Tag: Jayaram Ramesh

  • ಅಗ್ನಿಪಥ್ ಯೋಜನೆ ವಾಪಸ್ ಪಡೆಯುವಂತೆ ರಾಷ್ಟ್ರಪತಿಗೆ ಕಾಂಗ್ರೆಸ್ ನಾಯಕರ ಮನವಿ

    ಅಗ್ನಿಪಥ್ ಯೋಜನೆ ವಾಪಸ್ ಪಡೆಯುವಂತೆ ರಾಷ್ಟ್ರಪತಿಗೆ ಕಾಂಗ್ರೆಸ್ ನಾಯಕರ ಮನವಿ

    ನವದೆಹಲಿ: ಕೇಂದ್ರ ಸರ್ಕಾರದಿಂದ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯನ್ನು ಕೂಡಲೇ ಹಿಂಪಡೆಯುವಂತೆ ಕಾಂಗ್ರೆಸ್‌ನ ಇಬ್ಬರು ನಾಯಕರು ಇಂದು ರಾಷ್ಟ್ರತಿಗೆ ಮನವಿ ಸಲ್ಲಿಸಿದ್ದಾರೆ.

    ಕಾಂಗ್ರೆಸ್ ನಾಯಕರಾದ ಜಯರಾಮ್ ರಮೇಶ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರಿಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಜೂನ್ 23ಕ್ಕೆ ED ಮುಂದೆ ಹಾಜರ್? 

    ಈ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕರು, ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿ ಬದಲಾವಣೆ ಘೋಷಿಸುವ ಮೊದಲು ಸರ್ಕಾರವು ವ್ಯಾಪಕವಾದ ಸಮಾಲೋಚನೆಗಳನ್ನು ಅಳವಡಿಸಿಕೊಂಡಿಲ್ಲ. ರಕ್ಷಣಾ ಸ್ಥಾಯಿ ಸಮಿತಿಯಲ್ಲಿ ಯೋಜನೆ ಬಗ್ಗೆ ಚರ್ಚಿಸಿಲ್ಲ. ರಾಜಕೀಯ ಪಕ್ಷಗಳು ಪಾಲುದಾರರ ಸಲಹೆಗಳನ್ನೂ ಪಡೆದಿಲ್ಲ. ತಜ್ಞರ ಸಲಹೆ ಪರಿಗಣಿಸಲಾಗಿದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ. ಈ ಯೋಜನೆ ಕೆಟ್ಟದ್ದಾಗಿ ಪ್ರಯೋಗಿಸುವ ಮುನ್ನ ಪ್ರಾಯೋಗಿಕವಾಗಿ ಪರೀಕ್ಷಿಸಬೇಕಿತ್ತು ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಎರಡು ವಾರ ಶಟ್‍ಡೌನ್ – ತುರ್ತು ಸೇವೆಗಳು ಮಾತ್ರ ಲಭ್ಯ

    ಈ ಯೋಜನೆಯಲ್ಲಿ ಅತ್ಯಂತ ಕಡಿಮೆ ತರಬೇತಿ ಅವಧಿ ನಿಗದಿ ಮಾಡಲಾಗಿದೆ. ಸೇವೆಯ ಅವಧಿಯೂ ಕಡಿಮೆಯಿದೆ. ಇದರಿಂದ ಸಶಸ್ತ್ರ ಪಡೆಗಳ ಗುಣಮಟ್ಟ, ದಕ್ಷತೆ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

    Live Tv