Tag: jawaan film

  • ಶೂಟಿಂಗ್ ವೇಳೆ ಶಾರುಖ್ ಖಾನ್‌ಗೆ ಪೆಟ್ಟು- ಆಸ್ಪತ್ರೆಗೆ ದಾಖಲು

    ಶೂಟಿಂಗ್ ವೇಳೆ ಶಾರುಖ್ ಖಾನ್‌ಗೆ ಪೆಟ್ಟು- ಆಸ್ಪತ್ರೆಗೆ ದಾಖಲು

    ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ಅವರು ಪಠಾಣ್ (Pathaan) ಸಿನಿಮಾದ ಸೂಪರ್ ಸಕ್ಸಸ್ ಖುಷಿಯಲ್ಲಿದ್ದಾರೆ. ಈ ಬೆನ್ನಲ್ಲೇ ಸಾಲು ಸಾಲು ಸಿನಿಮಾಗಳಲ್ಲಿ ‘ಪಠಾಣ್’ ಹೀರೋ ಬ್ಯುಸಿಯಾಗಿದ್ದಾರೆ. ಇದೀಗ ಚಿತ್ರೀಕರಣವೊಂದರಲ್ಲಿ ಶಾರುಖ್ ಖಾನ್‌ಗೆ ಏಟಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ‘ಪಠಾಣ್’ ಸಿನಿಮಾದ ಸಕ್ಸಸ್ ನಂತರ ಶಾರುಖ್ ಖಾನ್ ಅವರ ಜವಾನ್ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಈ ಸಿನಿಮಾದ ರಿಲೀಸ್‌ಗೆ ಎದುರು ನೋಡ್ತಿರೋ ಅಭಿಮಾನಿಗಳಿಗೆ ಇದೀಗ ಶಾರುಖ್ ಬಗ್ಗೆ ಬ್ಯಾಡ್ ನ್ಯೂಸ್ ಸಿಕ್ಕಿದೆ. ಶೂಟಿಂಗ್ ಸಂದರ್ಭದಲ್ಲಿ ಶಾರುಖ್ ಖಾನ್ ಮೂಗಿದೆ (Injury) ಏಟಾಗಿದೆ. ಅಷ್ಟಕ್ಕೂ ಈ ಘಟನೆ ನಡೆದಿದ್ದು, ಹೇಗೆ.? ಇದನ್ನೂ ಓದಿ:ನಟಿ ಅನು ಗೌಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ಶಾರುಖ್ ಖಾನ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ವೊಂದಕ್ಕಾಗಿ ನಟ ಭಾಗಿಯಾಗಿದ್ದರು. ಲಾಸ್ ಏಂಜಲೀಸ್‌ನಲ್ಲಿ ಶಾರುಖ್ ಚಿತ್ರೀಕರಣದಲ್ಲಿದ್ದಾಗ ಅವರ ಮೂಗಿಗೆ ಏಟಾಗಿ ರಕ್ತ ಸುರಿದಿದೆ. ಕೂಡಲೇ ನಟನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತ ನಿಲ್ಲಲು ಶಸ್ತಚಿಕಿತ್ಸೆಯನ್ನು ಮಾಡಿದ್ದಾರೆ. ಯಾವುದೇ ಹೆದರುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಬ್ಯಾಂಡೇಜ್‌ವೊಂದನ್ನ ಮೂಗಿಗೆ ಸುತ್ತಿ ಕಳುಹಿಸಿದ್ದಾರೆ. ಸದ್ಯ ಶಾರುಖ್ ಖಾನ್ ತಮ್ಮ ಮುಂಬೈ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾರುಖ್‌ ಖಾನ್‌ ಜೊತೆ ಕನ್ನಡತಿ ಪ್ರಿಯಾಮಣಿ ರೊಮ್ಯಾನ್ಸ್

    ಶಾರುಖ್‌ ಖಾನ್‌ ಜೊತೆ ಕನ್ನಡತಿ ಪ್ರಿಯಾಮಣಿ ರೊಮ್ಯಾನ್ಸ್

    ಹುಭಾಷಾ ನಟಿ, ಕನ್ನಡತಿ ಪ್ರಿಯಾಮಣಿ (Priyamani) ಅವರು ಮತ್ತೆ ಶಾರುಖ್ ಖಾನ್ (Sharukh Khan) ಜೊತೆ ನಟಿಸುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಈ ಹಿಂದೆ ʻಚೆನ್ನೈ ಎಕ್ಸಪ್ರೆಸ್’ (Chennai Express) ಸಿನಿಮಾದಲ್ಲಿ ಸೊಂಟ ಬಳುಕಿಸಿದ್ದ ನಟಿ ಮತ್ತೆ ಶಾರುಖ್ ಜೊತೆ ನಟಿಸುವ ಬಿಗ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಿಯಾಮಣಿ ರಿಯಾಕ್ಟ್ ಮಾಡಿದ್ದಾರೆ.

    ಪ್ಯಾನ್ ಇಂಡಿಯಾ ನಟಿಯಾಗಿ ಪ್ರಿಯಾಮಣಿ, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಶಾರುಖ್ ನಟನೆಯ ‘ಜವಾನ್’ (Jawan) ಚಿತ್ರದಲ್ಲಿ ಪ್ರಿಯಾಮಣಿ ನಟಿಸುತ್ತಿದ್ದಾರೆ. ಈ ಬಗ್ಗೆ ನಟಿ ಕೂಡ ಖುಷಿಯಿಂದ ರಿಯಾಕ್ಟ್ ಮಾಡಿದ್ದಾರೆ.‌ ಇದನ್ನೂ ಓದಿ:ಮದುವೆಯಾಗಿ ಮೂರುವರೆ ತಿಂಗಳಿಗೆ ಗರ್ಭಿಣಿ: ಸ್ವರಾ ಭಾಸ್ಕರ್ ಸಿಕ್ಕಾಪಟ್ಟೆ ಟ್ರೋಲ್

    ಅಟ್ಲಿ ನಿರ್ದೇಶನದ ‘ಜವಾನ್’ ಚಿತ್ರದಲ್ಲಿ ಮಲ್ಟಿ ಸ್ಟಾರ್ಸ್ ನಟಿಸುತ್ತಿದ್ದಾರೆ. ಆ ಸಾಲಿಗೆ ಈಗ ಪ್ರಿಯಾಮಣಿ ಕೂಡ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಚೆನ್ನೈ ಎಕ್ಸ್‌ಪ್ರೆಸ್ ಸಿನಿಮಾದಲ್ಲಿ 1,2,3,4 ಎಂಬ ಹಾಡಿಗೆ ಶಾರುಖ್ ಜೊತೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದರು. ಈಗ ಮತ್ತೆ ಶಾರುಖ್- ಪ್ರಿಯಾ ಒಟ್ಟಿಗೆ ನಟಿಸುತ್ತಿದ್ದಾರೆ. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಮರಳಿದ ‘ಬಿಗ್‌ ಬಾಸ್‌’ ಚೈತ್ರಾ ಹಳ್ಳಿಕೇರಿ

    ‘ಜವಾನ್’ ಚಿತ್ರದಲ್ಲಿ ಶಾರುಖ್ ಜೊತೆ ನಟಿಸುತ್ತಿದ್ದೇನೆ ಎಂಬ ಬಗ್ಗೆ ಖುಷಿಯಿದೆ. ಈ ಚಿತ್ರವನ್ನು ಜನ ಯಾವಾಗ ನೋಡ್ತಾರೋ ಅಂತಾ ನಾನು ಕಾಯ್ತಿದ್ದೀನಿ. ಶಾರುಖ್ ಖಾನ್ (Sharukh Khan) ಜೊತೆ ಕೆಲಸ ಮಾಡುವುದು ಮ್ಯಾಜಿಕಲ್ ಅನುಭವ. ಅವರು ನನ್ನನ್ನು ನೆನಪಿಟ್ಟುಕೊಂಡಿದ್ದಾರೆ ಎಂಬುದೇ ಖುಷಿಯ ವಿಚಾರ ಎಂದು ಮಾತನಾಡಿದ್ದಾರೆ.

    ನಾನು ಸೆಟ್‌ಗೆ ಬರುವಾಗ ಅವರಿಗೆ ನಾನು ನೆನಪಿರುತ್ತೇನಾ ಎಂಬ ಗೊಂದಲವಿತ್ತು. ಅವರು ನೆನಪಿಟ್ಟುಕೊಂಡು ಮಾತನಾಡಿದ ರೀತಿ ಖುಷಿಯಾಯ್ತು. ಈ ಹಿಂದೆ ಸಿನಿಮಾವೊಂದಕ್ಕಾಗಿ ಕೇವಲ ಒಂದು ಸಾಂಗ್‌ನಲ್ಲಿ ಶಾರುಖ್ ಜೊತೆ ನಟಿಸಿದ್ದೇ. ಈಗ ಮತ್ತೆ ತೆರೆಹಂಚಿಕೊಳ್ತಿರೋದು ಖುಷಿ ಕೊಟ್ಟಿದೆ ಎಂದು ಪ್ರಿಯಾಮಣಿ ರಿಯಾಕ್ಟ್ ಮಾಡಿದ್ದಾರೆ. ಜವಾನ್‌ನಲ್ಲಿ ಪ್ರಿಯಾಮಣಿ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ನಟಿ ಗುಟ್ಟು ಬಿಟ್ಟು ಕೊಟ್ಟಿಲ್ಲ.

  • ತಮ್ಮ ಸಂಭಾವನೆಯಲ್ಲಿ ʼಜವಾನ್‌ʼ ಚಿತ್ರಕ್ಕಾಗಿ 5 ಕೋಟಿ ಹೆಚ್ಚಿಸಿಕೊಂಡ  ವಿಜಯ್ ಸೇತುಪತಿ!

    ತಮ್ಮ ಸಂಭಾವನೆಯಲ್ಲಿ ʼಜವಾನ್‌ʼ ಚಿತ್ರಕ್ಕಾಗಿ 5 ಕೋಟಿ ಹೆಚ್ಚಿಸಿಕೊಂಡ ವಿಜಯ್ ಸೇತುಪತಿ!

    ಕಾಲಿವುಡ್‌ನ ಸೂಪರ್ ಸ್ಟಾರ್ ವಿಜಯ್ ಸೇತುಪತಿ ಸದ್ಯ ಹಿಂದಿ ಸಿನಿಮಾಗಳ ಮುಖ ಮಾಡಿದ್ದಾರೆ. ಶಾರುಖ್ ನಟನೆಯ `ಜವಾನ್’ ಚಿತ್ರತಂಡಕ್ಕೆ ವಿಜಯ್ ಸೇರಿಕೊಂಡಿದ್ದಾರೆ. ಇದೀಗ ಈ ಚಿತ್ರಕ್ಕೆ ಪಡೆದಿರುವ ಸಂಭಾವನೆ ವಿಚಾರವಾಗಿ ವಿಜಯ್ ಸೇತುಪತಿ ಸಖತ್ ಸೌಂಡ್ ಮಾಡುತ್ತಿದ್ದಾರೆ.

    ದಕ್ಷಿಣದ ಸಿನಿಮಾಗಳ ಮೂಲಕ ಸಕ್ಸಸ್‌ಫುಲ್ ನಟನಾಗಿ ಗುರುತಿಸಿಕೊಂಡಿರುವ ವಿಜಯ್ ಸೇತುಪತಿಗೆ ಬಾಲಿವುಡ್‌ನಲ್ಲೂ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ನಿರ್ದೇಶಕ ಅಟ್ಲೀ ತಮ್ಮ ಮುಂಬರುವ `ಜವಾನ್’ ಚಿತ್ರಕ್ಕೆ ವಿಜಯ್ ಸೇತುಪತಿ ಅವರೇ ತಮ್ಮ ಪ್ರಾಜೆಕ್ಟ್‌ಗೆ ಬೇಕು ಎಂದು ಒಂದೊಳ್ಳೆ ಸಂಭಾವನೆ ನೀಡಿ, ಈ ಸಿನಿಮಾಗೆ ಫಿಕ್ಸ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಮತ್ತೆ ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸುಶ್ಮಿತಾ ಸೇನ್

    ಶಾರುಖ್ ಖಾನ್ ಮುಂದೆ ಪವರ್‌ಫುಲ್ ಪಾತ್ರದಲ್ಲಿ ನಟಿಸಲು ತಮಗೆ ಅರಸಿ ಬಂದಿದ್ದ ಸಾಕಷ್ಟು ಪ್ರಾಜೆಕ್ಟ್ ಅನ್ನ ವಿಜಯ್ ಕೈಬಿಟ್ಟಿದ್ದಾರೆ. 15 ಕೋಟಿ ಇದ್ದ ತಮ್ಮ ಸಂಭಾವನೆಯನ್ನ 20 ಕೋಟಿಗೆ ಹೆಚ್ಚಿಕೊಂಡಿದ್ದಾರೆ.

    `ಜವಾನ್’ ಚಿತ್ರದಲ್ಲಿ ಶಾರುಖ್ ಮತ್ತು ನಯನತಾರಾ ಎದುರು ವಿಜಯ್ ಸೇತುಪತಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]