Tag: Jayaprakash

  • ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’: ಜೆಪಿ ನಾಯಕ

    ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’: ಜೆಪಿ ನಾಯಕ

    ಗಾಗಲೇ ತನ್ನ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ‘ಕರ್ಕಿ’ ಸಿನೆಮಾ ತೆರೆಗೆ ಬರಲು ಭರದ ಸಿದ್ದತೆ ನಡೆಸುತ್ತಿದೆ. ಸದ್ಯ ನಿಧಾನವಾಗಿ ‘ಕರ್ಕಿ’ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಮೊದಲ ಹಂತದಲ್ಲಿ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ‘ಕರ್ಕಿ’ (Karkee) ಸಿನೆಮಾದ ಟೀಸರ್ (Teaser) ಮತ್ತು ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಈ ವೇಳೆ ‘ಕರ್ಕಿ’ ಸಿನೆಮಾದ ಕಲಾವಿದರು, ತಂತ್ರಜ್ಞರು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದರು.

    ಮೊದಲಿಗೆ ‘ಕರ್ಕಿ’ ಸಿನೆಮಾದ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಚಿತ್ರ ಸಾಹಿತಿ ಕವಿರಾಜ್ ಮಾತನಾಡಿ, ‘ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ‘ಕರ್ಕಿ’ ಸಿನೆಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಈ ಸಿನೆಮಾದಲ್ಲಿ ಆರು ಹಾಡುಗಳಿದ್ದು, ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ. ಪವಿತ್ರನ್ ಅವರಂಥ ನಿರ್ದೇಶಕರ ಜೊತೆ ಕೆಲಸ ಮಾಡಲು ‘ಕರ್ಕಿ’ ಸಿನೆಮಾದಲ್ಲಿ ಅವಕಾಶ ಸಿಕ್ಕಿದ್ದು, ನನಗೂ ಹೊಸ ಅನುಭವ ನೀಡಿದೆ. ಪ್ರತಿ ಹಾಡಿನ ಒಂದೊಂದು ಪದವನ್ನೂ ಅವರೂ ಅರ್ಥೈಸಿಕೊಂಡು, ಸ್ಪಂದಿಸುತ್ತಿದ್ದರು. ನಮ್ಮ ನಡುವಿನ ಕಥೆಯೊಂದು ಹೊಸ ರೀತಿಯಲ್ಲಿ ಮೂಡಿಬಂದಿದ್ದು, ‘ಕರ್ಕಿ’ ನೋಡುಗರಿಗೆ ಹೊಸ ಅನುಭವ ಕೊಡಲಿದೆ’ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.

    ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಸಿನೆಮಾಗಳನ್ನು ವಿತರಿಸಿರುವ ವಿತರಕ ಮತ್ತು ಉದ್ಯಮಿ ಪ್ರಕಾಶ್ ಪಳನಿ ‘ಕರ್ಕಿ’ ಸಿನೆಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ತಮ್ಮ ಚೊಚ್ಚಲ ನಿರ್ಮಾಣದ ಸಿನೆಮಾದ ಬಗ್ಗೆ ಮಾತನಾಡಿದ ಪ್ರಕಾಶ್ ಪಳನಿ, ‘ಸಿನೆಮಾದ ಕಥೆ ಇಷ್ಟವಾಗಿ ಈ ಸಿನೆಮಾವನ್ನು ನಿರ್ಮಿಸಲು ಮುಂದಾದೆ.  ಮೊದಲು ಈ ಸಿನೆಮಾವನ್ನು ಕನ್ನಡದ ದೊಡ್ಡ ನಿರ್ದೇಶಕರೊಬ್ಬರು ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ನಿರ್ದೇಶನ ಮಾಡಲಾಗಲಿಲ್ಲ. ಅವರ ಬದಲಾಗಿ ತಮಿಳು ನಿರ್ದೇಶಕ ಪವಿತ್ರನ್ ಈ ಸಿನೆಮಾವನ್ನು ನಿರ್ದೇಶಿಸಿದರು. ಅವರ ಅನುಭದಲ್ಲಿ ‘ಕರ್ಕಿ’ ಸಿನೆಮಾ ತುಂಬ ಚೆನ್ನಾಗಿ ಮೂಡಿಬಂದಿದೆ. ಈಗಾಗಲೇ ಸಿನೆಮಾದ ಎಲ್ಲಾ ಕೆಲಸಗಳು ಮುಗಿದಿದ್ದು, ಇದೇ ಸೆಪ್ಟೆಂಬರ್ ಅಂತ್ಯದೊಳಗೆ ಸಿನೆಮಾವನ್ನು ಬಿಡುಗಡೆ ಮಾಡುವ ಯೋಚನೆಯಿದೆ. ಪ್ರೇಕ್ಷಕರಿಗೂ ‘ಕರ್ಕಿ’ ಸಿನೆಮಾ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ, ಈಗಾಗಲೇ ‘ವಾಟ್ಸಾಪ್ ಲವ್’, ‘ರಾಜರಾಣಿ’ ಸೇರಿದಂತೆ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್ (Jayaprakash) (ಜೆ.ಪಿ) ರೆಡ್ಡಿ ‘ಕರ್ಕಿ’ ಸಿನೆಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನೆಮಾದಲ್ಲಿ ಕಾನೂನು ಪದವಿಧರನಾಗಬೇಕು ಎಂಬ ಕನಸು ಇಟ್ಟುಕೊಂಡ ಹಳ್ಳಿ ಹುಡುಗನ ಪಾತ್ರದಲ್ಲಿ ಜೆ. ಪಿ ಅಭಿನಯಿಸಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕ ಜಯಪ್ರಕಾಶ್ (ಜೆ.ಪಿ) ರೆಡ್ಡಿ, ‘ಈ ಸಿನೆಮಾದಲ್ಲಿ ನನ್ನದು ಮುತ್ತುರಾಜ್ ಎಂಬ ಹಳ್ಳಿ ಹುಡುಗನ ಪಾತ್ರ. ಜಾತಿ ಮತ್ತು ಜನಾಂಗೀಯ ವಿಷಯವನ್ನು ಮನ ಮುಟ್ಟುವಂತೆ ಈ ಸಿನೆಮಾದಲ್ಲಿ ಹೇಳಲಾಗಿದೆ. ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನೆಮಾ ಸಾಗುತ್ತದೆ. ಆದಷ್ಟು ನೈಜವಾಗಿ ಸಿನೆಮಾದ ಕಥೆ, ಪಾತ್ರಗಳು ಮೂಡಿಬಂದಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತೆ ‘ಕರ್ಕಿ’ ಸಿನೆಮಾ ಮೂಡಿಬಂದಿದೆ’ ಎಂದರು

    ‘ಕರ್ಕಿ’ ಸಿನೆಮಾದಲ್ಲಿ ನಾಯಕ ನಟ ಜಯಪ್ರಕಾಶ್ (ಜೆ. ಪಿ) ರೆಡ್ಡಿ ಅವರಿಗೆ ಮಲೆಯಾಳಿ ಬೆಡಗಿ ಮೀನಾಕ್ಷಿ ನಾಯಕಿಯಾಗಿ ಜೋಡಿಯಾಗಿದ್ದಾರೆ. ಉಳಿದಂತೆ ಸಾಧುಕೋಕಿಲ, ಬಲರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು ‘ಕರ್ಕಿ’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಥರ್ಡ್ ಐ ಮೀಡಿಯಾ’ ಬ್ಯಾನರಿನಲ್ಲಿ ಪ್ರಕಾಶ್ ಪಳನಿ ನಿರ್ಮಿಸಿರುವ ‘ಕರ್ಕಿ’ ಸಿನೆಮಾಕ್ಕೆ ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಕರ್ಕಿ’ ಸಿನೆಮಾಕ್ಕೆ ಹೃಷಿಕೇಶ ಛಾಯಾಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನವಿದೆ. ‘ಕರ್ಕಿ’ ಸಿನೆಮಾದ ಆರು ಹಾಡುಗಳಿಗೆ ಕವಿರಾಜ್ ಸಾಹಿತ್ಯವಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

    ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ‘ಕರ್ಕಿ’ ಸಿನೆಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸದ್ಯ ‘ಕರ್ಕಿ’ ಸಿನೆಮಾದ ಟೀಸರ್ ಮತ್ತು ಟ್ರೇಲರ್ ಸೋಶಿಯಲ್ ಮೀಡಿಯಾಗಳಲ್ಲಿ ಒಂದಷ್ಟು ಸದ್ದು ಮಾಡುತ್ತಿದ್ದು, ‘ಕರ್ಕಿ’ಯ ಕಮಾಲ್ ಥಿಯೇಟರಿನಲ್ಲಿ ಹೇಗೆ ನಡೆಯಲಿದೆ ಎಂಬುದು ಸಿನೆಮಾ ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

  • ಮೊದಲ ಹಂತದ ಶೂಟಿಂಗ್ ಮುಗಿಸಿದ ಭಗೀರಥ

    ಮೊದಲ ಹಂತದ ಶೂಟಿಂಗ್ ಮುಗಿಸಿದ ಭಗೀರಥ

    ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ‘ಭಗೀರಥ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.   ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣವಾಗಿದೆ. ಸದ್ಯ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆ ಮಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಅಕುಲ್ ನೃತ್ಯ ನಿರ್ದೇಶನ, ಸೂರಿ ಚಿತ್ತೂರು ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಹಾಗೂ ಮೋಹನ್ ರಾಸು ಅವರ ಸಹ ನಿರ್ದೇಶನ “ಭಗೀರಥ” ಚಿತ್ರಕ್ಕಿದೆ.

    ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ,  ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಗೀರಥನಿಗೆ ಬಿರುಸಿನ ಚಿತ್ರೀಕರಣ: ಮೈಸೂರು ಸುಂದರ ತಾಣ ಸೆರೆ ಹಿಡಿದ ಟೀಮ್

    ಭಗೀರಥನಿಗೆ ಬಿರುಸಿನ ಚಿತ್ರೀಕರಣ: ಮೈಸೂರು ಸುಂದರ ತಾಣ ಸೆರೆ ಹಿಡಿದ ಟೀಮ್

    ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ಭಗೀರಥ (Bhagirath) ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಎರಡು ಹಾಡುಗಳ, ನಾಲ್ಕು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್ (Jayaprakash), ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ.

    ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ ,  ಮೋಹನ್ ರಾಸು ಸಹ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಭಗೀರಥ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡ ‘ಜಮಾನ’ ಸಿನಿಮಾದ ಜೆಪಿ

    ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡ ‘ಜಮಾನ’ ಸಿನಿಮಾದ ಜೆಪಿ

    ಚೇತನ್ ರಮೇಶ್ ನಿರ್ಮಾಣದ, ಬಿ.ಎಸ್ ಸಂಜಯ್ (Sanjay) ನಿರ್ದೇಶನದ, ವಿಭಿನ್ನ ಕಥಾಹಂದರ ಹೊಂದಿರುವ  ‘ದಿಗ್ದರ್ಶಕ’  (Digdarshaka) ಚಿತ್ರದ ಟೀಸರ್ (Teaser) ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

    ಇದೊಂದು ನೈಜಘಟನೆ ಆಧಾರಿತ ಚಿತ್ರ. ಚಿತ್ರದ ನಾಯಕನಾಗಿ ಜೆ.ಪಿ(ಜಯಪ್ರಕಾಶ್) (Jayaprakash) ಅಭಿನಯಿಸಿದ್ದಾರೆ. ಈ ಹಿಂದೆ ನನ್ನ ನಿರ್ದೇಶನದ ‘ಜಮಾನ’ ಚಿತ್ರದಲ್ಲೂ ಜೆ‌.ಪಿ ಅವರೆ ನಾಯಕನಾಗಿ ಅಭಿನಯಿಸಿದ್ದರು. ಚೇತನ್ ರಮೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ‌. ನಾನೇ ಕಥೆ ಬರೆದು ಸಂಕಲನ ಕೂಡ ಮಾಡಿದ್ದೇನೆ. ದಿಗ್ದರ್ಶಕ ಎಂದರೆ ಚಿತ್ರದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಮಾರ್ಗದರ್ಶನ ನೀಡುವಾತ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ‌.‌ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮಾಡಿದ್ದಾರೆ.   ಆಕ್ಷನ್ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಜೆ‌.ಪಿ, ಪವನ್ ಶೆಟ್ಟಿ, ಅನನ್ಯ ಶುಭ ರಕ್ಷ, ಬಲ ರಾಜವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ನಾನು ಕೂಡ ಪತ್ರಕರ್ತ. ಈ ಹಿಂದೆ ‘ಜಮಾನ’ ಚಿತ್ರದಲ್ಲಿ ನಟಿಸಿದ್ದೆ. ನಿರ್ದೇಶಕ ಸಂಜಯ್ ಅವರು ‘ದಿಗ್ದರ್ಶಕ’ ಚಿತ್ರದ ಕಥೆ ಹೇಳಿ, ಈ ಪಾತ್ರ ನೀವೇ ಮಾಡಬೇಕು ಎಂದರು. ‘ದಿಗ್ದರ್ಶಕ’ ಅಂದರೆ ದಿಕ್ಕುಗಳನ್ನು ತೋರಿಸುವವನು ಎಂದು. ನಿರ್ದೇಶಕರು ಈ ಚಿತ್ರದ ಕೊನೆಯಲ್ಲಿ ಉತ್ತಮ ಸಂದೇಶ ಸಹ ನೀಡಲಿದ್ದಾರೆ. ನನ್ನ ಜೊತೆ ನಟಿಸಿರುವ ಎಲ್ಲಾ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಜೆ.ಪಿ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

    ನಾನು ರಾಜಕುಮಾರ್ ಅವರ ಮನೆಯಲ್ಲಿ ಬೆಳೆದವನು. ಶಿವರಾಜಕುಮಾರ್ ಅವರ ಜೊತೆ ಹತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇ‌ನೆ. ನಿರ್ದೇಶಕ ಸಂಜಯ್ ಅವರು ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು.‌ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಚೇತನ್ ರಮೇಶ್. ಚಿತ್ರದಲ್ಲಿ ಅಭಿನಯಿಸಿರುವ ಪವನ್ ಶೆಟ್ಟಿ, ಅನನ್ಯ ದೇ,‌ ಕಾರ್ಯಕಾರಿ ನಿರ್ಮಾಪಕ ರಮೇಶ್ ಗೌಡ, ಮಹೇಶ್ ತಲಕಾಡು, ರಾಜೀವ್,  ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k