Tag: Jawaharlal Nehru University

  • ಚುನಾವಣೆ ವಿಚಾರಕ್ಕೆ ಜೆಎನ್‌ಯು ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

    ಚುನಾವಣೆ ವಿಚಾರಕ್ಕೆ ಜೆಎನ್‌ಯು ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

    – ವಿದ್ಯಾರ್ಥಿಗಳ ಮೇಲೆ ಸೈಕಲ್‌ ಎಸೆದ ವ್ಯಕ್ತಿ

    ನವದೆಹಲಿ: ವಿದ್ಯಾರ್ಥಿ ಸಂಘದ ಚುನಾವಣೆ ವಿಚಾರವಾಗಿ ಜೆಎನ್‌ಯು (JNU Students) ವಿದ್ಯಾರ್ಥಿ ಗುಂಪುಗಳು ಗಲಾಟೆ ಮಾಡಿಕೊಂಡಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

    ಗುರುವಾರ ರಾತ್ರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಮತ್ತು ಎಡ ಬೆಂಬಲಿತ ಗುಂಪುಗಳ ನಡುವಿನ ಗಲಾಟೆಯಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (JNU) ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ

    ಮುಂಬರುವ ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಗಾಗಿ ಸಾಮಾನ್ಯ ಸಭೆ ನಡೆಸಲಾಗಿತ್ತು. ಈ ವೇಳೆ ಪರಸ್ಪರ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುತ್ತಿರುವ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಕಳೆದ ರಾತ್ರಿ ಭಾಷಾ ಶಾಲೆಯಲ್ಲಿ ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರದಲ್ಲಿ ಗುಂಪುಗಳ ನಡುವೆ ವಾಗ್ವಾದ ನಡೆದು ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

    ಒಬ್ಬ ವಿದ್ಯಾರ್ಥಿಯ ತಲೆಯಿಂದ ರಕ್ತಸ್ರಾವವಾಗುತ್ತಿರುವುದು ಮತ್ತು ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಗುಂಪಿನ ಮೇಲೆ ಸೈಕಲ್‌ ಎಸೆಯುತ್ತಿರುವ ದೃಶ್ಯವು ವೀಡಿಯೋಗಳಲ್ಲಿ ಸೆರೆಯಾಗಿದೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೆಎನ್‌ಯು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: LPG Price Hike: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 25 ರೂ. ಹೆಚ್ಚಳ

    ಘಟನೆಯ ಕುರಿತು ವಿಶ್ವವಿದ್ಯಾನಿಲಯ ಆಡಳಿತವು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಘರ್ಷಣೆ ಸಂಬಂಧ ವಿದ್ಯಾರ್ಥಿ ಗುಂಪುಗಳು ಪರಸ್ಪರ ಮೇಲೆ ಆರೋಪ ಮಾಡಿದ್ದಾರೆ. ಆದರೆ, ಈ ಕುರಿತು ಯಾವುದೇ ದೂರುಗಳು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಎಡ-ಸಂಯೋಜಿತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್‌ಎಫ್) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಎಬಿವಿಪಿ ಸದಸ್ಯರು ಸಭೆಗೆ ಅಡ್ಡಿಪಡಿಸಿದರು. ವಿದ್ಯಾರ್ಥಿಗಳು ಮತ್ತು ಸೆಕ್ಯುರಿಟಿ ಗಾರ್ಡ್‌ಗಳಿಗೆ ಬೆದರಿಕೆ ಹಾಕಿದರು. ಜಾತಿ ನಿಂದನೆ ಪದ ಬಳಕೆ ಕೂಡ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

  • “ಬ್ರಾಹ್ಮಣ ಭಾರತ್ ಛೋಡೋ” – ಜೆಎನ್‍ಯು ಕ್ಯಾಂಪಸ್ ಗೋಡೆಗಳ ಮೇಲೆ ವಿವಾದಾತ್ಮಕ ಬರಹ

    “ಬ್ರಾಹ್ಮಣ ಭಾರತ್ ಛೋಡೋ” – ಜೆಎನ್‍ಯು ಕ್ಯಾಂಪಸ್ ಗೋಡೆಗಳ ಮೇಲೆ ವಿವಾದಾತ್ಮಕ ಬರಹ

    ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (Jawaharlal Nehru University) ಈಗ ಮತ್ತೆ ಸುದ್ದಿಯಲ್ಲಿದ್ದು, ಕ್ಯಾಂಪಸ್‍ನ ಗೋಡೆಗಳ ಮೇಲೆ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಗಳ ವಿರುದ್ಧ ಘೋಷಣೆಗಳನ್ನು (Anti-Brahmin Slogans) ಬರೆಯಲಾಗಿದೆ. ಕಳೆದ ರಾತ್ರಿ ಸ್ಕೂಲ್ ಆಫ್ ಇಂಟರ್‌ನ್ಯಾಶನಲ್‌ ಸ್ಟಡೀಸ್- II ಕಟ್ಟಡದ ಗೋಡೆಗಳ ಮೇಲೆ ವಿವಾದಾತ್ಮಕ ಬರಹಗಳು ಕಂಡು ಬಂದಿವೆ.

    ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕುಲಪತಿ ಶಾಂತಿಶ್ರೀ ಡಿ. ಪಂಡಿತ್ ವಿಭಾಗದ ಕುಂದುಕೊರತೆಗಳ ಸಮಿತಿಯ ಡೀನ್ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ಅಲ್ಲದೇ ಕ್ಯಾಂಪಸ್‍ನಲ್ಲಿ ಈ ಪ್ರತ್ಯೇಕವಾದ ಪ್ರವೃತ್ತಿಯನ್ನು ಖಂಡಿಸುತ್ತೇವೆ. ಜೆಎನ್‍ಯು (JNU) ಎಲ್ಲರಿಗೂ ಸೇರಿದ್ದು, ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದು ಕಾಲೇಜಿನ ಅಡ್ಮಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

    ಎರಡು ಸಮುದಾಯಗಳ ವಿರುದ್ಧದ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, “ಬ್ರಾಹ್ಮಣರು ಕ್ಯಾಂಪಸ್ ತೊರೆಯಿರಿ”, “ರಕ್ತವಿದೆ”, “ಬ್ರಾಹ್ಮಣ ಭಾರತ್ ಛೋಡೋ” ಮತ್ತು “ಬ್ರಾಹ್ಮಿನೋ-ಬನಿಯಾಸ್, ನಾವು ನಿಮಗಾಗಿ ಬರುತ್ತಿದ್ದೇವೆ! ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಬರೆಯಲಾಗಿದೆ. ಇದನ್ನೂ ಓದಿ: ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

    ಘಟನೆಯ ಹಿಂದೆ ಎಡಪಕ್ಷಗಳು ಪ್ರೇರಿತ ಸಂಘಟನೆಗಳಿದೆ ಎಂದು ಆರ್‌ಎಸ್‌ಎಸ್-ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ABVP) ಆರೋಪಿಸಿದೆ. ಕಮ್ಯುನಿಸ್ಟ್ ಗೂಂಡಾಗಳಿಂದ ಶೈಕ್ಷಣಿಕ ಸ್ಥಳಗಳ ಅತಿರೇಕದ ಪ್ರವೃತ್ತಿಯನ್ನು ಎಬಿವಿಪಿ ಖಂಡಿಸುತ್ತದೆ. ಸ್ಕೂಲ್ ಆಫ್ ಇಂಟರ್‌ನ್ಯಾಶನಲ್‌ ಸ್ಟಡೀಸ್- II ಕಟ್ಟಡದಲ್ಲಿರುವ JNU ಗೋಡೆಗಳ ಮೇಲೆ ಕಮ್ಯುನಿಸ್ಟರು ನಿಂದನಾತ್ಮಕ ಬರಹಗಳನ್ನು ಬರೆದಿದ್ದಾರೆ. ಬೆದರಿಸಲು ಮುಕ್ತ ಚಿಂತನೆಯ ಪ್ರಾಧ್ಯಾಪಕರ ಕೊಠಡಿಗಳನ್ನು ವಿರೂಪಗೊಳಿಸಿದ್ದಾರೆ ಎಂದು ಎಬಿವಿಪಿ ಜೆಎನ್‍ಯು ಅಧ್ಯಕ್ಷ ರೋಹಿತ್ ಕುಮಾರ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೆಎನ್‍ಯು ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಮೇಲೆ ಗುಂಡಿನ ದಾಳಿ

    ಜೆಎನ್‍ಯು ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಮೇಲೆ ಗುಂಡಿನ ದಾಳಿ

    ನವದೆಹಲಿ: ಜವಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಮೇಲೆ ದೆಹಲಿಯ ಸಂಸತ್ತ್ ಬಳಿಯಿರುವ ಸಂವಿಧಾನ ಭವನದ ಹತ್ತಿರ ಗುಂಡಿನ ದಾಳಿ ನಡೆದಿದೆ.

    ಇಂದು ಮಧ್ಯಾಹ್ನ ಸಂವಿಧಾನ ಭವನದಲ್ಲಿ ಏರ್ಪಡಿಸಿದ್ದ `ಯುನೈಟೆಡ್ ಎಗೆನೆಸ್ಟ್ ಹೇಟ್’ ಎಂಬ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಉಮರ್ ಖಾಲಿದ್‍ರವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಮರ್ ಖಾಲಿದ್ ರವರು, ಸರ್ಕಾರದ ವಿರುದ್ಧ ಯಾರು ಮಾತನಾಡುತ್ತಾರೋ ಅಂತಹರ ವಿರುದ್ಧ ಈ ರೀತಿಯ ದಾಳಿಗಳು ನಡೆಯುತ್ತಿವೆ. ದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರ ವಿರುದ್ಧ ಮಾತನಾಡುವವರ ಮೇಲೆ ದಾಳಿಗಳು ಎಗ್ಗಿಲ್ಲದೆ ಸಾಗುತ್ತಿವೆ ಎಂದು ಹೇಳಿದ್ದಾರೆ.

    ಪ್ರತ್ಯಕ್ಷದರ್ಶಿಗಳು ಹೇಳಿರುವ ಪ್ರಕಾರ, ಉಮರ್ ಖಾಲಿದ್‍ರವರು ನಮ್ಮ ಜೊತೆಯಲ್ಲೇ ಇದ್ದರು, ನಾವು ಟೀ ಕುಡಿಯಲು ಟೀ ಸ್ಟಾಲ್ ಬಳಿ ನಿಂತಿದ್ದೆವು. ಆಗ ಬಿಳಿ ಅಂಗಿ ಧರಿಸಿದ್ದ ಓರ್ವ ಅಪರಿಚಿತ ವ್ಯಕ್ತಿ ನಮ್ಮನ್ನು ತಳ್ಳಿ, ಏಕಾಏಕಿ ಖಾಲಿದ್ ಮೇಲೆ ಗುಂಡಿನ ದಾಳಿಯನ್ನು ಆರಂಭಿಸಿದ. ಕೂಡಲೇ ಖಾಲಿದ್ ಕೆಳಕ್ಕೆ ಬಿದ್ದರು. ಅದೃಷ್ಟವಶಾತ್ ಅವರಿಗೆ ಯಾವುದೇ ಗುಂಡುಗಳು ತಾಗಿರಲಿಲ್ಲ. ನಾವು ಅಪರಿಚಿತ ವ್ಯಕ್ತಿಯನ್ನು ಹಿಡಿಯಲು ಮುಂದಾದಾಗ ಅವನು ತಪ್ಪಿಸಿಕೊಂಡು ಪರಾರಿಯಾದ. ಈ ವೇಳೇ ಆತನ ಕೈಯಲ್ಲಿದ್ದ ಪಿಸ್ತೂಲು ಕೈ ಜಾರಿ ಕೆಳಕ್ಕೆ ಬಿತ್ತು ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews