Tag: jds

  • ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮಂಡ್ಯದಲ್ಲಿ ಹೆಚ್‌ಡಿಕೆಗೆ ಬೃಹತ್ ಅಭಿನಂದನಾ ಸಮಾವೇಶ

    ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮಂಡ್ಯದಲ್ಲಿ ಹೆಚ್‌ಡಿಕೆಗೆ ಬೃಹತ್ ಅಭಿನಂದನಾ ಸಮಾವೇಶ

    ಮಂಡ್ಯ: ಜೆಡಿಎಸ್ (JDS) ಭದ್ರಕೋಟೆ ಮೇಲೆ ಕಣ್ಣಿಟ್ಟು ದೇವೇಗೌಡರ ತವರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ ‘ಕೈ’ ಪಡೆಗೆ ಕೌಂಟರ್ ಕೊಡಲು ದಳಪತಿಗಳು ಸಜ್ಜಾಗಿದ್ದಾರೆ. ಮಂಡ್ಯದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಅಭಿನಂದನಾ ಸಮಾರಂಭ ಆಯೋಜಿಸುವ ಮೂಲಕ ಕಾಂಗ್ರೆಸ್ ಜನಕಲ್ಯಾಣ ಸಮಾವೇಶಕ್ಕೆ ತಿರುಗೇಟು ನೀಡಲು ಸಿದ್ಧತೆ ನಡೆಸಿದೆ.

    ಚನ್ನಪಟ್ಟಣ ಸೇರಿದಂತೆ 3 ಕ್ಷೇತ್ರಗಳ ಉಪಚುನಾವಣೆ ಗೆಲುವಿನ ಬಳಿಕ ಹಳೇ ಮೈಸೂರು ಭಾಗ ಕಬ್ಜಾ ಮಾಡಲು ಮುಂದಾಗಿರುವ ಕಾಂಗ್ರೆಸ್. ಮಾಜಿ ಪ್ರಧಾನಿ ದೇವೇಗೌಡರ ಪ್ರಾಬಲ್ಯವಿರುವ ಹಾಸನದಲ್ಲಿ ಜನಕಲ್ಯಾಣ ಹೆಸರಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದೆ. ಕಾಂಗ್ರೆಸ್ಸಿಗರ ಪವರ್ ಶೋಗೆ ಪ್ರತ್ಯುತ್ತರ ನೀಡಲು ಜೆಡಿಎಸ್ ಪ್ಲಾನ್ ಮಾಡಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬದ ಹಿನ್ನೆಲೆ ಮಂಡ್ಯದಲ್ಲಿ ಹೆಚ್‌ಡಿಕೆ ಅಭಿನಂದನಾ ಕಾರ್ಯಕ್ರಮ ಹೆಸರಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಮತ್ತೆ ಕುಂಕುಮ ಇಟ್ಟುಕೊಳ್ಳಲು ನಿರಾಕರಿಸಿದ ಸಿಎಂ!

    ಡಿ.15 ರಂದು ಮಂಡ್ಯದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಕ್ಕೆ ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸುವ ಗುರಿಯನ್ನು ಜೆಡಿಎಸ್ ನಾಯಕರು ಹೊಂದಿದ್ದಾರೆ. ಆ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಜೆಡಿಎಸ್ ಕಾರ್ಯಕರ್ತರಿಗೆ ಹುರಿದುಂಬಿಸುವ ಹಾಗೂ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪಕ್ಷಗಳ ಪ್ರಾಬಲ್ಯ ಕುಗ್ಗದಂತೆ, ಗಟ್ಟಿಗೊಳಿಸಲು ಚಿಂತಿಸಲಾಗಿದೆ.

    ಕಾಂಗ್ರೆಸ್ ಜನಕಲ್ಯಾಣ ಸಮಾವೇಶಕ್ಕೆ ಹೆಚ್‌ಡಿಕೆ ಅಭಿನಂದನಾ ಸಮಾರಂಭದ ಮೂಲಕ ದಳಪತಿಗಳು ಕೌಂಟರ್ ಕೊಡಲು ಮುಂದಾಗಿದ್ದು, ಆ ಮೂಲಕ ತನ್ನ ಭದ್ರಕೋಟೆಗೆ ‘ಕೈ’ ಪಡೆ ಎಂಟ್ರಿ ಕೊಡದಂತೆ ತಡೆಯಲು ಪ್ಲಾನ್ ಮಾಡಿದೆ. ಇದನ್ನೂ ಓದಿ: ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? – ಅಭಿಮಾನಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

  • ಸಾಯೋವರೆಗೂ ಸಿದ್ದರಾಮಯ್ಯ ಜೊತೆಗೆ ಇರ್ತೀನಿ: ಡಿಕೆ ಶಿವಕುಮಾರ್ ‌

    ಸಾಯೋವರೆಗೂ ಸಿದ್ದರಾಮಯ್ಯ ಜೊತೆಗೆ ಇರ್ತೀನಿ: ಡಿಕೆ ಶಿವಕುಮಾರ್ ‌

    ಹಾಸನ: ನಾನು ಸಿದ್ದರಾಮಯ್ಯನವರ (Siddaramaiah) ಜೊತೆ ಬಂಡೆಯಾಗಿ ಇರ್ತೇನೆ. ಸಾಯೋವರೆಗೆ ಸಿದ್ದರಾಮಯ್ಯ ಜೊತೆಗೆ ಇರುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಹೇಳಿದರು.

    ಹಾಸನದಲ್ಲಿ (Hassan) ನಡೆದ ಜನಕಲ್ಯಾಣ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಡಿಕೆಶಿ, ಇದು ಕೇವಲ ಜನಕಲ್ಯಾಣ ಸಮಾವೇಶ ಮಾತ್ರ ಅಲ್ಲ. ಇದು ಗ್ಯಾರಂಟಿಗಳ, ಗೆಲುವಿನ, ನಂಬಿಕೆಯ ಸಮಾವೇಶ. ಬಿಜೆಪಿಯ (BJP) ಕುತಂತ್ರಕ್ಕೆ ಜನರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಮೂರು ಉಪ ಚುನಾವಣೆಯಲ್ಲಿ ಜನರು ಉತ್ತರ ಕೊಟ್ಟಿದ್ದಾರೆ. ನಾವು ಯಾವತ್ತೂ ಭಾವನೆ, ಧರ್ಮದ ಮೇಲೆ ರಾಜಕಾರಣ ‌ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡ್ತೀವಿ. ನಾವು ಮಾಡುತ್ತಿರುವ ಈ ಅಧಿಕಾರ ನಶ್ವರ, ಕಾಂಗ್ರೆಸ್‌ ಪಕ್ಷದ ಸಾಧನೆ, ನಮ್ಮ ಸಾಧನೆ ಎಂದಿಗೂ ಅಜರಾಮರ ಎಂದು ಕಾಂಗ್ರೆಸ್‌ ಪಕ್ಷದ ಸಾಧನೆಗಳನ್ನ ಬಣ್ಣಿಸಿದರು. ಇದನ್ನೂ ಓದಿ: ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? – ಅಭಿಮಾನಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ  

    ʻಕಮಲ ಕೆರೆಯಲ್ಲಿದ್ದರೆ ಚನ್ನ, ತೆನೆ ಹೊಲದಲ್ಲಿದ್ದರೆ ಚೆಂದ, ಈ ದಾನ, ಧರ್ಮ ಮಾಡುವ ʻಕೈʼ ಅಧಿಕಾರದಲ್ಲಿದ್ದರೆ ಚೆಂದ, ಕಾಂಗ್ರೆಸ್ ಅಧಿಕಾರದಲ್ಲಿ ಇರಬೇಕು. ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಏಕೆಂದರೆ ಇಂದಿರಾ ಗಾಂಧಿ ಅವರ ಕಾಲದಿಂದ ಕೊಟ್ಟ ಎಲ್ಲ ಕಾರ್ಯಕ್ರಮಗಳು ಶಾಸನಬದ್ಧವಾಗಿದೆ. ಮುಂದಿನ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ಕುಮಾರಸ್ವಾಮಿ, ದೇವೇಗೌಡರು ಚನ್ನಪಟ್ಟಣ ಚುನಾವಣೆ ಸಂದರ್ಭ ಕಣ್ಣೀರು ಹಾಕಿದ್ರಿ, ಈ ರಾಜ್ಯಕ್ಕೆ, ಈ ಜಿಲ್ಲೆಗೆ ನಿಮ್ಮ ಸಾಧನೆಗೆ ಸಾಕ್ಷಿ ಏನು ಹೇಳಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್‌.ಡಿ ದೇವೇಗೌಡ

    ನಮ್ಮಲ್ಲಿದೆ ಒಗ್ಗಟ್ಟು, ಬಿಜೆಪಿ-ಜೆಡಿಎಸ್‌ನಲ್ಲಿ ಬಿಕ್ಕಟ್ಟು:
    ತಾತ ಪ್ರಧಾನ ಮಂತ್ರಿ ಆಗಿದ್ರು, ತಂದೆ ಮುಖ್ಯಮಂತ್ರಿ ಆಗಿದ್ದರು, ಮಗನನ್ನ ಶಾಸಕನನ್ನಾಗಿ ಮಾಡೋಕೆ ನೋಡಿದ್ರು. ಆದ್ರೆ ನಿಮ್ಮ (ಕುಮಾರಸ್ವಾಮಿ) ಕ್ಷೇತ್ರ ಚನ್ನಪಟ್ಟಣದಲ್ಲೇ ಜನ ಒಪ್ಪಲಿಲ್ಲ. ಈ ರಾಜ್ಯದ ಜನರೂ ಒಪ್ಪಲ್ಲ. ಕುಮಾರಸ್ವಾಮಿ, ದೇವೇಗೌಡ ಈ ಸರ್ಕಾರವನ್ನ ಕಿತ್ತಾಕ್ತೀವಿ ಅಂದ್ರು. ದೇವೇಗೌಡರೇ ಇದೇನು ಹಾಸನದಲ್ಲಿ ಬೆಳೆಯುವ ಆಲೂಗಡ್ಡೆಯಲ್ಲ, ಕಡಲೇ ಕಾಯಿ ಗಿಡ ಅಲ್ಲ. 138 ಶಾಸಕರ ಜನ ಬೆಂಬಲದ ಸರ್ಕಾರ. ನಮ್ಮಲ್ಲಿದೆ ಒಗ್ಗಟ್ಟು, ಬಿಜೆಪಿ-ನಿಮ್ಮಲಿದೆ ಬಿಕ್ಕಟ್ಟು ಎಂದು ಲೇವಡಿ ಮಾಡಿದರು.

    ಮುಂದುವರಿದು, ನಾವು ವಚನ ಪಾಲಕರು ವಚನ ಭ್ರಷ್ಟರಲ್ಲ. ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು ರೀತಿ ಹಾಸನದಲ್ಲೂ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುತ್ತೇವೆ. ನಮ್ಮ 5 ಗ್ಯಾರಂಟಿಗಳು ಪರ್ಮನೆಂಟ್‌ ಇದ್ದೇ ಇರುತ್ತವೆ ಎಂದು ಬೀಗಿದರು. ಇದನ್ನೂ ಓದಿ: ಮುಡಾದಲ್ಲಿ ರಾಜಕಾರಣಿಗಳು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ: ಕಾಂಗ್ರೆಸ್ ಶಾಸಕ ಸ್ಫೋಟಕ ಹೇಳಿಕೆ

  • ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? – ಅಭಿಮಾನಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

    ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? – ಅಭಿಮಾನಿಗಳಿಗೆ ಸಿದ್ದರಾಮಯ್ಯ ಪ್ರಶ್ನೆ

    – ಬಿಜೆಪಿ ಆಡಳಿತ ರಾಜ್ಯಗಳಲ್ಲಿ 10 ಕೆಜಿ ಅಕ್ಕಿ ಕೊಡ್ತಿದ್ರೆ ರಾಜಕೀಯ ನಿವೃತ್ತಿ
    – ಜೆಡಿಎಸ್‌ ಪಕ್ಷವನ್ನು ಕಟ್ಟಿದ್ದೇ ನಾವು ಎಂದ ಸಿಎಂ

    ಹಾಸನ: ಚನ್ನಪಟ್ಟಣದಲ್ಲಿ ದೇವೇಗೌಡರು (HD Devegowda) ಸಿದ್ದರಾಮಯ್ಯನ ಗರ್ವಭಂಗ ಮಾಡ್ತೀನಿ ಅಂದ್ರು. ಹಲ್ಲುಮುರಿ ಕಚ್ಚಿಕೊಂಡು ಕಾಂಗ್ರೆಸ್‌ ಪಕ್ಷವನ್ನ ಕಿತ್ತೊಗೆಯಿರಿ ಅಂತ ಹೇಳಿದ್ದರು. ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? ಅಂತ ನೆರೆದಿದ್ದ ಸಾವಿರಾರು ಅಭಿಮಾನಿಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನೆ ಮಾಡಿದರು.

    ಹಾಸನದ ಎಸ್‌.ಎಂ ಕೃಷ್ಣ ಬಡಾವಣೆಯ ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷ (Congress Party) ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಜನಕಲ್ಯಾಣ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ದೊಡ್ಡ ಸಮಾವೇಶ ಆಗಿಲ್ಲ. ಹಾಸನದಲ್ಲಿ ಇಷ್ಟೊಂದು ದೊಡ್ಡ ಸಮಾವೇಶ ನಡೆದಿರಲಿಲ್ಲ. ಇಂತಹ ಸಮಾವೇಶವನ್ನ ನಾನು ಮರೆಯಲು ಸಾಧ್ಯವಿಲ್ಲ. ಇದು ಅವಿಸ್ಮರಣೀಯ. ಹಾಸನದಲ್ಲಿ (Hassan) ಸಮಾವೇಶ ಮಾಡಲು ಈ ಭಾಗದ ಎಲ್ಲಾ ಸಚಿವರು ಸಲಹೆ ಕೊಟ್ಟರು. ಸ್ವಾಭಿಮಾನಿಗಳ ಒಕ್ಕೂಟ, ಪಕ್ಷದ ಕಾರ್ಯಕರ್ತರು ಸೇರಿ ಮಾಡುತ್ತಿರುವ ಸಮಾವೇಶ ಇದು ಎಂದರಲ್ಲದೇ ʻನಮಗೆ ಮತದಾರರೇ ದೇವರುʼ ಎಂದು ನುಡಿದರು.

    ದೇವೇಗೌಡರು ಯಾವಾಗಲೂ ನಮ್ಮದು ಜಾತ್ಯಾತೀತ ಪಕ್ಷ ಅಂತಿದ್ರು. 2019ರ ಚುನಾವಣೆಯಲ್ಲಿ ಬಿಜೆಪಿ ಈ ದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಮೋದಿ ಪ್ರಧಾನಿ ಆದ್ರೆ ದೇಶ ಬಿಡ್ತೀನಿ ಅಂದ್ರು. ಮಿಸ್ಟರ್‌ ದೇವೇಗೌಡರೇ ದೇಶ ಬಿಡಬೇಡಿ. ಪಾಪ ನನಗಿಂತ 15 ವರ್ಷ ದೊಡ್ಡವರು, ಅವರ ವಯಸ್ಸಿಗೆ ತಕ್ಕಂತೆ ಮಾತನಾಡಬೇಕು. ಚನ್ನಪಟ್ಟಣದಲ್ಲಿ ಸಿದ್ದರಾಮಯ್ಯನ ಗರ್ವಭಂಗ ಮಾಡ್ತೀನಿ ಅಂದ್ರು. ಹಲ್ಲುಮುರಿ ಕಚ್ಚಿಕೊಂಡು ಕಾಂಗ್ರೆಸ್‌ ಪಕ್ಷವನ್ನ ಕಿತ್ತೊಗೆಯಿರಿ ಅಂದ್ರು. ನೀವೆಲ್ಲ ನನ್ನ ಗರ್ವಭಂಗ ಮಾಡೋಕೆ ಬಿಡ್ತೀರಾ? ಅಂತ ಅಭಿಮಾನಿಗಳನ್ನ ಕೇಳಿದ್ರು.

    ಚನ್ನಪಟ್ಟಣದಲ್ಲಿ ಮಹಾನಾಯಕನ ಮೊಮ್ಮಗನನ್ನ, ಸಂಡೂರಿನಲ್ಲಿ ಮಾಜಿ ಸಿಎಂ ಬೊಮ್ಮಾಯಿ ಮಗನನ್ನ ಸೋಲಿಸಿದ್ದೇವೆ. ಬಿಜೆಪಿ, ಜೆಡಿಎಸ್ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬಂದಿರಲಿಲ್ಲ. ನಮ್ಮಿಂದ 2 ಬಾರಿ ಕುಮಾರಸ್ವಾಮಿ ಸಿಎಂ ಆಗಿದ್ರು. ಆದ್ರೆ ಹಿಂಬಾಗಿಲ ರಾಜಕಾರಣದ ಮೂಲಕ ಬಿಜೆಪಿ ಅಧಿಕಾರಕ್ಕೆ ಏರಿತು ಎಂದು ಕಿಡಿ ಕಾರಿದರು.

    ಬಿಜೆಪಿ 10 ಕೆಜಿ ಅಕ್ಕಿ ಕೊಡ್ತಿದ್ರೆ ರಾಜಕೀಯ ನಿವೃತ್ತಿ:
    ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿರುವುದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾತ್ರ. ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ 10 ಕೆಜಿ ಅಕ್ಕಿ ಕೊಡುತ್ತಿದ್ದರೆ ರಾಜಕೀಯ ನಿವೃತ್ತಿ ತಗೋತೀನಿ ಎಂದರಲ್ಲದೇ ಕುಮಾರಸ್ವಾಮಿ ಕಣ್ಣೀರಿನ ವಿಚಾರ ಕುರಿತು ವ್ಯಂಗ್ಯವಾಡಿದರು. ಕುಮಾರಸ್ವಾಮಿ ನೀವು ಕಣ್ಣೀರು ಹಾಕುತ್ತಿದ್ದೀರಲ್ಲ, ರೈತರಿಗಾಗಿ ನೀವು ಕಣ್ಣೀರು ಹಾಕಬಾರದಾ? ನಾವು ರೈತರಿಗಾಗಿ ಶೇ.4 ರಿಂದ ಶೂನ್ಯ ಬಡ್ಡಿದರಲ್ಲಿ ಸಾಲ ನೀಡುವ ಯೋಜನೆ ಕಲ್ಪಿಸಿದ್ದೇವೆ. ನಬಾರ್ಡ್‌ನಿಂದ ನಮಗೆ 800 ಕೋಟಿ ರೂ. ಅನುದಾನ ಬರಬೇಕು. ಇದಕ್ಕಾಗಿ ನಾನು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿ, ಮನವಿ ಮಾಡಿದೆ. ಆದ್ರೆ ದೇವೇಗೌಡರಾಗಲಿ, ಕುಮಾರಸ್ವಾಮಿ ಆಗಲಿ ಈ ಬಗ್ಗೆ ಚಕಾರ ಎತ್ತಲಿಲ್ಲವೆಂದುನುಡಿದರು.

    ಒಕ್ಕಲಿಗ ನಾಯಕರನ್ನ ತುಳಿದು ಹಾಕಿದ್ರು:
    ದೊಡ್ಡಗೌಡರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ನೀವು ಯಾವ ನಾಯಕರನ್ನೂ ಬೆಳೆಸಿಲ್ಲ. ಒಕ್ಕಲಿಗ ನಾಯಕರನ್ನ ತುಳಿದುಹಾಕಿದರು. ಬಚ್ಚೇಗೌಡ, ಬಿ.ಎಲ್‌. ಶಂಕರ್, ಕೃಷ್ಣಪ್ಪ ಸೇರಿದಂತೆ ಯಾರನ್ನೂ ಬೆಳೆಸಿಲ್ಲ. 1994ರಲ್ಲಿ ನಾನು-ಜಾಲಪ್ಪ ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿರಲ್ಲಿಲ್ಲ. ಜಾತ್ಯಾತೀತ ಜನಾತದಳ ನಾನು ದೇವೇವೇಗೌಡರು, ಜಾಲಪ್ಪ, ಬಿ.ಆರ್‌ ಪಾಟೀಲ್ ಎಲ್ಲರೂ ಸೇರಿ ಕಟ್ಟಿದ ಪಕ್ಷ. ಆದ್ರೆ ಅಹಿಂದ ಸಮಾವೇಶ ಮಾಡಿದ್ದಕ್ಕೆ ನನ್ನನು ಪಕ್ಷದಿಂದ ಉಚ್ಚಾಟನೆ ಮಾಡಿದ್ರು. ನಾನು ಪಕ್ಷವನ್ನು ಬಿಡಲಿಲ್ಲ. ಜಾತ್ಯಾತೀತ ಜನತಾದಳ ಕಟ್ಟಿದ್ದು ನಾವೇ ಎಂದು ಕೂಗಿ ಕೂಗಿ ಹೇಳಿದರು.

    ಮುಂದಿನ ಚುನಾವಣೆವರೆಗೂ ʻಗ್ಯಾರಂಟಿʼ:
    ಕೇಂದ್ರದಿಂದ ರಾಜ್ಯಕ್ಕೆ ಬರುವ ಯೋಜನೆಗಳಲ್ಲಿ ಅನ್ಯಾಯ ಮಾಡುತ್ತಿದ್ದಾರೆ. ನಮಗೆ ಬರಬೇಕಾದ ಹಣ ಬಿಡುಗಡೆ ಮಾಡುತ್ತಿಲ್ಲ, ನಾವು ಗ್ಯಾರಂಟಿಗಾಗಿ ಹಣ ಖರ್ಚು ಮಾಡುತ್ತೇವೆಂದು ಹಣ ಬಿಡುಗಡೆ ಮಾಡುತ್ತಿಲ್ಲ. ಆದ್ರೂ ನಾವು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಮುಂದಿನ ಚುನಾವಣೆವರೆಗೂ ಗ್ಯಾರಂಟಿ ಮುಂದುವರಿಸುತ್ತೇವೆ. ಮುಂದಿನ ಚುನಾವಣೆಯಲ್ಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.

    ದ್ವೇಷರಾಜಕಾರಣ ನಾವು ಮಾಡಲ್ಲ:
    ದ್ವೇಷ ರಾಜಕಾರಣ ನಾವು ಮಾಡುವುದಿಲ್ಲ. ದೇವೇಗೌಡರು ದ್ವೇಷ ರಾಜಕಾರಣ ಮಾಡುವುದು ಬಿಡಲಿ. ಅವರು ಒಳ್ಳೆಯ ರಾಜಕಾರಣ ಮಾಡಲಿ ಎಂದು ಮನವಿ ಮಾಡಿದ ಸಿಎಂ, ಬಿಜೆಪಿ-ಜೆಡಿಎಸ್ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನೀವು ದಾರಿ ತಪ್ಪಬೇಡಿ ಎಂದು ಜನರಿಗೆ ಮನವಿ ಮಾಡಿದರು.

  • ಕಳೆದ 50 ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ ಕೊಡುಗೆ ಏನು: ಹೆಚ್‌ಡಿ ರೇವಣ್ಣ ಪ್ರಶ್ನೆ

    ಕಳೆದ 50 ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ ಕೊಡುಗೆ ಏನು: ಹೆಚ್‌ಡಿ ರೇವಣ್ಣ ಪ್ರಶ್ನೆ

    – ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ
    -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ ಎಂದ ಶಾಸಕ

    ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್‌ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ (Hassan) ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ (HD Revanna) ಹೇಳಿದರು.

    ರಾಜಧಾನಿ ದೆಹಲಿಯಲ್ಲಿ `ಪಬ್ಲಿಕ್ ಟಿವಿ’ಯೊಂದಿಗೆ ಹಾಸನದ ಕಾಂಗ್ರೆಸ್ (Congress) ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ, ಶಕ್ತಿ ಪ್ರದರ್ಶನ ನಡೆಯುತ್ತಿದೆ. ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್‌ನವರ ಕೊಡುಗೆ ಏನು? ಕಾಂಗ್ರೆಸ್‌ನಿಂದ ಹಾಸನ ನಗರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ, ಅರಸೀಕೆರೆ ರೈಲು ಮಾರ್ಗ ಇರುತ್ತಿರಲಿಲ್ಲ, ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ

    ಈಗ ಏನು ಮಾತನಾಡಲ್ಲ 2028ಕ್ಕೆ ಮಾತನಾಡುತ್ತೇನೆ. ಇಂತಹ ಹತ್ತು ಸಮಾವೇಶ ಮಾಡಲಿ, ನಮಗೇನು ಪರಿಣಾಮ ಬೀರಲ್ಲ. ಜನರ ದೇವರ ಆಶೀರ್ವಾದ ಇದೆ. ಜೆಡಿಎಸ್ (JDS) ಕಂಡರೆ ಕಾಂಗ್ರೆಸ್‌ನವರು ಭಯ ಪಡುತ್ತಾರೆ. 2018ರಲ್ಲಿ ಯಾರು ಬಂದು ಕಾಲು ಕಟ್ಟಿದ್ದರೋ? ಹದಿನಾಲ್ಕು ತಿಂಗಳು ಆದಮೇಲೆ ಸರ್ಕಾರ ಯಾರು ತೆಗೆದರು? ಹಾಸನದಲ್ಲಿ ಲೋಕಸಭೆ ಚುನಾವಣೆ ಹೇಗಾಯಿತು? ಕಡೆಯ ಮೂರು ದಿನದಲ್ಲಿ ಏನಾಯಿತು? 2028 ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತದೆ. ಸಮಯ ಬಂದಾಗ ಮಾತನಾಡುತ್ತೀನಿ ಎಂದು ವಾಗ್ದಾಳಿ ನಡೆಸಿದರು.

    ಚನ್ನಪಟ್ಟಣದಲ್ಲಿ (Channapatna) ರಾಷ್ಟ್ರೀಯ ಪಕ್ಷಕ್ಕೆ ಅಭ್ಯರ್ಥಿ ಇರಲಿಲ್ಲ ಬಿಜೆಪಿಯಿಂದ ಕರೆ ತಂದರು. ಜೆಡಿಎಸ್, ದೇವೇಗೌಡರನ್ನು ಮುಗಿಸಲು ಯಾರಿಂದಲು ಸಾಧ್ಯವಿಲ್ಲ. ಸಮಾವೇಶದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಹೆದರಲ್ಲ. ಆರು ಬಾರಿ ಶಾಸಕನಾಗಿ ನಾನು ಇಂತಹದ್ದನ್ನು ಬಹಳ ನೋಡಿದ್ದೇನೆ. ಇದಕ್ಕೆಲ್ಲಾ ಹೆದರಿ ಓಡುವ ಮಾತೇ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಹಾಯುತಿ 2.0 ಸರ್ಕಾರ – ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಇಂದು ಪ್ರಮಾಣವಚನ

  • ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

    ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

    ಬೆಂಗಳೂರು: ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಜೆಡಿಎಸ್ (JDS) ಕೇಸ್ ಹಾಕಿಸಿತ್ತು ಎಂಬ ಡಿಸಿಎಂ ಡಿಕೆಶಿವಕುಮಾರ್ (DCM DK Shivakumar) ಹೇಳಿಕೆ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಡಿಕೆಶಿ ಹೇಳಿಕೆ ಖಂಡಿಸಿರುವ ಜೆಡಿಎಸ್ ಡಿಕೆಶಿವಕುಮಾರ್‌ರನ್ನು ಸುಳ್ಳಿನ ಶೂರ ಎಂದು ಲೇವಡಿ ಮಾಡಿದೆ. ಒಕ್ಕಲಿಗರ ದ್ರೋಹಿ ಕಾಂಗ್ರೆಸ್, ಒಕ್ಕಲಿಗರ ದ್ರೋಹಿ ಡಿಕೆಶಿವಕುಮಾರ್ ಎಂದು ವಾಗ್ದಾಳಿ ನಡೆಸಿದೆ.

    ಟ್ವೀಟ್‌ನಲ್ಲಿ ಏನಿದೆ?
    ಸುಳ್ಳಿನ ಶೂರ ಡಿಕೆ ಶಿವಕುಮಾರ್, ಒಕ್ಕಲಿಗ ಸಮುದಾಯ ಮತ್ತು ಪೂಜ್ಯ ಸ್ವಾಮೀಜಿ ಅವರಿಗೆ ನಿಮ್ಮ ಸರ್ಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಇನ್ನೊಬ್ಬರ ಮೇಲೆ ಕೆಸರೆರೆಚುತ್ತಿದ್ದೀರಿ, ಯಾಕೆ? ಪೂಜ್ಯ ಸ್ವಾಮೀಜಿ ಅವರ ಮೇಲೆ ನೀವು ಎಫ್‌ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ. ಬೀಸುವ ದೊಣ್ಣೆಯಿಂದ ಪಾರಾಗಲು ಜೆಡಿಎಸ್ ಬಗ್ಗೆ ಹೊಸ ಹುಳುಕು ಹುಡುಕುತ್ತಿದ್ದೀರಿ.ಇದನ್ನೂ ಓದಿ: ರಾಯಚೂರು | ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಜೆಡಿಎಸ್ ಸರ್ಕಾರವಿದ್ದಾಗ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಕೇಸ್ ಹಾಕಲಾಗಿತ್ತು ಎಂದು ಬಾಲಬುದ್ಧಿಯ ನೀವು ಬಡಬಡಿಸಿದ್ದೀರಿ! ಹಳೆಯ ವಿಷಯ ಕೆದಕಿದ ನಿಮಗೆ ಆ ಪ್ರಕರಣ ಏನು? ಅದು ಮುಂದೇನಾಯಿತು? ಎನ್ನುವ ಮಾಹಿತಿ ಇಲ್ಲವೇ? ಆ ಪ್ರಕರಣಕ್ಕೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಏನು? ಮುಂದೆ ಆ ಪ್ರಕರಣ ರದ್ದಾಯಿತು ನಿಮಗೆ ಗೊತ್ತಿಲ್ಲವೇ?

    ಪೂಜ್ಯ ಸ್ವಾಮೀಜಿ ಅವರ ವಿರುದ್ಧ ನಿಮ್ಮ ಇಡೀ ಕಾಂಗ್ರೆಸ್ ಸರ್ಕಾರ ತೊಡೆತಟ್ಟಿ ನಿಂತಿದೆ. ಸಚಿವರುಗಳೆಲ್ಲ ಅವರ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ಹೇಳಿಕೆಯ ಬಗ್ಗೆ ಪರಮಪೂಜ್ಯರು ವಿಷಾದ ವ್ಯಕ್ತಪಡಿಸಿದ ಮೇಲೆಯೂ ಅವರ ಮೇಲೆ ಸರ್ಕಾರ ಯಾರದೋ
    ನಿರ್ದಿಷ್ಟ ಚಿತಾವಣೆಗೆ ಒಳಗಾಗಿ ಕಾಲು ಕೆರೆದು ಜಗಳಕ್ಕೆ ನಿಂತಿದೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅಪಮಾನಕರವಾಗಿ ವರ್ತಿಸುತ್ತಿದೆ. ಓಲೈಕೆ ರಾಜಕೀಯ, ತುಷ್ಟೀಕರಣದ ಪರಾಕಾಷ್ಠೆ ಇದು.
    ಒಕ್ಕಲಿಗರಿಗೆ ಇದೆಲ್ಲಾ ಅರ್ಥವಾಗುತ್ತಿದೆ.
    ಒಕ್ಕಲಿಗ ವಿರೋಧಿ ಡಿಕೆಶಿಯವರೇ ನಿಮಗಿದು ತರವೇ?

    ಮಿಸ್ಟರ್ ಡಿಕೆಶಿಯವರೇ. ಒಕ್ಕಲಿಗರ ಅಸ್ಮಿತೆಯನ್ನು ಕೆಣಕಿದ್ದೀರಿ. ನಿಮ್ಮ ಸರ್ಕಾರ, ನಿಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯವನ್ನಾದರೂ ಮಾಡಿ. ಅಧಿಕಾರಕ್ಕಾಗಿ ಸಮುದಾಯದಿಂದ ಪೆನ್ನು ಪೇಪರ್ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಇದಕ್ಕೆ ನೀವು ಬೆಲೆ ತೆರುತ್ತೀರಿ.ಒಕ್ಕಲಿಗದ್ರೋಹಿ ಕಾಂಗ್ರೆಸ್, ಒಕ್ಕಲಿಗದ್ರೋಹಿ ಡಿಕೆಶಿ ಎಂದು ಜೆಡಿಎಸ್ ಕಿಡಿಕಾರಿದೆ.ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

  • ಸೋತಿದ್ದೀನಿ ಅಷ್ಟೇ, ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ನಡೆಸುತ್ತೇನೆ: ನಿಖಿಲ್

    ಸೋತಿದ್ದೀನಿ ಅಷ್ಟೇ, ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ನಡೆಸುತ್ತೇನೆ: ನಿಖಿಲ್

    ಬೆಂಗಳೂರು: ನಮ್ಮ ಪಕ್ಷದ ಆಧಾರ ಸ್ಥಂಭಗಳೇ ನಿಷ್ಠಾವಂತ ಕಾರ್ಯಕರ್ತರುಗಳು. ರಾಮನಗರ ಜಿಲ್ಲೆ ನಮಗೆ ರಾಜಕೀಯ ಜೀವನ ನೀಡಿದೆ. ನನ್ನ ಜೀವನವೇ ಹೋರಾಟ, ನಾನು ಸಮುದ್ರದ ಅಲೆಗಳ ವಿರುದ್ಧ ಈಜುವ ಅಭ್ಯಾಸವನ್ನು ಹೊಂದಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯ ಪಟ್ಟಿದ್ದಾರೆ.

    ಬಿಡದಿಯ ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು. 2019 ರಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ಗೊತ್ತಿದೆ. ನನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವವರ ಬಗ್ಗೆ ನಾನು ಎಂದಿಗೂ ಹಗುರವಾಗಿ ಮಾತನಾಡಿಲ್ಲ. ನಾನು ಯುವಕನಾಗಿದ್ದೇನೆ. ಯುವ ಸಮುದಾಯದ ಪೀಳಿಗೆಗೆ ನನ್ನದೇ ಆದ ಕೊಡುಗೆ ನೀಡಬೇಕೆನ್ನುವುದು ನನ್ನ ಆಶಯ ಎಂದು ತಿಳಿಸಿದರು. ಇದನ್ನೂ ಓದಿ: ಯತ್ನಾಳ್ ಒಬ್ಬ ಜೋಕರ್, ಮಾನಸಿಕ ರೋಗಿ: ಈಶ್ವರ್ ಖಂಡ್ರೆ

    ಸೋತಿದ್ದೀನಿ ಅಷ್ಟೇ, ಸತ್ತಿಲ್ಲ
    ನಾನು ಭಾವನಾತ್ಮಕ ಮನುಷ್ಯ. ಕುಮಾರಣ್ಣ ರೀತಿ ನಾನು ಜನರೊಂದಿಗೆ ಭಾವನಾತ್ಮಕವಾಗಿ ಅಂಟಿಕೊಂಡಿದ್ದೇನೆ. ನಾವು ಮುಂದಿನ ಸಾರ್ವತ್ರಿಕ ಚುನಾವಣೆಗೆ ಸಿದ್ಧರಾಗಬೇಕು. ನನಗೆ ಕೇವಲ 36 ವರ್ಷ. ನನಗಿದು ಚಿಕ್ಕ ವಯಸ್ಸು. ದಯವಿಟ್ಟು ನನ್ನನ್ನು ಬಳಸಿಕೊಳ್ಳಿ, ನಾನು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್ ತಿಳಿಸಿದರು.

    ರಾಮನಗರ ಜಿಲ್ಲೆಯು ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದೀರಾ. ಚುನಾವಣೆಯಲ್ಲಿ ಏಳು-ಬೀಳು ಸರ್ವೆ ಸಾಮಾನ್ಯ. ಮುಂದಿನ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಈಗಾಗಲೇ ನನ್ನ ಬೇಷರತ್ ಬೆಂಬಲ ನೀಡಿದ್ದೇನೆ: ‘ಮಹಾ’ ಸಿಎಂ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗೆ ಶಿಂಧೆ ಬೆಂಬಲ

    ಸಭೆಗೂ ಮುನ್ನ ತಂಬಾಕು ಬೆಳೆಯುವ ರೈತರ ಜತೆ ಸಭೆ ನಡೆಸಿದರು. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ತಂಬಾಕು ಬೆಳೆದ ರೈತರು ಬೆಳೆಗೆ ಸೂಕ್ತ ಬೆಂಬಲ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದೇವೆ. ನಮಗೆ ಸೂಕ್ತ ಬೆಂಬಲ ಕೊಡಿಸಿ ಎಂದು ಕೇಂದ್ರ ಸಚಿವರು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

    ತಂಬಾಕು ಬೆಳೆಗಾರರಿಗೆ ಭರವಸೆ
    ತಂಬಾಕು ಬೆಳೆಗಾರರು ಕಡಿಮೆ ದರ್ಜೆಯ ತಂಬಾಕಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗ್ತಿಲ್ಲ ಮತ್ತು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದಕ್ಷಿಣ ಕರ್ನಾಟಕದ ಅದರಲ್ಲೂ ಹಳೆ ಮೈಸೂರು ಭಾಗದ ಬಹುತೇಕ ತಂಬಾಕು ಬೆಳೆದ ರೈತರು ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ. ಕೇಂದ್ರ ಸಚಿವರು ಕುಮಾರಣ್ಣ ಅವರಿಗೆ ಭರವಸೆ ನೀಡಿದ್ದಾರೆ ಎಂದರು.

    ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ
    ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ. ಪ್ರಾದೇಶಿಕ ಪಕ್ಷ ಉಳಿಯಬೇಕಿದೆ. ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಖಿಲ್‌ ಕುಮಾರಸ್ವಾಮಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುತ್ತೇನೆ ಎಂದರು. ಇದನ್ನೂ ಓದಿ: ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಇದೇನಾ ನಿಮ್ಮ ಕಾನೂನು – ಸಿ.ಟಿ ರವಿ ಕಿಡಿ

    ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್‌. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ ಎಂದರು. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ದವಾಗಿತ್ತು, ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು, ಪಕ್ಷ ಸಂಕಷ್ಟದಲ್ಲಿತ್ತು. ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಹೇಳಿದರು.

    ನಿಮ್ಮಲ್ಲರ ಆಶೀರ್ವಾದದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

  • ಜೆಡಿಎಸ್ ತೊರೆದು ಬಿಜೆಪಿ ಸೇರಿದ ಮಾಜಿ ಎಂಎಲ್‌ಸಿ ಘೋಟ್ನೇಕರ್

    ಜೆಡಿಎಸ್ ತೊರೆದು ಬಿಜೆಪಿ ಸೇರಿದ ಮಾಜಿ ಎಂಎಲ್‌ಸಿ ಘೋಟ್ನೇಕರ್

    ಕಾರವಾರ: ರಾಜ್ಯದಲ್ಲಿ ಜೆಡಿಎಸ್‌ನಲ್ಲಿ ಭಿನ್ನಮತ ಏಳುತ್ತಿದ್ದಂತೆ ಇತ್ತ ಜೆಡಿಎಸ್ ನಾಯಕರು ಬಿಜೆಪಿಯತ್ತ ವಾಲುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಎಸ್.ಎಲ್.ಘೋಟ್ನೇಕರ್ ಬಿಜೆಪಿ ಸೇರಿದ್ದಾರೆ.

    ಶನಿವಾರ ಶಿರಸಿಯ ಬಿಜೆಪಿ ಕಚೇರಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ನೇತೃತ್ವದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

    ಹಳಿಯಾಳದ ಮರಾಠ ಮುಖಂಡ ಹಾಗೂ ಎರಡು ಬಾರಿ ಎಂಎಲ್‌ಸಿ ಜೊತೆಗೆ ಜಿಲ್ಲಾ KDC ಬ್ಯಾಂಕ್‌ನಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಎಸ್.ಎಲ್.ಘೋಟ್ನೇಕರ್ ಇದೀಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದರು.

    ಘೋಟ್ನೇಕರ್ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಂತೆ ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದು, ಸೇರ್ಪಡೆ ಕಾರ್ಯಕ್ರಮಕ್ಕೂ ಗೈರಾಗಿದ್ದರು‌. ಹೀಗಾಗಿ, ಹಳಿಯಾಳ ಕ್ಷೇತ್ರದಲ್ಲಿ ಬಿಜೆಪಿ ಎರಡು ಹೋಳಂತಾಗಿದ್ದು, ಅಸಮಾಧಾನ ಬುಗಿಲೆದ್ದಿದೆ.

  • ಚನ್ನಪಟ್ಟಣ ಸೋಲಿನ ಹೊಣೆ ನಾನೇ ಹೊರುತ್ತೇನೆ.. ನಾವು ರಣಹೇಡಿಗಳಲ್ಲ, ರಣಧೀರರು: ಹೆಚ್‌ಡಿಕೆ

    ಚನ್ನಪಟ್ಟಣ ಸೋಲಿನ ಹೊಣೆ ನಾನೇ ಹೊರುತ್ತೇನೆ.. ನಾವು ರಣಹೇಡಿಗಳಲ್ಲ, ರಣಧೀರರು: ಹೆಚ್‌ಡಿಕೆ

    – ಜೆಡಿಎಸ್‌ ಮುಗಿಸೋದಕ್ಕೆ ಹಾಸನದಲ್ಲಿ ಸಮಾವೇಶ ಮಾಡ್ತಿದ್ದೀರಾ?: ಕಾಂಗ್ರೆಸ್‌ ವಿರುದ್ಧ ಗರಂ
    – ದೇವೇಗೌಡರ ಕುಟುಂಬದ ಮೇಲಿನ ಒಕ್ಕಲಿಗರ ಪ್ರೀತಿ ಕಿತ್ತು ಹಾಕಲು 10 ಜನ್ಮ ಎತ್ತಿ ಬಂದ್ರೂ ಸಾಧ್ಯವಿಲ್ಲ

    ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಸೋಲಿನ ಹೊಣೆ ಕಾರ್ಯಕರ್ತರು, ಮುಖಂಡರದ್ದಲ್ಲ, ಈ ಬೈಎಲೆಕ್ಷನ್ ಸೋಲಿನ ಜವಾಬ್ದಾರಿಯನ್ನ ನಾನು ವೈಯಕ್ತಿಕವಾಗಿ ತೆಗೆದುಕೊಳ್ತೇನೆ. ನಾವು‌ ಮಾಡಿದ ಕೆಲ ವಿಳಂಬದ ನಿರ್ಧಾರವೂ ಇದಕ್ಕೆ ಕಾರಣ ಆಗಿರಬಹುದು. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು ಕೆಲಸ ಮಾಡ್ತೇವೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದರು.

    ಮಂಡ್ಯ ಲೋಕಸಭೆಗೆ ನಿಖಿಲ್ ನಿಲ್ಲಸಬೇಕು ಅಂತಾ ಸಾರಾ ಮಹೇಶ್ ಒತ್ತಡ ಹಾಕಿದ್ರು. ಆಗ ನಿಖಿಲ್ ನಾನು ಸ್ಪರ್ಧೆ ಮಾಡಲ್ಲ ಅಂದ್ರು. ರಾಮನಗರ ಜಿಲ್ಲೆಯಲ್ಲೇ ಮುಂದಿ‌ನ ಹೋರಾಟ ಮಾಡ್ತೀನಿ ಅಂದಿದ್ರು‌. ಆ ಹಿನ್ನೆಲೆಯಲ್ಲಿ ನಾನು‌ ಮಂಡ್ಯದಿಂದ ಸ್ಪರ್ಧೆ ಮಾಡಿದೆ. ನಿಖಿಲ್ ಅಧಿಕಾರಕ್ಕಾಗಿ ನಿಂತಿದ್ರೆ ಮಂಡ್ಯದಲ್ಲಿ ನಿಂತು ಗೆಲ್ತಿದ್ರು. ಆದರೆ ದೇವರ ಇಚ್ಛೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಚಿವ ಸ್ಥಾನ ಉಳಿಸಿಕೊಳ್ಳಲು 1 ತಿಂಗಳ ಮೊದಲೇ ರಿಪೋರ್ಟ್‌ ಕಾರ್ಡ್‌ ಸಲ್ಲಿಸಿದ ಬೋಸರಾಜು

    ನಮ್ಮನ್ನ ಟೂರಿಂಗ್ ಟಾಕೀಸ್ ಅಂತಾರೆ. ರಾಜ್ಯದಲ್ಲಿ ಯಾವುದೇ ಕಡೆ ನಿಂತು ಗೆದ್ದು ಬರೋ ಶಕ್ತಿ ಇದ್ರೆ ಅದು ದೇವೇಗೌಡರ ಕುಟುಂಬಕ್ಕೆ ಮಾತ್ರ. ಈ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಅನಿರೀಕ್ಷಿತ. ಅವರನ್ನೇ ನಿಲ್ಲಿಸಬೇಕು ಅನ್ನೋದಿದ್ದಿದ್ರೆ ನಾನು ಕ್ಷೇತ್ರದಿಂದ ಹೋದಾಗಲೇ ನಿಖಿಲ್‌ಗೆ ವೇದಿಕೆ ಸಿದ್ಧ ಮಾಡ್ತಿದ್ದೆ. ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿಕೊಂಡು ಅಧಿಕಾರಕ್ಕೆ ಬಂದಿದೆ. ಈಗ ಗೆದ್ದಿರೋ ಅಭ್ಯರ್ಥಿ ಯಾವ ರೀತಿ ನಾಟಕ ಆಡಿದ್ರೂ ಗೊತ್ತಿದೆ. ಎಲ್ಲದಕ್ಕೂ ಮುಂದಿ‌ನ ಚುನಾವಣೆಯಲ್ಲಿ ಉತ್ತರ ಕೊಡ್ತೇವೆ. ಸಿಪಿವೈ, ದೇವೇಗೌಡರು ರಾಜಕೀಯ ಬಿಡಲಿ ಅಂತಾರೆ. ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ ಬಳಿಕ ಮಣ್ಣಿನ ಮಕ್ಕಳು ಅಂತಾ ನಮ್ಮ ಬಗ್ಗೆ ಮಾತನಾಡಿದ್ದಾರೆ‌. ಅವರಿಗೆ ನಮ್ಮ ಮೇಲೆ ಎಷ್ಟು ಭಯ ಇದೆ ನೋಡಿ. ಇಲ್ಲಿನ ಮಹಾನುಭಾವ ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಲಿ ಅಂತಾರೆ. ದೇವೇಗೌಡರ ಧ್ವನಿ ಇಲ್ಲದಿದ್ರೆ ರಾಜ್ಯ ಎಲ್ಲಿ ಇರ್ತಿತ್ತು ಗೊತ್ತಾ ಎಂದು ಕಿಡಿಕಾರಿದರು.

    ಈಗ ಯಾವುದೋ ಸಿದ್ದರಾಮೋತ್ಸವ ಮಾಡ್ತಾರಂತೆ. ಯಾವ ಉದ್ದೇಶಕ್ಕೆ ಮಾಡ್ತಿದ್ದೀರಿ. ಏನು ಸಂದೇಶ ಕೊಡೋಕೆ ಅಹಿಂದ ಸಮಾವೇಶ ಮಾಡ್ತಿದ್ದೀರಿ. ಒಂದೂವರೆ ವರ್ಷದ ಸರ್ಕಾರದಲ್ಲಿ ಆ ಸಮುದಾಯಕ್ಕೆ ಏನು ಮಾಡಿದ್ದೀರಿ? ಸಿದ್ದರಾಮಯ್ಯ ದಲಿತರಿಗೆ ಏನು ಯೋಜನೆ ಕೊಟ್ಟಿದ್ದೀರಿ. ವಾಲ್ಮೀಕಿ ಸಮುದಾಯದ ಹಣ ನುಂಗಿದ್ದೀರಿ. ಈಗ ಭೋವಿ ಸಮುದಾಯದ ಹಣ ತಿಂತಿದ್ದೀರಿ. ಈ ಸರ್ಕಾರಕ್ಕೆ ನಾಚಿಕೆ ಆಗಲ್ವಾ? ಜೆಡಿಎಸ್‌ ಮುಗಿಸೋದಕ್ಕೆ ಹಾಸನದಲ್ಲಿ ಸಮಾವೇಶ ಮಾಡ್ತಿದ್ದೀರಾ? ದಲಿತರಿಗೆ ಏನು ಕೊಡುಗೆ ನೀಡಿದ್ದೀರಿ ಹೇಳಿ. ಆ ಸಮುದಾಯಕ್ಕೆ ಯಾವಾಗ ಬುದ್ದಿ ಬರುತ್ತೋ ಗೊತ್ತಿಲ್ಲ. ನಿಮ್ಮ ಪ್ರಿಯಾಂಕಾ ಗಾಂಧಿ ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡ್ತಿಲ್ಲ. ನೀವು ಸಂವಿಧಾನದ ಆಶಯ ಉಳಿಸ್ತೀರಾ? ನಿಮ್ಮ ಸಚಿವರಿಗೆ ಮಾನ ಮರ್ಯಾದೆ ಇದ್ಯಾ? ಯಾವುದೊ ಮೆಡಿಷನ್ ಕೊಟ್ಟು ಬಳ್ಳಾರಿಯಲ್ಲಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಸರ್ಕಾರದ ಯಾರಾದ್ರೂ ಪ್ರತಿನಿಧಿ ಹೋಗಿದ್ದೀರಾ? ನಿಮಗೆ ನಾಚಿಕೆ ಆಗಲ್ವಾ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಾಕತ್ತಿದ್ರೆ ಯತ್ನಾಳ್‌ನ ಉಚ್ಚಾಟಿಸಿ – ವಿಜಯೇಂದ್ರಗೆ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲ್‌

    ಈ ಮೂರು ಬೈಎಲೆಕ್ಷನ್ ಮೇಲೆ ಫಲಿತಾಂಶದಿಂದ ಎಲ್ಲಾ ನಿರ್ಧಾರ ಆಗಲ್ಲ. ಈಗ 138 ಸ್ಥಾನದಲ್ಲಿದ್ದೀರಿ. ಮುಂದಿನ ಚುನಾವಣೆಯಲ್ಲಿ ಕೇವಲ 38 ಸ್ಥಾನ ಗೆದ್ದು ತೋರಿಸಿ. ಈಗ ಗೆದ್ದಿರೋ ಆಸಾಮಿ ನಮಗೂ, ಬಿಜೆಪಿಗೂ ಟೋಪಿ ಹಾಕಿ ಹೋದ್ರು. ನಮ್ಮನ್ನ ರಣಹೇಡಿ ಅಂದವ್ರೆ. ದೇವೇಗೌಡರ ಕುಟುಂಬ ರಣಧೀರರ ರೀತಿ ಹೋರಾಟ ಮಾಡ್ತಾರೆ. ನಿಮಗೋಸ್ಕರ ನಿಖಿಲ್ ಕುಮಾರಸ್ವಾಮಿ ಇಲ್ಲಿ ಬಂದು ತಲೆ ಕೊಟ್ಟ. ಕಾರ್ಯಕರ್ತರ ಉಳಿಸಲು ಸ್ಪರ್ಧೆ ಮಾಡಿದ. ನಿಖಿಲ್ ಕುಮಾರಸ್ವಾಮಿ ರಣಧೀರನಾಗಿ ಹೋರಾಟ ಮಾಡಲು ಸ್ಪರ್ಧೆ ಮಾಡಿದ. ಏನೋ ಜೆಡಿಎಸ್ ಮುಗಿಸ್ತೀನಿ ಅಂತಾರೆ. ಈ ಪಕ್ಷ ಉಳಿದಿರೋದೆ ಒಕ್ಕಲಿಗ ಸಮಾಜದಿಂದ. ಮಂಡ್ಯದಲ್ಲಿ ಗೆಲ್ಲಲು ಈ ಸಮುದಾಯ ಕಾರಣ. ದೇವೇಗೌಡರ ಕುಟುಂಬದ ಮೇಲಿನ ಒಕ್ಕಲಿಗರ ಪ್ರೀತಿ ಕಿತ್ತು ಹಾಕಲು ಇನ್ನೂ 10 ಜನ್ಮ ಎತ್ತಿ ಬಂದ್ರೂ ಸಾಧ್ಯವಿಲ್ಲ. ದೇವೇಗೌಡರು ಪ್ರಧಾನಿ, ಸಿಎಂ ಆಗಲು ಈ ಸಮುದಾಯ ಕಾರಣ. ಆದರೆ ನಾವು ಯಾವತ್ತೂ ಜಾತಿ ರಾಜಕೀಯ ಮಾಡಿಲ್ಲ. ನಮ್ಮ ಬಗ್ಗೆ ಮಾತನಾಡುವ ಈ ಮಹಾನುಭಾವರು ನಿಮ್ಮ ಆತ್ಮಕ್ಕೆ ಪ್ರಶ್ನೆ ಮಾಡಿಕೊಳ್ಳಿ ಎಂದು ತಿರುಗೇಟು ನೀಡಿದರು.

  • ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್

    ನಾನು ಸಂಸದನಾಗಲು, ಶಾಸಕನಾಗಲು ಎಂದೂ ಹಪಹಪಿಸಿಲ್ಲ: ನಿಖಿಲ್

    ಹಾಸನ: ನಾನು ಸಂಸದನಾಗಲು, ಶಾಸಕನಾಗಲು ಎಂದು ಕೂಡ ಹಪಹಪಿಸಿಲ್ಲ. ಹಾಗಿದ್ದರೆ ನಾನು ಚಿತ್ರರಂಗಕ್ಕೆ ಹೋಗುತ್ತಿರಲಿಲ್ಲ. ರಾಜಕಾರಣಕ್ಕೆ ಬರುತ್ತಿದ್ದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

    ಹಾಸನ (Hassan) ಜಿಲ್ಲೆ, ಅರಕಲಗೂಡಿನಲ್ಲಿ ಮಾಜಿಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ ಕುಟುಂಬದ ಮಗನಾಗಿ ಜನಿಸಿರುವ ದೇವೇಗೌಡರನ್ನು ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿಯನ್ನು ತುಂಬಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. ನಿಮ್ಮ ಹೃದಯದಲ್ಲಿ ನಮ್ಮ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ, ಗೌರವ ಎಷ್ಟು ಜನ್ಮ ಎತ್ತಿ ಬಂದರೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಋಣಕ್ಕಾಗಿ ಪ್ರಾಮಾಣಿಕವಾಗಿ ನಮ್ಮ ಇಡೀ ಪಕ್ಷ, ನಮ್ಮ ಕುಟುಂಬ ನಿಮ್ಮ ಜೊತೆಯಲ್ಲಿ ಸದಾಕಾಲ ಇರುತ್ತೇವೆ. ರಾಮನಗರ ಜಿಲ್ಲೆಯ ಜನತೆ ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಕಲ್ಟ್ ಚಿತ್ರತಂಡದ ಯಡವಟ್ಟು – ಸಚಿವ ಜಮೀರ್ ಪುತ್ರ ಜೈದ್ ಖಾನ್ ವಿರುದ್ಧ ದೂರು

    ಚುನಾವಣೆಯಲ್ಲಿ ಏಳುಬೀಳು ಸರ್ವೇ ಸಾಮಾನ್ಯ. ನಾನು ರಾಜಕಾರಣದ ಹಿನ್ನೆಲೆಯಲ್ಲಿ ಬಂದಿರುವ ವ್ಯಕ್ತಿಯಾಗಿದ್ದರೂ ಚಿತ್ರರಂಗದಲ್ಲಿ ನನ್ನದೇ ಆದಷ್ಟು ಸವಾಲುಗಳನ್ನು ಸ್ವೀಕಾರ ಮಾಡಿದೆ. ಜಾಗ್ವಾರ್ ಮೂಲಕ ನಮ್ಮ ತಂದೆ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು, ಅನೇಕ ಚಿತ್ರಗಳನ್ನು ಮಾಡಿದೆ. ತದನಂತರ ಸಾರ್ವಜನಿಕ ಬದುಕಿನಲ್ಲಿ ಜವಾಬ್ದಾರಿಗಳನ್ನು ಅರಿತಿದ್ದೇನೆ. ಆ ಒಂದು ಕಾರಣದಿಂದ ಸಂಪೂರ್ಣವಾಗಿ ಸಾರ್ವಜನಿಕ ಬದುಕಿಗೆ ಧುಮುಕಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    ದೇವೇಗೌಡರಿಗೆ 92 ವಯಸ್ಸಾದರೂ ರಾಜ್ಯಸಭೆಯಲ್ಲಿ ಏಕಾಂಗಿಯಾಗಿ ನೆಲ, ಜಲ, ಭಾಷೆ ಉಳಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಜೀವನದ ಸ್ಪೂರ್ತಿ ದೇವೇಗೌಡರು. ನನ್ನ ಜವಾಬ್ದಾರಿಯನ್ನು ಅರಿತಿದ್ದೇನೆ. ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ಧವಾಗಿತ್ತು. ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು. ಆದರೆ ಇಲ್ಲಿಯವರೆಗೂ ನಾನು, ಪಕ್ಷ ಸಂಕಷ್ಟದಲ್ಲಿತ್ತು. ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. 19 ಸ್ಥಾನ ಗೆದ್ದು 18ಕ್ಕೆ ಇಳಿದಿದ್ದೇವೆ. ನಿಮ್ಮೆಲ್ಲರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ನುಡಿದರು. ಇದನ್ನೂ ಓದಿ: ವಿಶೇಷ ಚೇತನರ ಅನುದಾನಕ್ಕೂ ಸರ್ಕಾರ ಕೊಕ್ಕೆ – 80% ರಷ್ಟು ಅನುದಾನ ಕಡಿತ ಆರೋಪ!

    ನಾನು ಸೋತು ಒಂದು ವಾರ ಆಗಿದೆ. ನೀವು ಎದೆಗುಂದಬಾರದು ಎಂದು ಅನೇಕರು ಹೇಳಿದ್ದಾರೆ. ನನಗಿನ್ನು 36 ವರ್ಷ. ನನ್ನ ಮುಂದೆ ಇರುವುದು ಒಂದೇ ಸವಾಲು. ಜನತಾದಳ ಪಕ್ಷವನ್ನು ದಡ ಮುಟ್ಟಿಸಬೇಕು. ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ. ಪ್ರಾದೇಶಿಕ ಪಕ್ಷ ಉಳಿಯಬೇಕಿದೆ. ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆ ಹಿನ್ನೆಲೆಯಲ್ಲಿ ಹೋರಾಟ ಮಾಡುತ್ತೇನೆ. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮಾತನಾಡಲು ವೇದಿಕೆಗಳು ಮುಂದಿನ ದಿನಗಳಲ್ಲಿ ಸಜ್ಜಾಗುತ್ತದೆ. ಹೋರಾಟ ಎನ್ನುವುದನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಒಬ್ಬ ಯುವಕನಾಗಿ ನಿಖಿಲ್ ಕುಮಾರಸ್ವಾಮಿ ನಿಮ್ಮ ಜೊತೆಯಲ್ಲಿ ಪ್ರಾಮಾಣಿಕವಾಗಿ ಇರುತ್ತಾನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Davanagere| ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ ಸುಟ್ಟು ಕರಕಲು

  • ನ.30ರಂದು ನಿಖಿಲ್ ಕುಮಾರಸ್ವಾಮಿ ಕೃತಜ್ಞತಾ ಸಭೆ

    ನ.30ರಂದು ನಿಖಿಲ್ ಕುಮಾರಸ್ವಾಮಿ ಕೃತಜ್ಞತಾ ಸಭೆ

    ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಬಳಿಕ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮತದಾರರಿಗೆ ಕೃತಜ್ಞತೆ ತಿಳಿಸಲು ಇದೇ ನ.30ರಂದು ಕೃತಜ್ಞತಾ ಸಭೆ ಹಮ್ಮಿಕೊಂಡಿದ್ದಾರೆ.

    ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ನಿಖಿಲ್ ಕುಮಾರಸ್ವಾವಿ ಪರಾಭವಗೊಂಡಿದ್ದರು. 87 ಸಾವಿರಕ್ಕೂ ಅಧಿಕ ಮತಗಳನ್ನ ಪಡೆದಿದ್ದ ನಿಖಿಲ್ ಕುಮಾರಸ್ವಾಮಿ ಮತದಾರರಿಗೆ ಧನ್ಯವಾದ ತಿಳಿಸಲು ಚನ್ನಪಟ್ಟಣದ ಖಾಸಗಿ ರೆಸಾರ್ಟ್‌ನಲ್ಲಿ ಕೃತಜ್ಞತಾ ಸಮಾರಂಭ ನಡೆಸಲಿದ್ದಾರೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಆರ್‌.ಅಶೋಕ್‌

    ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಿ ಚುನಾವಣೆ ಸೋಲಿನ ಬಗ್ಗೆ ಪರಾಮರ್ಶೆ ಮಾಡಲಿದ್ದಾರೆ. ಜೊತೆಗೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಧೈರ್ಯ ತುಂಬಲು ದಳಪತಿಗಳು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯಾಧ್ಯಕ್ಷ ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡ ವಿಡಿಯೋ ನನ್ನ ಬಳಿ ಇದೆ: ಯತ್ನಾಳ್ ವಾಗ್ದಾಳಿ