Tag: Janardhana Reddy

  • ಮುಖ್ಯಮಂತ್ರಿ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ: ಶ್ರೀರಾಮುಲು

    ಮುಖ್ಯಮಂತ್ರಿ ಆಗುವವರೆಗೂ ತಾಳ್ಮೆಯಿಂದ ಕಾಯುತ್ತೇನೆ: ಶ್ರೀರಾಮುಲು

    ಬಳ್ಳಾರಿ: ಇಂದಲ್ಲ ನಾಳೆ ನಮ್ಮ ಪಕ್ಷ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತದೆ. ಅಲ್ಲಿಯವರೆಗೂ ನಾನು ತಾಳ್ಮೆಯಿಂದ ಕಾಯುತ್ತೇನೆ ಎಂದು ಸಾರಿಗೆ ಸಚಿವ ಶ್ರೀರಾಮುಲು (B.Sriramulu), ಮುಖ್ಯಮಂತ್ರಿ ಕನಸು ಬಿಚ್ಚಿಟ್ಟಿದ್ದಾರೆ.

    ಸಂಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಎಸ್.ಟಿ ಸಮುದಾಯದ ನಾಯಕನನ್ನು ಪಕ್ಷ ಈ ಮಟ್ಟಕ್ಕೆ ಬೆಳೆಸಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸ್ಪರ್ಧಿಸಲು ಪಕ್ಷ ಅವಕಾಶ ಕೊಟ್ಟಿತ್ತು. ಇಂದಲ್ಲ ನಾಳೆ ಪಕ್ಷ ನನ್ನ ಸಾಧನೆಯನ್ನು ಗುರುತಿಸುತ್ತದೆ. ನಾನು ಮೋದಿ (Narendra Modi), ಅಮಿತ್ ಶಾಗೆ (Amit Shah) ಯಾಕೆ ಮೆಚ್ಚುಗೆಯಾಗಬಾರದು? ನನಗೆ ಅತಿಯಾದ ತಾಳ್ಮೆಯಿದೆ ಮುಖ್ಯಮಂತ್ರಿಯಾಗುವವರೆಗೂ ನಾನು ಕಾಯುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಯಾರೇ ಬಂದ್ರೂ ನಾನು ಗೆದ್ದಾಗಿದೆ: ವರ್ತೂರು ಪ್ರಕಾಶ್

    ಕಲ್ಯಾಣ ಕರ್ನಾಟಕದಲ್ಲಿ ಅತೀ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ನನಗೆ ಬಳ್ಳಾರಿ ಜಿಲ್ಲೆಯಿಂದಲೇ ಚುನಾವಣೆ ಎದುರಿಸಬೇಕು ಎಂಬ ಆಸೆ ಇದೆ. ಈ ಮೂಲಕ ಸಂಡೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆಯನ್ನು ಪರೋಕ್ಷವಾಗಿ ಹೇಳಿದ್ದಾರೆ.

    ಈಗಾಗಲೇ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ಬಳ್ಳಾರಿಯಿಂದ (Ballari) ಸ್ಪರ್ಧಿಸುವ ಕುರಿತು ತಿಳಿಸಿದ್ದೇನೆ. ಇನ್ನೂ ಯಾವ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಕಳೆದ ಬಾರಿ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಂತಿದ್ದೆ. ಆಗಿನ ಸಂದರ್ಭ ಹಾಗಿತ್ತು ಎಂದು ಹಿಂದಿನ ಚುನಾವಣೆಯನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಗುಬ್ಬಿಯಲ್ಲಿ ಶಾಸಕರು ಕೊಟ್ಟ ಕುಕ್ಕರ್ ಬ್ಲಾಸ್ಟ್ ಆಗುತ್ತಿವೆ: ಬಿ.ಎಸ್.ನಾಗರಾಜು

    ಜನಾರ್ದನ ರೆಡ್ಡಿ (Janardhana Reddy) ನನ್ನ ಆತ್ಮೀಯ ಸ್ನೇಹಿತರು. ಅವರ ರಾಜಕೀಯ ಪಕ್ಷದ ಬಗ್ಗೆ ನಾನು ಮಾತನಾಡುವುದಿಲ್ಲ. ರಾಜಕೀಯ ಬೇರೆ. ಸ್ನೇಹ ಬೇರೆ. ಹಿಂದೆ ಇದ್ದ ಸ್ನೇಹ ಬಾಂಧವ್ಯ ಈಗಲೂ ಇದೆ. ಅವರು ಒಬ್ಬ ಚತುರ ರಾಜಕಾರಣಿ ಎಂದು ಬಣ್ಣಿಸಿದ್ದಾರೆ. ಅವರು ಬೇರೆ ಪಕ್ಷ ಕಟ್ಟುವಾಗ ನಾನು ಬೇಡ ಎಂದಿದ್ದೆ. ಆದರೂ ಅವರು ಪಕ್ಷ ಕಟ್ಟಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಸವ, ಬುದ್ಧ, ಅಂಬೇಡ್ಕರ್ ತತ್ವದಿಂದ ಕೆಆರ್‌ಪಿಪಿ ಹುಟ್ಟಿದೆ – ಸಿಟ್ಟು, ದ್ವೇಷದಿಂದಲ್ಲ: ಜನಾರ್ದನ ರೆಡ್ಡಿ

    ಬಸವ, ಬುದ್ಧ, ಅಂಬೇಡ್ಕರ್ ತತ್ವದಿಂದ ಕೆಆರ್‌ಪಿಪಿ ಹುಟ್ಟಿದೆ – ಸಿಟ್ಟು, ದ್ವೇಷದಿಂದಲ್ಲ: ಜನಾರ್ದನ ರೆಡ್ಡಿ

    ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗವನ್ನು ಅಭಿವೃದ್ಧಿ ಮಾಡಬೇಕು ಎನ್ನುವ ಉದ್ದೇಶದಿಂದ ಬಸವಣ್ಣ, ಬುದ್ಧ, ಅಂಬೇಡ್ಕರ್ ಅವರ ತತ್ವದ ಆಧಾರದ ಮೇಲೆ ಪಕ್ಷವನ್ನು ಕಟ್ಟಿರುವೆ. ಯಾರ ಮೇಲೂ ಸಿಟ್ಟು, ದ್ವೇಷದಿಂದ ಪಕ್ಷವನ್ನು ಕಟ್ಟಿಲ್ಲ ಎಂದು ಕೆಆರ್‌ಪಿಪಿ (KRPP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಹೇಳಿದರು.

    ಕೊಪ್ಪಳದ (Koppal) ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕೆಆರ್‌ಪಿಪಿ ಪಕ್ಷದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡ ಪಕ್ಷದ ಅಭ್ಯರ್ಥಿಗಳ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 12 ವರ್ಷಗಳ ಹಿಂದೆ ಜನಾರ್ದನ ರೆಡ್ಡಿಯವರು ಹಲವರನ್ನು ನಂಬಿಕೊಂಡು ಸಾಕಷ್ಟು ಜನರನ್ನು ಶಾಸಕರನ್ನಾಗಿ, ಸಂಸದರನ್ನಾಗಿ ಮಾಡಿದ್ದಾರೆ. ಆದರೆ ಅವರೆಲ್ಲರೂ ನನಗೆ ಮೋಸ ಮಾಡಿ, ಬೆನ್ನಿಗೆ ಚೂರಿ ಹಾಕಿದ್ದಾರೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಂಡು ಕೂರಲು ನಾನು ಸಿದ್ಧನಿಲ್ಲ ಎಂದರು.

    12 ವರ್ಷಗಳ ಕಾಲ ನಾನು ಜೈಲು ವಾಸವನ್ನು ಅನುಭವಿಸಿದ್ದೇನೆ. ಅದು ನನ್ನ ಫಸ್ಟ್ ಹಾಫ್ ಆದರೆ, ಸದ್ಯ ಸೆಕೆಂಡ್ ಹಾಫ್ ಪ್ರಾರಂಭವಾಗಿದೆ. ಇದು ಮುಂದಿನ 12 ವರ್ಷಗಳ ಕಾಲ ನಡೆಯಲಿದೆ. ಆಗ ಜನಾರ್ದನ ರೆಡ್ಡಿ ಏನು ಎನ್ನುವುದು ಎಲ್ಲರಿಗೂ ತಿಳಿಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ಅಶ್ವಥ್ ನಾರಾಯಣ್ ಅಲ್ಲ.. ಮಾನಸಿಕ ಅಸ್ವಸ್ಥ: ಬಿ.ಕೆ.ಹರಿಪ್ರಸಾದ್

    ಅಭ್ಯರ್ಥಿಗಳ ಘೋಷಣೆ:
    ಕೆಆರ್‌ಪಿಪಿ ಪಕ್ಷದ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆಯನ್ನು ಮಾಡಲಿದ್ದಾರೆ. ಈಗಾಗಲೇ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಬಳ್ಳಾರಿಯಿಂದ ಅರುಣಾಲಕ್ಷ್ಮೀ ಜನಾರ್ದನ ರೆಡ್ಡಿ, ಸಿಂಧನೂರಿನಿಂದ ನೆಕ್ಕಂಟಿ ಮಲ್ಲಿಕಾರ್ಜುನ, ಸಿರುಗುಪ್ಪದಿಂದ ಧರಪ್ಪ ನಾಯಕ, ಹಿರಿಯೂರು ಕ್ಷೇತ್ರದಿಂದ ಮಹೇಶ, ನಾಗಠಾಣ ಕ್ಷೇತ್ರದಿಂದ ಶ್ರೀಕಾಂತ್ ಅವರನ್ನು ಆಯ್ಕೆ ಮಾಡಿಕೊಂಡು ಅಭ್ಯರ್ಥಿಗಳು ಎಂದು ಘೋಷಣೆ ಮಾಡಲಾಗಿದೆ. ಇನ್ನೂ ಬಾಕಿ ಉಳಿದುಕೊಂಡಿರುವ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಘೋಷಣೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಜ್ಮೀರ್ ದರ್ಗಾಗೆ ರೆಡ್ಡಿ ಭೇಟಿ – ಕಾಂಗ್ರೆಸ್ ಪಾಳಯಕ್ಕೆ ಮರ್ಮಾಘಾತ

    ಅಜ್ಮೀರ್ ದರ್ಗಾಗೆ ರೆಡ್ಡಿ ಭೇಟಿ – ಕಾಂಗ್ರೆಸ್ ಪಾಳಯಕ್ಕೆ ಮರ್ಮಾಘಾತ

    ಕೊಪ್ಪಳ: ಚುನಾವಣೆ ಹೊಸ್ತಿಲಲ್ಲೇ ಕೆಆರ್‌ಪಿಪಿ (KRPP) ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ದರ್ಗಾಗೆ ಭೇಟಿ ನೀಡಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಆತಂಕ ಸೃಷ್ಟಿಸಿದ್ದಾರೆ. ಮುಸ್ಲಿಂ (Muslim) ಮತ ಭೇಟೆಗೆ ರೆಡ್ಡಿ ಮತ್ತೊಂದು ದಾಳ ಉರುಳಿಸಿದ್ರಾ ಎಂಬ ಪ್ರಶ್ನೆ ಮೂಡಿದ್ದು, ರೆಡ್ಡಿ ನಡೆಯಿಂದ ಕಾಂಗ್ರೆಸ್ ಪಾಳಯದಲ್ಲೂ ಸಂಚಲನ ಮೂಡಿಸಿದೆ.

    ಜನಾರ್ದನ ರೆಡ್ಡಿ ಪತ್ನಿ ಸಮೇತ ರಾಜಸ್ಥಾನದ (Rajasthan) ಅಜ್ಮೀರ್ ದರ್ಗಾಗೆ (Ajmer Dargah) ಭೇಟಿ ನೀಡಿದ್ದಾರೆ. ಅಜಮೀರ್‌ನಲ್ಲಿನ ಖಾಜಾ ಗರೀಬ್ ನವಾಜ್ ದರ್ಗಾಗೆ ತೆರಳಿ ಚಾದರ ಮತ್ತು ಹೂ ಸಮರ್ಪಣೆ ಮಾಡಿ, ವಿವಿಧ ಧಾರ್ಮಿಕ ವಿಧಿ-ವಿಧಾನ ಪೂರೈಸಿದ್ದಾರೆ. ವಿಶೇಷ ಪೂಜೆ ಸಲ್ಲಿಸಿರುವ ಜನಾರ್ದನ ರೆಡ್ಡಿ ಹಾಗೂ ಪತ್ನಿ ಲಕ್ಷ್ಮೀ ಅರುಣಾ, ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಪ್ರಾರ್ಥಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲಿ ತ್ರಿ ಸದಸ್ಯ ಪೀಠದಲ್ಲಿ ಹಿಜಬ್ ಪ್ರಕರಣದ ವಿಚಾರಣೆ ನಡೆಸಲಾಗುವುದು: ಸಿಜೆಐ

    ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿರುವ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾರನ್ನು ಬಳ್ಳಾರಿ ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಹೊನ್ನಾ ನಾಯಕ ಮಾತಿಗೆ ತೀವ್ರ ಅಸಮಾಧಾನ- ಸಭೆ ಮಧ್ಯದಲ್ಲೇ ಹೊರಟು ಹೋದ ಶಾಸಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಂಗ್ರೆಸ್, ಬಿಜೆಪಿ ತಲೆ ಬಾಗುವಂತೆ ಮಾಡುತ್ತೇನೆ – ಜನಾರ್ದನ ರೆಡ್ಡಿ ಸವಾಲ್

    ಕಾಂಗ್ರೆಸ್, ಬಿಜೆಪಿ ತಲೆ ಬಾಗುವಂತೆ ಮಾಡುತ್ತೇನೆ – ಜನಾರ್ದನ ರೆಡ್ಡಿ ಸವಾಲ್

    ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (KRP) ಸ್ಥಾಪನೆ ಬಳಿಕ ಮೊದಲ ಬಾರಿಗೆ ರಾಯಚೂರಿನ ಸಿಂಧನೂರಿನಲ್ಲಿ ಬಹಿರಂಗ ಸಮಾವೇಶ ನಡೆಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ರಾಜ್ಯದಲ್ಲಿನ ರಾಷ್ಟ್ರೀಯ ಪಕ್ಷಗಳು ತಲೆ ಬಾಗುವಂತೆ ಮಾಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.

    ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಎರಡೂ ಪಕ್ಷಗಳೂ ನನ್ನ ಗುರಿ. ಅದಕ್ಕಾಗಿ ಹಿಂದುಳಿದ 18 ರಿಂದ 20 ಜಿಲ್ಲೆಗಳಲ್ಲಿ ನಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತೇವೆ. ನನ್ನ ಮಗಳು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ರಾಜಕೀಯಕ್ಕೆ ಬಂದಿದ್ದಾಳೆ. ಪಕ್ಷವನ್ನ ಬಲ ಪಡಿಸಲು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ವಿದೇಶದಿಂದ ಬಂದಿದ್ದಾಳೆ. ನಮ್ಮ ಕುಟುಂಬದಿಂದ ಯರ‍್ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಅನ್ನೋದನ್ನ ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಓದಿ: ರಾಜಕೀಯ ಮರು ಪ್ರವೇಶ ಖಚಿತ – ನನ್ನ ಜೊತೆ ಯಾರು ಇರ್ತಾರೆ, ಯಾರು ಬರ್ತಾರೆ ಡಿ.25ಕ್ಕೆ ತಿಳಿಸುತ್ತೇನೆ: ಜನಾರ್ದನ ರೆಡ್ಡಿ

    ಅಪವಾದ ಹೊರಲು ಸಿದ್ಧನಿರಲಿಲ್ಲ:
    ನಮ್ಮ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವವರೆಗೆ ನಾನು ನಿದ್ರಿಸುವುದಿಲ್ಲ. 2018 ರಲ್ಲಿಯೇ ಹೊಸ ಪಕ್ಷ ಮಾಡುವ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಆದರೆ ಅಂದು ಬಿಜೆಪಿ ಯಡಿಯೂರಪ್ಪರನ್ನ (BS Yediyurappa) ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ನಾನು ಪಾರ್ಟಿ ಮಾಡಿದ್ದರೆ ಯಡಿಯೂರಪ್ಪನವರಿಗೆ ಅಡ್ಡ ಬಂದ ಎನ್ನುವ ಅಪವಾದ ಬರುತ್ತಿತ್ತು. ನಾನು ಆ ಅಪವಾದ ಹೊರಲು ನಾನು ಸಿದ್ಧನಿರಲಿಲ್ಲ ಎಂದು ಮನಬಿಚ್ಚಿ ಮಾತನಾಡಿದ್ದಾರೆ. ಇನ್ನೂ ಓದಿ: ಯಾರೇ ಬಂದ್ರು ಹಳೆಮೈಸೂರು ಭಾಗದಲ್ಲಿ ಜೆಡಿಎಸ್‍ನ್ನು ಅಲ್ಲಾಡಿಸಲು ಆಗಲ್ಲ: ನಿಖಿಲ್ ಕುಮಾರಸ್ವಾಮಿ

    ನನಗಿನ್ನೂ ಸಣ್ಣ ವಯಸ್ಸು:
    ನನಗಿನ್ನೂ ಸಣ್ಣ ವಯಸ್ಸು 5 ವರ್ಷ ಕಾದು ನೋಡೋಣ ಎಂದು ಹೊಸಪಕ್ಷ ಮಾಡಿದ್ದೇನೆ. ನಾನು ಜನರನ್ನ ನಂಬಿ ರಾಜಕೀಯಕ್ಕೆ ಬಂದಿದ್ದೇನೆ. ಪ್ರಾದೇಶಿಕ ಪಕ್ಷಗಳಿಗೆ ನಮ್ಮ ಭಾಗದ ಜನರ ದುಃಖ ದುಮ್ಮಾನಗಳು ತಿಳಿದಿರುತ್ತವೆ. ಜನರ ಮನೆ ಬಾಗಿಲಿಗೆ ಹೋಗಿ ಕೆಲಸ ಮಾಡುವ ಗುರಿಯನ್ನು ನಮ್ಮ ಪಕ್ಷ ಹೊಂದಿದೆ. ಸಿಂಧನೂರು ಸೇರಿ ಹಲವಾರು ಕ್ಷೇತ್ರದ ಅಭ್ಯರ್ಥಿಗಳನ್ನ ಒಂದೆರಡು ವಾರದಲ್ಲಿ ಘೋಷಣೆ ಮಾಡ್ತೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಜೆಪಿ, ಕಾಂಗ್ರೆಸ್ ನಾಯಕರ ಮಾತಿಗೆ ತಲೆ ಕೆಡಿಸಿಕೊಳ್ಳಲ್ಲ: ಜನಾರ್ದನ ರೆಡ್ಡಿ

    ಬಿಜೆಪಿ, ಕಾಂಗ್ರೆಸ್ ನಾಯಕರ ಮಾತಿಗೆ ತಲೆ ಕೆಡಿಸಿಕೊಳ್ಳಲ್ಲ: ಜನಾರ್ದನ ರೆಡ್ಡಿ

    ಕೊಪ್ಪಳ: ನನ್ನ ಪಕ್ಷದ ಬಗ್ಗೆ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಾಯಕರು ಏನೇ ಮಾತನಾಡಿದರೂ, ಅವರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪಕ್ಷದ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಏನೇ ಮಾತನಾಡಲಿ. ಕೆಆರ್‌ಪಿಪಿ ಪಕ್ಷ ದೇಶ, ರಾಜ್ಯದಲ್ಲಿ ಏನು ಎನ್ನುವುದನ್ನು ಮುಂದೆ ತೋರಿಸಿಕೊಡುತ್ತೇನೆ. ಅವರು ಏನಾದರೂ ಹೇಳಲಿ ನಾನು ತಲೆ ಕಡೆಸಿಕೊಳ್ಳಲ್ಲ ಎಂದು ಕಾಂಗ್ರೆಸ್‌, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

    ಪಕ್ಷ ಘೋಷಣೆ ನಂತರ ಮೊದಲ ಬಾರಿಗೆ ಕ್ಷೇತ್ರಕ್ಕೆ ಬಂದಿದ್ದೇನೆ. ನಿನ್ನೆಯೇ ಕ್ಷೇತ್ರಕ್ಕೆ ಬರಬೇಕಿತ್ತು, ಆದರೆ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ತೆರಳಿದ್ದೆ. ಇಲ್ಲಿನ ಜನ ಬಹಳ ಪ್ರೀತಿ ವಿಶ್ವಾಸದಿಂದ ಸ್ವೀಕರಿಸಿದ್ದಾರೆ. ರಾಜ್ಯದ ಜನ ನನ್ನನ್ನು ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಅದು ಗೊತ್ತಾಗುತ್ತದೆ. ನಾನು ಯಾವುದೇ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಲ್ಲ. ಅವರು ಬಂದರೆ ಪ್ರೀತಿ ವಿಶ್ವಾಸದಿಂದ ಸ್ವಿಕರಿಸುತ್ತೇನೆ. 16 ಬಳಿಕ ಪಕ್ಷದ ಪ್ರಣಾಳಿಕೆ ಹಾಗೂ ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೊಸ ವರ್ಷಕ್ಕೆ ಸಿಹಿ ಸುದ್ದಿ- ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿದೆ ಬಿಎಂಟಿಸಿ

    ಕೆಆರ್‌ಪಿಪಿ ಪಕ್ಷ ಬಿಜೆಪಿಯ ಬಿ ಟೀಂ ಎನ್ನೋ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಬಸವಣ್ಣನ ತತ್ವದ ಮೇಲೆ ನಡೆಯುವನು. ಒಮ್ಮೆ ಮುಂದಿಟ್ಟ ಹೆಜ್ಜೆ ಹಿಂದಿಡಲ್ಲ. ದೇಶದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಏನು ಎನ್ನೋದನ್ನು ತೋರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮನೆಯಲ್ಲಿ ಸಿದ್ದರಾಮಯ್ಯ ಇಲಿ, ಬೆಕ್ಕು, ಜಿರಳೆ ಆಗಿರ್ತಾರೆ: ಶ್ರೀರಾಮುಲು

    Live Tv
    [brid partner=56869869 player=32851 video=960834 autoplay=true]

  • ಹೊಸ ಪಕ್ಷ ಕಟ್ಟಿದೋರು ಉಳಿದಿಲ್ಲ, ಎಷ್ಟು ಮಂದಿ ಜನಾರ್ದನ ಬಂದ್ರೂ ಏನೂ ಆಗಲ್ಲ- ಮುನಿರತ್ನ

    ಹೊಸ ಪಕ್ಷ ಕಟ್ಟಿದೋರು ಉಳಿದಿಲ್ಲ, ಎಷ್ಟು ಮಂದಿ ಜನಾರ್ದನ ಬಂದ್ರೂ ಏನೂ ಆಗಲ್ಲ- ಮುನಿರತ್ನ

    ಕೋಲಾರ: ಹೊಸ ಪಕ್ಷ ಕಟ್ಟಿದವರು ಈಗ ಯಾರೂ ಉಳಿದಿಲ್ಲ. ಹಾಗೆಯೇ ಎಷ್ಟು ಮಂದಿ ಜನಾರ್ದನ (Janardhana Reddy) ಬಂದರೂ ಬಿಜೆಪಿಗೆ (BJP) ಯಾವುದೇ ತೊಂದರೆ ಆಗಲ್ಲ ಎಂದು ಸಚಿವ ಮುನಿರತ್ನ (Muniratna) ತಿರುಗೇಟು ನೀಡಿದ್ದಾರೆ.

    ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗಾರಪ್ಪ, ದೇವರಾಜ ಅರಸು ಸೇರಿದಂತೆ ಹಲವು ನಾಯಕರು ಪಕ್ಷ ಕಟ್ಟಿದ್ರು, ಅವು ಯಾವುದೂ ಈಗ ಕಣ್ಣಿಗೆ ಕಾಣಿಸ್ತಿಲ್ಲ. ಜನಾರ್ದನ ರೆಡ್ಡಿ ಅವರು ಗಂಗಾವತಿಗೆ ಮಾತ್ರ ಅಭ್ಯರ್ಥಿ ಆಗುತ್ತೇನೆ ಅಂತಾ ಹೇಳಿಕೊಂಡು ಬಂದಿದ್ದರು. ಈಗ ಪಕ್ಷ ಕಟ್ಟುತ್ತೇನೆ ಅಂತಾರೆ. ಎಷ್ಟು ಮಂದಿ ಜನಾರ್ದನ ಬಂದ್ರೂ ಬಿಜೆಪಿಗೆ ಸಣ್ಣ ತೊಂದರೆಯೂ ಆಗೊಲ್ಲ. ಇನ್ನೂ ಇಪ್ಪತ್ತು ಮಂದಿ ಪಕ್ಷ ಕಟ್ಟಿದರೂ ನಮ್ಮ ಪಕ್ಷಕ್ಕೆ ಏನೂ ಆಗೋಲ್ಲ ಎಂದು ಬೀಗಿದ್ದಾರೆ.

    ಜನಾರ್ದನ ರೆಡ್ಡಿ ವಿಚಾರದಲ್ಲಿ ಕೇಂದ್ರದ ನಾಯಕರ ತೀರ್ಮಾನ ಇರುತ್ತದೆ. ರೆಡ್ಡಿಯವರು ಆತುರದ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜಕಾರಣಿಗಳಿಗೆ ತಾಳ್ಮೆ ಬಹಳ ಮುಖ್ಯ, ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡಬೇಕಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವು ಕೋಲಾರವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ: ಮುನಿರತ್ನ

    ಕೆಎಂಎಫ್ ವಿಲೀನ ವಿಚಾರದಲ್ಲಿ ಕಾಂಗ್ರೆಸ್ (Congress) ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾಡಲು ಕೆಲಸ ಇಲ್ಲ. ಅಮುಲ್ (Amul) ಜೊತೆ ಕೆಎಂಎಫ್ (KMF) ವಿಲೀನದ ಬಗ್ಗೆ ಈವರೆಗೆ ಯಾವುದೇ ಚರ್ಚೆ ಆಗಿಲ್ಲ. ಸಭೆ ನಡೆದಿಲ್ಲ. ಇದು ಕಾಂಗ್ರೆಸ್‌ನವರ ಪಿತೂರಿ ಎಂದಿದ್ದಾರೆ. ಇದನ್ನೂ ಓದಿ: ನಾಟಕದಲ್ಲಿ ಸಿದ್ದರಾಮಯ್ಯಗೆ ಅವಮಾನ- ರಂಗಾಯಣದ ವಿರುದ್ಧ ಅಭಿಮಾನಿಗಳ ಆಕ್ರೋಶ

    ನೋಟ್ ಬ್ಯಾನ್ (Note Ban) ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಸರಿಯಾಗಿದೆ. ಜನಗಳೇನೂ ದಂಗೆ ಎದ್ದಿಲ್ಲ. ಅಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತೆಗೆದುಕೊಂಡ ತೀರ್ಮಾನ ಸರಿ ಇದೆ. ಜನ ಅದಕ್ಕೆ ಹೊಂದಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇನ್ನೂ ಮುಂದಿನ ಸರ್ಕಾರ ನಮ್ಮ ಪಕ್ಷದ್ದೇ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಬೆಂಗಳೂರು: ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ಇನ್ನೂ 15 ದಿನಗಳಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRP)  ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ಹೇಳಿದ್ದಾರೆ.

    ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಎನ್‌ಪಿಎಸ್ (ನೂತನ ಪಿಂಚಣಿ ಯೋಜನೆ) ವಿರೋಧಿಸಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಎಲ್ಲರೂ ಹೊಸ ವರ್ಷದ ಸಂಭ್ರಮ ಮಾಡುತ್ತಿದ್ದರೆ, ನೀವು ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಎನ್ನುವುದನ್ನು ತಿಳಿದೇ ನಾನಿಲ್ಲಿಗೆ ಬಂದಿದ್ದೇನೆ. ಸರ್ಕಾರಿ ನೌಕರರ ಪರಿಸ್ಥಿತಿ ನನಗೂ ಗೊತ್ತು. ನನ್ನ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿದ್ದು ನಿವೃತ್ತರಾಗಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲು- ಹರಿಯಾಣದ ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ

    ರಾಜ್ಯ ಸರ್ಕಾರ (Government of Karnataka) ಮನಸ್ಸು ಮಾಡಿದ್ರೆ ಯಾವುದೂ ದೊಡ್ಡ ವಿಚಾರ ಅಲ್ಲ. ತಮ್ಮೆಲ್ಲರ ಆಶೀರ್ವಾದದಿಂದ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ನಿಮ್ಮ ಹಾಗೆಯೇ ನಾನು ಕೂಡ ಹಿಂದೆ ಸರಿಯಲ್ಲ. ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ಹೆಜ್ಜೆ ಇಟ್ಟಿದ್ದೇನೆ. 15 ದಿನದಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ. ಪ್ರಣಾಳಿಕೆಯಲ್ಲಿ ನಿವೃತ್ತ ನೌಕರರ ವಿಚಾರವನ್ನೂ ಇಟ್ಟಿದ್ದೇನೆ. ಸರ್ಕಾರ ನಿಮ್ಮ ಹೋರಾಟಕ್ಕೆ ತಲೆ ಬಾಗಲೇಬೇಕು. ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ಕರೆ ನೀಡಿದ್ದಾರೆ.

    ರಾಜ್ಯ ಸರ್ಕಾರಿ ಎನ್‌ಪಿಎಸ್ (NPS) ನೌಕರರ ಸಂಘದ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದೆ. ಹೊಸ ಪಿಂಚಿಣಿ ಯೋಜನೆ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಮ್ಮದು ರಾಷ್ಟ್ರೀಯ ಪಕ್ಷ, ಹೊಸ ಪಕ್ಷದಿಂದ ಯಾವುದೇ ಪರಿಣಾಮ ಬೀರಲ್ಲ: ರೆಡ್ಡಿಗೆ ಶ್ರೀರಾಮುಲು ಟಾಂಗ್‌

    ನಮ್ಮದು ರಾಷ್ಟ್ರೀಯ ಪಕ್ಷ, ಹೊಸ ಪಕ್ಷದಿಂದ ಯಾವುದೇ ಪರಿಣಾಮ ಬೀರಲ್ಲ: ರೆಡ್ಡಿಗೆ ಶ್ರೀರಾಮುಲು ಟಾಂಗ್‌

    ಬಳ್ಳಾರಿ: ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸ ಪಕ್ಷದಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪ್ರಭಾವ ಬೀಳುವುದಿಲ್ಲ ಎಂದು ಸಚಿವ ಶ್ರೀರಾಮುಲು (Sriramulu) ತಿಳಿಸಿದರು.

    ಜನಾರ್ದನ ರೆಡ್ಡಿ (Janardhana Reddy) ಅವರ ಹೊಸ ಪಕ್ಷ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ (BJP) ಪಕ್ಷಕ್ಕೆ ಅದರದ್ದೇ ಆದ ಹಿನ್ನಲೆ ಮತ್ತು ಸಿದ್ಧಾಂತ ಇದೆ. ಅಷ್ಟೇ ಅಲ್ಲದೇ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ, ಇದರಲ್ಲಿ ಯಾವುದೇ ಗೊಂದಲ ಆಗುವುದಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ನಾನು, ಕಾಲ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದರು.

    ರೆಡ್ಡಿ ಬುದ್ಧಿವಂತರು, ತಿಳಿದವರು, ಅನುಭವಿ ವ್ಯಕ್ತಿ ಇದ್ದಾರೆ. ನಾನೊಬ್ಬ ಪ್ರಾಣ ಸ್ನೇಹಿತನಾಗಿ, ರೆಡ್ಡಿ ಬಿಜೆಪಿ ಶಕ್ತಿಯಾಗಿದ್ದರು, ಪಕ್ಷವು ಅವರಿಗೆ ಶಕ್ತಿಯಾಗಿ ನಿಂತಿತ್ತು. ಅವರು ವೈಯಕ್ತಿಕವಾಗಿ ಪಕ್ಷ ಮಾಡಿದ್ದಾರೆ. ಆದರೆ ಬಿಜೆಪಿ ಅವರನ್ನು ಯಾವತ್ತು ಬಿಟ್ಟು ಕೊಟ್ಟಿಲ್ಲ, ಅವರು ಪಕ್ಷವನ್ನು ಬಿಟ್ಟು ಕೊಟ್ಟಿಲ್ಲ. ಅವರು ಅನುಭವಿ ರಾಜಕಾರಣಿಯಾಗಿದ್ದು, ಯೋಚನೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ – ಅತಿ ವೇಗಕ್ಕಿಲ್ಲ ಕಡಿವಾಣ!

    ಈವರೆಗೆ ರೆಡ್ಡಿಯವರ ಜೊತೆಗೆ ಬಂಡೆಯಾಗಿ ನಿಂತಿದ್ದೆ. ಇನ್ನು ಮುಂದೆಯೂ ಸ್ನೇಹಿತನಾಗಿ ಮುಂದುವರಿಯುತ್ತೇನೆ. ಆದರೆ ರಾಜಕಾರಣ ಮತ್ತು ಸ್ನೇಹ ಬೇರೆಯಾಗಿದೆ. ರೆಡ್ಡಿಯವರೊಂದಿಗೆ ನಮ್ಮ ಎಲ್ಲಾ ನಾಯಕರು, ಎಲ್ಲಾ ಸಂದರ್ಭದಲ್ಲಿ ನಿಂತಿದ್ದರು. ಮತ್ತೆ ಮಾತುಕತೆ ಮಾಡುವ ಅಗತ್ಯ ಇಲ್ಲ. ಈಗ ಮತ್ತೆ ಮನವೊಲಿಸಲು ನಾ ಹೋಗಲ್ಲ. ಮನವೊಲಿಕೆ ಈಗ ಮಾಡಿ ಏನು ಪ್ರಯೋಜನ? ಈ ಬಗ್ಗೆ ನಾ ಚರ್ಚೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೇರಳದಲ್ಲಿ ಹಕ್ಕಿ ಜ್ವರದ ಭೀತಿ – 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

    Live Tv
    [brid partner=56869869 player=32851 video=960834 autoplay=true]

