Tag: Javed Akhtar

  • ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್‌ ಅಖ್ತರ್‌

    ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್‌ ಅಖ್ತರ್‌

    ನವದೆಹಲಿ: ಪಾಕಿಸ್ತಾನ (Pakistan) ಅಥವಾ ನರಕ ಇವೆರಡರಲ್ಲಿ ಯಾವುದು ಬೇಕು ಎಂದು ಕೇಳಿದರೆ, ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಗೀತರಚನೆಕಾರ ಮತ್ತು ಚಿತ್ರಕಥೆಗಾರ ಜಾವೇದ್‌ ಅಖ್ತರ್‌ (Javed Akhtar) ಹೇಳಿದ್ದಾರೆ.

    ಪಹಲ್ಗಾಮ್ ಭಯೋತ್ಪಾದಕ (Pahalgam Attack) ದಾಳಿ ಮತ್ತು ಆಪರೇಷನ್ ಸಿಂಧೂರ (Operation Sindoor), ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡುವ ಸಂದರ್ಭದಲ್ಲಿ ಅಖ್ತರ್‌ ಈ ಹೇಳಿಕೆ ನೀಡಿದ್ದಾರೆ. ನರಕಕ್ಕೆ ಹೋಗುವುದು ಅಥವಾ ನೆರೆಯ ದೇಶಕ್ಕೆ (ಪಾಕಿಸ್ತಾನ) ಹೋಗುವ ಎರಡು ಆಯ್ಕೆ ನೀಡಿದರೆ, ನಾನು ನರಕವನ್ನೇ ಆಯ್ದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್ ಡ್ರೋನ್‌ಗಳು ‘ಆಕಾಶ’ದಲ್ಲೇ ಛಿದ್ರ – ಆಕಾಶ್ ಕ್ಷಿಪಣಿ ಪರಾಕ್ರಮ; ವಿಶೇಷತೆ ಏನು?

    ನೀವು ಒಂದು ಕಡೆಯ ಪರವಾಗಿ ಮಾತ್ರ ಮಾತನಾಡಿದರೆ, ಮತ್ತೊಂದು ಕಡೆಯವರನ್ನು ಅಸಂತೋಷಗೊಳ್ಳುತ್ತೀರಿ. ಆದರೆ ಎಲ್ಲರ ಪರವಾಗಿ ಮಾತನಾಡಿದರೆ, ನೀವು ಇನ್ನೂ ಹೆಚ್ಚಿನ ಜನರನ್ನು ಅಸಂತೋಷಗೊಳಿಸುತ್ತೀರಿ. ನನ್ನ ಎಕ್ಸ್‌ ಖಾತೆ ಮತ್ತು ವಾಟ್ಸಾಪ್‌ನಲ್ಲಿ ನನಗೆ ಎರಡೂ ಕಡೆಯಿಂದಲೂ ನಿಂದನೆಗಳು ಬರುತ್ತವೆ. ಬಹಳಷ್ಟು ಜನರು ನನ್ನನ್ನು ಮೆಚ್ಚುತ್ತಾರೆ, ಹೊಗಳುತ್ತಾರೆ ಮತ್ತು ನನ್ನ ಉತ್ಸಾಹವನ್ನು ಹೆಚ್ಚಿಸಲು ಸಹಾಯ ಮಾಡುತ್ತಾರೆ. ಆದರೆ ಎರಡೂ ಕಡೆಯ ಉಗ್ರಗಾಮಿಗಳು ನನ್ನ ಮೇಲೆ ಅಣಕಿಸುತ್ತಾರೆ ಎಂಬುದು ನಿಜ. ಏಕೆಂದರೆ ಒಂದು ಕಡೆ ನಿಂತರೆ, ನಾನು ಏನು ತಪ್ಪು ಮಾಡುತ್ತಿದ್ದೇನೆ ಎಂದು ಯೋಚಿಸಲು ಪ್ರಾರಂಭಿಸುತ್ತೇನೆ ಎಂದು ಅಖ್ತರ್‌ ಅಭಿಪ್ರಾಯಪಟ್ಟಿದ್ದಾರೆ.

    ನೀನು ಪಾಕಿಸ್ತಾನ ಅಥವಾ ನರಕಕ್ಕೆ ಹೋಗುತ್ತೀಯ ಎಂದು ಕೇಳಿದರೆ ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ. ನಾನು ಮುಂಬೈಗೆ ಬಂದಾಗ ನನಗೆ 19 ವರ್ಷ ವಯಸ್ಸಾಗಿತ್ತು. ಈ ನೆಲದಲ್ಲಿ ನಾನು ಏನಾಗಬೇಕು ಅಂದುಕೊಂಡಿದ್ದೆನೋ ಅದು ಆಗಿದ್ದೇನೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕ್‌ ಹೈಕಮಿಷನ್‌ ಅಧಿಕಾರಿ ಜೊತೆ ಜ್ಯೋತಿ ಫೋಟೊ ರಿವೀಲ್ – ಪಾಕಿಸ್ತಾನಕ್ಕೆ ಬರ್ತೀನಿ ಎನ್ನುತ್ತಿದ್ದ ಯೂಟ್ಯೂಬರ್‌

    ಕಾಶ್ಮೀರಿಗಳ ಹೃದಯದಲ್ಲಿ ಪಾಕಿಸ್ತಾನದವರಿದ್ದಾರೆ ಎಂದು ಪಾಕಿಸ್ತಾನ ಅಪ್ರಪ್ರಚಾರ ಮಾಡುತ್ತಿದೆ ಎಂದು ಅಖ್ತರ್‌ ಅಸಮಾಧಾನ ಹೊರಹಾಕಿದ್ದಾರೆ. ಸ್ವಾತಂತ್ರ್ಯದ ನಂತರ ಪಾಕಿಸ್ತಾನ ಕಾಶ್ಮೀರದ ಮೇಲೆ ದಾಳಿ ಮಾಡಿದಾಗ, ಕಾಶ್ಮೀರಿಗಳು ಅವರನ್ನು ಮೂರು ದಿನಗಳ ಕಾಲ ತಡೆದಿದ್ದರು, ನಮ್ಮ ಸೈನ್ಯವು ಆ ನಂತರವೇ ಅಲ್ಲಿಗೆ ತಲುಪಿದ್ದು. ಸತ್ಯವೆಂದರೆ, ಕಾಶ್ಮೀರಿಗಳು ಭಾರತವಿಲ್ಲದೆ ಬದುಕಲು ಸಾಧ್ಯವಿಲ್ಲ. (ಪಹಲ್ಗಾಮ್‌ನಲ್ಲಿ) ನಡೆದದ್ದು ಅವರಿಗೆ ಹೆಚ್ಚು ನೋವುಂಟು ಮಾಡಿದೆ. ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಕಾಶ್ಮೀರಿಗಳು ಭಾರತೀಯರು ಮತ್ತು ಅವರಲ್ಲಿ 99% ಭಾರತಕ್ಕೆ ನಿಷ್ಠರಾಗಿದ್ದಾರೆ ಎಂದು ತಿಳಿಸಿದ್ದಾರೆ.

  • ಮುಸ್ಲಿಮರ ಬಹುಪತ್ನಿತ್ವ ಕಂಡು ಬೇರೆಯವರಿಗೆ ಹೊಟ್ಟೆಕಿಚ್ಚು: ಜಾವೇದ್‌ ಅಖ್ತರ್‌

    ಮುಸ್ಲಿಮರ ಬಹುಪತ್ನಿತ್ವ ಕಂಡು ಬೇರೆಯವರಿಗೆ ಹೊಟ್ಟೆಕಿಚ್ಚು: ಜಾವೇದ್‌ ಅಖ್ತರ್‌

    – ಹಿಂದೂಗಳು ಅನಧಿಕೃತವಾಗಿ ಇಬ್ಬರು ಪತ್ನಿಯರನ್ನ ಹೊಂದಿರ್ತಾರೆ ಎಂದ ಚಿತ್ರ ಸಾಹಿತಿ

    ನವದೆಹಲಿ: ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ (Uniform Civil Code Bil) ಬೆಂಬಲ ವ್ಯಕ್ತಪಡಿಸಿರುವ ಖ್ಯಾತ ಚಿತ್ರ ಸಾಹಿತಿ ಜಾವೇದ್‌ ಅಖ್ತರ್‌ (Javed Akhtar), ಇದೇ ವೇಳೆ ಮುಸ್ಲಿಮರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು ಎಂದು ಹಾಸ್ಯ ಮಾಡಿದ್ದಾರೆ.

    ಹಿಂದೂಗಳು (Hindu) ಅನಧಿಕೃತವಾಗಿ ಇಬ್ಬರು ಪತ್ನಿಯರನ್ನು ಹೊಂದಿರುತ್ತಾರೆ. ಮಾಹಿತಿ ಪ್ರಕಾರ ಇಂತಹವರ ಸಂಖ್ಯೆ ಹೆಚ್ಚಾಗಿಯೇ ಇದೆ. ಹೀಗಾಗಿ ಸಂಹಿತೆಯಲ್ಲಿ ಮುಸ್ಲಿಮರಿಗೆ ಮಾತ್ರ ಬಹುಪತ್ನಿತ್ವ ನಿಷೇಧ ಮಾಡುವುದು ಸರಿಯಲ್ಲ. ನಾನು ಸಮಾನ ಹಕ್ಕು ಮತ್ತು ಕಾನೂನಿನ (Law) ಪರವಾಗಿದ್ದೇನೆ. ನನ್ನ ಮಗ ಮತ್ತು ಮಗಳಿಗೂ ಆಸ್ತಿಯಲ್ಲಿ ಸಮಪಾಲು ನೀಡಿದ್ದೇನೆ. ಹಾಗೆಯೇ ಇದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಮುಸ್ಲಿಮರನ್ನು ಟೀಕಿಸುವುದಕ್ಕೆ ಮಾತ್ರವೇ ಜಾರಿಗೆ ತಂದಂತೆ ಆಗಬಾರದು ಎಂದು ಮನವಿ ಮಾಡಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆಯನ್ನು ಘೋಷಣೆ ಮಾಡಿತು. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ; 1835-2024ರ ವರೆಗೆ ಒಂದು ನೋಟ..

    ಏಕರೂಪ ನಾಗರಿಕ ಸಂಹಿತೆ:
    ರಾಜ್ಯದ ಮುಸ್ಲಿಮರು ಸೇರಿದಂತೆ ಎಲ್ಲಾ ಧರ್ಮದವರು 2ನೇ ವಿವಾಹವಾಗುವುದು ಅಪರಾಧ. ಒಬ್ಬ ವ್ಯಕ್ತಿಗೆ ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ. ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಇದನ್ನೂ ಓದಿ: UCC ಬಿಲ್‌ ಪಾಸ್‌ – ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ

    ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದವಾಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ ಸೇರಿದಂತೆ ಆಸ್ತಿಯಲ್ಲೂ ಸಮಪಾಲು ಸಿಗಲಿದೆ. ಲಿವ್ ಇನ್ ಸಂಗಾತಿ ತೊರೆದಲ್ಲಿ ಜೀವನಾಂಶ ಪಡೆಯಬಹುದು. ಸಂಬಂಧ ಮುಂದುವರಿಸಲು ಇಷ್ಟವಿಲ್ಲದ ಜೋಡಿ, ದಾಖಲೆಗಳನ್ನು ಸಲ್ಲಿಸಿ ಲಿಖಿತ ಹೇಳಿಕೆ ನೀಡಿ ಲಿವ್‌ ಇನ್‌ ಸಂಬಂಧ ಕಡಿತಗೊಳಿಸಬಹುದು. ಈ ಮಸೂದೆಯಿಂದ ಬುಡಕಟ್ಟು ಸಮುದಾಯವನ್ನು ಹೊರಗಿಡಲಾಗಿದೆ.

