Tag: January

  • ಜನವರಿಯಿಂದ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್

    ಜನವರಿಯಿಂದ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್

    ಮೊನ್ನೆಯಷ್ಟೇ ತಮ್ಮ ಹೊಸ ಚಿತ್ರಕ್ಕೆ ಟಾಕ್ಸಿಕ್ ಎಂದು ಹೆಸರಿಟ್ಟು ಸಾಕಷ್ಟು ಕುತೂಹಲ ಮೂಡಿಸಿರುವ ಯಶ್, ತಮ್ಮ ಹೊಸ ಸಿನಿಮಾದ ಶೂಟಿಂಗ್ (Shooting) ಅನ್ನು ಜನವರಿಯಿಂದ ಶುರು ಮಾಡಲಿದ್ದಾರಂತೆ. ಚಿತ್ರೀಕರಣಕ್ಕೆ ಆಗಲೇ ಸಾಕಷ್ಟು ತಯಾರಿಯನ್ನು ಮಾಡಿಕೊಂಡಿದ್ದು, ಜನವರಿ (January) ಎರಡನೇ ವಾರದಿಂದ ಚಿತ್ರೀಕರಣಕ್ಕೆ ಹೋಗಲಿದ್ದಾರೆ ಎನ್ನುತ್ತಿವೆ ಮೂಲಗಳು.

    ಯಶ್ (Yash) ಈ ಬಾರಿ ಪ್ಯಾನ್ ಇಂಡಿಯಾವನ್ನೂ ದಾಟಿಕೊಂಡು ಯೋಚನೆ ಮಾಡಿದ್ದಾರೆ. ಸಿನಿಮಾದ ಟೈಟಲ್ ಮತ್ತು ಆಯ್ಕೆ ಮಾಡಿಕೊಂಡಿರುವ ಕಥೆ ನೋಡಿದರೆ, ಇದೊಂದು ಹಾಲಿವುಡ್ ರೇಂಜ್ ನಲ್ಲಿ ತಯಾರಾಗುತ್ತಿರುವ ಕನ್ನಡದ ಸಿನಿಮಾ ಎಂದೇ ಹೇಳಬಹುದು. ಯಾವುದೇ ಭಾಷೆಯಲ್ಲಿ ಈ ಸಿನಿಮಾ ಬಂದರೂ, ಅದಕ್ಕೆ ತೊಂದರೆ ಆಗದಿರುವಂತೆ ‘ಟಾಕ್ಸಿಕ್’ (Toxic) ಎಂದು ಹೆಸರಿಟ್ಟಿದ್ದಾರೆ. ಇದು ಎಲ್ಲ ಭಾಷೆಗೂ ಸಲ್ಲುವಂತೆ ಟೈಟಲ್ ಆಗಿದೆ.

    ಇದರ ಜೊತೆಗೆ ಮತ್ತೊಂದು ವಿಷಯವೂ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಇಂದು ರಿಲೀಸ್ ಆಗಿರುವ ಟೈಟಲ್ ಟೀಸರ್ ನಲ್ಲಿ ಅದರ ಛಾಯೆ ಕೂಡ ಇದೆ. ಟಾಕ್ಸಿಕ್ ಸಿನಿಮಾದಲ್ಲಿ ಇಂಟರ್ ನ್ಯಾಷನಲ್ ಡ್ರಗ್ಸ್ ಮಾಫಿಯಾ ಕುರಿತಾದ ಕಥೆಯನ್ನು ಹೇಳಲಿದ್ದಾರಂತೆ ನಿರ್ದೇಶಕ ಗೀತು ಮೋಹನದಾಸ್ (Geethu Mohan Das). ಟೈಟಲ್ ಟೀಸರ್ ನಲ್ಲಿ ಒಂದು ಕಡೆ ಯಶ್ ಕೈಯಲ್ಲಿ ಗನ್, ಬಾಯಲ್ಲಿ ಸಿಗಾರೆ ಮತ್ತು ಅವನ ಸುತ್ತಮುತ್ತ ಪೌಡರ್ ಹಾರುತ್ತಿದೆ. ಹಾಗಾಗಿ ಇದೊಂದು ಡ್ರಗ್ಸ್ ಮಾಫಿಯಾದ ಕಥೆ ಎಂದು ಹೇಳಲಾಗುತ್ತಿದೆ.

    ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಈ ಚಿತ್ರದ ಮೂಲಕ ಯಶ್ ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೆವಿಎನ್ ಪ್ರೊಡಕ್ಷನ್ (KVN Production) ಜೊತೆ ಮಾನ್ ಸ್ಟರ್ ಮೈಂಡ್ ಕ್ರಿಯೇಸನ್ಸ್‌ ಹೆಸರು ಕೂಡ ಇದ್ದು, ಈ ಸಂಸ್ಥೆಯು ಯಶ್ ಅವರದ್ದು ಎಂದು ಹೇಳಲಾಗುತ್ತಿದೆ. 2019 ರಲ್ಲಿ ಮಾನ್ ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಯನ್ನು ಯಶ್  ನೋಂದಣಿ ಮಾಡಿದ್ದಾರೆ. ಇದೀಗ ತಮ್ಮ 19ನೇ ಸಿನಿಮಾ ಮೂಲಕ ನಿರ್ಮಾಪಕರಾಗಿಯೂ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ತಮ್ಮ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಮಟ್ಟದ ಸಿನಿಮಾಗಳನ್ನ ನಿರ್ಮಾಣ ಮಾಡಲು ಯಶ್ ನಿರ್ಧಾರ ಮಾಡಿದ್ದಾರೆ.

     

    ಈ ನಡುವೆ ಮತ್ತೊಂದು ಹೊಸ ವಿಷಯ ಹರಿದಾಡುತ್ತಿದೆ. ಮೊನ್ನೆಯಷ್ಟೇ ಈ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಚಿತ್ರಕ್ಕೆ ಕೇವಲ ಒಬ್ಬರು ನಾಯಕಿಯರಲ್ಲ, ಮೂವರು ನಾಯಕಿಯರು ಇರಲಿದ್ದಾರೆ ಎನ್ನುವುದು ಲೇಟೆಸ್ಟ್ ಮಾಹಿತಿ. ಸಾಯಿ ಪಲ್ಲವಿ, ಮೃಣಾಲ್‌ ಠಾಕೂರ್ ಹೀಗೆ ಮೂವರು ಹಿರೋಯಿನ್ ಚಿತ್ರದಲ್ಲಿ ಪಾತ್ರವಾಗಲಿದ್ದಾರಂತೆ.

  • ಬಿಜೆಪಿಗರಿಗೆ ಎಲೆಕ್ಷನ್ ಟಾಸ್ಕ್ ವರಿ- ಚುನಾವಣೆ ಮುನ್ನ ತ್ರಿಮೂರ್ತಿಗಳ ರಾಜ್ಯ ಪ್ರವಾಸ

    ಬಿಜೆಪಿಗರಿಗೆ ಎಲೆಕ್ಷನ್ ಟಾಸ್ಕ್ ವರಿ- ಚುನಾವಣೆ ಮುನ್ನ ತ್ರಿಮೂರ್ತಿಗಳ ರಾಜ್ಯ ಪ್ರವಾಸ

    ಬೆಂಗಳೂರು: ಜನವರಿಯಲ್ಲಿ ರಾಜ್ಯ ಬಿಜೆಪಿ (BJP) ಗರಿಗೆ ಎಲೆಕ್ಷನ್ ಟಾಸ್ಕ್ ವರಿ ಶುರುವಾಗಿದೆ. ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರಗೃಹ ಸಚಿವ ಅಮಿತ್ ಶಾ ಎಲೆಕ್ಷನ್ ಟಾಸ್ಕ್ ಶುರುವಾಗಿದೆ.

    ಇದೇ ಜನವರಿ 5 ಮತ್ತು 6 ಎರಡು ದಿನಗಳ ಕಾಲ ಜೆ.ಪಿ.ನಡ್ಡಾ (J P Nadda) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ತುಮಕೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಸಾರ್ವಜನಿಕ ಸಮಾವೇಶ, ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಜನವರಿ 12ರಂದು ಯುವ ಜನೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಗಿಯಾಗಲಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆಯಲಿರುವ ಯುವಜನೋತ್ಸವದಲ್ಲಿ ಪ್ರಧಾನಿಯಿಂದ ಮೆಗಾ ಭಾಷಣ ನಡೆಯಲಿದೆ. ಇಷ್ಟೇ ಅಲ್ಲ, ಅಮಿತ್ ಶಾ (AmitShah) ಅವರು ಸಂಕ್ರಾಂತಿ ಬಳಿಕ ಮತ್ತೆ 2 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈಗಾಗಲೇ ಜನವರಿ 2ರಿಂದ ಆರಂಭವಾಗಿರುವ ಬೂತ್ ಅಭಿಯಾನ ಜನವರಿ 12ಕ್ಕೆ ಅಂತ್ಯಗೊಳ್ಳಲಿದೆ. ಇದನ್ನೂ ಓದಿ: ರಸ್ತೆ, ಚರಂಡಿಯಂತಹ ಸಣ್ಣ ವಿಚಾರಗಳನ್ನು ಕೇಳ್ಬೇಡಿ, ಲವ್ ಜಿಹಾದ್‍ ಬಗ್ಗೆ ಮಾತನಾಡಿ: ಕಟೀಲ್‌

    ಬೂತ್ ಅಭಿಯಾನಕ್ಕೆ ಚಾಲನೆ ಕೊಟ್ಟಿರುವ ಅಮಿತ್ ಶಾ ವಿಜಯಸಂಕಲ್ಪ ಯಾತ್ರೆಯಲ್ಲೂ ಭಾಗವಹಿಸುವ ಸಾಧ್ಯತೆ ಇದೆ. ಅಷ್ಟೇ ಅಲ್ಲ ಈಗಾಗಲೇ ಆಪರೇಷನ್ ಓಲ್ಡ್ ಮೈಸೂರು ಟಾಸ್ಕ್ ಕೊಟ್ಟಿರುವ ಅಮಿತ್ ಶಾಗೆ ರಾಜ್ಯ ನಾಯಕರು ರಿಪೋರ್ಟ್ ನೀಡಬೇಕಿದೆ. ಟಾಸ್ಕ್ ರಿಪೋರ್ಟ್ ಕೊಡುವುದರ ಜೊತೆ ಎಷ್ಟು ಅನುಷ್ಠಾನ ಎಂಬುದರ ಬಗ್ಗೆ ರಾಜ್ಯ ನಾಯಕರು ವರದಿ ಕೊಡಬೇಕು. ಒಟ್ಟಿನಲ್ಲಿ ಜನವರಿಯಲ್ಲಿ ಎಲೆಕ್ಷನ್ ವಾರ್ಮ್‍ಅಪ್ ಬಳಿಕ ಫೆಬ್ರವರಿ ಮೊದಲ ವಾರದಿಂದ ಶುರುವಾಗಲಿದೆ ಎಲೆಕ್ಷನ್ ಅಸಲಿ ಆಟ.

    Live Tv
    [brid partner=56869869 player=32851 video=960834 autoplay=true]

  • ಜನವರಿ 8ಕ್ಕೆ ಯಶ್ ಹೊಸ ಯೋಜನೆ ಘೋಷಣೆ

    ಜನವರಿ 8ಕ್ಕೆ ಯಶ್ ಹೊಸ ಯೋಜನೆ ಘೋಷಣೆ

    ರಾಕಿಂಗ್ ಸ್ಟಾರ್ ಯಶ್ ಸದ್ಯ ಆರಾಮಾಗಿ ಕಾಲಕಳೆಯುತ್ತಿದ್ದಾರೆ ಎನ್ನುತ್ತಿದೆ ಗಾಂಧಿನಗರ. ಆದರೆ, ಯಶ್ ಅಂದುಕೊಂಡಂತಿಲ್ಲ. ಮುಂದಿನ ಸಿನಿಮಾಗೆ ಏನೆಲ್ಲ ಬೇಕೊ ಅದರ ಸಿದ್ಧತೆಯಲ್ಲಿ ತೊಡಗಿದ್ದಾರೆ. ಕೆಜಿಎಫ್ 2 ಸಿನಿಮಾದ ಭಾರೀ ಯಶಸ್ಸಿನ ನಂತರ ಅವರು ಜಾಣೆ ನಡೆಯನ್ನು ತೋರುತ್ತಿದ್ದಾರೆ. ಹೀಗಾಗಿಯೇ ಮುಂದಿನ ಸಿನಿಮಾ ಬಗ್ಗೆ ಅವರು ಯಾವುದೇ ಮಾಹಿತಿಯನ್ನು ಬಿಟ್ಟು ಕೊಡುತ್ತಿಲ್ಲ.

    ಯಶ್ ಮುಂದಿನ ಸಿನಿಮಾ ಯಾವುದು ಎನ್ನುವುದಕ್ಕೆ ಈವರೆಗೂ ಸ್ಪಷ್ಟತೆ ಇಲ್ಲ. ಈಗಾಗಲೇ ಹಲವು ನಿರ್ದೇಶಕರ ಹೆಸರು ಕೇಳಿ ಬಂದಿವೆ, ನಿರ್ಮಾಣ ಸಂಸ್ಥೆಗಳ ಹೆಸರುಗಳನ್ನು ತಳುಕು ಹಾಕಲಾಗಿದೆ. ಯಾವ ಭಾಷೆಯಲ್ಲಿ ಅವರು ಸಿನಿಮಾ ಮಾಡಲಿದ್ದಾರೆ ಎನ್ನುವ ಕುರಿತು ಚರ್ಚೆ ಕೂಡ ನಡೆದಿದೆ. ಆದರೆ, ಇದಾವುದನ್ನೂ ಯಶ್ ಖಚಿತ ಪಡಿಸಿಲ್ಲ. ಮಾಧ್ಯಮಗಳ ಮುಂದೆ ಎದುರಾದಾಗೊಮ್ಮೆ ಅವಸರ ಮಾಡುವುದಿಲ್ಲ. ಎಲ್ಲವನ್ನೂ ನಾನೇ ಹೇಳುತ್ತೇನೆ ಎಂದು ಹೇಳುವ ಮೂಲಕ ಜಾರಿಕೊಂಡಿದ್ದಾರೆ. ಇದನ್ನೂ ಓದಿ: ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ ಕುಮಾರ

    ಆದರೆ, ಜನವರಿ 8 ರಂದು ಯಶ್ ಕೆಲವು ಮಾಹಿತಿಗಳನ್ನು ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದು ಯಶ್ ಹುಟ್ಟು ಹಬ್ಬ. ಈ ದಿನದಂದು ತಮ್ಮ ನಿರ್ಮಾಣ ಸಂಸ್ಥೆಯ ಬಗ್ಗೆ ಕೆಲವು ವಿಷಯಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಗಳ ಹೆಸರಿನಲ್ಲಿ ಬ್ಯಾನರ್ ಶುರು ಮಾಡುವ ಆಲೋಚನೆಯನ್ನು ಯಶ್ ಮಾಡಿದ್ದು, ಈ ಕುರಿತು ಅಂದು ಮಾತನಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಜ.24 ರಂದು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಕೇಬಲ್ ಬಂದ್

    ಜ.24 ರಂದು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಕೇಬಲ್ ಬಂದ್

    ಬೆಂಗಳೂರು: ಭಾರತೀಯ ದೂರ ಸಂಪರ್ಕ  ನಿಯಂತ್ರಣ ಪ್ರಾಧಿಕಾರದ(ಟ್ರಾಯ್) ಹೊಸ ದರ ನಿಗದಿ ನಿಯಮವನ್ನು ಖಂಡಿಸಿ ಮತ್ತು ಕೇಬಲ್ ಆಪರೇಟರ್‌ಗಳ ಉಳಿವಿಗಾಗಿ ಜನವರಿ 24ರಂದು ರಾಜ್ಯಾದ್ಯಂತ ಕೇಬಲ್ ಪ್ರಸಾರ ಸ್ಥಗಿತಗೊಳ್ಳಲಿದೆ. ಜನವರಿ 24ರ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಕೇಬಲ್ ಬಂದ್ ಆಗಲಿದ್ದು, ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್‍ನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆ ಬಳಿಕ ರಾಜ್ಯ ಕೇಬಲ್ ಅಸೋಸಿಯೇಷನ್ ಅಧ್ಯಕ್ಷ ಪ್ಯಾಟ್ರಿಕ್ ರಾಜು ಮಾತನಾಡಿ, ದಕ್ಷಿಣ ಭಾರತ ಆಪರೇಟರ್ಸ್ ಅಸೋಸಿಯೇಷನ್‍ನಿಂದ ಒಮ್ಮತದ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.

    ಟ್ರಾಯ್ ನ ಹೊಸ ನೀತಿಯಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಕಡಿಮೆ ಚಾನೆಲ್ ನೋಡಿ ಸಾವಿರದ ತನಕ ಹಣ ಕಟ್ಟುವಂತೆ ಗ್ರಾಹಕರ ಮೇಲೆ ಹೊರೆ ಹೊರಿಸಲಾಗಿದೆ. ಅಲ್ಲದೇ ಶೇ.18 ಜಿಎಸ್ ಟಿ ಸಹ ಗ್ರಾಹಕರ ಮೇಲೆ ಹೇರಲಾಗಿದೆ. ಅವರ ಮನೆಯಲ್ಲಿ ಕುಳಿತು ಟಿವಿ ನೋಡುವುದಕ್ಕೆ ತೆರಿಗೆ ಕಟ್ಟಬೇಕು ಎಂದು ತಿಳಿಸಿದರು.

    300 ರೂ.ಗೆ 400 ಕ್ಕೂ ಹೆಚ್ಚಿನ ಚಾನೆಲ್ ಗಳನ್ನು ಕೇಬಲ್ ಆಪರೇಟರ್ ಗಳು ನೀಡುತ್ತಿದ್ದಾರೆ. ಟ್ರಾಯ್ ಹೊಸ ನೀತಿಯಿಂದ ಗ್ರಾಹಕರು ಕೇಬಲ್ ಗಾಗಿ 1 ಸಾವಿರ ರೂ.ಗಿಂತಲೂ ಹೆಚ್ಚಿನ ಹಣವನ್ನು ಕಟ್ಟಬೇಕು. ಟ್ರಾಯ್ ಗ್ರಾಹಕ ವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುವ ಸಲುವಾಗಿ ವಾಹಿನಿಗಳ ಪ್ರಸಾರವನ್ನು ಸ್ಥಗಿತಗೊಳ್ಳಿಸುತ್ತೇವೆ ಎಂದು ತಿಳಿಸಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv