Tag: jds

  • ಡಿಕೆಶಿ, JDS ಟ್ರಂಕ್ ವಾರ್ – ಹೆಚ್‌ಡಿಕೆ ಸಾಧನೆ ಪಟ್ಟಿ ಬಿಡುಗಡೆ ಮಾಡಿ ಟಾಂಗ್

    ಡಿಕೆಶಿ, JDS ಟ್ರಂಕ್ ವಾರ್ – ಹೆಚ್‌ಡಿಕೆ ಸಾಧನೆ ಪಟ್ಟಿ ಬಿಡುಗಡೆ ಮಾಡಿ ಟಾಂಗ್

    ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಮತ್ತು ಜೆಡಿಎಸ್ (JDS) ನಡುವೆ ಖಾಲಿ ಟ್ರಂಕ್ ವಾರ್ ಜೋರಾಗಿ ನಡೆಯುತ್ತಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಖಾಲಿ ಟ್ರಂಕ್ ಎಂದಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಜೆಡಿಎಸ್ ತಿರುಗೇಟು ಕೊಟ್ಟಿದೆ.

    ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿರೋ ಜೆಡಿಎಸ್, ಹೆಚ್‌ಡಿಕೆ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ ಮಾಡಿ ಕುಮಾರಸ್ವಾಮಿ (HD Kumaraswamy) ಟ್ರಂಕ್‌ನಲ್ಲಿ ಅಭಿವೃದ್ಧಿ ಇದೆ ಎಂದು ಟಾಂಗ್ ಕೊಟ್ಟಿದೆ. ಡಿಕೆಶಿ ಆಸ್ತಿ ಗಳಿಕೆಯ ಪಟ್ಟಿ ಬಿಡುಗಡೆ ಮಾಡಿ ಇದು ಡಿ.ಕೆ ಶಿವಕುಮಾರ್ ಟ್ರಂಕ್ ಎಂದು ಲೇವಡಿ ಮಾಡಿದೆ. ಇದನ್ನೂ ಓದಿ: ವಿದ್ಯಾವಂತರು ʻಎ ಖಾತಾ’ ಪರಿವರ್ತನೆ ಒಪ್ಪುತ್ತಿರೋದಕ್ಕೆ ಧನ್ಯವಾದ; ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಕೆಶಿ

    ಎಕ್ಸ್‌ನಲ್ಲೇನಿದೆ?
    ಹೌದಪ್ಪ ಹೌದು. ಡಿಸಿಎಂ ಡಿಕೆಶಿವಕುಮಾರ್ ಸಾಹೇಬರೇ, ಹೆಚ್.ಡಿ.ಕುಮಾರಸ್ವಾಮಿ ಅವರು ಖಾಲಿ ಟ್ರಂಕ್ ಅನ್ನೋದು ದಿಟವೇ. ಅವರದ್ದು ಖಾಲಿ ಕೈ, ತುಂಬಿದ ಹೃದಯ. ಆದರೆ ನಿಮ್ಮದು ಹಾಗಲ್ಲವಲ್ಲ, ಹೃದಯದ ತುಂಬಾ ಕಾರ್ಕೋಟಕ ವಿಷ ಎಂದು ಆಕ್ರೋಶ ಹೊರಹಾಕಿದೆ.

    ಕಂಡೋರ ಹಣ ಮತ್ತು ಬಡವರು, ದೀನದಲಿತರು, ದುರ್ಬಲರ ಭೂಮಿಯನ್ನು ಹೆದರಿಸಿ ಬೆದರಿಸಿ ಕಿತ್ತುಕೊಂಡು ತುಂಬಿಸಿಕೊಂಡ ಪಾಪದ ಟ್ರಂಕು. ಈ ಸತ್ಯ ನಿಮಗಷ್ಟೇ ಅಲ್ಲ, ಇಡೀ ನಾಡಿಗೆ, ದೇಶಕ್ಕೇ ತಿಳಿದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಮಿಸ್ಟರ್ ಲೂಟೇಶಿ ಎಂದು ಕಿಡಿಕಾರಿದೆ.

    ಜೆಡಿಎಸ್ ಬಿಡುಗಡೆ ಮಾಡಿದ ಟ್ರಂಕ್ ಪಟ್ಟಿ
    ಕುಮಾರಸ್ವಾಮಿ ಟ್ರಂಕ್‌ನಲ್ಲಿರುವುದೇನು?
    – 2 ಬಾರಿ ರೈತರ ಸಾಲಮನ್ನ.
    – ಸಾರಾಯಿ ಮತ್ತು ಲಾಟರಿ ನಿಷೇಧ.
    – ಗ್ರಾಮ ವಾಸ್ತವ್ಯ ಮೂಲಕ ಹಳ್ಳಿ-ಹಳ್ಳಿಗಳಿಗೆ ಸರ್ಕಾರ.
    – ಜನತಾ ದರ್ಶನ
    – ಸುವರ್ಣ ಗ್ರಾಮ ಯೋಜನೆ.
    – ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಚನೆ.
    – ನಮ್ಮ ಮೆಟ್ರೋಗೆ ಅಡಿಗಲ್ಲು.
    – ಧಾರವಾಡ ಹೈಕೋರ್ಟ್ ಪೀಠ ಸ್ಥಾಪನೆ.
    – ಬೀದಿಬದಿಯ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆ.
    – ಸುವರ್ಣ ಸೌಧ ನಿರ್ಮಾಣ.
    – ರಾಜ್ಯದಲ್ಲಿ 760 ಪ್ರಾಥಮಿಕ ಶಾಲೆಗಳು, 1,000 ಪ್ರೌಢಶಾಲೆಗಳು, 260 ಪದವಿ ಕಾಲೇಜುಗಳು, 500 ಪದವಿ ಪೂರ್ವ ಕಾಲೇಜುಗಳು.
    – 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, 6 ಮೆಡಿಕಲ್ ಕಾಲೇಜುಗಳ ಸ್ಥಾಪನೆ.
    – ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್ ವಿತರಣೆ.
    – ಭಾಗ್ಯಲಕ್ಷ್ಮಿ ಯೋಜನೆ.
    – ಪ್ರೌಢಶಾಲೆಗಳಲ್ಲಿಯೂ ಬಿಸಿಯೂಟ.
    – 1,000 ಕರ್ನಾಟಕ ಪಬ್ಲಿಕ್ ಶಾಲೆಗಳ ಘೋಷಣೆ.
    – ಸುವರ್ಣ ಗ್ರಾಮ ಯೋಜನೆ.
    – ರೈತ ಸಿರಿ ಯೋಜನ.
    – ಫೆರಿಪೆರಲ್ ರಿಂಗ್ ರೋಡ್
    – ಕಾಂಪೀಟ್ ವಿಥ್ ಚೀನಾ
    – ಸಂಧ್ಯಾ ಸುರಕ್ಷಾ ಯೋಜನೆ.
    – ರೋಶಿಣಿ ಯೋಜನೆ
    – ಮಾತೃಶ್ರೀ ಯೋಜನೆ
    – ಕಾವೇರಿ 4ನೇ ಹಂತ, ಹೊಸ ಪ್ರದೇಶಗಳಿಗೆ ಕಾವೇರಿ ನೀರು.
    – ಕೊಡಗಿನ ನೆರೆ ಸಂತ್ರಸ್ತರಿಗೆ ತಲ 10ಲಕ್ಷವೆಚ್ಚದಲ್ಲಿ ಶಾಶ್ವತ ಮನೆ

    ಡಿ.ಕೆ ಶಿವಕುಮಾರ್ ಟ್ರಂಕ್‌ನಲ್ಲಿರುವುದು?
    – ಬಡವರು, ದಲಿತರ ಭೂಮಿ ಕಬಳಿಸಿ ತುಂಬಿಸಿಕೊಂಡ ಸಾವಿರಾರು ಕೋಟಿ ಮೌಲ್ಯದ ಅಕ್ರಮ ಆಸ್ತಿಗಳ ಟ್ರಂಕು ಎಂದು ಹೇಳಿ ಚುನಾವಣಾ ಆಯೋಗಕ್ಕೆ ನೀಡಿದ ಆಸ್ತಿ ಲೆಕ್ಕವನ್ನು ಪ್ರಕಟಿಸಿ ತಿರುಗೇಟು ನೀಡಿದೆ.
    – 2004 – 8 ಕೋಟಿ ರೂ.
    – 2008 – 75 ಕೋಟಿ ರೂ.
    – 2013 – 215 ಕೋಟಿ ರೂ.
    – 2018 – 840 ಕೋಟಿ ರೂ.
    – 2023 – 1414 ಕೋಟಿ ರೂ.

  • ಜೆಡಿಎಸ್‌ಗೆ ‘ಗ್ರೇಟರ್’ ಶಕ್ತಿ – ಹೆಚ್‌ಡಿಕೆ ನೇತೃತ್ವದಲ್ಲಿ 5 ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಮಿತಿ ರಚನೆ

    ಜೆಡಿಎಸ್‌ಗೆ ‘ಗ್ರೇಟರ್’ ಶಕ್ತಿ – ಹೆಚ್‌ಡಿಕೆ ನೇತೃತ್ವದಲ್ಲಿ 5 ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಮಿತಿ ರಚನೆ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ ಐದು ನಗರ ಪಾಲಿಕೆಗಳ ಮುಂಬರುವ ಚುನಾವಣೆಗಳ ಸಿದ್ಧತೆಗಾಗಿ ಜೆಡಿಎಸ್ (JDS) ಪಕ್ಷವು ಉನ್ನತ ಮಟ್ಟದ ಉಸ್ತುವಾರಿ ಸಮಿತಿಯನ್ನು ರಚಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಶನಿವಾರ ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ.

    ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ ಅವರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಹಿರಿಯ ಮುಖಂಡರನ್ನು ಈ ಸಮಿತಿಗೆ ನೇಮಿಸಲಾಗಿದೆ. ಫೆಬ್ರವರಿ-ಮಾರ್ಚ್ 2026ರಲ್ಲಿ ಈ ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವ ಸಂಭವವಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಒತ್ತು ನೀಡಲು ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

    ಉಸ್ತುವಾರಿ ಸಮಿತಿಯ ಪ್ರಮುಖ ಸದಸ್ಯರು:
    * ಎ. ಮಂಜು, ಶಾಸಕರು, ಅರಕಲಗೂಡು ವಿಧಾನಸಭಾ ಕ್ಷೇತ್ರ
    * ಎಂ.ಟಿ. ಕೃಷ್ಣಪ್ಪ, ಶಾಸಕರು, ತುರುವೇಕೆರೆ ವಿಧಾನಸಭಾ ಕ್ಷೇತ್ರ
    * ಟಿ.ಎ. ಶರವಣ, ಶಾಸಕರು, ವಿಧಾನ ಪರಿಷತ್ತು, ಬೆಂಗಳೂರು
    * ಟಿ.ಎನ್. ಜವರಾಯಿಗೌಡ, ಶಾಸಕರು, ವಿಧಾನಪರಿಷತ್ತು, ಬೆಂಗಳೂರು
    * ನಿಖಿಲ್ ಕುಮಾರಸ್ವಾಮಿ, ರಾಜ್ಯಾಧ್ಯಕ್ಷರು, ಯುವಜನತಾದಳ
    * ಎಂ. ಕೃಷ್ಣಾರೆಡ್ಡಿ, ಮಾಜಿ ಉಪಸಭಾಧ್ಯಕ್ಷರು, ವಿಧಾನಸಭೆ
    * ಸುರೇಶ್‌ಗೌಡ, ಮಾಜಿ ಶಾಸಕರು, ನಾಗಮಂಗಲ ವಿಧಾನಸಭಾ ಕ್ಷೇತ್ರ
    * ಎ. ಮಂಜುನಾಥ್, ಮಾಜಿ ಶಾಸಕರು, ಮಾಗಡಿ ವಿಧಾನಸಭಾ ಕ್ಷೇತ್ರ
    * ಕೆ.ಎ. ತಿಪ್ಪೇಸ್ವಾಮಿ, ಮಾಜಿ ಶಾಸಕರು, ಬೆಂಗಳೂರು

    ಉಸ್ತುವಾರಿ ಸಮಿತಿಯ ಪ್ರಮುಖ ಐದು ಕಾರ್ಯಗಳು:
    ವಾರ್ಡ್ವಾರು ಉಸ್ತುವಾರಿ ಸಮಿತಿಗಳ ರಚನೆ:
    ಹೊಸದಾಗಿ ರಚಿತವಾಗಿರುವ ಐದು ನಗರ ಪಾಲಿಕೆಗಳಲ್ಲಿ (ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ) ವಾರ್ಡ್ವಾರು ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಪಕ್ಷದ ಮುಖಂಡರು, ಮಾಜಿ ನಗರ ಪಾಲಿಕೆ ಸದಸ್ಯರು ಮತ್ತು ಹಿಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಒಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸುವುದು.

    ಸದಸ್ಯತ್ವ ನೋಂದಣಿ ಅಭಿಯಾನ:
    ಪಾಲಿಕೆವಾರು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿ, ವಾರ್ಡ್ವಾರು ಮತ್ತು ವಿಧಾನಸಭಾ ಕ್ಷೇತ್ರವಾರು ಕಾರ್ಯಕರ್ತರು ಹಾಗೂ ಮುಖಂಡರ ಸಭೆಗಳನ್ನು ಆಯೋಜಿಸುವುದು.

    ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ:
    ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ, ವಾರ್ಡ್ವಾರು ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು.

    ಎನ್.ಡಿ.ಎ. ಮೈತ್ರಿಕೂಟದೊಂದಿಗೆ ಸಮನ್ವಯ:
    ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಪಕ್ಷಗಳೊಂದಿಗೆ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ, ರಾಜ್ಯ ಕಚೇರಿಗೆ ಸಲ್ಲಿಸುವುದು.

    ಕಾರ್ಯಗಳ ವಿಮರ್ಶೆ:
    ರಚಿಸಲಾದ ಉಪ-ಸಮಿತಿಗಳ ಕಾರ್ಯಗಳನ್ನು ಕಾಲಕಾಲಕ್ಕೆ ವಿಮರ್ಶಿಸುವುದು.

    ಅಕ್ಟೋಬರ್ 16ರಂದು ನಡೆದಿದ್ದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್‌ಡಿಕೆ

    ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್‌ಡಿಕೆ

    – ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ

    ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ (JDS State President) ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.

    ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಟ್ರಂಪ್‌ ಆಸೆಗೆ ತಣ್ಣೀರು – ಮಲೇಷ್ಯಾಗೆ ಬರಲ್ಲ ಎಂದ ಮೋದಿ

    ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ನಾವು ಅದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು. ಇದನ್ನೂ ಓದಿ: ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

    ಸಮನ್ವಯ ಸಮಿತಿ (Coordination Committee) ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

    ಕೋರ್ ಕಮಿಟಿ ಪುನರ್ ರಚನೆ ವಿಚಾರ ಸಂಬಂಧ ಮಾತನಾಡಿ, ಕೋರ್ ಕಮಿಟಿ ಪುನರ್ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ ಪಕ್ಷ ಸಂಘಟನೆಗೆ ಸಮಿತಿ ಮಾಡುವ ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ – ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

  • ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾ ಮೂರ್ತಿ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾ ಮೂರ್ತಿ ಮಾಹಿತಿ ಬಹಿರಂಗಪಡಿಸಿದ್ದಕ್ಕೆ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬೆಂಗಳೂರು: ಸರ್ಕಾರ ನಡೆಸುತ್ತಿರೋ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥರಾದ ನಾರಾಯಣಮೂರ್ತಿ (Narayana Murthy), ಸುಧಾಮೂರ್ತಿ (Sudha Murty) ಕುಟುಂಬದ ಮಾಹಿತಿ ಬಹಿರಂಗ ಮಾಡಿದ ಸರ್ಕಾರದ ನಡೆಗೆ ಜೆಡಿಎಸ್ ಕಿಡಿಕಾರಿದೆ. ಈ ಸಂಬಂಧ X ನಲ್ಲಿ ಕಿಡಿಕಾರಿರುವ ಜೆಡಿಎಸ್ ಸಿದ್ದರಾಮಯ್ಯ, ಡಿಕೆಶಿವಕುಮಾರ್, ಹರಿಪ್ರಸಾದ್ ವಿರುದ್ದ ಕಿಡಿಕಾರಿದೆ.

    X ಪೋಸ್ಟ್‌ನಲ್ಲಿ ಏನಿದೆ?
    ಕಾಂಗ್ರೆಸ್ ಸರ್ಕಾರ (Congress Government) ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆ ಮಾಹಿತಿಗಳು ಸೋರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆ. ಸಮೀಕ್ಷೆಯಲ್ಲಿ ಜನರಿಂದ ಸಂಗ್ರಹಿಸಿದ ಮಾಹಿತಿಗಳು ಎಷ್ಟು ಸುರಕ್ಷಿತ? ಇನ್ಫೋಸಿಸ್‌ ಸಂಸ್ಥೆಯ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ಅವರು ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ನೀಡಿದ್ದ ಸ್ವಯಂ ದೃಢೀಕರಣ ಪತ್ರವನ್ನು, ಸಾರ್ವಜನಿಕಗೊಳಿಸಿ ಮಾಹಿತಿ ಸೋರಿಕೆ ಮಾಡಲಾಗಿದೆ.

    ಇದು ನ್ಯಾಯಾಂಗ ನಿಂದನೆ ಆಗುವುದಿಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೇ. ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆಗೆ ಬಿಟ್ಟಿದ್ದು, ಇದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

    ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಗೌಪ್ಯವಾಗಿಡಬೇಕು ಮತ್ತು ಅದರ ದುರ್ಬಳಕೆಯನ್ನು ತಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ‌ ನೀಡಿದೆ. ಜಾತಿಗಣತಿಯಲ್ಲಿ ಭಾಗವಹಿಸದವರು “ದೇಶದ್ರೋಹಿಗಳು” ಎಂಬ ಹಣೆಪಟ್ಟಿಯನ್ನು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಕಟ್ಟಿದ್ದಾರೆ.

    ಮಾಹಿತಿ ಸೋರಿಕೆ ಮಾಡಿ ಸುಧಾಮೂರ್ತಿ ಮತ್ತು ಅವರ ಕುಟುಂಬದವರ ತೇಜೋವಧೆ ಮಾಡಲಾಗುತ್ತಿದೆ. ಈ‌ ದುಷ್ಕೃತ್ಯದಲ್ಲಿ ಕಾಂಗ್ರೆಸ್ಸಿನ ನಾಯಕರೇ ಮುಂಚೂಣಿಯಲ್ಲಿ ಇದ್ದಾರೆ. ಮಾಹಿತಿ ಸೋರಿಕೆ ಸರ್ಕಾರದ ಪ್ರಾಯೋಜಿತ ಕೃತ್ಯ ಎಂಬ ಶಂಕೆಗೆ ಇದು ಪುಷ್ಠಿ ನೀಡಿದೆ. ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯ ವಿಶ್ವಸಾರ್ಹತೆ ಬಗ್ಗೆ ಅನುಮಾನ ಪಡುವಂತಾಗಿದೆ. ಸಮೀಕ್ಷೆಯು ಪಾರದರ್ಶಕವಾಗಿಲ್ಲ. ಮಾಹಿತಿಯೂ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇದು ಪ್ರತ್ಯಕ್ಷ ಸಾಕ್ಷಿ ಅಂತ ಕಿಡಿಕಾರಿದೆ.

  • 100 ದಿನಗಳ ಬಳಿಕ ಮಂಡ್ಯಕ್ಕೆ ಕುಮಾರಸ್ವಾಮಿ

    100 ದಿನಗಳ ಬಳಿಕ ಮಂಡ್ಯಕ್ಕೆ ಕುಮಾರಸ್ವಾಮಿ

    ಮಂಡ್ಯ: ಆರೋಗ್ಯದಲ್ಲಿ ಆದ ಏರುಪೇರಿನಿಂದ ವಿಶ್ರಾಂತಿ ಕಡೆಗೆ ಜಾರಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದು ಅವರ ಸ್ವಕ್ಷೇತ್ರವಾದ ಮಂಡ್ಯಗೆ (Mandya) ಬರೋಬ್ಬರಿ 100 ದಿನಗಳ ಬಳಿಕ ಇಂದು ಬರಲಿದ್ದಾರೆ.

    ಇಂದು ಮಂಡ್ಯದ ಪೇಟೆ ಬೀದಿಯಲ್ಲಿ ನಿರ್ಮಾಣವಾಗಿರುವ ಜಯಚಾಮರಾಜೇಂದ್ರ ಒಡೆಯರ್ ಮಾರುಕಟ್ಟೆಯ ಉದ್ಘಾಟನೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಆಗಮಿಸಲಿದ್ದಾರೆ. ಮೂರು ತಿಂಗಳ ಹಿಂದೆ ಹೆಚ್‌ಡಿಕೆ ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆಯನ್ನು ನಡೆಸಿದ್ದರು. ಆದಾದ ಬಳಿಕ ಅವರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿದ್ದವು. ಇದನ್ನೂ ಓದಿ: ಖ್ಯಾತ ಗಾಯಕಿ ಜೊತೆ 2ನೇ ಮದ್ವೆಗೆ ಸಜ್ಜಾದ ರಘು ದೀಕ್ಷಿತ್;‌ ಅಕ್ಟೋಬರ್ ಅಂತ್ಯದಲ್ಲೇ ಮದುವೆ!

    ಹೀಗಾಗಿ ಕುಮಾರಸ್ವಾಮಿ ಅವರು ವಿಶ್ರಾಂತಿ ಕಡೆಗೆ ಜಾರಿದ್ದರು. ಈ ವೇಳೆ ಹೆಚ್‌ಡಿಕೆ ಅವರ ದಿಢೀರ್ ತೂಕ ಇಳಿಕೆ, ಸೊರಗಿದ ದೇಹ ಕಂಡು ಕಾರ್ಯಕರ್ತರಲ್ಲಿ ಆತಂಕ ಮೂಡಿದ್ದವು. ಇದೀಗ ಆರೋಗ್ಯ ಸುಧಾರಿಸಿರುವ ಬೆನ್ನಲ್ಲೇ ಇಂದು 100 ದಿನಗಳ ಬಳಿಕ ಕುಮಾರಸ್ವಾಮಿ ಮಂಡ್ಯಗೆ ಆಗಮಿಸುತ್ತಿದ್ದು, ಜೆಡಿಎಸ್ ಕಾರ್ಯಕರ್ತರು, ಕುಮಾರಸ್ವಾಮಿ ಅಭಿಮಾನಿಗಳು ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

  • ಅನುದಾನದಲ್ಲಿ ತಾರತಮ್ಯ – ಹೈಕೋರ್ಟ್ ಮೊರೆ ಹೋದ ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

    ಅನುದಾನದಲ್ಲಿ ತಾರತಮ್ಯ – ಹೈಕೋರ್ಟ್ ಮೊರೆ ಹೋದ ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

    – ಬಿಜೆಪಿ, ಜೆಡಿಎಸ್ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ

    ಕೋಲಾರ: ಕೋಲಾರದ (Kolar) ಶ್ರೀನಿವಾಸಪುರ ಜೆಡಿಎಸ್ ಶಾಸಕ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ (Grant) ನೀಡದ ಸರ್ಕಾರದ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ಸರ್ಕಾರದ ತಾರತಮ್ಯ ನೀತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜೆಡಿಎಸ್ ಶಾಸಕ ರಿಟ್ ಅರ್ಜಿ ಸಲ್ಲಿಸಿದ್ದು, ಇದು ಅನುದಾನ ಗೊಂದಲ ಹಾಗೂ ಗಲಾಟೆಗೆ ಕಾರಣವಾಗಿದೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ (Venkatashiva Reddy) ಹೈಕೋರ್ಟ್‌ನಲ್ಲಿ (High Court) ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ನಮಗೂ ಸರ್ಕಾರ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    ಕಾಂಗ್ರೆಸ್ ಶಾಸಕರಿಗೆ ಮಾತ್ರ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿರುವ ಸರ್ಕಾರ, ಜೆಡಿಎಸ್ ಹಾಗೂ ಬಿಜೆಪಿ ಶಾಸಕರಿರುವ ಕಡೆಗಳಲ್ಲಿ ಅನುದಾನ ನೀಡುತ್ತಿಲ್ಲ ಎಂದು ಈ ಮೊದಲೇ ಕಿಡಿಕಾರಿದ್ದರು. ಅದರಂತೆ ಕ್ಷೇತ್ರದ ಅಭಿವೃದ್ಧಿಗಾಗಿ ಪದೇ ಪದೇ ಮನವಿ ಮಾಡಿದರೂ ಸಹ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸರ್ಕಾರ ಸಂವಿಧಾನದ ಆರ್ಟಿಕಲ್ 14ರ ಸಮಾನತೆಯ ನೀತಿ ಉಲ್ಲಂಘಿಸಿದೆ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಅನುದಾನ ಬಿಡುಗಡೆ ಮಾಡದಿದ್ರೆ ರಾಜಕೀಯ ನಿವೃತ್ತಿ, ಯಾವ ಪಕ್ಷಕ್ಕೂ ಹೋಗಲ್ಲ: ಶಾಸಕ ಸತೀಶ್ ಸೈಲ್

    ಜೆಡಿಎಸ್, ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಈ ಮೊದಲು ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪ ಮಾಡಿದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಈ ಹಿಂದೆಯೂ ಹಲವು ಬಾರಿ ಅನುದಾನ ನೀಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಪದೆಪದೇ ಕೆಂಡ ಕಾರಿದ್ದರು. ಇದನ್ನೂ ಓದಿ: ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

  • ದೊಡ್ಡಗೌಡ್ರ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್

    ದೊಡ್ಡಗೌಡ್ರ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ (H.D Deve Gowda) ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.

    ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಸೂಚನೆ ಮೇರೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇದನ್ನೂ ಓದಿ: Bengaluru | ದೇವೇಗೌಡರ ಆರೋಗ್ಯ ವಿಚಾರಿಸಿದ ಪ್ರಹ್ಲಾದ್ ಜೋಶಿ

    ಕೆಲ ದಿನಗಳ ಕಾಲ ಮನೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಬಿಸಿಲು, ಧೂಳಿರುವ ವಾತಾವರಣಕ್ಕೆ ಹೋಗದಂತೆ ಮತ್ತೆ ಸೋಂಕು ತಗಲದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.

    ದೇವೇಗೌಡರ ನಿವಾಸಕ್ಕೆ ಬಿಜೆಪಿ (BJP) ನಾಯಕರ ಭೇಟಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇನ್ನಿತರ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ

  • ದೊಡ್ಡಗೌಡರ ಆರೋಗ್ಯ ವಿಚಾರಿಸಿದ ಬಿಎಸ್‌ವೈ, ವಿಜಯೇಂದ್ರ

    ದೊಡ್ಡಗೌಡರ ಆರೋಗ್ಯ ವಿಚಾರಿಸಿದ ಬಿಎಸ್‌ವೈ, ವಿಜಯೇಂದ್ರ

    ಬೆಂಗಳೂರು: ಇಂದು ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa), ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD DeveGowda) ಅವರ ಆರೋಗ್ಯ ವಿಚಾರಿಸಿದರು. ಜೊತೆಗೆ ದೇಶದ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸಿದರು.

    ಸದ್ಯಕ್ಕೆ ಆಸ್ಪತ್ರೆಯಲ್ಲೇ ಚಿಕಿತ್ಸೆ
    ಇತ್ತೀಚೆಗೆ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ (Bengaluru Manipal Hospital) ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಎಂದು ಜೆಡಿಎಸ್‌ ಪಕ್ಷ ಒಂದು ದಿನದ ಹಿಂದೆ ತಿಳಿಸಿದೆ.

    ತಾವುಗಳು ಆತಂಕಪಡುವ ಆಗತ್ಯವಿಲ್ಲ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕರಾದ ದೇವೇಗೌಡರು ಚೇತರಿಸಿಕೊಂಡು ಗುಣಮುಖರಾಗಿದ್ದು, ಆರೋಗ್ಯವಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಡಿನ ಜನರ ಹಾರೈಕೆ, ಪ್ರೀತಿ, ಪ್ರಾರ್ಥನೆಯೇ ಅವರಿಗೆ ಶ್ರೀರಕ್ಷೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪಕ್ಷ ಪ್ರಕಟಣೆಯಲ್ಲಿ ಮನವಿ ಮಾಡಿದೆ.

    ಹೆಚ್‌ಡಿಕೆ ಹೇಳಿದ್ದೇನು?
    ಇನ್ನೂ ದೊಡ್ಡಗೌಡರ ಆರೋಗ್ಯದ ಬಗ್ಗೆ ಅಪ್ಡೇಟ್‌ ಕೊಟ್ಟಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ 3-4 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು 2 ದಿನಗಳ ಹಿಂದೆ ಹೇಳಿದ್ದರು.

  • ದೇವೇಗೌಡರು ಆರೋಗ್ಯವಾಗಿದ್ದಾರೆ ಆತಂಕಪಡಬೇಕಿಲ್ಲ: ಹೆಚ್‌ಡಿಕೆ

    ದೇವೇಗೌಡರು ಆರೋಗ್ಯವಾಗಿದ್ದಾರೆ ಆತಂಕಪಡಬೇಕಿಲ್ಲ: ಹೆಚ್‌ಡಿಕೆ

    – ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ

    ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡರು (HD Devegowda) ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಮೂರು ನಾಲ್ಕು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದರು.

    ಬೆಂಗಳೂರಿನಲ್ಲಿ (Bengaluru) ಗುರುವಾರ ತಮ್ಮ ತಂದೆಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

    ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೆ ಚಿಕಿತ್ಸೆ
    ಸದ್ಯ ಮಣಿಪಾಲ್‌ ಆಸ್ಪತ್ರೆಗೆ ದೇವೇಗೌಡರನ್ನ ದಾಖಲಿಸಲಾಗಿದ್ದು, ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಸಂಪೂರ್ಣವಾಗಿ ಆರೋಗ್ಯ ಚೇತರಿಕೆ ಬಳಿಕ ಡಿಸ್ಸಾರ್ಜ್ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಸದ್ಯಕ್ಕೆ ದೇವೇಗೌಡರ ಆರೋಗ್ಯ ಸುಧಾರಣೆ ಆಗಿದ್ದು, ವಾರ್ಡ್ ನಲ್ಲಿ ಇದ್ದಾರೆ. ಇನ್ನೂ 2-3 ದಿನಗಳ ವರೆಗೂ ಆರೋಗ್ಯ ಚೇತರಿಕೆಯತ್ತ ವೈದ್ಯರು ನಿಗಾ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

  • ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ

    ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ

    ಬೆಂಗಳೂರು: ಬಿಗ್‌ಬಾಸ್ (Bigg Boss) ಶೋಗೆ ಸರ್ಕಾರ ಬೀಗ ಹಾಕಿಸಿದ ಬೆನ್ನಲ್ಲೇ ಸರ್ಕಾರ, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಜೆಡಿಎಸ್ (JDS)  ಅಟ್ಯಾಕ್ ಮುಂದುವರೆಸಿದೆ.

    ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಸರಣಿ ಪ್ರಶ್ನೆಗಳನ್ನ ಕೇಳಿದೆ. ಬೆಂಗಳೂರು ಗುಂಡಿಗಳನ್ನ (Patholes) ಯಾವಾಗ ಬಂದ್ ಮಾಡಿಸುತ್ತೀರಾ? ಯಾವಾಗ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಬೀಗ ಹಾಕ್ತೀರಾ ಎಂದು ವಾಗ್ದಾಳಿ ನಡೆಸಿದೆ.ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಎಕ್ಸ್‌ನಲ್ಲಿ ಏನಿದೆ?
    ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್‌ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವರೇ.

    ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ? ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ?

    ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ? ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ? ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ?

    ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ ಎಂದು ಕಿಡಿಕಾರಿದೆ.ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