ಬೆಂಗಳೂರು: ಕಾಶ್ಮೀರದ ಪಹಲ್ಗಾವ್‌ನಲ್ಲಿ (Pahalgam ) ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಕನ್ನಡಿಗರ ಮೃತದೇಹ ರಾಜ್ಯಕ್ಕೆ ಆಗಮಿಸಿದೆ.
ದೆಹಲಿಯಿಂದ ಇಂಡಿಗೋ ವಿಮಾನದಲ್ಲಿ ಬೆಳಗ್ಗೆ 3:30ಕ್ಕೆ ಬೆಂಗಳೂರಿನ (Bengaluru) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರ ಆಗಮಿಸಿತು.
With great anguish, landed in Bengaluru along with the families of the Pahalgam terror attack victims.
The mortal remains of Shri Manjunath are being taken to his hometown in Shivamogga, while those of Shri Bharath Bhushan are being moved to his residence in Mathikere. The… pic.twitter.com/j1laQ6ovOm
ಈ ವಿಮಾನದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಮತ್ತು ಮೃತರ ಕುಟುಂಬಸ್ಥರು ಆಗಮಿಸಿದ್ದರು.
ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ (Somanna) ಅವರು ಮೃತದೇಹವನ್ನು ಬರಮಾಡಿಕೊಂಡು ಅಂತಿಮ ನಮನ ಸಲ್ಲಿಸಿದರು. ವಿಮಾನ ನಿಲ್ಥಾಣದ ಒಳಗಡೆ ಸಚಿವ ಸೋಮಣ್ಣ ಮತ್ತು ಅಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪಹಲ್ಗಾಮ್’ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರಾದ ಶ್ರೀ ಮಂಜುನಾಥ್ ರಾವ್ ಹಾಗೂ ಶ್ರೀ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಾಯಿತು.
ಇದೇ ವೇಳೆ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ದುಃಖ ತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆನು. pic.twitter.com/9Y08wrGiiU
ವಿಮಾನ ನಿಲ್ದಾಣದಲ್ಲಿ ಗೌರವ ಸಲ್ಲಿಸಿದ ಬಳಿಕ ಸರ್ಕಾರ ಕುಟುಂಬಸ್ಥರಿಗೆ ಎರಡು ಮೃತ ದೇಹಗಳ ಹಸ್ತಾಂತರ ಮಾಡಿತು. ಒಂದು ಅಂಬುಲೆನ್ಸ್‌ನಲ್ಲಿ ಬೆಂಗಳೂರಿನ ಮತ್ತಿಕೇರೆಯಲ್ಲಿರುವ ಸುಂದರನಗರಕ್ಕೆ ಭರತ್ ಭೂಷಣ್ ಶವ ಮತ್ತೊಂದು ಅಂಬುಲೆನ್ಸ್‌ನಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಪಾರ್ಥಿವ ಶವವವನ್ನು ಕಳುಹಿಸಲಾಯಿತು.
ಬೆಳಗ್ಗೆ 5:30ರ ವೇಳೆಗೆ ಭರತ್ ಭೂಷಣ್ ಶವ ಸುಂದರ ನಗರಕ್ಕೆ ಆಗಮಿಸಿತು. ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ, ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಭಯೋತ್ಪಾದಕರ ದಾಳಿಯಲ್ಲಿ ಬಲಿಯಾದ ಮೂವರು ಕನ್ನಡಿಗರ ಹೊರತಾಗಿ 180 ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಹಿತಿ ನೀಡಿದೆ.
ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 180 ಮಂದಿ ಕನ್ನಡಿಗರು ಸುರಕ್ಷಿತವಾಗಿದ್ದು, ಶ್ರೀನಗರದ ವಿವಿಧ ಹೋಟೆಲ್‌ಗಳಲ್ಲಿ ತಂಗಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಮಾನ ವ್ಯವಸ್ಥೆಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮೇಲುಸ್ತುವಾರಿ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆ ಮಾಡುತ್ತಿದೆ.ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ – 65 ಸಾವಿರಕ್ಕೇರಿಸಿದ್ದ ಪ್ರಯಾಣ ದರ 15,000ಕ್ಕೆ ಇಳಿಕೆ
ಶ್ರೀನಗರದಿಂದ 180 ಜನರ ತಂಡ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಬೆಳಿಗ್ಗೆ 7.30ಕ್ಕೆ ಶ್ರೀನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸ್ವಂತ ದುಡ್ಡಿನಲ್ಲೇ 180 ಜನರನ್ನ ಕರೆತರುತ್ತಿದ್ದು, ಸ್ವತಃ ಎಲ್ಲರಿಗೂ ಕರೆ ಮಾಡಿ ಬೆಂಗಳೂರಿಗೆ ತಲುಪಿಸುವುದಾಗಿ ಮಾಹಿತಿ ನೀಡಿದ್ದಾರೆ. ಸದ್ಯ ಶ್ರೀನಗರದಲ್ಲಿರುವ ಕನ್ನಡಿಗರು ನಿಟ್ಟುಸಿರು ಬಿಟ್ಟಿದ್ದಾರೆ.
ಇನ್ನೂ, ಘಟನೆ ನಡೆದ ಸ್ಥಳದಲ್ಲೇ ಇದ್ದ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಪ್ರಭಾಕರ್ ಕುಟುಂಬ ಕೇವಲ 100 ಮೀಟರ್ ದೂರದಲ್ಲಿ ಪಾರಾದೆವು ಎಂದಿದ್ದಾರೆ. ಹಾನಗಲ್ ಪಟ್ಟಣದ 32 ಜನ, ಕೊಪ್ಪಳದ 4 ಕುಟುಂಬಗಳ 20 ಜನರು ಸೇಫ್ ಆಗಿದ್ದು, ಶ್ರೀನಗರದ ಹೋಟೆಲ್‌ನಲ್ಲಿ ತಂಗಿದ್ದಾರೆ. ಉಡುಪಿಯ ಬ್ರಹ್ಮಾವರ, ಕುಂದಾಪುರದ 20 ಮಂದಿಯ ತಂಡ ಸುರಕ್ಷಿತವಾಗಿದೆ. ಚಿಕ್ಕಮಗಳೂರು ನಗರದ ರಾಮೇಶ್ವರ ನಗರದ ಚಂದ್ರಶೇಖರ್ ಫ್ಯಾಮಿಲಿಯ ಐವರು, ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ನಿವಾಸಿಗಳಾದ ನಾಲ್ವರು ನಿವಾಸಿಗಳು ಸೇಫ್ ಆಗಿದ್ದಾರೆ. ತುಮಕೂರಿನ ರೂಪೇಶ್ ಕೃಷ್ಣಯ್ಯ ಕುಟುಂಬ ಅರ್ಧಗಂಟೆ ಅಂತರದಲ್ಲಿ ಹಾಗೂ ಕಲಬುರಗಿಯ ಬ್ರಂಗಿಮಠ್ ಕುಟುಂಬದ 9 ಜನರು 1 ಗಂಟೆ ಮುಂಚಿತವಾಗಿ ಸ್ಥಳದಿಂದ ವಾಪಸ್ ಆಗಿದ್ದರಿಂದ ಬಚಾವ್ ಆಗಿದ್ದಾರೆ. ಹಾವೇರಿಯ ವಿರೇಶ್ ದಂಪತಿ, ಶಿಗ್ಗಾಂವಿಯ ನಾಗರಾಜ್ ದಂಪತಿ ಸುರಕ್ಷಿತರಾಗಿದ್ದಾರೆ. ಬಾಗಲಕೋಟೆಯ ಮಾರವಾಡಿ ಗಲ್ಲಿಯ 13 ಜನರು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಇನ್ನೇನು ಪಹಲ್ಗಾಮ್‌ಗೆ ತೆರಳಬೇಕಿತ್ತು. ಅಷ್ಟರಲ್ಲಿ ಮನೆಯವರು ಕರೆ ಮಾಡಿ ಘಟನೆ ಬಗ್ಗೆ ಹೇಳಿದ್ದಾರೆ. ತಕ್ಷಣವೇ ಎಲ್ಲರೂ ಜಮ್ಮು ತಲುಪಿದ್ದಾರೆ.ಇದನ್ನೂ ಓದಿ: 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಭಾರತ ವಾರ್ನಿಂಗ್ – ಪಾಕ್ ಸಂಬಂಧಕ್ಕೆ ಎಳ್ಳುನೀರು
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಭಯೋತ್ಪಾದಕ ದಾಳಿಯಿಂದಾಗಿ ವಿಮಾನಗಳ ದರಗಳನ್ನು ನಿಯಮಿತ ಮಟ್ಟದಲ್ಲಿ ಹಾಗೂ ಪ್ರಯಾಣಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿದ ಬೆನ್ನಲ್ಲೇ 65,000ಕ್ಕೆ ಏರಿಸಿದ್ದ ವಿಮಾನಗಳ ಟಿಕೆಟ್ ದರಗಳಲ್ಲಿ ಗಣನೀಯವಾದ ಇಳಿಕೆ ಕಂಡುಬಂದಿದೆ.
ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ಬೆನ್ನಲ್ಲೇ ಪ್ರವಾಸಿಗರು ಕಾಶ್ಮೀರ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಸುಮಾರು 15 ಸಾವಿರ ಜನರು ಟಿಕೆಟ್ ಕ್ಯಾನ್ಸಲ್ ಮಾಡಿದ್ದು, ರೀಶೆಡ್ಯೂಲ್‌ಗೆ ಮನವಿ ಮಾಡಿದ್ದಾರೆ. ಅಲ್ಲದೇ, ಇದೀಗ ಶ್ರೀನಗರದಿಂದ ಹೊರಡುವ ವಿಮಾನಗಳಿಗೆ ಭರ್ಜರಿ ಡಿಮ್ಯಾಂಡ್ ಬಂದಿದೆ. ಹೀಗಾಗಿ, ವಿಮಾನ ದರದಲ್ಲಿ ಏರಿಕೆ ಮಾಡದಂತೆ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿದೆ.ಇದನ್ನೂ ಓದಿ: 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಭಾರತ ವಾರ್ನಿಂಗ್ – ಪಾಕ್ ಸಂಬಂಧಕ್ಕೆ ಎಳ್ಳುನೀರು
ದಾಳಿಯಿಂದಾಗಿ ಕಾಶ್ಮೀರ, ಪಹಲ್ಗಾಮ್ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿದ್ದ ಪ್ರವಾಸಿಗರು ತಮ್ಮ ಸ್ವಸ್ಥಾನಗಳಿಗೆ ಮರಳುತ್ತಿದ್ದು, ಹೀಗಾಗಿ ಶ್ರೀನಗರದಿಂದ ದೆಹಲಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ.
ಟಿಕೆಟ್ ದರ 14,000 ರೂ.ಗೆ ಇಳಿಕೆ:
ನಾಗರಿಕ ವಿಮಾನಯಾನ ಸಚಿವಾಲಯದ ಸೂಚನೆಯ ನಂತರ ವಿಮಾನಯಾನ ಸಂಸ್ಥೆಗಳು ಟಿಕೆಟ್ ದರವನ್ನು 14,000 ರೂ.ಗೆ ಇಳಿಸಿದೆ. ಸದ್ಯ ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಇಂಡಿಗೋ ಕಾರ್ಯನಿರ್ವಹಿಸುತ್ತಿದೆ. ಆದರೆ ದಾಳಿಯ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಬಗ್ಗೆ ತಿಳಿದ ವಿಮಾನಯಾನ ಸಂಸ್ಥೆಗಳು ದರವನ್ನು ಹೆಚ್ಚಿಸಿದ್ದವು. ಶ್ರೀನಗರದಿಂದ ದೆಹಲಿಗೆ ಒಂದು ಮಾರ್ಗದ ದರ 65,000 ರೂ.ಗೆ ನಿಗದಿಪಡಿಸಲಾಗಿತ್ತು. ಶ್ರೀನಗರದಲ್ಲಿ ಸಿಲುಕಿಕೊಂಡಿದ್ದ ಹಾಗೂ ಹಿಂತಿರುಗಲು ಬಯಸಿದ್ದ ಹಲವಾರು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಟಿಕೆಟ್ ಬೆಲೆಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊAಡಿದ್ದರು.
ಇದಕ್ಕೂ ಮುನ್ನ ಮಾತನಾಡಿದ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಮಾತನಾಡಿ, ಶ್ರೀನಗರ ವಿಮಾನ ದರವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ನಗರದಲ್ಲಿರುವ ಪ್ರವಾಸಿಗರ ಪ್ರಯಾಣಕ್ಕಾಗಿ ಬುಧವಾರ ಇನ್ನೂ ಮೂರು ಹೆಚ್ಚುವರಿ ವಿಮಾನಗಳು ಸಂಚರಿಸುತ್ತವೆ ಎಂದು ಹೇಳಿದ್ದರು.
ಈಗಾಗಲೇ ಏರ್ ಇಂಡಿಯಾ ಮತ್ತು ಇಂಡಿಗೋ, ಶ್ರೀನಗರದಿಂದ ದೆಹಲಿ ಮತ್ತು ಮುಂಬೈಗೆ ಒಟ್ಟು ನಾಲ್ಕು ಹೆಚ್ಚುವರಿ ವಿಮಾನಗಳ ಸೇವೆ ಆರಂಭಿಸಿದೆ. ಟಿಕೆಟ್ ಮರುಹೊಂದಾಣಿಕೆ ಮತ್ತು ರದ್ದತಿ ಶುಲ್ಕಗಳನ್ನು ಸಹ ಮನ್ನಾ ಮಾಡಿವೆ. ಏ.22ರಂದು ಅಥವಾ ಅದಕ್ಕೂ ಮೊದಲು ಮಾಡಿದ ಬುಕಿಂಗ್‌ಗಳಿಗೆ ಅನ್ವಯವಾಗುವ ಪ್ರಯಾಣಕ್ಕಾಗಿ ಮರುಹೊಂದಿಸುವಿಕೆ ಅಥವಾ ರದ್ದತಿಗೆ ಏ.30 ರವರೆಗೆ ವಿನಾಯಿತಿ ನೀಡಲಾಗಿದೆ ಎಂದು ಇಂಡಿಗೋ ತಿಳಿಸಿದೆ. ಇನ್ನೂ, ಶ್ರೀನಗರದಿಂದ ವಿವಿಧ ಕಡೆಗೆ ಹೆಚ್ಚುವರಿ ರೈಲುಗಳು ಸಂಚರಿಸಲಿವೆ.ಇದನ್ನೂ ಓದಿ: ಪಹಲ್ಗಾಮ್ ದಾಳಿಯಲ್ಲಿ ಸಾವನ್ನಪ್ಪಿದ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ
ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ (Pahaglam) ನಡೆದ ಭಯೋತ್ಪಾದಕರ ಹಿಂದೂಗಳ ನರಮೇಧದಲ್ಲಿ ಮೂವರು ಕನ್ನಡಿಗರು ಸೇರಿ ಒಟ್ಟು 26 ಜನರು ಬಲಿಯಾಗಿದ್ದು, ಆ 26 ಮಂದಿ ಯಾರು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಅಮೆರಿಕ ಮೂಲದ ಟಿಸಿಎಸ್ ಟೆಕ್ಕಿ ಬಿತನ್, ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಮತ್ತು ಐಎಎಫ್ ಅಧಿಕಾರಿ ತೇಜ್ ಹೈಲ್ಯಾಂಗ್ ಸೇರಿದಂತೆ ಒಟ್ಟು 26 ಜನರ ಹೆಸರನ್ನು ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ.
ದಾಳಿಯಲ್ಲಿ 26 ಜನರು ಸಾವನ್ನಪ್ಪಿರುವ ಕುರಿತು ಅಧಿಕಾರಿಗಳು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆರಿಕ ಮೂಲದ ಕೋಲ್ಕತ್ತಾದ ಟೆಕ್ಕಿ, ಬಿಹಾರದ ಅಬಕಾರಿ ಇನ್ಸ್ಪೆಕ್ಟರ್, ಕರ್ನಾಟಕದ ರಿಯಲ್ ಎಸ್ಟೇಟ್ ಏಜೆಂಟ್, ಒಡಿಶಾದ ಅಕೌಂಟೆಂಟ್, ನೌಕಾಪಡೆಯ ಅಧಿಕಾರಿಯೊಬ್ಬರು ತಮ್ಮ ಕುಟುಂಬಗಳೊಂದಿಗೆ ಪಹಗ್ಲಾಮ್‌ನ ಸುಂದರ ದೃಶ್ಯವನ್ನು ಆನಂದಿಸುತ್ತಿದ್ದಾಗ ಪೈಶಾಚಿಕ ದಾಳಿಗೆ ಬಲಿಯಾಗಿದ್ದಾರೆ.
ಮೃತರ ಪೈಕಿ ಮಹಾರಾಷ್ಟ್ರದ ಅತುಲ್, ಸಂಜಯ್, ಸಂತೋಷ್, ಕೌಸ್ತುಭ, ಮುಂಬೈನ ಹೆಮಂತ್‌ಮ ದಿಲೀಪ್, ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಿತಾನ್, ಸಮೀರ್, ಉತ್ತರಾಖಂಡದ ನೀರಜ್, ಹರಿಯಾಣದ ವಿನಯ್ ನಾರ್ವೆಲ್, ಉತ್ತರ ಪ್ರದೇಶದ ಶುಭಂ, ಬಿಹಾರದ ಮನೀಶ್, ಪಂಜಾಬ್‌ನ ದಿನೇಶ್, ಕೇರಳದ ರಾಮಚಂದ್ರ, ಗುಜರಾತ್‌ನ ಸುಮೀತ್, ಯತೀಶ್, ಶೈಲೇಶ್‌ಬಾಯ್, ಕರ್ನಾಟಕದ ಭರತ್ ಭೂಷಣ್, ಮಧುಸೂದನ್, ಮಂಜುನಾಥ್ ರಾವ್, ಒಡಿಶಾದ ಪ್ರಶಾಂತ್, ಪಹಲ್ಗಾಮ್‌ನ ಸೈಯದ್ ಆದಿಲ್ ಹಸೇನ್, ನೇಪಾಳದ ಸುದೀಪ್, ಆಂಧ್ರಪ್ರದೇಶ ವಿಶಾಖಪಟ್ಟಂನ ಸಚಂದ್ರ, ಅರುಣಾಚಲ ಪ್ರದೇಶದ ತೇಜ್ ಹೈಲ್ಯಾಂಗ್, ಮಧ್ಯಪ್ರದೇಶ ಇಂದೋರ್‌ನ ಸುಶೀಲ್ ಸಾವನ್ನಪ್ಪಿದ್ದಾರೆ.
ಹರಿಯಾಣದ ನೌಕಾಪಡೆಯ ಲೆಫ್ಟಿನೆಂಟ್ ವಿನಯ್ ನರ್ವಾಲ್:
ಮೃತರಲ್ಲಿ ಹರಿಯಾಣದ ಕರ್ನಾಲ್‌ನ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಸಾವನ್ನಪ್ಪಿದ್ದಾರೆ. ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಅವರು ತಮ್ಮ ಪತ್ನಿಯೊಂದಿಗೆ ಹನಿಮೂನ್‌ಗೆ ಹೋಗಿದ್ದಾಗ ಈ ದುರಂತ ನಡೆದಿದೆ. ಈ ಕುರಿತು ವಿನಯ್ ಪತ್ನಿ ಹಿಮಾಂಶಿ ಮಾತನಾಡಿ, ನಾವು ಭೇಲ್ಪುರಿ ತಿನ್ನುತ್ತಿದ್ದೆವು, ಆ ಸಮಯದಲ್ಲಿ ಬಂದೂಕುಧಾರಿಯೊಬ್ಬರು ಬಂದು, ನನ್ನ ಗಂಡ ಮುಸ್ಲಿಂ ಅಲ್ಲ ಎಂದು ತಿಳಿಯುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಿದರು ಎಂದು ಹೇಳಿದರು.
ಗುಪ್ತಚರ ಬ್ಯೂರೋ ಅಧಿಕಾರಿ ಮನೀಶ್ ರಂಜನ್:
ದಾಳಿಯಲ್ಲಿ ಐಎಎಫ್ ಅಧಿಕಾರಿ ತೇಜ್ ಹೈಲ್ಯಾಂಗ್ ಮತ್ತು ಬಂಗಾಳದ ಪುರುಲಿಯಾ ಜಿಲ್ಲೆಯ ಗುಪ್ತಚರ ಬ್ಯೂರೋ ಅಧಿಕಾರಿ ಮನೀಶ್ ರಂಜನ್ ಸಾವನ್ನಪ್ಪಿದ್ದಾರೆ. ಪ್ರಸ್ತುತ ಹೈದರಾಬಾದ್‌ಗೆ ನಿಯೋಜನೆಗೊಂಡಿರುವ ರಂಜನ್, ಕುಟುಂಬ ಸಮೇತ ಜಮ್ಮು ಮತ್ತು ಕಾಶ್ಮೀರದಲ್ಲಿ ರಜೆ ಕಳೆಯುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಕರ್ನಾಟಕದ ಮೂವರು:
ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಿಂದ ವೆಕೆಷನ್‌ಗಾಗಿ ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಪ್ರಾಣಪಕ್ಷಿ ಹಾರಿಹೋಗಿದೆ.
ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಉಗ್ರರು ನಡೆಸಿದ ನಡೆದ ಹಿಂದೂಗಳ ನರಮೇಧದಲ್ಲಿ ಬೆಂಗಳೂರಿನ ಮಧುಸೂದನ್ ಬಲಿಯಾಗಿದ್ದಾರೆ. ಮೂಲತಃ ಆಂಧ್ರದ ನೆಲ್ಲೂರಿನವರಾದ ಮಧುಸೂದನ್ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದರು. ಎರಡು ದಿನದ ಹಿಂದೆ ಕಾಶ್ಮೀರಕ್ಕೆ ಕುಟುಂಬ ತೆರಳಿತ್ತು.
ಮಂಜುನಾಥ್ ರಾವ್ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದವರು. ಅವರ ತಂದೆ ಶಿವಮೊಗ್ಗದ ಮ್ಯಾಮ್ ಕೋಸ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದರು. ಮೂರು ದಿನಗಳ ಹಿಂದೆ ಮಂಜುನಾಥ್ ರಾವ್ ಪತ್ನಿ, ಮಗನನ್ನು ಕರೆದುಕೊಂಡು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಮಗನ ಪಿಯುಸಿ ಪರೀಕ್ಷೆ ಮುಗಿದ ಬೆನ್ನಲ್ಲೇ 6 ದಿನಗಳ ಪ್ಯಾಕೇಜ್ ಪ್ರವಾಸ ಕೈಗೊಂಡಿದ್ದರು. ಎರಡು ದಿನಗಳ ಹಿಂದೆ ಸಂಬಂಧಿ ಅಶೋಕ್‌ಗೆ ಕರೆ ಮಾಡಿದ್ದ ಮಂಜುನಾಥ್ ಏ.24ರಂದು ವಾಪಸ್ ಬರುವುದಾಗಿ ಹೇಳಿದ್ದರು. ಆದ್ರೆ ದುರದೃಷ್ಟವಶಾತ್ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.
ಮಹಾರಾಷ್ಟ್ರದ ಸಂತೋಷ್ ಜಗದಾಳೆ & ಕೌಸ್ತುಭ್ ಗನ್ಬೋಟೆ:
ಮಹಾರಾಷ್ಟ್ರದ ಪುಣೆಯ ಉದ್ಯಮಿಗಳಾದ ಸಂತೋಷ್ ಜಗದಾಳೆ ಮತ್ತು ಕೌಸ್ತುಭ್ ಗನ್ಬೋಟೆ ಕುಟುಂಬ ಸಮೇತ ಮಂಗಳವಾರ ಪಹಲ್ಗಾಮ್‌ಗೆ ತೆರಳಿದ್ದರು. ಅದೇ ದಿನ ವಿಧಿ ಅವರಿಬ್ಬರನ್ನು ಗುಂಡಿನ ದಾಳಿಯಲ್ಲಿ ಬಲಿ ಪಡೆದುಕೊಂಡಿದೆ.
ಈ ಕುರಿತು ಸಂತೋಷ್ ಮಗಳು ಮಾತನಾಡಿ, ನಮ್ಮ ಸುತ್ತಲೂ ಹಲವಾರು ಪ್ರವಾಸಿಗರಿದ್ದರು. ಆದರೆ ಭಯೋತ್ಪಾದಕರು ಹಿಂದೂ ಅಥವಾ ಮುಸ್ಲಿಂ ಎಂದು ಕೇಳಿದ ನಂತರ ಪುರುಷನ್ನು ಗುರಿಯಾಗಿಸಿಕೊಂಡು ಬಲಿ ಪಡೆದಿದ್ದಾರೆ ಎಂದರು.
ಒಡಿಶಾದ ಪ್ರಶಾಂತ್ ಸತ್ಪತಿ:
ಒಡಿಶಾದ ಬಾಲಸೋರ್‌ನ ಮೂಲದವರಾದ ಪ್ರಶಾಂತ್ ಸತ್ಪತಿ ಎಂಬುವವರು ತಮ್ಮ ಪತ್ನಿ ಮತ್ತು ಎಂಟು ವರ್ಷದ ಮಗನೊಂದಿಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದರು. ಈ ವೇಳೆ ಗುಂಡಿನ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಕುರಿತು ಮೃತನ ಸಹೋದರ ಮಾತನಾಡಿ. ನಾವು ಟೋಲ್-ಫ್ರೀ ಸಂಖ್ಯೆಗೆ ಕರೆ ಮಾಡಿದಾಗ, ಅವರು ನನ್ನ ಸಹೋದರ ಸಾವಿನ್ನಪ್ಪಿರುವ ಕುರಿತು ಮಾಹಿತಿ ನೀಡಿದರು. ಸದ್ಯ ನನ್ನ ಸಹೋದರ ಪತ್ನಿ ಹಾಗೂ ಮಗನ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಪಶ್ಚಿಮ ಬಂಗಾಳದ ಇಬ್ಬರು
ಅಮೆರಿಕ ಮೂಲದ ಕೋಲ್ಕತ್ತಾದ ಬೈಷ್ಣಬ್ಘಾಟಾ ನಿವಾಸಿಯಾಗಿರುವ ಟಿಸಿಎಸ್ ಟೆಕ್ಕಿ ಬಿತನ್ ಅಧಿಕಾರಿ ತಮ್ಮ ಅಮೆರಿಕದಿಂದ ಹಿಂದಿರುಗಿ ತಮ್ಮ ಪತ್ನಿ ಸೋಹಿನಿ ಅಧಿಕಾರಿ (37) ಮತ್ತು ಅವರ ಮೂರುವರೆ ವರ್ಷದ ಮಗ ಹೃದಾನ್ ಅಧಿಕಾರಿಯೊಂದಿಗೆ ಪಹಲ್ಗಾಮ್ ತೆರಳಿದ್ದರು. ಈ ವೇಳೆ ದಾಳಿಯಲ್ಲಿ ಪ್ರಾಣ ಕಳೆದುಕೊಂಡರು. ಏ.16 ರಿಂದ ಏ.24ರವರೆಗೆ ಕಾಶ್ಮೀರ ಪ್ರವಾಸದ ಯೋಜನೆ ಹಾಕಿಕೊಂಡಿದ್ದರು.
ಈ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿತನ್ ಅಧಿಕಾರಿ ಪಶ್ಚಿಮ ಬಂಗಾಳದವರು. ನಾನು ಅವರ ಪತ್ನಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರ ಪಾರ್ಥಿವ ಶರೀರವನ್ನು ಕೋಲ್ಕತ್ತಾಕ್ಕೆ ತರಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಕೋಲ್ಕತ್ತಾ ನಿವಾಸಿ ಸಮೀರ್ ಗುಹಾ ಅವರು ಕೇಂದ್ರದ ಅಂಕಿಅಂಶ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಪತ್ನಿ ಮತ್ತು ಮಗಳೊಂದಿಗೆ ಕಾಶ್ಮೀರಕ್ಕೆ ಭೇಟಿ ನೀಡಿದಾಗ ಈ ದಾಳಿ ನಡೆದಿದೆ.
ಉತ್ತರ ಪ್ರದೇಶದ ಶುಭಂ ದ್ವಿವೇದಿ:
ಪಹಲ್ಗಾಮ್ ದಾಳಿಗೂ ಮುಂಚೆ ಶುಭಂ ಮತ್ತು ಅವರ ಪತ್ನಿ ಮ್ಯಾಗಿ ತಿನ್ನುತ್ತಿದ್ದರು. ಈ ವೇಳೆ ಸಮವಸ್ತ್ರದಲ್ಲಿದ್ದ ಇಬ್ಬರು ಪುರುಷರು ಅವರ ಬಳಿಗೆ ಬಂದು, ನೀವು ಮುಸ್ಲಿಮರಾ ಎಂದು ಕೇಳಿದರು. ಬಳಿಕ ಇಸ್ಲಾಮಿಕ್ ನಂಬಿಕೆಯ ಘೋಷಣೆಯಾದ ಕಲೀಮಾವನ್ನು ಪಠಿಸುವಂತೆ ಒತ್ತಾಯಿಸಿದರು. ಈ ಕುರಿತು ಶುಭಂ ತಂದೆ ಮಾತನಾಡಿ, ಎರಡು ತಿಂಗಳ ಹಿಂದೆ ಶುಭಂ ಮದುವೆಯಾಗಿತ್ತು. ಮಗ ಮತ್ತು ಸೊಸೆ ಕಾಶ್ಮೀರಕ್ಕೆ ಹೋಗಿದ್ದರು. ಇಂದು ವಾಪಸ್ಸಾಗಬೇಕಿತ್ತು. ಆದರೆ ಈ ಘೋರ ದುರಂತ ನಡೆದಿದೆ ಎಂದರು.
ಗುಜರಾತ್‌ನ ಮೂವರು:
ಭಯೋತ್ಪಾದಕ ದಾಳಿಯಲ್ಲಿ ಗುಜರಾತ್‌ನ ಭಾವನಗರದ ಯತೀಶ್‌ಭಾಯ್ ಮತ್ತು ಅವರ ಮಗ ಸ್ಮಿತ್ ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡಿರುವುದಾಗಿ ಗುಜರಾತ್ ಸರ್ಕಾರ ತಿಳಿಸಿದ್ದು, ಶೀಘ್ರವೇ ಗಾಯಾಳುವನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇನ್ನೂ ಗುಜರಾತ್‌ನ ಸೂರತ್‌ನವರಾದ ಶೈಲೇಶ್ ಕಲ್ಥಿಯಾ ಅವರು ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಕಾಶ್ಮೀರಕ್ಕೆ ತೆರಳಿದ್ದರು. ಕುದುರೆ ಸವಾರಿಮಾಡುತ್ತಿದ್ದಾಗ ಕುಟುಂಬದ ಮುಂದೆಯೇ ದಾಳಿಗೀಡಾದರು.
ನೇಪಾಳದ ಸುದೀಪ್:
ಪಹಲ್ಗಾಮ್ ದಾಳಿಯಲ್ಲಿ ನೇಪಾಳ ಮೂಲದ ಸುದೀಪ್ ಎಂಬುವವರು ಸಾವನ್ನಪ್ಪಿದ್ದಾರೆ. ಈ ಕುರಿತು ಸುದೀಪ್ ಅವರ ಚಿಕ್ಕಪ್ಪ ದಾಧಿರಾಮ್ ನ್ಯೌಪಾನೆ ದೂರವಾಣಿ ಮೂಲಕ ಮಾತನಾಡಿ, ಸುದೀಪ್ (27) ಕುಟುಂಬದಲ್ಲಿ ಒಬ್ಬನೇ ಮಗ. ಬುತ್ವಾಲ್‌ನಲ್ಲಿರುವ ಮಾಡರ್ನ್ ಸೊಸೈಟಿ ಡೆಂಟಲ್ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದರು.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಅಂಗವಾದ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಭಯೋತ್ಪಾದಕರು ಪ್ರವಾಸಿಗರ ಗುರುತಿನ ಚೀಟಿಗಳನ್ನು ಪರಿಶೀಲಿಸಿ, ಮುಸ್ಲಿಮೇತರರೆಂದು ಗುರುತಿಸಿ ಬಳಿಕ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ (Pahalgam Terrorist Attack) ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಕಾಶ್ಮೀರದಲ್ಲಿ (Kashmir) ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದರು. ಇದನ್ನೂ ಓದಿ: ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿಯೂ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ: ಉಗ್ರರ ದಾಳಿ ಬಗ್ಗೆ ಸುದೀಪ್ ಕಿಡಿ
ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕು:
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪೆಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಶ್ರೀನಗರಕ್ಕೆ ಹೆಚ್ಚುವರಿ ವಿಮಾನ ಸೇವೆ ನೀಡುವಂತೆ ಕಂಪನಿಗಳಿಗೆ DGCA ಸೂಚನೆ
ನವದೆಹಲಿ: ಶ್ರೀನಗರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿಮಾನ ಸೇವೆಯನ್ನು ನಿಯೋಜಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ವಿಮಾನಯಾನ ಕಂಪನಿಗಳಿಗೆ ಸೂಚಿಸಿದೆ.
ಪಹಲ್ಗಾಮ್ ದಾಳಿ ನಂತರ ಸಾವಿರಾರು ಸಂಖ್ಯೆಯ ಪ್ರವಾಸಿಗರು ಜಮ್ಮು ಕಾಶ್ಮೀರದಲ್ಲಿ ಸಿಲುಕಿದ್ದಾರೆ. ಇವರನ್ನು ಸುರಕ್ಷಿತವಾಗಿ ಕರೆ ತರಲು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನಗಳನ್ನು ನಿಯೋಜಿಸಬೇಕು ಮತ್ತು ಪ್ರಯಾಣ ರದ್ದುಗೊಳಿಸಿದರೆ ಟಿಕೆಟ್ ಶುಲ್ಕವನ್ನು ಮರುಪಾವತಿಸುವಂತೆ ಸೂಚಿಸಿದೆ. ಇದನ್ನೂ ಓದಿ: ರೈಫಲ್ ಕಸಿದುಕೊಳ್ಳಲು ಹೋಗಿ ಉಗ್ರರ ಗುಂಡೇಟಿಗೆ ಕುದುರೆ ರೈಡರ್ ಬಲಿ
ಹೆಚ್ಚಿದ ಬೇಡಿಕೆಗೆ ಪ್ರತಿಕ್ರಿಯೆಯಾಗಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಶ್ರೀನಗರದಿಂದ ಭಾರತದಾದ್ಯಂತ ವಿವಿಧ ಸ್ಥಳಗಳಿಗೆ ಪ್ರವಾಸಿಗರನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ವಿಮಾನಯಾನ ಸಂಸ್ಥೆಗಳು ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಡಿಜಿಸಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?
ಡಿಜಿಸಿಎ ಸೂಚನೆ ಬೆನ್ನಲ್ಲೇ ಏರ್ ಇಂಡಿಯಾ ಮತ್ತು ಇಂಡಿಗೋ ಬುಧವಾರ ಶ್ರೀನಗರದಿಂದ ಹೆಚ್ಚುವರಿ ವಿಮಾನ ಸೇವೆ ಆರಂಭಿಸಿದೆ.
ಈ ಸಂದರ್ಭದಲ್ಲಿ ಲಾಭ ಪಡೆಯಲು ವಿಮಾನಯಾನ ಕಂಪನಿಗಳು ಟಿಕೆಟ್ ದರವನ್ನು ಏರಿಕೆ ಮಾಡಿದರೆ ಆನ್‌ಲೈನ್‌ನಲ್ಲಿ ದೂರು ನೀಡುವಂತೆ DGCA ಜನರಲ್ಲಿ ಮನವಿ ಮಾಡಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಭಯೋತ್ಪಾದಕರು ಗುಂಡಿನ ದಾಳಿಯಲ್ಲಿ ಸ್ಥಳೀಯ ಕುದುರೆ ರೈಡರ್ (Horse Rider) ಒಬ್ಬರು ಬಲಿಯಾಗಿದ್ದಾರೆ.
ಸೈಯದ್ ಆದಿಲ್ ಹುಸೇನ್ ಶಾ (Syed Adil Hussain Shah) ಮೃತಪಟ್ಟ ವ್ಯಕ್ತಿ. ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಿದ್ದಾ ಸೈಯದ್ ಧೈರ್ಯ ಮಾಡಿ ಓರ್ವನ ಉಗ್ರನಿಂದ ರೈಫಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸೈಯದ್ ಮೇಲೆ ಗುಂಡು ಹಾರಿಸಿದ್ದಾರೆ.
ಕುಟುಂಬದ ಏಕೈಕ ಜೀವನಾಧಾರ ಸೈಯದ್ ಆಗಿದ್ದರು. ಇವರು ವೃದ್ಧ ಪೋಷಕರು, ಹೆಂಡತಿ ಮತ್ತು ಮಕ್ಕಳನ್ನು ಅಗಲಿದ್ದಾರೆ.
ಸೈಯದ್ ತಂದೆ ಹೈದರ್ ಸುದ್ದಿ ಸಂಸ್ಥೆಯ ಜೊತೆ ಮಾತನಾಡಿ, ನನ್ನ ಮಗ ನಿನ್ನೆ ಕೆಲಸಕ್ಕೆಂದು ಪಹಲ್ಗಾಮ್‌ಗೆ ಹೋಗಿದ್ದ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿಯ ಬಗ್ಗೆ ನಮಗೆ ತಿಳಿಯಿತು. ನಾವು ಅವನಿಗೆ ಕರೆ ಮಾಡಿದೆವು, ಆದರೆ ಅವನ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಸಂಜೆ 4:40ಕ್ಕೆ ಅವನ ಫೋನ್ ಆನ್ ಆಯ್ತು. ಆದರೆ ಯಾರೂ ಉತ್ತರಿಸಲಿಲ್ಲ. ನಾವು ಪೊಲೀಸ್ ಠಾಣೆಗೆ ಧಾವಿಸಿದೆವು. ಆಗ ಅವನಿಗೆ ಗಾಯವಾಗಿರುವುದು ಗೊತ್ತಾಯಿತು ಎಂದು ತಿಳಿಸಿದರು.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಪ್ರಾಥಮಿಕ ತನಿಖೆಯಲ್ಲಿ ಉಗ್ರರು ಬಹಳ ಪ್ಲ್ಯಾನ್ ಮಾಡಿ ಈ ಕೃತ್ಯವನ್ನು ಎಸಗಿರುವ ವಿಚಾರ ಬೆಳಕಿಗೆ ಬಂದಿದೆ.
ಪಾಕಿಸ್ತಾನಿ ಮತ್ತು ಸ್ಥಳೀಯ ಕಾಶ್ಮೀರಿ ಭಯೋತ್ಪಾದಕರು ಸೇರಿ ಈ ಕೃತ್ಯ ಎಸಗಿದ್ದಾರೆ. 6-8 ಮಂದಿ ಉಗ್ರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದಾಳಿ ನಡೆಸುವ ಮೊದಲು ಸಂಪೂರ್ಣ ಈ ಜಾಗದ ಬಗ್ಗೆ ತಿಳಿದಿದ್ದರು. ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಘಟಿಸಲು ಉಗ್ರರು ಪ್ಲ್ಯಾನ್ ಮಾಡಿದ್ದರು.
ಬೈಸರನ್ ಟಾರ್ಗೆಟ್ ಯಾಕೆ?
ಪಹಲ್ಗಾಮ್‌ನಿಂದ ಸರಿಸುಮಾರು 6.5 ಕಿಲೋಮೀಟರ್ ದೂರದಲ್ಲಿ ಬೈಸರನ್ ಇದೆ. ಈ ಜಾಗಕ್ಕೆ ವಾಹನ ಸಂಚಾರ ಇಲ್ಲ. ಕಾಲ್ನಡಿಗೆ ಅಥವಾ ಕುದುರೆ ಸವಾರಿಯ ಮೂಲಕ ಮಾತ್ರ ಈ ಜಾಗಕ್ಕೆ ಹೋಗಲು ಸಾಧ್ಯವಾಗುತ್ತದೆ.
ದಟ್ಟವಾದ ಕಾಡುಗಳಿಂದ ಆವೃತವಾದ ಸುಂದರವಾದ ಹುಲ್ಲುಗಾವಲು ಬೈಸರನ್‌ನಲ್ಲಿ ಸಾಧಾರಣವಾಗಿ 1,000 ರಿಂದ 1,500 ಪ್ರವಾಸಿಗರು ಇರುತ್ತಾರೆ. ಆದರೆ ಮಂಗಳವಾರ ಮಧ್ಯಾಹ್ನ ಈ ಸಂಖ್ಯೆ ಸ್ವಲ್ಪ ಕಡಿಮೆ ಇದ್ದ ಕಾರಣ ಸಾವಿನ ಸಂಖ್ಯೆ ಕಡಿಮೆಯಾಗಿದೆ.
ವಾಹನ ಸಂಚರಿಸಲು ರಸ್ತೆ ಇಲ್ಲದ ಕಾರಣ ಕೂಡಲೇ ಸ್ಥಳಕ್ಕೆ ರಕ್ಷಣಾ ಪಡೆಗಳು ಆಗಮಿಸಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೇ ಗಂಭೀರವಾಗಿ ಗಾಯಗೊಂಡವರನ್ನು ಈ ಸ್ಥಳದಿಂದ ಅಂಬುಲೆನ್ಸ್‌ನಲ್ಲಿ ಸಾಗಿಸಲು ಸಾಧ್ಯವಿಲ್ಲದ ಕಾರಣ ಸಾವು ನೋವು ಹೆಚ್ಚಾಗಬಹುದು ಎಂಬುದನ್ನು ಮೊದಲೇ ತಿಳಿದುಕೊಂಡಿದ್ದ ಉಗ್ರರು ನಿಖರವಾಗಿ ಯೋಜಿಸಿ ಕೃತ್ಯ ನಡೆಸಿದ್ದಾರೆ.
ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.
ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ಈ ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.
ಸೇನಾ ಸಮವಸ್ತ್ರದಲ್ಲಿ ಬಂದ ಉಗ್ರರನ್ನು ನೋಡಿ ಪ್ರವಾಸಿಗರು ಇವರು ಸೈನಿಕರು ಎಂದೇ ಭಾವಿಸಿದ್ದರು. ಸುಮಾರು 20 ನಿಮಿಷ ಸ್ಥಳದಲ್ಲಿ ಇದ್ದ ಉಗ್ರರು ಸಾಲು ನಿಲ್ಲಿಸಿ ಹತ್ಯೆ ಮಾಡಿದ್ದರು. ಈ ವೇಳೆ ಕೆಲವರು ಓಡಿ ಹೋಗಲು ಯತ್ನಿಸಿದಾಗ ಅವರ ಮೇಲೂ ಶೂಟ್ ಮಾಡಿದ್ದಾರೆ.
ದಾಳಿಯಿಂದ ಪಾರಾಗಲು ಪ್ರವಾಸಿಗರು ಡೇರೆಗಳಲ್ಲಿ ಅಡಗಿ ಕುಳಿತಿದ್ದರು. ಈ ಡೇರೆಗೆ ಬಂದ ಉಗ್ರರು ಪುರಷರನ್ನು ಕರೆದು ನಿನ್ನ ಧರ್ಮ ಯಾವುದು? ಕಲಿಮಾ ಹೇಳು ಎಂದು ಹೇಳಿದ್ದರು. ಕಲಿಮಾ ಹೇಳದ್ದಕ್ಕೆ ಅಲ್ಲೇ ಪ್ರವಾಸಿಯ ತಲೆಗೆ ಗುಂಡಿಕ್ಕಿದ್ದಾರೆ.
ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಹಿಂದೂಗಳನ್ನೇ (Hindu) ಟಾರ್ಗೆಟ್ ಮಾಡಿದ ನರಹಂತಕರು ಧರ್ಮ ಕೇಳಿ ಎದೆಗೆ ಗುಂಡಿಕ್ಕಿ ರಕ್ತದೋಕುಳಿಯಾಡಿದ್ದಾರೆ. ಹೆಸರೇನು? ಯಾವ ಧರ್ಮ ಎಂದು ಕೇಳಿ ಹತ್ಯೆ ಮಾಡಿದಲ್ಲದೇ ಇದನ್ನು ಮೋದಿಗೆ ಹೋಗಿ ಹೇಳಿ ಎಂದು ಕೌರ್ಯ ಮೆರೆದಿದ್ದಾರೆ.
ಮಂಗಳವಾರ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ (Pahalgam Terror Attack) ಬಳಿಯ ಬೈಸರಾನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾರತೀಯ ಪ್ರವಾಸಿಗರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ದಾಳಿಯಲ್ಲಿ ಕನಿಷ್ಠ 27 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆಯನ್ನು ಭಾರತೀಯ ಅಧಿಕಾರಿಗಳು ಭಯೋತ್ಪಾದಕ ದಾಳಿ ಎಂದು ಘೋಷಿಸಿದ್ದು, ದಿ ರೆಸಿಸ್ಟೆನ್ಸ್ ಫ್ರಂಟ್ ಎಂಬ ಸಂಘಟನೆ ಈ ದಾಳಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಇದನ್ನೂ ಓದಿ: ಭಾರತಕ್ಕೆ ಮರಳಿದ ಮೋದಿ – ವಿಮಾನ ನಿಲ್ದಾಣದಲ್ಲೇ ಸಭೆ
ಘಟನೆಯ ಬಳಿಕ ಹಲವು ಆತಂಕಕಾರಿ ಮಾಹಿತಿಗಳು ಹೊರ ಬಂದಿವೆ. ಹತ್ಯೆ ನಡೆದ ರೀತಿಗಳು ಆತಂಕ ಮೂಡಿಸಿವೆ. ಸೇವಾ ಸಮವಸ್ತ್ರದಲ್ಲಿ ಬಂದ ಭಯೋತ್ಪಾದಕರು, ಪ್ರವಾಸಿಗರ ಹೆಸರು ಕೇಳಿ, ಗುರುತಿನ ಚೀಟಿಗಳನ್ನು ಪರಿಶೀಲಿಸಿ ಹಿಂದೂಗಳೆಂದು ಖಚಿತಪಡಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ರಾಜ್ಯದಿಂದ ಪ್ರವಾಸಕ್ಕೆ ತೆರಳಿದ್ದ ಮಂಜುನಾಥ್ ರಾವ್, ಭರತ್ ಭೂಷಣ್ ಹಾಗೂ ಮದುಸೂಧನ್ ಅವರನ್ನು ಹೀಗೆ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು
ಖುದ್ದು ಈ ಬಗ್ಗೆ ಮೃತ ಮಂಜುನಾಥ್ ರಾವ್ ಅವರ ಪತ್ನಿ ಪಲ್ಲವಿ ಕೂಡಾ ಆರೋಪ ಮಾಡಿದ್ದಾರೆ. ನನ್ನ ಪತಿಯನ್ನು ಹತ್ಯೆ ಮಾಡಿದರು. ಮೂವರು ಮುಸ್ಲಿಮರು ಬಿಸ್ಮಿಲ್ಲಾ, ಬಿಸ್ಮಿಲ್ಲಾ ಅಂತಿದ್ರು. ನಾನು ಅಲ್ಲೇ ಇದ್ದ ಭಯೋತ್ಪಾದಕನ ಬಳಿ ನನ್ನ ಪತಿಯನ್ನು ಸಾಯಿಸಿದ್ದೀರಾ, ನನ್ನನ್ನು ಸಾಯಿಸಿ ಎಂದು ಕೇಳಿದೆ. ನನ್ನ ಮಗ ಏ ನಾಯಿ ನನ್ನ ತಂದೆಯನ್ನು ಕೊಂದೆಯಲ್ಲಾ, ನಮ್ಮನ್ನು ಕೊಂದುಬಿಡು ಎಂದ. ಇಲ್ಲ ನಿಮ್ಮನ್ನು ಸಾಯಿಸಲ್ಲ. ಮೋದಿಗೆ ಹೋಗಿ ಹೇಳು ಎಂದು ಹೋದ ಎಂದು ಹೇಳಿದ್ದಾರೆ. ಇದನ್ನೂ ಓದಿ: Pahalgam Terror Attack | ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್ ಬಲಿ
ಇನ್ನೂ ಕೆಲವು ವ್ಯಕ್ತಿಗಳ ಖಾಸಗಿ ಅಂಗವನ್ನು ಪರಿಶೀಲಿಸಿ ಬಳಿಕ ಹತ್ಯೆ ಮಾಡಿದ್ದಾರೆ ಎನ್ನುವ ಆರೋಪಗಳಿದ್ದು, ಮಾಹಿತಿ ಖಚಿತವಾಗಿಲ್ಲ. ಆದರೆ ಹತ್ಯೆಯ ಆಯ್ಕೆ ನೋಡಿದರೆ ಭಯೋತ್ಪಾದಕರ ಟಾರ್ಗೆಟ್ ಹಿಂದೂ ಪುರುಷರೇ ಎಂಬುದು ಖಚಿತವಾಗುತ್ತಿದೆ. ಈ ದಾಳಿಯು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ನಂತರದ ಕಾಶ್ಮೀರದಲ್ಲಿ ನಡೆದ ಅತ್ಯಂತ ಘೋರ ದಾಳಿಗಳಲ್ಲಿ ಒಂದಾಗಿದೆ. ಕೇಂದ್ರವೂ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಶ್ರೀನಗರ ತಲುಪಿದ್ದಾರೆ. ಹೀಗಾಗೀ ಈ ಹಿಂದೂ ದಾಳಿಗೆ ಭಾರತ ಹೇಗೆ ಪ್ರತಿಕಾರ ತೀರಿಸಿಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಪುತ್ರನಿಗೆ ದ್ವಿತೀಯ ಪಿಯುಸಿಯಲ್ಲಿ 97% ಅಂಕ – ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಕುಟುಂಬ
ಬೆಂಗಳೂರು: ಕಾಶ್ಮೀರದಲ್ಲಿ (Jammu And Kashmir) ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು (Bengaluru) ಮೂಲದ ಟೆಕ್ಕಿ (Techie) ಭರತ್ ಭೂಷಣ್ ಪ್ರಾಣ ಕಳೆದುಕೊಂಡಿದ್ದಾರೆ.
ಕಾಶ್ಮೀರದ ಆನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ (Pahalgam Terrorist Attack) ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಿಂದ ವೆಕೆಷನ್‌ಗಾಗಿ ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಯಿಂದ ಭರತ್ ಭೂಷಣ್ ಪ್ರಾಣಪಕ್ಷಿ ಹಾರಿಹೋಗಿದೆ. ಇದನ್ನೂ ಓದಿ: Pahalgam Terror Attack | ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್ ಬಲಿ
ಪಹಲ್ಗಾಮ್‌ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್‌ಗೆ ಉಗ್ರರು ನೇರ ಶೂಟ್ ಮಾಡಿದ್ದಾರೆ. ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು, ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೂಡಲೇ ಭೂಷಣ್ ಪರಿಶೀಲಿಸಿದ ಪತ್ನಿ, ಭೂಷಣ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪುತ್ರನಿಗೆ ದ್ವಿತೀಯ ಪಿಯುಸಿಯಲ್ಲಿ 97% ಅಂಕ – ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಕುಟುಂಬ
ಭರತ್ ಕಳೆದ ಎಂಟು ವರ್ಷದ ಹಿಂದೆ ಮತ್ತಿಕೆರೆ ಮೂಲದ ಯುವತಿಯನ್ನು ಮದುವೆಯಾಗಿದ್ದರು. ಟೆಕ್ಕಿಯಾಗಿದ್ದ ಭರತ್ ಇತ್ತೀಚಿಗೆ ಕೆಲಸ ಬಿಟ್ಟು ಬಿಸಿನೆಸ್ ಆರಂಭಿಸುವ ಚಿಂತನೆಯಲ್ಲಿದ್ದರು. ಅದರಂತೆ ಕೆಲಸ ಬಿಟ್ಟಿದ್ದ ಕಾರಣ ರಜೆಯಿದ್ದಿದ್ದರಿಂದ ಮಗುವಿಗೆ ಕಾಶ್ಮೀರ ತೋರಿಸಬೇಕೆಂಬ ಕಾರಣಕ್ಕೆ ಪ್ರವಾಸ ಕೈಗೊಂಡಿದ್ದರು. ಆದರೆ ದುರಾದೃಷ್ಟವಶಾತ್ ಉಗ್ರರ ಬಂದೂಕಿನ ಗುಂಡೇಟಿಗೆ ಭರತ್ ಉಸಿರು ಚೆಲ್ಲಿದ್ದಾರೆ. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