Tag: Janmotsav

  • ಜನೋತ್ಸವದ ಬದಲು ಜನಸ್ಪಂದನ ಹೆಸರಲ್ಲಿ ಸಮಾವೇಶ ನಡೆಸಲು ಮುಂದಾದ ಬಿಜೆಪಿ

    ಜನೋತ್ಸವದ ಬದಲು ಜನಸ್ಪಂದನ ಹೆಸರಲ್ಲಿ ಸಮಾವೇಶ ನಡೆಸಲು ಮುಂದಾದ ಬಿಜೆಪಿ

    ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮದ ಹೆಸರು ಬದಲಾವಣೆ ಮಾಡಿ ಜನಸ್ಪಂದನ ಹೆಸರಲ್ಲಿ ಸೆಪ್ಟೆಂಬರ್ 10 ಶನಿವಾರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಬಳಿಕ ಸಚಿವರಾಗಿದ್ದ ಉಮೇಶ್ ಕತ್ತಿ ನಿಧನರಾಗಿದ್ದರಿಂದಾಗಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ತೀರ್ಮಾನಿಸಿತ್ತು. ಇದೀಗ ಈ ಕಾರ್ಯಕ್ರಮಕ್ಕೆ ಜನೋತ್ಸವ ಬದಲಾಗಿ ಜನಸ್ಪಂದನ ಸಮಾವೇಶ ಎಂದು ಮರುನಾಮಕರಣ ಮಾಡಿ ಸೆಪ್ಟೆಂಬರ್ 10 ಶನಿವಾರ ನಡೆಸಲು ತೀರ್ಮಾನಿಸಿದೆ. ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಸಾಹುಕಾರ

    ಉಮೇಶ್ ಕತ್ತಿ ನಿಧನದ ನಡುವೆಯೂ ನಾಳೆ ಜನೋತ್ಸವ ಬೇಡ ಎಂಬ ಅಭಿಪ್ರಾಯವನ್ನು ಹಲವು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹಾಗಾಗಿ ನಾಳೆ ನಡೆಯಬೇಕಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಜನಸ್ಪಂದನ ಕಾರ್ಯಕ್ರಮವೆಂದು ಮರುನಾಮಕರಣ ಮಾಡಿ ಸೆಪ್ಟೆಂಬರ್ 10 ಶನಿವಾರ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ನಡುವೆ ದಿನಾಂಕ ಬಗ್ಗೆ ಒಂದೇ ದಿನ ಎರಡೆರಡು ನಿರ್ಧಾರದಿಂದಾಗಿ ಪಕ್ಷದ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

    ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ಈ ಮೊದಲು ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಜುಲೈ 28 ಹಾಗೂ ಆಗಸ್ಟ್ 28 ಎರಡು ಬಾರಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಜನೋತ್ಸವ ಕಾರ್ಯಕ್ರಮ ರದ್ದಾಗಿದೆ. ಇದರೊಂದಿಗೆ ಜನೋತ್ಸವದ ಬದಲಾಗಿ ಜನಸ್ಪಂದನ ಎಂದು ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ.

    Live Tv
    [brid partner=56869869 player=32851 video=960834 autoplay=true]

  • ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ

    ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ

    ಚಿಕ್ಕಬಳ್ಳಾಪುರ: ನಾಳೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 11 ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಸಚಿವ ಮುನಿರತ್ನ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಾಳೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕತ್ತಿಯವರು ನಮ್ಮನ್ನೆಲ್ಲ ಅಗಲಿದ್ದಾರೆ. ಬಹಳ ನೋವಿನ ಸಂಗತಿ ಇದು. ನಾವೆಲ್ಲ ಶೋಕದಲ್ಲಿದೀವಿ, ರಾಜ್ಯದಲ್ಲಿ ಶೋಕಾಚರಣೆ ಇದೆ. ಈ ಕಾರಣದಿಂದ ನಾಳೆ ಜನೋತ್ಸವ ನಡೆಯಲ್ಲ. ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ಭಾನುವಾರ ನಡೆಸಲು ನಿರ್ಧರಿಸಿದ್ದೇವೆ. ಜನೋತ್ಸವಕ್ಕೆ ಬರುವ ಕಾರ್ಯಕರ್ತರು ಮುಖಂಡರು ಭಾನುವಾರ ಬರಬೇಕಾಗಿ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನಿಷ್ಟದಂತೆ ಬದುಕದಿದ್ದರೆ ಏಕೆ ಇರಬೇಕು? – ಫಿಲ್ಟರ್ ಇಟ್ಕೊಂಡು ಬದುಕುವ ಮಗ ನಾನಲ್ಲ ಎಂದಿದ್ದರು ಉಮೇಶ್ ಕತ್ತಿ

    ಇದರೊಂದಿಗೆ ಉಮೇಶ್ ಕತ್ತಿ ನಿಧನಕ್ಕೆ 3 ದಿನ ಶೋಕಾಚರಣೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ 1 ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿತ್ತು. ಉಮೇಶ್ ಕತ್ತಿ ನಿಧನದ ನಡುವೆಯೂ ನಾಳೆ ಜನೋತ್ಸವ ಬೇಡ ಎಂಬ ಅಭಿಪ್ರಾಯವನ್ನು ಹಲವು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಹಾಗಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

    ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ಈ ಮೊದಲು ನಿಗದಿಯಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಜುಲೈ 28 ಹಾಗೂ ಆಗಸ್ಟ್ 28 ಎರಡು ಬಾರಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಜನೋತ್ಸವ ಕಾರ್ಯಕ್ರಮ ರದ್ದಾಗಿದೆ. ಇದನ್ನೂ ಓದಿ: ಪ್ರವೀಣ್‌ ಹತ್ಯೆಯನ್ನು ಭಯೋತ್ಪಾದನಾ ಘಟನೆಯೆಂದು ತಿರುಚಲು ಎನ್‌ಐಎಗೆ ಸೂಚನೆ: ಪಿಎಫ್‌ಐ

    Live Tv
    [brid partner=56869869 player=32851 video=960834 autoplay=true]