Tag: Janata Lockdown

  • ಮೇ 12ರ ಬಳಿಕ ಲಾಕ್‍ಡೌನ್ ವಿಸ್ತರಣೆಗೆ ಸರ್ಕಾರದ ಚಿಂತನೆ

    ಮೇ 12ರ ಬಳಿಕ ಲಾಕ್‍ಡೌನ್ ವಿಸ್ತರಣೆಗೆ ಸರ್ಕಾರದ ಚಿಂತನೆ

    ಬೆಂಗಳೂರು: ಮೇ 12ರ ಬಳಿಕ ಮತ್ತೊಂದು ವಾರ ಜನತಾ ಲಾಕ್‍ಡೌನ್ ವಿಸ್ತರಣೆ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

    ಕೊರೊನಾ ವೈರಸ್ ವೇಗ ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿರೋದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಸದ್ಯದಲ್ಲೇ ಸಚಿವರು ಮತ್ತು ತಜ್ಞರ ಜೊತೆ ಸಿಎಂ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ನಿಯಂತ್ರಣಕ್ಕೆ ಸಿಗದಿದ್ರೆ ಮೇ 19ರವರೆಗೆ ಜನತಾ ಲಾಕ್‍ಡೌನ್ ವಿಸ್ತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ರಾಜ್ಯದಲ್ಲಿ ಏಪ್ರಿಲ್ 27 ರಾತ್ರಿ 9 ಗಂಟೆಯಿಂದ ಜನತಾ ಲಾಕ್‍ಡೌನ್ ಆರಂಭವಾಗಿದ್ದು, ಬೆಳಗ್ಗೆ 6 ರಿಂದ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ಕಲ್ಪಿಸಲಾಗಿದೆ.

    ಬುಧವಾರ ರಾಜ್ಯದಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ವರದಿಯಾಗಿದೆ. ಬುಧವಾರ 39,047 ಹೊಸ ಪ್ರಕರಣಗಳು ವರದಿಯಾಗಿತ್ತು. 229 ಜನರು ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.22.70ಕ್ಕೇರಿಕೆ ಆಗಿದ್ದು ರಾಜ್ಯ ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಇತ್ತ ಸಾವಿನ ಪ್ರಮಾಣವೂ ಏರಿಕೆಯಾಗುತ್ತಿದೆ. ಬುಧವಾರ ಬೆಂಗಳೂರು ನಗರದಲ್ಲಿಯೇ 22 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು. ಇಂದು ಸಹ ಬೆಂಗಳೂರಿನಲ್ಲಿ 20 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ.

  • ಎರಡನೇ ದಿನವೂ ಕೊಡಗು ಸ್ತಬ್ಧ – ಪೊಲೀಸರಿಗೆ ಕೋವಿಡ್ ಟೆಸ್ಟ್

    ಎರಡನೇ ದಿನವೂ ಕೊಡಗು ಸ್ತಬ್ಧ – ಪೊಲೀಸರಿಗೆ ಕೋವಿಡ್ ಟೆಸ್ಟ್

    ಮಡಿಕೇರಿ: ಎರಡನೇ ದಿನದ ಜನತಾ ಲಾಕ್‍ಡೌನ್‍ಗೆ ಕೊಡಗು ಸ್ತಬ್ಧವಾಗಿದ್ದು, ನಗರದ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ.

    ಎರಡನೇ ದಿನದ ಜನತಾ ಲಾಕ್‍ಡೌನ್‍ಗೆ ರಾಜ್ಯದ ಪುಟ್ಟ ಜಿಲ್ಲೆ ಕೊಡಗಿನ ಜನರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮಂಜಿನ ನಗರಿ ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ 5 ತಾಲೂಕುಗಳು ಸಂಪೂರ್ಣ ಸ್ತಬ್ಧವಾಗಿತ್ತು. ಬೆಳಗ್ಗೆ 10 ಗಂಟೆಯವರೆಗೆ ಕೆಲವೊಂದು ಅಗತ್ಯ ವಸ್ತುಗಳಿಗಾಗಿ ಕೆಲ ಜನ ಓಡಾಟ ನಡೆಸಿದರು. ಬಳಿಕ 10:30 ರ ಒಳಗೆ ಜನರು ಮನೆಯೊಳಗೆ ಲಾಕ್ ಆದರು.

    ಕೊಡಗಿನ ಚೆಕ್‍ಪೋಸ್ಟ್ ಗಳಲ್ಲೂ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಅಲ್ಲದೆ ಹೆದ್ದಾರಿಗೆ ಬ್ಯಾರಿಕೇಡ್ ಹಾಕಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮಾಡಲಾಗಿದೆ. ಅನಗತ್ಯ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿದು ಕೊಡಗು ಮೈಸೂರು ಗಡಿಯಲ್ಲಿ ಪೊಲೀಸರು ಅಲರ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕುಶಾಲನಗರದ ಚೆಕ್ ಪೋಸ್ಟ್ ನಲ್ಲಿ ಜಿಲ್ಲೆಯ ಒಳಗೆ ಮತ್ತು ಗಡಿಯಲ್ಲೂ ವಾಹನಗಳ ಸಂಚಾರಕ್ಕೆ ಬ್ರೇಕ್ ಜಿಲ್ಲೆಯಾದ್ಯಂತ ವಾಹನ ಜನ ಸಂಚಾರ ಸ್ತಬ್ಧವಾಗಿದೆ.

    ಇಂದು ಮಡಿಕೇರಿ ನಗರದ ಪೊಲೀಸ್ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದಿನ ನಿತ್ಯ ಸಾರ್ವಜನಿಕರ ಬದುಕಿನಲ್ಲಿ ಹೆಚ್ಚು ಕೆಲಸ ಮಾಡುವ ಪೊಲೀಸರು ಮನೆ ಕುಟುಂಬದ ಸದಸ್ಯರನ್ನು ಬಿಟ್ಟು ರಸ್ತೆ ಗಡಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೊರೊನಾ ವೈರಸ್ ಹರಡುವ ಭೀತಿಯಿಂದ ಇದೀಗ ಪೊಲೀಸರಿಗೆ ಕೊರೊನಾ ಟೆಸ್ಟ್ ಮಾಡಿಸಲು ಮುಂದಾಗಿದ್ದಾರೆ. ಇಂದು ನಗರದ ಒಟ್ಟು 120 ಪೊಲೀಸರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಗಾಗಿ ಪೊಲೀಸ್ ಸಿಬ್ಬಂದಿ ಕಾಯುತ್ತಿದ್ದಾರೆ.

  • ಜನತಾ ಲಾಕ್‍ಡೌನ್ – ಸ್ವಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರ ಸಾವು

    ಜನತಾ ಲಾಕ್‍ಡೌನ್ – ಸ್ವಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರ ಸಾವು

    ಬಳ್ಳಾರಿ: ಜನತಾ ಲಾಕ್‍ಡೌನ್ ಹಿನ್ನೆಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಅಪಘಾತ ಸಂಭವಿಸಿದೆ.

    ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿದ್ದ ಭೀಮರಾವ್ ಬೆಳ್ಳೂರು (52), ಅವರ ಪುತ್ರ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬಸವರಾಜ್ (30), ಟೆಕ್ಕಿ ಸುನಿಲ್ ಪಾಟೀಲ (30), ಚಾಲಕ ಕೊರಡಂಪಳ್ಳಿಯ ರೇವಣಸಿದ್ದ ಕೊರಡಂಪಳ್ಳಿ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಿನ ಜಾವ ಸುಮಾರು 1.45ಕ್ಕೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.

    ಮೃತರು ಚಿಂಚೋಳಿ ತಾಲೂಕಿನ ಚಿಮ್ಮಾ ಈದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.