Tag: jayadeva

  • ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಆಯ್ಕೆ

    ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಆಯ್ಕೆ

    ಬೆಂಗಳೂರು: ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಅವರು ಆಯ್ಕೆಯಾಗಿದ್ದಾರೆ.

    69 ವಯಸ್ಸಾಗಿರುವ ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿದ್ದರು. ಇದೀಗ ಇಂದು ಜಯದೇವ ಆಸ್ಪತ್ರೆ (Jayadeva Hospital) ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ (Dr C.N Manjunath) ಅವಧಿ ಮುಕ್ತಾಯ ಹಿನ್ನೆಲೆ ಅವರ ಸ್ಥಾನಕ್ಕೆ ಡಾ.ರವೀಂದ್ರನಾಥ್ (Dr Ravindranath) ಅವರನ್ನು ನೇಮಿಸಲಾಗಿದೆ.

    ಡಾ.ಸಿ.ಎನ್ ಮಂಜುನಾಥ್ (Dr CN Manjunath ಅವರ ಸೇವಾವಧಿ ಇಂದಿಗೆ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಮಂಗಳವಾರ ಜಯದೇವ ಆಸ್ಪತ್ರೆ (Jayadeva Hospital) ಸಿಬ್ಬಂದಿ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿದ್ದರು. ಈ ವಿಶೇಷ ಕಾರ್ಯಕ್ರಮದಲ್ಲಿ ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಆರತಿ ಬೆಳಗಿ ಗೌರವಿಸಿದ್ದರು.

    ಬೀಳ್ಕೊಡುಗೆ ಸಮಾರಂಭದಲ್ಲಿ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿದ್ದ ಡಾ.ಸಿ.ಎನ್‌ ಮಂಜುನಾಥ್‌, ಜಯದೇವ ಹೃದ್ರೋಗ ಆಸ್ಪತ್ರೆ ಜನರ ಆಸ್ಪತ್ರೆಯಾಗಿದೆ. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಇತ್ತು. ಅದು 100 ಕ್ಕೆ100 ಆಗಿದೆ. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳಸಲಾಗಿದೆ. ಸರ್ಕಾರದ ಸಹಕಾರ, ದಾನಿಗಳ ಸಹಕಾರದಿಂದ ಇವತ್ತು ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ. ನಾನು ಇಲ್ಲಿಗೆ ಬಂದಾಗ 300 ಹಾಸಿಗೆ ಇತ್ತು, ಈಗ 2,000 ಸಾವಿರ ಹಾಸಿಗೆಗಳಿವೆ. 3,500 ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ. 16 ವರ್ಷಗಳಲ್ಲಿ 75 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇನೆ. 8 ಲಕ್ಷ ಜನರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದೇನೆ. ಇಷ್ಟು ವರ್ಷಗಳ ಸೇವೆ ಸಂತೋಷ ತಂದಿದೆ ತಮ್ಮ ನೆನಪುಗಳನ್ನ ಹಂಚಿಕೊಂಡಿದ್ದರು.

  • ಮಂಜುನಾಥ್‌ರಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ: ಹೆಚ್‌.ಡಿ ದೇವೇಗೌಡ

    ಮಂಜುನಾಥ್‌ರಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ: ಹೆಚ್‌.ಡಿ ದೇವೇಗೌಡ

    ಬೆಂಗಳೂರು: ಜಯದೇವ (Jayadeva Hospital) ನಿರ್ದೇಶಕ ಡಾ. ಮಂಜುನಾಥ್‌ (Dr. Manjunath) ಅವರ ಸೇವಾವಧಿ ಬುಧವಾರಕ್ಕೆ ಮುಕ್ತಾಯಗೊಳ್ಳಲಿದೆ. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಮಂಜುನಾಥ್‌ ಅವರ ಬಗ್ಗೆ ಮಾತನಾಡುತ್ತಾ ಇಂತಹ ಅಳಿಯ ಸಿಕ್ಕಿದ್ದು ನನ್ನ ಪುಣ್ಯ ಎಂದು ಹೇಳಿದ್ದಾರೆ.

    ಈ ಸಂಸ್ಥೆಗೆ ಪ್ರಥಮ ಬುನಾದಿ ಹಾಕಿದವರು ಡಾಕ್ಟರ್ ಚೆನ್ನಯ್ಯ. ಅವರಿಗೂ ಮಂಜುನಾಥ್ ಕಂಡರೆ ತುಂಬಾ ಪ್ರೀತಿ. ನೀವು ಹೊರದೇಶಕ್ಕೆ ಹೋಗಿ ಕೋಟ್ಯಂತರ ರೂಪಾಯಿ ದುಡಿಯಬಹುದು. ಆದರೆ ಇಲ್ಲಿಯ ಜನರ ಕಷ್ಟ ಕೇಳಿದಷ್ಟು ತೃಪ್ತಿ ಸಿಗುವುದಿಲ್ಲ ಎಂದರು.

    ನಾನು ಮತ್ತು ನನ್ನ ಶ್ರೀಮತಿ 15 ವರ್ಷ ಮಗಳು ಅನುಸೂಯ ಮನೆಯಲ್ಲಿಯೇ ಇದ್ದೆವು. ಅದು ನನ್ನ ಜೀವನದ ಸೌಭಾಗ್ಯ ಅಂತ ಹೇಳುತ್ತೇನೆ. ಇವತ್ತು ಹೆಮ್ಮೆ ಇದೆ ನನಗೆ, ಇಡೀ ರಾಷ್ಟ್ರದಲ್ಲಿ ಎರಡು ಸಾವಿರ ಬೆಡ್ ಆಸ್ಪತ್ರೆ ಬಹುಶಃ ಇಲ್ಲ ಅಂತ ನನ್ನ ಭಾವನೆ. ಸಚಿವ ಸುಧಾಕರ್ ಬಂದು ಇಲ್ಲಿ ಭಾಗವಹಿಸಿದ್ದು ಸಂತೋಷ. ಈ ಸಂಸ್ಥೆ ಆಗಿನ ದಿನಗಳನ್ನು ನೀವು ಸಹ ನೋಡಿದ್ದೀರಿ ಎಂದು ಹೇಳಿದರು. ಇದನ್ನೂ ಓದಿ: ಜ.31 ರಂದು ಜಯದೇವ ಆಸ್ಪತ್ರೆಯ ಡಾ.ಮಂಜುನಾಥ್ ನಿವೃತ್ತಿ – ಹೇಗಿತ್ತು 16 ವರ್ಷಗಳ ಜರ್ನಿ?

    ನನ್ನ ಮಗ ನನ್ನ ಮಗಳ ಸೌಭಾಗ್ಯ ಅಂತ ಭಾವಿಸುತ್ತೇನೆ. ಮಂಜುನಾಥ್ ಅಂತಹ ಒಬ್ಬ ಶ್ರೇಷ್ಠ ವ್ಯಕ್ತಿ ಕೈ ಹಿಡಿದಿರುವುದು ನನ್ನ ಮಗಳ ಪುಣ್ಯ. ಅಂದು ನಾನು, ಬಡವರಿಗೆ ಸಹಾಯ ಮಾಡಬೇಕು ಅಂದರೆ ಇಲ್ಲೇ ಇರಬೇಕು ಅಂತ ಹೇಳಿದ್ದೆ. ಅದನ್ನು ಮಂಜುನಾಥ್ ಪುರಸ್ಕಾರ ಮಾಡಿದರು. ನಾನು ಎಲ್ಲೂ ಹೋಗಲ್ಲ, ಇಲ್ಲೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದರು ಎಂದು ಹೆಚ್‌ಡಿಡಿ (HD Devegowda) ತಿಳಿಸಿದರು.

    ಯಾವ ಶ್ರೀಗಳು ಬೇಕಾಗಿಲ್ಲ: ಮಂಜುನಾಥ್ ಅವರಿಗೆ ಪದ್ಮಶ್ರೀ ಅಥವಾ ಯಾವ ಶ್ರೀಗಳು ಬೇಕಾಗಿಲ್ಲ. ಅಂತಹ ಬಿರುದುಗಳಿಗಿಂತಲೂ ಜನತೆ ಪ್ರೀತಿ ದೊಡ್ಡದು ಅಂತ ಹೇಳಿದ್ರು. ಇವತ್ತು ಈ ಸಂಸ್ಥೆಯಲ್ಲಿ ಎಲ್ಲ ಸಿಬ್ಬಂದಿ ಕುಟುಂಬ ಎನ್ನುವ ರೀತಿ ನಡೆಸಿಕೊಂಡು ಬಂದಿದ್ದಾರೆ. ಯಾರೊಬ್ಬರ ಮನಸ್ಸನ್ನು ಕೂಡ ನೋಯಿಸದೆ ಇರೋದು ಎಲ್ಲಾ ನನಗೆ ಗೊತ್ತಿದೆ. ಇದಕ್ಕೆ ನನ್ನ ಮಗಳ ದೈವ ಭಕ್ತಿ ಸಹ ಕಾರಣ ಎಂದರು.

    ಇಂದು ಈ ಕಾರ್ಯಕ್ರಮ ಅದ್ಬುತವಾಗಿ ನಡೆದಿದೆ. ಇಷ್ಟು ವರ್ಷ ಕೆಲಸ ಮಾಡಿದ ಅವರು ಇನ್ನೂ ಇರಬೇಕು ಎಂಬ ನಿರೀಕ್ಷೆ ಸಹಜ. ನೀವು ಬಿಟ್ಟು ಹೋದ ಮೇಲೆ ಏನು ಎಂಬ ಬಗ್ಗೆಯೂ ಯೋಚನೆ ಮಾಡಿ ಅಂತ ಹೇಳಿದ್ದೆ. ಮುಂದೆ ಬರುವ ಹೊಸ ನಿರ್ದೇಶಕರಿಗೆ ಆ ಶಕ್ತಿ ಸಿಗಲಿ ಅಂತ ಪ್ರಾರ್ಥನೆ ಮಾಡುತ್ತೇನೆ.
    ದೇಶ-ವಿದೇಶಗಳಿಂದ ಬಂದ ಜನರಿಗೆ ಉಚಿತ ಚಿಕಿತ್ಸೆ ನೀಡಿದ್ದನ್ನು ಸ್ಮರಿಸಿಕೊಳ್ಳುತ್ತೇನೆ. ಮಂಜುನಾಥ್ ಅವರಿಗೆ ಉತ್ತಮ ಆರೋಗ್ಯ ಸಿಗಲಿ ಪ್ರಾರ್ಥನೆ ಮಾಡುತ್ತೇನೆ. ನನಗೆ ಈಗ 91 ವರ್ಷ ಇಂತಹ ಸಂದರ್ಭಕ್ಕಿಂತ ಇನ್ನೇನು ಖುಷಿ ಬೇಕು ನನಗೆ. ಇದಕ್ಕಿಂತ ಹೆಮ್ಮೆ ನನಗೆ ಏನೂ ಬೇಕಾಗಿಲ್ಲ ಎಂದು ಹೆಚ್‌ಡಿಡಿ ಹೇಳಿದರು.

  • ಕೊರೊನಾ ಲಸಿಕೆ ಪಡೆದ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್

    ಕೊರೊನಾ ಲಸಿಕೆ ಪಡೆದ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್

    ಬೆಂಗಳೂರು: ಜಗತ್ತಿಗೆ ಮಾರಕವಾಗಿರೋ ಕೊರೊನಾ ಪಿಡುಗನ್ನ ಹೋಗಲಾಡಿಸಲು ಲಸಿಕೆ ಪಡೆಯೊದೇ ದಾರಿ. ತಾವು ಕೋವಿಶೀಲ್ಡ್ ಲಸಿಕೆ ಪಡೆದು ಎಲ್ಲರೂ ಲಸಿಕೆ ಪಡೆಯಬೇಕು ಎಂದು ಡಾ. ಸಿಎನ್ ಮಂಜುನಾಥ್ ಸಂದೇಶ ರವಾನಿಸಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದಿರೋ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶ ಡಾ. ಮಂಜುನಾಥ್, ಲಸಿಕೆ ಪಡೆಯಲು ಸಾಕಷ್ಟು ಜನ ಹಿಂದೇಟು ಹಾಕುತ್ತಿದ್ದಾರೆ. ಅದರಲ್ಲೂ ಹೆಲ್ತ್ ಕೇರ್ ವರ್ಕರ್ಸ್ ಯಾವುದೇ ಭಯವಿಲ್ಲದೆ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ಕರೆನೀಡಿದ್ದಾರೆ. ನಾನು ವ್ಯಾಕ್ಸಿನ್ ತಗೆದುಕೊಂಡಿದ್ದೇನೆ. ನನಗೆ ಯಾವುದೇ ಸಮಸ್ಯೆಯಾಗಿಲ್ಲ. ಭಯ ಬಿಟ್ಟು ಲಸಿಕೆ ಪಡೆಯಿರಿ ಎಂದು ತಿಳಿಸಿದ್ದಾರೆ.

    ಲಸಿಕೆ ಪಡೆದ ಮೇಲೆ ಸೈಡ್ ಎಫೆಕ್ಟ್ ಆಗುತ್ತೆ ಅನ್ನೋ ಭಯದಲ್ಲಿ ಫ್ರೆಂಟ್ ಲೈನ್ ವಾರಿಯರ್ಸ್ ಇದ್ದಾರೆ. ಜ್ವರ, ಅಲರ್ಜಿ, ಮೈಕೈ ನೋವು ಕಾಣಿಸಿಕೊಳ್ಳೊದು ಲಸಿಕೆಯಿಂದಾಗುವ ಪರಿಣಾಮವೇ ಹೊರತು, ಅದು ಅಡ್ಡ ಪರಿಣಾಮವಲ್ಲ. ಲಸಿಕೆ ಪಡೆಯುವುದರಿಂದ ಯಾರಿಗೂ ಸಮಸ್ಯೆಯಾಗಿಲ್ಲ ಎಂದರು.

    ವ್ಯಾಕ್ಸಿನ್ ಬಗ್ಗೆ ಇರೋ ವದಂತಿಗಳನ್ನ ದೂರ ತಳ್ಳಿ ಲಸಿಕೆಯನ್ನ ಎಲ್ಲರೂ ಪಡೆದುಕೊಳ್ಳಬೇಕು. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ. ಲಸಿಕೆಯನ್ನ ನಾನು ಪಡೆದಿದ್ದೇನೆ ಎಲ್ಲರು ಪಡೆಯಿರಿ ಎಂದು ನಮ್ಮ ನಾಡಿನ ಖ್ಯಾತ ವೈದ್ಯ ಡಾ. ಮಂಜುನಾಥ್ ಕರೆ ನೀಡಿದ್ದಾರೆ.