Tag: Jayshree

  • ಸಾಂತ್ವನ ಹೇಳಿ ಧೈರ್ಯ ತುಂಬಿದ್ದೆ- ನಟಿ ಅಶ್ವಿತಿ ಶೆಟ್ಟಿ

    ಸಾಂತ್ವನ ಹೇಳಿ ಧೈರ್ಯ ತುಂಬಿದ್ದೆ- ನಟಿ ಅಶ್ವಿತಿ ಶೆಟ್ಟಿ

    ಬೆಂಗಳೂರು:  ಕಳೆದ ಬಾರಿ ಜಯಶ್ರೀ ಆತ್ಮಹತ್ಯೆ ಮಾಡುತ್ತೇನೆ ಎಂದಾಗ ನಾನು ಸಾಂತ್ವನ ಹೇಳಿ ಧೈರ್ಯ ತುಂಬಿದ್ದೆ ಎಂದು ನಟಿ ಅಶ್ವಿತಿ ಶೆಟ್ಟಿ ಹೇಳಿದ್ದಾರೆ.

    ಬಿಗ್‌ ಬಾಸ್ ಜಯಶ್ರೀ ಆತ್ಮಹತ್ಯೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಧಾವಿಸಿದ ಪ್ರತಿಕ್ರಿಯಿಸಿದ ಅವರು, ಅವರನ್ನು ಮಾತಾಡಿಸಿ ತುಂಬಾ ದಿನ ಆಯ್ತು. ಕಳೆದ ಬಾರಿ ನಾನು ಸಾಂತ್ವನ ಹೇಳಿದ್ದೆ ಎಂದು ತಿಳಿಸಿದರು.

    ಸಾಂತ್ವನ ಹೇಳಿದ ಬಳಿಕ ನಾನು ಜಯಶ್ರೀ ಸಂಪರ್ಕಕ್ಕೆ ಬಂದಿಲ್ಲ. ಒಮ್ಮೆ ಒಮ್ಮೆ ಕಾಲ್ ಮಾಡಿ ನಾನು ಆರಾಮವಾಗಿದ್ದೇನೆ. ಡ್ಯಾನ್ಸ್ ಕ್ಲಾಸ್ ಸೇರಿದ್ದೇನೆ ಎಂದು ತಿಳಿಸಿದ್ದರು. ಅದಾದ ಮೇಲೆ ನನ್ನ ಸಂಪರ್ಕಕ್ಕೆ ಸಿಗಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ತಿಂಗಳ ಹಿಂದೆಯಷ್ಟೇ ವೃದ್ಧಾಶ್ರಮ ಸೇರಿದ್ದ ಜಯಶ್ರೀ!

    ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಜಯಶ್ರೀ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಜಯಶ್ರೀ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಈ ಹಿಂದೆ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದ ಜಯಶ್ರೀ, ‘ಖಿನ್ನತೆಗೆ ಹಾಗೂ ಈ ಜಗತ್ತಿಗೆ ವಿದಾಯ ಹೇಳುತ್ತಿದ್ದೇನೆ” ಎಂದು ಪೋಸ್ಟ್ ಮಾಡಿದ್ದರು. ಸ್ವಲ್ಪ ಸಮಯದ ನಂತರ ಆ ಪೋಸ್ಟನ್ನು ಡಿಲೀಟ್ ಮಾಡಿ, ‘ನಾನು ಆರಾಮಾಗಿ, ಸುರಕ್ಷಿತವಾಗಿದ್ದೀನಿ’ ಎಂದು ಮತ್ತೆ ಪೋಸ್ಟ್ ಮಾಡಿದ್ದರು. ಮಾನಸಿಕ ಖಿನ್ನತೆಗೆ ಜಾರಿದ್ದ ಜಯಶ್ರೀ ಇಂದು ನೇಣಿಗೆ ಶರಣಾಗಿದ್ದಾರೆ.

  • ಬಿಗ್‍ಬಾಸ್ ಸ್ಪರ್ಧಿ ಜಯಶ್ರೀ ಆತ್ಮಹತ್ಯೆಗೆ ಶರಣು

    ಬಿಗ್‍ಬಾಸ್ ಸ್ಪರ್ಧಿ ಜಯಶ್ರೀ ಆತ್ಮಹತ್ಯೆಗೆ ಶರಣು

    ಬೆಂಗಳೂರು: ಬಿಗ್‍ಬಾಸ್ ಸ್ಪರ್ಧಿ ಜಯಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಜಯಶ್ರೀ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಈ ಹಿಂದೆ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದ ಜಯಶ್ರೀ, ‘ಖಿನ್ನತೆಗೆ ಹಾಗೂ ಈ ಜಗತ್ತಿಗೆ ವಿದಾಯ ಹೇಳುತ್ತಿದ್ದೇನೆ” ಎಂದು ಪೋಸ್ಟ್ ಮಾಡಿದ್ದರು. ಸ್ವಲ್ಪ ಸಮಯದ ನಂತರ ಆ ಪೋಸ್ಟನ್ನು ಡಿಲೀಟ್ ಮಾಡಿ, ‘ನಾನು ಆರಾಮಾಗಿ, ಸುರಕ್ಷಿತವಾಗಿದ್ದೀನಿ’ ಎಂದು ಮತ್ತೆ ಪೋಸ್ಟ್ ಮಾಡಿದ್ದರು.

