Tag: JDS leader

  • ಜೆಡಿಎಸ್ ಮುಖಂಡನ ಮರ್ಡರ್ ಕೇಸ್ – ಕೊಲೆಗೈದ ಸ್ಥಳದಲ್ಲಿ ಹೊಂಚು ಹಾಕಿದ್ದ ಹಂತಕರು

    ಜೆಡಿಎಸ್ ಮುಖಂಡನ ಮರ್ಡರ್ ಕೇಸ್ – ಕೊಲೆಗೈದ ಸ್ಥಳದಲ್ಲಿ ಹೊಂಚು ಹಾಕಿದ್ದ ಹಂತಕರು

    -ಸಿಸಿಟಿವಿಯಲ್ಲಿ ಆರೋಪಿಗಳ ಚಲನವಲನ ಸೆರೆ

    ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ನಡೆದಿದ್ದ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಹತ್ಯೆಗೈದ ಆರೋಪಿಗಳು ಕೊಲೆಗೆ ಹೊಂಚು ಹಾಕಿದ್ದ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಖಾಸಗಿ ಹೊಟೇಲ್‍ನ ಸಿಸಿಟಿವಿಯಲ್ಲಿ ಆರೋಪಿಗಳ ಚಲನವಲನ ದೃಶ್ಯ ಸೆರೆಯಾಗಿದೆ. ಆರೋಪಿಗಳು ಕೊಲೆ ಮಾಡುವ ಮುನ್ನ ಹೊಟೇಲ್ ಬಳಿ ಬಂದು ಸ್ಥಳ ವೀಕ್ಷಣೆ ಮಾಡಿದ್ದು, ಮದ್ದೂರಿನ ಟಿವಿ ವೃತ್ತದಲ್ಲಿರುವ ಖಾಸಗಿ ಹೋಟೆಲ್ ನಲ್ಲಿರುವ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಕೊಲೆಗೂ ಮುನ್ನ ಹೋಟೆಲ್ ಮುಂಭಾಗದಲ್ಲಿ ಕೊಲೆ ಮಾಡಿದ ದಿನ ಆರೋಪಿಗಳ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ಮೊದಲು ಇಬ್ಬರು ಆರೋಪಿಗಳು ನಡೆದುಕೊಂಡು ಬಂದು ಸ್ಥಳ ವೀಕ್ಷಣೆ ಮಾಡಿದ್ದಾರೆ. ನಂತರ 3 ಬೈಕ್ ನಲ್ಲಿ 5 ಜನರು ಬಂದು ಪ್ರಕಾಶ್ ಗಾಗಿ ಕಾಯುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇವರೇ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾರೆ ಎಂದು ಸಿಸಿಟಿವಿ ದೃಶ್ಯ ಆಧರಿಸಿ ಶಂಕಿಸಲಾಗಿದೆ.

    ಕೊಲೆ ಮಾಡಿದ ದಿನ ಮದ್ದೂರಿನ ಪ್ರವಾಸಿ ಮಂದಿರದಿಂದ ಪ್ರಕಾಶ್ ಹೊರಡುತ್ತಿದ್ದಂತೆಯೇ ಆರೋಪಿಗಳು ಅಲರ್ಟ್ ಆಗಿದ್ದು, ಪ್ರವಾಸಿ ಮಂದಿರದಿಂದ 100 ಮೀಟರ್ ಅಂತರದಲ್ಲಿನ ಅಂಗಡಿಯಲ್ಲಿ ಕಾರ್ ನ ಸೀಟ್ ಹೊಲಿಸಲು ಪ್ರಕಾಶ್ ಕಾರ್ ನಿಲ್ಲಿಸಿದ್ದರು. ಕಾರ್ ನಿಲ್ಲಿಸುತ್ತಿದ್ದಂತೆ ಬೈಕ್ ನಲ್ಲಿ ತೆರಳಿದ ಐವರು ಆರೋಪಿಗಳು ಕೊಲೆ ಮಾಡಿ ಅದೇ ಬೈಕ್ ನಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗಿದ್ದಾರೆ.

    ಪ್ರಕಾಶ್ ಕೊಲೆ ಸಂಬಂಧ 8 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತರ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 143(ಅಕ್ರಮ ಕೂಟ), 146(ದೊಂಬಿ), 148(ಮಾರಕಾಸ್ತ್ರಗಳಿಂದ ಹಲ್ಲೆ), 341(ಅಕ್ರಮವಾಗಿ ಬಂಧಿಸುವುದು), 307(ಕೊಲೆ ಯತ್ನ), 302 (ಕೊಲೆಗೆ ದಂಡನೆ), 120ಬಿ(ಕ್ರಿಮಿನಲ್ ಪಿತೂರಿ) ಹಾಗೂ 114(ಅಪರಾಧ ನಡೆದಾಗ ದುಷ್ಪ್ರೇರಕನ ಹಾಜರಿ) ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.

    https://www.youtube.com/watch?v=_TY3AJ71wY0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜೆಡಿಎಸ್ ಮುಖಂಡನ ಹುಟ್ಟುಹಬ್ಬ ಆಚರಣೆ

    ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜೆಡಿಎಸ್ ಮುಖಂಡನ ಹುಟ್ಟುಹಬ್ಬ ಆಚರಣೆ

    ಕೊಪ್ಪಳ: ಜೆಡಿಎಸ್ ಮುಖಂಡರೊಬ್ಬರು ತಮ್ಮ ಹುಟ್ಟುಹಬ್ಬವನ್ನು ತಲ್ವಾರ್‌ನಿಂದ ಕೇಕ್ ಕತ್ತರಿಸಿ ಆಚರಿಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಜೆಡಿಎಸ್ ಮುಖಂಡ ಮೆಹಮೂದ್ ಹುಸೇನ್ ಬಲ್ಲೆ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಕೊಪ್ಪಳದಲ್ಲಿ ಮಂಗಳವಾರ ಹುಟ್ಟುಹಬ್ಬ ಆಚರಿಕೊಂಡ ಹುಸೇನ್ ಅವರು ಸ್ನೇಹಿತರ ಜೊತೆಗೂಡಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಖುಷಿಪಟ್ಟ ವಿಡಿಯೋವನ್ನು ತಮ್ಮ ಫೇಸ್‍ಬುಕ್ ಖಾತೆಯಿಂದಲೇ ಪೋಸ್ಟ್ ಮಾಡಿದ್ದಾರೆ.

    ರಾಜಕೀಯಕ್ಕೆ ಸೇರುವ ಮೊದಲು ಹುಸೇನ್ ರೌಡಿ ಶೀಟರ್ ಸಹ ಆಗಿದ್ದರು. ಈಗ ರೌಡಿಸಂ ಬಿಟ್ಟು ರಾಜಕೀಯಕ್ಕೆ ಸೇರಿ ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದರೆ ತಮ್ಮ ಸ್ಥಾನದ ಬೆಲೆ ಮರೆತು ವಿಕೃತವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರೋದಕ್ಕೆ ಸಾರ್ವಜನಿಕರು ಟೀಕೆ ವ್ಯಕ್ತಪಡಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸುವುದು ತಪ್ಪು. ಅದರಲ್ಲೂ ತಲ್ವಾರ್‌ನಿಂದ ಕೇಕ್ ಕಟ್ ಮಾಡ್ತಿರೋದನ್ನು ಫೇಸ್‍ಬುಕ್ ನಲ್ಲಿ ಹಾಕಿಕೊಂಡು ರೌಡಿ ಚಟುವಟಿಕೆಗೆ ಪ್ರೇರೇಪಿಸುತ್ತಿದ್ದಾರೆ ಎಂಬ ಆರೋಪ ಅವರ ವಿರುದ್ಧ ಕೇಳಿಬರುತ್ತಿದೆ.

    ಈ ಹಿಂದೆ ಕೂಡ ಹಲವು ಮಂದಿ ಹೀಗೆ ತಲ್ವಾರ್‌ನಿಂದ ಕೇಕ್ ಕತ್ತರಿಸಿ ವಿಕೃತವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗೆ ಮಾಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ರೌಡಿ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    ಮಂಡ್ಯ: ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ಮದ್ದೂರಿನ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಯೋಗೇಶ್, ಸ್ವಾಮಿ, ಶಿವರಾಜ್ ಹಾಗೂ ಹೇಮಂತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಪ್ರಕರಣ ಸಂಬಂಧ ಇಂದು ಬೆಳಗ್ಗೆ ಒಟ್ಟು 8 ಮಂದಿಯ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಅಲ್ಲದೇ ಮೃತ ಪ್ರಕಾಶ್ ಕಾರಿನಲ್ಲಿದ್ದ ತೊಪ್ಪನಹಳ್ಳಿಯ ಅಭಿಲಾಷ್ ನೀಡಿದ ದೂರಿನನ್ವಯ ಎಫ್‍ಐಆರ್ ದಾಖಲಾಗಿಸಿತ್ತು.

    ಪ್ರಕರಣದ ಬೆನ್ನತ್ತಿದ್ದ ಪೊಲೀಸರು ತೊಪ್ಪನಹಳ್ಳಿ ಹಾಗೂ ಮದ್ದೂರಿನಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 143(ಅಕ್ರಮ ಕೂಟ), 146(ದೊಂಬಿ), 148(ಮಾರಕಾಸ್ತ್ರಗಳಿಂದ ಹಲ್ಲೆ), 341(ಅಕ್ರಮವಾಗಿ ಬಂಧಿಸುವುದು), 307(ಕೊಲೆ ಯತ್ನ), 302 (ಕೊಲೆಗೆ ದಂಡನೆ), 120ಬಿ(ಕ್ರಿಮಿನಲ್ ಪಿತೂರಿ) ಹಾಗೂ 114(ಅಪರಾಧ ನಡೆದಾಗ ದುಷ್ಪ್ರೇರಕನ ಹಾಜರಿ) ಅಡಿಯಲ್ಲಿ ಪ್ರಕರಣ ದಾಖಲಾಗಿವೆ.

    ಏನಿದು ಘಟನೆ?
    ಸೋಮವಾರ ಸಂಜೆ 4.30ರ ವೇಳೆ ಮದ್ದೂರಿನ ಟಿಬಿ ಸರ್ಕಲ್ ಬಳಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ಕುಳಿತಿದ್ದ ಪ್ರಕಾಶ್‍ರನ್ನು ಕತ್ತು ಸೀಳಿ ಪರಾರಿಯಾಗಿದ್ದರು. ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರಕಾಶ್ ಮೂಲತಃ ಕೊಪ್ಪನಹಳ್ಳಿ ಗ್ರಾಮದವರಾಗಿದ್ದು, ಮಾಜಿ ಪಂಚಾಯತ್ ಅಧ್ಯಕ್ಷೆಯ ಪತಿ ಹಾಗೂ ಜೆಡಿಎಸ್ ಮುಖಂಡರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ಮುಖಂಡನ ಹಂತಕರನ್ನು ಶೂಟೌಟ್ ಮಾಡಿ: ಸಿಎಂ ಕುಮಾರಸ್ವಾಮಿ

    ಜೆಡಿಎಸ್ ಮುಖಂಡನ ಹಂತಕರನ್ನು ಶೂಟೌಟ್ ಮಾಡಿ: ಸಿಎಂ ಕುಮಾರಸ್ವಾಮಿ

    ವಿಜಯಪುರ: ಮಂಡ್ಯ ಜೆಡಿಎಸ್ ಮುಖಂಡನ ಕೊಲೆ ಪ್ರಕರಣ ತಿಳಿಯುತ್ತಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು ಶೂಟೌಟ್ ಮಾಡಿ ಎಂದು ಆದೇಶಿಸಿದ್ದಾರೆ.

    ಸೋಮವಾರ ಸಂಜೆ 4.30ರ ವೇಳೆಗೆ ಜೆಡಿಎಸ್ ಮುಖಂಡ ಪ್ರಕಾಶ್ ರನ್ನು ದುಷ್ಕರ್ಮಿಗಳು ಮದ್ದೂರಿನ ಟಿಬಿ ಸರ್ಕಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಕುರಿತು ದೂರವಾಣಿ ಮೂಲಕ ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ನಿಜಕ್ಕೂ ನನಗೆ ಯಾವ ವಿಚಾರಕ್ಕೆ ಕೊಲೆ ನಡೆದಿದೆ ಎಂಬುದು ತಿಳಿಯುತ್ತಿಲ್ಲ. ಕೊಲೆಯಾದ ವ್ಯಕ್ತಿ ತುಂಬಾ ಒಳ್ಳೆಯ ಮನುಷ್ಯನಾಗಿದ್ದ. ಈ ಹಿಂದೆಯೂ ಎರಡು ಕೊಲೆಗಳು ನಡೆದಿವೆ ಎನ್ನುವ ಮಾತು ಕೇಳಿದ್ದೇನೆ. ಕೂಡಲೇ ಹಂತಕರನ್ನು ಶೂಟೌಟ್ ಮಾಡಿ, ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

    ಇಂದು ಸಂಜೆ 4.30ರ ಸುಮಾರಿಗೆ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕಾರಿನಲ್ಲೇ ಪ್ರಕಾಶ್ ರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೂವರೆಗೂ ಯಾವುದೇ ಆರೋಪಿಗಳ ಸುಳಿವು ಸಿಕ್ಕಿಲ್ಲ. ಹಳೇ ವೈಷಮ್ಯವೇ ಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಪ್ರಕಾಶ್ ಮೂಲತಃ ಕೊಪ್ಪನಹಳ್ಳಿ ಗ್ರಾಮದವರಾಗಿದ್ದರು. 2016ರ ಡಿಸೆಂಬರ್ 25ರಂದು ಜೆಡಿಎಸ್ ಕಾರ್ಯಕರ್ತರ ಜೋಡಿ ಕೊಲೆಯಾಗಿತ್ತು. ಅಂದಿನಿಂದಲೂ ಗ್ರಾಮದಲ್ಲಿ ರಾಜಕೀಯ ದ್ವೇಷ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೇ ರಾಜಕೀಯ ವೈಷಮ್ಯದಿಂದಲೇ ಪ್ರಕಾಶ್ ರವರ ಹತ್ಯೆ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ : ಮದ್ದೂರು ನಗರದಲ್ಲಿ ಕತ್ತು ಕೊಯ್ದು ಜೆಡಿಎಸ್ ಮುಖಂಡನ ಬರ್ಬರ ಹತ್ಯೆ

    ಸಿಎಂ ಸ್ಪಷ್ಟನೆ: ಮದ್ದೂರಿನಲ್ಲಿ ಇಂದು ಹಾಡುಹಗಲೇ ನಡೆದಿರುವ ಕೊಲೆ ಪ್ರಕರಣ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಕೊಲೆಯಾದ ಪ್ರಕಾಶ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಕಾನೂನು ಪ್ರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ಬಳಸಿದ ಪದ ಭಾವನಾತ್ಮಕ ಪ್ರತಿಕ್ರಿಯೆಯೇ ಹೊರತು, ಆದೇಶವಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ಮುಖಂಡನ ಪುತ್ರ ನೇಣಿಗೆ ಶರಣು

    ಜೆಡಿಎಸ್ ಮುಖಂಡನ ಪುತ್ರ ನೇಣಿಗೆ ಶರಣು

    ಮೈಸೂರು: ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಪುತ್ರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಶ್ರೇಯಸ್ (17) ಆತ್ಮಹತ್ಯೆಗೆ ಶರಣಾದ ಜೆಡಿಎಸ್ ಮುಖಂಡ ಕೆಂಪನಾಯಕನ ಪುತ್ರ. ಮೈಸೂರಿನ ವಿಜನಗರದ ಮೂರನೇ ಹಂತದ ಬಸವರಾಜ ವೃತ್ತದ ಸಮೀಪದಲ್ಲಿ ಈ ಘಟನೆ ನಡೆದಿದೆ. ಶ್ರೇಯಸ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿ.ಯುಸಿ ಓದುತ್ತಿದ್ದನು.

    ಶ್ರೇಯಸ್ ಸೋಮವಾರ ಕಾಲೇಜಿಗೆ ಹೋಗದೇ ಮನೆಯಲ್ಲಿ ಇದ್ದನು. ಬಳಿಕ ಮನೆಯಲ್ಲಿ ಯಾರು ಇಲ್ಲದ ವೇಳೆ ರೂಮಿನಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಘಟನೆ ನಡೆದ ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews