Tag: Jayamruthyunjaya Sri

  • ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

    ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

    ವಿಜಯಪುರ: ಯತ್ನಾಳ್‌ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು.

    ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ ಕರ್ನಾಟಕದ ಯಾರಿಗಾದರೂ ವಿಪಕ್ಷ ನಾಯಕ ಸ್ಥಾನ ನೀಡಬೇಕಿತ್ತು. ಬಿಜೆಪಿ ಮೊದಲಿನಿಂದಲೂ ಪಂಚಮಸಾಲಿ ಸಮುದಾಯದ ನಾಯಕರನ್ನ ನಿರ್ಲಕ್ಷ್ಯ ಮಾಡುತ್ತಾ ಬಂದಿದ್ದಾರೆ ಎಂದು ಬೇಸರಿಸಿದರು. ಇದನ್ನೂ ಓದಿ: ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

    ಪಂಚಮಸಾಲಿ ಹೋರಾಟದಲ್ಲಿ ಇದ್ದವರನ್ನೇ ಟಾರ್ಗೆಟ್ ಮಾಡಿದ್ದಾರೆ. ಹೋರಾಟ ವಿರೋಧಿಸಿದ ಸಮಾಜದ ಕೆಲವರೊಟ್ಟಿಗೆ ಸೇರಿ ಒಳಸಂಚು ಮಾಡಿ ಯತ್ನಾಳ್ (Basanagouda Patil Yatnal) ಅವರಿಗೆ ಸಿಗಬೇಕಿದ್ದ ವಿಪಕ್ಷ ನಾಯಕ ಸ್ಥಾನವನ್ನ ತಪ್ಪಿಸಿದ್ದಾರೆ ಎಂದು ದೂರಿದರು.

    ಬೆಳಗಾವಿ (Belagavi) ಚಳಿಗಾಲದ ಅಧಿವೇಶನದ ಒಳಗಾಗಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ‌ ನೀಡಿ. ಮೀಸಲಾತಿ ಘೋಷಿಸದಿದ್ದರೆ ಅಧಿವೇಶನದಲ್ಲಿ ಲಿಂಗ ಪೂಜೆ ಮಾಡುತ್ತೇವೆ‌. ಜಾತ್ಯತೀತ ಅಂತ ಹೇಳುವ ಸಿಎಂ‌ ಸಿದ್ದರಾಮಯ್ಯ ನಮ್ಮ‌ ಸಮುದಾಯಕ್ಕೆ ಮೀಸಲಾತಿ ನೀಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನನ್ನ ಧರಧರನೇ ಎಳೆದೊಯ್ದು ಠಾಣೆಯಲ್ಲಿ ಕೂರಿಸಿದ್ದರು- ನೆನಪು ಮೆಲುಕು ಹಾಕಿಕೊಂಡ ಸಿಎಂ

    ತಮ್ಮ‌ ಸಮುದಾಯ ಮೀಸಲಾತಿಗೆ ಶಿಫಾರಸು ಮಾಡಿದ್ದಾರೆ. ಅದೇ ರೀತಿ ಪಂಚಮಸಾಲಿ ಸಮುದಾಯದ ಮೀಸಲಾತಿಗೂ ಶಿಫಾರಸು ಮಾಡಲಿ. ಕಾಂಗ್ರೆಸ್ (Congress) ಪಕ್ಷದಲ್ಲಿರುವ ನಮ್ಮವರು ಇದಕ್ಕೆ ಒತ್ತಾಯ ಮಾಡಿದ್ದಾರೆ ಎಂದರು.

  • ಉತ್ತರ ಕರ್ನಾಟಕಕ್ಕೆ ಅನುದಾನ ಸಿಗದಿರುವುದರಿಂದ ಪ್ರತ್ಯೇಕ ಕರ್ನಾಟಕದ ಕೂಗು ಕೇಳ್ತಿದೆ: ಜಯಮೃತ್ಯುಂಜಯ ಶ್ರೀ

    ಉತ್ತರ ಕರ್ನಾಟಕಕ್ಕೆ ಅನುದಾನ ಸಿಗದಿರುವುದರಿಂದ ಪ್ರತ್ಯೇಕ ಕರ್ನಾಟಕದ ಕೂಗು ಕೇಳ್ತಿದೆ: ಜಯಮೃತ್ಯುಂಜಯ ಶ್ರೀ

