Tag: Jaya mrutyunjaya Swamiji

  • ಮೂರನೇ ಪೀಠ ಅಗತ್ಯವಿಲ್ಲ: ಜಯಮೃತ್ಯುಂಜಯ ಸ್ವಾಮೀಜಿ

    ಮೂರನೇ ಪೀಠ ಅಗತ್ಯವಿಲ್ಲ: ಜಯಮೃತ್ಯುಂಜಯ ಸ್ವಾಮೀಜಿ

    ಮೈಸೂರು: ದೇಶಕ್ಕೆ ಒಬ್ಬರೇ ರಾಷ್ಟ್ರಪತಿ, ಒಂದು ಸಮುದಾಯಕ್ಕೆ ಒಬ್ಬರೇ ಗುರು. ಮತ್ತೆ ಮೂರನೇ ಪೀಠದ ಅಗತ್ಯ ಇಲ್ಲ ಎಂದು ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮೈಸೂರಿನಲ್ಲಿ ಪ್ರತಿಪಾದಿಸಿದ್ದಾರೆ.

    ಫೆಬ್ರವರಿ 14ರಂದು ಪಂಚಮಸಾಲಿ ಸಮಾಜದ ಮೂರನೇ ಪೀಠ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಆದರೆ ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು

    ಕಳೆದ 14 ವರ್ಷಗಳಿಂದ ಕಷ್ಟ ಪಟ್ಟು ಸಮುದಾಯವನ್ನು ಒಗ್ಗೂಡಿಸಿದ್ದೇನೆ. ಮಳೆ, ಬಿಸಿಲು, ಗಾಳಿ ಎನ್ನದೇ ಪೀಠವನ್ನು ಕಟ್ಟಲಾಗಿದೆ. ಕೂಡಲ ಸಂಗಮ ಶ್ರೀಗಳ ಪ್ರಭಾವ ಹೆಚ್ಚಾಗುವ ಹೊಟ್ಟೆ ಕಿಚ್ಚಿನಿಂದ ಈ ರೀತಿಯ ಹುನ್ನಾರ ನಡೆಯುತ್ತಿದೆ. ಸದ್ಯದಲ್ಲೇ ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದು ಹೇಳಿದರು.

    ಮೀಸಲಾತಿಯ ಸಂಪೂರ್ಣ ಲಾಭ ಯತ್ನಾಳ್, ಸಿಸಿ ಪಾಟೀಲ್ ಹಾಗೂ ಬೆಲ್ಲದ್ ಅವರಿಗೆ ಸಿಗುವ ಹೊಟ್ಟೆಕಿಚ್ಚಿನಿಂದ ಮೂರನೇ ಪೀಠ ಸ್ಥಾಪನೆಗೆ ಮುಂದಾಗಿದ್ದಾರೆ. ಯಾರು ಏನೇ ಮಾಡಿದರೂ ಈ ಹೋರಾಟ ನಿಲ್ಲಿಸಲು ಸಾಧ್ಯವಿಲ್ಲ. ಪಂಚಮಸಾಲಿ ಪೀಠವೇ ನಮ್ಮ ಪೀಠ. ಅವರು ಬೇಕಾದರೆ ಮನೆಗೊಂದು, ಊರಿಗೊಂದು ಮಾಡಿಕೊಳ್ಳಲಿ ಎಂದರು. ಇದನ್ನೂ ಓದಿ: ಎಮ್ಮೆ ಹುಟ್ಟುಹಬ್ಬ ಆಚರಿಸಿದ ರೈತ

    ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಕೊಡಿಸುವುದಷ್ಟೇ ನಮ್ಮ ಗುರಿ. ಈ ಹೋರಾಟ ತಡೆಯಲು ಮಾನಸಿಕ ತೊಂದರೆ ನೀಡುತ್ತಿದ್ದಾರೆ. ಏನೇ ಪ್ರಯತ್ನ ನಡೆದರೂ ಈ ಹೋರಾಟ ಮಾತ್ರ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

  • ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಪಂಚಮಸಾಲಿ ಸಮುದಾಯ

    ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಪಂಚಮಸಾಲಿ ಸಮುದಾಯ

    ಚಾಮರಾಜನಗರ: 2ಎ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪಂಚಮಸಾಲಿ ಸಮುದಾಯ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ.

    ಚಾಮರಾಜನಗರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದಿಂದ ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಇಂದಿನಿಂದ ಚಾಲನೆ ದೊರೆಯಲಿದ್ದು, ಇಂದು ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ: ಕಾಶಪ್ಪನವರ್

    ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ಸಲುವಾಗಿ ಪ್ರತಿಜ್ಞಾ ಪಂಚಾಯತ್ ಅಭಿಯಾನವನ್ನು ಆರಂಭಿಸುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಅನೇಕರು ಪಂಚಮಸಾಲಿ ಮುಖಂಡರು ಭಾಗಿಯಾಗುವ ನಿರೀಕ್ಷೆ ಇದೆ. ಪಂಚಮಸಾಲಿ ಮೀಸಲಾತಿಗೆ ಈಗಾಗಲೇ ಪಾದಯಾತ್ರೆ ಮಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ಇಂದಿನಿಂದ ಪ್ರತಿದಿನ ಮೂರು ತಾಲೂಕುಗಳಲ್ಲಿ ಜಾಗೃತಿ ಅಭಿಯಾನ ಕೈಗೊಳ್ಳಲಿದ್ದಾರೆ. ಇಂದಿನಿಂದ ಸೆಪ್ಟಂಬರ್ 30 ರವರೆ ನಿರಂತರ ಈ ಜಾಗೃತಿ ಅಭಿಯಾನ ನಡೆಯಲಿದೆ. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ದುಂಡು ಮೇಜಿನ ಸಭೆಯಲ್ಲಿ ಪಂಚ ನಿರ್ಣಯ ಪಾಸ್