    ಅತ್ಯಾಚಾರ ಅಥವಾ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಗೆ ವಿಚ್ಛೇದನ ನೀಡುವ ಹಕ್ಕನ್ನು ಮಸೂದೆ ಮಹಿಳೆಯರಿಗೆ ನೀಡುತ್ತದೆ. ಮದುವೆಯಾದ ಒಂದೇ ವರ್ಷದೊಳಗೆ ವಿವಾಹ ವಿಚ್ಛೇದನ ಪಡೆಯುವುದನ್ನು ಅಸಾಧಾರಣ ಸಂದರ್ಭ ಹೊರತುಪಡಿಸಿ ಉಳಿದ ಸನ್ನಿವೇಶಗಳಲ್ಲಿ ನಿರ್ಬಂಧಿಸುವ ಅಂಶವಿದೆ. ಅತ್ಯಾಚಾರ ಪ್ರಕರಣದಲ್ಲಿ ಪತಿ ಪತಿ ಸಿಲುಕಿದರೆ ಆತನಿಂದ ಪತ್ನಿ ವಿಚ್ಛೇದನ ಕೇಳಬಹುದು. ಇದನ್ನೂ ಓದಿ: Shivamogga Lok Sabha 2024: ಬಿಎಸ್‌ವೈ v/s ಬಂಗಾರಪ್ಪ ಫ್ಯಾಮಿಲಿ – ಯಾರಿಗೆ ಮಣೆ ಹಾಕ್ತಾರೆ ಮಲೆನಾಡ ಜನ?

    ವಿವಾಹವಾದ 60 ದಿನದ ಒಳಗಡೆ ನೋಂದಣಿ ಮಾಡಿಸಬೇಕು. 2010ರ ಮಾ.26ರ ನಂತರ ಮದುವೆಯಾದವರು 6 ತಿಂಗಳೊಳಗೆ ನೋಂದಣಿ ಮಾಡಿಸುವುದು ಕಡ್ಡಾಯ. ನಿರ್ಲಕ್ಷಿಸಿದರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಆದರೆ ನೋಂದಣಿಯಾಗದ ವಿವಾಹವನ್ನು ಅಸಿಂಧು ಎಂದು ಪರಿಗಣನೆ ಮಾಡುವುದಿಲ್ಲ.

  • ಕೂಡಿ ಬಾಳುವ ಸಂಸ್ಕೃತಿ  ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ: ಜಾವೇದ್ ಅಖ್ತರ್

    ಕೂಡಿ ಬಾಳುವ ಸಂಸ್ಕೃತಿ ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ: ಜಾವೇದ್ ಅಖ್ತರ್

    ಮುಂಬೈ: ಕೂಡಿ ಬಾಳುವ ಸಂಸ್ಕೃತಿ ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ. ಭಾರತದಲ್ಲಿ ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯದಿಂದಾಗಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂದು ಹಿರಿಯ ಕವಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ (Javed Akhtar) ಅವರು ಹಿಂದೂ ಸಮುದಾಯವನ್ನು ಕೊಂಡಾಡಿದರು.

    ಮುಂಬೈನಲ್ಲಿ (Mumbai) ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಹಿಂದೂಗಳು ಉದಾರ ಮತ್ತು ಸ್ವಚ್ಛ ಮನಸ್ಸಿನವರು ಎಂದು ಹೇಳಿದರು. ಕೆಲವರು ಯಾವಾಗಲೂ ಅಸಹಿಷ್ಣುತೆಯನ್ನು ಹೊಂದಿದ್ದಾರೆ. ಹಿಂದೂಗಳು ಹಾಗಲ್ಲ, ಅವರು ಈ ಶ್ರೇಷ್ಠ ಗುಣವನ್ನು ಹೊಂದಿದ್ದಾರೆ. ಹೀಗಾಗಿ ಅದನ್ನು ಕಳೆದುಕೊಳ್ಳಬೇಡಿ, ಕಳೆದುಕೊಂಡರೆ ನೀವು ಇತರರಂತೆ ಆಗುತ್ತೀರಿ ಎಂದರು.

    ಇಡೀ ಜಗತ್ತಿನಲ್ಲಿ ಇಂದು ಅಸಹಿಷ್ಣುತೆ ಹೆಚ್ಚಾಗಿದೆ. ಆದರೆ ಭಾರತದಲ್ಲಿ ಮಾತ್ರ ಎಲ್ಲಾ ಧರ್ಮ, ಜಾತಿಯ ಜನರು ಒಂದಾಗಿ ಬದುಕುತ್ತಿದ್ದಾರೆ. ಈ ಕೂಡಿಬಾಳುವ ಸಂಸ್ಕೃತಿ ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ. ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ. ಅದು ಈ ನೆಲದ ಸಂಸ್ಕøತಿಯೂ ಹೌದು ಎಂದಿದ್ದಾರೆ.

    ಭಗವಾನ್ ರಾಮ ಮತ್ತು ಸೀತಾ ದೇವಿಯ ನಾಡಿನಲ್ಲಿ ಹುಟ್ಟಿದ್ದಕ್ಕೆ ನಾನು ಹೆಮ್ಮೆಪಡುತ್ತೇನೆ. ತಾನು ನಾಸ್ತಿಕನಾಗಿದ್ದಾಗಲೇ ರಾಮ ಮತ್ತು ಸೀತೆಯನ್ನು ಈ ದೇಶದ ಸಂಪತ್ತು ಎಂದು ಪರಿಗಣಿಸುತ್ತಾನೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ

    ಇದೇ ವೇಳೆ ಅಭಿವ್ಯಕ್ತಿ ಸ್ವಾತಂತ್ರ್ಯದ ಕುಸಿತದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು. ಇದು ಹಿಂದೂ ಸಂಸ್ಕೃತಿ, ಇದು ನಾಗರಿಕತೆ. ಇದು ನಮಗೆ ಪ್ರಜಾಸತ್ತಾತ್ಮಕ ಧೋರಣೆಗಳನ್ನು ಕಲಿಸಿದೆ. ಅದಕ್ಕಾಗಿಯೇ ಈ ದೇಶದಲ್ಲಿ ಪ್ರಜಾಪ್ರಭುತ್ವವಿದೆ. ನಾವು ಸರಿ, ಎಲ್ಲರೂ ತಪ್ಪು ಎಂದು ಭಾವಿಸುವುದು ಹಿಂದೂಗಳ ಕೆಲಸವಲ್ಲ. ಇದನ್ನು ನಿಮಗೆ ಕಲಿಸಿದವರು ತಪ್ಪು ಎಂದು ಅವರು ತಿಳಿಸಿದರು.

