Tag: Janardhana Reddy

  • ಪ್ರಾಮಾಣಿಕರಾಗಿದ್ರೆ ಸೆಂಥಿಲ್‌ ಸಿಎಂ ಬಳಿ ಮಾತಾಡಿ ಸಿಬಿಐ, ಎನ್ಐಎಗೆ ಕೊಡಲಿ :  ರೆಡ್ಡಿ ಸವಾಲು

    ಪ್ರಾಮಾಣಿಕರಾಗಿದ್ರೆ ಸೆಂಥಿಲ್‌ ಸಿಎಂ ಬಳಿ ಮಾತಾಡಿ ಸಿಬಿಐ, ಎನ್ಐಎಗೆ ಕೊಡಲಿ : ರೆಡ್ಡಿ ಸವಾಲು

    ಬಳ್ಳಾರಿ: ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌ (Sasikanth Senthil) ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳ ಬುರುಡೆ ಪ್ರಕರಣವನ್ನು (Dharmasthala Case) ಸಿಎಂ ಸಿದ್ದರಾಮಯ್ಯನವರ ಬಳಿ ಮಾತನಾಡಿ ಸಿಬಿಐ, ಎನ್ಐಎಗೆ ಕೊಡಲು ತಿಳಿಸಲಿ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಸವಾಲು ಎಸೆದಿದ್ದಾರೆ.

    ತನ್ನ ವಿರುದ್ಧ ಸೆಂಥಿಲ್‌ ಮಾನನಷ್ಟ ಪ್ರಕರಣ ಹೂಡಿದ ಬಗ್ಗೆ ಬಳ್ಳಾರಿಯ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಡೀ ವಿಶ್ವಕ್ಕೆ ಹಿಂದೂ (Hindu) ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಎಡಪಂಥೀಯ ಮನಸ್ಥಿತಿ, ನಗರ ನಕ್ಸಲರು ಭಾಗಿಯಾಗಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಕೆಲವರು ಧರ್ಮಸ್ಥಳದ ಬಗ್ಗೆ ಭಯದ ವಾತಾವರಣ ಸೃಷ್ಟಿಸಿ ಅಪಪ್ರಚಾರ ಮಾಡಿದರು. ಚಿನ್ನಯ್ಯ, ಸುಜಾತಾ ಭಟ್ ಅವರನ್ನು ಕರೆದುಕೊಂಡು ಬಂದು ಅಪಪ್ರಚಾರ ಮಾಡಲು ಹೊರಟಿದ್ದರು. ಮಾಧ್ಯಮ ಹಾಗೂ ಎಸ್ಐಟಿಯಿಂದ ಈ ವಿಚಾರ ಹೊರಗಡೆ ಹೊರಗಡೆ ಬಂದಿದೆ ಎಂದರು. ಇದನ್ನೂ ಓದಿ:  ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

     

    ಈ ಷಡ್ಯಂತ್ರದ ಹಿಂದೆ ಕರ್ನಾಟಕದಲ್ಲಿ ಐಎಎಸ್ ಅಧಿಕಾರಿ ಆಗಿ ಕೆಲಸ ಮಾಡಿದ್ದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎನ್ನುವುದನ್ನು ಹೇಳಿದ್ದು ನಾನು. ಮುಸುಕುಧಾರಿ ಮೂಲವನ್ನು ಹೇಳಿದ್ದು ನಾನು. ಎಡಪಂಥೀಯ ವಿಚಾರಾಧಾರೆಗಳನ್ನ ಇಟ್ಕೊಂಡು ಐಎಎಸ್ ಆಗಿ ಸೆಂಥಿಲ್‌ ಕೆಲಸ ಮಾಡಿದ್ದಾರೆ ಎಂದು ದೂರಿದರು.

    ಹಿಂದೂ ಧರ್ಮ, ಸಂಘಪರಿವಾರದ ಬಗ್ಗೆ ಮಾತಾಡುತ್ತಿದ್ದ ಅವರು ರಾಜೀನಾಮೆ ಕೊಟ್ಟು ಕಾಂಗ್ರೆಸ್ (Congress) ಸೇರಿದರು. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಅದೇ ಸಸಿಕಾಂತ್ ಸೆಂಥಿಲ್ ಇಂದು ನನ್ನ ಮೇಲೆ ಮಾನನಷ್ಡ ಮೊಕದ್ದಮೆ ಹೂಡಿದ್ದಾರೆ ಎಂದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಈಗಾಗಲೇ ಸಮೀರ್, ಜಯಂತ್, ಮಟ್ಟಣ್ಣನವರ್‌ ಎಲ್ಲರನ್ನೂ ಎಸ್ಐಟಿಯವರು ಕರೆಯುತ್ತಿದ್ದಾರೆ. ಸಸಿಕಾಂತ್ ಅವರ ಮನೆ ಮೆಟ್ಟಿಲು ಹತ್ತೋದು ಮಾತ್ರ ಬಾಕಿ ಇತ್ತು. ಸರ್ಕಾರವನ್ನು ಮೀರಿ ಅವರ ಮನೆ ಮೆಟ್ಟಿಲು ಹತ್ತೋದು ಅಷ್ಟು ಸುಲಭ ಅಲ್ಲ. ಇದರ ಹಿಂದೆ ಯಾವುದೋ ಒಂದು ವಿದೇಶಿ ಉಗ್ರವಾದ ಸಂಘಟನೆ ಇದೆ ಅನಿಸುತ್ತಿದೆ. ಅದಕ್ಕಾಗಿ ಇದನ್ನು ಎನ್ಐಎ ಹಾಗೂ ಸಿಬಿಐ ತನಿಖೆ ಆಗಬೇಕು ಎಂದು ನಾನು ಹೇಳಿದ್ದೆ ಎಂದು ಸಮರ್ಥಿಸಿದರು.

     

    ಸಸಿಕಾಂತ್ ಸೆಂಥಿಲ್ ಹೂಡಿರುವ ಮಾನನಷ್ಡ ಮೊಕದ್ದಮೆ ಕೇಸ್ ಎದುರಿಸಿಲು ನಾನು ಸಿದ್ಧನಿದ್ದೇನೆ. ಅವರು ಕೋರ್ಟ್, ಲಾ ಬಗ್ಗೆ ಮಾತಾಡ್ತಿದ್ದಾರೆ. ಅವರು ಪಾರ್ಲಿಮೆಂಟ್ ಮೇಂಬರ್ ಇದ್ದಾರೆ. ಮಾನನಷ್ಟ ಮೊಕದ್ದಮೆ ಹಾಕಲಿ, ಅದರ ಜೊತೆಗೆ ಇದನ್ನ ಎನ್ಐಎಗೆ ಕೊಡಲು ಸಿಎಂ ಬಳಿ ಮನವಿ ಮಾಡಲಿ. ಇದರಲ್ಲಿ ನನ್ನ ಪಾತ್ರ ಇಲ್ಲ ಅನ್ನೋದನ್ನ ತೋರಿಸಲಿ. ನಾನು ಬಹಳ ಸ್ಪಷ್ಟವಾಗಿ ಸೆಂಥಿಲ್ ಹೆಸರು ತೆಗೆದುಕೊಂಡೇ ಹೇಳಿದ್ದೇನೆ. ನಾನು ಅದನ್ನ ಲೀಗಲ್ ಆಗಿ ಫೈಟ್ ಮಾಡುತ್ತೇನೆ ಎಂದರು.

    ಸಿಬಿಐಗೆ ಜನಾರ್ದನರೆಡ್ಡಿ ವಿರುದ್ದ ನಾನು ದಾಖಲೆ ನೀಡಿದ್ದಕ್ಕೆ ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂಬ ಸೆಂಥಿಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಜನಾರ್ದನರೆಡ್ಡಿ, ಸುಮ್ನೇ ಏನೋ ಮಾತನಾಡಬೇಕು ಅಂತಾ ಅವನು ಮಾತನಾಡುವುದು ಬೇಡ. ನಾನು ಅರೆಸ್ಟ್ ಆದ ಮಾರನೇ ದಿನ ಅವನು ಬಳ್ಳಾರಿಗೆ ಬಂದಿದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

     

     

  • ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್

    ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್

    ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಸ್ಫೋಟಕ ತಿರುವು ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ (Annamalai) ವಿಚಾರಣೆ ಯಾಕೆ ಮಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಧರ್ಮಸ್ಥಳ ಕೇಸ್‍ಗೆ ತಮಿಳುನಾಡಿನ ಲಿಂಕ್ ಇದೆ ಎಂಬ ಆರೋಪ ಕೇಳಿಬರುತ್ತಿದೆ. ಹಾಗಾದರೆ ಇಲ್ಲಿ ಹಲವು ಮಂದಿ ತಮಿಳುನಾಡಿನ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಅದೇ ರೀತಿ ಅಣ್ಣಾಮಲೈ ಅವರು ಸಹ ಐಪಿಎಸ್ ಅಧಿಕಾರಿಯಾಗಿದ್ದವರು.  ಅಣ್ಣಾಮಲೈ ಅವರಿಗೆ ತಲೆ ಬುರುಡೆ ಬಗ್ಗೆ ಯಾಕೆ ವಿಚಾರಣೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

