ಸೇನಾ ನೆಲೆ ಮೇಲೆ ಪಾಕ್ ದಾಳಿಗೆ ಯತ್ನಿಸಿದೆ ಎಂದರು. ಇದನ್ನೂ ಓದಿ: ಪಾಕ್‌ನಿಂದ ಶೆಲ್ ದಾಳಿ – ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಜಮ್ಮು ಸಿಎಂ

    ಪಾಕಿಸ್ತಾನ ತನ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಸ್ಥಗಿತ ಮಾಡಿಲ್ಲ. ಪಾಕಿಸ್ತಾನ, ಭಾರತದ ಏರ್ ಸ್ಟೇಷನ್‌ಗಳ ಮೇಲೆ ದಾಳಿ ಮಾಡಲು ಯತ್ನಿಸಿದೆ. ತನ್ನ ನಾಗರಿಕ ವಿಮಾನ ಬಳಸಿಕೊಂಡು ಬೇಜವಾಬ್ದಾರಿತನ ತೋರಿದೆ. ಈ ಮೂಲಕ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನ ಉಲ್ಲಘಂನೆ ಮಾಡಿದೆ. ಆದರೆ ಭಾರತ ನಾಗರಿಕರಿಗೆ ಧಕ್ಕೆಯಾಗದಂತೆ ಪ್ರತಿದಾಳಿ ಮಾಡಿದೆ. ಈ ಮೂಲಕ ಭಾರತ ಅಂತಾರಾಷ್ಟ್ರೀಯ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅಗತ್ಯ ಬಿದ್ದರೆ ಮದರಸಾದ ಮಕ್ಕಳನ್ನು ಯುದ್ಧಕ್ಕೆ ಬಳಸಿಕೊಳ್ತೀವಿ: ಪಾಕ್‌ ರಕ್ಷಣಾ ಸಚಿವ

    ಟರ್ಕಿಯ ಡ್ರೋನ್‌ಗಳನ್ನು ಬಳಸಿಕೊಂಡು ಪಾಕಿಸ್ತಾನ ಭಾರತದ ಮೇಲೆ ದಾಳಿ ನಡೆಸಿದೆ. ಕೈನೆಟಿಕ್ ಮತ್ತು ನಾನ್ ಕೈನೆಟಿಕ್ ಎರಡೂ ರೀತಿಯಲ್ಲೂ ಪಾಕ್ ಡ್ರೋನ್‌ಗಳನ್ನು ನಾಶಪಡಿಸಲಾಗಿದೆ. ಡ್ರೋನ್‌ನ ಅವಶೇಷಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ವರದಿಯಲ್ಲಿ ಇದು ಟರ್ಕಿ ನಿರ್ಮಿತ ಡ್ರೋನ್‌ಗಳು ಎಂದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಾರತ-ಪಾಕ್ ಯುದ್ಧ ಭೀತಿ – ಕುತುಬ್ ಮಿನಾರ್ ಸೇರಿ ದೆಹಲಿಯ ಹಲವು ಐತಿಹಾಸಿಕ ತಾಣಗಳಿಗೆ ಬಿಗಿಭದ್ರತೆ