  • ಮುಂಬೈ ದಾಳಿಯ ದುಷ್ಕರ್ಮಿಗಳು ಇನ್ನೂ ಮುಕ್ತವಾಗಿ ಓಡಾಡಿಕೊಂಡಿದ್ದಾರೆ – ಪಾಕ್ ನೆಲದಲ್ಲೇ ಜಾವೇದ್ ಅಖ್ತರ್ ಕಿಡಿ

    ಮುಂಬೈ ದಾಳಿಯ ದುಷ್ಕರ್ಮಿಗಳು ಇನ್ನೂ ಮುಕ್ತವಾಗಿ ಓಡಾಡಿಕೊಂಡಿದ್ದಾರೆ – ಪಾಕ್ ನೆಲದಲ್ಲೇ ಜಾವೇದ್ ಅಖ್ತರ್ ಕಿಡಿ

    ಇಸ್ಲಾಮಾಬಾದ್: 2008ರ ನವೆಂಬರ್ 26ರಂದು ಮುಂಬೈನಲ್ಲಿ ಭಯೋತ್ಪಾದನಾ ದಾಳಿ (Mumbai Terror Attack) ನಡೆಸಿದ ದುಷ್ಕರ್ಮಿಗಳು, ಭಾರತ ದೂರು ನೀಡಿದ ಹೊರತಾಗಿಯೂ ಇನ್ನೂ ಪಾಕಿಸ್ತಾನದಲ್ಲಿ (Pakistan) ಮುಕ್ತವಾಗಿ ಓಡಾಡಿಕೊಂಡಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ (Javed Akhtar) ಹೇಳಿದ್ದಾರೆ.

    ಖ್ಯಾತ ಉರ್ದು ಕವಿ ಫೈಜ್ ಅಹ್ಮದ್ ಅವರ ಸ್ಮರಣಾರ್ಥ ಲಾಹೋರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಖ್ತರ್ ಪಾಲ್ಗೊಂಡಿದ್ದರು. ಈ ವೇಳೆ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, 2008ರ ನವೆಂಬರ್ 26ರಂದು ನಡೆದ ಭೀಕರ ಮುಂಬೈ ದಾಳಿಯನ್ನು ನೆನಪಿಸಿಕೊಂಡರು. ಇದನ್ನೂ ಓದಿ: UPI-PayNow ಲಿಂಕ್‌ – ಇನ್ನು ಮುಂದೆ ಸಿಂಗಾಪುರದಿಂದ ಸುಲಭವಾಗಿ ಭಾರತಕ್ಕೆ ಹಣ ಕಳುಹಿಸಿ

    `ನೀವು ಪಾಕಿಸ್ತಾನಕ್ಕೆ ಹಲವು ಬಾರಿ ಭೇಟಿ ನೀಡಿದ್ದೀರಿ, ಆದ್ರೆ ನೀವು ಹಿಂತಿರುಗುವಾಗ, ಇವರು ಒಳ್ಳೆಯ ಜನ ಅನ್ನಿಸುತ್ತಾ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಒಬ್ಬರನ್ನೊಬ್ಬರು ದೂಷಿಸಬಾರದು. ಅದರಿಂದ ಸಮಸ್ಯೆಗಳು ಪರಿಹಾರ ಆಗುವುದಿಲ್ಲ. ಅಂದು ಮುಂಬೈ ಮೇಲೆ ದಾಳಿ ಹೇಗೆ ನಡೆಯಿತು ಎಂಬುದನ್ನ ನಾವು ನೋಡಿದ್ದೇವೆ. ಆದ್ರೆ ಅವರು ನಿಮ್ಮ ದೇಶದಲ್ಲಿ (ಪಾಕಿಸ್ತಾನ) ಮುಕ್ತವಾಗಿ ಓಡಾಡಿಕೊಂಡಿದ್ದಾರೆ ಎಂದು ಹೇಳಿದರು.

    ಭಾರತವು ಪಾಕಿಸ್ತಾನಿ ಹಿರಿಯ ಗಾಯಕರಾದ ನುಸ್ರತ್ ಫತೇ ಅಲಿ ಖಾನ್ ಮತ್ತು ಮೆಹದಿ ಹಸನ್‌ಗಾಗಿ ದೊಡ್ಡ ಕಾರ್ಯಕ್ರಮಗಳನ್ನ ಆಯೋಜಿಸಿತ್ತು. ಆದರೆ ಲತಾ ಮಂಗೇಶ್ಕರ್ ಅವರಿಗಾಗಿ ಪಾಕಿಸ್ತಾನ ಯಾವುದೇ ಕಾರ್ಯಕ್ರಮ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಉಕ್ರೇನ್‌ಗೆ ಜೋ ಬೈಡನ್ ಅಚ್ಚರಿ ಭೇಟಿ – ಭಾರೀ ಶಸ್ತ್ರಾಸ್ತ್ರ ನೆರವು ಘೋಷಿಸಿದ US ಅಧ್ಯಕ್ಷ

    2008ರ ನವೆಂಬರ್ 26ರಂದು 10 ಪಾಕಿಸ್ತಾನಿ ಭಯೋತ್ಪಾದಕರು (Pakistan Terrorists) ಸಮುದ್ರ ಮಾರ್ಗದ ಮೂಲಕ ಭಾರತ ಪ್ರವೇಶಿಸಿ ಮುಂಬೈಯ 8 ಸ್ಥಳಗಳಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. 18 ಭದ್ರತಾ ಸಿಬ್ಬಂದಿ ಸೇರಿ 166 ಮಂದಿಯನ್ನು ಹತ್ಯೆ ಮಾಡಿದ್ದರು. ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿತ್ತು. ನೂರಾರು ಮಂದಿ ಗಾಯಗೊಂಡರು. ಅಂದಿನ ಭಯೋತ್ಪಾದನಾ ನಿಗ್ರಹ ದಳದ (ATS) ಮುಖ್ಯಸ್ಥ ಹೇಮಂತ್ ಕರ್ಕರೆ, ಮೇಜರ್ ಸಂದೀಪ್ ಉನ್ನಿಕೃಷ್ಣನ್, ಮುಂಬೈನ ಹೆಚ್ಚುವರಿ ಪೊಲೀಸ್ ಆಯುಕ್ತ ಅಶೋಕ್ ಕಾಮ್ಟೆ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ವಿಜಯ್ ಸಲಸ್ಕರ್ ದಾಳಿಯಲ್ಲಿ ಹುತಾತ್ಮರಾಗಿದ್ದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಂಗನಾ ರಣಾವತ್ ಗೆ ಚಿತ್ರ ಸಾಹಿತಿ ಜಾವೇದ್ ಅಖ್ತರ್ ರಿಂದ ಬೆದರಿಕೆ ಆರೋಪ

    ಕಂಗನಾ ರಣಾವತ್ ಗೆ ಚಿತ್ರ ಸಾಹಿತಿ ಜಾವೇದ್ ಅಖ್ತರ್ ರಿಂದ ಬೆದರಿಕೆ ಆರೋಪ

    ಬಾಲಿವುಡ್ ನ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಮತ್ತು ಕಂಗನಾ ರಣಾವತ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಾಹಿನಿಯೊಂದರಲ್ಲಿ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಕಂಗನಾ ಮಾತನಾಡಿದ್ದಾರೆ ಎಂದು ಜಾವೇದ್ ಅಖ್ತರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲು ಏರಿತ್ತು. ಹಾಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಂಗನಾಗೆ ನೋಟಿಸ್ ಜಾರಿ ಆಗಿತ್ತು.

    ಜಾವೇದ್ ಅಖ್ತರ್ ಹೂಡಿರುವ ಮಾನನಷ್ಟ ದಾವೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾದ ಕಂಗನಾ ರಣಾವತ್, ತಮಗೆ ಜಾವೇದ್ ಅಖ್ತರ್ ಅವರಿಂದ ಜೀವ ಬೆದರಿಕೆಯಿದೆ ಎಂದು ಆರೋಪ ಮಾಡಿದ್ದಾರೆ. ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಕಂಗನಾ ‘ಜಾವೇದ್ ಅವರಿಗೆ ನಾನು ಅಪಮಾನ ಮಾಡಿಲ್ಲ. ನನ್ನ ಸಹೋದರಿ ಕೂಡ ಅಂತಹ ಕೆಲಸಕ್ಕೆ ಕೈ ಹಾಕಿಲ್ಲ. ಆದರೂ, ನನ್ನ ವಿರುದ್ಧ ಅವರು ಬೆದರಿಕೆ ಹಾಕಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:ತೆಲುಗಿನ ಮಹೇಶ್ ಬಾಬುಗೆ ತಂದೆಯಾಗಿ ನಟಿಸ್ತಾರಾ ರಿಯಲ್ ಸ್ಟಾರ್ ಉಪೇಂದ್ರ

    ನ್ಯಾಯಾಲಯಕ್ಕೆ ಹಾಜರಾದ ನಂತರ, ತಮ್ಮ ಹೇಳಿಕೆಯನ್ನು ದಾಖಲಿಸುವಾಗ ತಮ್ಮ ಸಹೋದರಿ ಮತ್ತು ತಮ್ಮ ವಕೀಲರು ಮಾತ್ರ ಇರಬೇಕು ಎಂದು ಮನವಿ ಮಾಡಿದರು ಕಂಗನಾ ರಣಾವತ್. ಅದಕ್ಕೆ ನ್ಯಾಯಾಲಯವು ಪುರಸ್ಕರಿಸಿತು. ನ್ಯಾಯಾಲಯದ ಮುಂದೆ ಗಂಭೀರ ಆರೋಪವನ್ನೂ ಮಾಡಿರುವ ಕಂಗನಾ ‘ಜಾವೇದ್ ಅವರ ಮಾತು ನನ್ನನ್ನು ಆತ್ಮಹತ್ಯೆಗೆ ಪ್ರಚೋದಿಸಿದೆ ಎಂದೂ ಹೇಳಿದ್ದಾರೆ. ಜಾವೇದ್ ಮತ್ತು ಕಂಗನಾ ನಡುವಿನ ವಾಗ್ವಾದವನ್ನೂ ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜುಲೈ 4ಕ್ಕೆ ಕೋರ್ಟಿಗೆ ಹಾಜರಾಗಲಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್

    ಜುಲೈ 4ಕ್ಕೆ ಕೋರ್ಟಿಗೆ ಹಾಜರಾಗಲಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್

    ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಮೇಲೆಂದ ಮೇಲೆ ಕಷ್ಟಗಳು ಎದುರಾಗುತ್ತಿವೆ. ಮೊನ್ನೆಯಷ್ಟೇ ಇವರ ನಟನೆಯ ಧಾಕಡ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದೆ. ಅಲ್ಲದೇ, ಅವರು ಆಡುವ ಮಾತುಗಳಿಂದಾಗಿ ಅನೇಕರು ಇವರ ಸಿನಿಮಾಗಳಿಂದ ಹಿಂದೆ ಸರಿಯುವುದಾಗಿ ಮಾತನಾಡಿದ್ದಾರೆ. ಅದರ ಬೆನ್ನಲ್ಲೇ ಮುಂಬೈ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಜರಾಗುವಂತೆ ಕಂಗನಾ ರಣಾವತ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

    ಬಾಲಿವುಡ್ ನ ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಅಂದೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಜುಲೈ 4 ರಂದು ರಣಾವತ್ ಖುದ್ದಾಗಿ ಹಾಜರಾಗುವಂತೆ ಸೂಚಿಸಿತು. ಇದಕ್ಕೂ ಮೊದಲು ಸೋಮವಾರ ಕಂಗನಾ ಹಾಜರಾತಿ ವಿನಾಯತಿಯನ್ನು ಬಯಸಿ, ಇವರ ಪರ ವಕೀಲರು ಕೋರ್ಟಿಗೆ ಮನವಿ ಮಾಡಿಕೊಂಡರು. ಇದನ್ನೂ ಓದಿ:ಪಿಂಕ್ ಕಲರ್ ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

    ಗೀತರಚನೆಕಾರ ಜಾವೇದ್ ಅಖ್ತರ್ ಅವರಿಗೆ ಟಿವಿ ಸಂದರ್ಶನವೊಂದರಲ್ಲಿ ಅವರ ವರ್ಚಸ್ಸಿಗೆ ಧಕ್ಕೆ ತರುವಂತಹ ಮಾತುಗಳನ್ನು ಕಂಗನಾ ರಣಾವತ್ ಆಡಿದ್ದಾರೆ ಎಂದು ಆರೋಪಿಸಿ, ಅಖ್ತರ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕಳೆದ ವರ್ಷ ನವೆಂಬರ್ ತಿಂಗಳಿಂದಲೇ ಈ ಕೇಸು ನಡೆಯುತ್ತಿದೆ.

    Live Tv

  • ನಾನು ಯಾವತ್ತೂ ಹಿಜಬ್, ಬುರ್ಖಾ ಪರ ಇಲ್ಲ: ಜಾವೇದ್ ಅಖ್ತರ್

    ನಾನು ಯಾವತ್ತೂ ಹಿಜಬ್, ಬುರ್ಖಾ ಪರ ಇಲ್ಲ: ಜಾವೇದ್ ಅಖ್ತರ್

    ಮುಂಬೈ: ನಾನು ಯಾವತ್ತೂ ಹಿಜಬ್, ಬುರ್ಖಾ ಪರ ಇಲ್ಲ. ನಾನು ನನ್ನ ನಿಲುವಿಗೆ ಬದ್ಧ ಎಂದು ಬಾಲಿವುಡ್‍ನ ಹಿರಿಯ ಗೀತ ರಚನೆಕಾರ ಜಾವೇದ್ ಅಖ್ತರ್ ಹೇಳಿದ್ದಾರೆ.

    ಕರ್ನಾಟಕದಲ್ಲಿ ಹಿಜಬ್ ವಿವಾದ ಸಾಕಷ್ಟು ಸುದ್ದಿಯಾಗುತ್ತಿದೆ. ಹಿಂದೂ ಪರ ಪ್ರತಿಭಟನಾಕಾರರು ಹಿಜಬ್ ತೊಟ್ಟ ಹುಡುಗಿಯರನ್ನು ಸುತ್ತುಗಟ್ಟಿ ಘೋಷಣೆಗಳನ್ನು ಕೂಗಿದ್ದರ ಬೆನ್ನಲ್ಲೇ ಜಾವೇದ್ ಅಖ್ತರ್ ಹಿಜಬ್ ವಿವಾದದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

    ಟ್ವೀಟ್‍ನಲ್ಲಿ ಏನಿದೆ?: ನಾನು ಯಾವತ್ತೂ ಹಿಜಬ್ ಅಥವಾ ಬುರ್ಖಾ ಪರ ಇಲ್ಲ. ಆದರೆ ನಾನು ನನ್ನ ನಿಲುವಿಗೆ ಬದ್ಧನಾಗಿದ್ದೇನೆ. ಬುರ್ಖಾ ತೊಟ್ಟ ಹುಡುಗಿಯರನ್ನು ಗುಂಪೊಂದು ಸುತ್ತುವರಿದಿದ್ದನ್ನು ಖಂಡಿಸುತ್ತೇನೆ. ಇದು ಅವರ ಪುರುಷತ್ವದ ಪರಿಕಲ್ಪನೆಯೇ? ಕನಿಕರ ಪಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಜಾವೇದ್ ಅವರು ಹಿಂದಿನಂದಲೂ ಹಿಂದೂ ಮತ್ತು ಮುಸ್ಲಿಂ ಮೂಲಭೂತವಾದವನ್ನು ಖಂಡಿಸುತ್ತಾ ಬಂದವರು. ಹಿಂದೂಗಳನ್ನು ಟೀಕಿಸುವಂತೆಯೇ, ಮುಸಲ್ಮಾನರನ್ನೂ ಟೀಕಿಸಿದವರು. ಇದೀಗ ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದದ ಕುರಿತಾಗಿ ಟ್ವೀಟ್ ಮಾಡಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

    ಹೈಕೋರ್ಟ್ ಹೇಳಿದ್ದೇನು?: ನಮ್ಮದು ನಾಗರಿಕ ಸಮಾಜವಾಗಿ ಯಾವುದೇ ವ್ಯಕ್ತಿ ಧರ್ಮ, ಸಂಸ್ಕೃತಿ ಅಥವಾ ಇತರೆ ಹೆಸರಲ್ಲಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಅನುಮತಿ ಇಲ್ಲ. ಮುಗಿಯದ ಪ್ರತಿಭಟನೆಗಳು ಮತ್ತು ಅನಿರ್ದಿಷ್ಟವಾಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿರುವುದು ಒಳ್ಳೆಯದಲ್ಲ. ತುರ್ತು ಆಧಾರದಲ್ಲಿ ಈ ವಿಷಯಗಳ ವಿಚಾರಣೆ ಮುಂದುವರಿಯಲಿದೆ. ಪ್ರತಿಭಟನೆಗಳ ಮುಂದುವರಿಕೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದರ ಬದಲು ತರಗತಿಗಳಿಗೆ ಮರುಳುವುದರಿಂದ ವಿದ್ಯಾರ್ಥಿಗಳ ಹಿತಾಸಕ್ತಿಗೆ ಒಳ್ಳೆಯದು. ಶೈಕ್ಷಣಿಕ ವರ್ಷ ಶೀಘ್ರವೇ ಅಂತ್ಯವಾಗಲಿದೆ. ಸಂಬಂಧಪಟ್ಟವರು ಮತ್ತು ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಆಶಿಸುತ್ತೇವೆ ಮತ್ತು ನಂಬುತ್ತೇವೆ ಎಂದು ಹೈಕೋರ್ಟ್ ಹೇಳಿದೆ.

    ಮೇಲ್ಕಾಣಿಸಿದ ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟವರಿಗೆ ಆದಷ್ಟು ಬೇಗ ಶಿಕ್ಷಣ ಸಂಸ್ಥೆಗಳನ್ನು ತೆರೆಯುವಂತೆಯೂ ಮತ್ತು ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಮರಳಲು ಅವಕಾಶ ಮಾಡಿಕೊಡುವಂತೆಯೂ ಕೋರುತ್ತೇವೆ. ಈ ಅರ್ಜಿಗಳ ವಿಚಾರಣೆ ಬಾಕಿ ಇರಿಸಿ, ಎಲ್ಲ ವಿದ್ಯಾರ್ಥಿಗಳು ಅವರವರ ಧರ್ಮ ಅಥವಾ ನಂಬಿಕೆ ಕೇಸರಿ ಶಾಲು, ಹಿಜಬ್, ಧರ್ಮ ಧ್ವಜಗಳು ಅಥವಾ ಇತರೆಗಳನ್ನು ತರಗತಿಯೊಳಗೆ ಮುಂದಿನ ಆದೇಶದವರೆಗೂ ಧರಿಸದಂತೆ ನಿಬರ್ಂಧಿಸುತ್ತಿದ್ದೇವೆ. ಈ ಆದೇಶ ಕಾಲೇಜು ಅಭಿವೃದ್ಧಿ ಸಮಿತಿ ವಿದ್ಯಾರ್ಥಿ ವಸ್ತ್ರ ಸಂಹಿತೆ, ಸಮವಸ್ತ್ರ ನಿಗದಿಪಡಿಸಿರುವ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಆಗಲಿದೆ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

