Tag: jds

  • ಡಿ.ಕೆ.ಶಿವಕುಮಾರ್ ಅವರೇ ವಿನಾಶ ಕಾಲೇ ವಿಪರೀತ ಬುದ್ಧಿ: ಜೆಡಿಎಸ್ ವಾಗ್ದಾಳಿ

    ಡಿ.ಕೆ.ಶಿವಕುಮಾರ್ ಅವರೇ ವಿನಾಶ ಕಾಲೇ ವಿಪರೀತ ಬುದ್ಧಿ: ಜೆಡಿಎಸ್ ವಾಗ್ದಾಳಿ

    – ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿಯೇ ಅಂತಹದ್ದು ಎಂದು JDS ಟೀಕೆ

    ಬೆಂಗಳೂರು: ಸಿನಿಮಾ ನಟರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ವಾರ್ನಿಂಗ್ ಕೊಟ್ಟ ವಿಚಾರಕ್ಕೆ ಡಿಸಿಎಂ ವಿರುದ್ಧ ಜೆಡಿಎಸ್‌ ವಾಗ್ದಾಳಿ ನಡೆಸಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್ (JDS) ವಿನಾಶ ಕಾಲೇ ವಿಪರೀತ ಬುದ್ಧಿ ಅಂತ ಕಿಡಿಕಾರಿದೆ.

    ಜೆಡಿಎಸ್ ಟ್ವೀಟ್ ಏನು?
    ವಿನಾಶ ಕಾಲೇ ವಿಪರೀತ ಬುದ್ಧಿ. ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು. ಮಿಸ್ಟರ್ ಡಿ.ಕೆ.ಶಿವಕುಮಾರ್ ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಕನ್ನಡದ ನಟರಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬೆದರಿಕೆ ಹಾಕಿರುವುದು ಹೇಡಿತನ ಮತ್ತು ಖಂಡನೀಯ. ಇದನ್ನೂ ಓದಿ: ಡಿಸಿಎಂ ಅಧಿಕಾರ ದರ್ಪದಿಂದ ಹೇಳಿರಬಹುದು- ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಫಿಲ್ಮ್ಂ ಚೇಂಬರ್ ಅಧ್ಯಕ್ಷ ಅಸಮಾಧಾನ

    ಡಿಸಿಎಂ ಈ ಗೊಡ್ಡು ಬೆದರಿಕೆ ನಿಮ್ಮ ಹತಾಶೆ ಮತ್ತು ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಕಲಾವಿದರು ಯಾವುದೇ ಪಕ್ಷದ ಕಾಲಾಳುಗಳಲ್ಲ. ಅವರು ಯಾರನ್ನು ಯಾವ ಪಕ್ಷವನ್ನು ಬೆಂಬಲಿಸಬೇಕು? ಎನ್ನುವುದು ಅವರ ವಯಕ್ತಿಕ ತೀರ್ಮಾನ.

    ನಮ್ಮದು ಪ್ರಜಾಪ್ರಭುತ್ವ, ಸಂವಿಧಾನದ ಅಡಿಯಲ್ಲಿ ನೀವು ಡಿಸಿಎಂ ಆಗಿದ್ದೀರಿ. ರೌಡಿಸಂ, ಧಮ್ಕಿ ರಾಜಕೀಯ ಯಾರಿಗೂ ಶೋಭೆ ತರುವುದಿಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡಿಕೊಂಡು ದರ್ಪ, ದೌರ್ಜನ್ಯ, ಬೆದರಿಕೆ ಹಾಕಿ ಜನರನ್ಮು ಹಿಂಸಿಸುತ್ತಾ, ಬಂಡೆಗಳನ್ನು ಖಾಲಿ ಮಾಡಿರುವ ಅಪೂರ್ವ ಸಹೋದರರಿಗೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ‌‌ ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಟ್ಟು, ಬೋಲ್ಟು ಸರಿ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಖಜಾನೆ ಖಾಲಿಯಾಗಿದೆ, ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

    ಸಿಎಂ ಕುರ್ಚಿಗೆ ಏರಲು ತಿರುಕನ ಕನಸು ಕಾಣುತ್ತಾ ಅಡ್ಡದಾರಿ, ತಂತ್ರ-ಕುತಂತ್ರ ವಾಮಮಾರ್ಗದಲ್ಲಿ ಸಾಗಿರುವ ನಿನಗೆ ಕಾಂಗ್ರೆಸ್ ಪಾರ್ಟಿಯವರೇ ನಟ್ಟು, ಬೋಲ್ಟು ಟೈಟು ಮಾಡುತ್ತಿದ್ದಾರೆ. ಅಷ್ಟು ಸಾಲದೇ ಅಂತ ವಾಗ್ದಾಳಿ ನಡೆಸಿದೆ.

  • ಮಂಡ್ಯ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ – ಬಿಜೆಪಿ, ಜೆಡಿಎಸ್ ಪ್ರತಿಭಟನೆ

    ಮಂಡ್ಯ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ – ಬಿಜೆಪಿ, ಜೆಡಿಎಸ್ ಪ್ರತಿಭಟನೆ

    – ಆರ್.ಅಶೋಕ್, ಅಶ್ವತ್ ನಾರಾಯಣ್ ಸಾಥ್

    ಮಂಡ್ಯ: ಇಲ್ಲಿನ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಪಕ್ಷಗಳು ಜಂಟಿಯಾಗಿ ಮಂಡ್ಯ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿತು.

    ಮೈಸೂರು ವಿವಿಯೊಂದಿಗೆ ವಿಲೀನಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಸರ್ಕಾರದ ನಿರ್ಧಾರ ಮಂಡ್ಯ ಅಸ್ಮಿತೆಗೆ ಧಕ್ಕೆ ತಂದಿದೆ. ಬಿಜೆಪಿ ಸರ್ಕಾರದ ಕೊಠಡಿ ಕಿತ್ತುಕೊಳ್ಳಲು ಕಾಂಗ್ರೆಸ್ ಸಂಚು ನಡೆಸಿದೆ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಅಲ್ಲದೇ ವಿವಿ ವಿಲೀನಗೊಳಿಸುವ ನಿರ್ಧಾರ ಕೈಬಿಡುವಂತೆ ಆಗ್ರಹಿಸಿದರು. ಇದನ್ನೂ ಓದಿ: ಚಾಮರಾಜನಗರದಲ್ಲಿ ಭೀಕರ ಅಪಘಾತ – ಐವರು ಮಾದಪ್ಪ ಭಕ್ತರ ದುರ್ಮರಣ

    ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಅಶ್ವತ್ ನಾರಾಯಣ್, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಸೇರಿ ಭಾಗಿಯಾಗಿದ್ದರು. ಇದನ್ನೂ ಓದಿ: ಬದರಿನಾಥದಲ್ಲಿ ಹಿಮಪಾತ, 47 ಕಾರ್ಮಿಕರ ರಕ್ಷಣೆ – ಮೂವರ ಸ್ಥಿತಿ ಗಂಭೀರ, ಮೋದಿಯಿಂದ ಅಗತ್ಯ ನೆರವಿನ ಭರವಸೆ

  • ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ರಾಜಕೀಯ ದ್ವೇಷ: ನಿಖಿಲ್ ಕುಮಾರಸ್ವಾಮಿ

    ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ರಾಜಕೀಯ ದ್ವೇಷ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಗಣಿ ಕೇಸ್‌ನಲ್ಲಿ ಕುಮಾರಸ್ವಾಮಿ (Kumaraswamy) ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವುದು ರಾಜಕೀಯ ದ್ವೇಷಕ್ಕೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ವಿರುದ್ಧ ಈ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದೆ ರಾಜ್ಯದಲ್ಲಿ ದ್ವೇಷದ ರಾಜಕೀಯವು ಒಂದು ಗ್ರಾಫ್‌ನಲ್ಲಿ ಇತ್ತು. ಈ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅ ಗ್ರಾಫ್‌ಗೆ ಲಿಮಿಟ್ ಮೀರಿದೆ. ದ್ವೇಷದ ರಾಜಕೀಯಕ್ಕೆ ಈ ಕಾಂಗ್ರೆಸ್ ಸರ್ಕಾರ ಬಿತ್ತನೆ ಬೀಜ ಬಿತ್ತಿದೆ. ಕಾಂಗ್ರೆಸ್‌ಗೆ ಕುಮಾರಸ್ವಾಮಿ ಅವರನ್ನ ಕಂಡರೆ ಭಯ. ಕುಮಾರಸ್ವಾಮಿ ಅವರು ಎಲ್ಲಿ ಈ ಸರ್ಕಾರದ ಭ್ರಷ್ಟ ಹಗರಣ ಬಯಲಿಗೆಳೆಯುತ್ತಾರೆ ಅನ್ನೋ ಭಯ ಇದೆ ಗುಡುಗಿದರು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ

    ಅವರ ವರ್ಚಸ್ಸು ಕುಗ್ಗಿಸಬೇಕು ಅಂತ ಇಂತಹ ಕೆಲಸಗಳನ್ನು ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಅವರ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಅವರು ರಾಜಕೀಯ ಅಟ್ಯಾಕ್ ಮಾಡಿದರೂ ಅದನ್ನು ಎದುರಿಸುವ ಸಾಮರ್ಥ್ಯ ನಮಗೆ ಇದೆ. ಕುಮಾರಸ್ವಾಮಿ ಅವರು ನೈತಿಕತೆಯಿಂದ ಸರಿಯಾಗಿದ್ದಾರೆ. ಕಾನೂನಾತ್ಮಕವಾಗಿ ನಮ್ಮ ಹೋರಾಟ ನಾವು ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಿಕ್ಕಮಗಳೂರು | 2021ರ ಪರಿಷತ್ ಚುನಾವಣೆ – ಫೆ.28ಕ್ಕೆ ಮರು ಮತ ಎಣಿಕೆ

    ಕೇತಗಾನಹಳ್ಳಿ ಜಮೀನು ಸರ್ವೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಕಾಂಗ್ರೆಸ್‌ನ ಕುತಂತ್ರ. ಕುಮಾರಸ್ವಾಮಿ ಅವರನ್ನ ಹೇಗಾದರೂ ಮಾಡಿ ಕಟ್ಟಿ ಹಾಕಬೇಕು ಅಂತ ಹೀಗೆಲ್ಲ ಮಾಡುತ್ತಿದ್ದಾರೆ. ಹೊಸ ಸರ್ಕಾರ ಬಂದಾಗಲೆಲ್ಲ ಇಂತಹ ಪ್ರಕ್ರಿಯೆ ಆಗುತ್ತಿರುತ್ತದೆ. ನಮಗೆ ಜಮೀನು ಕೊಟ್ಟವರು ಯಾರು ಇದರ ಬಗ್ಗೆ ಮಾತಾಡಿಲ್ಲ, ದೂರು ಕೊಟ್ಟಿಲ್ಲ. ಈಗ ಕಾಂಗ್ರೆಸ್ ಅವರೇ ಕೆಲವರನ್ನ ಕಳುಹಿಸಿ ವಿಚಾರಣೆ ಮಾಡುತ್ತಿದ್ದಾರೆ. ಈಗ ಮತ್ತೆ ಆ ವಿಷಯ ಉದ್ಭವ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಕಾಲ ಉತ್ತರ ಕೊಡುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮುಂದಿನ ಕುಂಭಮೇಳ ಎಲ್ಲಿ ನಡೆಯುತ್ತೆ? – ಈಗಲೇ ತಯಾರಿ ಆರಂಭಿಸಿದ ಸರ್ಕಾರ

    ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ ಎಂಬ ಸಚಿವರ ಹೇಳಿಕೆಯ ಕುರಿತು ಮಾತನಾಡಿದರು. ರಾಜ್ಯಪಾಲರಿಗೆ ಘನತೆ ಇದೆ. ರಾಜ್ಯಪಾಲರನ್ನ ರಾಜಕೀಯಕ್ಕೆ ಎಳೆಯೋದು ಸರಿಯಲ್ಲ. ರಾಜ್ಯಪಾಲರು ಯಾವುದೇ ನಿರ್ಧಾರ ಕೈಗೊಳ್ಳಲು ಸ್ವತಂತ್ರ ಅಧಿಕಾರ ಇದೆ. ಗಣಿ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವ ವಿಚಾರದಲ್ಲಿ ನಮಗೆ ಯಾವುದೇ ಆತಂಕ ಇಲ್ಲ. ತಪ್ಪು ಮಾಡಿದ್ದರೆ ಆತಂಕ ಇರುತ್ತದೆ. ಕುಮಾರಸ್ವಾಮಿ ಅವರು ಯಾವುದೇ ತಪ್ಪು ಮಾಡಿಲ್ಲ. ಯಾರಿಗೂ ಮೋಸ ಆಗಿಲ್ಲ. ಸರ್ಕಾರದ ಬೊಕ್ಕಸಕ್ಕೂ ನಷ್ಟ ಆಗಿಲ್ಲ. ನಮಗೆ ಸ್ಪಷ್ಟತೆ ಇರುವುದರಿಂದ ಯಾವುದೇ ಆತಂಕ ಇಲ್ಲ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

  • ಕೊನೆ ಉಸಿರಿರೋವರೆಗೂ ಜನರಿಗಾಗಿ ಕೆಲಸ ಮಾಡಲು ಶಕ್ತಿ ಕೊಡು: ದೇವರಲ್ಲಿ ಪ್ರಾರ್ಥಿಸಿದ ಹೆಚ್‌ಡಿಡಿ

    ಕೊನೆ ಉಸಿರಿರೋವರೆಗೂ ಜನರಿಗಾಗಿ ಕೆಲಸ ಮಾಡಲು ಶಕ್ತಿ ಕೊಡು: ದೇವರಲ್ಲಿ ಪ್ರಾರ್ಥಿಸಿದ ಹೆಚ್‌ಡಿಡಿ

    ಚಿಕ್ಕಬಳ್ಳಾಪುರ: ನನ್ನ ಕೊನೆ ಉಸಿರು ಇರೋವರೆಗೂ ನನ್ನ ಜನರಿಗಾಗಿ ಕೈಲಾದ ಕೆಲಸ ಮಾಡಲು ಶಕ್ತಿ ಕೊಡು ಎಂದು ಭಗವಂತನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H.D Devegowda) ಪ್ರಾರ್ಥಿಸಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ನಗರದ ಆದಿಚುಂಚನಗಿರಿ ಶಾಖಾ ಮಠದ (Adhichunchanagiri Math) ಮುಂಭಾಗದ ಸೂಲಾಲಪ್ಪನದಿನ್ನೆಯ ಶ್ರೀವೀರಾಂಜನೇಯಸ್ವಾಮಿ ದೇವಾಲಯದ ಬಳಿ ನಡೆದ ಕುಂಭಾಭಿಷೇಕ, ಬಾಲಗಂಗಾಧರನಾಥಶ್ರೀಗಳ 80ನೇ ಜಯಂತೋತ್ಸವ ಹಾಗೂ ನಿರ್ಮಲಾನಂದನಾಥ ಶ್ರೀಗಳ 12ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ರೈತನ ಮಗ, ನನ್ನ ಕೊನೆ ಉಸಿರು ಹೋಗುವವರೆಗೂ, ನನ್ನ ಶಕ್ತಿ ಇರುವವರೆಗೂ ಹೋರಾಟ ಮಾಡುತ್ತೇನೆ. ನಾನು ಕುಳಿತುಕೊಳ್ಳುವ ವ್ಯಕ್ತಿಯಲ್ಲ. ನಾನು ಯಾರ ಬಗ್ಗೆಯೂ ಮಾತನಾಡಲ್ಲ ಎಂದಿದ್ದಾರೆ.

    ಯಾವುದೆ ಪಕ್ಷ ಯಾವುದೇ ಜಾತಿ ನಾಯಕರು ಇದ್ರೂ ಲಘುವಾಗಿ ಮಾತನಾಡಿಲ್ಲ. ನನ್ನ ಉಸಿರು ಇರುವಾಗಲೇ ರಾಜ್ಯಕ್ಕೆ ಏನಾದ್ರೂ ಒಳ್ಳೆಯದು ಮಾಡಬೇಕು. ಕೆಂಪು ಕೋಟೆಯ ಮೇಲೆ ಒಂದು ಸಲ ಬಾವುಟ ಹಾರಿಸಿದ್ದೇನೆ ಅಂತ ಶ್ರೀಗಳು ಹೇಳ್ತಿದ್ರು. ನನ್ನ ಶಕ್ತಿ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಆಗಿದ್ರು. ಆದರೆ ಸ್ವಲ್ಪ ವ್ಯತ್ಯಾಸವಾದ ಕಾರಣ ತಕ್ಷಣ ನಾನೇ ಬಗೆಹರಿಸಿಕೊಂಡೆ ಎಂದಿದ್ದಾರೆ.

    ನನ್ನ ಜನರಿಗಾಗಿ ಪಾರ್ಲಿಮೆಂಟ್‌ನಲ್ಲಿ ಹೋರಾಟ ಮಾಡುವ ಶಕ್ತಿ ಕೊಡು ಎಂದು ಕುಲದೇವರು ಈಶ್ವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.

  • ಹೆಚ್‌ಡಿಕೆ ಮೇಲೆ ನಮ್ಮ ಸರ್ಕಾರ ರಾಜಕೀಯ ದ್ವೇಷ ಮಾಡ್ತಿಲ್ಲ – ಚೆಲುವರಾಯಸ್ವಾಮಿ

    ಹೆಚ್‌ಡಿಕೆ ಮೇಲೆ ನಮ್ಮ ಸರ್ಕಾರ ರಾಜಕೀಯ ದ್ವೇಷ ಮಾಡ್ತಿಲ್ಲ – ಚೆಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮೇಲೆ ನಮ್ಮ ಸರ್ಕಾರ ರಾಜಕೀಯ ದ್ವೇಷ ಮಾಡುತ್ತಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ (Chaluvarayaswamy) ತಿರುಗೇಟು ಕೊಟ್ಟಿದ್ದಾರೆ.ಇದನ್ನೂ ಓದಿ: ಮುಡಾ ಅಕ್ರಮ ಆಗಿರೋದು ಬಿಜೆಪಿ ಅವಧಿಯಲ್ಲಿ ಅವರ ಮೇಲೆ ಕ್ರಮ ಆಗಲಿ: ಚಲುವರಾಯಸ್ವಾಮಿ

    ಕೇತಗಾನಹಳ್ಳಿ ಜಮೀನು ಸರ್ವೇ ರಾಜಕೀಯ ಪ್ರೇರಿತ ಎಂಬ ಕುಮಾರಸ್ವಾಮಿ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಸರ್ವೇ ಕೋರ್ಟ್ ಆದೇಶದ ಮೇರೆಗೆ ನಡೆಯುತ್ತಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಮಾಡ್ತಿರೋದಲ್ಲ. ಅಧಿಕಾರ ದುರ್ಬಳಕೆ ಮಾಡಿರುವುದು ಕುಮಾರಸ್ವಾಮಿಯವರು, ಸರ್ಕಾರವಲ್ಲ. ಜಮೀನು ಸರ್ವೇ ಸರ್ಕಾರ ಮಾಡುತ್ತಿಲ್ಲ. ಕೋರ್ಟ್ ನಿರ್ದೇಶನದ ಮೇಲೆ ಆಗುತ್ತಿದೆ. ಹಾಗಾದ್ರೆ ಕೋರ್ಟ್ ಸರ್ವೇ ಮಾಡಿ ಎಂದು ಹೇಳಿರುವುದು ರಾಜಕೀಯನಾ? ಎಂದು ಪ್ರಶ್ನೆ ಮಾಡಿದರು.

    ನಾವೆಲ್ಲರು ಸಂವಿಧಾನ, ನ್ಯಾಯಾಲಯದಲ್ಲಿ ಭರವಸೆ ಇಟ್ಟುಕೊಂಡು ಕೆಲಸ ಮಾಡ್ತಿದ್ದೇವೆ. ಈ ಸರ್ವೇ ಸರ್ಕಾರ ಮಾಡಿದ್ದಲ್ಲ. ನ್ಯಾಯಾಲಯದ ಸೂಚನೆ ಮೇಲೆ ಆಗ್ತಿರೋದು. ಕುಮಾರಸ್ವಾಮಿ ಅವರು ಈ ರೀತಿ ಮಾತನಾಡಿದರೆ ಅದು ದುರಂತ. ಅವರು ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಹೇಳುತ್ತಲೇ ಇದ್ದಾರೆ. ದಾಖಲಾತಿ ಬಿಡುಗಡೆ ಮಾಡಲಿ ಎಂದು ಸವಾಲೊಡ್ಡಿದರು.ಇದನ್ನೂ ಓದಿ: ಅರ್ಚಕರಿಗೆ ಸೇರಬೇಕಿದ್ದ ಹಣ ಅಧಿಕಾರಿಗಳ ಕುಟುಂಬಕ್ಕೆ – ಮುಜರಾಯಿ ಇಲಾಖೆಯ 1.87 ಕೋಟಿ ಗುಳುಂ

  • ದೆಹಲಿ ಅಬಕಾರಿ ಹಗರಣ ಮೀರಿಸುತ್ತಿದೆ ರಾಜ್ಯದ ಲಿಕ್ಕರ್ ಸ್ಕ್ಯಾಮ್‌ – ಕಾಂಗ್ರೆಸ್‌ನಿಂದ ಲೂಟಿ ಎಂದ ಜೆಡಿಎಸ್

    ದೆಹಲಿ ಅಬಕಾರಿ ಹಗರಣ ಮೀರಿಸುತ್ತಿದೆ ರಾಜ್ಯದ ಲಿಕ್ಕರ್ ಸ್ಕ್ಯಾಮ್‌ – ಕಾಂಗ್ರೆಸ್‌ನಿಂದ ಲೂಟಿ ಎಂದ ಜೆಡಿಎಸ್

    ಬೆಂಗಳೂರು: ಅಬಕಾರಿ ಆದಾಯ ಹೆಚ್ಚಿಸಲು ಅಡ್ಡದಾರಿ ಹಿಡಿದಿರುವ ಸರ್ಕಾರದ ಕ್ರಮವನ್ನು ಜೆಡಿಎಸ್ (JDS) ಟೀಕೆ ಮಾಡಿದೆ. ಎಕ್ಸ್‌ನಲ್ಲಿ ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್ ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು ಎಂದು ಲೇವಡಿ ಮಾಡಿದೆ.

