Tag: jayant chaudhary

  • ಯುಪಿ ಚುನಾವಣೆಯಲ್ಲಿ ಟಿಕೆಟ್ ಮಾರಾಟ ಮಾಡಲಾಗಿದೆ: ಮಸೂದ್ ಅಹ್ಮದ್ ಆರೋಪ

    ಯುಪಿ ಚುನಾವಣೆಯಲ್ಲಿ ಟಿಕೆಟ್ ಮಾರಾಟ ಮಾಡಲಾಗಿದೆ: ಮಸೂದ್ ಅಹ್ಮದ್ ಆರೋಪ

    ಲಕ್ನೋ: ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ (ಆರ್‌ಎಲ್‍ಡಿ) ಅಧ್ಯಕ್ಷ ಸ್ಥಾನಕ್ಕೆ ಮಸೂದ್ ಅಹ್ಮದ್ ರಾಜೀನಾಮೆ ನೀಡಿದ್ದು, ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು  ಆರೋಪಿಸಿದರು.

    ಈ ಬಗ್ಗೆ ಆರ್‌ಎಲ್‍ಡಿ ಮುಖ್ಯಸ್ಥ ಜಯಂತ್ ಚೌಧರಿಗೆ ಪತ್ರ ಬರೆದಿರುವ ಅವರು, ದಲಿತರು ಹಾಗೂ ಅಲ್ಪ ಸಂಖ್ಯಾತರ ಸಮಸ್ಯೆಗಳನ್ನು ನಿರ್ಲಕ್ಷಿಸುವುದರ ಜೊತೆಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷದ ಟಿಕೆಟ್‍ಗಳನ್ನು ಅನರ್ಹ ಅಭ್ಯರ್ಥಿಗಳಿಗೆ ಮಾರಾಟ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

    ಮೈತ್ರಿ ಪಕ್ಷಗಳಾದ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳ ಪಕ್ಷಗಳು ಈ ವಿಷಯಗಳನ್ನು ನೋಡಿಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಇದರಿಂದ ಅವರು ಭವಿಷ್ಯದಲ್ಲಿ ಉತ್ತರ ಪ್ರದೇಶದಲ್ಲಿ ಸರ್ಕಾರವನ್ನು ರಚಿಸಬಹುದು. ಎಸ್‍ಪಿ-ಆರ್‌ಎಲ್‍ಡಿ ಮೈತ್ರಿಕೂಟದ ಎಲ್ಲಾ ಕಾರ್ಯಕರ್ತರು ಬಿಜೆಪಿ ವಿರುದ್ಧ ಹೋರಾಡುವ ಬದಲು ಸೀಟುಗಳಿಗಾಗಿ ತಮ್ಮತಮ್ಮಲ್ಲೇ ಜಗಳವಾಡುತ್ತಿದ್ದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಒಬ್ಬನನ್ನು ರಕ್ಷಿಸಲು ಹೋಗಿ 6 ಯುವಕರು ನೀರುಪಾಲು – ಮೂವರ ಮೃತದೇಹಕ್ಕಾಗಿ ಹುಡುಕಾಟ

    ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆರ್‌ಎಲ್‍ಡಿ ಮತ್ತು ಸಮಾಜವಾದಿ ಪಕ್ಷ ಮಿತ್ರಪಕ್ಷಗಳಾಗಿ ಸ್ಪರ್ಧಿಸಿದ್ದವು. ಈ ತಿಂಗಳ ಆರಂಭದಲ್ಲಿ ಪ್ರಕಟವಾದ ಫಲಿತಾಂಶಗಳಲ್ಲಿ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸತತ ಎರಡನೇ ಅವಧಿಗೆ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ಇದನ್ನೂ ಓದಿ: 40 ಅಡಿ ಆಳದ ಬಾವಿಗೆ ಬಿದ್ದ ಹೋರಿ – ರಕ್ಷಿಸಲು ಹರಸಾಹಸ ಪಟ್ಟ ಅಗ್ನಿ ಶಾಮಕ ದಳ

  • ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ

    ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ

    ಲಕ್ನೋ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದರು. ಬಿಜೆಪಿಗೆ ಸೇರಿದರೆ ಹೇಮಾ ಮಾಲಿನಿಯಾಗಿ ಮಾಡುತ್ತೇನೆ ಎಂದು ಹೇಳಿದ್ದರು ಎಂದು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ(ಆರ್ ಎಲ್‍ಡಿ) ಜಯಂತ್ ಚೌಧರಿ ವಿವಾದಾತ್ಮಕ ಹೇಳಿಕೆ ನೀಡಿದರು.

    ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನನ್ನ ಮೇಲೆ ಯಾವುದೇ ಪ್ರೀತಿಯೂ ಇಲ್ಲ. ನಾನು ಹೇಮಾಮಾಲಿನಿಯಂತೆ ಆಗಲು ಇಷ್ಟಪಡುವುದಿಲ್ಲ ಎಂದ ಅವರು, ನನ್ನನ್ನು ಸಮಾಧಾನಪಡಿಸುವುದರಿಂದ ನೀವು ಏನು ಪಡೆಯುತ್ತೀರಿ? ಜನರಿಗಾಗಿ ನೀವು ಏನು ಮಾಡುದ್ದೀರಿ? ಏಳು ರೈತರ ಕುಟುಂಬಗಳಿಗೆ ಏನು ಮಾಡಿದ್ದೀರಿ? ಅಜಯ್ ಮಿಶ್ರಾ ಇನ್ನೂ ಏಕೆ ಸಚಿವರಾಗಿದ್ದಾರೆ? ಎಂದು ಇದೇ ವೇಳೆ ಪ್ರಶ್ನಿಸಿದರು.

    ಅಕ್ಟೋಬರ್‍ನಲ್ಲಿ ಲಖಿಂಪುರ ಖೇರಿಯಲ್ಲಿ ನಡೆದ ಪ್ರತಿಭಟನೆ ವೇಳೆ ರೈತರ ಮೇಲೆ ಹರಿಹಾಯ್ದ ಆರೋಪದ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಜೈಲು ಸೇರಿದ್ದಾರೆ. ಅವರನ್ನು ಸಚಿವ ವಜಾಗೊಳಿಸಲು ವಿರೋಧ ಪಕ್ಷ ಮುಖಂಡರು ಒತ್ತಾಯಿಸಿದರೂ ಬಿಜೆಪಿ ತಮ್ಮ ಸಂಪುಟದಲ್ಲಿ ಉಳಿಸಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

    ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಜೊತೆ ಆರ್‍ಎಲ್‍ಡಿ ಪಕ್ಷ ಮೈತ್ರಿ ಮಾಡಿಕೊಂಡಿದೆ. ಇತ್ತ ಉತ್ತರ ಪ್ರದೇಶದಲ್ಲಿ ಜಾಟ್ ಸಮುದಾಯದ ಬೆಂಬಲವನ್ನು ಮರಳಿ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಜನವರಿ 26ರಂದು ಜಾಟ್ ನಾಯಕರೊಂದಿಗೆ ಅಮಿತ್ ಶಾ ಸಭೆ ನಡೆಸಿ ಜಯಂತ್ ಚೌಧರಿ ಅವರು ತಪ್ಪು ದಾರಿ ಹಿಡಿದಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ:  ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

    ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 7 ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ. ಇದನ್ನೂ ಓದಿ: ಜಯಲಲಿಲಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ – ಪೊಲೀಸರಿಗೆ ಸಂಕಷ್ಟ

  • ಮತ ಎಣಿಕೆಯವರೆಗೆ ಮಾತ್ರ ಸಮಾಜವಾದಿ, ರಾಷ್ಟ್ರೀಯ ಲೋಕದಳದ ಮೈತ್ರಿ: ಅಮಿತ್ ಶಾ

    ಮತ ಎಣಿಕೆಯವರೆಗೆ ಮಾತ್ರ ಸಮಾಜವಾದಿ, ರಾಷ್ಟ್ರೀಯ ಲೋಕದಳದ ಮೈತ್ರಿ: ಅಮಿತ್ ಶಾ

    ಲಕ್ನೋ: ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳದ ಮೈತ್ರಿಯು ಮತ ಎಣಿಕೆಯವರೆಗೆ ಮಾತ್ರ ಇರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

    ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ನಿಮಿತ್ತ ಮುಜಾಫರ್‌ನಗರದಲ್ಲಿ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಎಸ್‍ಪಿ ಸರ್ಕಾರ ರಚಿಸಿದರೆ, ಅಜಂಖಾನ್ ಸಂಪುಟದ ಭಾಗವಾಗಲಿದ್ದಾರೆ. ಆರ್‌ಎಲ್‍ಡಿ ಅಧ್ಯಕ್ಷ ಜಯಂತ್ ಚೌಧರಿ ಅವರು ಹೊರಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

    ಶುಕ್ರವಾರ ಅಖಿಲೇಶ್ ಯಾದವ್ ಮತ್ತು ಜಯಂತ್ ಚೌಧರಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ತಾವು ಒಟ್ಟಿಗೆ ಇದ್ದೇವೆ ಎಂದು ಹೇಳಿದ್ದರು. ಯುಪಿಯಲ್ಲಿ ಎಸ್‍ಪಿ ಸರ್ಕಾರ ರಚಿಸಿದರೆ, ಜಯಂತ್ ಭಾಯ್ ಅವರನ್ನು ತೆಗೆದುಹಾಕಲಾಗುತ್ತದೆ. ಅಜಂ ಖಾನ್ ಅವರು ಹಿಂತಿರುಗುತ್ತಾರೆ. ಮುಂದೆ ಏನಾಗುತ್ತದೆ ಎಂಬುದನ್ನು ಟಿಕೆಟ್ ಹಂಚಿಕೆಯಿಂದ ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದರು.

    ಉತ್ತರ ಪ್ರದೇಶದಲ್ಲಿ ಜಾಟ್ ಸಮುದಾಯದ ಬೆಂಬಲವನ್ನು ಮರಳಿ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಜನವರಿ 26ರಂದು ಜಾಟ್ ನಾಯಕರೊಂದಿಗೆ ಅಮಿತ್ ಶಾ ಸಭೆ ನಡೆಸಿ ಜಯಂತ್ ಚೌಧರಿ ಅವರು ತಪ್ಪು ದಾರಿ ಹಿಡಿದಿದ್ದಾರೆ. ಆರ್‍ಎಲ್‍ಡಿ ಅಧ್ಯಕ್ಷರಿಗೆ ತನ್ನ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದು ಹೇಳಿದ್ದರು.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಉತ್ತರ ಪ್ರದೇಶದಿಂದ ಮಾಫಿಯಾವನ್ನು ನಿರ್ಮೂಲನೆ ಮಾಡಿದೆ. ಬೇರೆ ಪಕ್ಷಗಳು ಮತ್ತೆ ಸರ್ಕಾರ ರಚಿಸಿದರೆ ಉತ್ತರಪ್ರದೇಶದಲ್ಲಿ ಮಾಫಿಯಾ ಮತ್ತೆ ಬರಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಇನ್ನು ಮುಂದೆ ಮಾಸ್ಕ್ ಹಾಕಿಕೊಂಡೇ ಐಫೋನ್ ಫೇಸ್ ಐಡಿ ಅನ್‍ಲಾಕ್ ಮಾಡ್ಬೋದು!

    ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 7 ರಂದು ಅಂತಿಮ ಹಂತದ ಮತದಾನ ನಡೆಯಲಿದೆ. ಮಾರ್ಚ್ 10 ರಂದು  ಫಲಿತಾಂಶ ಘೋಷಣೆಯಾಗಲಿದೆ. ಇದನ್ನೂ ಓದಿ: ಸ್ವಘೋಷಿತ ದೇವಮಾನವನಿಗೆ ಮಗಳನ್ನೇ ದಾನ ಮಾಡಿದ ತಂದೆ -ಛೀಮಾರಿ ಹಾಕಿದ ಕೋರ್ಟ್