  • RSS ವಿರುದ್ಧ ಹೇಳಿಕೆ – ಥಾಣೆ ಕೋರ್ಟ್‍ನಿಂದ ಜಾವೇದ್ ಅಖ್ತರ್‌ಗೆ ನೋಟಿಸ್

    RSS ವಿರುದ್ಧ ಹೇಳಿಕೆ – ಥಾಣೆ ಕೋರ್ಟ್‍ನಿಂದ ಜಾವೇದ್ ಅಖ್ತರ್‌ಗೆ ನೋಟಿಸ್

    ಮುಂಬೈ: ಆರ್‍ಎಸ್‍ಎಸ್‍ನ್ನು ತಾಲಿಬಾನ್‍ಗೆ ಹೋಲಿಸಿ ಹೇಳಿಕೆ ನೀಡಿದ್ದ ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್‌ಗೆ ಮಹಾರಾಷ್ಟ್ರದ ಥಾಣೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಜಾವೇದ್ ಅಖ್ತರ್ ಹೇಳಿಕೆ ಖಂಡಿಸಿ ಆರ್‍ಎಸ್‍ಎಸ್ ಕಾರ್ಯಕರ್ತರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಕುರಿತು ಕೋರ್ಟ್ ಇದೀಗ ನೋಟಿಸ್ ಜಾರಿ ಮಾಡಿದೆ. ನವೆಂಬರ್ 12ರಂದು ಕೋರ್ಟ್‍ಗೆ ಹಾಜರಾಗಿ ಕಾರಣ ತಿಳಿಸುವಂತೆ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಹಾಗೂ ಜಂಟಿ ಸಿವಿಲ್ ನ್ಯಾಯಾಧೀಶರ(ಹಿರಿಯ ವಿಭಾಗ) ನ್ಯಾಯಾಲಯವು ಜಾವೇದ್ ಅಖ್ತರ್ ಗೆ ಸೂಚಿಸಿದೆ. ಇದನ್ನೂ ಓದಿ: ಹಾನಗಲ್, ಸಿಂಧಗಿ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ನಿಗದಿ

    ಆರ್‍ಎಸ್‍ಎಸ್ ಕಾರ್ಯಕರ್ತ ವಿವೇಕ್ ಚಂಪಾನೇಕರ್ ಅವರು 1 ರೂಪಾಯಿ ಪರಿಹಾರ ನೀಡುವಂತೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

    ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್ ಅವರು ಸುದ್ದಿ ವಾಹಿನಿಯೊಂದಕ್ಕೆ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಪಂಚದಾದ್ಯಂತ ಬಲಪಂಥೀಯರು ಅಸಾಧಾರಣ ಸಾಮ್ಯತೆ ಹೊಂದಿದ್ದಾರೆ. ತಾಲಿಬಾನಿಗಳಿಗೆ ಇಸ್ಲಾಮಿಕ್ ದೇಶ ಬೇಕು, ಇವರಿಗೆ ಹಿಂದೂ ರಾಷ್ಟ್ರ ಬೇಕು ಎಂದು ಆರ್‍ಎಸ್‍ಎಸ್ ಹೆಸರು ಹೇಳದೆಯೇ ಮಾತನಾಡಿದ್ದರು. ಇದನ್ನೂ ಓದಿ: ಕೋವಿಡ್ 19 ಬೂಸ್ಟರ್ ಡೋಸ್ ಪಡೆದ ಜೋ ಬೈಡನ್

    ದೂರುದಾರರ ಪರವಾಗಿ ವಾದ ಮಂಡಿಸಿದ ವಕೀಲ ಆದಿತ್ಯ ಮಿಶ್ರಾ, ಅಖ್ತರ್ ಅವರು ಸುದ್ದಿವಾನಿಯೊಂದಿಗೆ ಮಾತನಾಡುವಾಗ ಆರ್‍ಎಸ್‍ಎಸ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

  • ಬುರ್ಕಾ ಬ್ಯಾನ್ ಮಾಡಿದ್ರೆ ಗುಂಘಟ್ ಕೂಡ ನಿಷೇಧವಾಗ್ಬೇಕು: ಜಾವೇದ್ ಅಖ್ತರ್

    ಬುರ್ಕಾ ಬ್ಯಾನ್ ಮಾಡಿದ್ರೆ ಗುಂಘಟ್ ಕೂಡ ನಿಷೇಧವಾಗ್ಬೇಕು: ಜಾವೇದ್ ಅಖ್ತರ್

    ಭೋಪಾಲ್: ದೇಶದಲ್ಲಿ ಬುರ್ಕಾವನ್ನು ಬ್ಯಾನ್ ಮಾಡುವುದೇ ಆದರೆ ರಾಜಸ್ಥಾನದಲ್ಲಿ ಹಿಂದೂ ಮಹಿಳೆಯರು ಧರಿಸುವ ಗುಂಘಟ್ ನಿಷೇಧಿಸಬೇಕು ಎಂದು ಕವಿ ಜಾವೇದ್ ಅಖ್ತರ್ ಆಗ್ರಹಿಸಿದ್ದಾರೆ.

    ಶಿವಸೇನೆ ಬುಧವಾರ ನೀಡಿದ್ದ ಹೇಳಿಕೆ ಪ್ರತಿಕ್ರಿಯೆ ನೀಡಿರುವ ಜಾವೇದ್ ಅಖ್ತರ್ ಅವರು, ದೇಶದಲ್ಲಿ ಬುರ್ಕಾ ನಿಷೇಧಕ್ಕೆ ನನ್ನಿಂದ ಯಾವುದೇ ಆಕ್ಷೇಪವಿಲ್ಲ. ಆದರೆ ರಾಜಸ್ಥಾನದಲ್ಲಿ ನಡೆಯುವ ಲೋಕಸಭಾ ಮತದಾನದ ಕೊನೆ ಹಂತಕ್ಕೂ ಮುನ್ನ ಗುಂಘಟ್ ಮೇಲೂ ಸರ್ಕಾರ ನಿಷೇಧ ಹೇರುವ ಕುರಿತು ಹೇಳಿಕೆ ನೀಡುತ್ತಾ ಎಂದು ಪ್ರಶ್ನಿಸಿದ್ದಾರೆ.

