Tag: Jana

  • ನಿರ್ದೇಶಕನಾದ ವಿತರಕ ಬಿ.ಜಿ.ಚಂದನ್‌ಕುಮಾರ್: ‘ಜನ’ ಚಿತ್ರಕ್ಕೆ ಚಾಲನೆ

    ನಿರ್ದೇಶಕನಾದ ವಿತರಕ ಬಿ.ಜಿ.ಚಂದನ್‌ಕುಮಾರ್: ‘ಜನ’ ಚಿತ್ರಕ್ಕೆ ಚಾಲನೆ

    ಣ್ಣದ ಲೋಕದ ಆಕರ್ಷಣೆಗೆ ಒಳಗಾಗದವರೇ ಇಲ್ಲ, ನಟನಾಗಬೇಕೆಂದು ಬಂದವರು ನಿರ್ದೇಶಕ, ನಿರ್ಮಾಪಕನಾಗಿದ್ದೂ ಇದೆ, ನಿರ್ದೇಶಕನಾಗಬೇಕೆಂದು ಬಂದವರು ನಟ, ನಿರ್ದೇಶಕನಾಗಿಯೂ ಬೆಳೆದಿದ್ದಾರೆ. ಆದರೆ ಇಲ್ಲೊಬ್ಬ ವಿತರಕ  ನಿರ್ದೇಶಕನಾಗುತ್ತಿರುವುದು ವಿಶೇಷ. ದಶಕದ ಹಿಂದೆ ತಾನೊಬ್ಬ ನಿರ್ದೇಶಕನಾಗಬೇಕೆಂಬ ಮಹತ್ವಾಕಾಂಕ್ಷೆಯಿಂದ ಮಂಡ್ಯದಿಂದ ಗಾಂಧಿ ನಗರಕ್ಕೆ ಕಾಲಿಟ್ಟ ಬಿ.ಜಿ.ಚಂದನ್‌ಕುಮಾರ್ (Chandan Kumar) ವಿತರಕನಾಗಿ ಕಾರ್ಯನಿರ್ವಹಿಸುತ್ತಲೇ ಚಿತ್ರನಿರ್ಮಾಣದ ಎಲ್ಲಾ ಆಯಾಮಗಳನ್ನು ಅರಿತುಕೊಂಡು ಇದೀಗ ನಿರ್ದೇಶಕನಾಗುತ್ತಿದ್ದಾರೆ.

    ಒಬ್ಬ ನಿರ್ದೇಶಕನಿಗೆ ತನ್ನ ಚಿತ್ರವನ್ನು ಜನರಿಗೆ ಹೇಗೆ ತಲುಪಿಸಬೇಕೆಂಬುದು ಸಹ ಗೊತ್ತಿರಬೇಕು ಎಂಬುದನ್ನು ಅರಿತಿರುವ ಚಂದನ್‌ಕುಮಾರ್ ದಶಕದ ಹಾದಿಯಲ್ಲಿ  ಕಥೆ ಬರೆಯುವುದರಿಂದ ಹಿಡಿದು  ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವುದನ್ನು ಚೆನ್ನಾಗಿಯೇ ತಿಳಿದುಕೊಂಡೇ ನಿರ್ದೇಶನಕ್ಕಿಳಿದಿದ್ದಾರೆ. ಅವರ ಹೊಸ ಚಿತ್ರದ ಶೀರ್ಷಿಕೆ ಜನ (Jana). ಈ ಚಿತ್ರದ ಮುಹೂರ್ತ (Muhurta) ಸಮಾರಂಭ ದೇವಯ್ಯ ಪಾರ್ಕ್ ಬಳಿಯ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ನಿರ್ದೇಶಕರ ತಂದೆ ಗೋವಿಂದರಾಜ್ ಅವರು ಕ್ಲಾಪ್ ಮಾಡಿದರೆ, ಹಿರಿಯ ನಿರ್ಮಾಪಕ ಚಿನ್ನೇಗೌಡ್ರು ಕ್ಯಾಮೆರಾ ಚಾಲನೆ ಮಾಡಿ ಶುಭ ಹಾರೈಸಿದರು.

    ಜನ ಚಿತ್ರದ ಮೂಲಕ ಚೇತನ್‌ಕುಮಾರ್ ಎಂಬ ಯುವಪ್ರತಿಭೆ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಇದೊಂದು ಜರ್ನಿಯಲ್ಲಿ ಸಾಗುವ ಕಥೆಯಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಚಿತ್ರೀಕರಿಸುವ ಯೋಜನೆ ನಿರ್ದೇಶಕರಿಗಿದೆ. ಮಾಸ್, ಕ್ಲಾಸ್ ಹೀಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡಿಕೊಂಡಿರುವ ನಿರ್ದೇಶಕ ಚಂದನ್‌ಕುಮಾರ್ ಚಿತ್ರದಲ್ಲಿ ಅಂಡರ್‌ವರ್ಲ್ಡ್ ಶೇಡ್ ಕೂಡ ಇರುತ್ತೆ ಎಂದು ಹೇಳಿದ್ದಾರೆ.

     

    ಈ ಚಿತ್ರವನ್ನು ಸಕ್ಕರೆನಾಡು ಕಂಬೈನ್ಸ್ ಮೂಲಕ ಶ್ರೀಮತಿ ಯಶೋದಮ್ಮ ಗೋವಿಂದರಾಜ್ ಹಾಗೂ ದೀಪಾ ಚಂದನ್‌ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ನರಸಿಂಹಮೂರ್ತಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.  ಮುಂಜಾನೆ ಮಂಜು ಅವರ ಛಾಯಾಗ್ರಹಣ, ಕಾರ್ತೀಕ್ ಅಲೆ ಅವರ ಸಂಗೀತ ಸಂಯೋಜನೆ, ಚಾಲೆಂಜಿಂಗ್ ಸೂರಿ ಅವರ ನೃತ್ಯನಿರ್ದೇಶನ ಜನ ಚಿತ್ರಕ್ಕಿದೆ,

  • ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಕುಂದಾನಗರಿ ಜನ – ಆರು ತಿಂಗಳಲ್ಲಿ 14 ಸಾವಿರ ಮಂದಿಗೆ ನಾಯಿ ಕಡಿತ

    ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಕುಂದಾನಗರಿ ಜನ – ಆರು ತಿಂಗಳಲ್ಲಿ 14 ಸಾವಿರ ಮಂದಿಗೆ ನಾಯಿ ಕಡಿತ

    ಬೆಳಗಾವಿ: ಜಿಲ್ಲೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಮಕ್ಕಳು, ಮಹಿಳೆಯರ ಮೇಲೆ ಈ ಶ್ವಾನಗಳು ಅಟ್ಯಾಕ್ ಮಾಡುತ್ತಿದ್ದು, ರಾತ್ರಿಯಾದರೆ ಸಾಕು ಮನೆಯಿಂದ ಹೊರ ಬಾರದ ಸ್ಥಿತಿ ನಿರ್ಮಾಣವಾಗಿದೆ. ಜನವರಿಯಿಂದ ಜುಲೈ ಮೊದಲ ವಾರದವರೆಗೆ ಕೇವಲ ಆರು ತಿಂಗಳಲ್ಲಿ ಬರೋಬ್ಬರಿ 14,278 ಜನರಿಗೆ ಈ ನಾಯಿಗಳು ಕಚ್ಚಿದ್ದು ಎಲ್ಲರೂ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ.

    ಈ ಬಗ್ಗೆ ಡಿಎಚ್‍ಒ ಡಾ.ಮಹೇಶ್ ಕೋಣಿ ಪ್ರತಿಕ್ರಿಯಿಸಿ, ಈ ವರ್ಷ ಆರು ತಿಂಗಳಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ನಾಯಿಗಳು ಜನರಿಗೆ ಕಚ್ಚಿವೆ. ಈಗಾಗಲೇ ಈ ಕುರಿತು ಇಲಾಖೆ ಸಭೆಯಲ್ಲಿ ಪ್ರಸ್ತಾವನೆ ಕೂಡ ಆಗಿದೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆಚ್ಚು ಜನ ದಾಖಲಾಗಿದ್ದಾರೆ. ನಾಯಿ ಕಡಿತಕ್ಕೆ ಲಸಿಕೆ ಇದ್ದು ಯಾವ ತೊಂದರೆ ಇಲ್ಲ ಅಂದಿದ್ದಾರೆ.  ಇದನ್ನೂ ಓದಿ: ದೇಶದ ಚರಿತ್ರೆಯಲ್ಲಿ ಬುಡಕಟ್ಟು ಮಹಿಳೆಗೆ ರಾಷ್ಟ್ರಪತಿ ಪಟ್ಟ – ಇಂದು ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

    ಸದ್ಯ ಗ್ರಾಮೀಣ ಭಾಗ ಅಷ್ಟೇ ಅಲ್ಲದೇ ನಗರ ಪ್ರದೇಶದಲ್ಲೂ ನಾಯಿಗಳ ಹಾವಳಿ ಮೀತಿಮಿರಿದೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಅಭಯ್ ಪಾಟೀಲ್ ಕೂಡ ಸೂಚನೆ ನೀಡಿದ್ದಾರೆ. ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶ, ಶಾಲಾ ಆವರಣದ ಸುತ್ತಲೂ ಹೆಚ್ಚಿನ ಸಂಖ್ಯೆಯಲ್ಲಿ ನಾಯಿಗಳು ಗುಂಪು, ಗುಂಪಾಗಿ ಓಡಾಡುತ್ತಿದೆ. ಹೀಗಾಗಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಕೂಡ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಅಭಯ್ ಪಾಟೀಲ್ ಆದಷ್ಟು ಬೇಗ ನಾಯಿಗಳನ್ನು ನಗರದಿಂದ ಬೇರೆ ಕಡೆ ಸ್ಥಳಾಂತರ ಮಾಡುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಮೇಕೆದಾಟು ಡ್ಯಾಂಗೆ ತಮಿಳುನಾಡು ವಿರೋಧ – ಸುಪ್ರೀಂಕೋರ್ಟ್‍ನಲ್ಲಿ ಇಂದು ವಿಚಾರಣೆ

    ದಿನೇ ದಿನೇ ನಾಯಿಗಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಒಂಟಿಯಾಗಿ ಓಡಾಡುವವರನ್ನೇ ಟಾರ್ಗೆಟ್ ಮಾಡುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತು ನಾಯಿಗಳನ್ನು ಹಿಡಿದು ಬೇರೆ ಕಡೆ ಬಿಡುವ ಕೆಲಸ ಮಾಡಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ಜಿನೆವಾ: ರಷ್ಯಾದ ಆಕ್ರಮಣದಿಂದ ತತ್ತರಿಸಿ ಹೋಗಿರುವ ಉಕ್ರೇನ್‍ನಿಂದ ಕೇವಲ ಒಂದು ವಾರದಲ್ಲಿ 1 ಮಿಲಿಯನ್ ಜನರು ಪಲಾಯನ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದು ಈ ಶತಮಾನದ ಅತಿದೊಡ್ಡ ನಿರಾಶ್ರಿತರ ಬಿಕ್ಕಟ್ಟಾಗಿ ಪರಿಣಮಿಸುವ ಪರಿಸ್ಥಿತಿಯನ್ನು ತೋರಿಸುತ್ತದೆ.

    ವಿಶ್ವ ಬ್ಯಾಂಕ್ 2020ರ ಅಂತ್ಯದಲ್ಲಿ ನಡೆಸಿದ ಎಣಿಕೆಯಲ್ಲಿ ಉಕ್ರೇನ್ ಸುಮಾರು 44 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ ಎಂದು ತಿಳಿಸಿತ್ತು. ಆದರೆ ಒಂದು ವಾರದೊಳಗೆ ಉಕ್ರೇನ್‍ನಿಂದ ಶೇಕಡ 2ಕ್ಕಿಂತ ಹೆಚ್ಚು ಮಂದಿ ಪಲಾಯಾನ ಮಾಡುತ್ತಿದ್ದಾರೆ. ಅಲ್ಲದೇ ಮುಂದೆ 4 ಮಿಲಿಯನ್ ಜನರು ಅಂತಿಮವಾಗಿ ಉಕ್ರೇನ್ ತೊರೆಯಬಹುದು ಎಂದು ವಿಶ್ವಸಂಸ್ಥೆ ಭವಿಷ್ಯ ನುಡಿದಿದೆ. ಇದನ್ನು ಓದಿ: ಪುಟಿನ್‌ ಜೊತೆ 2ನೇ ಬಾರಿ ಮೋದಿ ಮಾತುಕತೆ

    ಇಮೇಲ್ ಮೂಲಕ ವಿಶ್ವಸಂಸ್ಥೆ ವಕ್ತಾರ ಜೌಂಗ್-ಆಹ್ ಘೆಡಿನಿ-ವಿಲಿಯಮ್ಸ್ ಅವರು, ರಾಷ್ಟ್ರೀಯ ಅಧಿಕಾರಿಗಳು ಸಂಗ್ರಹಿಸಿದ ಎಣಿಕೆಗಳ ಆಧಾರದ ಮೇಲೆ ಮಧ್ಯ ಯೂರೋಪ್‍ನಲ್ಲಿ ಸುಮಾರು 1ಮಿಲಿಯನ್ ಮಂದಿ ದೇಶ ತೊರೆದಿದ್ದಾರೆ ಎಂದು ನಮ್ಮ ಡೇಟಾವು ಸೂಚಿಸುತ್ತಿದೆ.

    ಮತ್ತೊಂದೆಡೆ ವಿಶ್ವಸಂಸ್ಥೆ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಕೇವಲ ಏಳು ದಿನಗಳಲ್ಲಿ ಉಕ್ರೇನ್‍ನಿಂದ ನೆರೆಯ ದೇಶಗಳಿಗೆ ಒಂದು ಮಿಲಿಯನ್ ನಿರಾಶ್ರಿತರು ವಲಸೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರಗಳ ಬದಲಿಗೆ, ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಅಮಿತ್ ಶಾ

  • ಪ್ರಚಾರ ವೇಳೆ ಬಟ್ಟೆ, ಪಾತ್ರೆ ತೊಳೆದು ಕೊಟ್ಟ ಅಭ್ಯರ್ಥಿ

    ಪ್ರಚಾರ ವೇಳೆ ಬಟ್ಟೆ, ಪಾತ್ರೆ ತೊಳೆದು ಕೊಟ್ಟ ಅಭ್ಯರ್ಥಿ

    ವಾಷಿಂಗ್ ಮಷೀನ್ ಕೊಡುವುದಾಗಿ ಭರವಸೆ

    ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಎಐಎಡಿಎಂಕೆ ಅಭ್ಯರ್ಥಿಯೊಬ್ಬರು ಮಹಿಳೆಯ ಬಟ್ಟೆ ಒಗೆದುಕೊಟ್ಟಿದ್ದಾರೆ. ಹಾಗೇ ಚುನಾವಣೆಯಲ್ಲಿ ಗೆದ್ದರೆ ವಾಷಿಂಗ್ ಮಷೀನ್ ಕೊಡುವ ಭರವಸೆಯನ್ನು ನೀಡುವ ಮೂಲಕವಾಗಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.

    ಕಾತಿರವನ್(50) ನಾಗಪಟ್ಟಿಣಂ ಟೌನ್ ಕಾರ್ಯದರ್ಶಿಯಾಗಿದ್ದಾರೆ. ಅವರು ಪಕ್ಷಕ್ಕಾಗಿ ಮಾಡಿದ ಕಾರ್ಯವನ್ನು ಗುರುತಿಸಿ ಟಿಕೆಟ್ ನೀಡಲಾಗಿದ್ದು, ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

    ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರವನ್ ನಾಗೋರ್ ಬಳಿ ಪ್ರಚಾರ ಮಾಡಿದ್ದಾರೆ. ಇಲ್ಲಿ ವಂದಿ ಪೆಟ್ಟೈ ಏರಿಯಾದಲ್ಲಿ ಮನೆಮನೆಗೆ ಹೋಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ತಮ್ಮ ಕುಟುಂಬಸ್ಥರ ಬಟ್ಟೆಗಳನ್ನು ತೊಳೆಯುತ್ತಿದ್ದರು. ಇದನ್ನು ಗಮನಿಸಿದ ಕಾತಿರವನ್ ಮಹಿಳೆ ಬಳಿ ಹೋಗಿ ನಾನು ಬಟ್ಟೆ ತೊಳೆದು ಕೊಡುತ್ತೇನೆ ಎಂದು ಹೇಳಿ ರಸ್ತೆಯಲ್ಲಿ ಕುಳಿತು ಬಟ್ಟೆಗಳನ್ನು ಒಗೆದಿದ್ದಾರೆ. ಹಾಗೆ ಪಕ್ಕದಲ್ಲಿಯೇ ಇದ್ದ ಕೆಲ ಪಾತ್ರೆಗಳನ್ನು ತೊಳೆದಿದ್ದಾರೆ.

    ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ವಾಷಿಂಗ್ ಮಷೀನ್ ವಿತರಿಸುವ ಭರವಸೆ ನೀಡಿರುವುದರಿಂದ ಅದನ್ನು ಸೂಚಿಸಲು ಬಟ್ಟೆ ತೊಳೆದಿದ್ದೇನೆ. ನಮ್ಮ ಅಮ್ಮಾ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಕೊಟ್ಟ ಮಾತಿನಂತೆ ವಾಷಿಂಗ್ ಮಷೀನ್ ನೀಡಿತ್ತೇವೆ. ಸರ್ಕಾರ ಇದನ್ನು ನೋಡಿಕೊಳ್ಳುತ್ತದೆ ಎಂದು ಕಾತಿರವನ್ ಹೇಳಿದ್ದಾರೆ.