Tag: Jatra Mahotsava

  • ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ

    ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ದೇವಾಲಯದ (Hasanamba Devi Temple) ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ.

    ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು (Jatra Mahotsava) ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ. ಇದನ್ನೂ ಓದಿ: ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

    ಅರಸು ವಂಶಸ್ಥರು ಬನ್ನಿ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿಯನ್ನು ತೆರೆಯಲಾಗುವುದು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುವುದು. ಇದನ್ನೂ ಓದಿ: ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

    ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಕಳೆದ ನ.3 ರಂದು ಮುಚ್ಚಿದ್ದ ಗರ್ಭಗುಡಿ ಬಾಗಿಲು ಇಂದು ತೆರೆಯಲಿದೆ. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

    ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗಾಗಿ ಹಲವು ವಿಶೇಷ ವ್ಯವಸ್ಥೆ ಮಾಡಿದೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಆಕರ್ಷಣೆಯಿರಲಿದೆ.

  • ಬೆನ್ನಿಗೆ ಕಬ್ಬಿಣದ ಕೊಂಡಿ ಹಾಕಿಕೊಂಡು ಬೃಹತ್ ವಾಹನ ಎಳೆದು ಹರಕೆ ತೀರಿಸಿದ ಭಕ್ತರು

    ಬೆನ್ನಿಗೆ ಕಬ್ಬಿಣದ ಕೊಂಡಿ ಹಾಕಿಕೊಂಡು ಬೃಹತ್ ವಾಹನ ಎಳೆದು ಹರಕೆ ತೀರಿಸಿದ ಭಕ್ತರು

    ಚಿಕ್ಕಮಗಳೂರು: ದೇವರಿಗೆ ಹರಕೆ ಹೊತ್ತುಕೊಳ್ಳುವ ಭಕ್ತರು ನಾನಾ ರೀತಿ ಹರಕೆ ತೀರಿಸಿ ಭಕ್ತಿ ಸಮರ್ಪಿಸುತ್ತಾರೆ. ಅದೇ ರೀತಿ ನಗರದಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಕ್ತರು ದೇಹವನ್ನ ದಂಡಿಸಿ ಭಕ್ತಿ ಸಮರ್ಪಿಸಿದ್ದಾರೆ.

    ನಗರದಲ್ಲಿ ಇಂದು ಕರುಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು. ಈ ಜಾತ್ರೆಯಲ್ಲಿ ಹರಕೆ ಹೊತ್ತಿದ್ದ ಭಕ್ತರು ಬೆನ್ನಿಗೆ ಕಬ್ಬಿಣದ ಕೊಂಡಿಗಳುಳ್ಳ ಸರಪಳಿಯನ್ನ ಹಾಕಿಕೊಂಡು ಟ್ರ್ಯಾಕ್ಟರ್, ಲಾರಿ, ಕಾರು, ಆಟೋಗಳನ್ನ ಎಳೆದು ಭಕ್ತಿ ಸಮರ್ಪಿಸಿ ಹರಕೆ ತೀರಿಸಿದ್ದಾರೆ. ದೇವರಿಗೆ ಉಪವಾಸವಿದ್ದು ಅಥವಾ ಮುಡಿ ನೀಡಿ ವಿಶಿಷ್ಟ ರೀತಿಯ ಅಡುಗೆಯನ್ನ ಮಾಡಿ ದೇವರಿಗೆ ನೈವೇದ್ಯ ಮಾಡಿ ಹರಕೆ ತೀರಿಸುವುದು ವಾಡಿಕೆ.

    ಆದರೆ ನಗರದ ಕರುಮಾರಿಯಮ್ಮನ ಭಕ್ತರು ಈ ರೀತಿ ದೇಹವನ್ನ ದಂಡಿಸಿ ದೇವಿಗೆ ಹರಕೆ ತೀರಿಸುತ್ತಾರೆ. ಈ ಬಾರಿ 26 ಜನರು ವಿಭಿನ್ನವಾಗಿ ತಮ್ಮ ಹರಕೆ ತೀರಿಸಿದ್ದಾರೆ. ಜಾತ್ರೆ ಹಿನ್ನೆಲೆ ಶುಕ್ರವಾರ ಬೆಳಗ್ಗೆ ದಂಟರಮಕ್ಕಿಯ ಕೆರೆಕೋಡಿಯಮ್ಮನ ಸನ್ನಿಧಿಯಲ್ಲಿ ಕರಗ ಪೂಜೆ ನೆರವೇರಿಸಿದರು. ಬಳಿಕ ಬೆನ್ನಿನ ಚರ್ಮಕ್ಕೆ ಕಬ್ಬಿಣದ ಮೂರ್ನಾಲ್ಕು ಕೊಂಡಿಗಳನ್ನು ಹಾಕಿಕೊಂಡು ಟ್ರ್ಯಾಕ್ಟರ್, ಆಟೋ, ಕಾರು, ಮಿನಿ ಲಾರಿಯಂತಹ ಬೃಹತ್ ವಾಹನಗಳನ್ನು ಕೆರೆಕೋಡಿಯಮ್ಮ ದೇವಸ್ಥಾನದಿಂದ ಕರುಮಾರಿಯಮ್ಮ ದೇವಸ್ಥಾನದವರೆಗೆ ಎಳೆದುಕೊಂಡು ಹೋಗುವ ಮೂಲಕ ಭಕ್ತಿ ಮೆರೆದರು.

    ಈ ವೇಳೆ ಸಂಬಂಧಿಕರು, ಜಾತ್ರೆಯಲ್ಲಿ ಭಾಗವಹಿಸಿದವರು `ಗೋವಿಂದ.. ಗೋವಿಂದ’ ಎಂದು ಕೂಗುವ ಮೂಲಕ ಅವರಿಗೆ ಧೈರ್ಯ ತುಂಬುತ್ತಿದ್ದರು. ಈ ವಿಭಿನ್ನ ಆಚರಣೆಗೆ ಅಳಲು ಹಾಕುವುದು ಎಂದು ಸ್ಥಳೀಯರು ಕರೆಯುತ್ತಾರೆ. ಕೆಲವು ಭಕ್ತರು ತಮ್ಮ ಕಾಲು, ಬೆನ್ನಿಗೆ ಕಬ್ಬಿಣದ ಕೊಂಡಿಗಳನ್ನು ಹಾಕಿಕೊಂಡು ದೇವರ ಕಳಸವನ್ನು ಕುತ್ತಿಗೆಗೆ ಹಾಕಿಕೊಂಡು ವಾಹನದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ನೇತು ಬಿದ್ದಿದ್ದರು.

    ಕೆಲವು ಮಕ್ಕಳು ಬಾಯಿಗೆ ಕಬ್ಬಿಣದ ಸರಳುಗಳನ್ನು ಹಾಕಿಕೊಂಡು ಸಾಗಿದರು. ಜಾತ್ರೆ ಹಿನ್ನೆಲೆ ಕಳೆದ ಎರಡು ದಿನದಿಂದ ದೇವಸ್ಥಾನದಲ್ಲಿ ಹಲವು ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

  • ಅದ್ಧೂರಿಯಾಗಿ ನಡೆದ ಆಷಾಢದಲ್ಲಿ ನವದಂಪತಿ ಸೇರುವ ಜಾತ್ರಾ ಮಹೋತ್ಸವ

    ಅದ್ಧೂರಿಯಾಗಿ ನಡೆದ ಆಷಾಢದಲ್ಲಿ ನವದಂಪತಿ ಸೇರುವ ಜಾತ್ರಾ ಮಹೋತ್ಸವ

    ರಾಮನಗರ: ಆಷಾಢ ಮಾಸದಲ್ಲಿ ನೂತನ ದಂಪತಿಗಳನ್ನು ಬೇರೆ ಮಾಡಿ, ಹೆಣ್ಣನ್ನು ತವರು ಮನೆಗೆ ಕಳಿಸುವುದು ವಾಡಿಕೆ. ಯಾಕೆಂದರೆ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಒಂದೇ ಬಾಗಿಲಿನಲ್ಲಿ ಓಡಾಡಿದರೆ ಕೇಡಾಗುತ್ತೆ ಎನ್ನಲಾಗುತ್ತದೆ.

    ಆದರೆ ದಂಪತಿಗಳನ್ನು ಆಷಾಢದಲ್ಲಿ ಒಂದೆಡೆ ಸೇರಿಸುವಂತಹ ಜಾತ್ರಾ ಮಹೋತ್ಸವ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆಯುತ್ತದೆ. ನೂತನ ದಂಪತಿಗಳನ್ನು ಒಂದೆಡೆ ಸೇರಿಸುವ ಸಂಜೀವರಾಯಸ್ವಾಮಿಯ ಜಾತ್ರಾ ಮಹೋತ್ಸವ ಇಂದು ಅದ್ಧೂರಿಯಾಗಿ ನಡೆಯಿತು.

    ದೇವರ ಹೊಸಹಳ್ಳಿಯ ಪುರಾತನವಾದ ಸಂಜೀವರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಹೊಸ ದಂಪತಿಗಳು ಇಲ್ಲಿಗೆ ಬಂದು ದೇವರಲ್ಲಿ ಇಷ್ಟಾರ್ಥವನ್ನು ನೆನೆದು ಪೂಜೆ ಸಲ್ಲಿಸುತ್ತಾರೆ. ಅಲ್ಲದೇ ನೂತನ ದಂಪತಿಗಳು ಈ ದೇವರ ಸನ್ನಿಧಿಯಲ್ಲಿ ಸಂತಾನ ಬಯಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರುತ್ತೆ ಎಂಬ ಪ್ರತೀತಿ ಸಹ ಇದೆ. ಬೇರೆಯಾಗಿರುವ ದಂಪತಿಗಳಿಗೆ ಈ ಜಾತ್ರೆ ವೇದಿಕೆಯಾಗಿದ್ದು ರಾಮನಗರ ಜಿಲ್ಲೆ ಅಲ್ಲದೇ ಸುತ್ತಮುತ್ತಲ ಜಿಲ್ಲೆಯ ನೂತನ ದಂಪತಿಗಳು ಸಹ ಇಂದು ನಡೆದ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

    ಆಷಾಢದ ವಿರುದ್ಧವಾಗಿ ನಡೆಯುವ ಜಾತ್ರೆಗಳಲ್ಲಿ ಸಂಜೀವರಾಯ ಸ್ವಾಮಿಯ ಜಾತ್ರೆಯೂ ಕೂಡಾ ಒಂದಾಗಿದ್ದು, ಬ್ರಹ್ಮರಥೋತ್ಸವದಲ್ಲಿ ನೂತನ ದಂಪತಿಗಳು ಇಷ್ಟಾರ್ಥವನ್ನು ನೆನೆದು ರಥವನ್ನು ಎಳೆದು ಜಾತ್ರೆಯಲ್ಲೆಲ್ಲ ದಂಪತಿಗಳು ಕೈ ಕೈ ಹಿಡಿದು ಓಡಾಡಿದ್ದು ವಿಶೇಷವಾಗಿತ್ತು.