    ನಮ್ಮ ವಿರುದ್ಧ ಯಾಕೆ ಆರೋಪ ಮಾಡ್ತಾ ಇದ್ದಾರೆ?  ಅಣ್ಣಾಮಲೈ ವಿರುದ್ಧ ಯಾಕೆ ವಿಚಾರಣೆ ಮಾಡ್ತಿಲ್ಲ? ಅವರ ವಿಚಾರಣೆಯನ್ನೂ ಮಾಡ್ಬೇಕಲ್ವಾ ಎಂದಿದ್ದಾರೆ.

    ಧರ್ಮಸ್ಥಳ `ಬುರುಡೆ’ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಸೆಂಥಿಲ್ ಅವರು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ (Criminal Defamation Case) ಹೂಡಿದ್ದಾರೆ. 42 ಎಸಿಎಂಎಂ ನ್ಯಾಯಾಲಯದಲ್ಲಿ ಪಿಸಿಆರ್ ಫೈಲ್ ಮಾಡಿದ್ದು, ಸೆ.11ಕ್ಕೆ ಈ ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್;‌ ಕೇರಳ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್‌

  • ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

    ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

    – ಬರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ, ಆದ್ರೂ ನನ್ನ ಹೆಸರು ತಗೊಂಡಿದ್ದಾರೆ
    – ಜನಾರ್ದನ ರೆಡ್ಡಿ ಕೋರ್ಟಲ್ಲಿ ಉತ್ತರಿಸಲಿ ಎಂದ ಸಂಸದ ಸೆಂಥಿಲ್‌

    ಬೆಂಗಳೂರು/ನವದೆಹಲಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ (Criminal Defamation Case) ಹೂಡಿದ್ದಾರೆ.

    ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಸೆಂಥಿಲ್‌ (Sasikanth Senthil) ಹೇಳಿದ್ದಾರೆ. 42 ಎಸಿಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪಿಸಿಆರ್ ಫೈಲ್‌ ಮಾಡಿದ್ದು, ಸೆಪ್ಟೆಂಬರ್‌ 11ಕ್ಕೆ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸೆಂಥಿಲ್‌, ಬುರುಡೆ ಕೇಸ್‌ನಲ್ಲಿ (Dharmasthala Case) ನನ್ನ ಹೆಸರು ತಗೊಂಡಿದ್ದಾರೆ. ಆದ್ದರಿಂದ ಮೊಕದ್ದಮೆ ಹೂಡಿದ್ದೇನೆ. ಅವರು ಕೋರ್ಟ್‌ನಲ್ಲಿ ಉತ್ತರಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ

    ಈ ಹ್ಯಾಂಗಲ್‌ನಲ್ಲಿ ಯಾರು ಸ್ಟೋರಿ ತಗೊಂಡು ಬಿಲ್ಡ್ ಮಾಡ್ತಿದ್ದಾರೆ ಅವರನ್ನು ಕೂಡ ತಗೊಳ್ತಿನಿ. ಈ ಕೇಸಲ್ಲಿ ನನ್ನ ಹೆಸರು ಯಾಕೆ ಬಂತು, ಗೊತ್ತಿಲ್ಲ. ನನ್ನ ಹೆಸರನ್ನ ತಮಿಳುನಾಡಿನ ಮಾಜಿ ಪೊಲೀಸ್ ಅಧಿಕಾರಿ ಅಲ್ಲಿ ತಗೊಂಡಿದ್ದಾರೆ. ಇದು ಹೀಗೆ ಬಿಟ್ಟರೆ, ಒಂದು ಸ್ಟೋರಿ ಕ್ರಿಯೇಟ್‌ ಆಗುತ್ತೆ. ನಾನು ಲೀಗಲ್‌ ಸಿಸ್ಟಮ್‌ನಲ್ಲಿ ಹೋಗ್ತೀದ್ದೀನಿ. ಸತ್ಯ ಏನಿದೆ ತನಿಖೆಯಿಂದ ಹೊರ ಬರಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    Janardhana Reddy

    ಮುಂದುವರಿದು… ಧಾರ್ಮಿಕ ವಿಚಾರ ಪೊಲಿಟಿಕಲಿ ತಗೊಳ್ತಿದ್ದಾರೆ. ಯಾರೋ ಒಬ್ಬರು ಸೆಂಥಿಲ್ ಕ್ರಿಶ್ಚಿಯನ್ ಅಂತಾ ಹೇಳಿದ್ದಾರೆ. ನಾನು ಇವರನ್ನು ಲಾಸ್ಟ್ ನೋಡಿದ್ದು, ಬಳ್ಳಾರಿಯಲ್ಲಿ. ನನ್ನ ಮೊದಲ ದಿನವೇ ಇವರು ಅರೆಸ್ಟ್ ಆಗಿದ್ದರು. ಅನಂತರ ಇವರ ರಾಯಾಲ್ಟಿಯನ್ನ ತಡೆದಿದ್ದೆ. ಕರ್ನಾಟಕ ಪ್ರಾಪರ್ಟಿ ಲೂಟಿ ಮಾಡಿದ ವ್ಯಕ್ತಿ. ಜಡ್ಜ್‌ಗಳನ್ನೂ ಬಿಟ್ಟಿಲ್ಲ. ಅವರಿಗೆ ಬೇರೆ ಯಾರೋ ಹೇಳಿರಬಹುದು. ತಮಿಳುನಾಡಿನ ಪಾಲಿಟಿಕ್ಸ್‌ಗೆ ಇವರನ್ನ ಸೇರಿಸಲೂ ಇರಬಹುದು. ಆದ್ರೆ ಕರ್ನಾಟಕ ಜನ ಬುದ್ದಿವಂತರು ಇದ್ದಾರೆ. ಅವರಿಗೆ ಎಲ್ಲಾ ಗೊತ್ತಿದೆ ಎಂದಿದ್ದಾರೆ ಸೆಂಥಿಲ್. ಇದನ್ನೂ ಓದಿ: ನಮಗೆ ಬುರುಡೆ ಕೊಟ್ಟಿದ್ದು ಗಿರೀಶ್‌ ಮಟ್ಟಣ್ಣನವರ್‌: ಎಸ್‌ಐಟಿ ಮುಂದೆ ಜಯಂತ್‌ ಹೇಳಿಕೆ

    ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ:
    ಕರ್ನಾಟಕದ ಸಂಪತ್ತು ಲೂಟಿ ಮಾಡಿ ಜೈಲು ಶಿಕ್ಷೆ ಅನುಭವಿಸಿರೊ ವ್ಯಕ್ತಿ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕೋರ್ಟ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ. ರೈಟ್ ವಿಂಗ್ ಪಾಲಿಟಿಕ್ಸ್ ವಿರೋಧ ಮಾಡಿಕೊಂಡು ಬಂದವನು ಆ ವ್ಯಕ್ತಿ. ಹೀಗಾಗಿ ನನ್ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡಲಾಗಿದೆ. ಆರಂಭದಲ್ಲಿ ಸಿಂಪಲ್ ವಿಚಾರ ಮಾತನಾಡಬಾರದು ಅಂದುಕೊಂಡಿದ್ದೆ, ಆದ್ರೆ ದಿನೇ ದಿನೇ ನನ್ನ ಹೆಸರು ಕೆಡಿಸುವ ಕೆಲಸ ಆಗ್ತಿದೆ. ಆದ್ದರಿಂದ ಕೇಸ್‌ ದಾಖಲಿಸಿದ್ದೇನೆ. ದೆಹಲಿಯಲ್ಲಿ ನನಗೆ ಇನ್ನೂ ಮನೆ ಕೊಟ್ಟಿಲ್ಲ ಈ ಸರ್ಕಾರ. ಆ ಬರುಡೆ ಎಲ್ಲಿಂದ ಬಂತು, ಎಲ್ಲಿ ಸಿಗ್ತು ಅಂತಾನೂ ನನಗೆ ಗೊತ್ತಿಲ್ಲ ಎಂದಿದ್ದಾರೆ.

    ಜನಾರ್ಧನ ರೆಡ್ಡಿ ಆರೋಪ ಏನು?
    ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು. ಇದನ್ನೂ ಓದಿ: ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ – ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌

  • ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    – ರೆಡ್ಡಿ ಕೃತ್ಯಗಳನ್ನ ಬಯಲಿಗೆಳೆದಿದ್ದಕ್ಕೆ ನನ್ನ ವಿರುದ್ಧ ಆರೋಪ ಎಂದ ಸಂಸದ
    – ʻವೋಟ್ ಚೋರಿʼ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಯತ್ನ

    ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್ ಎಂಬ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    Janardhana Reddy

    ದೆಹಲಿಯಲ್ಲಿ ʻಪಬ್ಲಿಕ್‌ ಟಿವಿ; ಜೊತೆಗೆ ಮಾತನಾಡಿರುವ ಸೆಂಥಿಲ್, ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಅದರಲ್ಲಿ ಯಾವುದೇ ಸತ್ಯವಿಲ್ಲ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧಗಳನ್ನ ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ನನ್ನ ಮೇಲೆ ಈ ಆರೋಪ ಮಾಡಿರಬಹುದು. ಇದನ್ನ ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ.

    ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ ʻವೋಟ್ ಚೋರಿʼ ಪ್ರಕರಣದ ಗಮನವನ್ನ ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಸೆಂಥಿಲ್‌ ಬಾಲಾಜಿಗೆ ಶೀಘ್ರವೇ ಬೈಪಾಸ್‌ ಸರ್ಜರಿ ಅಗತ್ಯ – ಇಡಿ ಅರೆಸ್ಟ್‌ ಬೆನ್ನಲ್ಲೇ ವೈದ್ಯರ ಸಲಹೆ

    ಜನಾರ್ಧನ ರೆಡ್ಡಿ ಆರೋಪಗಳೇನು?
    ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು.

    ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು. ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್‌ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್‌ ಮೈಂಡ್‌ ಸೆಂಥಿಲ್‌.

    ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ದೂರಿದ್ದರು. ಇದನ್ನೂ ಓದಿ: ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ

  • ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ  ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    – ಇಡೀ ಪ್ರಕರಣದ ಮಾಸ್ಟರ್‌ ಮೈಂಡ್‌ ಕೈ ಸಂಸದ

    ಬೆಂಗಳೂರು: ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ (Sasikanth Senthil) ಮಾಸ್ಕ್‌ಮ್ಯಾನ್‌ಗೆ (Maskman) ಬುರುಡೆ (Skull) ಕೊಟ್ಟು ಕಳುಹಿಸಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಗಂಭೀರ ಆರೋಪ ಮಾಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

     

    ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್‌ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್‌ ಮೈಂಡ್‌ ಸೆಂಥಿಲ್‌ ಎಂದಿದ್ದಾರೆ.

    ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ಹೇಳಿದರು.

    ಈ ಪ್ರಕರಣ ಸಿಬಿಐ, ಎನ್‌ಐಎ ತನಿಖೆ ನಡೆಸಬೇಕು. ಇಲ್ಲದೇ ಇದ್ದರೆ ಹೈಕೋರ್ಟ್ ಅಥವಾ ಸುಪ್ರಿಂ ಕೋರ್ಟ್ ಜಡ್ಜ್ ಮೂಲಕ ತನಿಖೆ ಆಗಬೇಕು. ಸರ್ಕಾರ ನಿರ್ಧಾರ ಮಾಡದೇ ಇದ್ದರೆ ನಾನೇ ಇದರ ವಿರುದ್ದ ಕೋರ್ಟ್ ಗೆ ಹೋಗಲು ನಿರ್ಧರಿಸಿದ್ದೇನೆ ಎಂದರು.

  • ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

    ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

    – ಸರ್ಕಾರದಿಂದ ಹಿಂದೂ ವಿರೋಧಿ ನಡೆ

    ಕೊಪ್ಪಳ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಭವಿಷ್ಯ ನುಡಿದಿದ್ದಾರೆ.

    ಗಂಗಾವತಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಧರ್ಮಸ್ಥಳದಲ್ಲಿ ಶವಗಳನ್ನು (Dharmasthala Burials Case) ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ (SIT) ರಚನೆ ಬಗ್ಗೆ ಪ್ರತಿಕ್ರಿಯಿಸಿದರು. ಇವತ್ತಿನ ಕಾಂಗ್ರೆಸ್ (Congress) ಸರ್ಕಾರ ಹಿಂದೂ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ. ಈ ವಿಷಯವನ್ನ ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂತ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

    ಒಂದು ಸಮುದಾಯವನ್ನ ಒಲೈಸುವ ಸಲುವಾಗಿ ವಿಶ್ವದೆಲ್ಲೆಡೆ ಹೆಸರುವಾಸಿಯಾದ ಮಂಜುನಾಥನ ಸನ್ನಿದಿಗೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ನಡೆಕೊಳ್ಳುತ್ತಿದ್ದಾರೆ. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಇದು ಸಂಪೂರ್ಣವಾಗಿ ಹಿಂದೂ ವಿರೋಧಿ ನಡೆ. ಮಂಜುನಾಥನ ಶಾಪದಿಂದ ಈ ಸರ್ಕಾರ ಸರ್ವನಾಶವಾಗತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?

  • ಕೋರ್ಟ್ ಆದೇಶದ ಬಳಿಕ ಜನಾರ್ದನ ರೆಡ್ಡಿ ಶಾಸಕತ್ವ ಅನರ್ಹತೆ ಬಗ್ಗೆ ತೀರ್ಮಾನ – ಯು.ಟಿ.ಖಾದರ್

    ಕೋರ್ಟ್ ಆದೇಶದ ಬಳಿಕ ಜನಾರ್ದನ ರೆಡ್ಡಿ ಶಾಸಕತ್ವ ಅನರ್ಹತೆ ಬಗ್ಗೆ ತೀರ್ಮಾನ – ಯು.ಟಿ.ಖಾದರ್

    ಬೆಂಗಳೂರು: ಕೋರ್ಟ್‌ನಿಂದ ಆದೇಶ ಬಂದ ಬಳಿಕ ಶಾಸಕ ಜನಾರ್ದನ ರೆಡ್ಡಿ (Janardhana Reddy) ಅವರ ಶಾಸಕತ್ವ ಅನರ್ಹತೆ ಬಗ್ಗೆ ತೀರ್ಮಾನ ಮಾಡುವುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ (UT Khader) ತಿಳಿಸಿದರು.ಇದನ್ನೂ ಓದಿ: ಬಿಬಿಎಂಪಿ ಕಾರ್ಮಿಕರಿಗೆ ಬಿಎಂಟಿಸಿ ಬಸ್ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

    ಸಿಬಿಐ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನಾರ್ದನ ರೆಡ್ಡಿಗೆ ಶಿಕ್ಷೆ ಆಗಿರುವ ವಿಚಾರ ಮಾಧ್ಯಮ, ಪತ್ರಿಕೆಗಳ ಮೂಲಕ ನನಗೆ ಗೊತ್ತಾಗಿದೆ. ಮಾಧ್ಯಮ, ಪತ್ರಿಕೆಗಳನ್ನು ನೋಡಿ ನಾನು ಏನು ನಿರ್ಧಾರ ಮಾಡಲು ಸಾಧ್ಯವಿಲ್ಲ. ಕೋರ್ಟ್‌ನಿಂದ ಆದೇಶ ಬರಲಿ. ಆದೇಶ ಬಂದ ಬಳಿಕ ಕಾನೂನು ಪ್ರಕಾರ, ಸಂವಿಧಾನದ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

    ಇದೇ ವೇಳೆ 18 ಶಾಸಕರ ಅಮಾನತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರು ನನಗೆ ಪತ್ರ ಬರೆದಿದ್ದರು. ನಾನು ಊರಿನಲ್ಲಿ ಇರಲಿಲ್ಲ. ರಾಜ್ಯಪಾಲರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಆದಷ್ಟು ಬೇಗ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ಮಾಡುತ್ತೀನಿ ಎಂದು ತಿಳಿಸಿದರು.ಇದನ್ನೂ ಓದಿ: ಯುದ್ಧವು ದೇಶದ ಖ್ಯಾತಿಗೆ ಒಳ್ಳೆಯದಲ್ಲ: ‘ಆಪರೇಷನ್ ಸಿಂಧೂರ’ ಬಗ್ಗೆ ಸಂಜನಾ ಗಲ್ರಾನಿ ಪೋಸ್ಟ್

  • ಮೈನಿಂಗ್ ಕೇಸಲ್ಲಿ 7 ವರ್ಷ ಜೈಲು – ಶಾಸಕ ಸ್ಥಾನದಿಂದ ಅನರ್ಹರಾಗ್ತಾರಾ ರೆಡ್ಡಿ?

    ಮೈನಿಂಗ್ ಕೇಸಲ್ಲಿ 7 ವರ್ಷ ಜೈಲು – ಶಾಸಕ ಸ್ಥಾನದಿಂದ ಅನರ್ಹರಾಗ್ತಾರಾ ರೆಡ್ಡಿ?

    ಬಳ್ಳಾರಿ/ಬೆಂಗಳೂರು: ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ. ಮೈನಿಂಗ್ ಕೇಸ್‌ನಲ್ಲಿ ರೆಡ್ಡಿ ದೋಷಿ ಎಂದು ತೀರ್ಪು ನೀಡಿರುವ ಕೋರ್ಟ್, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈಗ ರೆಡ್ಡಿಗೆ ಶಾಸಕ ಸ್ಥಾನದಿಂದ ಅನರ್ಹವಾಗುವ ಭೀತಿ ಎದುರಾಗಿದೆ.

    ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಗೆದ್ದಿದ್ದ ಜನಾರ್ದನ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ 2 ವರ್ಷಗಳಿಗಿಂತ ಹೆಚ್ಚು ಶಿಕ್ಷೆಯಾದರೆ ಅನರ್ಹ ಸಾಧ್ಯತೆಯಿದೆ. 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲುವಂತಿಲ್ಲ. ಅಲ್ಲದೇ, ಸದ್ಯದ ಶಾಸಕ ಸ್ಥಾನ ಸಹ ಅನರ್ಹವಾಗಬಹುದು. ಇದೆಲ್ಲವೂ ಸಿಬಿಐ ಕೋರ್ಟ್ನ ಆದೇಶ ಜಾರಿಯಾದರೆ ಮಾತ್ರ ಸಾಧ್ಯ. ಹೈಕೋರ್ಟ್ನಿಂದ ಸ್ಟೇ ತಂದರೆ ಯಾವುದೇ ತೊಂದರೆಯಿಲ್ಲ.

    1951 ರ ಪ್ರಜಾಪ್ರತಿನಿಧಿ ಕಲಂ 8(3) ಅಡಿ 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಯಾದರೆ ಶಾಸಕ ಸ್ಥಾನದಿಂದ ಅನರ್ಹರಾಗ್ತಾರೆ. ಅಲ್ಲದೇ, ಮುಂದಿನ 6 ವರ್ಷಗಳ ತನಕ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 3 ತಿಂಗಳ ಒಳಗೆ ಕೋರ್ಟ್ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿದೆ. ಅಲ್ಲಿ ಅರ್ಜಿ ಪುರಸ್ಕರಿಸಿದರೆ ಶಾಸಕ ಸ್ಥಾನ ಅನರ್ಹತ್ವಕ್ಕೆ ತಡೆ ಬೀಳಲಿದೆ.

  • ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

    ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

    – ಮಾಜಿ ಸಚಿವನಿಗೆ ಶಾಕ್‌ ಕೊಟ್ಟ ಸಿಬಿಐ ಕೋರ್ಟ್‌

    ಬಳ್ಳಾರಿ/ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ.

    ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು ಅಲಿ ಖಾನ್‌ಗೆ ಕೋರ್ಟ್‌ ಸೇರಿ ಐದು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಅವಿಭಜಿತ ಆಂಧ್ರಪ್ರದೇಶ ಗಣಿ ಸಚಿವೆಯಾಗಿದ್ದ ಸಬಿತಾ ಇಂದ್ರರೆಡ್ಡಿ, ಕೃಷ್ಣ ನಂದಾಗೆ ಕೋರ್ಟ್‌ ಕ್ಲೀನ್‌ಚಿಟ್‌ ನೀಡಿದೆ. ಇದನ್ನೂ ಓದಿ: ನನಗೆ ನಮ್ಮ ದೇಶ ಮುಖ್ಯ, ಅದಕ್ಕೆ ಯುದ್ಧಕ್ಕೆ ಹೋಗ್ತೀನಿ ಎಂದಿದ್ದೆ: ಸಚಿವ ಜಮೀರ್

    ಏನಿದು ಪ್ರಕರಣ?
    ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿ‌ಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ‌ ಇಲಾಖೆಯಿಂದಲೂ ಅಕ್ರಮ‌ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.

    2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್‌ನ ರೋಷಯ್ಯ ಅವರು 2009 ರಲ್ಲಿ ಈ ಪ್ರಕರಣವನ್ನು‌ ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು. ಪ್ರಕರಣದಲ್ಲಿ ಟಪಾಲ್ ಗಣೇಶ ಮತ್ತವರ ಸಹೋದರ ಏಕಾಂಬರಂ, ಪ್ರಮುಖ ಸಾಕ್ಷಿಯಾಗಿದ್ದು, ಈಗಾಗಲೇ ಸಿಬಿಐ 3400 ಕ್ಕೂ ಹೆಚ್ಚು ದಾಖಲೆಗಳ‌ ಪರಿಶೀಲನೆ ಹಾಗೂ 219ಕ್ಕೂ ಹೆಚ್ವು ಸಾಕ್ಷಿಗಳ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಜೈಲಿಗೆ ಹೋಗೇ ಹೋಗ್ತಾರೆ ಎಂದು ಟಪಾಲ್ ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಹಾಗೂ ಅವರ ಪಟಾಲಂನಿಂದ ಅನುಭವಿಸಿದ್ದ ಕಿರುಕುಳದ ಬಗ್ಗೆಯೂ ಇಂಚಿಂಚಾಗಿ ತೆರೆದಿಟ್ಟಿದ್ದರು. ಇದನ್ನೂ ಓದಿ: ಸುಹಾಸ್‌ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ: ದಿನೇಶ್ ಗುಂಡೂರಾವ್ ತಿರುಗೇಟು

  • ಕಾಂಗ್ರೆಸ್‌ನಲ್ಲಿ ಯಾರೂ ಯಾರನ್ನೂ ಮುಗಿಸಲು ಆಗಲ್ಲ: ಶಿವರಾಜ್ ತಂಗಡಗಿ

    ಕಾಂಗ್ರೆಸ್‌ನಲ್ಲಿ ಯಾರೂ ಯಾರನ್ನೂ ಮುಗಿಸಲು ಆಗಲ್ಲ: ಶಿವರಾಜ್ ತಂಗಡಗಿ

    ಬೆಂಗಳೂರು: ನಮ್ಮಲ್ಲಿ ಎಸ್‌ಟಿ ನಾಯಕರು ಸೇರಿದಂತೆ ಎಲ್ಲಾ ಸಮುದಾಯದ ನಾಯಕರೂ ಇದ್ದಾರೆ. ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್.ರಾಜಣ್ಣ ಎಸ್‌ಟಿ ನಾಯಕರಿದ್ದಾರೆ. ಯಾರೂ ಸಹ ಯಾರನ್ನೂ ಮುಗಿಸಲು ಆಗಲ್ಲ ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ರಾಮುಲು, ರೆಡ್ಡಿ ಅವರವರ ಕಚ್ಚಾಟದಿಂದ ಕಾಂಗ್ರೆಸ್‌ಗೆ (Congress) ಬರ್ತಾ ಇದಾರೆ ಎಂದು ಹೇಳ್ತಾ ಇದಾರೆ. ರಾಮುಲು ಅವರನ್ನು ಪಕ್ಷದಿಂದ ಹೊರಗೆ ಹಾಕಬೇಕು ಎನ್ನುತ್ತಿದ್ದಾರೆ ಎಂದು ನಮ್ಮ ಅಧ್ಯಕ್ಷರೇ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ (BJP) ಒಡೆದ ಮನೆ, ಮೂರು ಬಾಗಿಲು, ನಮ್ಮ ಪಕ್ಷದಲ್ಲಿ 12 ಬಾಗಿಲು ಇಲ್ಲ ಎಂದಿದ್ರು ಎಂದು ವ್ಯಂಗ್ಯವಾಡಿದ್ದಾರೆ.

    ರಾಮುಲು (Sriramulu) ಪಕ್ಷಕ್ಕೆ ಬಂದ್ರೆ ಸ್ವಾಗತ. ಅಗತ್ಯತೆ ಅಂತೇನಿಲ್ಲ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇನೆ. ರಾಮುಲು, ರೆಡ್ಡಿ ಜಗಳದಿಂದ ಯಾರು ಜಾಸ್ತಿ ಸುಳ್ಳು ಹೇಳ್ತಾರೆ ಎಂಬ ವಾಸ್ತವ ಗೊತ್ತಾಗ್ತಿದೆ ಎಂದು ಇದೇ ವೇಳೆ ಜನಾರ್ದನ ರೆಡ್ಡಿಯವರಿಗೆ (Janardhana Reddy) ತಿರುಗೇಟು ನೀಡಿದ್ದಾರೆ.