  • ನಾನು ಕಷ್ಟದಲ್ಲಿ ಇದ್ದಾಗ ಬಿಎಸ್‌ವೈ, ಜಗದೀಶ್ ಶೆಟ್ಟರ್ ಬಿಟ್ಟು ಇನ್ಯಾರು ನನ್ನ ಮನೆಗೆ ಬಂದಿರಲಿಲ್ಲ: ಜನಾರ್ದನ ರೆಡ್ಡಿ

    ನಾನು ಕಷ್ಟದಲ್ಲಿ ಇದ್ದಾಗ ಬಿಎಸ್‌ವೈ, ಜಗದೀಶ್ ಶೆಟ್ಟರ್ ಬಿಟ್ಟು ಇನ್ಯಾರು ನನ್ನ ಮನೆಗೆ ಬಂದಿರಲಿಲ್ಲ: ಜನಾರ್ದನ ರೆಡ್ಡಿ

    – ನನ್ನ ಹೆಲಿಕಾಪ್ಟರ್ ಯಾವತ್ತು ಅನಾಥವಾಗಿರಲಿಲ್ಲ

    ಬೆಂಗಳೂರು: ನಾನು ಕಷ್ಟದಲ್ಲಿ ಇದ್ದಾಗ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಬಿಟ್ಟು ಇನ್ಯಾರು ನನ್ನ ಮನೆಗೆ ಬಂದಿರಲಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಆರೋಪಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa) ಹಾಗೂ ಜಗದೀಶ್‌ ಶೆಟ್ಟರ್‌ (Jagadish Shettar) ಇಬ್ಬರು ಬಂದು ನನಗೆ ಧೈರ್ಯ ತುಂಬಿದ್ದರು. ಅದಕ್ಕಾಗಿ ನಾನು ಅವರನ್ನು ನೆನಪು ಮಾಡಿಕೊಳ್ಳುತ್ತೇನೆ. ಆದರೆ ನನ್ನವರೇ ಅಂತ ನಾನು ಎಲ್ಲರನ್ನು ಮೆರೆಸಿ ಮೋಸ ಹೋದೆ. ಇದನ್ನ ನನ್ನ ಸ್ನೇಹಿತರು ಈಗಲೂ ಹೇಳ್ತಾರೆ. ನನ್ನ ಜೊತೆ ಕಷ್ಟದಲ್ಲಿ ಯಾರು ಬಂದಿಲ್ಲ. ನಾನು ಚೆನ್ನಾಗಿ ಇದ್ದಾಗ ಎಲ್ಲರೂ ನನ್ನನ್ನು ಹೊಗಳಿದರು. ಆದರೆ ಕಷ್ಟದಲ್ಲಿ ಇದ್ದಾಗ ಯಾರು ಬಂದಿಲ್ಲ ಎಂದು ಕಿಡಿಕಾರಿದರು.

    ನಾನು ಜೈಲಿಗೆ ಹೋದ ಮೇಲೆ ನನ್ನ ಹೆಂಡತಿ, ಮಕ್ಕಳು ತುಂಬಾ ಕಷ್ಟ ಅನುಭವಿಸಿದರು. ನನ್ನ ಶ್ರೀಮತಿ ಕುಟುಂಬ ದೊಡ್ಡದು. ಆದರೂ ನನ್ನ ನೋವನ್ನು ಆಕೆ ತಡೆದುಕೊಂಡಳು. ಪತ್ನಿ ಕುಟುಂಬ ಕೂಡಾ ಆತಂಕ ಪಟ್ಟಿದ್ದರು. ಆದರೆ ನನ್ನ ಹೆಂಡತಿ ಮಕ್ಕಳು ಧೃತಿಗೆಡದೆ ಧೈರ್ಯವಾಗಿ ಫೇಸ್ ಮಾಡಿದರು. ನಾನು ಎಷ್ಟು ದಿನ ಆಗುತ್ತೊ ಹೊರಗೆ ಬರೋಕೆ ಅಂತ ಗೊತ್ತಿಲ್ಲ ಅಂತ ಹೇಳಿ ಹೋದೆ. ಆದರೆ ನನ್ನ ಪತ್ನಿ ಎಲ್ಲಾ ನಿಭಾಯಿಸಿದಳು ಎಂದು ಹೇಳಿದರು. ಇದನ್ನೂ ಓದಿ: ಆಧಾರ್‌ಗೆ ಲಿಂಕ್ ಮಾಡದೇ ಹೋದರೆ ನಿಮ್ಮ ಪ್ಯಾನ್ ನಿಷ್ಕ್ರಿಯ

    ಮಗ ಡಿಗ್ರಿ ಮುಗಿಸಿ ಇವತ್ತು ಚಿತ್ರರಂಗಕ್ಕೆ ಬಂದಿದ್ದಾನೆ. ಮಕ್ಕಳು ಸೆಟಲ್ ಆಗಿದ್ದಾರೆ. ಎಲ್ಲಾ ಕಷ್ಟ ನನ್ನ ಶ್ರೀಮತಿ ತಡೆದುಕೊಂಡಿದ್ದಾಳೆ ಎಂದ ಅವರು, ನನ್ನ ಹೆಲಿಕಾಪ್ಟರ್ ಯಾವತ್ತು ಅನಾಥವಾಗಿರಲಿಲ್ಲ. ಕೆಲ ಮಾಧ್ಯಮಗಳು ಹಾಗೆ ಸುದ್ದಿ ಮಾಡಿದರು. ಕೋರ್ಟ್ ಕೂಡಾ ಹೆಲಿಕಾಪ್ಟರ್ ಬಿಟ್ಟಿತ್ತು. ಆದರೆ ಮಕ್ಕಳಿಗೆ ಕಷ್ಟ ಗೊತ್ತಾಗಬೇಕು ಅಂತ ಹೆಲಿಕಾಪ್ಟರ್ ಬಳಕೆ ಮಾಡಿಸಿಕೊಂಡಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭ್ರಷ್ಟಾಚಾರದ ಆರೋಪ ಮಾಡಿ ಅರೆಸ್ಟ್‌ ಆಗಿದ್ದ ಕೆಂಪಣ್ಣಗೆ ಜಾಮೀನು

    Live Tv
    [brid partner=56869869 player=32851 video=960834 autoplay=true]

  • ರಾಜಕೀಯ ಮರು ಪ್ರವೇಶ ಖಚಿತ – ನನ್ನ ಜೊತೆ ಯಾರು ಇರ್ತಾರೆ, ಯಾರು ಬರ್ತಾರೆ ಡಿ.25ಕ್ಕೆ ತಿಳಿಸುತ್ತೇನೆ: ಜನಾರ್ದನ ರೆಡ್ಡಿ

    ರಾಜಕೀಯ ಮರು ಪ್ರವೇಶ ಖಚಿತ – ನನ್ನ ಜೊತೆ ಯಾರು ಇರ್ತಾರೆ, ಯಾರು ಬರ್ತಾರೆ ಡಿ.25ಕ್ಕೆ ತಿಳಿಸುತ್ತೇನೆ: ಜನಾರ್ದನ ರೆಡ್ಡಿ

    ರಾಯಚೂರು: ರಾಜಕೀಯ ಜೀವನ ಪುನಃ ಪ್ರಾರಂಭ ಮಾಡುತ್ತಿದ್ದೇನೆ. ಸಾರ್ವಜನಿಕ ಬದುಕಿಗೆ ಬರುತ್ತಿದ್ದೇನೆ. ಹೀಗಾಗಿ ನಮ್ಮ ಆಪ್ತರೆಲ್ಲರನ್ನೂ ಮಾತನಾಡಿಸಿಕೊಂಡು ಹೋಗಲು ಮಸ್ಕಿಗೆ ಬಂದಿದ್ದೇನೆ. ರಾಜಕೀಯ ಪ್ರವೇಶ ಕುರಿತ ಎಲ್ಲಾ ಪ್ರಶ್ನೆಗಳಿಗೆ ಡಿಸೆಂಬರ್ 25ಕ್ಕೆ (December 25) ಉತ್ತರ ನೀಡುತ್ತೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhana Reddy) ಹೇಳಿದ್ದಾರೆ.

    ಮಸ್ಕಿ ಹೊರವಲಯದ ರೆಸಾರ್ಟ್‌ವೊಂದರಲ್ಲಿ ತಮ್ಮ ಬೆಂಬಲಿಗರು ಮತ್ತು ಆಪ್ತರೊಂದಿಗೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ರೆಡ್ಡಿ, ಕಳೆದ 18 ವರ್ಷದಿಂದ ಮಸ್ಕಿಗೆ ನಾನು ಬರುತ್ತಿದ್ದೇನೆ. ಮಸ್ಕಿಯಲ್ಲಿ ನೂರಾರು ಜನರ ಜೊತೆಗೆ ನನ್ನ ಒಡನಾಟವಿದೆ. ರಾಜಕೀಯ ಜೀವನ ಆರಂಭಿಸಲು ಆಪ್ತರ ಭೇಟಿಗೆ ಮಸ್ಕಿಗೆ ಬಂದಿದ್ದೇನೆ. ನಾಳೆ ಗಂಗಾವತಿಯಲ್ಲಿ ದುರ್ಗಾದೇವಿ ಜಾತ್ರೆ ಇದೆ. ಆ ಜಾತ್ರೆಯಲ್ಲಿ ಭಾಗವಹಿಸುತ್ತೇನೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ರಸ್ತೆಗಳು ಗುಂಡಿ ಮುಕ್ತ ಆಗದಿದ್ರೆ ಇಂಜಿನಿಯರ್‌ಗಳ ಸಂಬಳ ಕಟ್: BBMP ಕಮಿಷನರ್ ವಾರ್ನಿಂಗ್

    ಗಂಗಾವತಿಯಲ್ಲಿ ಮನೆ ಮಾಡಿ ಉತ್ತರ ಕರ್ನಾಟಕದೊಂದಿಗೆ ಓಡಾಟ ಹೆಚ್ಚಿಸಲು ಪ್ಲಾನ್ ಇದೆ. ಡಿಸೆಂಬರ್ 25ರಂದು ಮಹನೀಯರು ಜನಿಸಿದ ದಿನವಾಗಿದೆ. ಡಿ.25 ರಂದು ಎಲ್ಲಾ ಮಾಹಿತಿ ನೀಡುತ್ತೇನೆ. ನನ್ನ ಜೊತೆ ಯಾರು ಇರ್ತಾರೆ ಯಾರು ಬರ್ತಾರೆ ಅನ್ನೋದನ್ನು ಹೇಳುತ್ತೇನೆ. ಎಲ್ಲಾ ಪ್ರಶ್ನೆಗಳಿಗೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್‍ನಲ್ಲಿ ಉತ್ತರ ಸಿಗುತ್ತೆ ಎಂದು ಹೇಳುವ ಮೂಲಕ ಜನಾರ್ಧನ ರೆಡ್ಡಿ ತಮ್ಮ ರಾಜಕೀಯ ನಡೆಯ ಗುಟ್ಟು ಬಿಟ್ಟುಕೊಟ್ಟಿಲ್ಲ. ಸ್ಥಳೀಯ ಮುಖಂಡರು, ಮಾನ್ವಿ ಕ್ಷೇತ್ರದ ಕಾಂಗ್ರೆಸ್ (Congress), ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಗಳು ಸೇರಿ ಹಲವರು ಜನಾರ್ದನ ರೆಡ್ಡಿ ಜೊತೆ ಸಭೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: 5 ಲಕ್ಷದ ವಾಚ್‌ ವಿವಾದ: ದೇಶಭಕ್ತಿಯ ಟ್ವಿಸ್ಟ್‌ ನೀಡಿ ಸವಾಲೆಸೆದ ಅಣ್ಣಾಮಲೈ

    Live Tv
    [brid partner=56869869 player=32851 video=960834 autoplay=true]