    ಟ್ವೀಟ್‌ನಲ್ಲಿ ಏನಿದೆ?
    ಸ್ಕ್ಯಾಮ್ ಗ್ರೇಸ್ ಸರ್ಕಾರದ ಲೂಟಿ ಮಾರ್ಗಗಳು ನೂರಾರು. ರಾಜ್ಯವನ್ನು ದಿವಾಳಿ ಎಬ್ಬಿಸಿರುವ ಬರಗೆಟ್ಟ ಕಾಂಗ್ರೆಸ್ ಸರ್ಕಾರ, ಆದಾಯ ಹೆಚ್ಚಿಸಿಕೊಳ್ಳಲು ಇನ್ನಿಲ್ಲದ ಕುತಂತ್ರ ನಡೆಸುತ್ತಿದೆ. ಅಸ್ತಿತ್ವದಲ್ಲೇ ಇಲ್ಲದ ಪರವಾನಿಗೆಗಳ ಮಾರಾಟಕ್ಕೆ ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಕಾನೂನು ಬಾಹಿರವಾಗಿ ಲೈಸೆನ್ಸ್ ನೀಡಿ ಸಾವಿರಾರು ಕೋಟಿ ದುಡ್ಡು ಹೊಡೆಯಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.ಇದನ್ನೂ ಓದಿ: ಬ್ಯಾಂಕ್ ಲಾಕರ್‌ನಲ್ಲಿಟ್ಟ ದುಡ್ಡಿಗೆ ಗೆದ್ದಲು – 8 ಲಕ್ಷ ಡಮಾರ್!

    ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ, ಲೈಸೆನ್ಸ್ ನವೀಕರಣ, ಮಂಥ್ಲಿ ಮನಿ ಹೆಸರಲ್ಲಿ ಕೋಟಿ ಕೋಟಿ ಹಣವನ್ನು ಅಧಿಕಾರಿಗಳಿಂದ ಸಚಿವರೇ ವಸೂಲಿ ಮಾಡುತ್ತಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಕಾಂಗ್ರೆಸ್ ಸರ್ಕಾರದ ಮಾನ ಹರಾಜಾಗಿದೆ.

    ದೆಹಲಿಯಲ್ಲಿ ಎಎಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಹುಕೋಟಿ ಅಬಕಾರಿ ಹಗರಣ ಮೀರಿಸುವಂತೆ ಕರ್ನಾಟಕದಲ್ಲಿಯೂ ಸದ್ದಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.ಇದನ್ನೂ ಓದಿ: ಅಂಗನವಾಡಿಯಲ್ಲಿ ಆಟವಾಡುತ್ತಾ ಕುಸಿದು ಬಿದ್ದು 5ರ ಬಾಲಕಿ ಸಾವು

     

  • ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಧನ್ಯವಾದ ಅರ್ಪಿಸಿದ ನಿಖಿಲ್

    ರಾಜ್ಯದ ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಧನ್ಯವಾದ ಅರ್ಪಿಸಿದ ನಿಖಿಲ್

    ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ (Tobacco Farmers) ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

    ಈ ಬಗ್ಗೆ ನಿಖಿಲ್‌ ಕುಮಾರಸ್ವಾಮಿಯವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯಲಾಗಿರುವ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಿಕೆ ಹಾಗೂ ಆ ಬೆಳೆಗಾರರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡುವ ನಿರ್ಧಾರ ಕೈಗೊಂಡಿರುವ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಧನ್ಯವಾದ ಹೇಳಿದ್ದಾರೆ.

    ಕೇಂದ್ರದ ಆದೇಶದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅವರು, ಕಳೆದ 2024 ಡಿ.2ರಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಡಿ.21ರಂದು ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಮಹತ್ವದ ಸಭೆಯನ್ನು ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.

    ಅಂದು ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದ ಯದುವೀರ್, ಮಾಜಿ ಸಚಿವ ಸಾ.ರಾ.ಮಹೇಶ್, ಹುಣಸೂರು ಶಾಸಕ ಜಿ.ಟಿ.ಹರೀಶ್ ಗೌಡ ಹಾಗೂ ತಂಬಾಕು ಬೆಳೆಗಾರರು ಜೊತೆಯಲಿದ್ದರು ಎಂದು ತಿಳಿಸಿದ್ದಾರೆ.

    ರಾಜ್ಯದ ತಂಬಾಕು ಬೆಳೆಗಾರ ರೈತರು ಕಳೆದ ವರ್ಷ ಮೇ, ಜುಲೈ ತಿಂಗಳಲ್ಲಿ ವಿಪರೀತ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದಲ್ಲಿ ಬೆಳೆಯಲಾಗುವ ಎಫ್‌ಸಿವಿ (flue-cured Virginia-FCV) ತಂಬಾಕು ಬೆಳೆಯ ಇಳುವರಿ ಗಣನೀಯವಾಗಿ ಕಡಿಮೆಯಾಗಿತ್ತು ಹಾಗೂ ತಂಬಾಕು ಎಲೆಗಳ ಗುಣಮಟ್ಟಕ್ಕೆ ದೊಡ್ಡ ಮಟ್ಟದಲ್ಲಿ ಹಾನಿಯಾಗಿತ್ತು. ಇದರಿಂದಾಗಿ ಬೆಳೆಗಾರರು ಭಾರೀ ನಷ್ಟಕ್ಕೆ ತುತ್ತಾಗಿದ್ದರು. ಕೇಂದ್ರ ಸರಕಾರ ಇದೀಗ ನೆರವಿಗೆ ಧಾವಿಸಿರುವ ಪರಿಣಾಮ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸರ್ಕಾರ ರೈತಪರವಾದ ಅನೇಕ ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡಿದ್ದು, ಅದರಲ್ಲಿ ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವುದು ಕೂಡ ಒಂದಾಗಿದೆ. ಕೇಂದ್ರದ ಈ ನಿರ್ಧಾರದ ಮೂಲಕ ತಂಬಾಕು ಮಂಡಳಿಯ ಹರಾಜು ಕೇಂದ್ರಗಳಲ್ಲಿ ನೋಂದಾಯಿತ ಬೆಳೆಗಾರರಿಂದ ಹೆಚ್ಚುವರಿ ತಂಬಾಕು ಮತ್ತು ನೋಂದಾಯಿಸದಿರುವ ಬೆಳೆಗಾರರಿಂದ ಅನಧಿಕೃತ ತಂಬಾಕು ಮಾರಾಟಕ್ಕೆ ಅನುಮತಿ ನೀಡಲಿದೆ. ಅಲ್ಲದೇ ಯಾವುದೇ ಹೆಚ್ಚುವರಿ ಸೇವಾ ಶುಲ್ಕಗಳಿಲ್ಲದೆ ಬೆಳೆಗಾರರು ನ್ಯಾಯಯುತವಾಗಿ ಮಾರುಕಟ್ಟೆ ಬೆಲೆಯನ್ನು ಪಾರದರ್ಶಕವಾಗಿ ಪಡೆಯಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಎಫ್‌ಸಿವಿ ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ. ಕೇಂದ್ರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕದ ತಂಬಾಕು ಬೆಳೆಗಾರರ ಸಂಕಷ್ಟ ನಿವಾರಿಸಲು ಕೇಂದ್ರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

  • ಮೇನಲ್ಲಿ ಜೆಡಿಎಸ್‌ನಿಂದ ಬೃಹತ್ ಸಮಾವೇಶ: ಹೆಚ್‌ಡಿಡಿ

    ಮೇನಲ್ಲಿ ಜೆಡಿಎಸ್‌ನಿಂದ ಬೃಹತ್ ಸಮಾವೇಶ: ಹೆಚ್‌ಡಿಡಿ

    ಬೆಂಗಳೂರು: ಹಾಸನದಲ್ಲಿ ಸಮಾವೇಶ ಮಾಡಿ ದೇವೇಗೌಡ (HD Deve Gowda) ಕುಟುಂಬದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್‌ಗೆ (Congress) ಕೌಂಟರ್ ಕೊಡಲು ದೇವೇಗೌಡರೇ ಅಖಾಡಕ್ಕೆ ಇಳಿದಿದ್ದಾರೆ. ಮೇ ತಿಂಗಳಲ್ಲಿ ಬೃಹತ್ ಸಮಾವೇಶ ಮಾಡಿ ವಿರೋಧಿಗಳಿಗೆ ಸಂದೇಶ ಕೊಡಲು ದೇವೇಗೌಡರು ಸಿದ್ಧತೆ ಮಾಡಿದ್ದಾರೆ.

    ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಅವರು, ಮೇ ತಿಂಗಳಲ್ಲಿ ಜೆಡಿಎಸ್‌ನಿಂದ ದೊಡ್ಡ ಸಮಾವೇಶ ಮಾಡುತ್ತೇವೆ. ಕುಮಾರಸ್ವಾಮಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಅವರು ಹಾಸನದಲ್ಲಿ ಸಮಾವೇಶ ಮಾಡಿದ್ದರು.ನಾವು ಕೂಡಾ ಸಮಾವೇಶ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ದೇವರಾಜ್ ಅರಸುರವರ ದಾಖಲೆ ಸರಿಗಟ್ಟುತ್ತಾರೆ: ಕೆಎನ್ ರಾಜಣ್ಣ

    ಮೇನಲ್ಲಿ ನಡೆಯುವ ಸಮಾವೇಶಕ್ಕೆ ಮಾರ್ಚ್ 6ರಂದು ಪೂರ್ವಭಾವಿ ಸಭೆ ಮಾಡುತ್ತೇವೆ. ಪೂರ್ವಭಾವಿ ಸಭೆಯಲ್ಲಿ ಎಲ್ಲಾ ಜಿಲ್ಲಾ, ತಾಲೂಕು ಅಧ್ಯಕ್ಷರು, ಹಾಲಿ, ಮಾಜಿ, ಶಾಸಕರು, ಸಚಿವರು, ಸಂಸದಸರು ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಅಂದು ಎಲ್ಲಿ ಸಮಾವೇಶ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ

  • ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ

    ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ

    ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ (Upper Bhadra Project) ಅನುಮತಿ ಕೊಡಿ ಅಂತ ನಾನೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಅಂತ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡ (HD Devegowda) ತಿರುಗೇಟು ನೀಡಿದ್ದಾರೆ.

    ಬಿಜೆಪಿ-ಜೆಡಿಎಸ್ (BJP-JDS) ಸಂಸದರು ರಾಜ್ಯದ ಪರವಾಗಿ, ಅನುದಾನ ಮತ್ತು ನೀರಾವರಿ ಯೋಜನೆ ಬಗ್ಗೆ ಮಾತಾಡ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರದವರು ಅನೇಕ ಯೋಜನೆ ಮಾಡಿದ್ದೀರಿ. ನೀರಾವರಿಗೆ ಹಣ ಇಡಲಿಲ್ಲ. ಮಾಡಿದ ಯೋಜನೆಗೆ ಹಣ ಇಡಲಿಲ್ಲ. ಅದರ ಬಗ್ಗೆ ನಾನು ಯಾಕೆ ಚರ್ಚೆ ಮಾಡಲಿ. ಅವರು ಏನ್ ಮಾಡ್ತಾರೋ ಮಾಡಲಿ ಎಂದರು.

    ನಾನು ಭದ್ರಾ ಮೇಲ್ದಂಡೆಗೆ ಅನುಮತಿ ಕೊಡಿ ಅಂತ ನೀರಾವರಿ ಮಂತ್ರಿಗೆ ಪತ್ರ ಬರೆದಿದ್ದೇನೆ. ಭದ್ರಾ  ಯೋಜನೆ ಬಗ್ಗೆಯೂ ನಾನು ಕುಳಿತುಕೊಳ್ಳೊಲ್ಲ. ಅದರ ಬಗ್ಗೆ ಹೋರಾಟ ಮಾಡ್ತೀನಿ ಅಂತ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು: ಹೆಚ್.ಡಿ.ದೇವೇಗೌಡ

    ಮಹದಾಯಿ ಯೋಜನೆ ವಿಚಾರ ಸುಪ್ರೀಂನಲ್ಲಿದ್ದು ಯೋಜನೆಗೆ ಗೋವಾ ವಿರೋಧ ಮಾಡಿದೆ. ಗೋವಾ ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಹಾಕಿದೆ. ನಮ್ಮ ಸರ್ಕಾರ ಅವರು ಪ್ರತಿಯಾಗಿ ನೀರು ಬೇಕು ಅಂತ ಅರ್ಜಿ ಹಾಕಿದೆ. ಅದು ಸುಪ್ರೀಂಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ಅದಕ್ಕೂ ನಾನು ಹೋರಾಟ ಮಾಡ್ತೀನಿ. ನೀರಾವರಿ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ನೀರಾವರಿ ಯೋಜನೆಗಳಿಗಾಗಿ ನಾನು ಸದಾ ಹೋರಾಟ ಮಾಡೋಕೆ ಸಿದ್ದ ಅಂತ ಕಾಂಗ್ರೆಸ್ ನಾಯಕರಿಗೆ ದೇವೇಗೌಡರು ತಿರುಗೇಟು ನೀಡಿದರು.

     

  • ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಬೇಡಿ: ಡಿ.ಕೆ ಶಿವಕುಮಾರ್

    ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಬೇಡಿ: ಡಿ.ಕೆ ಶಿವಕುಮಾರ್

    – ರಾಮನಗರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ, ಮುಂದೆ ಬೆಂಗಳೂರಿಗೆ ಸೇರುತ್ತಿದೆ ಎಂದ ಡಿಸಿಎಂ

    ರಾಮನಗರ: ಸಾರ್ವಜನಿಕರು ಯಾರೂ ಕೂಡ ಒಂದು ರೂಪಾಯಿ ಲಂಚ ಕೊಡಬೇಡಿ. ನಿಮಗೆ ಮನೆ ಕೊಡುವ ಕೆಲಸ ನಾವು ಮಾಡ್ತೇವೆ ಎಂದು ರಾಮನಗರ ಜನತೆಗೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಭರವಸೆ ನೀಡಿದರು.

    ರಾಮನಗರದಲ್ಲಿ (Ramanagara) ನಡೆದ ಕಾಂಗ್ರೆಸ್ (Congress) ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಎರಡು ಬಾರಿ ಇಲ್ಲಿ ಶಾಸಕರಾಗಿ ಏನು ಸಾಕ್ಷಿ ಇದೆ. ಸರ್ಕಾರಿ ಶಾಲೆಗೆ 1 ಎಕರೆ ಜಾಗ ಕೊಟ್ಟಿದ್ದೀರಾ? ನೀವು ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದೀರಿ ಎಂದು ಈಗ ನಾನು ಪ್ರಶ್ನೆ ಮಾಡಲ್ಲ. ಅದು ಜನರಿಗೆ ಗೊತ್ತಿದೆ. ಈ ಜಿಲ್ಲೆಗೆ ಸಾಕ್ಷಿ ಕೊಡುವ ಜವಾಬ್ದಾರಿ ಯೋಗೇಶ್ವರ್, ಬಾಲಕೃಷ್ಣ, ಇಕ್ಬಾಲ್ ಹುಸೇನ್ ಹಾಗೂ ನನ್ನ ಮೇಲೆ ಇದೆ. ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕು ಎಂದರು.

    ಗ್ಯಾರಂಟಿ ಯೋಜನೆ, ಅಭಿವೃದ್ಧಿ ಮೇಲೆ ನಂಬಿಕೆ ಇಟ್ಟು ಜನ ಅಧಿಕಾರ ಕೊಟ್ಟಿದ್ದಾರೆ. 600 ಕೋಟಿ ರೂ.ಗೂ ಅಧಿಕ ಅನುದಾನದಲ್ಲಿ ಕ್ಷೇತ್ರ ಅಭಿವೃದ್ಧಿ ಆಗುತ್ತಿದೆ. ಕಣ್ಣೀರು ಬೇಕೋ ಅಥವಾ ಅಭಿವೃದ್ಧಿ ಬೇಕೋ ಎಂದು ನಾವು ನಿಮ್ಮ ಮುಂದೆ ಬಂದಿದ್ದೆವು. ನಮಗೆ ಅಭಿವೃದ್ಧಿ ಬೇಕು, ಕಣ್ಣೀರು ಬೇಡ ಅಂತ ನೀವು ತೀರ್ಮಾನ ಮಾಡಿದ್ದೀರಿ. ಬಿಜೆಪಿ, ಜೆಡಿಎಸ್‌ನ ಬ್ಲಾಕ್ ಮೇಲ್ ರಾಜಕಾರಣಕ್ಕೆ ನೀವು ಜಗ್ಗಲಿಲ್ಲ. ನಿಮ್ಮ ತೀರ್ಪನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

    ನೀರು, ಹಾಲಿನ ಬೆಲೆ ಎರಡೂ ಒಂದೇ ಆಗಿದೆ. ಹಾಲಿನ ದರ ಏರಿಕೆ ಆಗಬೇಕು ಅಂತ ಮನವಿ ಮಾಡಿದ್ದೀರಿ. ಮುಂದಿನ ದಿನಗಳಲ್ಲಿ ಈ ಕಾರ್ಯವು ಆಗುತ್ತದೆ. ರಾಮನ ತಂದೆ ದಶರಥ. ರಾಮನ ಬಂಟ ಆಂಜನೇಯ. ದಶರಥನ ದೇವಾಲಯ ಎಲ್ಲೂ ಇಲ್ಲ. ಆದರೆ ಆಂಜನೇಯನ ದೇವಾಲಯ ಎಲ್ಲಾ ಕಡೆ ಇದೆ. ಯಾಕಂದ್ರೆ ಆಂಜನೇಯ ಪ್ರಾಮಾಣಿಕ ಸೇವಕ. ಜನರು ಸಹ ಸೇವೆ ಮಾಡುವವರನ್ನು ಗುರುತಿಸೋದು. ನಿಮ್ಮ ಸೇವೆಯನ್ನು ಮಾಡುವ ಕೆಲಸ ನಾವು ಮಾಡುತ್ತೇವೆ ಎಂದರು.

    ಇದು ಋಣ ತೀರಿಸುವ ಕಾರ್ಯಕ್ರಮವಾಗಿದೆ. ನೀವು ಕೊಟ್ಟ ಶಕ್ತಿಗೆ ಅಭಿನಂದನೆ ತಿಳಿಸುತ್ತಿದ್ದೇವೆ. 2 ಬಾರಿ ಈ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು. ಇವತ್ತಿನ ಈ ಕಾರ್ಯಕ್ರಮಕ್ಕೆ ಸಿಎಂ ಬರಬೇಕಿತ್ತು. ಬೆಳಿಗ್ಗೆ ಅವರ ಕಾಲಿಗೆ ನೋವಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ರೆಸ್ಟ್ ಮಾಡುತ್ತಿದ್ದಾರೆ. ಪಕ್ಷದ ಪರವಾಗಿ, ಜಿಲ್ಲೆಯ ಶಾಸಕನಾಗಿ ನಾನು ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. ಚುನಾವಣೆ ಸಮಯದಲ್ಲಿ ಸಾಕಷ್ಟು ಸಮೀಕ್ಷೆ ಬರುತ್ತಿದ್ದವು. ನಾನು ಮೊದಲೇ 138 ನಮ್ಮ ನಂಬರ್ ಅಂತ ಹೇಳಿದ್ದೆ. ಉಪಚುನಾವಣೆಗೂ ಮುಂಚೆಯೇ ಹೇಳಿದ್ದೆ. ಮೂರು ಕ್ಷೇತ್ರದಲ್ಲೂ ಗೆಲ್ಲುತ್ತೇವೆ ಅಂದಿದ್ದೆ. ಎರಡೂ ಕಡೆ ಮಾಜಿ ಸಿಎಂ ಪುತ್ರರಿದ್ದರೂ ಸಹ ನಮ್ಮನ್ನ ಬೆಂಬಲಿಸಿದ್ದೀರಿ. ಮಾಧ್ಯಮಗಳ ಸಮೀಕ್ಷೆ ಉಲ್ಟಾ ಆಯ್ತು. ಇದು ನಿಮ್ಮ ಮೇಲೆ ನನಗಿದ್ದ ನಂಬಿಕೆ ಎಂದು ನುಡಿದರು.

    ಕಾರ್ಯಕರ್ತರು ಯಾರು ಚಿಂತೆ ಮಾಡಬೇಕಾಗಿಲ್ಲ. ನಿಮ್ಮೆಲ್ಲರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಮಹಿಳೆಯರು ನಮಗೆ ಹೆಚ್ಚು ಬೆಂಬಲ ಕೊಟ್ಟಿದ್ದಾರೆ. ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಇದನ್ನು ಹೀಗೆ ಮುಂದುವರೆಸಿಕೊಂಡು ಹೋಗಬೇಕು, ಗೊಂದಲಕ್ಕೆ ಅವಕಾಶ ಕೊಡಬೇಡಿ. ನಾನು, ಸುರೇಶ್ ಎಲ್ಲರೂ ನಿಮ್ಮ ಜೊತೆ ಇರುತ್ತೇವೆ. ಕ್ಷೇತ್ರದ ಇತಿಹಾಸದಲ್ಲಿ ದೊಡ್ಡ ಬಹುಮತ ಕೊಟ್ಟಿದ್ದೀರಿ. ನಿಮ್ಮ ಖುಣವನ್ನ ತೀರಿಸುವ ಕೆಲಸ ಮಾಡುತ್ತೇವೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

    ಸತ್ತೆಗಾಲಕ್ಕೆ ಭೇಟಿ ಕೊಟ್ಟು ನೀರಾವರಿ ಯೋಜನೆ ಚರ್ಚೆ ಮಾಡುತ್ತಿದ್ದೇವೆ. ಹಾಲಿನ ದರ ಹೆಚ್ಚಳದ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

    ಜನತಾದಳದ ಕಾರ್ಯಕರ್ತರು ಪಾಪ, ಟೈಂ ವೇಸ್ಟ್ ಮಾಡಿಕೊಳ್ಳಬೇಡಿ. ರಾಮನಗರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಮುಂದೆ ಬೆಂಗಳೂರಿಗೆ ಸೇರುತ್ತಿದೆ. ಅಲ್ಲಿ ಒಬ್ಬ ವ್ಯಕ್ತಿಗಾಗಿ ಪಕ್ಷ ಬಲಿ ಕೊಡುವ ಕೆಲಸ ಆಗಿದೆ. ಇದರ ಬಗ್ಗೆ ಹೆಚ್ಚು ಮಾತನಾಡಲ್ಲ, ನೀವೆ ಯೋಚನೆ ಮಾಡಿ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಬಹಿರಂಗ ಆಹ್ವಾನ ನೀಡಿದರು.