Tag: jammu-kshmir

  • ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದ ಭದ್ರತಾ ಪಡೆ

    ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

    ಇಂದು ಮುಂಜಾನೆ ನಗ್ನಾಡ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಅರಿತ ಭದ್ರತಾ ಪಡೆ ಕೂಡಲೇ ಕಾರ್ಯಾಚರಣೆ ನಡೆಸಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಹೀಗೆ ಕಾರ್ಯಾಚರಣೆ ಚುರುಕುಗೊಳಿಸುತ್ತಿದ್ದ ಸಂದರ್ಭದಲ್ಲಿ ಭದ್ರತಾ ಪಡೆಯನ್ನು ಕಂಡ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆ ಕೂಡ ಪ್ರತಿ ದಾಲಿ ನಡೆಸಿದ್ದು, ಇಬ್ಬರು ಉಗ್ರರು ಮಟಾಷ್ ಆಗಿದ್ದಾರೆ.

    ಸದ್ಯ ಸ್ಥಳದಲ್ಲಿ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿದೆ. ಜುಲೈ 5 ರಂದು ಕೂಡ ಭಾರತೀಯ ಸೈನಿಕರು ಇಬ್ಬರು ಉಗ್ರರನ್ನು ಸದೆಬಡಿದಿದ್ದರು. ಇದಕ್ಕೂ ಮೊದಲು ಬೆಳೂೀಪುರದ ರೆಬ್ಬಾನ್ ಪ್ರದೇಶದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಉಗ್ರರು ಗುಂಡಿನ ಮಳೆಗೈದಿದ್ದರು. ಪರಿಣಾಮ ಉಗ್ರರು ಅವಿತಿದ್ದ ಜಾಗದ ಕಡೆ ಪೊಲೀಸರು ಸಹ ಗುಂಡಿನ ದಾಳಿ ನಡೆಸಿದ್ದು, ಓರ್ವ ಮೃತಪಟ್ಟಿದ್ದ.