Tag: Jawaharlal Nehru Planetarium

  • ರಾಷ್ಟ್ರೀಯ ವಿಜ್ಞಾನ ದಿನಾಚರಣೆ| ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ: ಎನ್‌.ಎಸ್‌ ಭೋಸರಾಜು

    ರಾಷ್ಟ್ರೀಯ ವಿಜ್ಞಾನ ದಿನಾಚರಣೆ| ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ: ಎನ್‌.ಎಸ್‌ ಭೋಸರಾಜು

    ಬೆಂಗಳೂರು: ಫೆ.28ಕ್ಕೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ (National Science Day) ಅಂಗವಾಗಿ ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲು ರಾಜ್ಯ ಸರ್ಕಾರದ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವ ಎನ್‌.ಎಸ್‌ ಭೋಸರಾಜು (N.S Boseraju) ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್‌ ನೆಹರು ತಾರಾಲಯದಲ್ಲಿ (Jawaharlal Nehru Planetarium) ಫೆ. 28 ರಂದು ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30ಕ್ಕೆ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು.

    ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.

    ರಾಷ್ಟ್ರೀಯ ವಿಜ್ಞಾನ ದಿನವನ್ನ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

  • ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ

    ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ

    ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯದಲ್ಲಿ (Jawaharlal Nehru Planetarium) ತಾಂತ್ರಿಕ ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು (NS Boseraju) ಸೂಚನೆ ನೀಡಿದರು.

    ಇಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರ ಜೊತೆಯಲ್ಲಿ ಬೋಸರಾಜು ಜವಾಹರಲಾಲ್ ನೆಹರು ತಾರಾಲಯಕ್ಕೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಡೆಸುತ್ತಿರುವ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಜವಾಹರಲಾಲ್ ನೆಹರು ತಾರಾಲಯದಲ್ಲಿ ನಡೆಯುತ್ತಿರುವ ಯೋಜನೆಗಳು ಹಾಗೂ ಮುಂದಿನ ಪ್ರಸ್ತಾವನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದನ್ನೂ ಓದಿ: Tungabhadra Dam |ಈವರೆಗೂ ಸಾಧ್ಯವಾಗಿಲ್ಲ ತಾತ್ಕಾಲಿಕ ಗೇಟ್- ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ

    ಇನ್ನು ಸ್ಮಾರ್ಟ್ ಸಿಟಿ ಯೋಜನೆಯ (Smart City Scheme) ಅಡಿಯಲ್ಲಿ ಬಿಬಿಎಂಪಿ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಧುನಿಕ ಸಭಾಂಗಣ, ಕ್ಲಾಸ್‌ರೂಂ ಸೇರಿದಂತೆ ಹಲವು ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಈ ಕಟ್ಟಡ ಕಾಮಗಾರಿಯನ್ನು ಸೆಪ್ಟೆಂಬರ್ 15ರ ಒಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 22ರಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಒಳಗೊಂಡ ಸಭೆಯನ್ನು ಆಯೋಜಿಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಶನಿವಾರ ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಬಂದ್ – ದಿನೇಶ್ ಗುಂಡೂರಾವ್ ಪರೋಕ್ಷ ಬೆಂಬಲ

    ಜವಾಹರಲಾಲ್ ನೆಹರು ತಾರಾಲಯ ತಾಂತ್ರಿಕ ಆಧುನೀಕರಣ:
    ಜವಾಹರಲಾಲ್ ನೆಹರು ತಾರಾಲಯದಲ್ಲಿ ಪ್ರಸ್ತುತ ಇರುವಂತಹ ಅನಲಾಗ್ ಪ್ರೊಜೆಕ್ಟರ್‌ಗಳ ತಾಂತ್ರಿಕ ಉಪಕರಣಗಳು ಬಹಳ ಹಳೆಯ ತಂತ್ರಜ್ಞಾನದ್ದಾಗಿವೆ. ಇವುಗಳನ್ನು ಬದಲಿಸುವ ಮೂಲಕ ನೂತನ ತಂತ್ರಜ್ಞಾನದ ಎಲ್‌ಇಡಿ ಪ್ರೊಜೆಕ್ಟರ್‌ಗಳನ್ನು ಅಳವಡಿಸುವುದು ಬಹಳ ಮುಖ್ಯವಾಗಿದೆ ಎಂದು ತಾರಾಲಯದ ನಿರ್ದೇಶಕರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ:  ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಒದಗಿಸುವ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿ:
    ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ರಾಜ್ಯದ ಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಬಾರಿಯ ಆಯವ್ಯದಲ್ಲಿ 883 ವಸತಿ ಶಾಲೆಗಳಲ್ಲಿ ಟೆಲಿಸ್ಕೋಪ್ ಒದಗಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಟೆಲಿಸ್ಕೋಪ್‌ಗಳನ್ನು ಖರೀದಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆದಷ್ಟು ಶೀಘ್ರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ನಗರದ ಜವಾಹರಲಾಲ್ ನೆಹರು ತಾರಾಲಯದ ಸಹಯೋಗದಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು. ಆಯಾ ವಲಯವಾರು ತರಬೇತಿ ಶಿಬಿರಗಳಲ್ಲಿ ಟೆಲಿಸ್ಕೋಪ್ ಬಳಕೆ, ಅದರ ಮೂಲಕ ಅಧ್ಯಯನ ಮತ್ತು ಬೋಧನೆ ಹಾಗೂ ಅದನ್ನು ಸುಸ್ಥಿತಿಯಲ್ಲಿಡುವ ಬಗ್ಗೆ ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:  ಶೀಘ್ರವೇ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಬಿಜೆಪಿ ಸೇರ್ಪಡೆ ಸಾಧ್ಯತೆ

    ಸಭೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್, ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕರಾದ ಡಾ.ಬಿಆರ್ ಗುರುಪ್ರಸಾದ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ:  ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ

  • 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

    50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

    ಬೆಂಗಳೂರು: ಮೋಡ ಕವಿದ ವಾತಾವರಣ ಇರೋದ್ರಿಂದ ಬೆಂಗಳೂರಿನಲ್ಲಿ (Bengaluru) ಹಸಿರು ಧೂಮಕೇತುವಿನ (Green Comet) ಗೋಚರ ಸಾಧ್ಯವಾಗಿಲ್ಲ.

    ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಹಸಿರು ಧೂಮಕೇತು ಗೋಚರವಾಗಬೇಕಿತ್ತು. ಆದ್ರೆ ಬೆಂಗಳೂರಿನಲ್ಲಿ ದಟ್ಟವಾದ ಮೋಡ ಇರುವುದರಿಂದ ಹಸಿರು ಧೂಮಕೇತು (Green Comet) ಕಣ್ತುಂಬಿಕೊಳ್ಳಲು ಆಗಲಿಲ್ಲ. ಇದನ್ನೂ ಓದಿ: PublicTV Explainer: ಕ್ಷಣ ಕಾಲ ನಿಂತು ವಿರುದ್ಧ ದಿಕ್ಕಿನಲ್ಲಿ ತಿರುಗುತ್ತಾ ಭೂಮಿ? – ಭೂಗರ್ಭದ ರಹಸ್ಯ ಬಿಚ್ಚಿಟ್ಟ ವಿಜ್ಞಾನಿಗಳು

    ಸುಮಾರು 50 ಸಾವಿರ ವರ್ಷಗಳ ಹಿಂದೆ ಅಂದ್ರೆ ಶಿಲಾ ಯುಗದ ಸಂದರ್ಭದಲ್ಲಿ ಭೂಮಿಯ ಸಮೀಪದಲ್ಲಿ ಹಾದು ಹೋಗಿದ್ದ ಹಸಿರು ಧೂಮಕೇತು ಮತ್ತೊಮ್ಮೆ ಭೂಮಿಯ ಸಮೀಪಕ್ಕೆ ಬಂದಿದೆ. ಆಕಾಶದಲ್ಲಿ ಸಂಭವಿಸುವ ಕೌತುಕವನ್ನು ಬರಿಗಣ್ಣಿನಿಂದ ಕಣ್ತುಂಬಿಕೊಳ್ಳಬಹುದು ಎಂದು ನಾಸಾ (NASA) ತಿಳಿಸಿದೆ. ಉತ್ತರ ಧ್ರುವ ನಕ್ಷತ್ರ, ಸಪ್ತರ್ಷಿ ಮಂಡಲದ ಮಧ್ಯೆ ಇದು ಕಂಡುಬರಲಿದೆ.

    ಭೂಮಿಗೆ 42 ಮಿಲಿಯನ್ ಕಿ.ಮೀ. ನಷ್ಟು ಸನಿಹಕ್ಕೆ ಈ ಗ್ರೀನ್ ಕಾಮೆಟ್ ಬರಲಿದೆ. ಆದ್ರೆ ಭಾರತದಲ್ಲಿ ಇದು ಬರಿಗಣ್ಣಿಗೆ ಕಾಣುವುದು ಕಷ್ಟ ಸಾಧ್ಯ ಎನ್ನಲಾಗುತ್ತಿದೆ. ಬೈನಾಕುಲರ್ ಮೂಲಕ ಇದನ್ನು ವೀಕ್ಷಣೆ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

    ಉತ್ತರ ದಿಕ್ಕಿನ ಡ್ರಾಕೊ ನಕ್ಷತ್ರಪುಂಜದ ಸಮೀಪ ಅಥವಾ ಸಪ್ತರ್ಷಿ ಮಂಡಲದ ಸಮೀಪ ಇದನ್ನ ಯಾವುದೇ ದೃಶ್ಯ ಉಪಕರಣಗಳ ಸಹಾಯವಿಲ್ಲದೇ ವೀಕ್ಷಿಸಬಹುದು. ಸೌರವ್ಯೂಹದ ಆಚೆಗಿನ ಕೌಡ್‌ನಿಂದ ಹೊರಬಂದು ಭೂಮಿಯ ಸಮೀಪಕ್ಕೆ ಧೂಮಕೇತು ಬರುತ್ತಿದ್ದು, ಇದಕ್ಕೆ ಹಸಿರು ಧೂಮಕೇತು ಎಂದು ಕರೆಯಲಾಗಿದೆ. ಮಂಜು ಮತ್ತು ಧೂಳಿನಿಂದ ಕೂಡಿರುವ ಈ ಧೂಮಕೇತುವನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ.

    50 ವರ್ಷಗಳ ಹಿಂದೆ ಭೂಮಿ ಸಮೀಪಕ್ಕೆ ಬಂದಿದ್ದ ಈ ಹಸಿರು ಧೂಮಕೇತು, 2022ರ ಮಾರ್ಚ್ ತಿಂಗಳಲ್ಲಿ ಮೊದಲ ಬಾರಿಗೆ ವೀಕ್ಷಿಸಲಾಗಿತ್ತು. ಬುಧವಾರ ರಾತ್ರಿ 7 ಗಂಟೆಯಿಂದ ಗುರುವಾರ ಮುಂಜಾನೆ 4 ಗಂಟೆಯ ತನಕ ಇದು ಗೋಚರಿಸುತ್ತಿತ್ತು. ಈ ಧೂಮಕೇತುವಿಗೆ `C/2022 E3 (ZTF)’ ಎಂದು ಹೆಸರಿಡಲಾಗಿದೆ.

    ಬುಧವಾರ ಹಾಗೂ ಗುರುವಾರ ಹಸಿರು ಧೂಮಕೇತುವನ್ನು, ಬೆಳಗಿನ ಜಾವ 5 ಗಂಟೆವರೆ ಬೈನಾಕೂಲರ್ ಮೂಲಕ ಕಣ್ತುಂಬಿಕೊಳ್ಳಬಹುದಿತ್ತು ಎಂದು ನೆಹರೂ ತಾರಾಲಯದ (Jawaharlal Nehru Planetarium) ಹಿರಿಯ ವಿಜ್ಞಾನಿ (Scientist) ಡಾ. ಆನಂದ್ ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೂರ್ಯಗ್ರಹಣ ವೀಕ್ಷಣೆಗೆ ಸಿದ್ಧಗೊಂಡ ನೆಹರು ತಾರಾಲಯ

    ಸೂರ್ಯಗ್ರಹಣ ವೀಕ್ಷಣೆಗೆ ಸಿದ್ಧಗೊಂಡ ನೆಹರು ತಾರಾಲಯ

    ಬೆಂಗಳೂರು: ಅಪರೂಪದ ಕಂಕಣ ಸೂರ್ಯ ಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ (ಗುರವಾರ) ಬೆಳಗ್ಗೆ 8.06ಕ್ಕೆ ಸೂರ್ಯಗ್ರಹಣ ಆರಂಭವಾಗಲಿದ್ದು 11.01 ರಿಂದ 11.11 ಕ್ಕೆ ಅಂತ್ಯವಾಗಲಿದೆ. ಈಗಾಗಲೇ ಗ್ರಹಣ ವೀಕ್ಷಣೆಗೆ ಬೆಂಗಳೂರಿನ ನೆಹರು ತಾರಾಲಯ ಸಕಲ ಸಿದ್ದತೆ ಮಾಡಿಕೊಂಡಿದೆ. ಚಂದ್ರ ಕೇವಲ ಸೂರ್ಯನ ಶೇ.90 ಭಾಗ ಆವರಣವನ್ನು ಮಾತ್ರ ಮರೆ ಮಾಡುವುದರಿಂದ ಡಿಸೆಂಬರ್ 26 ರಂದು ಸಂಭವಿಸಲಿರುವ ಸೂರ್ಯ ಗ್ರಹಣವು ಬೆಂಗಳೂರಿನಲ್ಲಿ ಪಾಶ್ರ್ವ ಗ್ರಹಣವಾಗಿ ಕಾಣಲಿದೆ.

    ಸೂರ್ಯ ಗ್ರಹಣವು ಸಂಪೂರ್ಣ ಅಥವಾ ಭಾಗಶಃವಾಗಿರಲಿ ಬರಿಗಣ್ಣಿನ ವೀಕ್ಷಣೆಯು ಹಾನಿಯುಂಟು ಮಾಡುತ್ತದೆ. ತಾರಾಲಯವು ಸುರಕ್ಷಿತ ಸೂರ್ಯ ಗ್ರಹಣ ವೀಕ್ಷಣೆಗೆ ಬೆಳಗ್ಗೆ 8 ರಿಂದ 11:15 ರವರೆಗೆ ಹಮ್ಮಿಕೊಂಡಿರುವ ಹಲವು ಸಿದ್ಧತೆಗಳ ಮಾಹಿತಿ ಇಲ್ಲಿದೆ.

    ಜವಾಹರಲಾಲ್ ನೆಹರು ತಾರಾಲಯದಲ್ಲಿ ಡಿಸೆಂಬರ್ 26 ರಂದು ಬೆಳ್ಳಗ್ಗೆ 08 ಗಂಟೆಗೆ ಸೂರ್ಯ ಗ್ರಹಣ ವೀಕ್ಷಣೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಗ್ರಹಣ ವೀಕ್ಷಿಸಲು ಅನುಕೂಲಕರವಾಗಲೆಂದು ಟೆಲಿ ಸ್ಕೋಪ್ ಗಳನ್ನು ಅಳವಡಿಸಲಿದ್ದಾರೆ.

    ಇದೇ ಮೊದಲ ಬಾರಿಗೆ ಗ್ರಹಣ ಸಂದರ್ಭದಲ್ಲಿ ಮಕ್ಕಳಿಗೆ ಗ್ರಹಣದ ವಿವಿಧ ಹಂತಗಳು, ಸೂರ್ಯ, ಚಂದ್ರನ ಗಾತ್ರ, ಗ್ರಹಣದ ಪರಿಣಾಮ, ಬೆಳಕಿನ ಮಟ್ಟ, ಉಷ್ಣಾಂಶ ಇತ್ಯಾದಿಗಳನ್ನು ಪರೀಕ್ಷಿಸಲು ಅವಕಾಶ ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ನೆಹರು ತಾರಾಲಯ ನಡೆಸುತ್ತಿದೆ.

    2010 ಜನವರಿ 15 ರಂದು ಕಂಕಣ ಸೂರ್ಯ ಗ್ರಹಣ ಆಗಿತ್ತು. ಆ ಬಳಿಕ ಒಂಬತ್ತು ವರ್ಷಗಳ ನಂತರ ಡಿಸೆಂಬರ್ 26 ಕ್ಕೆ ಕಂಕಣ ಸೂರ್ಯ ಗ್ರಹಣ ಸಂಭವಿಸುತ್ತಿದೆ. ಪುನಃ 2020 ಜೂನ್ 21ರಂದು ಕಂಕಣ ಸೂರ್ಯ ಗ್ರಹಣ ಸಂಭವಿಸಲಿದ್ದು ಉತ್ತರ ಭಾರತದಲ್ಲಿ ಇದು ಕಾಣಲಿದೆ.