Tag: Jayanti

  • ಒಂದೇ ಫೋಟೋದಲ್ಲಿ ಕಾಣಿಸಿಕೊಂಡ 90ರ ದಶಕದ ನಟಿ ಮಣಿಯರು

    ಒಂದೇ ಫೋಟೋದಲ್ಲಿ ಕಾಣಿಸಿಕೊಂಡ 90ರ ದಶಕದ ನಟಿ ಮಣಿಯರು

    ಬೆಂಗಳೂರು: ಸ್ಯಾಂಡಲ್‍ವುಡ್ ಸುಂದರಿಯರು ಒಂದೇ ಫ್ರೇಮ್‍ನಲ್ಲಿರುವ ವಿಶೇಷವಾದ ಫೋಟೋವನ್ನು ಮಾಲಾಶ್ರೀ ಮತ್ತು ಶೃತಿ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಹಳೆಯ ದಿನಗಳನ್ನು ಸ್ಯಾಂಡಲ್‍ವುಡ್ ಸ್ಟಾರ್‍ಗಳು ಮೆಲಕು ಹಾಕುತ್ತಲೇ ಇರುತ್ತಾರೆ. ಅವರ ಅನುಭವಸಿ ಸಿಹಿ, ಕಹಿ ನೆನಪು, ಅಂದಿನ ದಿನಗಳಲ್ಲಿ ಕಲಿತಿರುವ ಪಾಠವನ್ನು ನೆನಪು ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಶ್ರುತಿ, ಮತ್ತು ಮಾಲಾಶ್ರೀ ಹಂಚಿಕೊಂಡಿರುವ ಫೋಟೋ ಕೊಂಚ ವಿಭಿನ್ನ ಮತ್ತು ವಿಶೇಷವಾಗಿದೆ.

    ಒಂದು ಕಾಲದಲ್ಲಿ ಚಂದನವನ್ನು ಆಳಿದ ನಟಿ ಮಣಿಯರು ಒಂದೇ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಜಯಂತಿ, ಸಿತಾರಾ, ಶ್ರುತಿ, ಮಾಲಾಶ್ರೀ ಮತ್ತು ಅವರ ಸಹೋದರಿ ಶುಭಶ್ರೀ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

    ಈ ಫೋಟೋದಲ್ಲಿ ಜಯಂತಿ ಅವರಿಗೆ ಹೂ ಗುಚ್ಚ ನೀಡಿ ಉಳಿದವರು ಸ್ವಾಗತಿಸುತ್ತಿರುವಂತೆ ಕಾಣುತ್ತದೆ. ಫೋಟೋವನ್ನು ಕಳುಹಿಸಿದ ಸಿನಿಮಾ ಛಾಯಾಗ್ರಾಹಕ ಡಿಸಿ ನಾಗೇಶ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡು ಫೋಟೋವನ್ನು ಶ್ರುತಿ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದಾರೆ. ಮಾಲಾಶ್ರೀ ಇದೇ ಫೋಟೋವನ್ನು ಶೇರ್ ಮಾಡಿಕೊಂಡು ಸುಂದರ ನೆನಪುಗಳು ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Shruthi (@shruthi__krishnaa)

    90ರ ದಶಕದಲ್ಲಿ ಸಿನಿಪ್ರಿಯರ ಮನಗೆದ್ದ ನಟಿಮಣಿಯರು ಒಂದೆ ಕಡೆ ಇರುವ ಫೋಟೋವನ್ನು ನೋಡಿ ಅಭೀಮಾನಿಗಳು ಮೆಚ್ಚಿಗೆ ಮತ್ತು ಉತ್ತಮ ಪ್ರಶಂಸೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

  • ಸಿದ್ದಗಂಗಾ ಮಠದ ಮೇಲೂ ಕೊರೊನಾ ಎಫೆಕ್ಟ್- ಶಿವಕುಮಾರ ಶ್ರೀಗಳ ಜಯಂತಿ ರದ್ದು

    ಸಿದ್ದಗಂಗಾ ಮಠದ ಮೇಲೂ ಕೊರೊನಾ ಎಫೆಕ್ಟ್- ಶಿವಕುಮಾರ ಶ್ರೀಗಳ ಜಯಂತಿ ರದ್ದು

    ತುಮಕೂರು: ಇಡೀ ಪ್ರಪಂಚವನ್ನೇ ಬೆಚ್ಚಿಬೀಳಿಸಿರೋ ಕೊರೊನಾ ವೈರಸ್ ಬಿಸಿ ತುಮಕೂರಿನ ಸಿದ್ದಗಂಗಾ ಮಠಕ್ಕೂ ತಟ್ಟಿದೆ. ಮಠಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದು, ಮಠದ 10 ಸಾವಿರ ವಿದ್ಯಾರ್ಥಿಗಳನ್ನು ಕೂಡಲೇ ಪರೀಕ್ಷೆ ಮುಗಿಸಿ ಊರಿಗೆ ಕಳುಹಿಸಲು ನಿರ್ಧರಿಸಲಾಗಿದೆ.

    ಎಸ್.ಎಸ್.ಎಲ್.ಸಿ ಪರೀಕ್ಷೆಯ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳನ್ನು ತಮ್ಮ ಊರಿನತ್ತ ಕಳುಹಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 5ರಂದು ಆಚರಿಸಲು ನಿರ್ಧರಿಸಿದ್ದ ಶಿವೈಕ್ಯ ಶಿವಕುಮಾರ ಶ್ರೀಗಳ 113ನೇ ಜಯಂತಿಗೂ ಕೊರೊನಾ ಎಫೆಕ್ಟ್‍ನಿಂದಾಗಿ ಬ್ರೇಕ್ ಹಾಕಲಾಗಿದೆ. ಜಿಲ್ಲಾಡಳಿತದಿಂದ ಅನುಮತಿ ಸಿಗದ ಹಿನ್ನೆಲೆ ಸದ್ಯಕ್ಕೆ ಕಾರ್ಯಕ್ರಮ ನಡೆಸದಂತೆ ಬ್ರೇಕ್ ಹಾಕಲಾಗಿದೆ.

    ಈ ಕುರಿತಾಗಿ ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಸ್ಪಷ್ಟಪಡಿಸಿದ್ದಾರೆ. ಮಠದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಿರುವುದರಿಂದ ಸರ್ಕಾರದ ನಿರ್ದೇಶನದಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಪರೀಕ್ಷೆ ಮುಗಿಸಿ ತಮ್ಮ ಊರುಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಎಲ್ಲೂ ಹೆಚ್ಚಿನ ಜನರು ಸೇರದಂತೆ ಆದೇಶಿಸಿರುವ ಸರ್ಕಾರದ ನಿಯಮದಂತೆ ಮಠದಲ್ಲೂ ಮಕ್ಕಳನ್ನು ಒಟ್ಟಿಗೆ ಸೇರದಂತೆ ಎಲ್ಲಾ ಕ್ರಮಗಳನ್ನ ಜರುಗಿಸಲಾಗಿದೆ ಎಂದು ತಿಳಿಸಿದರು.

  • ಟಿಪ್ಪು ಜಯಂತಿ ರದ್ದು ಆದೇಶವನ್ನು ಪುನರ್ ಪರಿಶೀಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    ಟಿಪ್ಪು ಜಯಂತಿ ರದ್ದು ಆದೇಶವನ್ನು ಪುನರ್ ಪರಿಶೀಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    – ಕಾನೂನು ಸುವ್ಯವಸ್ಥೆ ಕಾರಣ ಕೊಟ್ಟು ಜಯಂತಿ ರದ್ದು ಸಾಧ್ಯವೇ?
    – ಜನವರಿ 3ಕ್ಕೆ ವಿಚಾರಣೆ ಮುಂದೂಡಿಕೆ

    ಬೆಂಗಳೂರು: ಟಿಪ್ಪು ಜಯಂತಿ ಸರ್ಕಾರಿ ಆಚರಣೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

    ರಾಜ್ಯ ಸರಕಾರ ಆದೇಶ ರದ್ದುಪಡಿಸಲು ಕೋರಿ ಉತ್ತರ ಪ್ರದೇಶದ ಲಖನೌ ನಿವಾಸಿ ಬಿಲಾಲ್ ಆಲಿ ಷಾ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಾಧೀಶ ಎ. ಎಸ್.ಓಕ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು.