    ದೇಶದಲ್ಲಿ ಬುರ್ಕಾ ಹಾಗೂ ಗುಂಘಟ್ ಎರಡರ ಮೇಲೂ ನಿಷೇಧ ಹೇರಿದರೆ ನನಗೆ ಖುಷಿಯಾಗುತ್ತದೆ. ನನ್ನ ಕುಟುಂಬದಲ್ಲಿ ಕೆಲಸ ಮಾಡಲು ಮಹಿಳೆಯರಿದ್ದಾರೆ. ಅವರಿಂದಾಗಿ ನನಗೆ ಬುರ್ಖಾದ ಬಗ್ಗೆ ಸ್ವಲ್ಪ ಜ್ಞಾನವಿದೆ. ನಮ್ಮ ಮನೆಯಲ್ಲಿ ಬುರ್ಕಾ ಧರಿಸುವುದನ್ನು ನಾನು ನೋಡಿಲ್ಲ ಂದು ಹೇಳಿದ್ದಾರೆ.

    ಇರಾಕ್ ಅತ್ಯಂತ ಸಂಪ್ರದಾಯಬದ್ಧ ಮುಸ್ಲಿಂ ದೇಶವಾಗಿದೆ. ಆದರೆ ಅಲ್ಲಿನ ಮಹಿಳೆಯರು ತಮ್ಮ ಮುಖವನ್ನು ಮುಚ್ಚುವುದಿಲ್ಲ. ಈಗ ಶ್ರೀಲಂಕಾದಲ್ಲಿ ಮುಖ ಮುಚ್ಚಿಕೊಳ್ಳದಂತಹ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

    ಶಿವಸೇನೆ ಹೇಳಿದ್ದೇನು?:
    ಶ್ರೀಲಂಕಾದಲ್ಲಿ ನಿಷೇಧಗೊಂಡಂತೆ ಭಾರತದಲ್ಲೂ ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕ ಸ್ಥಳದಲ್ಲಿ ಬುರ್ಕಾವನ್ನು ನಿಷೇಧಿಸಬೇಕೆಂದು ಮಹಾರಾಷ್ಟ್ರದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾದ ಶಿವಸೇನೆ ಆಗ್ರಹಿಸಿತ್ತು.

    ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದ ಸಂಪಾದಕೀಯದಲ್ಲಿ, ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು ತಮ್ಮ ದೇಶದಲ್ಲಿ ಬುರ್ಕಾವನ್ನು ನಿಷೇಧ ಮಾಡಿದ್ದಾರೆ. ಅದೇ ರೀತಿಯಲ್ಲಿ ಭಾರತದಲ್ಲೂ ಬುರ್ಕಾವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದೆ.

    ಬುರ್ಕಾ ಧರಿಸುವುದರಿಂದ ಉಗ್ರರು ತಮ್ಮ ಮುಖ ಮುಚ್ಚಿಕೊಂಡು ಸುಲಭವಾಗಿ ತಪ್ಪಿಸಿಕೊಳ್ಳುತ್ತಾರೆ. ಈ ರೀತಿಯ ಸಂಪೂರ್ಣ ಮುಖ ಮುಚ್ಚಿಕೊಳ್ಳುವ ಉಡುಪುಗಳನ್ನು ಧರಿಸುವುದರಿಂದ ರಾಷ್ಟ್ರೀಯ ಭದ್ರತೆಗೆ ಹಿನ್ನಡೆಯಾಗುತ್ತಿದೆ. ಭಾರತದ ಮೇಲೂ ಉಗ್ರರು ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಭದ್ರತೆಯ ದೃಷ್ಟಿಯಿಂದ ನಮ್ಮ ದೇಶದಲ್ಲೂ ಬುರ್ಕಾವನ್ನು ನಿಷೇಧಿಸುವಂತೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಹೇಳಿತ್ತು.

    ಈ ಬೆನ್ನಲ್ಲೇ ಕೇರಳದ ಅತಿದೊಡ್ಡ ಶಿಕ್ಷಣ ಸಂಸ್ಥೆಯಾದ ಕ್ಯಾಲಿಕಟ್‍ನ ಹೆಸರಾಂತ ಮುಸ್ಲಿಂ ಶಿಕ್ಷಣ ಸಂಸ್ಥೆ (ಎಂಇಎಸ್) ತನ್ನ ಕಾಲೇಜ್ ಕ್ಯಾಂಪಸ್‍ನಲ್ಲಿ ಬುರ್ಕಾ ವನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಪಿ.ಎ.ಫಜಲ್ ಗಫೂರ್ ಅವರು, ಕೇರಳದಲ್ಲಿ ಇಸ್ಲಾಮ್ ಧರ್ಮವನ್ನು ಪಾಲಿಸೋಣ. ಆದರೆ ಮಧ್ಯಪ್ರಾಚ್ಯದ ಇಸ್ಲಾಂನಲ್ಲ ಎಂದು ತಿಳಿಸಿದ್ದರು.

    ಸಂಪ್ರದಾಯವಾದಿ ಮುಸ್ಲಿಂ ಗುಂಪುಗಳು ಕಳೆದ ಐದು ವರ್ಷಗಳಿಂದ ಕೇರಳ ಸಂಸ್ಥೆಗಳಲ್ಲಿ ಇದೇ ರೀತಿಯ ಉಡುಪನ್ನು ಧರಿಸಬೇಕು ಎಂದು ಒತ್ತಾಯಿಸುತ್ತಿವೆ. ಇವರ ಒತ್ತಾಯಕ್ಕೆ ಮಣಿಯದೇ ನಾವು ನಮ್ಮ ಸಂಸ್ಥೆಯಲ್ಲಿ ಸಲ್ವಾರ್ ಕಮೀಝ್ ಡ್ರೆಸ್ ಕೋಡ್ ಜಾರಿ ಮಾಡಿದ್ದೇವೆ ಎಂದು ಗಫೂರ್ ಹೇಳಿದ್ದರು.