ಬಳ್ಳಾರಿ: ಪುನೀತ್ ರಾಜ್‍ಕುಮಾರ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಅಪ್ಪು ನೆನಪುಗಳನ್ನು ಮೆಲುಕು ಹಾಕಿದ್ದಾರೆ. ನಮಗಿಂತ ಸಣ್ಣವನಿಗೆ ಶ್ರದ್ಧಾಂಜಲಿ ಮಾಡೋ ದಿನ ಬರುತ್ತದೆ ಅಂದುಕೊಂಡಿರಲಿಲ್ಲ ಎಂದು ಬೇಸರವನ್ನು ಹೊರಹಾಕಿದ್ದಾರೆ.
ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ನಮಗಿಂತ ಸಣ್ಣವನಿಗೆ ಶ್ರದ್ಧಾಂಜಲಿ ಸಭೆ ಮಾಡೋ ದಿನ ಬರುತ್ತದೆ ಅಂದುಕೊಂಡಿರಲಿಲ್ಲ. ಪುನೀತ್ ಸೇವೆ ಮಾತಲ್ಲಿ ವರ್ಣನೆ ಮಾಡಲಾಗುತ್ತಿಲ್ಲ. ಅಪ್ಪು ಸಮಾಜ ಸೇವೆ ಇಡೀ ವಿಶ್ವಕ್ಕೆ ಗೊತ್ತಾಗಿದೆ. ಪಾಕಿಸ್ತಾನದ ಅಭಿಮಾನಿಯೊಬ್ಬ ಪುನೀತ್ ಪಾಲೋ ಮಾಡುತ್ತಿದ್ದರು ಅನ್ನೋದು ಕೂಡ ವಿಶೇಷವಾಗಿದೆ. ಕೌಟುಂಬಿಕ ಚಿತ್ರದಿಂದಲೇ ಪುನೀತ್ ಫೇಮಸ್ ಆಗಿದ್ದರು. ಸಂದೇಶ ಇರುವ ಸಿನಿಮಾಗಳಲ್ಲಿ ನಟಸುತ್ತಿದ್ದರು. ನನ್ನ ಮಗನನ್ನು ಶೂಟಿಂಗ್‍ಗೆ ಕರೆದುಕೊಂಡು ಹೋಗುತ್ತಿದ್ದರು. ಹೀರೋ ಮಾಡೋ ವಿಚಾರ ನನಗೆ ಬಿಡಿ ಎಂದಿದ್ದರು. ಇದನ್ನೂ ಓದಿ:ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ
ರಾಜಕುಮಾರ ಪಾರ್ಕ್ ಉದ್ಘಾಟನೆ ವೇಳೆ ಇಡೀ ಕುಟುಂಬವೇ ಬಳ್ಳಾರಿಗೆ ಬಂದಿತ್ತು. ಹದಿನಾರು ವೃದ್ಧಾಶ್ರಮ, ವಿದ್ಯಾಭ್ಯಾಸ, ದಾನದರ್ಮ, ಮಾಡಿದ್ದರು ಯಾರಿಗೂ ಹೇಳುತ್ತಿರಲಿಲ್ಲ. ಇವತ್ತು ಪುನೀತ್‍ನಿಂದಾಗಿ ಸೇವೆ ಮಾಡಲು ಹೊರಗೆ ಬಂದಿದ್ದೇನೆ. ಪುನೀತ್ ಇಲ್ಲವೆನ್ನೋದು ನಂಬಲು ಆಗುತ್ತಿಲ್ಲ. ರಾಜಕೀಯದಲ್ಲಿ ಉನ್ನತ ಸ್ಥಾನ ನನಗೆ ಬೇಕಿಲ್ಲ. ಆದರೆ ಬಳ್ಳಾರಿ ಜನರಿಗೆ ಸೇವೆ ಮಾಡಬೇಕಿದೆ. ಕೊನೆಯ ಉಸಿರಿರೋವರೆಗೂ ಬಳ್ಳಾರಿಯಲ್ಲಿ ಇರಬೇಕಿದೆ. ಬಳ್ಳಾರಿ ಜನರ ಸೇವೆ ಮಾಡುತ್ತೆನೆ. ರಾಜಕುಮಾರ ಸಿನಿಮಾದ ಸ್ಪೂರ್ತಿಯಿಂದ ನಮ್ಮ ವೃದ್ದಾಶ್ರಮದಲ್ಲಿ ಇದ್ದ ತಂದೆ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಹೇಳುತ್ತಾ ಭಾವುಕರಾಗಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ
ಬಳ್ಳಾರಿ: ಕುಚುಕು ಗೆಳೆಯರು ಎಂದೇ ಹೆಸರಾಗಿರೋ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಸಚಿವ ಶ್ರೀರಾಮುಲು ಅವರು ಗಣೇಶ ಹಬ್ಬದ ಸಂಭ್ರಮದ ಸಂಭ್ರಮದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಈಗ ಫುಲ್ ವೈರಲ್ ಆಗಿದೆ.
ಜನಾರ್ದನ ರೆಡ್ಡಿ ಅವರ ಮನೆಯ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ಕುಚುಕು ದೋಸ್ತಿಗಳು ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ರೆಡ್ಡಿ ಮನೆಯಲ್ಲಿ ಪರಿಸರ ಸ್ನೇಹಿ ಗಣಪನ ಇಟ್ಟು ಪೂಜೆ ಮಾಡಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲದೆ, ನಿನ್ನೆ ರಾತ್ರಿ ರೆಡ್ಡಿ ನಿವಾಸದಲ್ಲಿನ ಬಾವಿಯಲ್ಲಿ ಪರಿಸರ ಸ್ನೇಹಿ ಗಣೇಶನ ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಿದ್ದಾರೆ. ಇದನ್ನೂ ಓದಿ: ಸುಮ್ಮನಿರು ಎಂದಿದ್ದಕ್ಕೆ ಲಾಕಪ್‍ನಲ್ಲೇ ಬಟ್ಟೆ ಬಿಚ್ಚಿದ ಆರೋಪಿ
ಈ ವೇಳೆ ಇಬ್ಬರೂ ಗೆಳೆಯರು ವೈಟ್ ಅಂಡ್ ವೈಟ್ ಪಂಚೆ, ಅಂಗಿ ತೊಟ್ಟಿದ್ದಾರೆ. ಅಲ್ಲದೇ ಕೈ ಕೈ ಹಿಡಿದು ಫೋಟೋ ತೆಗೆಸಿಕೊಂಡು ಸಂತಸ ಪಟ್ಟಿದ್ದಾರೆ. ಇತ್ತೀಚೆಗಷ್ಟೇ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ನಿಂದ ಅನುಮತಿ ಪಡೆದು ಬಳ್ಳಾರಿಗೆ ಬಂದಿದ್ದು, ಈಗ ಗಣೇಶನ ಹಬ್ಬವನ್ನು ಗೆಳೆಯನೊಂದಿಗೆ ಸಂಭ್ರಮಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಸಹ ಜೊತೆಗಿದ್ದರು. ಈ ಕುಚುಕು ಗೆಳೆಯರ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಕಳೆದ ಹತ್ತು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟಿದ್ದಾರೆ. ಈ ಹಿಂದೆಯೇ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಜಾಮೀನಿನ ಷರತ್ತುಗಳನ್ನು ಸಡಿಲಿಕೆ ಮಾಡಿ ಮತ್ತೊಂದು ಆದೇಶ ನೀಡಿದೆ. ಆದರೆ ಷರತ್ತು ಮೀರಿದರೆ ರೆಡ್ಡಿಗೆ ಮತ್ತೆ ಆಪತ್ತು ಕಾದಿದೆ.
ಈ ಹಿನ್ನೆಲೆಯಲ್ಲಿ ಕಳೆದ ಹತ್ತು ವರ್ಷಗಳ ಬಳಿಕ ರೆಡ್ಡಿ ಮತ್ತೆ ಹುಟ್ಟೂರಿಗೆ ಕಾಲಿಡುವಂತಾಗಿದೆ. ಆದರೆ ರೆಡ್ಡಿ ಗಣಿ ನಾಡು ಬಳ್ಳಾರಿಗೆ ಬಂದರೂ, ಅಭಿಮಾನಿಗಳಿಂದ, ಕಾರ್ಯಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ. ಕಾರಣ ಕೋರ್ಟ್ ವಿಧಿಸಿರುವ ಜಾಮೀನಿನ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಜನಾರ್ದನ ರೆಡ್ಡಿ ಅವರು ಮುಂದಿನ ಎಂಟು ವಾರಗಳ ಕಾಲ ಗಪ್ ಚುಪ್ ಇರಲಿದ್ದಾರೆ. ಇದೇ ಕಾರಣಕ್ಕಾಗಿ ರೆಡ್ಡಿ ಎಲ್ಲರಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: 10 ವರ್ಷಗಳ ಬಳಿಕ ಹುಟ್ಟೂರಿಗೆ ಬಂದಿದ್ದೇನೆ: ಜನಾರ್ದನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಜನಾರ್ದನ ರೆಡ್ಡಿ ಅವರು ಜೈಲು ಸೇರಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ. ಹೀಗಾಗಿ ಕೋರ್ಟ್ ವಿಧಿಸಿದ ಷರತ್ತು ಪಾಲನೆ ಮಾಡುವುದು ರೆಡ್ಡಿ ಮುಂದಿರುವ ದೊಡ್ಡ ಸವಾಲು, ಇದೇ ಕಾರಣಕ್ಕಾಗಿ ರೆಡ್ಡಿ ಎಲ್ಲರಿಂದಲೂ ಅಂತರ ಕಾಯ್ದುಕೊಳ್ಳಲು ನಿರ್ಧಾರ ಮಾಡಿದ್ದಾರೆ. ಒಂದು ವೇಳೆ ಈ ಎಂಟು ವಾರಗಳಲ್ಲಿ ಷರತ್ತುಗಳನ್ನು ಮೀರಿದ್ದೇ ಆದಲ್ಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಳ್ಳಾರಿಗೆ ಗೌಪ್ಯವಾಗಿ ಎಂಟ್ರಿ ಕೊಟ್ರು ಜನಾರ್ದನ ರೆಡ್ಡಿ – ಕುಟುಂಬಸ್ಥರ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಣೆ
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ 2 ದಿನಗಳ ಕಾಲ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಪುಣ್ಯ ತಿಥಿಯಲ್ಲಿ ಪಾಲ್ಗೊಳ್ಳಲು ಆಗಸ್ಟ್ 30 ಮತ್ತು 31 ರಂದು ಬಳ್ಳಾರಿಗೆ ತೆರಳು ಜನಾರ್ದನ ರೆಡ್ಡಿಗೆ ಅನುಮತಿ ನೀಡಲಾಗಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮತ್ತು ನ್ಯಾ.ಬಿ.ಆರ್ ಗವಾಯಿ ಮತ್ತು ನ್ಯಾ.ಕೃಷ್ಣ ಮುರಾರಿ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಜರ್ನಾದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಅನುಮತಿ ನೀಡಿದೆ. ಈ ಹಿಂದೆ ರೆಡ್ಡಿ ಜಾಮೀನು ಪಡೆದ ವೇಳೆ ಬಳ್ಳಾರಿಗೆ ತೆರಳದಂತೆ ಕೋರ್ಟ್ ಷರತ್ತು ವಿಧಿಸಿತ್ತು.
ಬೆಂಗಳೂರಿನಲ್ಲೇ ಉಳಿದುಕೊಂಡಿರುವ ಜನಾರ್ದನ ರೆಡ್ಡಿ ಶ್ರೀರಾಮುಲು ಅವರ ತಾಯಿ ನಿಧನರಾದ ಸಂದರ್ಭದಲ್ಲಿ ಸಂತಾಪ ಸೂಚಿಸಿ ಕಣ್ಣೀರಿಟ್ಟಿದ್ದರು. ಇಂತಹ ಸಂದರ್ಭದಲ್ಲಿಯೂ ಕಾನೂನು ನನ್ನನ್ನು ಕಟ್ಟಿಹಾಕಿದೆ. ಜೀವದ ಗೆಳೆಯ ಶ್ರೀರಾಮುಲುಗೆ ಹೇಗೆ ಸಂತೈಸಲಿ, ತಾಯಿಯ ಅಗಲಿಕೆಯ ದುಃಖ ತಡೆಯಲಾಗುತ್ತಿಲ್ಲ. ವಿಡಿಯೋ ಕರೆಯ ಮೂಲಕ ತಾಯಿಯ ದರ್ಶನವನ್ನು ಪಡೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಹೇಳಿದ್ದರು.
ಬಳ್ಳಾರಿ: ಜಿಲ್ಲೆಯ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಸಚಿವ ಸ್ಥಾನ ನೀಡಬಾರದೆಂದು ಬಳ್ಳಾರಿಯಲ್ಲಿ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದಾರೆ.
ಇಂದು ಬಿಜೆಪಿ ಬಹುಮತ ಸಾಬೀತು ಮಾಡಿದ್ದು ಸಿಎಂ ಆಗಿ ಬಿ.ಎಸ್ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಮುಂದೆ ಸಚಿವ ಸ್ಥಾನ ಹಂಚಿಕೆಯಲ್ಲಿ ಬಳ್ಳಾರಿಯ ರೆಡ್ಡಿ ಟೀಮ್ ಹಾಗೂ ಶ್ರೀರಾಮುಲುಗೆ ಸಚಿವ ಸ್ಥಾನ ನೀಡಬಾರದೆಂದು ಮನವಿ ಮಾಡಿಕೊಂಡಿದ್ದಾರೆ.
ಅಕ್ರಮ ಗಣಿಗಾರಿಕೆ, ಗಡಿನಾಶ ಮತ್ತು ರಿಪಬ್ಲಿಕ್ ಆಫ್ ಬಳ್ಳಾರಿ ಅಪಕೀರ್ತಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಇದೆ. 2008 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ರೆಡ್ಡಿ, ಶ್ರೀರಾಮುಲು ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಅಕ್ರಮ ಗಣಿಗಾರಿಕೆಯಲ್ಲಿ ಶ್ರೀ ರಾಮುಲು ಹೆಸರಿಲ್ಲ ಆದರೆ ಜನಾರ್ದನ ರೆಡ್ಡಿ ಮತ್ತು ಶ್ರೀ ರಾಮುಲು ಒಂದೇ ಜೀವ ಇದ್ದಂತೆ. ಶ್ರೀರಾಮುಲುಗೆ ಸಚಿವ ಸ್ಥಾನ ಕೊಟ್ಟರೆ ರೆಡ್ಡಿ ಸಚಿವನಾದಂತೆ. ಅದ್ದರಿಂದ ಶ್ರೀರಾಮುಲು ಅಷ್ಟೇ ಅಲ್ಲದೇ ಆ ತಂಡದಲ್ಲಿ ಇರುವ ಸೋಮಶೇಖರ ರೆಡ್ಡಿ ಹಾಗೂ ಕರುಣಾಕರ ರೆಡ್ಡಿಗೂ ಕೂಡ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
ಇವರಿಗೆ ಮಂತ್ರಿ ಸ್ಥಾನ ನೀಡುವ ಬದಲು ಪಕ್ಷಕ್ಕಾಗಿ ದುಡಿದ ಪ್ರಾಮಾಣಿಕರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಉಳಿವಿದೆ ಎಂದು ಬಳ್ಳಾರಿಯ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಿಗೆ ವಿಡಿಯೋ ರೆಕಾರ್ಡ್ ಮಾಡಿ ಮನವಿ ಮಾಡಿದ್ದಾರೆ.
ಬೆಂಗಳೂರು: ಆಂಬಿಡೆಂಟ್ ಪ್ರಕರಣದಲ್ಲಿ ವಂಚನೆ ಹಣ ವಸೂಲಿಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಬೆಂಗಳೂರಿನ ನಿವಾಸ ಶೀಘ್ರವೇ ಮಾರಾಟವಾಗುವ ಸಾಧ್ಯತೆಯಿದೆ.
ಜನಾರ್ದನನ ರೆಡ್ಡಿ ಅವರ ಬೆಂಗಳೂರಿನ ಪಾರಿಜಾತ ಅಪಾರ್ಟ್‍ಮೆಂಟ್ ಮಾರಾಟಕ್ಕೆ ಎಲ್ಲ ರೀತಿಯ ಸಿದ್ಧತೆಗಳಾಗಿದೆ. ಈ ಸಂಬಂಧ ಜನಾರ್ದನ ರೆಡ್ಡಿ ಅವರಿಗೂ ನೋಟಿಸ್ ಕಳುಹಿಸಲಾಗಿದೆ. ಜೊತೆಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ ಸಾರ್ವಜನಿಕ ಮಾರಾಟದ ದಿನಾಂಕ ನಿಗದಿ ಮಾಡಲು ಸಿಸಿಬಿ ನಿರ್ಧರಿಸಿದೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.
ಏನಿದು ಪ್ರಕರಣ?
ಆಂಬಿಟೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಹಣಕಾಸು ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿದವರ ಹಿತರಕ್ಷಣಾ ಕಾಯ್ದೆ(ಕೆಪಿಐಡಿ) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಂಚನೆ ಹಣವನ್ನು ಜನಾರ್ದನ ರೆಡ್ಡಿ ಅವರಿಂದ ಪಡೆಯಲು ಸಿಸಿಬಿ ಪಾರಿಜಾತ ಅಪಾರ್ಟ್‍ಮೆಂಟ್ ಮುಟ್ಟುಗೊಲು ಹಾಕಿಕೊಳ್ಳಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿದ್ದ ಕೋರ್ಟ್ ಆಸ್ತಿ ಮುಟ್ಟುಗೋಲಿಗೆ ಒಪ್ಪಿಗೆ ಸೂಚಿಸಿತ್ತು.
ಕೋರ್ಟ್ ನಿಂದ ಅನುಮತಿ ಪಡೆದ ಸಿಸಿಬಿ ಪೊಲೀಸರು, ಮನೆಯ ಆಸ್ತಿ ಮೌಲ್ಯ ನಿರ್ಧಾರಕ್ಕೆ ಕಂದಾಯ ಇಲಾಖೆಯನ್ನು ಕೇಳಿಕೊಂಡಿತ್ತು. ಹೀಗಾಗಿ ಕಂದಾಯ ಇಲಾಖೆಯ ಸಲ್ಲಿಸಿದ್ದ ಮನವಿಗೆ ಸರ್ಕಾರವು ಇಂದು ಅನುಮತಿ ಕೊಟ್ಟಿದೆ. ಈ ಮೂಲಕ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಪೂರ್ಣವಾಗಿದ್ದು, ಮುಂದಿನ 15 ದಿನಗಳಲ್ಲಿ ಸಿಸಿಬಿ ಪೊಲೀಸರು ಮನೆ ಮಾರಾಟ ಮಾಡುವ ಸಾಧ್ಯತೆಯಿದೆ.
ಗದಗ: ಸಿದ್ದರಾಮಯ್ಯ ಭಂಡ ರಾಜಕಾರಣಿ ಎಂದು ಕೆ.ಎಸ್ ಈಶ್ವರಪ್ಪ ಶನಿವಾರ ಟೀಕಿಸಿರುವ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ತೀರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಭಂಡ ರಾಜಕಾರಣಿ, ಸ್ವಯಂ ಘೋಷಿತ ಅಹಿಂದ ನಾಯಕ ಎಂದು ಹೇಳ್ಕೊಂಡು ಓಡಾಡ್ತಾರೆ. ಇಂತವರನ್ನು ನಾನು ಕರ್ನಾಟಕದಲ್ಲಿ ಮೊದಲೆಲ್ಲೂ ನೋಡಿಲ್ಲ ಎಂದು ಈಶ್ವರಪ್ಪ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿ, ಈಶ್ವರಪ್ಪ ಒಬ್ಬ ಮಹಾನ್ ಪೆದ್ದ, ಆತ ಮೆದುಳಿಲ್ಲದ ಮನುಷ್ಯ. ಅಹಿಂದ ಎನ್ನುವುದಕ್ಕೆ ಯಾವುದಾದರು ಯುನಿವರ್ಸಿಟಿ ಸರ್ಟಿಫಿಕೇಟ್ ಕೊಟ್ಟಿದಿಯಾ? ಎಂದು ತಿರುಗೇಟು ನೀಡಿದ್ದಾರೆ.
ಆ ಬಳಿಕ ಬಿಜೆಪಿ ವರ್ಚಸ್ ಕಡಿಮೆ ಮಾಡಲು ಕಾಂಗ್ರೆಸ್ ತಂತ್ರ ಮಾಡುತ್ತಿದೆ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯರವರು, ಜನಾರ್ದನ ರೆಡ್ಡಿ ಬಿಜೆಪಿಯಲ್ಲೇ ಇಲ್ಲ, ಯಾಕೆಂದ್ರೆ ಅವರು ಜನಾರ್ದನ ರೆಡ್ಡಿಗೂ ಬಿಜೆಪಿಗೆ ಸಂಬಂಧವಿಲ್ಲ ಅಂತಾ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಬಿಜೆಪಿಯಲ್ಲೇ ಇಲ್ಲ ಅಂದ್ಮೇಲೆ ಬಿಜೆಪಿ ಮಾತು ರೆಡ್ಡಿಗ್ಯಾಕೆ? ಎಂದು ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ ಸಚಿವ ಸಂಪುಟದ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇವೆ. ನಂತರ ಅದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳ: ಬಿಜೆಪಿ ಒಂದು ಅವಕಾಶವಾದಿ ಪಕ್ಷ. ಅವಕಾಶ ಇದ್ದಾಗ ಉಪಯೋಗಿಸಿ ನಂತರ ಕೈ ಕೊಡುತ್ತಾರೆ. ಇದಕ್ಕೆ ಜೀವಂತ ಸಾಕ್ಷಿ ಅಂದರೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಶಾಸಕ ಬಿ.ಶ್ರೀರಾಮುಲು ಎಂದು ಹೇಳುವ ಮೂಲಕ ಮಾಜಿ ಸಚಿವ ಶಿವಾರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಇಲ್ಲ ಅಂದಿದ್ದರೆ ಅಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಜನಾರ್ದನ ರೆಡ್ಡಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈಗ ಜನಾರ್ದನ ರೆಡ್ಡಿ ನನಗೆ ಸಂಬಂಧವೇ ಇಲ್ಲ ಅಂತಾ ಹೇಳುತ್ತಿದ್ದಾರೆ.
ಸಮ್ಮಿಶ್ರ ಸರ್ಕಾರ ರಚನೆಯಲ್ಲಿ 5 ಜನ ಪಕ್ಷೇತರ ಶಾಸಕರನ್ನು ಕರೆತರಲು ಈ ಇಬ್ಬರು ನಾಯಕರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ ನಂತರದಲ್ಲಿ ಬಹುಮತದಿಂದ ಜಯ ಸಾಧಿಸಿದ್ದ ಬಿಜೆಪಿಯವರು ನಮ್ಮನ್ನು ಕೈಬಿಟ್ಟರು. ನಮ್ಮಂತೆ ಈಗ ಜನಾರ್ದನ ರೆಡ್ಡಿ ಬಿಜೆಪಿ ಕೈಬಿಟ್ಟಿದೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಈಗಲಾದರೂ ಅರ್ಥ ಆಗಬೇಕು ಎಂದು ಆರೋಪಿಸಿದರು.
ಸಮ್ಮಿಶ್ರ ಸರ್ಕಾರ ರಚನೆಯ ಜವಾಬ್ದಾರಿ ಹೊತ್ತು, ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು. ಅಷ್ಟೇ ಅಲ್ಲದೆ ಚುನಾವಣೆ ವೇಳೆ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಸುಳ್ಳು ಹೇಳಿ ಈ ಭಾಗದ ಮತಗಳನ್ನು ಕದ್ದಿದ್ದರು ಎಂದು ದೂರಿದರು.
ಶ್ರೀರಾಮುಲು ಅವರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಅಂತಾ ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದ ವೇಳೆ ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಹೇಳಿದ್ದರು. ಸತ್ಯ ಏನು ಅಂದರೆ ಅವರು ಬೊಗಳೆ ಬಿಟ್ಟಿದ್ದಾರೆ ಅಷ್ಟೇ. ಉಪಮುಖ್ಯಮಂತ್ರಿ ಅಲ್ಲಾ ಕೊನೆಪಕ್ಷ ವಿರೋಧ ಪಕ್ಷದ ಉಪನಾಯಕರನ್ನಾಗಿ ಶ್ರೀರಾಮುಲು ಅವರನ್ನು ನೇಮಿಸಲಿಲ್ಲ ಎಂದರು.
ಬೆಂಗಳೂರು: ಸಿಸಿಬಿ ಕಚೇರಿಗೆ ಆಗಮನಕ್ಕೂ ಮುನ್ನ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಅಂಬಿಡೆಂಟ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ರಾಜಕೀಯ ಷಡ್ಯಂತ್ರಗಳಿಂದ ನನ್ನ ಮೇಲೆ ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕಳೆದ ಒಂದು ವಾರದಿಂದ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ. ಸುಮ್ಮನೇ ನಾನು ಅಲ್ಲಿದ್ದೇನೆ, ಇಲ್ಲಿದ್ದೇನೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಇಷ್ಟು ದೊಡ್ಡ ಮಹಾನಗರ ಬಿಟ್ಟು ಎಲ್ಲಿಯೂ ಹೋಗಿಲ್ಲ. ತಲೆಮರೆಸಿಕೊಳ್ಳುವ ಅಗತ್ಯವೂ ನನಗಿಲ್ಲ. ಸಿಸಿಬಿ ಕಚೇರಿಯಿಂದ ಯಾವುದೇ ನೋಟಿಸ್ ಬಂದಿರಲಿಲ್ಲ. ಶುಕ್ರವಾರ ನೋಟಿಸ್ ಬಂದಿದ್ದರಿಂದ ಇಂದು ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ಜನಾರ್ದನ ರೆಡ್ಡಿ ಹೇಳಿದರು.
ಅಂಬಿಡೆಂಟ್ ಕಂಪನಿ ಮಾಲೀಕ ಫರೀದ್ ಎಲ್ಲ ರಾಜಕೀಯ ನಾಯಕರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಬೆಂಗಳೂರಿನ ರೆಡ್ಡಿ ಸಮುದಾಯದ ನಾಯಕರೊಬ್ಬರು ಆತನನ್ನು ಪರಿಚಯಿಸಿದ್ದರು. ನನ್ನ ಮೇಲೆ ಆರೋಪಗಳೆಲ್ಲವೂ ರಾಜಕೀಯ ಹುನ್ನಾರ ಎಂದು ಕಿಡಿಕಾರಿದರು.
ಈ ಮೊದಲು ವಿಡಿಯೋ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ಜನಾರ್ದನ ರೆಡ್ಡಿ, ಕಳೆದ ನಾಲ್ಕು ದಿನಗಳಿಂದ ನನ್ನ ಬಗ್ಗೆ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದವು. ಈ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆಯಬೇಕೆಂದು ವಕೀಲರ ಸಲಹೆಯ ಮೇರೆಗೆ ಈ ವಿಡಿಯೋವನ್ನು ಮಾಡಿದ್ದೇನೆ. ಪೊಲೀಸರು ಕೆಟ್ಟ ಉದ್ದೇಶದಿಂದ ನನ್ನನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಸಿಸಿಬಿ ಕಚೇರಿಗೆ ಹೋಗಿ ಸ್ಪಷ್ಟನೆ ನೀಡಲು ತೀರ್ಮಾನಿಸಿದಾಗ, ವಕೀಲರು ನಮಗೆ ಯಾವುದೇ ನೋಟಿಸ್ ನೀಡಿಲ್ಲ ಮತ್ತು ಎಫ್‍ಐಆರ್ ನಲ್ಲಿ ನಿಮ್ಮ ಹೆಸರಿಲ್ಲ. ಯಾವ ಕಾರಣಕ್ಕಾಗಿ ಸಿಸಿಬಿಗೆ ಹೋಗಬೇಕೆಂದು ಹೇಳಿದ್ದರು ಅಂತಾ ಅಂದ್ರು.
ಈ ಮೊದಲು ವಕೀಲ ಚಂದ್ರಶೇಖರ್ ಮಾತನಾಡಿ, ಅಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಜನಾರ್ದನ ರೆಡ್ಡಿಯವರ ಹೆಸರನ್ನು ಪ್ರಸ್ತಾಪಿಸಿದ್ದರು. ಅಲ್ಲದೇ ಅದೇ ಪೊಲೀಸ್ ಪ್ರಕರಟಣೆಯಲ್ಲಿ ರೆಡ್ಡಿ ವಿರುದ್ಧ ಕೆಲವೊಂದು ಆರೋಪಗಳನ್ನು ಕೂಡ ಮಾಡಿದ್ದರು. ಆದ್ರೆ ಅವೆಲ್ಲವೂ ಸತ್ಯಕ್ಕೆ ದೂರವಾದದ್ದಾಗಿದೆ. ವಿನಾಕಾರಣ ಸಿಸಿಬಿಯವರು ಜನಾರ್ದನ ರೆಡ್ಡಿ ಮೇಲೆ ಆರೋಪ ಮಾಡಿದ್ದಾರೆ. ಆದ್ರೆ ಸಿಸಿಬಿ ನೋಟಿಸ್ ಜಾರಿ ಮಾಡಲಿಲ್ಲ. ಹೀಗಾಗಿ ನೀವು ನೋಟಿಸ್ ಜಾರಿ ಮಾಡಿ ಅಂತ ಕೇಳಿಕೊಂಡಿದ್ದೆವು. ನೋಟಿಸ್ ಜಾರಿ ಮಾಡದೇ ನಾವು ವಿಚಾರಣೆಗೆ ಹಾಜರಾಗುವುದ ಹೇಗೆ ಅಂತ ಪ್ರಶ್ನಿಸಿದ್ದೆವು. ಹೀಗಾಗಿ ಇದೀಗ ಸಿಸಿಬಿ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸದ್ಯ ನಾವು ಸಿಸಿಬಿಗೆ ಹಾಜರಾಗುತ್ತೇವೆ. ಈ ಕೇಸ್ ನಲ್ಲಿ ಪ್ರತಿ ಹಂತದಲ್ಲಿಯೂ ವಿಚಾರಣೆಗೆ ಸಂಪೂರ್ಣವಾಗಿ ಸಿದ್ಧರಿದ್ದೇವೆ. ಒಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಅಂತ ಹೇಳಿದ್ದಾರೆ.
ಬೆಂಗಳೂರು: ಆಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 61ನೇ ಸಿಟಿ ಸಿವಿಲ್ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಆಂಬಿಡೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿಯ ಹೆಸರು ಕೇಳಿಬಂದಿತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ರೆಡ್ಡಿಗಾಗಿ ವ್ಯಾಪಕ ಶೋಧ ನಡೆಸಿದ್ದರು. ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬರುತ್ತಲೇ, ರೆಡ್ಡಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಅಲ್ಲದೇ ನಿರೀಕ್ಷಣಾ ಜಾಮೀನು ಪಡೆದ ಬಳಿಕ, ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮೂಂದೂಡಿದೆ.
ಕಲಾಪದಲ್ಲಿ ಇಂದು ಏನಾಯ್ತು?
ರೆಡ್ಡಿ ಪರ ವಕೀಲ ಹನುಮಂತರಾಯ ವಾದ ಮಂಡನೆ ಮಾಡಿದರು ಈ ವೇಳೆ ನ್ಯಾಯಾಧೀಶರು, ವಿಚಾರಣೆಗೆ ಬಂದರೆ, ಅರೆಸ್ಟ್ ಮಾಡುತ್ತಾರೆ ಎಂದು ಹೇಗೆ ಹೇಳುತ್ತೀರಿ?, ಪ್ರೆಸ್ ನೋಟ್ ಬಂದ ತಕ್ಷಣವೇ, ಪೊಲೀಸರು ಅರೆಸ್ಟ್ ಮಾಡುತ್ತಾರಾ? ನೀವು ಪ್ರೆಸ್ ನೋಟನ್ನೇ ತೆಗೆದುಕೊಂಡು ಅದರ ಮೇಲೆ ಹೇಗೆ ವಾದ ಮಾಡುತ್ತೀರಿ? ಪ್ರೆಸ್ ನೋಟ್ ಮೇಲೆ ವಾದ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ರೆಡ್ಡಿ ಪರ ವಕೀಲ ಹನುಮಂತರಾಯ, ಇದು ಪೊಲೀಸ್ ಇಲಾಖೆಯ ಪ್ರೆಸ್ ನೋಟ್ ಆಗಿದ್ದು, ಈ ಬಗ್ಗೆ ಭಾನುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಒಂದು ವೇಳೆ ನಮ್ಮ ಕಕ್ಷಿದಾರ ಭಾನುವಾರ ವಿಚಾರಣೆಗೆ ಹೋದರೆ, ಅವರನ್ನು ಆ ಕ್ಷಣವೇ ಬಂಧಿಸಿದರೇ ಏನು ಮಾಡಬೇಕು? ಭಾನುವಾರ ಸಿಸಿಬಿ ವಿಚಾರಣೆಗೆ ನಾವು ಹೋಗಲು ಸಿದ್ಧ, ಆದರೆ ಅರೆಸ್ಟ್ ಮಾಡದಂತೆ ಆದೇಶ ನೀಡಿ. ಬಂಧನದ ಭೀತಿ ಇರುವುದರಿಂದ ನಮಗೆ ಜಾಮೀನು ಕೊಡಿ. ಸೋಮವಾರ ಹೈಕೋರ್ಟ್ ನಲ್ಲಿ ವಾದ ಮಾಡಿ ಇತ್ಯರ್ಥ ಮಾಡಿಕೊಳ್ತೇವೆ ಎಂದು ಹೇಳಿದರು.
ಈ ವೇಳೆ ಸಿಸಿಬಿ ಪರ ವಕೀಲರು ಮಧ್ಯಪ್ರವೇಶಿಸಿ, ನಮ್ಮ ವಾದವನ್ನು ಕೇಳಲು ಅವಕಾಶ ಮಾಡಿಕೊಡಿ. ಮೇಲ್ನೋಟಕ್ಕೆ ಪ್ರಕರಣದಲ್ಲಿ ರೆಡ್ಡಿಯವರ ಅಪರಾಧವಿದೆ. ಆಂಬಿಡೆಂಟ್ ಗ್ರಾಹಕರ ವಾದವನ್ನು ಕೇಳಲು ಮನವಿ ಮಾಡಿಕೊಡಿ ಎಂದು ಕೇಳಿಕೊಂಡರು.
ವಾದ-ವಿವಾದ ಆಲಿಸಿದ ನ್ಯಾಯಾಧೀಶರು, ರೆಡ್ಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಅರ್ಜಿಗೆ ಆಕ್ಷೇಪಣೆಗೆ ಕಾಲಾವಕಾಶ ನೀಡಿದರು. ಅಲ್ಲದೇ ಆಂಬಿಡೆಂಟ್ ಗ್ರಾಹಕರ ವಾದವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಮೇಲ್ನೋಟಕ್ಕೆ ಬಂಧನದ ಭೀತಿ ಕಾಣುತ್ತಿಲ್ಲ ಎಂದು ಹೇಳಿ ಜನಾರ್ದನ ರೆಡ್ಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿದರು.
ಕಲಾಪದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರೆಡ್ಡಿ ಪರ ವಕೀಲರು, ಜನರ್ದಾನ ರೆಡ್ಡಿಯವರ ವಿಚಾರಣೆಗಿಂತ ಪ್ರಮುಖ ಬೆಳವಣಿಗೆಗಳು ನಡೆದಿದ್ದು, ಎಸಿಪಿ ವೆಂಕಟೇಶ್ ಪ್ರಸಾದ್ ಹಾಗೂ ಡಿಸಿಪಿ ಗಿರೀಶ್ ಅಧಿಕಾರಿಗಳು ಪ್ರಕರಣದ ನಾಲ್ಕನೇ ಆರೋಪಿಯನ್ನು ಥಳಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ರಮೇಶ್ ಮಾನವ ಹಕ್ಕು ಆಯೋಗಕ್ಕೆ ದೂರು ಕೊಟ್ಟಿದ್ದರು. ದೂರು ಕೊಟ್ಟ ಬಳಿಕ ಸುಮಾರು 15 ಜನ ಪೊಲೀಸರು ರಮೇಶ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಆದರೆ ಸಾರ್ವಜನಿಕ ಸ್ಥಳದಲ್ಲೇ ಇದ್ದ ಕಾರಣ ಹಲ್ಲೆ ಮಾಡಲು ಸಾಧ್ಯವಾಗಿಲ್ಲ ಎಂದು ಗಂಭೀರವಾಗಿ ಆರೋಪ ಮಾಡಿದರು.
ಈ ಬಗ್ಗೆ ಇಬ್ಬರು ಅಧಿಕಾರಿಗಳನ್ನು ತನಿಖೆಯಿಂದ ಕೈಬಿಡುವಂತೆ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದೇವೆ. ಅಲ್ಲದೇ ಭಾನುವಾರ ವಿಚಾರಣೆಗೆ ಆಗಮಿಸುವಂತೆ ಸಿಸಿಬಿ ನೋಟಿಸ್ ನೀಡಿದ್ದು, ಈಗಾಗಲೇ ನೋಟಿಸ್ ಪತ್ರ ಕೈ ತಲುಪಿದೆ. ಹೀಗಾಗಿ ಭಾನುವಾರದ ವಿಚಾರಣೆಗೆ ಹಾಜರಾಗಬೇಕೋ ಅಥವಾ ಬೇಡವೇ ಎಂಬುದರ ಬಗ್ಗೆ ಶನಿವಾರ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.