Tag: Janardhana Reddy

  • ಆಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಶೋಧ ಕಾರ್ಯ ಎಲ್ಲಿಗೆ ಬಂತು? ಇಂದು ಏನಾಯ್ತು?

    ಆಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಶೋಧ ಕಾರ್ಯ ಎಲ್ಲಿಗೆ ಬಂತು? ಇಂದು ಏನಾಯ್ತು?

    ಬೆಂಗಳೂರು: ಆಂಬಿಡೆಂಟ್ ಹಗರಣದ ಡೀಲ್ ಮಾಸ್ಟರ್, ಗಣಧಣಿ-ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಿಸಿಬಿ ಪೊಲೀಸರಿಗೆ ಇನ್ನೂ ಚಳ್ಳೆಹಣ್ಣು ತಿನ್ನಿಸ್ತಲೇ ಇದ್ದಾರೆ. ರೆಡ್ಡಿ ಬೇಟೆಗೆ ಸಿಸಿಬಿ ತಂಡಗಳಾಗಿ ಬೆಂಗಳೂರು, ಬಳ್ಳಾರಿ, ಚಿತ್ರದುರ್ಗದ ಮೊಳಕಾಲ್ಮೂರು, ದೂರದ ಹೈದ್ರಾಬಾದ್‍ಗೆ ತೆರಳಿದ್ದರೂ ಸಣ್ಣ ಸುಳಿವೂ ಸಿಕ್ಕಿಲ್ಲ. ಹಾಗಾಗಿ, ರೆಡ್ಡಿ ತಲಾಶ್‍ಗೆ ಹೈದರಾಬಾದ್ ಪೊಲೀಸರ ಮೊರೆ ಹೋಗಿದ್ದಾರೆ.

    ಮೊಬೈಲ್ ಟ್ರಾಪ್ ಪ್ಲಾನ್ ಮಾಡಿದರೂ ಸಿಸಿಬಿ ಸೋತಿದೆ. ಮೊಳಕಾಲ್ಮೂರಿನಲ್ಲೇ ರೆಡ್ಡಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಜ್ಞಾತ ಸ್ಥಳದಿಂದಲೇ ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ನಲ್ಲಿ ರೆಡ್ಡಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

    ಈ ಮಧ್ಯೆ, ಜಾರಿ ನಿರ್ದೇಶನಾಲಯ ಎಂಟ್ರಿ ಸಾಧ್ಯತೆ ದಟ್ಟವಾಗಿದ್ದು, ಪ್ರಕರಣದ ಬಗ್ಗೆ ಮಾಹಿತಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಕೋರಿದೆ. ಜನವರಿಯಲ್ಲಿ ಫರೀದ್ ಅಹ್ಮದ್, ಮಗ ಅಫಾಕ್ ಅಹ್ಮದ್ ವಿಚಾರಣೆಗೆ ಒಳಪಡಿಸಿದ್ದಾಗ 1.97 ಕೋಟಿ ರೂ. ನಗದು ಸಿಕ್ಕಿತ್ತು. ಸಾರ್ವಜನಿಕರಿಗೆ ಶೇ.12ರಷ್ಟು ಬಡ್ಡಿ ಸಮೇತ ಕೊಡೋದಾಗಿ ಆಮಿಷವೊಡ್ಡಿ 954 ಕೋಟಿ ಸಂಗ್ರಹಿಸಿದ್ದಾರೆ. ಇದು ನಕಲಿ ಕಂಪನಿ ಅಂತ ಆರ್‌ಬಿಐಗೂ ಪತ್ರ ಬರೆದಿದ್ದೇವೆ ಅಂತ ಪತ್ರಿಕಾ ಪ್ರಕಟಣೆಯಲ್ಲಿ ಜಾರಿ ನಿರ್ದೇಶನಾಲಯ ಹೇಳಿದೆ.

    ಬಳ್ಳಾರಿಯ ಅಹಂಬಾವಿಯಲ್ಲಿರುವ ರೆಡ್ಡಿ ನಿವಾಸ ಕುಟೀರಾ ದೇಶದ ಎಲ್ಲಾ ತನಿಖಾ ಸಂಸ್ಥೆಗಳಿಂದ ದಾಳಿಗೊಳಗಾದ ಏಕೈಕ ನಿವಾಸ ಎಂಬ ಕುಖ್ಯಾತಿಯನ್ನು ಈಗ ಪಡೆದುಕೊಂಡಿದೆ. ಸಿಸಿಬಿ ಪೊಲೀಸರು ರೆಡ್ಡಿ ಕೇಸನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಈಗಾಗಲೇ ಅಲಿಖಾನ್ ಜಾಮೀನು ಪಡೆದುಕೊಂಡಿರುವುದರಿಂದ ಜನಾರ್ದನ ರೆಡ್ಡಿಗೆ ನಾಳೆ ನಿರೀಕ್ಷಣಾ ಜಾಮೀನು ಸಿಗುವ ಸಾಧ್ಯತೆ ಇದೆ ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ಸಿಸಿಬಿ ಪೊಲೀಸರು ಹಲವು ಕಡೆ ಮಹಜರು ಮಾಡಿದ್ದರು. ಡೀಲ್ ನಡೆದ ಬೆಂಗಳೂರಿನ ತಾಜ್‍ವೆಸ್ಟ್ ಎಂಡ್‍ನಲ್ಲಿ ಆರೋಪಿ ಫರೀದ್‍ರನ್ನ ನಿನ್ನೆ ಸ್ಥಳಕ್ಕೆ ಕರೆದೊಯ್ದಿದ್ದ ಪೊಲೀಸರು ಇವತ್ತು, ಬಳ್ಳಾರಿಯ ರೆಡ್ಡಿ ನಿವಾಸ ಕುಟೀರ, ಒಎಂಸಿ ಕಂಪನಿಯನ್ನು ಮಹಜರು ನಡೆಸಿದರು. ರೆಡ್ಡಿ ಸಿಗದ ಕಾರಣ ಮಾವ ಪರಮೇಶ್ವರ್ ರೆಡ್ಡಿ, ಅತ್ತೆ ನಾಗಲಕ್ಷ್ಮಮ್ಮ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿತು.

    ರೆಡ್ಡಿ ಆಪ್ತರ ಮನೆ ಮೇಲೆ ರೇಡ್ ಮಾಡಿದ ಸಿಸಿಬಿ ಅಧಿಕಾರಿಗಳ ತಂಡಕ್ಕೆ ನಾಗಲಕ್ಷ್ಮಮ್ಮ ಅವರು ಆವಾಜ್ ಹಾಕಿದ್ದರು. ನೀವ್ಯಾರು? ಅಳಿಯ, ಮಗಳು ಇಲ್ಲದ ವೇಳೆ ಏಕೆ ಬಂದಿದ್ದೀರಿ ಎಂದು ಕಿರುಚಾಡಿದರು. ಇದರಿಂದ ಬೇಸತ್ತ ಅಧಿಕಾರಿಗಳು ಕೊನೆಗೆ ಮಹಿಳಾ ಅಧಿಕಾರಿಯನ್ನು ಕರೆಸಿ ನಾಗಲಕ್ಷ್ಮಮ್ಮರನ್ನ ಸಿಸಿಬಿ ವಶಕ್ಕೆ ಪಡೆದುಕೊಂಡರು. ಬಳಿಕ ಬೆಡ್ ರೂಂ, ಬಾತ್‍ರೂಮ್, ಗೋಡೆ, ಸಿಂಟೆಕ್ಸ್, ಸಂಪ್ ಎಲ್ಲಾ ಕಡೆ ಚಿನ್ನಕ್ಕಾಗಿ 8 ಗಂಟೆಗಳ ನಿರಂತರ ಶೋಧ ನಡೆಸಿದರು. ಇದರ ಜೊತೆಗೆ ಮನೆಯಲ್ಲಿದ್ದ ಎಲ್ಲಾ ದಾಖಲೆಗಳನ್ನು ಕೊಂಡೊಯ್ದರು.

    ಡೀಲ್ ನಡೆದ ತಾಜ್ ವೆಸ್ಟ್ ಎಂಡ್‍ನಲ್ಲಿ ಆಂಬಿಡೆಂಟ್ ಮಾಲೀಕ ಫರೀದ್ ಅವರನ್ನ ಸಿಸಿಬಿ ಪೊಲೀಸರು ಮಹಜರು ಮಾಡಿದಾಗ, ಅಲ್ಲಿ ನಡೆದ ಸಂಭಾಷಣೆ ಮಾಧ್ಯಮಗಳಿಗೆ ಲಭ್ಯವಾಗಿದೆ. ಫರೀದ್ ಮಹಜರು ವೀಡಿಯೋ ಮಾಧ್ಯಮಗಳಿಗೆ ಲೀಕ್ ಆಗಿರುವುದಕ್ಕೆ ಸಿಸಿಬಿ ಚೀಫ್ ಅಲೋಕ್ ಕುಮಾರ್ ಅಧಿಕಾರಿಗಳ ಮೇಲೆ ಗರಂ ಆದರು. ಅಲ್ಲದೇ ಅಲಿಖಾನ್ ನಿವಾಸಕ್ಕೆ ತೆರಳಿದ್ದ ತಂಡದ ಜೊತೆ ತುರ್ತು ಸಭೆ ನಡೆಸಿ, ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಈ ವೇಳೆ ಅಧಿಕಾರಿಗಳಿಗೆ ಕೋರ್ಟ್‍ಗೆ ಹಾಜರು ಪಡಿಸುವ ಮುನ್ನ, ಯಾವುದೇ ದಾಖಲೆ ಸೋರಿಕೆ ಮಾಡುವಂತಿಲ್ಲ. ಆದರೂ ಸಹ ಇದು ಹೇಗೆ ಲೀಕ್ ಆಯ್ತು? ಕಣ್ಣಾ ಮುಚ್ಚಾಲೆ ನನ್ನ ಹತ್ತಿರ ನಡೆಯಲ್ಲ. ಹಗಲು-ರಾತ್ರಿ ಒದ್ದಾಡಿ ಮಾಡುತ್ತಿರುವ ಕೆಲಸವನ್ನು ಮುಗಿಸುವ ಯತ್ನ ಮಾಡುತ್ತಿದ್ದೀರಾ? ನಮ್ಮವರಲ್ಲದೇ ಬೇರೆ ಯಾರು ಮಾಧ್ಯಮಕ್ಕೆ ವಿಡಿಯೋ ಕೊಟ್ಟವರು? ಮಾಡುವ ಕೆಲಸವನ್ನು ಶ್ರದ್ಧೆಯಿಂದ ಮಾಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇದರ ಬೆನ್ನಲ್ಲೆ, ಜನಾರ್ದನ ರೆಡ್ಡಿ ಪ್ರಕರಣದ ಬಗ್ಗೆ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಮಾಹಿತಿ ಪಡೆದಿದ್ದು, ಶ್ರೀರಾಮುಲು ಸೇರಿದಂತೆ ಬಿಜೆಪಿಯ ಯಾವೊಬ್ಬ ನಾಯಕರೂ ಹೇಳಿಕೆ ಕೊಡಬಾರದೆಂದು ವಾರ್ನಿಂಗ್ ಕೊಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಹೀಗಾಗಿ ರೆಡ್ಡಿ ಆಪ್ತ ರಾಮುಲುಗೆ ಧರ್ಮಸಂಕಟ ಎದುರಾಗಿದೆ.

    ಈ ಬಗ್ಗೆ ಕಾನೂಕು ಕ್ರಮ ತೆಗೆದುಕೊಳ್ಳುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದರು. ಇದರ ಜೊತೆ ಬಿಜೆಪಿ ಎಂಎಲ್‍ಸಿ ರವಿಕುಮಾರ್ ಚಿತ್ರದುರ್ಗದಲ್ಲಿ ಮಾತನಾಡಿ, ರೆಡ್ಡಿಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲವೆಂದು ಹೇಳಿದ್ದರೆ, ಮೊಳಕಾಲ್ಮೂರು ಪರಾಜಿತ ಅಭ್ಯರ್ಥಿ ತಿಪ್ಪೇಸ್ವಾಮಿ ನನಗೆ ಟಿಕೆಟ್ ತಪ್ಪಿಸಿದ್ದೇ ರೆಡ್ಡಿ ಅಂತ ಕಿಡಿಕಾರಿದರು. ಇದು ರಾಜ್ಯ ಸರ್ಕಾರದ ಪಿತೂರಿ ಅಲ್ಲ. ಜನರ ದುಡ್ಡು ತಿಂದೋವರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿದೆ ಎಂದು ಸಂಸದ ಉಗ್ರಪ್ಪ ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜನಾರ್ದನ ರೆಡ್ಡಿ ಮೇಲೆ ಬಿಜೆಪಿ ಅವಲಂಬನೆಯಾಗಿಲ್ಲ: ಸಿ.ಟಿ.ರವಿ

    ಜನಾರ್ದನ ರೆಡ್ಡಿ ಮೇಲೆ ಬಿಜೆಪಿ ಅವಲಂಬನೆಯಾಗಿಲ್ಲ: ಸಿ.ಟಿ.ರವಿ

    ಚಿಕ್ಕಮಗಳೂರು: ಬಿಜೆಪಿಯು ಗಾಲಿ ಜನಾರ್ದನ ರೆಡ್ಡಿ ಮೇಲೆ ಅವಲಂಬಿತವಾಗಿ ರಾಜ್ಯದಲ್ಲಿ ರಾಜಕೀಯ ಮಾಡುತ್ತಿಲ್ಲ. ಅವರ ಬಂಧನದಿಂದ ನಮಗೆ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

    ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾವು ಬಿಜೆಪಿಯನ್ನು ಮಣಿಸಲು ಜನಾರ್ದನ ರೆಡ್ಡಿಯನ್ನು ಟಾರ್ಗೆಟ್ ಮಾಡಿದ್ದಾರೆ. ಆದರೆ ಈ ಪ್ರಕರಣ ಜನಾರ್ದನ ರೆಡ್ಡಿಗೆ ಬಿಟ್ಟಿದ್ದು, ಅವರೇ ಎದುರಿಸುತ್ತಾರೆ. ಈ ಹಿಂದೆಯೇ ಅವರ ವಿರುದ್ಧ ಮೊಕದ್ದಮೆ ದಾಖಲಾಗಿದ್ದಕ್ಕೆ ಪಕ್ಷದಿಂದ ಯಾವುದೇ ಜವಾಬ್ದಾರಿ ಕೊಡದೆ ದೂರವಿಡಲಾಗಿತ್ತು ಎಂದು ತಿಳಿಸಿದರು. ಇದನ್ನು ಓದಿ: ಅಂಬಿಡೆಂಟ್ ಹಣ ವಂಚನೆ ಪ್ರಕರಣಕ್ಕೆ ರೆಡ್ಡಿಗೂ ಏನು ಸಂಬಂಧ? ಡಿಲೀಂಗ್ ಹೇಗಾಯ್ತು? 57 ಕೆಜಿ ಚಿನ್ನ ತಲುಪಿದ್ದು ಹೇಗೆ?

    ಜನಾರ್ದನ ರೆಡ್ಡಿ ಬಿಜೆಪಿ ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ 2013ರ ಲೋಕಸಭಾ ಚುನಾವಣೆ ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಗುರುತಿಸಿಕೊಂಡಿಲ್ಲ. ಈಗ ಮೈತ್ರಿ ಸರ್ಕಾರ ಜನಾರ್ದನ ರೆಡ್ಡಿಯನ್ನು ಹೆದರಿಸಿದರೆ ಬಿಜೆಪಿ ಪರಿಣಾಮ ಬೀರುತ್ತದೆ ಅಂತಾ ತಿಳಿಸಿದೆ. ಆದರೆ ನಮಗೆ ಈ ಪ್ರಕರಣದಿಂದ ಯಾವುದೇ ಸಮಸ್ಯೆಯಾಗಲ್ಲ ಎಂದು ಹೇಳಿದರು.

    ಈ ಪ್ರಕರಣಕ್ಕೆ ನಮ್ಮ ಪಕ್ಷ ಯಾವುದೇ ಸಂಬಂಧವಿಲ್ಲ. ಎಲ್ಲವನ್ನೂ ಅವರೇ ಎದುರಿಸುತ್ತಾರೆ ಎಂದು ರವಿ ತಿಳಿಸಿದರು. ಇದನ್ನು ಓದಿ: ಹೊಡೆದು ಜನಾರ್ದನ ರೆಡ್ಡಿ ಹೆಸರು ಹಾಕಿಸಿದ್ದಾರೆ- ಡೀಲ್ ಪ್ರಕರಣಕ್ಕೆ ಸ್ಫೋಟಕ ತಿರುವು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಂತಹಂತವಾಗಿ ಡಿಕೆ ಶಿವಕುಮಾರ್ ರೆಡ್ಡಿ, ಶ್ರೀರಾಮುಲು ಕೋಟೆಯನ್ನು ಉರುಳಿಸಿದ್ದು ಹೇಗೆ?

    ಹಂತಹಂತವಾಗಿ ಡಿಕೆ ಶಿವಕುಮಾರ್ ರೆಡ್ಡಿ, ಶ್ರೀರಾಮುಲು ಕೋಟೆಯನ್ನು ಉರುಳಿಸಿದ್ದು ಹೇಗೆ?

    ಬೆಂಗಳೂರು: ಜಲ ಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರ ಕಾರ್ಯತಂತ್ರಕ್ಕೆ ಬಿಜೆಪಿಯ ಭದ್ರಕೋಟೆಯಲ್ಲಿ ಕೈ ಅರಳಿದ್ದು, ವಿ.ಎಸ್.ಉಗ್ರಪ್ಪ ಗೆದ್ದಿದ್ದಾರೆ. ಈ ಮೂಲಕ ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ಶಾಸಕ ಶ್ರೀರಾಮುಲು, ಜನಾರ್ದನ ರೆಡ್ಡಿ ಅವರ ಬಳ್ಳಾರಿ ಕೋಟೆಯನ್ನು ಉರುಳಿಸಿ ಬಳ್ಳಾರಿಯಲ್ಲಿ ಧೂಳೆಬ್ಬಿಸಿದ್ದಾರೆ.

    ಚುನಾವಣೆಗೂ ಮುನ್ನ ಬಳ್ಳಾರಿ ಲೋಕಸಭಾ ಉಪಚುನಾವಣೆಯ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಬೇಕೆಂಬುದು ಕಾಂಗ್ರೆಸ್‍ಗೆ ದೊಡ್ಡ ತಲೆನೋವಾಗಿತ್ತು. ಏಕೆಂದರೆ ಬಳ್ಳಾರಿಯಲ್ಲಿ ಬಿಜೆಪಿ ಗೆಲುವಿಗಾಗಿ ಟೊಂಕ ಕಟ್ಟಿದ್ದ ನಾಯಕ ಸಮುದಾಯದ ಪ್ರಬಲ ಮುಖಂಡ ಶ್ರೀರಾಮುಲು ವಿರುದ್ಧ ಅದೇ ಜನಾಂಗದ ಅಭ್ಯರ್ಥಿ ಹಾಕುವ ಬಗ್ಗೆ ಕಾಂಗ್ರೆಸ್ ತಲೆಕೆಡಿಸಿಕೊಂಡಿತ್ತು. ಅಲ್ಲದೇ ಈ ಮೊದಲು ಶಾಸಕ ನಾಗೇಂದ್ರ ಸಹೋದರನನ್ನು ಕಾಂಗ್ರೆಸ್ ಅಭ್ಯರ್ಥಿಯೆಂದು ಹೇಳಲಾಗುತ್ತಿತ್ತು. ಆದರೆ ಸ್ಥಳೀಯ ನಾಯಕರಲ್ಲಿ ನಾಗೇಂದ್ರ ಸಹೋದರನ ವಿರುದ್ಧ ವೈಮನಸ್ಸಿದ್ದ ಕಾರಣ ಕಾಂಗ್ರೆಸ್ ಅಂತಿಮವಾಗಿ ಮತ್ತೊಬ್ಬ ಪ್ರಮುಖ ನಾಯಕ ಸಮುದಾಯ ಮುಖಂಡರಾದ ವಿ.ಎಸ್.ಉಗ್ರಪ್ಪನವರೇ ಸೂಕ್ತ ಎನ್ನುವ ನಿರ್ಧಾರಕ್ಕೆ ಡಿಕೆ ಶಿವಕುಮಾರ್ ಬಂದಿದ್ದರು. ಈ ಪ್ರಸ್ತಾಪಕ್ಕೆ ಆರಂಭದಲ್ಲೇ ಪಕ್ಷದಲ್ಲೇ ವಿರೋಧ ಕೇಳಿ ಬಂದಿತ್ತು. ಕೊನೆಗೆ ರಾಹುಲ್ ಗಾಂಧಿ ಅವರ ಮನ ಒಲಿಸಿದ ಪರಿಣಾಮ ಉಗ್ರಪ್ಪ ಅಭ್ಯರ್ಥಿಯಾಗಿ ಹೊರಹೊಮ್ಮಿದರು. ಇದನ್ನೂ ಓದಿ:  ರಾಮುಲು ಅಣ್ಣ ಎಲೆಕ್ಷನ್ ಶಾಂತಿಯುತವಾಗಿ ನಡೆಸಿಕೊಟ್ಟಿದ್ದಾರೆ- 3 ಜನರಿಗೆ ಡಿಕೆಶಿಯಿಂದ ಥ್ಯಾಂಕ್ಸ್

    ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿ ನಡೆದ ಬಳ್ಳಾರಿ ಉಪಚುನಾವಣೆ ಉಸ್ತುವಾರಿಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದು ಪ್ರಮುಖ ತಿರುವು ಪಡೆದುಕೊಂಡಿತು. ಚುನಾವಣೆಯ ಕಾರ್ಯತಂತ್ರದ ಭಾಗವಾಗಿ ಒಟ್ಟು ಮಾಜಿ ಸಚಿವರು, ಹಾಲಿ ಶಾಸಕರು ಹಾಗೂ ಸಂಸದರು ಸೇರಿದಂತೆ 52 ನಾಯಕರನ್ನು ಬಳ್ಳಾರಿಗೆ ಕೆಪಿಸಿಸಿ ನಿಯೋಜಿಸಿತ್ತು. ಇದನ್ನೂ ಓದಿ:  ತೆರೆಮರೆಯಲ್ಲಿ ಶ್ರೀರಾಮುಲುಗೆ ಖೆಡ್ಡಾ ತೋಡಿದ್ರಾ ಕುಚುಕು ಗೆಳೆಯ?

    ಶಾಸಕ ಶ್ರೀರಾಮುಲು ವಿರುದ್ಧ ಡಿ.ಕೆ.ಶಿವಕುಮಾರ್ ಅವರು ತಂತ್ರವನ್ನು ಮತದಾನದವರೆಗೂ ಕಾಯ್ದುಕೊಂಡರು. ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಂದುಗೂಡಿದ ಸಚಿವರು, ಚುನಾವಣೆಯನ್ನು ಪ್ರಬಲವಾಗಿ ಎದುರಿಸಿದರು. ಡಿ.ಕೆ.ಶಿವಕುಮಾರ್ ಅವರು ಮೈತ್ರಿ ಸರ್ಕಾರದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡರು. ಅಷ್ಟೇ ಅಲ್ಲದೆ ಶ್ರೀರಾಮುಲು ಗೌಡ ಜಾತಿ ಆಧಾರಿತ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಶ್ರೀರಾಮುಲು ಅಣ್ಣ ಎಂದು ಗೌರವ ನೀಡಿಯೇ ಟಾಂಗ್ ನೀಡತೊಡಗಿದರು.

    ಇದರ ಜೊತೆಯಲ್ಲಿ ಶಿವಕುಮಾರ್ ಲಿಂಗಾಯತ ಧರ್ಮ ವಿಚಾರಕ್ಕೆ ನಾವು ಕೈ ಹಾಕಿ ತಪ್ಪು ಮಾಡಿದ್ದೇವೆ. ಧರ್ಮ ಒಡೆಯಲು ಹೋಗಿಯೇ ನಾವು ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಕಾಣುವಂತಾಯಿತು. ಈ ವಿಚಾರದದಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದರು. ಮತಯಾಚನೆ ಮಾಡುವಾಗಲೂ ಡಿಕೆಶಿವಕುಮಾರ್ ಲಿಂಗಾಯದ ಸಮುದಾಯಗಳ ಜನರ ಜೊತೆ ಕ್ಷಮೆ ಕೇಳಿದ್ದರು. ಕ್ಷಮೆ ಕೇಳಿದ ಪರಿಣಾಮ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಹಿಂದೆ ಸರಿದಿದ್ದ ಲಿಂಗಾಯತ ಸಮುದಾಯದ ಜನ ಮತ್ತೆ ಕೈ ಹಿಡಿದ ಕಾರಣ ಉಗ್ರಪ್ಪ ಜಯಗಳಿಸಲು ನೆರವಾಯಿತು ಎನ್ನುವ ವಿಶ್ಲೇಷಣೆ ಕೇಳಿಬಂದಿದೆ. ಇದನ್ನೂ ಓದಿ: ಸೋಲು ಅನಾಥ, ನಾನೇ ಬಳ್ಳಾರಿ ಸೋಲಿನ ಹೊಣೆ ಹೊರುತ್ತೇನೆ: ಶ್ರೀರಾಮುಲು

    ನಾನು ಚೆಸ್ ಆಡಿಯೇ ಚೆಕ್ ಕೊಡುತ್ತೇನೆ ಎಂದು ಹೇಳಿದ್ದ ಡಿಕೆಶಿ ಬಳ್ಳಾರಿ ಶಾಸಕರಿಗೆ ಟಾರ್ಗೆಟ್ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಮೂಲಕವೇ ಟಾರ್ಗೆಟ್ ಅಸ್ತ್ರವನ್ನು ಪ್ರಯೋಗಿಸಿದ್ದರು. ಯಾರು ಅತಿ ಹೆಚ್ಚು ಲೀಡ್ ತಂದುಕೊಡುತ್ತಾರೋ ಅವರಿಗೆ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಸಭೆ ನಡೆಸಿ ಟಾರ್ಗೆಟ್ ನೀಡಿದ್ದರು. ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಸಹ ಭಾಗಿಯಾಗಿದ್ದರು. ಮಂತ್ರಿಗಿರಿ ಸಿಗುತ್ತದೆ ಎನ್ನುವ ಕಾರಣಕ್ಕೆ ಶಾಸಕರು ಮತ್ತು ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಬದಿಗೆ ತಳ್ಳಿ ಒಗ್ಗಟ್ಟಾಗಿ ಹೋರಾಡಿದ ಪರಿಣಾಮ ಬಳ್ಳಾರಿಯಲ್ಲಿ ಕಾಂಗ್ರೆಸ್ ಈಗ ನಗೆಯನ್ನು ಬೀರಿದೆ.

    ಕಮಲ ಸೋಲಿಗೆ ಕಾರಣಗಳೇನು?:
    ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದ ಜನಾರ್ದನ ರೆಡ್ಡಿ, ನನ್ನ ಶಾಪದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರನನ್ನು ಕಳೆದುಕೊಂಡರು ಎಂದಿದ್ದರು. ಈ ಹೇಳಿಕೆಗೆ ರಾಜಕೀಯ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಜೊತೆ ಬಿಜೆಪಿಯ ಅನೇಕ ನಾಯಕರು ಕೂಡ ಜನಾರ್ದನ ರೆಡ್ಡಿ ವಿರುದ್ಧ ಕಿಡಿಕಾರಿದ್ದರು. ಜನಾರ್ದನ ರೆಡ್ಡಿ ಹೇಳಿಕೆಗಳನ್ನೇ ಕಾಂಗ್ರೆಸ್ ನಾಯಕರು, ಶಾಸಕರು ಚುನಾವಣಾ ಪ್ರಚಾರದ ಅಸ್ತ್ರ ಪ್ರಯೋಗಿಸಿದರು. 2013ರ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಜನಾರ್ದನ ರೆಡ್ಡಿ ಅವರೇ ಕಾರಣವಾಗಿದ್ದರು. ಈಗಲೂ ಅವರ ಹೇಳಿಕೆಯಿಂದ ಮತ್ತೆ ಸೋಲಬೇಕಾಯಿತು ಎನ್ನುವುದು ಬಿಜೆಪಿ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದೆ.

    ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಪರ ಪ್ರಚಾರದಲ್ಲಿ ಶ್ರೀರಾಮುಲು ಅವರು ಏಕಾಂಗಿಯಾಗಿ ಹೋರಾಡಿದರು. ಬಳ್ಳಾರಿ ಉಪಚುನಾವಣೆ ಬಗ್ಗೆ ಬಿಜೆಪಿ ನಾಯಕರು ನಿರ್ಲಕ್ಷ್ಯ ತೋರಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪುತ್ರ ಬಿ.ವೈ.ರಾಘವೇಂದ್ರ ಪರ ಪ್ರಚಾರಕ್ಕೆ ಇಳಿದು, ಸ್ವ ಕ್ಷೇತ್ರದ ಉಳಿವಿಗಾಗಿ ಹೋರಾಡಿದರು.

    ಉಪ ಚುನಾವಣೆ ಬಳಿಕ ಶ್ರೀರಾಮುಲು ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಳ್ಳಾರಿಯಲ್ಲಿ ಶಾಸಕ ಸೋಮಣ್ಣ ಪ್ರಚಾರ ಮಾಡಿದ್ದರು. ಇದರಿಂದಾಗಿ ಬಿಜೆಪಿ ವಲಯದಲ್ಲಿ ಒಡಕು ಉಂಟಾಗಿತ್ತು. ಸೋಮಣ್ಣ ಅವರ ಹೇಳಿಕೆಯಿಂದ ವಿಚಲಿತಗೊಂಡಿದ್ದ ಬಿ.ಎಸ್.ಯಡಿಯೂರಪ್ಪ ಅವರು ಶ್ರೀರಾಮುಲು ಬೆನ್ನಿಗೆ ನಿಲ್ಲಲು ಹಿಂದೇಟು ಹಾಕಿದರು ಎನ್ನುವ ವಿಶ್ಲೇಷಣೆಯೂ ಕೇಳಿಬರುತ್ತಿದೆ.

    ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಸಹೋದರರ 14 ವರ್ಷಗಳ ಆಟಕ್ಕೆ ಕಾಂಗ್ರೆಸ್ ಟ್ರಬಲ್ ಶೂಟರ್ ಬ್ರೆಕ್ ಹಾಕಿದರು ಎನ್ನಲಾಗುತ್ತಿದೆ. ಅಷ್ಟೇ ಬದಾಮಿ ವಿಧಾನಸಭಾ ಚುನಾವಣೆ ಸೋಲಿನ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎರಡನೇ ದೊಡ್ಡ ಸೋಲನ್ನು ಶ್ರೀರಾಮುಲು ಬಳ್ಳಾರಿಯಲ್ಲಿ ಅನುಭವಿಸಿದ್ದಾರೆ. ಒಂದು ಕಾಲದಲ್ಲಿ ಗೆಳೆಯರಾಗಿದ್ದ ಹಾಗೂ ಹಾಲಿ ಶಾಸಕರಾದ ನಾಗೇಂದ್ರ ಹಾಗೂ ಆನಂದ್ ಸಿಂಗ್ ಅವರಿಂದಲೇ ಶ್ರೀರಾಮುಲು ವಿರುದ್ಧವೇ ಪ್ರಚಾರ ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಾಲಿ ಜನಾರ್ದನ ರೆಡ್ಡಿ ಓರ್ವ ಅನಾಗರಿಕ: ಸಚಿವ ಪುಟ್ಟರಂಗ ಶೆಟ್ಟಿ ಕಿಡಿ

    ಗಾಲಿ ಜನಾರ್ದನ ರೆಡ್ಡಿ ಓರ್ವ ಅನಾಗರಿಕ: ಸಚಿವ ಪುಟ್ಟರಂಗ ಶೆಟ್ಟಿ ಕಿಡಿ

    ಚಾಮರಾಜನಗರ/ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನ ಸಾವಿನ ಕುರಿತು ಹೇಳಿಕೆ ನೀಡಿದ್ದ ಗಾಲಿ ಜನಾರ್ದನರೆಡ್ಡಿ ವಿರುದ್ಧ ರಾಜಕೀಯ ನಾಯಕರು ಕಿಡಿಕಾರುತ್ತಿದ್ದಾರೆ. ಈ ಬೆನ್ನಲ್ಲೇ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು, ಜನಾರ್ದನ ರೆಡ್ಡಿ ಓರ್ವ ಅನಾಗರಿಕ ಎಂದು ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ನನಗೆ ಕೇಡು ಬಯಸಿದ್ದಕ್ಕೆ ಅವನ ಮಗ ಸತ್ತ ಎಂದು ಹೇಳುವ ಜನಾರ್ದನ ರೆಡ್ಡಿ ಅವರಿಗೆ ನಾಗರಿಕತೆಯೇ ಇಲ್ಲ. ಜೈಲಿಗೆ ಹೋಗಲು ಆತ ಮಾಡಿದ ಪಾಪಗಳೇ ಕಾರಣವೇ ಹೊರತು, ಸಿದ್ದರಾಮಯ್ಯ ಅವರು ಅಲ್ಲ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಚಪ್ಪಲಿ ಹಾಕೋದ್ದಕ್ಕೂ ಪಿಎ ಇಟ್ಟುಕೊಂಡ ಸಚಿವ ಸಿ.ಪುಟ್ಟರಂಗಶೆಟ್ಟಿ!

    ಬಳ್ಳಾರಿ ಬೌಂಡರಿಯನ್ನು ನಾಶ ಮಾಡಿದ್ದು ಗಾಲಿ ಜನಾರ್ದನ ರೆಡ್ಡಿ. ಹೀಗಿರುವಾಗ ರಾಜಕೀಯದಲ್ಲಿ ವೈಯಕ್ತಿಕ ವಿಚಾರಗಳನ್ನು ಸೇರಿಸಿ, ಟೀಕೆ ಮಾಡಬಾರದು. ಯಾರಾದರು ಮಗ ಸಾಯಲಿ ಎಂದು ಬಯಸುತ್ತಾರಾ? ಜನಾರ್ದನ ರೆಡ್ಡಿಗೆ ನಾಗರಿಕತೆ ಇದ್ದಿದ್ದರೆ ಈ ರೀತಿಯಾಗಿ ಮಾತನಾಡುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಸಿದ್ದರಾಮಯ್ಯಗೆ ಸಿ.ಟಿ.ರವಿ ಟ್ವೀಟ್ ಏಟು:
    ಜನಾರ್ದನ ರೆಡ್ಡಿ ಹೇಳಿಕೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದ ಬಿಜೆಪಿ ಶಾಸಕ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ. ಜನಾರ್ದನ ರೆಡ್ಡಿ ಅವರು ಸಾವಿನ ವಿಷಯದ ಬಗ್ಗೆ ಆಡಿದ ಮಾತು ನಿಜಕ್ಕೂ ಖಂಡನೀಯ. ಯಾವುದೇ ವ್ಯಕ್ತಿಯ ಸಾವು ಚುನಾವಣಾ ರಾಜಕೀಯವನ್ನು ಮೀರಿ ನಿಲ್ಲಬೇಕು. ಈ ವಿಚಾರವನ್ನು ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿರುವುದು ಅವರ ನೈತಿಕ ದಿವಾಳಿತನವನ್ನು ಎತ್ತಿ ತೋರಿಸುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದು ಯಾಕೆ ಅಂತಾ ಸ್ಪಷ್ಟನೆ ನೀಡಿದ ಜನಾರ್ದನ ರೆಡ್ಡಿ

    ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದು ಯಾಕೆ ಅಂತಾ ಸ್ಪಷ್ಟನೆ ನೀಡಿದ ಜನಾರ್ದನ ರೆಡ್ಡಿ

    ಚಿತ್ರದುರ್ಗ: ದಾಖಲೆಯ ಬಹುಮತಗಳಿಂದ ಗೆಳೆಯ ಸಂಸದ ಶ್ರೀರಾಮುಲು ಅವರನ್ನು ಗೆಲ್ಲಿಸಲು ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದೆನೆ ಅಂತಾ ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

    ಗೆಳೆಯ ಶ್ರೀರಾಮುಲು ಗೆಲುವಿಗಾಗಿ ಟೊಂಕ ಕಟ್ಟಿ ನಿಂತಿರೊ ಗಣಿದಣಿ ಗಾಲಿ ಜನಾರ್ಧನ ರೆಡ್ಡಿ ಅವರ ಆತ್ಮೀಯ ಸಂಬಂಧಿ ಚಳ್ಳಕೆರೆಯ ರಾಮಕೃಷ್ಣಾರೆಡ್ಡಿ ಮನೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಕೋಟೆನಾಡು ಚಿತ್ರದುರ್ಗ ಹಾಗು ಬಳ್ಳಾರಿ ಜಿಲ್ಲೆಗಳೆರೆಡು ಭೌಗೋಳಿಕವಾಗಿ ಬೇರೆ ಬೇರೆಯಾದರೂ ಮಾನಸಿಕವಾಗಿ ಒಂದೆಯಾಗಿವೆ. ಕೇವಲ ಇಲ್ಲಿ ಹಿಡಿತ ಸಾಧಿಸೋ ಪ್ರಶ್ನೆಯೇ ಇಲ್ಲ. ಅಲ್ಲದೇ ಇಲ್ಲಿನ ನಮ್ಮ ಜನರೆನ್ನೆಲ್ಲ ನೋಡಿ ನನಗೆ ಖುಷಿಯಾಗಿದೆ. ಈ ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಬೇಕು. ಎಲ್ಲಾ ಬಿಜೆಪಿ ಅಭ್ಯರ್ಥಿಗಳಿಗೂ ಒಳ್ಳೆಯದಾಗಲಿ ಎಂದು ಹೇಳಿದ್ರು.

    ಅಷ್ಟೇ ಅಲ್ಲದೇ ನಾನು ಎಂದೂ ಕೂಡ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಟಿಕೆಟ್ ಕೇಳಿಲ್ಲ. ಆದರೆ ಬಿಜೆಪಿ ತೀರ್ಮಾನಿಸಿ ನನ್ನನ್ನು ಎಂಎಲ್‍ಸಿ ಮಾಡಿ ಸಚಿವರನ್ನಾಗಿಸಿತ್ತು. ಹೀಗಾಗಿ ಟಿಕೆಟ್ ನೀಡಿಲ್ಲವೆಂದು ಪಕ್ಷದ ಮೇಲೆ ಯಾವುದೇ ಬೇಸರವಿಲ್ಲ. ಜೊತೆಗೆ ಈ ಬಾರಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ್ರು.

    ಪಕ್ಷದ ಗೆಲುವಿಗಾಗಿ, ಪಕ್ಷದ ಬಲವರ್ಧನೆಗಾಗಿ ರಾಜ್ಯಾದ್ಯಂತ ಶ್ರೀರಾಮುಲು, ಯಡಿಯೂರಪ್ಪ ಓಡಾಡುತ್ತಿದ್ದಾರೆ. ಆದ್ದರಿಂದ ಅವರಿಗೆ ನಾನು ಸಾಥ್ ನೀಡುವ ಉದ್ದೇಶದಿಂದ ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುತ್ತೇನೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬರುತ್ತದೆ. ಜೊತಗೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗೋದು ಕೂಡ ಸತ್ಯ ಅಂದ್ರು. ಇದನ್ನೂ ಓದಿ: 101 ರೂ. ನೀಡಿ ಬಾಡಿಗೆ ಪಡೆದಿರುವ ರೆಡ್ಡಿ ತೋಟದ ಮನೆಯ ವಿಶೇಷತೆ ಇಲ್ಲಿದೆ

  • ಮಹಿಳಾ ದಿನಾಚರಣೆಯಂದು ಮಡದಿಯನ್ನು ಹೂವಿನ ಪಲಕ್ಕಿಯಲ್ಲಿ ಮೆರವಣಿಗೆ ಮಾಡಿದ ಮಾಜಿ ಸಚಿವ ಜನಾರ್ದನರೆಡ್ಡಿ!

    ಮಹಿಳಾ ದಿನಾಚರಣೆಯಂದು ಮಡದಿಯನ್ನು ಹೂವಿನ ಪಲಕ್ಕಿಯಲ್ಲಿ ಮೆರವಣಿಗೆ ಮಾಡಿದ ಮಾಜಿ ಸಚಿವ ಜನಾರ್ದನರೆಡ್ಡಿ!

    ಬಳ್ಳಾರಿ: ವಿಶ್ವ ಮಹಿಳಾ ದಿನಾಚರಣೆ ದೇಶದೆಲ್ಲೆಡೆ ವಿಭಿನ್ನವಾಗಿ ವಿಶಿಷ್ಟವಾಗಿ ಆಚರಣೆ ಮಾಡಿದರೆ, ಮಾಜಿ ಸಚಿವ ಜನಾರ್ದನರೆಡ್ಡಿ ತಮ್ಮ ಮೆಚ್ಚಿನ ಮಡದಿಯನ್ನು ಹೂವಿನಿಂದ ಅಲಂಕಾರ ಮಾಡಿದ ಸಾರೋಟದಲ್ಲಿ ಕೂರಿಸಿ ಸವಾರಿ ಮಾಡಿದ್ದಾರೆ.

    ಮಹಿಳಾ ದಿನಾಚರಣೆಯಂದು ಸಾಧನೆ ಮಾಡಿದ ಮಹಿಳೆಯರಿಗೆ, ತಾಯಂದಿರಿಗೆ ಸನ್ಮಾನ ಮಾಡಿ ಪ್ರೀತಿಯ ಕಾಣಿಕೆಯನ್ನ ನೀಡ್ತಾರೆ. ಆದ್ರೆ ಸಚಿವರು ತಮ್ಮ ಸಾಧನೆಗೆ ಬೆಂಬಲವಾಗಿದ್ದ ಪತ್ನಿ ಲಕ್ಷ್ಮಿ ಅರುಣಾರನ್ನು ಹೂ ಅಲಂಕಾರ ಮಾಡಿದ ಸೈಕಲ್ ಸಾರೋಟದಲ್ಲಿ ಕೂರಿಸಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದರು.

    ಪತ್ನಿಯನ್ನು ಹೂ ಅಲಂಕಾರದ ಸಾರೋಟದಲ್ಲಿ ಕೂರಿಸಿ ತಾವೂ ಸವಾರಿ ಮಾಡುತ್ತಿರುವ ಫೋಟೋಗಳನ್ನು ಜನಾರ್ದನ ರೆಡ್ಡಿ ತಮ್ಮ ಫೇಸ್‍ಬುಕ್ ಪೇಜ್ ನಲ್ಲಿ ಹಾಕಿ ಮಹಿಳೆಯರಿಗೆ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಮಡದಿಯೊಂದಿಗೆ ಮಹಿಳಾ ದಿನಾಚರಣೆ ಆಚರಿಸಿಕೊಂಡ ಸಚಿವರ ಫೇಸ್ ಬುಕ್ ಪೋಸ್ಟ್ ಹಲವರು ಶೇರ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.

  • ಜನಾರ್ದನ ರೆಡ್ಡಿ ರಾಜಕೀಯ ರೀಎಂಟ್ರಿಗೆ ಹಿನ್ನಡೆ – ಬಳ್ಳಾರಿಗೆ ಭೇಟಿ ನೀಡುವಂತಿಲ್ಲ

    ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ರಾಜಕೀಯ ಮರುಪ್ರವೇಶಕ್ಕೆ ಹಿನ್ನಡೆಯಾಗಿದೆ. ಬಳ್ಳಾರಿಯಿಂದ ಮತ್ತೆ ರಾಜಕೀಯ ಜೀವದಾನ ಪಡೆಯುವ ಗಣಿಧಣಿಯ ಕನಸಿಗೆ ಕಲ್ಲು ಬಿದ್ದಂತಾಗಿದೆ.

    ರೆಡ್ಡಿ ಜಾಮೀನು ಮಾರ್ಪಾಡಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಹಿಂದಿನ ಷರತ್ತು ಬದಲಾವಣೆಗೆ ಒಪ್ಪದ ಸುಪ್ರೀಂ ಕೋರ್ಟ್, ಬಳ್ಳಾರಿಗೆ ಹೋಗದಂತೆ ವಿಧಿಸಿದ್ದ ಷರತ್ತಿನಲ್ಲಿ ಸಡಿಲಿಕೆ ಇಲ್ಲ ಎಂದು ಹೇಳಿದೆ. ಷರತ್ತಿನ ಪ್ರಕಾರ ಆಂಧ್ರದ ಕರ್ನೂಲು, ಅನಂತಪುರಂಗೂ ರೆಡ್ಡಿ ಭೇಟಿ ನೀಡುವಂತಿಲ್ಲ.

    ಈ ಹಿಂದೆ ವಿಧಿಸಿದ್ದ ಷರತ್ತುಗಳ ಮಾರ್ಪಾಡಿಗೆ ಸುಪ್ರೀಂ ನಕಾರ ವ್ಯಕ್ತಪಡಿಸಿದ್ದು, ಮೊದಲು ಚಾರ್ಜ್‍ಶೀಟ್ ಸಲ್ಲಿಕೆಯಾಗಲಿ. ಬಳಿಕವಷ್ಟೆ ಜಾಮೀನು ಮಾರ್ಪಾಡು ಬಗ್ಗೆ ತೀರ್ಮಾನ ಎಂದು ಹೇಳಿದೆ.

    ಅಸೆಂಬ್ಲಿ ಎಲೆಕ್ಷನ್ ಗೆ 3 ತಿಂಗಳಷ್ಟೇ ಉಳಿದಿರುವ ಹಿನ್ನೆಲೆಯಲ್ಲಿ ಷರತ್ತು ಸಡಿಲಿಕೆ ಕೋರಿ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಮಗಳ ಮದುವೆಗಾಗಿ ಜರ್ನಾದನ ರೆಡ್ಡಿ ಬಳ್ಳಾರಿಗೆ ಹೋಗಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

  • ರಾಜ್ಯ ಬಿಜೆಪಿಗೆ ಹೈಕಮಾಂಡ್ ಆರ್ಡರ್- ಜನಾರ್ದನ ರೆಡ್ಡಿ ಎಲೆಕ್ಷನ್‍ಗೆ ನಿಲ್ಲೋದು ಡೌಟ್

    ರಾಜ್ಯ ಬಿಜೆಪಿಗೆ ಹೈಕಮಾಂಡ್ ಆರ್ಡರ್- ಜನಾರ್ದನ ರೆಡ್ಡಿ ಎಲೆಕ್ಷನ್‍ಗೆ ನಿಲ್ಲೋದು ಡೌಟ್

    ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ರಾಜಕೀಯ ಭವಿಷ್ಯ ಮಸುಕಾಗಿದೆ. ಕಾರಣ ಅಕ್ರಮ ಗಣಿಗಾರಿಕೆ ಕೇಸಲ್ಲಿ ಆರೋಪ ಮುಕ್ತರಾಗದ ಹೊರತು ಪಕ್ಷ ಸೇರ್ಪಡೆ ಬೇಡ ಅಂತಾ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಘಟಕಕ್ಕೆ ಮೌಖಿಕ ಆದೇಶ ನೀಡಿದೆ.

    ಅಲ್ಲದೇ ರೆಡ್ಡಿ ಸಹೋದರ ಕರುಣಾಕರ್ ರೆಡ್ಡಿ ಕೂಡ ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆಗೆ ರೆಡ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಮೂಲಕ ಜನಾರ್ದನ ರೆಡ್ಡಿಯ ಬಿಜೆಪಿ ಸೇರ್ಪಡೆ ಆಸೆಗೆ ತಣ್ಣೀರು ಬಿದ್ದಂತಾಗಿದೆ.

    ಶ್ರೀರಾಮುಲು ಮೂಲಕ ಪಕ್ಷ ಸೇರಲು ಜನಾರ್ದನ ರೆಡ್ಡಿ ಸರ್ಕಸ್ ನಡೆಸುತ್ತಿದ್ದಾರೆ. ಆದ್ರೆ ರೆಡ್ಡಿ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಲ್ಲ. ಜರ್ನಾದನ ರೆಡ್ಡಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲಿಗೆ ಹೋಗಿ ಬಂದಿದ್ದಾರೆ, ಇನ್ನೂ ಪ್ರಕರಣ ಇತ್ಯರ್ಥ ಆಗಿಲ್ಲ. ನೋಟ್ ಬ್ಯಾನ್ ವೇಳೆ ಅದ್ದೂರಿಯಾಗಿ ಮಗಳ ಮದುವೆ ಮಾಡಿ ಟೀಕೆಗೂ ಒಳಗಾಗಿದ್ದರು.

    ಹೀಗಾಗಿ ರೆಡ್ಡಿ ಪಕ್ಷ ಸೇರ್ಪಡೆಯಿಂದ ಪಕ್ಷ ಮುಜುಗರ ಅನುಭವಿಸಬೇಕಾಗುತ್ತೆ. ಮೊದಲು ಆರೋಪ ಮುಕ್ತರಾಗಲಿ, ನಂತರ ನೋಡೋಣ ಎಂದು ಹೈಕಮಾಂಡ್ ಹೇಳಿದೆ ಎನ್ನಲಾಗಿದೆ.

  • ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕಂಟಕ

    ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕಂಟಕ

    ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಚುನಾವಣೆಗೆ ನಿಲ್ಲುವ ಮೊದಲೇ ಕಂಟಕ ಎದುರಾಗಿದೆ.

    ಈ ಬಾರಿ ಚುನಾವಣೆಗೆ ನಿಲ್ಲಲ್ಲು ಯೋಜನೆ ರೂಪಿಸಿದ್ದ ಜನಾರ್ದನ ರೆಡ್ಡಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಮೈನಿಂಗ್ ಕೇಸ್‍ನಲ್ಲಿ ಸುಪ್ರೀಂಕೋರ್ಟ್‍ಗೆ ತೆರಳಿ ಇಬ್ಬರು ಮಾಜಿ ಸಿಎಂಗಳ ವಿರುದ್ಧ ಕೇಸ್ ಗೆದ್ದಿರೋ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಂ ಅದೇ ಮಾದರಿಯಲ್ಲಿ ರೆಡ್ಡಿಯ ಅಕ್ರಮ ಮೈನಿಂಗ್ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲು ತೀರ್ಮಾನ ಮಾಡಿದ್ದಾರೆ.

    ರೆಡ್ಡಿ ವಿರುದ್ಧ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸನ್ನು ಹೈಕೋರ್ಟ್ ಮಾರ್ಚ್ 13ರಂದು ವಜಾ ಮಾಡಿತ್ತು. ಆದರೆ, ಇಡಿ ಮೇಲ್ಮನವಿ ಸಲ್ಲಿಸಿಲ್ಲ. ಇದೀಗ ಇದೇ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನೆ ಮಾಡಲು ಅಬ್ರಹಂ ತೀರ್ಮಾನಿಸಿದ್ದಾರೆ.

    ಕೇಸ್‍ಗೆ ಮರುಜೀವ: ಹೈಕೋರ್ಟ್ ಮಾರ್ಚ್ 13ರಂದು ಇಡಿ ದಾಖಲಿಸಿದ್ದ ಕೇಸ್ ವಜಾ ಮಾಡಿತ್ತು. ಸರ್ಕಾರಕ್ಕೆ 884 ಕೋಟಿ ರೂ. ವಾಪಸ್ ನೀಡಲು ಕೋರ್ಟ್ ಹೇಳಿತ್ತು. ಹಳೆಯ ಕೇಸ್‍ಗೆ ಹೊಸ ಕಾನೂನು ಅನ್ವಯ ಆಗೋದಿಲ್ಲ ಎಂದು ಹೈಕೋರ್ಟ್ ಈ ಕೇಸನ್ನು ವಜಾ ಮಾಡಿತ್ತು. ಇದೇ ಪ್ರಕರಣವನ್ನ ಕೈಗೆತ್ತಿಕೊಂಡು ಸೋಮವಾರ ಸುಪ್ರೀಂಕೋರ್ಟ್‍ನಲ್ಲಿ ಟಿ.ಜೆ.ಅಬ್ರಾಹಂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಾರೆ.

    ಇದನ್ನೂ ಓದಿ: ಗಣಿನಾಡಿಗೆ ಜನಾರ್ದನ ರೆಡ್ಡಿ ಗುಡ್‍ಬೈ?

  • ಜನಾರ್ದನ ರೆಡ್ಡಿ ಸಲೈಂಟಾಗಿದ್ದಾರೆ, ಅವರನ್ನು ವೈಲೆಂಟ್ ಮಾಡ್ಬೇಡಿ: ಹೆಚ್‍ಡಿಕೆಗೆ ಸೋಮಶೇಖರರೆಡ್ಡಿ ಎಚ್ಚರಿಕೆ!

    ಜನಾರ್ದನ ರೆಡ್ಡಿ ಸಲೈಂಟಾಗಿದ್ದಾರೆ, ಅವರನ್ನು ವೈಲೆಂಟ್ ಮಾಡ್ಬೇಡಿ: ಹೆಚ್‍ಡಿಕೆಗೆ ಸೋಮಶೇಖರರೆಡ್ಡಿ ಎಚ್ಚರಿಕೆ!

    ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ಸಲೈಂಟ್ ಆಗಿದ್ದಾರೆ, ಅವರನ್ನು ವೈಲೆಂಟ್ ಮಾಡಬೇಡಿ. ಜನಾರ್ದನರೆಡ್ಡಿಯನ್ನು ಕೆಣಕಿದ್ರೆ ಸರಿ ಇರಲ್ಲ ಎಂದು ಮಾಜಿ ಶಾಸಕ ಸೋಮಶೇಖರರೆಡ್ಡಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

    ಜನಾರ್ದನ ರೆಡ್ಡಿ ಮೇಲಿನ ಕೇಸ್ ಹಿಂಪಡೆಯಲು ಬಿಜೆಪಿಗೆ 500 ಕೋಟಿ ರೂ. ಹಣ ನೀಡಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಈ ಸಂಬಂಧ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿ ಪ್ರತಿಕ್ರಿಯಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಬಾರದು. ಕುಮಾರಸ್ವಾಮಿ ಹೇಳಿಕೆ ಸಣ್ಣತನದಿಂದ ಕೂಡಿದೆ ಎಂದು ಹೇಳಿದ್ರು.

    ಕೊನೆಗೆ ಕುಮಾರಸ್ವಾಮಿಗೆ ಕೈ ಮುಗಿದು ಕೇಳುವೆ. ಜನಾರ್ದನರೆಡ್ಡಿ ಅವರು ತುಂಬಾನೇ ಸೈಲೆಂಟ್ ಆಗಿದ್ದಾರೆ. ನಾವು ಕುಟುಂಬಸ್ಥರೆಲ್ಲರೂ ಸಂತೋಷವಾಗಿದ್ದೇವೆ. ಕುಮಾರಸ್ವಾಮಿ ಅವರು ಮಾತನಾಡುವ ಮುನ್ನ ಯೋಚನೆ ಮಾಡಿ ಮಾತನಾಡಬೇಕು. ನಾನು ಅವರನ್ನು ಕೈ ಮಗಿದು ಕೇಳುತ್ತೇನೆ ಅಂತ ಸೋಮಶೇಖರರೆಡ್ಡಿ ಹೇಳಿದ್ರು.

    ಇದನ್ನೂ ಓದಿ: ಬಿಜೆಪಿ ಎಲೆಕ್ಷನ್‍ಗೆ ಜನಾರ್ದನ ರೆಡ್ಡಿಯಿಂದ 500 ಕೋಟಿ ಹಣ:ಎಚ್‍ಡಿಕೆ ಬಾಂಬ್