ರಾಮನಗರ: ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ (Bribe) ಕೇಳಬಾರದು. ಕೇಳಿದರೆ ಬೆಂಗಳೂರಿನ (Bengaluru) ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮೈದಾನದಲ್ಲಿ ನಡೆದ ಜನಸ್ಪಂದನ (Janaspandana) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು. ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ (DK Suresh) ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ ಎಂದರು. ಇದನ್ನೂ ಓದಿ: ಮ್ಯಾಪ್ ತೋರಿಸಿ ಭಾರತ ವರ, ಇರಾನ್ ಶಾಪ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು
ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ. ಈ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ಸಿಎಎಸ್‌ಆರ್ ನಿಧಿಯಿಂದ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. ಜೊತೆಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ಸಬಲರನ್ನಾಗಿ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾಲ್ವರು ವಿಕಲ ಚೇತನ ಹೆಣ್ಣು ಮಕ್ಕಳಿಗೆ ಸ್ವೀಟ್‌ನಲ್ಲಿ ವಿಷ ಕೊಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ
ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹಾಗೂ ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ ಸುಧಾಕರ್ (K Sudhakar) ಇಬ್ಬರೂ ಒಂದೇ ದಿನ ಪ್ರತ್ಯೇಕವಾಗಿ ಜನರ ಸಮಸ್ಯೆಗಳನ್ನು ಆಲಿಸಲು `ಜನಸ್ಪಂದನ’ ಕಾರ್ಯಕ್ರಮ ಆಯೋಜಿಸುವ ಮೂಲಕ ಗಮನ ಸೆಳೆದಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಎಂದಿನಂತೆ ಬೆಳಗ್ಗೆ ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲಿನಿಂದ ನಗರಸಭೆವರೆಗೂ ಮನೆ ಮನೆಗೆ ಭೇಟಿ ನೀಡಿ `ನಮಸ್ತೆ ಚಿಕ್ಕಬಳ್ಳಾಪುರ’ ಕಾರ್ಯಕ್ರಮ ನಡೆಸಿ ನಂತರ ತಾಲೂಕು ಕಚೇರಿ ಆವರಣದಲ್ಲಿ ಜನಸ್ಪಂದನ (Janaspandana) ಕಾರ್ಯಕ್ರಮ ನಡೆಸಿದರು. 250ಕ್ಕೂ ಹೆಚ್ಚು ಮಂದಿ ಸಾರ್ವಜನಿಕರು ಆಗಮಿಸಿ ತಮ್ಮ ಅಹವಾಲುಗಳನ್ನು ಶಾಸಕರಿಗೆ ಸಲ್ಲಿಕೆ ಮಾಡಿದ್ದು, ಸ್ಥಳದಲ್ಲೇ ಆಧಿಕಾರಿಗಳ ಜೊತೆ ಸಮಾಲೋಚನೆ ಮಾಡಿ ಕೆಲ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ನಡೆಸಿದರು. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿ – ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ
ಇದೇ ದಿನ ಮತ್ತೊಂದೆಡೆ ಸಂಸದ ಡಾ.ಕೆ ಸುಧಾಕರ್ ಸಹ ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು. ಸಂಸದರಾದ ನಂತರ ಇದೇ ಮೊದಲ ಬಾರಿಗೆ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರು. ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ- ಅಭ್ಯರ್ಥಿ ವಿಚಾರದಲ್ಲಿ ದೋಸ್ತಿಗಳ ಮಧ್ಯೆ ಭಿನ್ನಾಭಿಪ್ರಾಯ
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ ದಿನ ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ (Janaspandana) ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.
ಕೊಡಗಿನ (Kodagu) ಮಡಿಕೇರಿ (Madikeri) ತಾಲೂಕಿನ ಹಾಕತ್ತೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ಈ ವಿಷಯದಲ್ಲಿ ನಾನು ಎಲ್ಲವನ್ನು ಟೀಕಿಸುವುದಿಲ್ಲ ಎಂದಿದ್ದಾರೆ.
ಮುಂದಿನ 3 ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಿದ್ದಾರೆ. ಈಗ ಅವರಿಗೆ ಅರ್ಥ ಆಗಿರಬಹುದು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು. ನಾನು ಜನತಾ ದರ್ಶನ ಮಾಡಿದಾಗ ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ಮಾಡಿದ್ದೆ. ಅಂದು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಬಿಜೆಪಿ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಆರ್ ಅಶೋಕ್ ಅವರು ಕೂಡ ಮಾಡಿದ್ದರು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಅಂತ ಮಾಡಿದ್ದರು. ತಿಂಗಳಿಗೆ ಒಂದು ಗ್ರಾಮಕ್ಕೆ ಅವರು ಭೇಟಿ ನೀಡಿದ್ದರು. ಈಗ ಸಿಎಂ ಅವರು ಜನಸ್ಪಂದನಾ ಮಾಡಿದ್ದಾರೆ. ಅವರಿಗೆ ಮನವರಿಕೆ ಆಗಿರುವ ಕಷ್ಟಗಳನ್ನು ಸಿಎಂ ಆದಷ್ಟು ಬಗೆಹರಿಸಲಿ. ಆಗ ಅವು ಅರ್ಥಪೂರ್ಣ ಆಗುತ್ತವೆ ಎಂದು ಹೆಚ್‌ಡಿಕೆ ಹೇಳಿದರು. ಇದನ್ನೂ ಓದಿ: ಯಾರೇ ನಿಂತರೂ 2 ಲಕ್ಷ ಮತಗಳ ಅಂತರದಿಂದ ಗೆಲ್ತೀನಿ: ಪ್ರತಾಪ್ ಸಿಂಹ
ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರವನ್ನು(Doddaballapur) ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ, ಇಂದು ನಡೆದ ಜನಸ್ಪಂದನ(Janaspandana) ಕಾರ್ಯಕ್ರಮಕ್ಕೆ ಕರಾಳೋತ್ಸವ ಬಿಸಿ ತಟ್ಟಿಸಿದೆ. ಕರಾಳೋತ್ಸವವನ್ನು ನಡೆಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜನಸ್ಪಂದನ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಬೆಳಗ್ಗೆ 9:30ಕ್ಕೆ ನಗರದ ಕನ್ನಡ ಜಾಗೃತ ಪರಿಷತ್ತಿನ ಮುಂಭಾಗದಿಂದ ಬೃಹತ್ ಜಾಥಾ ಹೊರಟು ಪಿಎಸ್‌ಐ ಜಗದೀಶ್(ಅರ್ಕಾವತಿ) ವೃತ್ತದಲ್ಲಿ ಕರಾಳೋತ್ಸವ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲು ಸಮಿತಿಯ ಮುಖಂಡರು ನಿರ್ಧರಿಸಿದ್ದರು. ಆದರೆ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಮುಂದಾದರು. ಇದಕ್ಕೆ ಒಪ್ಪದ ಕಾರಣ, ನೂರಾರು ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದು, ಬಸ್ಸಿನಲ್ಲಿ ಕರೆದೊಯ್ದರು. ಈ ವೇಳೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವರ್ತನೆ ಖಂಡಿಸಿ ಪ್ರತಿಭಟನಾನಿರತರು ಧಿಕ್ಕಾರ ಕೂಗಿದರು. ಇದನ್ನೂ ಓದಿ: ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ
ಜಿಲ್ಲಾ ಕೇಂದ್ರ ಹೋರಾಟ ಸಮಿತಿಯ ವತಿಯಿಂದ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆ ಸಂದರ್ಭದಲ್ಲಿ ಸಂಬಂಧಪಟ್ಟ ಕಡತಗಳನ್ನು ಪರಿಶೀಲಿಸಿ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಬೊಮ್ಮಾಯಿ ಭರವಸೆ ನೀಡಿದ್ದರು. ಇದನ್ನೂ ಓದಿ: ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧ ಹೃದಯಾಘಾತದಿಂದ ಸಾವು
ಜಿಲ್ಲಾ ಕೇಂದ್ರವಾಗಲು ಎಲ್ಲಾ ಅರ್ಹತೆಗಳಿದ್ದರೂ ದೊಡ್ಡಬಳ್ಳಾಪುರ ತಾಲೂಕಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ದಿಸೆಯಲ್ಲಿ ಜಿಲ್ಲಾ ಕೇಂದ್ರದ ಅರ್ಹತೆಗಳ ಬಗ್ಗೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿಯ ಅರ್ಹತೆಗಳನ್ನು ಪಟ್ಟಿ ಮಾಡಿ ಹಾಗೂ ದೊಡ್ಡಬಳ್ಳಾಪುರದ ವಿಶೇಷತೆಗಳ ಬಗ್ಗೆ ಕರಪತ್ರದಲ್ಲಿ ಮಾಹಿತಿ ನೀಡಿ ಸಾರ್ವಜನಿಕರಿಗೆ ಹಂಚಿದ್ದು, ಸಾರ್ವಜನಿಕರು ಸಹ ಹೋರಾಟವನ್ನು ಬೆಂಬಲಿಸಲು ಹೋರಾಟ ಸಮಿತಿ ಮನವಿ ಮಾಡಿತ್ತು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದಲ್ಲಿ ಮಳೆಯ ರುದ್ರ ನರ್ತನ ನಡೆಯುತ್ತಿದೆ. ಸಂತ್ರಸ್ತರ ನೋವಿನ ರೋಧನೆ ಕೇಳಿಸುತ್ತಿದೆ. ಆದರೆ ಬಿಜೆಪಿ ಮೋಜಿನ ವರ್ತನೆ ತೋರಿಸುತ್ತಿದೆ. ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು ಹಾಗೂ ಶಾಸಕರೆಲ್ಲರೂ ಈಗ ದೊಡ್ಡಬಳ್ಳಾಪುರದಲ್ಲಿ ಪತ್ತೆಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
ಬಿಜೆಪಿ
ಹೇಳಿದ್ದು – ಗೋರಕ್ಷಣೆ
ಮಾಡಿದ್ದು – ಗೋವಿನ ಹೆಸರಲ್ಲಿ ಕಮಿಷನ್ ಭಕ್ಷಣೆ.
ಸರ್ಕಾರ ಗೋಶಾಲೆಗಳನ್ನು ನಿರ್ಮಿಸುವುದು ದೂರದ ಮಾತು ಕನಿಷ್ಠ ಗೋವುಗಳಿಗೆ ನ್ಯಾಯಯುತವಾಗಿ ಮೇವನ್ನೂ ಕೊಡಲಿಲ್ಲ.
ಟ್ವೀಟ್ನಲ್ಲಿ ಏನಿದೆ?
40% ಕಮಿಷನ್ ಹಣದಲ್ಲಿ ನಡೆಯುತ್ತಿರುವ ಬಿಜೆಪಿ ಭ್ರಷ್ಟೋತ್ಸವಕ್ಕೆ ಕೋಟಿ ಕೋಟಿ ಹಣ ಸುರಿಯಲಾಗುತ್ತಿದೆ. ಸಮಾವೇಶದ ವೇದಿಕೆ ಅಲಂಕಾರದ ಖರ್ಚಿನಲ್ಲಿ ಮೃತ ಅಂಕಿತಾಳಿಗೆ ಪರಿಹಾರ ನೀಡಬಹುದಿತ್ತು. ಹಾಡು, ನೃತ್ಯಗಳ ಖರ್ಚಿನಲ್ಲಿ ಬೆಂಗಳೂರಿನ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬಹುದಿತ್ತು. ರಸ್ತೆ ಗುಂಡಿಗೆ ಬಲಿಯಾದವರಿಗೆ ಪರಿಹಾರ ನೀಡಬಹುದಿತ್ತು.
ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಇನ್ನೂ ಆರಿಲ್ಲ. ತಮ್ಮವರ ಸಾವೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ?
ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ,
ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ.
ಅತ್ತ ಜನತೆ ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಇತ್ತ ಬಿಜೆಪಿ ಸಂಭ್ರಮಾಚರಣೆಯಲ್ಲಿದೆ. ಯಾವ ಕಾರಣಕ್ಕಾಗಿ ಈ ಸಂತೋಷ, ಸಡಗರ, ಸಂಭ್ರಮ? ಅತಿವೃಷ್ಟಿಯಲ್ಲಿ ಜನರ ಬದುಕು ಮುಳುಗಿರುವುದಕ್ಕಾ? ಆತ್ಮಹತ್ಯೆಯಲ್ಲಿ ಕರ್ನಾಟಕ 5ನೇ ಸ್ಥಾನ ಪಡೆದಿರುವುದಕ್ಕಾ? ಸರ್ಕಾರಿ ಹುದ್ದೆಗಳು ಲಾಭದಾಯಕವಾಗಿ ಸೇಲ್ ಆಗಿರುವುದಕ್ಕಾ? 40% ಕಮಿಷನ್ ಲೂಟಿಯನ್ನು ಯಶಸ್ವಿಯಾಗಿ ಮಾಡುತ್ತಿರುವುದಕ್ಕಾ? ಇದು ಲಜ್ಜೆಗೇಡಿತನದ ಪರಮಾವಧಿ. ಇದನ್ನೂ ಓದಿ: ಕರ್ನಾಟಕಕ್ಕೆ 55 ಸಾವಿರ ಕೋಟಿ ಅನುದಾನ ನೀಡಲು ಚಿಂತನೆ – ಸ್ಮೃತಿ ಇರಾನಿ
ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು? ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ? ಇತರೆಡೆಯ ಕಮಿಷನ್ 40% ಆದರೆ, ಬಿಬಿಎಂಪಿಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ, ಅಲ್ಲಿ 50% ಇದೆ. ಬಿಬಿಎಂಪಿಯ ಭ್ರಷ್ಟಾಚಾರದಲ್ಲಿ ‘ಸಮಪಾಲು ಸಮಬಾಳು’ ಇರುವುದರಿಂದಲೇ ಇಂದು ಬೆಂಗಳೂರು ಮುಳುಗಿರುವುದು. ರಸ್ತೆಗಳು ಗುಂಡಿಮಯವಾಗಿರುವುದು! 50% ಕಮಿಷನ್ ಇರುವಾಗ ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಪೈಪೋಟಿ ನಡೆಯದಿರುತ್ತದೆಯೇ? ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ
ಇತರೆಡೆಯ ಕಮಿಷನ್ 40% ಆದರೆ, ಬಿಬಿಎಂಪಿಯಲ್ಲಿ ಒಂದು ಹೆಜ್ಜೆ ಮುಂದೆ, ಇಲ್ಲಿ 50%.
ಬಿಬಿಎಂಪಿಯ ಭ್ರಷ್ಟಾಚಾರದಲ್ಲಿ
“ಸಮಪಾಲು ಸಮಬಾಳು” ಇರುವುದರಿಂದಲೇ ಇಂದು ಬೆಂಗಳೂರು ಮುಳುಗಿರುವುದು, ರಸ್ತೆಗಳು ಗುಂಡಿಮಯವಾಗಿರುವುದು!
ಬಿಜೆಪಿ ಹೇಳಿದ್ದು ಗೋರಕ್ಷಣೆ, ಆದರೆ ಮಾಡಿದ್ದು ಗೋವಿನ ಹೆಸರಲ್ಲಿ ಕಮಿಷನ್ ಭಕ್ಷಣೆ. ಸರ್ಕಾರ ಗೋಶಾಲೆಗಳನ್ನು ನಿರ್ಮಿಸುವುದು ದೂರದ ಮಾತು. ಕನಿಷ್ಠ ಗೋವುಗಳಿಗೆ ನ್ಯಾಯಯುತವಾಗಿ ಮೇವನ್ನೂ ಕೊಡಲಿಲ್ಲ. ಮೇವು ಪೂರೈಕೆದಾರರ ಹಣ ಬಿಡುಗಡೆಗೆ 8.5% ಕಮಿಷನ್ ಕೇಳಿದ ಬಿಜೆಪಿಯ ನಡೆ ಗೋಭಕ್ಷಣೆಗಿಂತ ಭಿನ್ನವೇನಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕರ್ನಾಟಕಕ್ಕೆ ಭಾರತ್ ಮಾಲಾ (Bharat Mala) ಯೋಜನೆ ಮೂಲಕ 55 ಸಾವಿರ ಕೋಟಿ ಅನುದಾನ ಕೊಡುವ ಉದ್ದೇಶವಿದೆ ಎಂದು ಕೇಂದ್ರ ಸಚಿವರಾದ ಸ್ಮೃತಿ ಇರಾನಿ (Smriti Irani) ಹೇಳಿದ್ದಾರೆ.
ರಾಜ್ಯ ಬಿಜೆಪಿ (BJP) ಘಟಕದಿಂದ ನಡೆದ ಜನಸ್ಪಂದನಾ (Janaspandana) ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ, ಭೋಗನಂದೀಶ್ವರ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿಶ್ವೇಶ್ವರಯ್ಯ, ಪ್ರವೀಣ್ ನೆಟ್ಟಾರು ಮುಂತಾದವರನ್ನು ಸ್ಮರಿಸಿದರು. ಈ ಸಮಾವೇಶ ಈ ಪುಣ್ಯ ಭೂಮಿಯಲ್ಲಿ ನಡೆಯುತ್ತಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ಏಕೆಂದರೆ ಇದು ಸಂಗ್ರಾಮದ ವೇದಿಕೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರಿಗೆ ತಾಕತ್, ಧಮ್ ಇದ್ದರೇ ನಮ್ಮನ್ನು ತಡೆಯಲಿ: ಬೊಮ್ಮಾಯಿ ಸವಾಲು
ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ ಸಚಿವೆ, ಕಾಂಗ್ರೆಸ್ ಪಕ್ಷಪಾತದ ಸರ್ಕಾರ ಆಗಿತ್ತು. ಹಾಗಾಗಿ ಕಾಂಗ್ರೆಸ್ ಇದ್ದಾಗ ಜನರಿಗೆ ತಾರತಮ್ಯ ಮಾಡಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಕರ್ನಾಟಕಕ್ಕೆ (Karnataka) ಹಣಕಾಸು ಆಯೋಗದ ಮೂಲಕ ಕೊಟ್ಟಿದ್ದು ಕೇವಲ 2 ಸಾವಿರ ಕೋಟಿ. ಆದರೆ ಬಿಜೆಪಿ ಡಬಲ್ ಇಂಜಿನ್ ಸರ್ಕಾರ. ನಮ್ಮ ಕೇಂದ್ರ ಸರ್ಕಾರ (Central Government) ಈಗ ರಾಜ್ಯಕ್ಕೆ ಹಣಕಾಸು ಆಯೋಗದಿಂದ 5 ಸಾವಿರ ಕೋಟಿ ಅನುದಾನ ಕೊಟ್ಟಿದೆ. ಕರ್ನಾಟಕದಲ್ಲಿ ರಸ್ತೆ ಅಭಿವೃದ್ಧಿಗೆ 9,700 ಕೋಟಿ ರೂ. ಅನುದಾನ ಕೊಟ್ಟಿದೆ. ಪ್ರಧಾನಿ ಮೋದಿ (NarendraModi) ಸಬರ್ಬನ್ ರೈಲು (Railway) ಯೋಜನೆಗೆ 15 ಸಾವಿರ ಕೋಟಿ ಅನುದಾನ ಕೊಟ್ಟಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಹೆದ್ದಾರಿಗಳ ಅಭಿವೃದ್ಧಿಗಾಗಿಯೇ 37 ಸಾವಿರ ಕೋಟಿ ರೂ. ಕೊಡಲಾಗಿದೆ. ಮುಂದೆಯೂ ಭಾರತ್ ಮಾಲಾ ಯೋಜನೆ ಮೂಲಕ 55 ಸಾವಿರ ಕೋಟಿ ಕೊಡುವ ಉದ್ದೇಶ ಇದೆ ಎಂದು ಹೇಳಿದ್ದಾರೆ.
ರೇಷ್ಮೆ ಉತ್ಪಾದನೆಯಲ್ಲಿ ಹೆಚ್ಚಳ: ರೇಷ್ಮೆ ವಲಯಕ್ಕೆ ಕೇಂದ್ರ ಕೊಟ್ಟ ಪ್ರೋತ್ಸಾಹದಿಂದ ರೇಷ್ಮೆ ಉತ್ಪಾದನೆ ಹೆಚ್ಚಳವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಕರ್ನಾಟಕಕ್ಕೆ ತಾರತಮ್ಯ ಮಾಡಲಾಗಿತ್ತು ಎಂದಿದ್ದಾರೆ.
ಭಾರತ್ ಜೋಡೋ ಭಾರತ ಮುರಿಯುವ ಯಾತ್ರೆ: ರಾಹುಲ್ ಗಾಂಧಿ ಭಾರತ್ ಜೋಡಿಸ್ತಿಲ್ಲ, ಭಾರತವನ್ನು ಮುರಿಯುವ ಯಾತ್ರೆ ಮಾಡ್ತಿದ್ದಾರೆ. ಯಾತ್ರೆಯಲ್ಲಿ ಸರ್ದಾರ್ ಪಟೇಲ್‌ರ ಭಾವಚಿತ್ರವನ್ನೂ ಹಾಕಿಲ್ಲ. ಕನ್ಯಾಕುಮಾರಿಯಿಂದ ಭಾರತ್ ಜೋಡೋ ಮಾಡಿದ್ರು, ವಿವೇಕಾನಂದರಿಗೆ ಕನಿಷ್ಠ ಸ್ಮರಿಸುವ ಕೆಲಸವನ್ನೂ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರತದ ವಿರುದ್ಧ ಘೋಷಣೆ ಕೂಗಿದವರನ್ನ ಭಾರತ್ ಜೋಡೋ (Bharaj Jodo) ಯಾತ್ರೆಯಲ್ಲಿ ಸೇರಿಸಿಕೊಂಡಿದ್ದಾರೆ. ಇದು ರಾಷ್ಟçದ್ರೋಹಕ್ಕೆ ಸಮನಾದ ಕೆಲಸ. ಭಾರತ ವಿಭಜಿಸುವ ಹೇಳಿಕೆ ಕೊಟ್ಟವರಿಗೆ ಬೆಂಬಲ ಕೊಡೋದು ರಾಷ್ಟ್ರದ್ರೋಹ. ಇದನ್ನು ಕರ್ನಾಟಕದ ಕಾಂಗ್ರೆಸ್ ಕಾರ್ಯಕರ್ತರು ಅವರ ನಾಯಕರಿಗೆ ಪ್ರಶ್ನಿಸಬೇಕಿದೆ ಎಂದು ಕುಟುಕಿದ್ದಾರೆ.
ಆತಂಕವಾದಿ ಯಾಕೂಬ್ ಮೈಮುನ್‌ನ ಸಮಾಧಿಯನ್ನು ಕಾಂಗ್ರೆಸ್ ಸರ್ಕಾರ ಇರೋ ರಾಜ್ಯದಲ್ಲಿ ಸೌಂದರ್ಯೀಕರಣ ಮಾಡಲಾಗಿದೆ. ಇದನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ (Rahul Gandhi) ಧೈರ್ಯವಿಲ್ಲ. ಭಯೋತ್ಪಾದನೆ ವಿರೋಧಿಸೋರಾಗಿದ್ದರೆ ರಾಹುಲ್ ಗಾಂಧಿ ಇದನ್ನ ಯಾಕೆ ವಿರೋಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ: ಗಾಂಧಿ ಕುಟುಂಬದ ಚಮಚಾಗಳು ಮಹಿಳಾ ರಾಷ್ಟ್ರಪತಿ ವಿರುದ್ಧ ಟೀಕೆ, ನಿಂದನೆ ಮಾಡಿದ್ದರು. ಆದರೆ ಮಹಿಳೆಯೊಬ್ಬರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ ಎಂದು ಬೀಗಿದ್ದಾರೆ.
ಚೂರಿ ಹಾಕಿದವರು ರಣ ಹೇಡಿಗಳು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬೆನ್ನಿಗೆ ಚೂರಿಗೆ ಹಾಕಿದವರು ರಣ ಹೇಡಿಗಳು. ಪ್ರವೀಣ್ ಅವರನ್ನ ಸಾಯಿಸಿದವರ ಉದ್ದೇಶ ಆತಂಕ ಸೃಷ್ಟಿಸೋದೇ ಆಗಿದೆ ಎಂದು ಕಿಡಿಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ಬಿಜೆಪಿ(BJP) ನೇತೃತ್ವದಲ್ಲಿ ನಡೆದ ಜನಸ್ಪಂದನ(Janaspandana) ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧನೋರ್ವ ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಮೃತರನ್ನು ತುಮಕೂರು(Tumkur) ಜಿಲ್ಲೆ ತೊಟ್ಟಿಲಕೆರೆ ಗ್ರಾಮದ ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸರ್ಕಾರದ 3 ವರ್ಷದ ಸಾಧನೆ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಒಂದು ವರ್ಷ ನಡೆಸಿದ ಆಡಳಿತ ಬಗ್ಗೆ ರಾಜ್ಯದ ಜನತೆ ಮುಂದಿಡುವ ಸಮಾವೇಶವಾದ ಜನಸ್ಪಂದನ ಕಾರ್ಯಕ್ರಮ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್ಸಿನವರಿಗೆ ತಾಕತ್, ಧಮ್ ಇದ್ದರೇ ನಮ್ಮನ್ನು ತಡೆಯಲಿ: ಬೊಮ್ಮಾಯಿ ಸವಾಲು
ಈ ಕಾರ್ಯಕ್ರಮಕ್ಕೆ ಸಿದ್ದಲಿಂಗಪ್ಪ ಬಂದಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಜೊತೆಯಲ್ಲಿದ್ದವರು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮಾರ್ಗಮಧ್ಯದಲ್ಲಿಯೇ ಸಾವನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ: ಲಂಚದ ಹಣದಲ್ಲೇ ಬಿಜೆಪಿಯವರು ಜನಸ್ಪಂದನಾ (Janaspandana) ಕಾರ್ಯಕ್ರಮ ಮಾಡ್ತಿದ್ದಾರೆ, ಸಂಕಷ್ಟದಲ್ಲಿರೋ ಜನರಿಗೆ ಸ್ಪಂದಿಸೋದು ಬಿಟ್ಟು ಡ್ಯಾನ್ಸ್ ಮಾಡ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಬಿಜೆಪಿ (BJP) ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಲಂಚದ ಹಣದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡ್ತಿದಾರೆ. ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರೋ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ (Dance) ಮಾಡ್ತಿದಾರೆ ಎಂದು ಕಿಡಿಕಾರಿದ್ದಾರೆ.
ಉಮೇಶ ಕತ್ತಿಯವರು ಉತ್ತರ ಕರ್ನಾಟಕದ (Uttar Karnataka) ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ. ಅವರ ನಿಧನದ ಹಿನ್ನೆಲೆಯಲ್ಲಿ ಒಂದು ಕಡೆ ಶೋಕಾಚರಣೆ ಮಾಡ್ತೀವಿ ಅಂತಾರೆ. ಮತ್ತೊಂದು ಕಡೆ ಡಾನ್ಸ್ ಮಾಡ್ತಾರೆ. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ, ದುಡ್ಡು ಹೊಡೆಯೋದ್ರಲ್ಲಿ ಮಾತ್ರ ಕಾಳಜಿ ಇದೆ. ಪಿಎಸ್‌ಐ ಹಗರಣದಲ್ಲಿ ಶಾಸಕ (MLA) ಬಸವರಾಜ ದಡೇಸಗೂರು ಹಣ ಪಡೆದ ಬಗ್ಗೆ ತಾವೇ ಒಪ್ಪಿಕೊಂಡಿದ್ದಾರೆ. ಆತನ ವಿರುದ್ಧ ಎಫ್‌ಐಆರ್ (FIR) ದಾಖಲಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
Mr. @BSBommai, where is the promised Bengaluru transportation action plan prepared by an expert committee.
To this day, the city has been plagued with traffic problems and submerged roads.
ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿದ್ರೆ ನೋಟಿಸ್ ಕೊಡ್ತಾರೆ ಆದ್ರೆ ಅವರದ್ದೇ ಪಕ್ಷದ ಶಾಸಕ ತಾನೇ ತಪ್ಪು ಮಾಡಿರೋದಾಗಿ ಒಪ್ಪಿಕೊಂಡಿದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರು ಪ್ರತಿಯೊಂದು ವಿಷಯದಲ್ಲೂ ಸೇಡಿನ ರಾಜಕೀಯ ಮಾಡ್ತಿದಾರೆ. ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನಾಚರಣೆ ಪ್ರತ್ಯುತ್ತರವಾಗಿ ಬಿಜೆಪಿಯವರು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ. ನನ್ನ ಜನ್ಮದಿನಾಚರಣೆಗೆ ಜನ ತಾವಾಗೇ ಬಂದಿದ್ದರು. ಆದ್ರೆ ಜನಸ್ಪಂದನಕ್ಕೆ ಬಿಜೆಪಿಯವರು ದುಡ್ಡು ಕೊಟ್ಟು ಕರೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ದೊಡ್ಡಬಳ್ಳಾಪುರ: ಪ್ರಧಾನಿಯಾಗಿ ನರೇಂದ್ರ ಮೋದಿ(Narendra Modi) ಎಲ್ಲಿಯವರೆಗೆ ಇರುತ್ತಾರೋ ಅಲ್ಲಿಯವರೆಗೆ ಕರ್ನಾಟಕದಲ್ಲಿ ಕಾಂಗ್ರೆಸ್(Congress) ಪಕ್ಷವನ್ನು ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಇದು ನಮ್ಮ ಶಪಥ ಎಂದು ಮಾಜಿ ಸಿಎಂ ಯಡಿಯೂರಪ್ಪ(Yediyurappa) ಹೇಳಿದ್ದಾರೆ.
ಜನಸ್ಪಂದನ ಕಾರ್ಯಕ್ರಮದಲ್ಲಿ(Janaspandana Program) ಮಾತನಾಡಿದ ಅವರು, ಈ ಭಾಗದಲ್ಲಿ ನಮ್ಮ ಶಕ್ತಿ ಬೆಳೆದಿರಲಿಲ್ಲ. ಇಂಥ ಕಡೆ ಸುಧಾಕರ್(Sudhakar) ದೊಡ್ಡ ಸಮಾವೇಶ ಮಾಡಿ ನಮ್ಮ ಶಕ್ತಿಯನ್ನು ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಈ ರೀತಿಯ ಸಮಾವೇಶ ಮಾಡಿ ಪಕ್ಷದ ಶಕ್ತಿಯನ್ನು ತೋರಿಸುತ್ತೇವೆ ಎಂದರು. ಇದನ್ನೂ ಓದಿ: ಡಬಲ್ ಸ್ಟೇರಿಂಗ್, ಡಬಲ್ ಡೋರ್ ಸರ್ಕಾರ ಆಗುತ್ತೆ – ಡಿಕೆಶಿ, ಸಿದ್ದು ಕಾಲೆಳೆದ ಸುಧಾಕರ್
ಮುಂದಿನ ಸಲ ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗುತ್ತಿದೆ. ಬೆಂಗಳೂರಿನಲ್ಲಿ ಬೋಟ್‌ನಲ್ಲಿ ಓಡಾಡುವ ಪರಿಸ್ಥಿತಿ ಇದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಬೋಟ್‌ನಲ್ಲಿ ಓಡಾಡೋವ ಸ್ಥಿತಿ ಇದೆ ಅಂದರೆ ಎಷ್ಟು ಮಳೆ ಬಂದಿದೆ ಅಂತ ನಿಮಗೆ ಗೊತ್ತಾಗಿರಬಹುದು. ನಿಮ್ಮ ಟೀಕೆಗಳಿಗೆ ಸದನದಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಹೇಳಿದರು.
ಸಮಾವೇಶದಲ್ಲಿ ಮೂರು, ನಾಲ್ಕು ಲಕ್ಷ ಜನ ಬಂದಿದ್ದಾರೆ. ಹೊರಗಡೆ ಭಾರೀ ಸಂಖ್ಯೆಯಲ್ಲಿ ವಾಹನಗಳು ಇರುವುದನ್ನು ನಾನು ನೋಡಿದೆ. ಈ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಿ ಹೊರಬಂದ ಪಿಎಸ್‍ಐ (PSI) ಹಗರಣವೇ ನಿಮ್ಮ ಸಾಧನೆಯೇ ಬಿಜೆಪಿ? ಸಿಎಂ ಬೊಮ್ಮಾಯಿ (Basavarj Bommai) ಅವರೇ, ಪಿಎಸ್‍ಐ ಅಕ್ರಮದಲ್ಲಿ ನಿಮ್ಮ ಸಂಪುಟ ಸಚಿವರು, ಶಾಸಕರ ಕೈವಾಡ ಬಯಲಾದರೂ ಕಣ್ಮುಚ್ಚಿ ಕುಳಿತಿರುವುದನ್ನು, 54,000 ಯುವಕರಿಗೆ ಮೋಸ ಮಾಡಿದ್ದನ್ನು ಸಾಧನೆ ಎಂದು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಚಾಟಿ ಬೀಸಿದೆ.
ಟ್ವೀಟ್‍ನಲ್ಲಿ ಏನಿದೆ?:
ಬಿಜೆಪಿ ಆಡಳಿತದಲ್ಲಿ ಹೊರಬಂದ ಪಿಎಸ್‍ಐ ಹಗರಣವೇ ನಿಮ್ಮ ಸಾಧನೆಯೇ ಬಿಜೆಪಿ? ಸಿಎಂ ಬೊಮ್ಮಾಯಿ ಅವರೇ, ಪಿಎಸ್‍ಐ ಅಕ್ರಮದಲ್ಲಿ ನಿಮ್ಮ ಸಂಪುಟ ಸಚಿವರು, ಶಾಸಕರ ಕೈವಾಡ ಬಯಲಾದರೂ ಕಣ್ಮುಚ್ಚಿ ಕುಳಿತಿರುವುದನ್ನು, 54,000 ಯುವಕರಿಗೆ ಮೋಸ ಮಾಡಿದ್ದನ್ನು ಸಾಧನೆ ಎಂದು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ? ಬಿಜೆಪಿ ಭ್ರಷ್ಟೋತ್ಸವ. ರಾಜ್ಯದ 54 ಸಾವಿರ ಪಿಎಸ್‍ಐ ಅಭ್ಯರ್ಥಿಗಳಿಗೆ ವಂಚಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರದ್ದು ಯಾವ ಸಾಧನೆ? ತಮ್ಮ ಕಛೇರಿಯೇ ಅಕ್ರಮದ ಅಡ್ಡೆಯಾಗಿದ್ದರೂ ಸದನದಲ್ಲಿ ಸುಳ್ಳು ಹೇಳಿ ನಾಡಿನ ದಿಕ್ಕು ತಪ್ಪಿಸಲು ಯತ್ನಿಸಿದ ಗೃಹಸಚಿವರದ್ದು ‘ಜನಸ್ಪಂದನೆ’ಯ ಸಾಧನೆಯೇ? ಈ ವಂಚನೆಯನ್ನು ಸಮಾವೇಶದಲ್ಲಿ ಹೇಳುವಿರಾ? ಇದನ್ನೂ ಓದಿ: ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್
ಒಂದೆಡೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದು ಪಾರದರ್ಶಕ ತನಿಖೆ ಎನ್ನುತ್ತಾರೆ ಸಿಎಂ. ಇನ್ನೊಂದೆಡೆ ಪಿಎಸ್‍ಐ ಅಕ್ರಮದಲ್ಲಿ ಸಚಿವ ಅಶ್ವಥ್‍ನಾರಾಯಣ ತಮ್ಮ ಸಹೋದರರೊಂದಿಗೆ ಸೇರಿ ಅಕ್ರಮ ನಡೆಸಿದ ಸಂಗತಿ ಬೆಳಕಿಗೆ ಬಂದರೂ ಸಚಿವರ ತನಿಖೆ ಇಲ್ಲ. ಪ್ರಕರಣ ಮುಚ್ಚಿಹಾಕಲು ಯತ್ನಿಸುವುದೇ ನಿಮ್ಮ ಸಾಧನೆಯೇ? ರಾಜ್ಯದ ಇತಿಹಾಸದಲ್ಲೇ ಎಡಿಜಿಪಿಯೊಬ್ಬರು ಅಕ್ರಮದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದು ಇದೇ ಮೊದಲು. ಉನ್ನತ ಮಟ್ಟದ ಅಧಿಕಾರಿಗಳು ಸರ್ಕಾರ ಹಾಗೂ ಮಂತ್ರಿಗಳು ಸಹಕಾರವಿಲ್ಲದೆ ಅಕ್ರಮವನ್ನು ನಡೆಸಲು ಸಾಧ್ಯವೇ ಇಲ್ಲ.
ಒಂದೆಡೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದು ಪಾರದರ್ಶಕ ತನಿಖೆ ಎನ್ನುತ್ತಾರೆ ಸಿಎಂ.
ಇನ್ನೊಂದೆಡೆ PSI ಅಕ್ರಮದಲ್ಲಿ ಸಚಿವ @drashwathcn ತಮ್ಮ ಸಹೋದರರೊಂದಿಗೆ ಸೇರಿ ಅಕ್ರಮ ನಡೆಸಿದ ಸಂಗತಿ ಬೆಳಕಿಗೆ ಬಂದರೂ ಸಚಿವರ ತನಿಖೆ ಇಲ್ಲ.
ಮಂತ್ರಿಗಳ ವಿಚಾರಣೆ ನಡೆಸದೆ ಭ್ರಷ್ಟರನ್ನು ರಕ್ಷಿಸಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಪಿಎಸ್‍ಐ ಹಗರಣದಲ್ಲೂ ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಮುಂದುವರಿದಿದೆ. ಸ್ವತಃ ಬಿಜೆಪಿ ಶಾಸಕ ಯತ್ನಾಳ್ ಪರೋಕ್ಷವಾಗಿ ಈ ಸಂಗತಿಯನ್ನು ಬಹಿರಂಗಪಡಿಸಿದರೂ ತನಿಖೆಯಾಗುವುದಿಲ್ಲ. ಅವರಿಗೆ ತಮ್ಮ ತಂದೆಯ ಆಡಳಿತದಲ್ಲಿ ಸಿಕ್ಕ “ಸೂಪರ್ ಸಿಎಂ” ಹುದ್ದೆ ನಿಮ್ಮ ಅವಧಿಯಲ್ಲೂ ಮುಂದುವರಿದಿದೆಯೇ ಬೊಮ್ಮಾಯಿ ಅವರೇ? ರಾಜ್ಯದ ಜನತೆಗೆ ಯಾವ ಸಾಧನೆ, ಯೋಜನೆ, ಸ್ಪಂದನೆ ಮಾದಿದ್ದರೆಂದು ಸರ್ಕಾರ ಸಮಾವೇಶ ಮಾಡುತ್ತಿದೆ? ಸರ್ಕಾರ ಕರ್ನಾಟಕದ ಜನತೆಗೆ, ಕನ್ನಡ ನಾಡುನುಡಿಗೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಿದೆ? ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ನಾಡಿನ ಸಾಹಿತಿಗಳಿಗೆ ಅವಮಾನಿಸಿದ್ದೇ ನಿಮ್ಮ ಸಾಧನೆಯೇ ಬೊಮ್ಮಾಯಿ ಅವರೇ? ಬಿಜೆಪಿ ಅವರ ಒಂದು ವರ್ಷದ ವಾರ್ಷಿಕೋತ್ಸವಕ್ಕೆ ಸಜ್ಜಾಗಿರುವ ಸರ್ಕಾರ ತಮ್ಮ ಸಾಧನೆ ಏನು ಎಂದು ನಾಡಿನ ಜನತೆಗೆ ಉತ್ತರಿಸಬೇಕು. ಇದನ್ನೂ ಓದಿ: ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ
ರಾಜ್ಯದ 54 ಸಾವಿರ PSI ಅಭ್ಯರ್ಥಿಗಳಿಗೆ ವಂಚಿಸಿದ ಗೃಹ ಸಚಿವ @JnanendraAraga ಅವರದ್ದು ಯಾವ ಸಾಧನೆ?
ತಮ್ಮ ಕಛೇರಿಯೇ ಅಕ್ರಮದ ಅಡ್ಡೆಯಾಗಿದ್ದರೂ ಸದನದಲ್ಲಿ ಸುಳ್ಳು ಹೇಳಿ ನಾಡಿನ ದಿಕ್ಕು ತಪ್ಪಿಸಲು ಯತ್ನಿಸಿದ ಗೃಹಸಚಿವರದ್ದು 'ಜನಸ್ಪಂದನೆ'ಯ ಸಾಧನೆಯೇ @BJP4Karnataka?
ಪಠ್ಯಪುಸ್ತಕಗಳಲ್ಲಿ ಅವಾಂತರ ಸೃಷ್ಟಿಸಿದ ಸರ್ಕಾರ ಇನ್ನೂ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಲಿಲ್ಲ. ದೇಶದ್ರೋಹಿಗಳನ್ನು ದೇಶಭಕ್ತರನ್ನಾಗಿ ಬಿಂಬಿಸಿದ್ದೇ ಸಾಧನೆಯೇ? ಸಾಹಿತ್ಯವನ್ನೇ ಅರಿಯದ, ಸುಳ್ಳು ಹೇಳುವುದನ್ನು, ಇತಿಹಾಸ ತಿರುಚುವುದನ್ನು ಕಾಯಕ ಮಾಡಿಕೊಂಡಿರುವ ಬಿಜೆಪಿಯ ಬಾಡಿಗೆ ಭಾಷಣಕಾರನೂ ಮಕ್ಕಳ ಭವಿಷ್ಯ ರೂಪಿಸುವ ಪಠ್ಯದಲ್ಲಿ ಜಾಗ ಪಡೆದದ್ದಕ್ಕಿಂತ ದುರಂತ ಬೇರೊಂದಿಲ್ಲ. ಪಠ್ಯ ಪುಸ್ತಕ ರಚನೆಗೆ ಅಪ್ರಬುದ್ಧರನ್ನು ಕೂರಿಸಿ ಅವಾಂತರ ಎಬ್ಬಿಸಿದ್ದು ಸರ್ಕಾರದ ಮಹಾ ಸಾಧನೆಗಳಲ್ಲೊಂದು! ಮಹಿಳೆಯರಿಗೆ, ಶೋಷಿತರಿಗೆ ಅಕ್ಷರದ ದಾಸೋಹ ನಡೆಸಿದ, “ಅಕ್ಷರದವ್ವ” ಎಂದೇ ಖ್ಯಾತರಾದ ಸಾವಿತ್ರಿ ಬಾ ಪುಲೆ ಅವರ ಪಠ್ಯವನ್ನು ಕೈಬಿಟ್ಟ ಸರ್ಕಾರ ಪಠ್ಯಪುಸ್ತಕಗಳಲ್ಲಿ ಬುಲ್ ಬುಲ್ ಹಕ್ಕಿ ಹಾರಿಸುತ್ತಿದೆ! ಶಿಕ್ಷಣ ವಿರೋಧಿಯಾಗಿ ವರ್ತಿಸಿದ್ದು, ಮಹನೀಯರಿಗೆ ಅವಮಾನಿಸಿದ್ದು ನಿಮ್ಮ ಒಂದು ವರ್ಷದ ಸಾಧನೆಯೇ ಬೊಮ್ಮಾಯಿ ಅವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Live Tv
[brid partner=56869869 player=32851 video=960834 autoplay=true]