    ಈ ವೇಳೆ ಈ ಹಿಂದೆ ಪ್ರಕಟಿಸಿದ ಆದೇಶವನ್ನು ಸರ್ಕಾರ ಪುನರ್ ಪರಿಶೀಲಿಸಬಹುದು. ಆದೇಶವನ್ನು ತಿದ್ದುಪಡಿ ಮಾಡಿಕೊಳ್ಳಲೂಬಹುದು. ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಕೆಲಸ ಎಂದು ಮುಖ್ಯ ನ್ಯಾಯಾಧೀಶರು ಅಭಿಪ್ರಾಯಪಟ್ಟು ಜನವರಿ 3ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಈ ವೇಳೆ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಣೆಗೆ ನಿರ್ಬಂಧವಿಲ್ಲ. ನವೆಂಬರ್ 10 ರಂದು ರಾಜ್ಯ ಸರ್ಕಾರ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

    ಅರ್ಜಿದಾರರ ವಾದ ಏನಿತ್ತು?
    ಜುಲೈ 7 ರಂದು ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವೇಳೆ ಮಂತ್ರಿಮಂಡಲದಲ್ಲಿ ಬೇರೆ ಯಾವುದೇ ಸಚಿವರು ಇರಲಿಲ್ಲ. ಹೀಗಿದ್ದರೂ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಲಾಗಿದೆ. ಯಾವುದೇ ಸಚಿವರ ಅಭಿಪ್ರಾಯ ಪಡೆಯದೇ, ರಾಜ್ಯಪಾಲರ ಅಭಿಪ್ರಾಯ ಪಡೆಯದೇ, ಯಾರೊಬ್ಬರ ಅಭಿಪ್ರಾಯವನ್ನೂ ಪರಿಗಣಿಸದೆ ರದ್ದು ಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 28 ಜಯಂತಿಗಳನ್ನು ಆಚರಿಸಲಾಗುತ್ತಿದೆ. ಈ ಜಯಂತಿಯನ್ನು ಸರ್ಕಾರವೇ ಅಚರಿಸುತ್ತದೆ. ಟಿಪ್ಪು ಜಯಂತಿ ರದ್ದುಪಡಿಸಿರುವುದು ದುರಂತವಾಗಿದ್ದು, ಸರ್ಕಾರದ ಈ ನಡೆಯಿಂದ ಜಾತಿ ತಾರತಮ್ಯ ನಡೆಸುತ್ತಿರುವುದು ಖಾತ್ರಿಯಾಗಿದೆ. ಇದು ಮುಸಲ್ಮಾನರ ವಿರುದ್ಧದ ತಾರತಮ್ಯ ನೀತಿಯನ್ನು ತೋರಿಸುತ್ತದೆ. ಸರ್ಕಾರ ಯಾವಾಗ ಬೇಕಾದರೂ ತನ್ನ ಕಾಯ್ದೆಗಳನ್ನು ಬದಲಿಸಿಕೊಳ್ಳಬಹುದಾದರೂ ಅದಕ್ಕೆ ಒಂದು ನೀತಿ ನಿಯಮವಿದೆ. ಆದರೆ ಏಕಾಏಕಿ ಟಿಪ್ಪು ಜಯಂತಿಯನ್ನು ರದ್ದು ಮಾಡಿರುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.

    ವಿಚಾರಣೆ ಸಮಯದಲ್ಲಿ ರಾಜ್ಯದಲ್ಲಿ ಇಷ್ಟು ಜಯಂತಿಗಳನ್ನು ಆಚರಿಸಲು ಕಾರಣ ಏನು ಎಂದು ಸಿಜೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರಲ್ಲಿ ಪ್ರಶ್ನಿಸಿದರು. ರಾಜ್ಯದಲ್ಲಿ ಸ್ನೇಹತಾ ಮನೋಭಾವ, ಒಗ್ಗೂಡುವಿಕೆ, ಒಬ್ಬರನೊಬ್ಬರು ಅರಿತು ಬಾಳಲು ಆಚರಿಸಲಾಗುತ್ತಿದೆ ಎಂದು ಉತ್ತರ ನೀಡಿದರು. ಈ ಉತ್ತರ ಬಂದ ಕೂಡಲೇ ಹಾಗಾದ್ರೆ ಟಿಪ್ಪು ಜಯಂತಿ ವಿಚಾರದಲ್ಲಿ ಎಂದು ಮರು ಪ್ರಶ್ನೆ ಹಾಕಿದಾಗ ಕೊಡಗಿನ ಒಂದು ಭಾಗದಲ್ಲಿ ತೀವ್ರ ಸಮಸ್ಯೆಯಾಯಿತು. ಗುಂಪು ಘರ್ಷಣೆ ನಡೆಯಿತು, ಓರ್ವನ ಹತ್ಯೆಯಾಯಿತು ಎಂದು ತಿಳಿಸಿದರು. ಅಷ್ಟೇ ಅಲ್ಲದೇ ಟಿಪ್ಪು ಜಯಂತಿ ಹಿಂಪಡೆದ ಕಾರಣದಿಂದಾಗಿ ಅರ್ಜಿದಾರರ ಯಾವ ಹಕ್ಕು ಮೊಟುಕುಗೊಂಡಂತಾಗಿದೆ ಅಡ್ವೊಕೇಟ್ ಜನರಲ್ ಪ್ರಶ್ನೆ ಕೇಳಿದರು.

    ರಾಜ್ಯೋತ್ಸವ ವಿಚಾರದಲ್ಲೂ ಗಲಭೆಗಳಾಗಿವೆ. ಕಾನೂನು ಸುವ್ಯವಸ್ಥೆಯನ್ನು ಸರ್ಕಾರ ಕಾಪಾಡಬೇಕು. ಕಾನೂನು ಸುವ್ಯವಸ್ಥೆ ಕಾರಣಗಳಿಂದ ರದ್ದುಪಡಿಸಲು ಸಾಧ್ಯವೇ ಎಂದು ಮುಖ್ಯನ್ಯಾಯಮೂರ್ತಿ ಪ್ರಶ್ನೆ ಕೇಳಿದರು. ಈ ಪ್ರಕರಣ ಸಾರ್ವಜನಿಕ ಹಿತಾಸಕ್ತಿ ವಿಚಾರವಾಗಿದೆ. ಅಡ್ವೊಕೇಟ್ ಜನರಲ್ ಹೇಳಿದನ್ನು ನಾವು ಒಪ್ಪುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕೊನೆಯಲ್ಲಿ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡಲೇ ಕ್ರಮವಹಿಸಬೇಕು. ಸಂವಿಧಾನವನ್ನು ಎತ್ತಿಹಿಡಿಯುವ ಕೆಲಸವನ್ನು ಸರ್ಕಾರ ಮಾಡಬೇಕು. ನಿಯಮ ಬದಲಾವಣೆಯನ್ನು ಸರ್ಕಾರ ಕ್ರಮೇಣವಾಗಿ ಮಾಡಬೇಕು. ಸುಪ್ರೀಂ ಕೋರ್ಟ್ ಪ್ರಕರಣವೊಂದರ ತೀರ್ಪು ನೀಡುವಾಗ ಇದನ್ನು ಪರಿಗಣಿಸಲು ಸೂಚಿಸಿದೆ. ಹೀಗಾಗಿ ರಾಜ್ಯ ಸರ್ಕಾರ ತನ್ನ ಆದೇಶವನ್ನು ಸರ್ಕಾರ ಪುನರ್ ಪರಿಶೀಲಿಸಬಹುದು ಅಥವಾ ಆದೇಶವನ್ನು ತಿದ್ದುಪಡಿ ಮಾಡಿಕೊಳ್ಳಲೂಬಹುದು ಎಂದು ಹೇಳಿ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಜ.3ಕ್ಕೆ ಮುಂದೂಡಿತು.