Tag: jatt film

  • ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ

    ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ

    ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ (Urvashi Rautela) ಸದಾ ಒಂದಲ್ಲಾ ಒಂದು ಹೇಳಿಕೆಯ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಅದೆಷ್ಟೋ ಬಾರಿ ಅವರು ಆಡಿರುವ ಮಾತಿನಿಂದ ಟ್ರೋಲ್ ಆಗಿದ್ದು ಇದೆ. ಈಗ ಮತ್ತೊಮ್ಮೆ ನಟಿ ಟ್ರೋಲಿಗರ ಬಾಯಿಗೆ ಆಹಾರವಾಗಿದ್ದಾರೆ. ಉತ್ತರಾಖಂಡದಲ್ಲಿ ನನ್ನ ಹೆಸರಿನಲ್ಲಿ ದೇವಸ್ಥಾನವಿದೆ. ಅದರಂತೆ ದಕ್ಷಿಣ ಭಾರತದಲ್ಲೂ ನನ್ನ ಹೆಸರಿನಲ್ಲಿ ಒಂದು ದೇವಸ್ಥಾನ ನಿರ್ಮಿಸಬೇಕು ಎಂದು ನಟಿ ಹೇಳಿದ್ದಾರೆ. ಊರ್ವಶಿಯ ಈ ಹೇಳಿಕೆ ಸಖತ್ ಟ್ರೋಲ್ ಆಗ್ತಿದೆ.

    ಸಂರ್ದಶನವೊಂದರಲ್ಲಿ ಮಾತನಾಡಿದ ಊರ್ವಶಿ, ಉತ್ತರಾಖಂಡದಲ್ಲಿ ನನ್ನ ಹೆಸರಿನಲ್ಲಿ ‘ಊರ್ವಶಿ’ ಎಂಬ ದೇವಾಲಯ ಈಗಾಗಲೇ ಇದೆ. ನೀವು ಬದರೀನಾಥ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ, ಅದರ ಪಕ್ಕದಲ್ಲಿಯೇ ಒಂದು ದೇವಸ್ಥಾನವಿರುತ್ತದೆ. ಇದು ನನಗೆ ಸಮರ್ಪಿಸಲಾಗಿದೆ ಎಂದಿದ್ದಾರೆ. ದಕ್ಷಿಣ ಭಾರತದಲ್ಲೂ ನನ್ನ ಹೆಸರಿನಲ್ಲಿ ಒಂದು ದೇವಸ್ಥಾನ ಆಗಬೇಕು ಎಂದು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಉಪ್ಪಿ ಅಣ್ಣನ ಮಗನ ಸಿನಿಮಾದಲ್ಲಿ ಲವ್ಲಿ ಸ್ಟಾರ್‌- ‘ಸ್ಪಾರ್ಕ್‌’ನಲ್ಲಿ ನೆನಪಿರಲಿ ಪ್ರೇಮ್

    ಈ ವೇಳೆ ನಿರೂಪಕ, ಜನರು ದರ್ಶನ ಪಡೆಯಲು ನಿಮ್ಮ ದೇವಸ್ಥಾನಕ್ಕೆ ಹೋಗುತ್ತಾರೆಯೇ ಎಂದು ಕೇಳಾದ ಪ್ರಶ್ನೆಗೆ ಊರ್ವಶಿ ನಗುತ್ತಾ, ಈಗಾಗಲೇ ದೇವಸ್ಥಾನ ಇರೋದರಿಂದ ಜನರು ದೇವಾಲಯದಲ್ಲಿ ಪ್ರಾರ್ಥಿಸುತ್ತಾರೆ. ಅಷ್ಟೇ ಅಲ್ಲ, ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ಅವರಿಗೆ ಪ್ರಾರ್ಥಿಸುತ್ತಾರೆ ಮತ್ತು ಅವರ ಫೋಟೋಗಳಿಗೆ ಹೂಮಾಲೆಗಳನ್ನು ಅರ್ಪಿಸುತ್ತಾರೆ ಎಂದು ಉತ್ತರಿಸಿದ್ದಾರೆ. ಈ ವೇಳೆ, ಅವರನ್ನು ಜನರು ‘ದಂದಮಾ ಮಾಯಿ’ ಕರೆಯುತ್ತಾರೆ ಎಂಬುದನ್ನು ವಿವರಿಸಿದ್ದಾರೆ. ಇದನ್ನೂ ಓದಿ:ರಾಕೇಶ್ ಅಡಿಗ ನಟನೆಯ ‘ನಾನು ಮತ್ತು ಗುಂಡ 2’ ಟೀಸರ್ ಔಟ್

    ಸದ್ಯ ದಕ್ಷಿಣ ಭಾರತದಲ್ಲೂ ನನ್ನ ಹೆಸರಲ್ಲಿ ದೇವಸ್ಥಾನ ಬೇಕು ಅವರು ನೀಡಿರುವ ಹೇಳಿಕೆಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಅಯ್ಯೋ ಸಾಕಮ್ಮ ನಿನ್ನ ಮಾತು ಎಂದು ನೆಟ್ಟಿಗರು ಟೀಕಿಸಿದ್ದಾರೆ.

    ಅಂದಹಾಗೆ, ಸನ್ನಿ ಡಿಯೋಲ್ ನಟನೆಯ ‘ಜಟ್’ (Jaat) ಸಿನಿಮಾದಲ್ಲಿ ಊರ್ವಶಿ ರೌಟೇಲಾ ಸೊಂಟ ಬಳುಕಿಸಿದ್ದಾರೆ. ಈ ಸಿನಿಮಾ ಏ.10ರಂದು ತೆರೆಕಂಡಿತ್ತು.

  • ಸನ್ನಿ ಡಿಯೋಲ್ ನಟನೆಯ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಸನ್ನಿ ಡಿಯೋಲ್ ನಟನೆಯ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ‘ಗದರ್ 2′ (Gadar 2) ಸಿನಿಮಾದ ಸಕ್ಸಸ್ ನಂತರ ಸಾಕಷ್ಟು ಸಿನಿಮಾಗಳ ಆಫರ್ಸ್ ಸನ್ನಿ ಡಿಯೋಲ್‌ಗೆ (Sunny Deol) ಅರಸಿ ಬರುತ್ತಿವೆ. ಇತ್ತೀಚೆಗಷ್ಟೇ ತೆಲುಗು ನಿರ್ದೇಶಕ ಗೋಪಿಚಂದ್ ಮಲಿನೇನಿ (Gopichand Malineni) ಹೊಸ ಚಿತ್ರದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ಮಾಡಿದ್ದರು. ಈಗ ಈ ಚಿತ್ರಕ್ಕೆ ಸಖತ್ ಆಗಿರೋ ಟೈಟಲ್ ಅನ್ನು ಚಿತ್ರತಂಡ ಫೈನಲ್‌ ಮಾಡಿದೆ.

    ತೆಲುಗಿನ ಕ್ರ್ಯಾಕ್, ವೀರ ಸಿಂಹ ರೆಡ್ಡಿ ಸಿನಿಮಾಗಳ ನಿರ್ದೇಶಕ ಗೋಪಿಚಂದ್ ಈಗ ಬಾಲಿವುಡ್ ನಟ ಸನ್ನಿ ಡಿಯೋಲ್ ಡೈರೆಕ್ಟ್ ಮಾಡಿದ್ದಾರೆ. ಈ ಸಿನಿಮಾ ಚಿತ್ರದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಚಿತ್ರಕ್ಕೆ ‘ಜಟ್’ (Jatt) ಎಂಬ ಕ್ಯಾಚಿ ಟೈಟಲ್ ಇಟ್ಟಿದ್ದಾರೆ.

    ರಣ್‌ಬೀರ್ ಕಪೂರ್ ನಟನೆಯ ‘ರಾಮಾಯಣ’ದಲ್ಲಿ ಹನುಮಾನ್ ಮತ್ತು ‘ಬಾರ್ಡರ್ 2’ ಸಿನಿಮಾಗಳು ಕೈಯಲ್ಲಿರುವ ಕಾರಣ, ಸೆಪ್ಟೆಂಬರ್ ಒಳಗೆ ‘ಜಟ್’ ಚಿತ್ರದ ಶೂಟಿಂಗ್ ಮುಗಿಯಲಿದೆ ಎನ್ನಲಾಗಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು ಪೀಪಲ್ ಮೀಡಿಯಾ ಫ್ಯಾಕ್ಟರಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ.‌ ಇದನ್ನೂ ಓದಿ:‘ಬಿಗ್ ಬಾಸ್’ ಖ್ಯಾತಿಯ ಹಿನಾ ಖಾನ್‌ಗೆ ಸ್ತನ ಕ್ಯಾನ್ಸರ್

    ‘ಜಟ್’ ಚಿತ್ರದಲ್ಲಿ ಸೈಯಾಮಿ ಖೇರ್ (Saiyami Kher) ಮತ್ತು ರೆಜಿನಾ ಕಸ್ಸಂದ್ರ (Regina (Cassandra) ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಈ ಇಬ್ಬರೂ ಹಾಟ್ ನಟಿಯರ ಜೊತೆ ಸನ್ನಿ ಡಿಯೋಲ್ ರೊಮ್ಯಾನ್ಸ್ ಮಾಡಲಿದ್ದಾರೆ. ರಿಷಿ ಪಂಜಾಬಿ ಛಾಯಾಗ್ರಹಣ, ತಮನ್ ಎಸ್ ಸಂಗೀತ, ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ.