Tag: jani master

  • ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

    ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

    ಟಾಲಿವುಡ್‌ನ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ (Jani Master) ಲೈಂಗಿಕ ದೌರ್ಜನ್ಯದ ಆರೋಪವನ್ನ ಹೊತ್ತು ಜೈಲುವಾಸ ಅನುಭವಿಸಿ ಬಂದಿದ್ದಾರೆ. ಜಾನಿ ಮಾಸ್ಟರ್ ಜೊತೆಗಿನ ಫೋಟೋವನ್ನ ಹಂಚಿಕೊಂಡಿರುವ ವಿಘ್ನೇಶ್ ತೀವ್ರ ಚರ್ಚೆಗೆ ಕಾರಣವಾಗಿದ್ದಾರೆ. ವಿಘ್ನೇಶ್ (Vignesh Shivan) ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಜಾನಿ ಮಾಸ್ಟರ್ ಕೆಲಸ ಮಾಡುತ್ತಿದ್ದಾರಂತೆ ಹೀಗಾಗಿ ಈ ಫೋಟೋ ನೋಡಿ ಜಾಲತಾಣದಲ್ಲಿ ಸಾಕಷ್ಟು ಕಮೆಂಟ್ಸ್ ಮಾಡ್ತಿದ್ದಾರೆ.

    ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರ ಎಸಗಿದ್ದರು ಎನ್ನಲಾದ ಆರೋಪದ ಮೇಲೆ ಜಾನಿ ಮಾಸ್ಟರ್ ಜೈಲು ಸೇರಿದ್ದರು. ಬಳಿಕ ಜಾಮೀನು ಮೇಲೆ ಹೊರ ಬಂದಿದ್ದಾರೆ. ಅವರ ಜೊತೆಗೆ ಸಿನಿಮಾ ಮಾಡುತ್ತಿರುವ ಬಗ್ಗೆ ಅಪಾರ ಆಕ್ರೋಶ ವ್ಯಕ್ತವಾಗುತ್ತಿದೆ. ಸಿನಿಮಾಗೆ ನಿರ್ದೇಶಕ ವಿಘ್ನೇಶ್ ಆದ್ರೆ, ನಯನತಾರಾ (Nayanthara) ನಿರ್ಮಾಪಕಿಯಾಗಿದ್ದಾರೆ. ಹೀಗಾಗಿ ಇಬ್ಬರಿಗೂ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.  ಇದನ್ನೂ ಓದಿ: ಕಾರ್ತಿಕ್ ಜೊತೆ ಮತ್ತೆ ಸಿಕ್ಕಿಬಿದ್ದ ಶ್ರೀಲೀಲಾ!

    ಜಾನಿ ಮಾಸ್ಟರ್ ಕೇವಲ ತೆಲುಗು ಮಾತ್ರವಲ್ಲದೇ ತಮಿಳು, ಕನ್ನಡ ಹಾಗೂ ಹಿಂದಿ ಭಾಷೆಯ ಸಿನಿಮಾದ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಕನ್ನಡದ ನಟಸಾರ್ವಭೌಮ, ಯುವರತ್ನ, ರಾಜರಥ, ವಿಕ್ರಾಂತ್ ರೋಣ, ಕಬ್ಜ ಸಿನಿಮಾದ ಹಾಡುಗಳಿಗೆ ಅದ್ಭುತ ನೃತ್ಯ ನಿರ್ದೇಶನ ಮಾಡುವ ಮೂಲಕ ಖ್ಯಾತಿ ಪಡೆದಿದ್ದಾರೆ. ಇದನ್ನೂ ಓದಿಕರ್ಣನಿಗೆ ಗ್ರೀನ್ ಸಿಗ್ನಲ್  ಭವ್ಯಾನಮ್ರತಾಕಿರಣ್ ರಾಜ್ ತ್ರಿವಳಿ ಆಟ

    ಜಾನಿ ಮಾಸ್ಟರ್ ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯದ ಆರೋಪ ಅವರ ವೃತ್ತಿ ಬದುಕಿಗೆ ಯಾವ ರೀತಿಯಾಗಿ ಡ್ಯಾಮೇಜ್ ಮಾಡುತ್ತಿದೆ ನೋಡಿ. ಅವರ ಜೊತೆಗೆ ಕೆಲಸ ಮಾಡಲು ಮುಂದಾದವರಿಗೂ ಕೂಡಾ ಟೀಕೆಗಳು ಶುರುವಾಗಿವೆ.

  • ಲೈಂಗಿಕ ದೌರ್ಜನ್ಯ ಆರೋಪ- ಜಾನಿ ಮಾಸ್ಟರ್‌ಗೆ ಜಾಮೀನು ಮಂಜೂರು

    ಲೈಂಗಿಕ ದೌರ್ಜನ್ಯ ಆರೋಪ- ಜಾನಿ ಮಾಸ್ಟರ್‌ಗೆ ಜಾಮೀನು ಮಂಜೂರು

    ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಅರೆಸ್ಟ್ ಆಗಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ಗೆ (Jani Master) ತೆಲಂಗಾಣ ಹೈಕೋರ್ಟ್ (Telangana High Court) ಇಂದು (ಅ.24) ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ:‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

    ಸಹ ಕೊರಿಯೋಗ್ರಾಫರ್ ಮೇಲೆ ಲೈಂಗಿಕ ದೌರ್ಜನ್ಯಎಸಗಿದ ಆರೋಪದ ಮೇಲೆ ಜಾನಿ ಮಾಸ್ಟರ್ ಅವರನ್ನು ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಪ್ರಕರಣದ ಸಂಬಂಧ ಇಂದು (ಅ.24) ಜಾನಿ ಮಾಸ್ಟರ್‌ಗೆ ಜಾಮೀನು ಸಿಕ್ಕಿದೆ.

    ಅಂದಹಾಗೆ, ಪುಷ್ಪ, ಕನ್ನಡದ ಯುವರತ್ನ ಸೇರಿದಂತೆ ಹಲವಾರು ಸಿನಿಮಾಗಳಿಗೆ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಸ್ಟಾರ್ ನಟರ ಸಿನಿಮಾಗಳಿಗೆ ಅವರು ಕೆಲಸ ಮಾಡಿದ್ದಾರೆ.

  • ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಬಿಗ್ ಶಾಕ್ – ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರದ್ದು

    ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಬಿಗ್ ಶಾಕ್ – ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರದ್ದು

    ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ (Jani Master) ಕೇಂದ್ರ ಸರ್ಕಾರ ದೊಡ್ಡ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (National Film Awards) ರದ್ದುಗೊಳಿಸಿದೆ.

    ಇತ್ತೀಚೆಗೆ ಜಾನಿ ಮಾಸ್ಟರ್‌ ವಿರುದ್ಧ ತಮ್ಮ ಸಹಾಯಕ ನೃತ್ಯ ಸಂಯೋಜಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದೆ. ಇದನ್ನೂ ಓದಿ: ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    2022ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿದುಬಂದಿದೆ. ತಮಿಳಿನ `ತಿರುಚಿತ್ರಂಬಲಂʼ ಚಿತ್ರದ ʻಮೇಘಂ ಕರುಕಥʼ ಗೀತೆಗಾಗಿ ಜಾನಿ ಮಾಸ್ಟರ್ ಮತ್ತು ಸತೀಶ್ ಮಾಸ್ಟರ್ ಅವರಿಗೆ ಉತ್ತಮ ನೃತ್ಯ ಸಂಯೋಜನೆ ವಿಭಾಗದಲ್ಲಿ ಜಂಟಿಯಾಗಿ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಅಕ್ಟೋಬರ್‌ 8 ರಂದು ದೆಹಲಿಯಲ್ಲಿ ಆಯೋಜನೆಯಾಗಿದೆ. ರಾಷ್ಟ್ರಪತಿಗಳು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

    ಅಕ್ಟೋಬರ್‌ 8ರ ಸಮಾರಂಭಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿವೆ. ಈ ನಡುವೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾನಿ ಮಾಸ್ಟರ್ ಜೈಲಿನಲ್ಲಿದ್ದಾರೆ. ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಇದು ಬಹಳ ಗಂಭೀರವಾದ ಪ್ರಕರಣ ಎಂದು ಸರ್ಕಾರ ಮತ್ತು ನ್ಯಾಯಾಲಯ ಪರಿಗಣಿಸಿ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

  • ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿತ್ತು. ಐಎಫ್‍ ಆರ್‍ ಆಗುತ್ತಿದ್ದಂತೆಯೇ ಜಾನಿ ಮಾಸ್ಟರ್ (Jani Master) ತಲೆಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ತಂಡ ರಚನೆ ಮಾಡಲಾಗಿತ್ತು. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಜಾನಿಯನ್ನು ಹೈದ್ರಾಬಾದ್ ಪೊಲೀಸರು ಬಂಧನ ಮಾಡಿದ್ದಾರೆ. ಈ ವಿಷ್ಯ ಗೊತ್ತಾಗುತ್ತಿದ್ದಂತೆಯೇ ಜಾನಿ ಮಾಸ್ಟರ್ ಪತ್ನಿ ಆಯೇಷಾ (Ayesha) ಪೊಲೀಸ್ ಸ್ಟೇಶನ್ ಗೆ ಬಂದು ಗಂಡನ ಬಂಧನದ ಬಗ್ಗೆ ವಿಚಾರಿಸಿದ್ದಾರೆ.  ನನ್ನ ಗಂಡನನ್ನು ನೋಡಬೇಕು ಅಂತ ಹೈಡ್ರಾಮಾ ಮಾಡಿದ್ದಾರೆ.

    ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್‌ ಅರೆಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

    ಇತ್ತೀಚೆಗಷ್ಟೇ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ (Sexual Assault) ನೀಡಿದ್ದಾರೆ ಎಂದು 21 ವರ್ಷದ ಯುವತಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅವರ ಈ ಸುದ್ದಿ ಟಾಲಿವುಡ್‌ನಲ್ಲಿ ಸಂಚಲನ ಮೂಡಿಸುತ್ತಿದೆ. ಜಾನಿ ತನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳಾ ನೃತ್ಯ ನಿರ್ದೇಶಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಯದುರ್ಗಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾನಿ ಮಾಸ್ಟರ್ ಅನೇಕ ಸ್ಟಾರ್ ಹೀರೋ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಅನೇಕ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಧೀ, ಡ್ಯಾನ್ಸ್‌ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್‌ ಈಗ ಟಾಲಿವುಡ್‌ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದಾರೆ. ಟಾಲಿವುಡ್‌ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿಯ ಅನೇಕ ಸಿನಿಮಾಗಳಿಗೆ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಇದೀಗ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿವೆ.

    ಜಾನಿ ವಿರುದ್ಧ ಕ್ರಮಕ್ಕೆ ವಾಣಿಜ್ಯ ಮಂಡಳಿ ನಿರ್ಧಾರ:

    ಜಾನಿ ಮಾಸ್ಟರ್‌ ಪೂರ್ತಿ ಹೆಸರು ಶಾಯಿಕ್‌ ಜಾನಿ ಭಾಷಾ. ಇತ್ತೀಚೆಗೆ ನಡೆದ ಎಪಿ ಚುನಾವಣೆಯಲ್ಲಿ ಜನಸೇನಾ ಪಕ್ಷದ ಸ್ಟಾರ್ ಪ್ರಚಾರಕರಾಗಿ ಜಾನಿ ಕೆಲಸ ಮಾಡಿದ್ದರು. ಆದರೆ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಜಾನಿ ಮಾಸ್ಟರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜನಸೇನಾ ಹೇಳಿಕೆ ಬಿಡುಗಡೆ ಮಾಡಿದೆ. ಮತ್ತೊಂದೆಡೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಜಾನಿ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

  • ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

    ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

    ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್ (Jani Master) ಜಾನಿ ಮಾಸ್ಟರ್‌ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಹ ಕೊರಿಯೋಗ್ರಾಫರ್‌ (Telugu choreographer) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

    ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್‌ ಅರೆಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್‌ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ

    ಯುವತಿ ದೂರಿನಲ್ಲಿ ಹೇಳಿದ್ದೇನು?
    ಇತ್ತೀಚೆಗಷ್ಟೇ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ (Sexual Assault) ನೀಡಿದ್ದಾರೆ ಎಂದು 21 ವರ್ಷದ ಯುವತಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳಲ್ಲಿ ಬ್ಯುಸಿಯಾದ ರಶ್ಮಿಕಾ ಮಂದಣ್ಣ

    ಡ್ಯಾನ್ಸ್‌ ಶೋ ಮೂಲಕ ಪರಿಚಯವಾಗಿದ್ದ ಜಾನಿ ಮಾಸ್ಟರ್‌:
    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅವರ ಈ ಸುದ್ದಿ ಟಾಲಿವುಡ್‌ನಲ್ಲಿ ಸಂಚಲನ ಮೂಡಿಸುತ್ತಿದೆ. ಜಾನಿ ತನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳಾ ನೃತ್ಯ ನಿರ್ದೇಶಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಯದುರ್ಗಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾನಿ ಮಾಸ್ಟರ್ ಅನೇಕ ಸ್ಟಾರ್ ಹೀರೋ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಅನೇಕ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಧೀ, ಡ್ಯಾನ್ಸ್‌ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್‌ ಈಗ ಟಾಲಿವುಡ್‌ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದಾರೆ. ಟಾಲಿವುಡ್‌ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿಯ ಅನೇಕ ಸಿನಿಮಾಗಳಿಗೆ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಇದೀಗ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿವೆ.

    ಜಾನಿ ವಿರುದ್ಧ ಕ್ರಮಕ್ಕೆ ವಾಣಿಜ್ಯ ಮಂಡಳಿ ನಿರ್ಧಾರ:
    ಜಾನಿ ಮಾಸ್ಟರ್‌ ಪೂರ್ತಿ ಹೆಸರು ಶಾಯಿಕ್‌ ಜಾನಿ ಭಾಷಾ. ಇತ್ತೀಚೆಗೆ ನಡೆದ ಎಪಿ ಚುನಾವಣೆಯಲ್ಲಿ ಜನಸೇನಾ ಪಕ್ಷದ ಸ್ಟಾರ್ ಪ್ರಚಾರಕರಾಗಿ ಜಾನಿ ಕೆಲಸ ಮಾಡಿದ್ದರು. ಆದರೆ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಜಾನಿ ಮಾಸ್ಟರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜನಸೇನಾ ಹೇಳಿಕೆ ಬಿಡುಗಡೆ ಮಾಡಿದೆ. ಮತ್ತೊಂದೆಡೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಜಾನಿ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿಕ್ಕಿ ಯಾವಾಗಲೂ ಕೂಲ್ ಆಗಿ ಇರುತ್ತಾರೆ: ದಾಂಪತ್ಯದ ಸೀಕ್ರೆಟ್ ಬಿಚ್ಚಿಟ್ಟ ಕತ್ರಿನಾ ಕೈಫ್

  • ಲೈಂಗಿಕ ಕಿರುಕುಳ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಕೇಸ್

    ಲೈಂಗಿಕ ಕಿರುಕುಳ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಕೇಸ್

    ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾಗಿರುವ ಜಾನಿ ಮಾಸ್ಟರ್ (Jani Master) ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ (Sexual Assault) ನೀಡಿದ್ದಾರೆ ಎಂದು 21 ವರ್ಷದ ಯುವತಿಯೊಬ್ಬರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಮಹಿಳೆ ನರಸಂಗಿ ನಿವಾಸಿಯಾಗಿರುವುದರಿಂದ ನರಸಂಗಿ ಪೊಲೀಸರಿಗೆ ಪ್ರಕರಣ ವರ್ಗಾಯಿಸಲಾಗಿದ್ದು, ಕ್ರಿಮಿನಲ್ ಬೆದರಿಕೆ ಮತ್ತು ಸ್ವಯಂಪ್ರೇರಿತ ಗಾಯ ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.