    ದಾವಣಗೆರೆ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲ. ಹೀಗಾಗಿ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

    ನಗರದಲ್ಲಿ ಹಮ್ಮಿಕೊಂಡಿದ್ದ ನಾಯಕ ಜನಾಂಗದ ವಿದ್ಯಾರ್ಥಿನಿಲಯ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ್ಕೆ ನೀಡುವ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ಅಲ್ಲದೇ ಶಾಸಕರಾದ ಬಸವರಾಜ್ ಹೊರಟ್ಟಿಯವರಿಗೆ ಸಭಾಪತಿ ಸ್ಥಾನ ಕೊಡದೇ, ಅದನ್ನು ಕಿತ್ತುಕೊಂಡಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಜನರಿಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.

    ನಮಗೂ ಅಖಂಡ ಕರ್ನಾಟಕದಲ್ಲಿ ಇರಬೇಕು ಎನ್ನುವುದು ಇಷ್ಟ. ಆದರೆ ಈ ರೀತಿ ಧೋರಣೆ ಮಾಡಿದರೆ, ಉಗ್ರವಾದ ಹೋರಾಟದ ಹಾದಿಯನ್ನು ತುಳಿಯುವುದು ಸರ್ವೇಸಾಮಾನ್ಯ. ಅಧಿವೇಶನ ಮುಗಿಯುವುದರೊಳಗಾಗಿ ಕನಿಷ್ಠ ಐದಾರು ಇಲಾಖೆಗಳನ್ನಾದರೂ ಕನ್ನಡ ಸೌಧಕ್ಕೆ ಸ್ಥಳಾಂತರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

    ಇದೇ ವೇಳೆ ಪ್ರತ್ಯೇಕ ಲಿಂಗಾಯಿತ ಧರ್ಮದ ಹೋರಾಟವನ್ನು ಲೋಕಸಭಾ ಚುನಾವಣೆಯಾದ ಬಳಿಕ ಮುಂದುವರಿಸುತ್ತೇವೆಂಬ ಶಾಸಕ ಎಂ.ಬಿ.ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡು ಮಾತನಾಡಿದ ಅವರು, ಎಂ.ಬಿ.ಪಾಟೀಲ್ ಹೇಳಿರುವುದಕ್ಕೂ ಅರ್ಥವಿದೆ. ಕೆಲ ತಾಂತ್ರಿಕ ಕಾರಣದಿಂದ ಲೋಕಸಭಾ ಚುನಾವಣೆವರೆಗೂ ಹೋರಾಟವನ್ನು ತಡೆಹಿಡಿದಿದ್ದಾರೆ. ಆದರೆ ಅದು ಯಾವ ಕಾರಣಕ್ಕೆ ಎನ್ನುವುದು ಗೊತ್ತಾಗುತ್ತಿಲ್ಲ. ನಮ್ಮ ಹೋರಾಟ ಮಾತ್ರ ನಿರಂತರವಾಗಿ ಸಾಗುತ್ತದೆ. ಕೇಂದ್ರ ಸರ್ಕಾರ ಪ್ರತ್ಯೇಕ ಧರ್ಮದ ಮನವಿಯನ್ನು ತಿರಸ್ಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಪ್ರಧಾನಿ ನರೇಂದ್ರ ಮೋದಿಯವರು ಲಂಡನ್ ಗೆ ಹೋಗಿ ಬಸವಣ್ಣನವರ ಪ್ರತಿಮೆಯನ್ನು ಉದ್ಘಾಟನೆ ಮಾಡಿ ಬಂದಿದ್ದಾರೆ. ಅವರಿಗೆ ಬಸವಣ್ಣನವರ ಬಗ್ಗೆ ಅಪಾರವಾದ ಗೌರವ ಇದೆ. ಕೆಲವು ಕಾಣದ ಕೈಗಳು ಪ್ರತ್ಯೇಕ ಧರ್ಮದ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನು ನೀಡಿವೆ. ಈ ಬಗ್ಗೆ ನಾವೆಲ್ಲ ಒಮ್ಮೆ ಹೋಗಿ ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡುತ್ತೇವೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ, ಅಂಬೇಡ್ಕರ್ ಸಂವಿಧಾನ ಇದೆ. ಅದರ ಮೂಲಕ ಪ್ರತ್ಯೇಕವಾಗುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv