Tag: JD Vance

  • ಟ್ರಂಪ್‌ ಉಚ್ಚಾಟನೆಗೆ ಕರೆ ಕೊಟ್ಟ ಬೆನ್ನಲ್ಲೇ ಮಸ್ಕ್‌ ಕಂಪನಿಗಳಿಗೆ ಶಾಕ್‌!

    ಟ್ರಂಪ್‌ ಉಚ್ಚಾಟನೆಗೆ ಕರೆ ಕೊಟ್ಟ ಬೆನ್ನಲ್ಲೇ ಮಸ್ಕ್‌ ಕಂಪನಿಗಳಿಗೆ ಶಾಕ್‌!

    ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸ್ನೇಹಿತ ಎಲೋನ್‌ ಮಸ್ಕ್‌ (Elon Musk) ಅವರ ಜಗಳ ಮತ್ತಷ್ಟು ಹೆಚ್ಚಾಗಿದೆ. ಬೀದಿ ಜಗಳ ಹೆಚ್ಚಾಗುತ್ತಿದ್ದಂತೆ ಟೆಸ್ಲಾ (Tesla) ಷೇರುಗಳ ಮೌಲ್ಯ ಭಾರೀ ಇಳಿಕೆಯಾಗಿದೆ.

    ಮಸ್ಕ್‌ ಅವರು ಟ್ರಂಪ್‌ (Donald Trump) ಅವರನ್ನು ಉಚ್ಚಾಟಿಸಿ ಉಪಾಧ್ಯಕ್ಷ ಜೆಡಿ ವಾನ್ಸ್‌ (JD Vance) ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಹೇಳಿದ ಬೆನ್ನಲ್ಲೇ ಟ್ರಂಪ್‌ ಮಸ್ಕ್‌ ಕಂಪನಿ ಜೊತೆ ಮಾಡಿಕೊಂಡಿದ್ದ ಸರ್ಕಾರಿ ಒಪ್ಪಂದಗಳನ್ನು ಕಡಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಹೊರ ಬಂದ ಬೆನ್ನಲ್ಲೇ ಟ್ರಂಪ್‌ ವಿರುದ್ಧ ಮಸ್ಕ್‌ ಕೆಂಡಾಮಂಡಲ

    ಮಸ್ಕ್‌ ಅವರು ಟ್ರಂಪ್ ಅವರ ತೆರಿಗೆ ಕಡಿತ ಮತ್ತು ಖರ್ಚಿಗೆ ಸಂಬಂಧಿಸಿದ ಮಸೂದೆಯನ್ನು ಖಂಡಿಸಿ ಎಕ್ಸ್‌ನಲ್ಲಿ ನಿರಂತರ ಪೋಸ್ಟ್‌ ಮಾಡುತ್ತಿದ್ದರು. ಈ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದ್ದ ಟ್ರಂಪ್‌ ಈಗ ಮೊದಲ ಬಾರಿಗೆ ಪ್ರತಿಕ್ರಿಯಿಸಿ ಹಳಸಿದ ಸಂಬಂಧಕ್ಕೆ ವಿಷಾದ ವ್ಯಕ್ತಪಡಿದ್ದಾರೆ.

    ಈಗ ಟ್ರಂಪ್‌ ಅವರು ಮಸ್ಕ್ ಅವರ ಇಂಟರ್ನೆಟ್ ಕಂಪನಿ ಸ್ಟಾರ್‌ಲಿಂಕ್ ಮತ್ತು ರಾಕೆಟ್ ಕಂಪನಿ ಸ್ಪೇಸ್‌ಎಕ್ಸ್‌ನ ಆದಾಯಕ್ಕೆ ಕೊಕ್ಕೆ ಹಾಕುವುದಾಗಿ ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ನಮ್ಮ ಬಜೆಟ್‌ನಲ್ಲಿ ಹಣವನ್ನು ಉಳಿಸಲು ಸುಲಭವಾದ ಮಾರ್ಗವೆಂದರೆ ಮಸ್ಕ್‌ ಜೊತೆ ಮಾಡಿಕೊಂಡಿದ್ದ ಸರ್ಕಾರಿ ಸಬ್ಸಿಡಿಗಳು ಮತ್ತು ಒಪ್ಪಂದಗಳನ್ನು ರದ್ದುಗೊಳಿಸುತ್ತೇನೆ. ಹಿಂದಿನ ಅಧ್ಯಕ್ಷ ಜೋ ಬೈಡನ್‌ ಈ ನಿರ್ಧಾರ ಕೈಗೊಳ್ಳದೇ ಇರುವುದು ನನಗೆ ಆಶ್ಚರ್ಯವ ಉಂಟು ಮಾಡಿದೆ ಎಂದಿದ್ದಾರೆ.

    ಈ ಮಸೂದೆಯ ಬಗ್ಗೆ ಬಹುತೇಕ ಎಲ್ಲರಿಗೆ ಚೆನ್ನಾಗಿ ತಿಳಿದಿದೆ. ಈ ಮಸೂದೆ ಆರಂಭದಲ್ಲಿ ಅವರಿಗೆ ಯಾವುದೇ ಕಾಣಲಿಲ್ಲ. ಆದರೆ ಈಗ ಅವರಿಗೆ ಇದ್ದಕ್ಕಿದ್ದಂತೆ ಸಮಸ್ಯೆ ಕಾಣಿಸಿದೆ ಎಂದು ಟ್ರಂಪ್‌ ಟೀಕಿಸಿದರು.

    ಇಬ್ಬರ ಬೀದಿ ಜಗಳ ಹೆಚ್ಚಾಗುತ್ತಿದ್ದಂತೆ ಟೆಸ್ಲಾ ಷೇರು ಮೌಲ್ಯ ದಾಖಲೆಯ 14%ರಷ್ಟು ಕುಸಿತವಾಗಿದೆ. ಗುರುವಾರ ಒಂದೇ ದಿನ ಒಂದು ಷೇರಿನ ಮೌಲ್ಯ 47 ಡಾಲರ್‌ ಇಳಿದಿದೆ. ಕಳೆದ 5 ದಿನಗಳಲ್ಲಿ 70 ಡಾಲರ್‌ ಇಳಿಕೆಯಾಗಿದೆ.

  • ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

    ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

    ನವದೆಹಲಿ: ಪಾಕಿಸ್ತಾನದ (Pakistan) ದಾಳಿಗೆ ಭಾರತ ಏನು ಬೇಕಾದರೂ, ಹೇಗೆ ಬೇಕಾದರೂ ಪ್ರತಿಕ್ರಿಯಿಸುತ್ತೇವೆ. ಇದನ್ನು ಟ್ರಂಪ್ (Donald Trump) ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

    ಭಾರತ ಹಾಗೂ ಪಾಕ್ ನಡುವಿನ ಉದ್ವಿಗ್ನತೆ ಹೆಚ್ಚಾದ ಬಗ್ಗೆ ಗುಪ್ತಚರ ಮಾಹಿತಿ ಪಡೆದಿದ್ದ ವ್ಯಾನ್ಸ್, ಮೇ 9ರಂದು ಮೋದಿಯವರನ್ನು ಸಂಪರ್ಕಿಸಿ ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಅಮೆರಿಕದ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಈ ವೇಳೆ ಮೋದಿಯವರು ಪಾಕಿಸ್ತಾನದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

    ಭಾರತ ಮತ್ತು ಪಾಕಿಸ್ತಾನವನ್ನ ಸಮಾನವಾಗಿ ನೋಡಲು ಸಾಧ್ಯವೇ ಇಲ್ಲ. ಪಾಕ್ ಏನಾದ್ರೂ ದಾಳಿ ಮಾಡಿದ್ರೆ ವಿನಾಶಕಾರಿ ಪ್ರತಿಕ್ರಿಯೆ ಕೊಡ್ತೀವಿ. ಇದನ್ನು ಪಾಕಿಸ್ತಾನ ಅರ್ಥ ಮಾಡಿಕೊಳ್ಳಬೇಕು ಎಂದು ಮೋದಿ ಎಚ್ಚರಿಕೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

    ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಮೇಲೆ ಭಾರತ ದಾಳಿ ಮಾಡಲಿದೆ ಎಂದು ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಗೂ ಮುನ್ನವೇ ಅಮೆರಿಕಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಸ್ಪಷ್ಟಪಡಿಸಿದ್ದರು.

    ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಮೇ 1 ರಂದು ದೂರವಾಣಿ ಕರೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರಿಗೆ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಮೇಲೆ ಭಾರತ ದಾಳಿ ಮಾಡಲಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು, ಕೇಂದ್ರಕ್ಕೆ ನಮ್ಮ ಬೆಂಬಲ ಇದೆ: ಆರ್‌.ವಿ ದೇಶಪಾಂಡೆ

  • ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ

    ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ

    – ಪಿಒಕೆ ಬಿಟ್ಟು ತೆರಳಿದರೆ ಮಾತ್ರ ಪಾಕ್ ಜೊತೆ ಮಾತುಕತೆ
    – ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ

    ನವದೆಹಲಿ: ಪಾಕ್ (Pakistan) ದಾಳಿ ಮಾಡಿದರೆ ಭಾರತ ಪ್ರತಿಯಾಗಿ ಭೀಕರ ದಾಳಿ ಮಾಡುತ್ತದೆ ಎಂದು ಪ್ರಧಾನಿ ಮೋದಿ (Narendra Modi) ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ.

    ಪಾಕ್‌ನೊಂದಿಗಿನ ಸಂಘರ್ಷದ ಕುರಿತು ದೂರವಾಣಿ ಕರೆ ಮೂಲಕ ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆ ಪ್ರಧಾನಿ ಮೋದಿ ಚರ್ಚಿಸಿದರು. ಈ ವೇಳೆ ಪಾಕಿಸ್ತಾನ ದಾಳಿ ಮಾಡಿದರೆ ನಮ್ಮ ದಾಳಿ ಬಲವಾಗಿರುತ್ತದೆ. ಮತ್ತೆ ತಂಟೆಗೆ ಬಂದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: `ಆಪರೇಷನ್ ಸಿಂಧೂರ’ ಭಾರತದ ರಾಜಕೀಯ, ಸಾಮಾಜಿಕ, ಮಿಲಿಟರಿ ಶಕ್ತಿಯ ಬಲ – ರಾಜನಾಥ್ ಸಿಂಗ್

    ಆಪರೇಷನ್ ಸಿಂಧೂರ ಇನ್ನೂ ಪೂರ್ಣಗೊಂಡಿಲ್ಲ. ಪಾಕ್ ಗುಂಡು ಹೊಡೆದರೆ, ನಾವು ಫಿರಂಗಿಗಳ ಮೂಲಕ ಉತ್ತರಿಸಬೇಕು. ಉಗ್ರವಾದ ನಿಲ್ಲುವವರೆಗೂ ಸಿಂಧೂ ಒಪ್ಪಂದ ಸ್ಥಗಿತಗೊಳಿಸಲಾಗುವುದು. ನಾಳಿನ ಸಭೆಯಲ್ಲಿ ಪಿಒಕೆ ವಿಚಾರ ಮಾತ್ರ ಚರ್ಚೆ ಮಾಡಲಾಗುವುದು. ಕಾಶ್ಮೀರ ವಿಚಾರದಲ್ಲಿ ಅಮೆರಿಕ ಮಧ್ಯಸ್ಥಿಕೆ ಅಗತ್ಯವಿಲ್ಲ. ಕಾಶ್ಮೀರ ವಿವಾದ ಬಗೆಹರಿಸುವ ಶಕ್ತಿ ಭಾರತಕ್ಕಿದೆ. ಕಾಶ್ಮೀರ ವಿವಾದ ಜಾಗತಿಕಗೊಳಿಸಲು ಇಚ್ಛೆ ಪಡಲ್ಲ ಎಂದು ಮೋದಿ, ದೊಡ್ಡಣ್ಣ ಅಮೆರಿಕಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

    ಮ್ಯಾರಥಾನ್ ಸಭೆ ನಡೆಸಿದ ಮೋದಿ, ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ಸಿಡಿಎಸ್ ಮೇಜರ್ ಅನಿಲ್ ಚೌಹಾಣ್, ಮೂರೂ ಸೇನೆಗಳ ಮುಖ್ಯಸ್ಥರ ಜೊತೆ ಎರಡು ಗಂಟೆ ಚರ್ಚೆ ನಡೆಸಿದ್ದಾರೆ. ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಪಿಒಕೆ ಬಿಟ್ಟು ತೆರಳಿದರೆ ಮಾತ್ರ ಪಾಕ್ ಜೊತೆ ನಮ್ಮ ಮಾತುಕತೆ. ಇನ್ನೂ ನಾವು ಯಾರ ಮಧ್ಯಸ್ಥಿಕೆಯನ್ನೂ ಒಪ್ಪುವುದಿಲ್ಲ. ಕಾಶ್ಮೀರ ವಿಚಾರದಲ್ಲಿ ಅಮೆರಿಕ ಮಧ್ಯಸ್ಥಿಕೆ ನಾವು ಒಪ್ಪಲ್ಲ. ನಾಳೆ ಪಿಓಕೆ ವಿಚಾರವಾಗಿ ಮಾತುಕತೆ ನಡೆಸಿ ನಿರ್ಣಯ ಮಾಡಲಾಗುವುದು ಎಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: Explainer | ಬ್ರಹ್ಮೋಸ್‌ ನಿರ್ಮಾಣಕ್ಕೆ ಕೈ ಹಾಕಿದ್ದು ಯಾಕೆ? ಪಾಕ್‌ ರೇಡಾರ್‌ ಕಣ್ಣಿಗೆ ಬಿದ್ದಿಲ್ಲ ಯಾಕೆ?

  • ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್

    ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್

    – ಭಾರತ-ಪಾಕ್ ವಿಷಯದಲ್ಲಿ ಮಧ್ಯ ಪ್ರವೇಶಿಸಲ್ಲ, ನಮಗೆ ಸಂಬಂಧಿಸಿಲ್ಲ; ಯುಎಸ್‌ ಉಪಾಧ್ಯಕ್ಷ

    ವಾಷಿಂಗ್ಟನ್‌: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ವಿಷಯದಲ್ಲಿ ಅಮೆರಿಕ (America) ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. ಇದು ನಮಗೆ ಸಂಬಂಧಿಸಿದ ವಿಷಯವಲ್ಲ ಎಂದೂ ತಿಳಿಸಿದೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance), 2 ಪರಮಾಣು ಶಕ್ತಿ ಹೊಂದಿರುವ ರಾಷ್ಟ್ರಗಳ ನಡುವೆ ಸಂಘರ್ಷ ಹೆಚ್ಚಾಗುವ ಅಪಾಯದ ಬಗ್ಗೆ ಅಮೆರಿಕ ಚಿಂತಿಸಿದೆ. ಆದರೆ, ಅವರ ಕ್ರಮಗಳನ್ನು ನಾವು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಉಭಯ ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ವಾಷಿಂಗ್ಟನ್ ಪ್ರೋತ್ಸಾಹಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿ ಯತ್ನ – ಮಿಸೈಲ್‌, ಡ್ರೋನ್‌ ಹೊಡೆದುರುಳಿಸಿದ ಭಾರತ

    ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (Donald Trump) ಮತ್ತು ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರ ಮಾತನ್ನು ವ್ಯಾನ್ಸ್ ಪುನರುಚ್ಚರಿಸಿದ್ದಾರೆ. ʻನಾವು ಸಂಘರ್ಷವನ್ನು ತಡೆಯಲು ಆಶಿಸುತ್ತೇವೆ. ಆದರೆ, ಯಾವುದೇ ದೇಶವನ್ನು ನಿರಾಯುಧೀಕರಣ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿದ್ದಾರೆ. ಪ್ರಾದೇಶಿಕ ಸಂಘರ್ಷ ಅಥವಾ ಪರಮಾಣು ಯುದ್ಧದ ಸಾಧ್ಯತೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ. ಆದರೆ, ರಾಜತಾಂತ್ರಿಕ ಪ್ರಯತ್ನಗಳು ಮತ್ತು ಎರಡೂ ಕಡೆಯವರ ಸಂಯಮದಿಂದ ಶಾಂತಿ ನೆಲೆಸುವ ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ನ ಪ್ರಮುಖ ಎಫ್‌-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ

    ಕಾರ್ಯದರ್ಶಿ ರುಬಿಯೊ ಎರಡೂ ದೇಶಗಳ ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದಾರೆ. ತಕ್ಷಣವೇ ಉದ್ವಿಗ್ನತೆ ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ಹೋರಾಡಲು ಅಮೆರಿಕ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಉಭಯ ದೇಶಗಳು ಶಾಂತಿ ಕಾಪಾಡಿಕೊಳ್ಳಬೇಕು. ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

    ಅಮೆರಿಕ ಈ ವಿಷಯದಲ್ಲಿ ತಟಸ್ಥವಾಗಿರಲು ನಿರ್ಧರಿಸಿದೆ. ಆದರೆ, ಶಾಂತಿ ಸ್ಥಾಪನೆಗೆ ತನ್ನ ಬೆಂಬಲವನ್ನು ನೀಡುತ್ತದೆ. ಉಭಯ ದೇಶಗಳು ಸಂಯಮದಿಂದ ವರ್ತಿಸಬೇಕೆಂದು ಅಮೆರಿಕ ಕೋರಿದೆ. ಇದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಪ್ಪಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

    ಗುರುವಾರ ರಾತ್ರಿ ಜಮ್ಮುವಿನ ಮೇಲೆ ಪಾಕ್‌ ನೂರು ಕ್ಷಿಪಣಿಗಳಿಂದ ದಾಳಿ ಬಳಿಕ ಭಾರತ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಭಾರತದ ದಾಳಿಗೆ ಇಡೀ ಪಾಕ್‌ ಜೀವಭಯದಲ್ಲಿ ನಡುಗುತ್ತಿದೆ. ಇದನ್ನೂ ಓದಿ: ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ

  • ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭೇಟಿಯಾದ ಪ್ರಧಾನಿ ಮೋದಿ – ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

    ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭೇಟಿಯಾದ ಪ್ರಧಾನಿ ಮೋದಿ – ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

    ನವದೆಹಲಿ: ಭಾರತಕ್ಕೆ ನಾಲ್ಕು ದಿನ ಪ್ರವಾಸ ಕೈಗೊಂಡಿರುವ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್‌ (JD Vance) ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಸೋಮವಾರ ಭೇಟಿಯಾದರು.

    ಅಮೆರಿಕ-ಚೀನಾ ವ್ಯಾಪಾರ ಯುದ್ಧದ ಬಗ್ಗೆ ಜಗತ್ತು ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಉಭಯ ನಾಯಕರು ಭೇಟಿಯಾಗಿ ಸಭೆ ನಡೆಸಿದರು. ಭಾರತ ಮತ್ತು ಅಮೆರಿಕ ಎರಡೂ ರಾಷ್ಟ್ರಗಳಿಗೆ ಪ್ರಯೋಜನಕಾರಿಯಾದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವ ಮಾತುಕತೆಗಳು ನಡೆದವು.

    ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತಾದ ಮಾತುಕತೆಗಳಲ್ಲಿ ಆಗಿರುವ ಪ್ರಗತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಸ್ವಾಗತಿಸಿದ್ದಾರೆ ಎಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

    ಟ್ರಂಪ್ ಆಡಳಿತವು ಭಾರತದೊಂದಿಗಿನ ತನ್ನ ಸಂಬಂಧವನ್ನು ಪ್ರಮುಖ ಆದ್ಯತೆಯಾಗಿ ಇರಿಸಿದೆ. ವಿಶ್ವದ ಅತಿದೊಡ್ಡ ಸರಕು ಉತ್ಪಾದಕ ರಾಷ್ಟ್ರವಾದ ಚೀನಾದೊಂದಿಗಿನ ವ್ಯಾಪಾರ ಯುದ್ಧದ ಹೊಡೆತವನ್ನು ಸ್ವಲ್ಪಮಟ್ಟಿಗೆ ತಗ್ಗಿಸಬಹುದಾದ ವ್ಯಾಪಾರ ಒಪ್ಪಂದವನ್ನು ಜಾರಿಗೆ ತರಲು ಉತ್ಸುಕವಾಗಿದೆ ಎಂದು ಶ್ವೇತಭವನ ಹೇಳಿದೆ. ಶರತ್ಕಾಲದ ವೇಳೆಗೆ ವ್ಯಾಪಾರ ಒಪ್ಪಂದವನ್ನು ನಿರೀಕ್ಷಿಸಲಾಗಿತ್ತು. ಆದರೆ ಜುಲೈ ಅಂತ್ಯದ ವೇಳೆಗೆ ಪೂರ್ಣಗೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ಭಾರತದ ನಾಯಕರು ಹೇಳಿದ್ದಾರೆ.

  • ಅಮೆರಿಕ ಸುಂಕ ಸಮರದ ನಡುವೆ ಕುಟುಂಬ ಸಮೇತ ಭಾರತಕ್ಕೆ ಬಂದಿಳಿದ ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಅಮೆರಿಕ ಸುಂಕ ಸಮರದ ನಡುವೆ ಕುಟುಂಬ ಸಮೇತ ಭಾರತಕ್ಕೆ ಬಂದಿಳಿದ ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ನವದೆಹಲಿ: ಯುಎಸ್ (US) ಸುಂಕ ಸಮರದ ನಡುವೆ ಅಮೆರಿಕದ ಉಪಾಧ್ಯಕ್ಷ (Americe Vice Preisident) ಜೆ.ಡಿ ವ್ಯಾನ್ಸ್ (JD Vance) ಕುಟುಂಬ ಸಮೇತರಾಗಿ ಇಂದು ಭಾರತಕ್ಕೆ ಬಂದಿಳಿದಿದ್ದಾರೆ.

    ಅಮೆರಿಕದ ಅಧ್ಯಕ್ಷರಾಗಿ ಟ್ರಂಪ್ (Donald Trump) ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಜೆ.ಡಿ ವ್ಯಾನ್ಸ್, ಪತ್ನಿ ಉಷಾ ವ್ಯಾನ್ಸ್ ಹಾಗೂ ಮೂವರು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಿರಾಬೆಲ್ ಇಂದು ಬೆಳಗ್ಗೆ 10 ಗಂಟೆಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ (Palam Airport) ಬಂದಿಳಿದಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಭಾರತ (India) ಪ್ರವಾಸ ಮಾಡಲಿದ್ದಾರೆ.ಇದನ್ನೂ ಓದಿ: ಈಗಾಗಲೇ ಕಾರ್ಯಾಂಗವನ್ನು ಅತಿಕ್ರಮಿಸಿರುವ ಆರೋಪ ನಮ್ಮ ಮೇಲಿದೆ: ಸುಪ್ರೀಂ ಕೋರ್ಟ್‌

    ಪಾಲಂ ಏರ್‌ಪೋರ್ಟ್‌ನಲ್ಲಿ ಕೇಂದ್ರದ ಹಿರಿಯ ಸಚಿವರು ವ್ಯಾನ್ಸ್ ಕುಟುಂಬವನ್ನು ರಾಜಸ್ಥಾನಿ ಶೈಲಿಯಲ್ಲಿ ಸ್ವಾಗತಿಸಿದರು. ಬಳಿಕ ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ (Swaminarayan Akshardham) ಭೇಟಿ ನೀಡಿದ್ದು, ವ್ಯಾನ್ಸ್ ಕುಟುಂಬವು ಹಾರ ಹಾಕಿಕೊಂಡು ಪೋಸ್ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದೆಹಲಿ ನಂತರ ಜೈಪುರ ಹಾಗೂ ಆಗ್ರಾಕ್ಕೆ ವ್ಯಾನ್ಸ್ ಕುಟುಂಬ ಭೇಟಿ ನೀಡಲಿದೆ.

    ಇಂದು ಸಂಜೆ 6:30ರ ಸುಮಾರಿಗೆ ಜೆಡಿ ವ್ಯಾನ್ಸ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾರತ-ಯುಎಸ್ ದ್ವಿಪಕ್ಷೀಯ ಮಾತುಕತೆ ನಡೆಯಲಿದ್ದು, ವ್ಯಾಪಾರ ಒಪ್ಪಂದಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಜೊತೆಗೆ ಇದೇ ವೇಳೆ ಭಾರತದ ಮೇಲಿನ ಸುಂಕದ ಬಗ್ಗೆಯೂ ಚರ್ಚೆ ನಡೆಯಲಿದೆ. ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ (PM narendra Modi) ಅವರು ವ್ಯಾನ್ಸ್ ಕುಟುಂಬ ಮತ್ತು ಅವರ ಜೊತೆಗಿರುವ ಅಮೆರಿಕದ ಅಧಿಕಾರಿಗಳಿಗೆ ವಿಶೇಷ ಔತಣಕೂಟ ಆಯೋಜಿಸಿದ್ದಾರೆ. ಇದಾದ ನಂತರ ವ್ಯಾನ್ಸ್ ಕುಟುಂಬ ಜೈಪುರಕ್ಕೆ ತೆರಳಲಿದ್ದು, ಐಟಿಸಿ ಮೌರ್ಯ ಶೆರಾಟನ್ ಹೋಟೆಲ್‌ನಲ್ಲಿ (ITC Maurya Hotel)  ವಾಸ್ತವ್ಯ ಹೂಡಲಿದ್ದಾರೆ.

    ನಾಳೆ ಕೈಗಾರಿಕಾ ನಾಯಕರು, ಶಿಕ್ಷಣ ತಜ್ಞರು, ರಾಜತಾಂತ್ರಿಕರು, ವಿದೇಶಾಂಗ ನೀತಿ ತಜ್ಞರು ಮತ್ತು ಭಾರತೀಯ ಸರ್ಕಾರಿ ಅಧಿಕಾರಿಗಳೊಂದಿಗೆ ವ್ಯಾನ್ಸ್ ಸಭೆ ನಡೆಸಲಿದ್ದಾರೆ. ಬಳಿಕ ಆಗ್ರಾಕ್ಕೆ (Agra) ಭೇಟಿ ನೀಡಿ, ವಿಶ್ವ ಪ್ರಸಿದ್ಧ ತಾಜ್‌ಮಹಲ್ (Taj Mahal) , ಶಿಲ್ಪಗ್ರಾಮ್ ಹಾಗೂ ವಿವಿಧ ಭಾರತೀಯ ಕಲಾಕೃತಿಗಳನ್ನು ಪ್ರದರ್ಶಿಸಿರುವ ಎಂಪೋರಿಯಮ್ ವೀಕ್ಷಣೆ ಮಾಡಲಿದ್ದಾರೆ. ಬಳಿಕ ಜೈಪುರಕ್ಕೆ ತೆರಳಲಿದ್ದು, ಏ.24ರಂದು ಅಲ್ಲಿಂದ ನೇರವಾಗಿ ಅಮೆರಿಕಕ್ಕೆ ತೆರಳಲಿದ್ದಾರೆ.ಇದನ್ನೂ ಓದಿ: ಈಗಾಗಲೇ ಕಾರ್ಯಾಂಗವನ್ನು ಅತಿಕ್ರಮಿಸಿರುವ ಆರೋಪ ನಮ್ಮ ಮೇಲಿದೆ: ಸುಪ್ರೀಂ ಕೋರ್ಟ್‌

  • ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಾಳೆ ಭಾರತಕ್ಕೆ ಭೇಟಿ – ಪ್ರಧಾನಿ ಮೋದಿಯಿಂದ ವಿಶೇಷ ಔತಣಕ್ಕೆ ಸಿದ್ಧತೆ

    ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಾಳೆ ಭಾರತಕ್ಕೆ ಭೇಟಿ – ಪ್ರಧಾನಿ ಮೋದಿಯಿಂದ ವಿಶೇಷ ಔತಣಕ್ಕೆ ಸಿದ್ಧತೆ

    – ನಾಲ್ಕು ದಿನಗಳ ಭಾರತ ಪ್ರವಾಸ, ದ್ವೀಪಕ್ಷಿಯ ಮಾತುಕತೆ

    ನವದೆಹಲಿ: ಅಮೆರಿಕದ (America) ಸುಂಕ ಸಮರದ ನಡುವೆ ಯುಎಸ್‌ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (US Vice President JD Vance) ಮತ್ತು ಅವರ ಭಾರತೀಯ ಮೂಲದ ಪತ್ನಿ ಉಷಾ ವ್ಯಾನ್ಸ್ ಏಪ್ರಿಲ್​ 21ರಿಂದ (ನಾಳೆಯಿಂದ) ನಾಲ್ಕು ದಿನಗಳ ಭಾರತದ ಪ್ರವಾಸ ಕೈಗೊಂಡಿದ್ದಾರೆ. ಇದು ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾರತದ ಮೊದಲ ಭೇಟಿಯಾಗಿದೆ.

    ವ್ಯಾನ್ಸ್ ಅವರು ತಮ್ಮ ಭಾರತೀಯ ಮೂಲದ ಪತ್ನಿ ಉಷಾ (Usha) ಮತ್ತು ಮೂವರು ಮಕ್ಕಳಾದ ಇವಾನ್, ವಿವೇಕ್ ಮತ್ತು ಮಿರಾಬೆಲ್ ಸೋಮವಾರ ಭಾರತಕ್ಕೆ ಬರಲಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ಬಂದಿಳಿಯಲಿದ್ದು, ಕೇಂದ್ರದ ಹಿರಿಯ ಸಚಿವರು ರಾಜಸ್ಥಾನಿ ಶೈಲಿಯಲ್ಲಿ ವ್ಯಾನ್ಸ್‌ ಕುಟುಂಬವನ್ನು ಸ್ವಾಗತಿಸಲಿದ್ದಾರೆ. ಬಳಿಕ ದೆಹಲಿ ಜೊತೆಗೆ ಜೈಪುರ ಮತ್ತು ಆಗ್ರಾಕ್ಕೆ ವ್ಯಾನ್ಸ್‌ ಪ್ರಯಾಣಿಸಲಿದ್ದಾರೆ. ಈ ಸಂದರ್ಭದಲ್ಲಿ ಪೆಂಟಗನ್‌ನ ಐವರು ಹಿರಿಯ ಅಧಿಕಾರಿಗಳು ವ್ಯಾನ್ಸ್‌ ಜೊತೆಗಿರಲಿದ್ದಾರೆ. ಇದನ್ನೂ ಓದಿ: ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

    ಏನೇನು ಕಾರ್ಯಕ್ರಮ?
    ದೆಹಲಿಗೆ ಬಂದ ಕೆಲ ಗಂಟೆಗಳ ಬಳಿಕ ವ್ಯಾನ್ಸ್ ಮತ್ತು ಅವರ ಕುಟುಂಬ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಲಿದೆ. ಜೊತೆಗೆ ಸಾಂಪ್ರದಾಯಿಕ ಭಾರತೀಯ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ಶಾಪಿಂಗ್ ಕಾಂಪ್ಲೆಕ್ಸ್‌ ಭೇಟಿ ನೀಡಲಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ಸೋಮವಾರ ಸಂಜೆ 6:30ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಭಾರತ-ಯುಎಸ್‌ ದ್ವಿಪಕ್ಷೀಯ ಮಾತುಕತೆ, ವ್ಯಾಪಾರ ಒಪ್ಪಂದಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಭಾರತದ ಮೇಲಿನ ಸುಂಕದ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಉಪಸ್ಥಿತರಿರಲಿದ್ದಾರೆ.

    ಅದ್ಧೂರಿ ಭೋಜನ ಕೂಟ:
    ದ್ವಿಪಕ್ಷೀಯ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವ್ಯಾನ್ಸ್‌ ಕುಟುಂಬ ಮತ್ತು ಅವರ ಜೊತೆಗಿರುವ ಅಮೆರಿಕದ ಅಧಿಕಾರಿಗಳುಗೆ ವಿಶೇಷ ಔತಣಕೂಟ ಆಯೋಜಿಸಲಿದ್ದಾರೆ. ಔತಣ ಕೂಟದ ಬಳಿಕ ವ್ಯಾನ್ಸ್‌ ಜೈಪುರಕ್ಕೆ ತೆರಳಲಿದ್ದು, ಐಟಿಸಿ ಮೌರ್ಯ ಶೆರಾಟನ್ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಯುಎಸ್-ಚೀನಾ ಟಾರಿಫ್ ವಾರ್ ಮತ್ತಷ್ಟು ಜೋರು – ಚೀನಾ ಉತ್ಪನ್ನಗಳಿಗೆ 245% ಸುಂಕ ವಿಧಿಸಿದ ಅಮೆರಿಕ

    ಏ.22ರಂದು ವ್ಯಾನ್ಸ್​ ಕೈಗಾರಿಕಾ ನಾಯಕರು, ಶಿಕ್ಷಣ ತಜ್ಞರು, ರಾಜತಾಂತ್ರಿಕರು, ವಿದೇಶಾಂಗ ನೀತಿ ತಜ್ಞರು ಮತ್ತು ಭಾರತೀಯ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಜೈಪುರ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ನಡೆದ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ಇಲ್ಲಿನ ಐತಿಹಾಸಿಕ ತಾಣಗಳಿಗೆ ಭೇಟಿ ನೀಡಲಿದ್ದಾರೆ.

    ಏ.23ರಂದು ಆಗ್ರಾಕ್ಕೆ ಭೇಟಿ ನೀಡಿ, ವಿಶ್ವಪ್ರಸಿದ್ಧ ತಾಜ್‌ ಮಹಲ್‌, ಶಿಲ್ಪಗ್ರಾಮ್‌ ಹಾಗೂ ವಿವಿಧ ಭಾರತೀಯ ಕಲಾಕೃತಿಗಳನ್ನು ಪ್ರದರ್ಶಿರುವ ಎಂಪೋರಿಯಮ್‌ ವೀಕ್ಷಣೆ ಮಾಡಲಿದ್ದಾರೆ. ಏಪ್ರಿಲ್‌ 24ರಂದು ಜೈಪುರದಿಂದ ನೇರವಾಗಿ ಅಮೆರಿಕಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: ವಾಹನ ಕಂಪನಿಗಳಿಗೆ ತಾತ್ಕಾಲಿಕ ವಿನಾಯತಿ – ಟ್ರಂಪ್‌ ಯೂಟರ್ನ್‌

  • ಅಮೆರಿಕ ಉಪಾಧ್ಯಕ್ಷನಾಗಿ ಜೆಡಿ ವ್ಯಾನ್ಸ್ ಆಯ್ಕೆ – ಆಂಧ್ರದ ವಡ್ಲೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಅಮೆರಿಕ ಉಪಾಧ್ಯಕ್ಷನಾಗಿ ಜೆಡಿ ವ್ಯಾನ್ಸ್ ಆಯ್ಕೆ – ಆಂಧ್ರದ ವಡ್ಲೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

    – ಭಾರತೀಯ ಮೂಲದ ಉಷಾ ಅವರ ಪತಿ ಜೆಡಿ ವ್ಯಾನ್ಸ್

    ಹೈದರಾಬಾದ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಡೊನಾಲ್ಡ್ ಟ್ರಂಪ್ (Donald Trump) ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ (JD Vance) ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಹಿನ್ನೆಲೆ ಆಂಧ್ರಪ್ರದೇಶದ (Andhra Pradesh) ವಡ್ಲೂರಿನಲ್ಲಿ (Vadluru) ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

    ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, 2ನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಜೊತೆಗೆ ಜೆಡಿ ವ್ಯಾನ್ಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಇದನ್ನೂ ಓದಿ: ಸಿದ್ದರಾಮಯ್ಯ ಪುಸ್ತಕ ತೆರೆದ್ರೆ ಬರೀ ಕಪ್ಪು ಕಾಣಿಸ್ತದೆ, ಅಧಿಕಾರಿಗಳು ಕಾಂಗ್ರೆಸ್ ಪರ ಕೆಲಸ: ಅಶೋಕ್

    ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆಡಿ ವ್ಯಾನ್ಸ್ ಆಂಧ್ರಪ್ರದೇಶದ ವಡ್ಲೂರ ಗ್ರಾಮದ ಅಳಿಯ. ಹೌದು ವಡ್ಲೂರಿನ ಉಷಾ ಅವರನ್ನು ಜೆಡಿ ವ್ಯಾನ್ಸ್ ವಿವಾಹವಾಗಿದ್ದಾರೆ.

    ಉಷಾ ಹಿನ್ನೆಲೆ ಏನು?
    ಆಂಧ್ರಪ್ರದೇಶದ ವಡ್ಲೂರಿನಲ್ಲಿದ್ದ ಉಷಾ ಪೋಷಕರು 1986ರಲ್ಲಿ ಆಂಧ್ರಪ್ರದೇಶದಿಂದ ಅಮೆರಿಕಕ್ಕೆ ತೆರಳಿದರು. ಆಗ ಆ ದಂಪತಿಗೆ ಜನಿಸಿದ ಮಗು ಉಷಾ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ತಮ್ಮ ಬಾಲ್ಯವನ್ನು ಕಳೆದರು.

    ಯೇಲ್ ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಪದವಿಯನ್ನು ಪಡೆದು, ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ (University of Cambridge) ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಯೇಲ್ ಜರ್ನಲ್ ಆಫ್ ಲಾ, ಟೆಕ್ನಾಲಜಿ ಮತ್ತು ದಿ ಯೇಲ್ ಲಾ ಜರ್ನಲ್‌ನಲ್ಲಿ ವ್ಯವಸ್ಥಾಪಕ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ಯೇಲ್ ಲಾ ಸ್ಕೂಲ್‌ನಲ್ಲಿ ಉಷಾ ಹಾಗೂ ಜೆಡಿ ವ್ಯಾನ್ಸ್ ಮೊದಲ ಬಾರಿಗೆ ಭೇಟಿಯಾದರು. ಇದಾದ ಬಳಿಕ 2014ರಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದು, ಈಗ ಮೂರು ಮಕ್ಕಳನ್ನು ಹೊಂದಿದ್ದಾರೆ. ಜೆಡಿ ವ್ಯಾನ್ಸ್ ಅವರ ರಾಜಕೀಯ ವೃತ್ತಿಜೀವನದುದ್ದಕ್ಕೂ ಉಷಾ ಬೆಂಬಲ ನೀಡಿದ್ದಾರೆ. ಭಾರತೀಯ ಮೂಲದ ಮಹಿಳೆಯಾಗಿರುವ ಉಷಾ ಅವರ ಪತಿ ಇದೀಗ ಅಮೆರಿಕದ ಉಪಾಧ್ಯಕ್ಷರಾಗಿದ್ದು, ಆಂಧ್ರಪ್ರದೇಶದ ವಡ್ಲೂರಿನಲ್ಲಿ ಸಂಭ್ರಮ ಮನೆ ಮಾಡಿದೆ.ಇದನ್ನೂ ಓದಿ: ತೆಲುಗಿಗೆ ರಿಮೇಕ್ ಆಗಲಿದೆ ‘ಆವೇಶಂ’ ಸಿನಿಮಾ- ಹೀರೋ ಯಾರು?