    ಆ ಬಳಿಕ ಫೇಸ್‍ಬುಕ್‍ನಲ್ಲಿ ಕೆಲವು ನಿಮಿಷ ಲೈವ್ ಬಂದಿದ್ದ ಜಯಶ್ರೀ, ‘ಎಲ್ಲರಿಗೂ ಹಾಯ್, ನಾನು ಇದನ್ನು ಪಬ್ಲಿಸಿಟಿಗೋಸ್ಕರ ಮಾಡುತ್ತಿಲ್ಲ. ನನಗೆ ಸುದೀಪ್ ಸರ್ ಅವರಿಂದ ಒಂದು ರೂಪಾಯಿಯಷ್ಟು ಆರ್ಥಿಕ ಸಹಾಯದ ನಿರೀಕ್ಷೆ ಇಲ್ಲ. ನನಗೆ ಬೇಕಾಗಿರುವುದು ಒಂದೇ ನನ್ನ ಸಾವು. ನಾನು ತುಂಬಾ ಖಿನ್ನತೆಯಲ್ಲಿದ್ದೇನೆ, ಕುಟುಂಬದ ಸಮಸ್ಯೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಆರ್ಥಿಕವಾಗಿ ಚೆನ್ನಾಗಿಯೇ ಇದ್ದೇನೆ. ಆದರೆ ನನಗೆ ಎಲ್ಲವೂ ಮೋಸ ನಡೆದಿದೆ. ಚಿಕ್ಕ ವಯಸ್ಸಿನಲ್ಲಿ ನನಗೆ ಆಗಬಾರದ ಘಟನೆ ನಡೆದಿವೆ. ಅದನ್ನು ಮರೆಯಲು ಆಗುತ್ತಿಲ್ಲ’ ಎಂದು ತಮ್ಮ ಅಳಲನ್ನು ಹೇಳಿಕೊಡಿದ್ದರು.

    ಅಲ್ಲದೇ “ಫೇಸ್‍ಬುಕ್‍ನಲ್ಲಿ ನನಗೆ ಬಂದಿರುವ ಕಮೆಂಟ್ಸ್ ನೋಡುತ್ತಿದ್ದೇನೆ. ನನ್ನ ಬಗ್ಗೆ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಅದರ ಬಗ್ಗೆ ನಾನು ಮಾತನಾಡಲು ಇಷ್ಟಪಡುವುದಿಲ್ಲ. ನಾನೊಬ್ಬಳು ಲೂಸರ್, ನಾನು ಹುಚ್ಚಿ, ನಾನು ಸಾಯಬೇಕು ಎಂದುಕೊಂಡಿದ್ದೇನೆ. ನಾನು ಬಯಸುತ್ತಿರುವುದು ಒಂದೇ ನನ್ನ ಸಾವು. ಹೀಗಾಗಿ ನನಗೆ ದಯಾಮರಣ ನೀಡಿದರೆ ಸಾಕು. ನಾನು ಆರಾಮಾಗಿ ಇರುತ್ತೇನೆ. ನನಗೆ ದಯಾಮರಣ ನೀಡಿ. ನಾನು ಒಳ್ಳೆಯ ಹುಡುಗಿ ಅಲ್ಲ. ಪ್ಲೀಸ್ ಪ್ಲೀಸ್ ಎಂದು ಅವರು ಕಣ್ಣೀರಿಟ್ಟಿದ್ದರು. ನಂತರ ಈ ವಿಡಿಯೋವನ್ನು ಜಯಶ್ರೀ ಡಿಲೀಟ್ ಮಾಡಿದ್ದರು.

    ಇಷ್ಟೆಲ್ಲಾ ಆದ ಬಳಿಕ ಸುದೀಪ್ ಅವರು ಜಯಶ್ರೀ ಜೊತೆ ಫೋನಿನಲ್ಲಿ ಮಾತನಾಡಿ ಧೈರ್ಯ ತುಂಬಿದ್ದರು. ಇದನ್ನು ನಟಿ ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದರು. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. ನಿಮ್ಮನ್ನೆಲ್ಲ ಆತಂಕಗೊಳ್ಳುವಂತೆ ಮಾಡಿದ್ದಕ್ಕೆ ಕ್ಷಮಿಸಿ. ನಾನು ಮತ್ತೆ ಸಹಜ ಸ್ಥಿತಿಗೆ ಬಂದಿದ್ದೇನೆ. ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು” ಎಂದು ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದರು.

    https://youtu.be/kzd0jz-E6nk