Tag: jds

  • ಸರ್ಕಾರಿ ಶಾಲೆಗೆ 25 ಎಕರೆ ದಾನ ಮಾಡಲು ಮಹಾರಾಜರ ವಂಶಸ್ಥರಾ? – ಡಿಕೆಶಿ ವಿರುದ್ಧ ಹೆಚ್‌ಡಿಕೆ ಕೆಂಡ

    ಸರ್ಕಾರಿ ಶಾಲೆಗೆ 25 ಎಕರೆ ದಾನ ಮಾಡಲು ಮಹಾರಾಜರ ವಂಶಸ್ಥರಾ? – ಡಿಕೆಶಿ ವಿರುದ್ಧ ಹೆಚ್‌ಡಿಕೆ ಕೆಂಡ

    ರಾಮನಗರ: ಸರ್ಕಾರಿ ಶಾಲೆಗೆ 25 ಎಕರೆ ದಾನ ಮಾಡಲು ದೊಡ್ಡ ಮಹಾರಾಜರ ವಂಶಸ್ಥರ? ಜನರ ಮುಂದೆ ಎಲ್ಲವನ್ನೂ ಇಡಲಿ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

    ಸರ್ಕಾರಿ ಶಾಲೆಗೆ 25 ಎಕರೆ ದಾನ ನೀಡೀದ್ದೇನೆ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಮಂಕುಂದ ಗ್ರಾಮದಲ್ಲಿ ಮಾತನಾಡಿದ ಅವರು, ನಾನು ದುಡ್ಡು ಕೊಟ್ಟಿಲ್ಲ, ಆದರೆ ರಾಜ್ಯಕ್ಕೆ ಶಿಕ್ಷಣ ಇಲಾಖೆ ಕಾರ್ಯಕ್ರಮ ಕೊಟ್ಟಿದ್ದೇನೆ. ನಾನು ಸಿಎಂ ಆಗುವ ಮೊದಲು ಕಾಲೇಜು, ಹೈಸ್ಕೂಲ್ ಎಷ್ಟಿತ್ತು? 20 ತಿಂಗಳು ಸಿಎಂ ಆದಾಗ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಏನು? 20 ವರ್ಷ ರಾಜ್ಯ ಆಳಿ ಇವರ ಕೊಡುಗೆ ಏನು? ಜನರು ದೊಡ್ಡಾಲಹಳ್ಳಿಯಲ್ಲಿ ಮತ ಕೊಡಲ್ಲ ಯಾಕೆ? ಇವರು 25 ಎಕರೆ ಕೊಟ್ಟಿದ್ದಾರೋ, 25 ಗುಂಟೆ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಜನ ಸೇವಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನವರ ಗೊಡ್ಡು ಬೆದರಿಕೆಗೆ ನಾವು ಜಗ್ಗಲ್ಲ: ಶ್ರೀರಾಮುಲು

    ಸರ್ಕಾರ ಕಿತ್ತೊಗೆಯಲು ಕಡಲೆಕಾಯಿ ಗಿಡ ಅಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಕಡಲೆಕಾಯಿ ಗಿಡ ಕೀಳುತ್ತೇವೆ ಎಂದಿಲ್ಲ. ಸರ್ಕಾರವನ್ನೆ ಕಿತ್ತೊಗೆಯುತ್ತೇವೆ ಎಂದಿರೋದು. ಈ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕು ಎಂಬುದು ಜನರ ಆಸೆ. ಜನರ ಭಾವನೆಯನ್ನ ದೇವೇಗೌಡರು ಹೇಳಿದ್ದಾರೆ ಎಂದರು. ಇದನ್ನೂ ಓದಿ: ಕಾರವಾರ| ಜೆಸಿಬಿ ಆಪರೇಟರ್ ಮೇಲೆ ಕಾಡುಹಂದಿ ದಾಳಿ

    ಮೈಸೂರಿನಲ್ಲಿ ಚಲುವರಾಯಸ್ವಾಮಿ ಕಿತ್ತಾಟದ ವಿಚಾರವಾಗಿ ಮಾತನಾಡಿದ ಅವರು, ಟ್ರಾನ್ಸಫರ್‌ನ ದುಡ್ಡಿನ ವ್ಯವಹಾರಕ್ಕೆ ಕಿತ್ತಾಡಿಕೊಂಡಿದ್ದಾರೆ. ಇದರ ಬಗ್ಗೆ ಸರ್ಕಾರವೇ ಹೇಳಬೇಕು ಅಷ್ಟೇ. ಓಪನ್ ಆಗಿ ಮಂತ್ರಿಯನ್ನ ಹೊಡೆಯುತ್ತಾರೆ ಅಂದರೆ ರಾಜ್ಯ ಎಲ್ಲಿಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: `ಭಾಗ್ಯಲಕ್ಷ್ಮಿ’ ಯೋಜನೆಗೆ ಹಣ ಕೊಡಲಾರದಷ್ಟೂ ಸರ್ಕಾರ ದಿವಾಳಿಯಾಗಿದೆ: ಬಿಎಸ್‌ವೈ ಕಿಡಿ

    ಮೇಕೆದಾಟಿಗೆ ಪರ್ಮಿಷನ್ ಕೊಟ್ಟರೆ ಮೂರೇ ವರ್ಷದಲ್ಲಿ ಅಣೆಕಟ್ಟು ನಿರ್ಮಾಣ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಮೊದಲು ಅವರ ಅಂಗ ಪಕ್ಷ ತಮಿಳುನಾಡಿನಲ್ಲಿ ಪರ್ಮಿಷನ್ ತೆಗೆದುಕೊಳ್ಳಬೇಕು. ತಮಿಳುನಾಡಿನಲ್ಲಿ ಪರ್ಮಿಷನ್ ತೆಗೆದುಕೊಂಡು ಬರಲಿ. ನಂತರ ನಾನು ಡೆಲ್ಲಿಯಲ್ಲಿ ಪರ್ಮಿಷನ್ ಕೊಡಿಸುತ್ತೇನೆ ಎಂದರು. ಇದನ್ನೂ ಓದಿ: ವಕ್ಫ್ ವಿಚಾರವಾಗಿ ಅಧಿಕಾರಿಗಳ ಪತ್ರ ವ್ಯವಹಾರ – ದಾಖಲೆ ಬಿಡುಗಡೆ ಮಾಡಿದ ಅಶೋಕ್

  • ಕೊತ್ವಾಲ್‌ ಬಳಿ 100 ರೂ.ಗೆ ಕೆಲಸ ಮಾಡ್ತಿದ್ದ ಡಿಕೆ ಕಣ್ಣೀರು ಹಾಕಿರೋದು ನೋಡಿದ್ದೀರಾ? – ಹೆಚ್‌ಡಿಡಿ

    ಕೊತ್ವಾಲ್‌ ಬಳಿ 100 ರೂ.ಗೆ ಕೆಲಸ ಮಾಡ್ತಿದ್ದ ಡಿಕೆ ಕಣ್ಣೀರು ಹಾಕಿರೋದು ನೋಡಿದ್ದೀರಾ? – ಹೆಚ್‌ಡಿಡಿ

    ಮಂಡ್ಯ: ಕೊತ್ವಾಲ್ ರಾಮಚಂದ್ರನ ಬಳಿ 100 ರೂಪಾಯಿಗೆ ಕೆಲಸ ಮಾಡ್ತಾ ಇದ್ದ ಡಿ.ಕೆ ಶಿವಕುಮಾರ್‌ (DK Shivakumar) ಕಣ್ಣೀರು ಹಾಕಿರೋದು ಯಾವತ್ತಾದರೂ ನೋಡಿದ್ದೀರಾ? ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಅವರು ಪ್ರಶ್ನೆ ಮಾಡಿದರು.

    ಮಂಡ್ಯದ (Mandya) ಚಿನಕುರುಳಿ ಗ್ರಾಮದಲ್ಲಿ ಮಾತನಾಡಿದ ದೇವೇಗೌಡರು, ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರು ಮಾತಾಡ್ತಾರೆ. ಜವಹಾರ್‌ಲಾಲ್ ನೆಹರು, ಇಂದಿರಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅಂತಹ ಪಕ್ಷದ ಅಧ್ಯಕ್ಷರಾಗಿರುವ ಡಿಕೆಶಿ ಯಾವತ್ತಾದ್ರೂ ಜನರಿಗಾಗಿ ಕಣ್ಣೀರು ಹಾಕಿದ್ದಾರಾ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ದೇಶಕ್ಕೆ ಅನ್ನಕೊಡುವ ರೈತನಿಗೆ ನೋವಾದಾಗ ಹೃದಯ ಮರುಗುತ್ತೆ ಅಂತವರಿಗೆ ಕಣ್ಣೀರು ಬರುತ್ತದೆ. ನನ್ನ ಮೊಮ್ಮಗ ಕಣ್ಣೀರು ಹಾಕಿದರ ಬಗ್ಗೆ ಮಾತಾಡುತ್ತಾರೆ. ನಮ್ಮ ವಂಶವೆ ಕಣ್ಣೀರು ಹಾಕುತ್ತದೆ ನಮ್ಮ ಅಪ್ಪನಿಂದಲೇ ನಮಗೆ ಕಣ್ಣೀರು ಹಾಕೋದು ಬಂದಿದೆ. ಬಡತನವನ್ನು ನಾವು ಅನುಭವಿಸಿದ್ದೇವೆ. ಬಡವರ ಬಗ್ಗೆ ನಮಗೆ ಬೇಗೆ, ನೋವು ಇದೆ. ಯಾರು ಹೇಮಾವತಿ, ಹಾರಂಗಿ ಕಟ್ಟಿದ್ದು? ಚನ್ನಪಟ್ಟಣದಲ್ಲಿ ಈಗ ಚರ್ಚೆ ಮಾಡ್ತಾರೆ. ಮಾತಡೋಕೆ ತುಂಬಾ ವಿಚಾರಗಳು ಇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಯಸ್ಸಾಯಿತು ಇನ್ಯಾವಾಗ ಮದ್ವೆ ಆಗ್ತೀಯಾ? ಅಂತ ರೇಗಿಸಿದ್ದಕ್ಕೆ ಅತ್ತಿಗೆಯನ್ನೇ ಕೊಂದ 

  • ಯಾವ ಕ್ಷೇತ್ರವೂ ರಾಜಕಾರಣಿಗಳ ಭದ್ರಕೋಟೆ ಅಲ್ಲ, ಜನರ ಭದ್ರಕೋಟೆ: ಮಹದೇವಪ್ಪ

    ಯಾವ ಕ್ಷೇತ್ರವೂ ರಾಜಕಾರಣಿಗಳ ಭದ್ರಕೋಟೆ ಅಲ್ಲ, ಜನರ ಭದ್ರಕೋಟೆ: ಮಹದೇವಪ್ಪ

    ಬೆಂಗಳೂರು: ಚನ್ನಪಟ್ಟಣ (Channapatna) ಸೇರಿ 3 ಕ್ಷೇತ್ರಗಳ ಉಪಚುನಾವಣೆಯಲ್ಲಿ (By Election) ಕಾಂಗ್ರೆಸ್ (Congress) ಗೆಲ್ಲಲಿದೆ ಎಂದು ಸಚಿವ ಮಹದೇವಪ್ಪ (HC Mahadevappa) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಚುನಾವಣೆಗಳು ಪ್ರತಿಷ್ಠೆಯೇ. ಎಲ್ಲಾ ರಾಜಕೀಯ ಪಕ್ಷಗಳು ಗೆಲ್ಲಬೇಕು ಎಂದು ಕೆಲಸ ಮಾಡುತ್ತೇವೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ಜನರ ಒಲವು ಕಾಂಗ್ರೆಸ್ ಪರವಾಗಿ ಇದೆ. ಉಪಚುನಾವಣೆ ಮುಂದಿನ ರಾಜಕೀಯಕ್ಕೆ ದಿಕ್ಸೂಚಿ ಆಗೋಕೆ ಹೇಗೆ ಸಾಧ್ಯ? ಉಪ ಚುನಾವಣೆ ದಿಕ್ಸೂಚಿ ಆಗಲ್ಲ. ವಿಪಕ್ಷಗಳು ಸರ್ಕಾರದ ಮೇಲೆ ಮಾಡೋದು ಆರೋಪ ಅಷ್ಟೇ. ಅವು ಸತ್ಯ ಅಲ್ಲ. 3 ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು. ಇದನ್ನೂ ಓದಿ: ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದಂಗಡಿಗಳಿಂದ ತಿಂಗಳಿಗೆ 15 ಕೋಟಿ ಲಂಚ – ಅಬಕಾರಿ ಇಲಾಖೆ ವಿರುದ್ಧ ಗಂಭೀರ ಆರೋಪ

    ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣದಲ್ಲಿ ವಾತಾವರಣ ಚೆನ್ನಾಗಿದೆ. ಯೋಗೇಶ್ವರ್ 3 ಬಾರಿ ಎಂಎಲ್‌ಎ ಆಗಿದ್ದರು. ಒಳ್ಳೆಯ ಕೆಲಸ ಮಾಡಿದ್ದಾರೆ. ನಾನು ಆರೋಗ್ಯ ಸಚಿವ ಆಗಿದ್ದಾಗ ಕಣ್ವಾ ಜಲಾಶಯದಿಂದ ನೂರು ಕೆರೆ ತುಂಬಿಸಿ ಜಾತ್ರೆ ರೀತಿ ಕಾರ್ಯಕ್ರಮ ಮಾಡಿದ್ದರು. ಅದಕ್ಕೆ ನಾನು ಹೋಗಿದ್ದೆ. 2013-18 ಸರ್ಕಾರ ಇದ್ದಾಗ ಚನ್ನಪಟ್ಟಣಕ್ಕೆ ನೂರಾರು ಕೋಟಿ ಮಂಜೂರು ಮಾಡಿದ್ದೆವು. ಅಲ್ಲೆಲ್ಲಾ ಕೆರೆ ಒಣಗಿ ಹೋಗಿತ್ತು. ಅದು ಹಸಿರಾಗಿ ಬದಲಾವಣೆ ಆಗೋಕೆ ಸಿದ್ದರಾಮಯ್ಯ ಕಾಲದಲ್ಲಿ ಕಣ್ವಾ ಜಲಾಶಯದ ಮೂಲಕ ಕೆರೆ ತುಂಬಿಸೋ ಯೋಜನೆ ಮಾಡಿದ್ದರು. ಯೋಗೇಶ್ವರ್ ಉತ್ತಮವಾಗಿ ಕೆಲಸ ಮಾಡಿದ್ದರು. ಹೀಗಾಗಿ ಜನರಿಗೆ ಯೋಗೇಶ್ವರ್ ಪರ ಒಲವಿದೆ ಎಂದು ತಿಳಿಸಿದರು. ಇದನ್ನೂ ಓದಿ: Canada| ಹಿಂದೂಗಳ ಮೇಲೆ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಹಲ್ಲೆ ಖಂಡಿಸಿ ಪ್ರತಿಭಟನೆ

    ಚನ್ನಪಟ್ಟಣ ಜೆಡಿಎಸ್‌ನ ಭದ್ರಕೋಟೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವ ಕ್ಷೇತ್ರವೂ ಯಾರ ಭದ್ರಕೋಟೆಯಲ್ಲ. ನನ್ನ ಕ್ಷೇತ್ರವೂ ಸೇರಿ ಯಾವುದೂ ಯಾರಿಗೂ ಭದ್ರಕೋಟೆ ಅಲ್ಲ. ಜನ ಆಯಾ ಸಂದರ್ಭದಲ್ಲಿ ಆಯಾ ಸಮಯದಲ್ಲಿ ಆಯಾ ವಿಷಯದ ಮೇಲೆ ತೀರ್ಮಾನ ಮಾಡುತ್ತಾರೆ. ಅದು ಜನರ ಭದ್ರಕೋಟೆ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಮುಡಾ ಕೇಸ್ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ: ಮಹದೇವಪ್ಪ

    ಮೊಮ್ಮಗ ಪರ ದೇವೇಗೌಡ ಪ್ರಚಾರದ ಬಗ್ಗೆ ಮಾತನಾಡಿ, ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ನನಗೆ ದೇವೇಗೌಡರ ಆರೋಗ್ಯ ಮುಖ್ಯ. ಅವರ ಆರೋಗ್ಯ ಚೆನ್ನಾಗಿ ಇರಲಿ. ಅವರು ಪ್ರಚಾರ ಮಾಡೋ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಬೆನ್ಜ್ ಕಾರು ಡಿಕ್ಕಿಯಾಗಿ ಟೆಕ್ಕಿ ಸಾವು

  • ಚನ್ನಪಟ್ಟಣ ಫಲಿತಾಂಶದ ನಂತರ ಜೆಡಿಎಸ್, ಬಿಜೆಪಿ ಜೊತೆ ಮರ್ಜ್ ಆಗಬಹುದು: ಡಿಕೆಶಿ

    ಚನ್ನಪಟ್ಟಣ ಫಲಿತಾಂಶದ ನಂತರ ಜೆಡಿಎಸ್, ಬಿಜೆಪಿ ಜೊತೆ ಮರ್ಜ್ ಆಗಬಹುದು: ಡಿಕೆಶಿ

    ಬೆಂಗಳೂರು: ಚನ್ನಪಟ್ಟಣ ಫಲಿತಾಂಶದ (Channapatna) ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಬಹುದು. ಜೆಡಿಎಸ್ ಬಿಜೆಪಿ ಜೊತೆ ಮರ್ಜ್ ಆಗಬಹುದು. ನನ್ನ ಪ್ರಕಾರ ಅದೇ ಬದಲಾವಣೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಮ್ಮ ಸರ್ಕಾರ ಪತನ ಅನ್ನೋದು ಭ್ರಮೆ. ಸಾಮ್ರಾಜ್ಯ ಮುಳುಗಿರುವುದು ನನಗೂ ಗೊತ್ತು. ಉದಯಿಸಿದ ಸೂರ್ಯ ಕೆಳಗೆ ಬರಲೇಬೇಕು. ಶ್ರೇಯಸ್ಸಾಗಬೇಕಾದರೆ ಧರ್ಮರಾಯನ ಧರ್ಮತ್ವ ಇರಬೇಕು. ವಿಧುರನ ನೀತಿ, ಕೃಷ್ಣನ ತಂತ್ರ ಇರಬೇಕು. ಕರ್ಣನ ದಾನತ್ವ ಇರಬೇಕು, ಭೀಮನ ಬಲ ಇರಬೇಕು. ಇದು ಯಾವುದು ಕುಮಾರಸ್ವಾಮಿಗೆ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: Bengaluru| ಹಸುಗೂಸನ್ನು ನೀರಿನ ಸಿಂಟೆಕ್ಸ್ ಟ್ಯಾಂಕ್‌ಗೆ ಎಸೆದು ಕೊಲೆ

    ಒಂದು ದೇವಸ್ಥಾನ ಕಟ್ಟಿಲ್ಲ, ಒಂದು ಸೈಟ್ ಕೊಟ್ಟಿಲ್ಲ, ಬಡವರಿಗೆ ಒಂದು ಮನೆ ಕೊಟ್ಟಿಲ್ಲ. ಜನ ಯಾಕೆ ವೋಟ್ ಹಾಕುತ್ತಾರೆ? ಕುಮಾರಸ್ವಾಮಿ ಕಣ್ಣೀರು ಒರೆಸಿದ ಅಂತ ಯಾವ ರೈತ ಹೇಳುತ್ತಾನೆ ತೋರಿಸಿ. ನೀನು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದೆ ದಯವಿಟ್ಟು ತೋರಿಸಪ್ಪ ಎಂದು ಹರಿಹಾಯ್ದರು. ಇದನ್ನೂ ಓದಿ: ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಪ್ರಧಾನಿ ಮೋದಿ ಖಂಡನೆ

  • ರಂಗೇರಿದ ಚನ್ನಪಟ್ಟಣ ಉಪಕಣ – ಪತಿ ನಿಖಿಲ್‌ ಪರ ಮತಬೇಟೆಗಿಳಿದ ಪತ್ನಿ ರೇವತಿ

    ರಂಗೇರಿದ ಚನ್ನಪಟ್ಟಣ ಉಪಕಣ – ಪತಿ ನಿಖಿಲ್‌ ಪರ ಮತಬೇಟೆಗಿಳಿದ ಪತ್ನಿ ರೇವತಿ

    ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಅಖಾಡ ರಂಗೇರಿದೆ. ಉಭಯ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಪ್ರತ್ಯೇಕವಾಗಿ ಹಳ್ಳಿ, ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.

    ಮತಬೇಟೆಗಿಳಿದ ನಿಖಿಲ್‌ ಪತ್ನಿ:
    ಸೋಮವಾರವಾದ ಇಂದು ಸಹ 10ಕ್ಕೂ ಹೆಚ್ಚು ಗ್ರಾಮದಲ್ಲಿ ಪುತ್ರನ ಪರ ಮತಯಾಚನೆ ನಡೆಸಲಿದ್ದರೆ, ನಿಖಿಲ್‌ 15 ಹಳ್ಳಿಗಳಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದಾರೆ. ಚನ್ನಪಟ್ಟಣದ ಹೆಚ್.ಬ್ಯಾಡರಳ್ಳಿ, ಬೊಮ್ಮನಾಯಕನಹಳ್ಳಿ ಹಾಗೂ ಬೇವೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸುತ್ತಿದ್ದಾರೆ. ಇದರೊಂದಿಗೆ ಪತ್ನಿ ರೇವತಿ ಕೂಡ ನಿಖಿಲ್‌ ಪರವಾಗಿ ಮತಬೇಟೆಗಿಳಿದಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಪರ ಬೆಳ್ಳಂ ಬೆಳಗ್ಗೆಯಿಂದಲೇ ಪತ್ನಿ ರೇವತಿ (Revathi Nikhil) ಪ್ರಚಾರ ಶುರು ಮಾಡಿದ್ದಾರೆ. ಚನ್ನಪಟ್ಟಣದ ಮಹಿಳಾ ಕಾಲೇಜು ಮುಂಭಾಗ ವಿದ್ಯಾರ್ಥಿಗಳಿಗೆ ಕರಪತ್ರ ಹಂಚಿ ನಿಖಿಲ್‌ಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ನಿಖಿಲ್‌ ಪತ್ನಿ ರೇವತಿ ಅವರಿಗೆ ಜೆಡಿಎಸ್ ಮಹಿಳಾ ಕಾರ್ಯಕರ್ತರು ಸಾಥ್‌ ನೀಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲೂ ವಕ್ಫ್ ವಿವಾದ – ಒಂದೇ ಗ್ರಾಮದ 610 ಕುಟುಂಬಗಳಿಗೆ ಆಸ್ತಿ ಕಳೆದುಕೊಳ್ಳುವ ಭೀತಿ

    ಇನ್ನೂ ಪ್ರಚಾರದ ವೇಳೆ ಮಾತನಾಡಿರುವ ನಿಖಿಲ್‌, ಕುಮಾರಸ್ವಾಮಿ ಎರಡು ಬಾರಿ ಈ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ರೈತರ ಸಾಲಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತೆ. ದೇವೇಗೌಡರು ಕಳೆದ 30 ವರ್ಷಗಳಿಂದ ಹಿಂದೆ ನಿರ್ಣಯ ಮಾಡಿ ಇಗ್ಗಲೂರು ಡ್ಯಾಂ ಮಾಡಿದ್ರು. ಕೆಲವರು 17ಕೆರೆ ತುಂಬಿಸಿದ್ದೇವೆ ಅಂತ ಪ್ರಚಾರ ತೆಗೆದುಕೊಳ್ತಾರೆ. ಆದರೆ ಸದಾನಂದಗೌಡರವರ ಕಾಲದಲ್ಲಿ ಆ ಕೆರೆಗಳನ್ನ ತುಂಬಿಸಿದ್ದು. ವಿ. ಸೋಮಣ್ಣ ಅವರು ಅನುದಾನ ಕೊಟ್ಟು ಕೆರೆಗಳಿಗೆ ಮರುಜೀವ ನೀಡಿದ್ರು. ಕುಮಾರಸ್ವಾಮಿಯವರೂ ಸುಮಾರು 100ಕ್ಕೂ ಹೆಚ್ಚು ಕೆರೆಗಳನ್ನ ತುಂಬಿಸಿದ್ದಾರೆ ಎಂದು ಹೆಚ್‌ಡಿಕೆ ಸಾಧನೆಯನ್ನ ಬಣ್ಣಿಸಿದ್ರು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು

    ಈ ಹಿಂದೆ ಕುಮಾರಸ್ವಾಮಿ ಅವರು ಸಾರಾಯಿ, ಲಾಟರಿ ನಿಷೇಧ ಮಾಡಿದ್ರು. ಇತ್ತೀಚಿನ ಆನ್ಲೈನ್ ಗೇಮಗಳಿಗೆ ಯುವಕರು ಬಲಿ ಆಗ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಅಂದ್ರೆ ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಚನ್ನಪಟ್ಟಣ ತಾಲೂಕಿನಲ್ಲಿ ಅತಿಹೆಚ್ಚು ಹಾಲು ಉತ್ಪಾದನೆ ಆಗುತ್ತೆ. ಸರ್ಕಾರ ರೈತರಿಗೆ ಸರಿಯಾದ ಬೆಂಬಲ ಬೆಲೆ ಕೊಡ್ತಿಲ್ಲ. ಹಾಗಾಗಿ ಈ ಬಾರಿ ಒಂದು ಅವಕಾಶ ಮಾಡಿಕೊಡಿ. ಈ ಚುನಾವಣೆಯ ಸ್ಪರ್ಧೆ ಅನಿರೀಕ್ಷಿತ. ಕಾಂಗ್ರೆಸ್ ಅಭ್ಯರ್ಥಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನನಗೆ ಒಂದು ಅವಕಾಶ ಕೊಟ್ಟು ನೋಡಿ. ಈ ಭಾಗದಲ್ಲಿ ಒಂದು ಕೈಗಾರಿಕೆ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡ್ತೇವೆ ಎಂದು ನಿಖಿಲ್‌ ಆಶ್ವಾಸನೆ ನೀಡಿದರು. ಇದನ್ನೂ ಓದಿ: ಅನುಮತಿ ಇಲ್ಲದೆ ನೌಟಂಕಿ ಕಾರ್ಯಕ್ರಮ ಆಯೋಜನೆ – ಗ್ರಾಮ ಮುಖ್ಯಸ್ಥನ ಪ್ರತಿನಿಧಿಗೆ ಎಂಜಲು ನೆಕ್ಕಿಸಿದ ಪೊಲೀಸರು

  • ಚನ್ನಪಟ್ಟಣದಲ್ಲಿ ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ: ಡಿಕೆಶಿ

    ಚನ್ನಪಟ್ಟಣದಲ್ಲಿ ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ: ಡಿಕೆಶಿ

    ಬೆಂಗಳೂರು: ಚನ್ನಪಟ್ಟಣದಲ್ಲಿ (Channapatna) ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ. ನಾವು ಮಾಡಿದ ಕೆಲಸಕ್ಕೆ ಪಟ್ಟಿ ಹಾಕಿ ಚನ್ನಪಟ್ಟಣದ ಜನ ಮಾರ್ಕ್ಸ್ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

    ಚನ್ನಪಟ್ಟಣ ಪ್ರಚಾರದ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ. ಮತದಾರನ ಹೃದಯ ಗೆಲ್ಲಬೇಕು. ನಾವು ಮಾಡಿರುವ ಕೆಲಸಕ್ಕೆ, ಮಾಡುತ್ತಿರುವ ಕೆಲಸಕ್ಕೆ ಜನ ಗುರುತಿಸಿ ಎಂದು ಕೇಳಲು ಹೋಗುತ್ತಿದ್ದೇವೆ. ರಣರಂಗ ಆಡಿದವರೆಲ್ಲ ಮುಗಿದು ಹೋಗಿದ್ದಾರೆ. ಈಗ ಏನಿದ್ದರೂ ಜನರ ಲಾಭ ಮಾತ್ರ ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ರು. ಇದನ್ನೂ ಓದಿ: ವಿಶ್ವಗುರು ಬಸವಣ್ಣರನ್ನೇ ಕತ್ತಲೆಗೆ ದೂಡಿದ ಬಿಬಿಎಂಪಿ – ನಿರ್ವಹಣೆ ಇಲ್ಲದೇ ಉದುರುತ್ತಿದೆ ಪುತ್ಥಳಿ ಬಣ್ಣ!

    ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾಯಕ ಆದವನು ಮತದಾರರಿಗೆ ಏನು ಕೊಡುತ್ತಾನೆ, ಯಾವ ರೀತಿ ಸಹಾಯ ಮಾಡುತ್ತಾನೆ ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಅದು ಬಹಳ ಮುಖ್ಯ. ಯಾರು ಏನೇನು ಮಾಡಿದ್ದಾರೆ ಅನ್ನೋ ಪಟ್ಟಿ ಈ ಚುನಾವಣೆಯಲ್ಲಿ ಲೆಕ್ಕಕ್ಕೆ ಬರುತ್ತದೆ. ಜನ ತೀರ್ಮಾನ ಮಾಡುತ್ತಾರೆ. ಡಿಕೆ ಸುರೇಶ್, ಡಿಕೆ ಶಿವಕುಮಾರ್, ಕುಮಾರಸ್ವಾಮಿ, ಯೋಗೇಶ್ವರ್ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಜನರು ಪಟ್ಟಿ ಹಾಕುತ್ತಾರೆ. ಅದು ಬಿಟ್ಟರೆ ಯಾವ ರಣನೂ ಇಲ್ಲ, ರಂಗನೂ ಇಲ್ಲ ಏನು ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Bengaluru Traffic Jam: ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ಜಾಮ್‌ ಜಾಮ್!

    ಇನ್ನು ಚನ್ನಪಟ್ಟಣದಲ್ಲಿ ಬಿಜೆಪಿ ನಾಯಕರಿಂದ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಸಾಥ್ ಕೊಟ್ಟಿರೋದು ಒಳ್ಳೆಯದು ಅಲ್ಲವಾ. ಬಿಜೆಪಿ ಪಾದಯಾತ್ರೆಗಂತೂ ಜೆಡಿಎಸ್ ಅವರು ಸಾಥ್ ಕೊಟ್ಟಿರಲಿಲ್ಲ. ಆದರೂ ಜೆಡಿಎಸ್‌ಗೆ ಬಿಜೆಪಿ ಅವರು ಸಾಥ್ ಕೊಡುತ್ತಿದ್ದಾರೆ, ಕೊಡಲಿ ಎಂದು ಬಿಜೆಪಿ ನಾಯಕರಿಗೆ ತಿವಿದರು. ಇದನ್ನೂ ಓದಿ: ರಾಜಕೀಯ ಏನಾದ್ರೂ ಇರಲಿ, ಜಯನಗರಕ್ಕೆ ಅನುದಾನ ಕೊಡಿ – ಡಿಕೆಶಿಗೆ ಸೆಲೆಬ್ರಿಟಿಗಳ ಮನವಿ

  • ಪಾರದರ್ಶಕ ಚುನಾವಣೆ ಹಾಳುಗೆಡವಲು ಕಾಂಗ್ರೆಸ್ ಸಂಚು; ಹೆಚ್‌ಡಿಕೆ ನೇರ ಆರೋಪ

    ಪಾರದರ್ಶಕ ಚುನಾವಣೆ ಹಾಳುಗೆಡವಲು ಕಾಂಗ್ರೆಸ್ ಸಂಚು; ಹೆಚ್‌ಡಿಕೆ ನೇರ ಆರೋಪ

    ಬೆಂಗಳೂರು: ಕಾಂಗ್ರೆಸ್ ಚನ್ನಪಟ್ಟಣ ಕ್ಷೇತ್ರದಲ್ಲಿ ಮತದಾರರಿಗೆ ಲುಲು ಮಾಲ್ ಗಿಫ್ಟ್ ಕೂಪನ್‌ಗಳನ್ನು ಹಂಚಿಕೊಂಡು ಚುನಾವಣಾ ಅಕ್ರಮ ನಡೆಸಲು ಮುಂದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ನೇರ ಆರೋಪ ಮಾಡಿದರು.

    ಪ್ರಚಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭಾರೀ ಅಕ್ರಮಗಳನ್ನು ನಡೆಸಲು ಸಂಚು ರೂಪಿಸಿದೆ. ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕಿದೆ. ಪಾರದರ್ಶಕವಾಗಿ ಚುನಾವಣೆ ನಡೆಸಬೇಕಿದೆ. ಕಾಂಗ್ರೆಸ್ ಎಲ್ಲಾ ವಾತಾವರಣವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಮೋದಿಗೆ ಜನ ಮರ್ಯಾದೆ ಕೊಡ್ತಾರೆ, ಸಿಎಂ ಹೋದ್ರೆ ಸೈಟ್‌ ಕಳ್ಳ ಅಂತಾರೆ: ಛಲವಾದಿ

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ವ್ಯಾಪಕ ಅಕ್ರಮಗಳನ್ನು ನಡೆಸಿತು. ಹಲವು ಕ್ಷೇತ್ರಗಳಲ್ಲಿ ಲುಲು ಮಾಲ್ ಗಿಫ್ಟ್ ಕೂಪನ್‌ಗಳನ್ನು ಹಂಚಿಕೆ ಮಾಡಿತ್ತು. ರಾತ್ರೋರಾತ್ರಿ ಹಳ್ಳಿಗಳಿಗೆ ಹೋಗಿದ್ದ ಕಾಂಗ್ರೆಸ್ ಕಾರ್ಯಕರ್ತರು ಇಂತಹ ಕೂಪನ್ ಹಂಚಿಕೆ ಮಾಡಿದ್ದರು. ಚುನಾವಣೆ ಮುಗಿದ ಮೇಲೆ ಹಣವೂ ಇಲ್ಲ, ಕೂಪನ್ನೂ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ಜನರು ಹಿಡಿಶಾಪ ಹಾಕಿದರು. ಇಂಥ ಮೋಸಕ್ಕೆ ನೀವು ತುತ್ತಾಗಬೇಡಿ ಎಂದು ಮನವಿ ಮಾಡಿದರು.

    ಕಾಂಗ್ರೆಸ್ ನಾಯಕರು ನನ್ನ ಬಗ್ಗೆ ಏಕವಚನದಲ್ಲಿ ಟೀಕೆ ಮಾಡುತ್ತಿದ್ದಾರೆ. ಅವರ ಟೀಕೆಗಳನ್ನು ನಾನು ವಿನಮ್ರವಾಗಿ ಸ್ವೀಕಾರ ಮಾಡುತ್ತೇನೆ. ನವೆಂಬರ್ 13ನೇ ತಾರೀಖು ಜನರೇ ಉತ್ತರ ಕೊಡುತ್ತಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಇದನ್ನೂ ಓದಿ: ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಅಂತೀವಿ – ಜಮೀರ್

  • ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗಲ್ಲ: ಹೆಚ್‌ಡಿಕೆ

    ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗಲ್ಲ: ಹೆಚ್‌ಡಿಕೆ

    – ನಿಖಿಲ್‌ ಗೆಲುವಿಗೆ ತಾಯಿ ಚಾಮುಂಡಿ ಆಶೀರ್ವಾದ ಇದೆ ಎಂದ ಸಚಿವ

    ಮೈಸೂರು: ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್‌ (H.D.Kumaraswamy) ನಾಯಕರಿಗೆ ತಿರುಗೇಟು ನೀಡಿದರು.

    ಮೈಸೂರಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಹೆಚ್‌ಡಿಕೆ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರ (Congress Leaders) ಲೇವಡಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಪಟಾಕಿ ಸಿಡಿತದಿಂದ ಜನರ ಕಣ್ಣಿಗೆ ಕುತ್ತು – ಮಿಂಟೋ ಆಸ್ಪತ್ರೆಯಲ್ಲಿ 29 ಮಂದಿಗೆ ಚಿಕಿತ್ಸೆ

    ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಕಣ್ಣೀರು ಹಾಕಿರುವುದು ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ. ರಾಜಕಾರಣದಲ್ಲಿ ಕಟುಕರಿದ್ದಾರೆ. ಭಯ ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ. ಕಟುಕರಿಗೆ ಯಾವ ಕಣ್ಣೀರು ಬರುವುದಿಲ್ಲ ಎಂದು ತಿರುಗೇಟು ನೀಡಿದರು.

    ಪ್ರಧಾನಿ ಮೋದಿ (PM Modi) ಬಗ್ಗೆ ರಾಜಕೀಯ ಪುಡಾರಿ ಎಂಬ ಸಿಎಂ ಟೀಕೆ ವಿಚಾರಕ್ಕೆ ಉತ್ತರಿಸಿದ ಹೆಚ್‌ಡಿಕೆ, ಸಿದ್ದರಾಮಯ್ಯನವರು ಯಾವ ರೀತಿ ಮಾತನಾಡುತ್ತಿದ್ದಾರೆ? ಅವರನ್ನ ಪುಡಾರಿ ಅನ್ನೋದಾದ್ರೆ ಇವರು ಅದೇ ರೀತಿ ಅಲ್ಲವೇ ಮಾತನಾಡುತ್ತಿರೋದು ಎಂದು ಕುಟುಕಿದರು. ಇದನ್ನೂ ಓದಿ: ಸ್ನೇಹಿತ ಅಂತ ನಂಬಿ ಮೊಬೈಲ್‌ ಕೊಟ್ಟ ಮಹಿಳೆ – ಆಕೆಯ ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಬ್ಲ್ಯಾಕ್‌ಮೇಲ್‌

    ಚಕ್ರವ್ಯೂಹ ರಚಿಸುವ ಪ್ರಯತ್ನ ನಡೆದಿತ್ತು:
    ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಕುರಿತು ಮಾತನಾಡಿದ ಹೆಚ್‌ಡಿಕೆ, ಉಪಚುನಾವಣೆಯ ಪ್ರಚಾರ ಬಿರುಸುನಿಂದ ಸಾಗಿದೆ. ತಾಯಿ ಚಾಮುಂಡಿ ಆಶೀರ್ವಾದದಿಂದ ಈ ಬಾರಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ಚನ್ನಪಟ್ಟಣದಲ್ಲಿ ಈ ಬಾರಿ ಚಕ್ರವ್ಯೂಹ ರಚಿಸಲು ಆರಂಭದಲ್ಲಿ ಪ್ರಯತ್ನ ಮಾಡಿದ್ರು. ಆದ್ರೆ ಸಾಧ್ಯವಾಗಲಿಲ್ಲ, ಪಕ್ಷದ ಹಿತ ದೃಷ್ಟಿಯಿಂದ ಈ ಬಾರಿ ನಿಖಿಲ್ ಸ್ಪರ್ಧೆ ಅನಿರ್ವಾಯವಾಯಿತು ಎಂದು ಹೇಳಿದರು.

    ಪಕ್ಷದ ಚಟುಚಟಿಕೆಯಿಂದ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರು ದೂರ ಉಳಿದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಜಿ.ಟಿ ದೇವೇಗೌಡರಿಗೆ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳಿವೆ. ಹೀಗಾಗಿ ಅವರು ಉಪಚುನಾವಣೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿ.ಟಿ ದೇವೇಗೌಡರು ಸಹ ನಿಖಿಲ್ ಗೆಲುವಿಗೆ ಶ್ರಮಿಸುತ್ತಾರೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯದಲ್ಲಿ ನಿಲ್ಲದ ವಕ್ಫ್ ಅವಾಂತರ – ಹಿಂದೂ ಅಷ್ಟೇ ಅಲ್ಲ, ಮುಸ್ಲಿಮರ ಪಹಣಿಯಲ್ಲೂ ವಕ್ಫ್!

    ಇನ್ನೂ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪರಮೇಶ್ವರ್ ಅವರು ಗ್ಯಾರಂಟಿ ಮುಂದುವರಿಯುತ್ತೆ ಅಂತ ಹೇಳಲ್ಲ. ಮುಂದಿನ ಮೂರು ವರ್ಷ ನಡೆಸುತ್ತೇವೆ ಅಂತಾರೆ. ಜನರೇ ಬೇಡ ಅಂತಿದ್ದಾರೆ ಎಂದು ಹೇಳಿ ಜನರ ಹೆಸರೇಳಿ ಸಬೂಬು ಕೊಡ್ತಾ ಇದ್ದಾರೆ. ಜನರಲ್ಲಿ ಸರ್ಕಾರವನ್ನು ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದ್ದಾರೆ ಅನ್ನೋ ಚರ್ಚೆ ಇದೆ. ಆದರೆ ರಾಜ್ಯದ ಜನರು ದಿವಾಳಿಯತ್ತ ತೆಗೆದುಕೊಂಡು ಹೋಗಲು ಬಿಡಲ್ಲ. ಇವರು ಆ ರೀತಿ ಆಡಳಿತ ನಡೆಸದಿದ್ದರೆ ಸಾಕು. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಮಾಡಬಹುದು, ಆದ್ರೆ ಕಾಂಗ್ರೆಸ್‌ಗೆ ಅದು ಬೇಕಾಗಿಲ್ಲ. ಅದಕ್ಕಾಗಿ ಕೆಲ ಯೋಜನೆ ಸ್ಥಗಿತ ಅಂತಾರೆ ಆಮೇಲೆ ಸ್ಪಷ್ಟನೆ ಕೊಡ್ತಾರೆ ಎಂದು ಅಸಮಾಧಾನ ಹೊರಹಾಕಿದರು.

  • ದೀಪಾವಳಿ ಬಳಿಕ ಜೋರಾಗಲಿದೆ ಶಿಗ್ಗಾಂವಿ ಉಪಸಂಗ್ರಾಮ – ನ.5ಕ್ಕೆ ಭರತ್ ಬೊಮ್ಮಾಯಿ ಪರ ವಿಜಯೇಂದ್ರ ಪ್ರಚಾರ

    ದೀಪಾವಳಿ ಬಳಿಕ ಜೋರಾಗಲಿದೆ ಶಿಗ್ಗಾಂವಿ ಉಪಸಂಗ್ರಾಮ – ನ.5ಕ್ಕೆ ಭರತ್ ಬೊಮ್ಮಾಯಿ ಪರ ವಿಜಯೇಂದ್ರ ಪ್ರಚಾರ

    – ನ.6ಕ್ಕೆ `ಕೈ’ ಅಭ್ಯರ್ಥಿ ಪರ ಸಿಎಂ, ಡಿಸಿಎಂ ಮತಯಾಚನೆ
    – ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಹೆಚ್‌ಡಿಕೆ ತಂತ್ರ

    ಹಾವೇರಿ: ದೀಪಾವಳಿ ಬಳಿಕ ಹಾವೇರಿ, ಚನ್ನಪಟ್ಟಣದಲ್ಲಿ ಉಪಚುನಾವಣೆ ಕಾವು ಹೆಚ್ಚಾಗಲಿದೆ. ಹಾವೇರಿಯ‌ (Haveri) ಶಿಗ್ಗಾಂವಿಯಲ್ಲಿ (Shiggaon) ಬಿಜೆಪಿ ಆಭ್ಯರ್ಥಿ ಪರ ವಿಜಯೇಂದ್ರ, ಯಡಿಯೂರಪ್ಪ ಪ್ರಚಾರಕ್ಕೆ ಪ್ಲ್ಯಾನ್ ನಡೆಸಿದ್ದಾರೆ. ಅತ್ತ ಕಾಂಗ್ರೆಸ್ ಅಭ್ಯರ್ಥಿ ಯಾಸಿನ್ ಪರ ಸಿಎಂ, ಡಿಸಿಎಂ ಪ್ರಚಾರ ನಡೆಸಲಿದ್ದಾರೆ.

    ದೀಪಾವಳಿ ಬಳಿಕ ಶಿಗ್ಗಾಂವಿ ಉಪಚುನಾವಣೆಯಲ್ಲಿ (By Election) ಪ್ರಚಾರ ಭರಾಟೆ ಜೋರಾಗಲಿದೆ. ದೊಡ್ಡ ದೊಡ್ಡ ರಾಜಕೀಯ ಘಟಾನುಘಟಿಗಳು ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ. ನವೆಂಬರ್ 5 ರಂದು ಭರತ್ ಬೊಮ್ಮಾಯಿ (Bharath Bommai) ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರಚಾರ ನಡೆಸಲಿದ್ದಾರೆ. ಇನ್ನು ನವೆಂಬರ್ 11 ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಬಿಎಸ್‌ವೈ ನೇತೃತ್ವದಲ್ಲಿ ಬೃಹತ್ ಸಮಾವೇಶ, ರೋಡ್ ಶೋಗೆ ಸಿದ್ಧತೆ ನಡೆಸಲಾಗಿದೆ. ಇತ್ತ ನವೆಂಬರ್ 6ರಂದು ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Khan Patan) ಪರ ಸಿಎಂ ಸಿದ್ದರಾಮಯ್ಯ, ಡಿಕೆಶಿ ಎರಡನೇ ಸುತ್ತಿನ ಅದ್ಧೂರಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಶಿಗ್ಗಾಂವಿಯಲ್ಲೇ ಕಾಂಗ್ರೆಸ್ ಸಚಿವರು, ಶಾಸಕರ ದಂಡು ಮೊಕ್ಕಾಂ ಹೂಡಲಿದ್ದಾರೆ. ಇದನ್ನೂ ಓದಿ: ದರ್ಶನ್ ಎಡಗಾಲಿಗೂ ಸಮಸ್ಯೆ – ಫಿಜಿಯೋಥೆರಪಿನಾ? ಆಪರೇಷನ್‌ನಾ?

    ಅತ್ತ ರಾಮನಗರದಲ್ಲೂ (Ramanagara) ಉಪಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕುಮಾರಸ್ವಾಮಿ ತಂತ್ರ ರೂಪಿಸಿದ್ದಾರೆ. ಹೇಗಾದರೂ ದಲಿತ ಹಾಗೂ ಹಿಂದಳಿದ ವರ್ಗಗಳ ಮತ ಕ್ರೂಡೀಕರಣಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ವೇಳೆ ಎಸ್ಸಿ-ಎಸ್ಟಿ ಸಮುದಾಯ ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ಬೆಂಬಲ ನೀಡುವಂತೆ ಕರೆ ಕೊಡಲಾಗಿದ್ದು, ಯೋಗೇಶ್ವರ್ ಪದೇಪದೇ ಪಕ್ಷ ಬದಲಿಸುವ ವ್ಯಕ್ತಿ. ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವ ಯೋಗೇಶ್ವರ್ ನಂಬಬೇಡಿ. ಈ ಬಾರಿ ನಿಖಿಲ್ ಕುಮಾರಸ್ವಾಮಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಳಿ ಪೂಜೆ ವೇಳೆ ಅಗ್ನಿ ಅವಘಡ – ಬೆಂಕಿ ಕೆನ್ನಾಲಿಗೆಗೆ ಮೂವರು ಮಕ್ಕಳು ಬಲಿ

    ಇನ್ನು ನಿಖಿಲ್ ವಿರುದ್ಧ ಕುಟುಂಬ ರಾಜಕಾರಣ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೂ ಮಾಜಿ ಶಾಸಕ ಅನ್ನದಾನಿ ಟಾಂಗ್ ಕೊಟ್ಟಿದ್ದಾರೆ. ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಕೂಡ ಕುಟುಂಬ ರಾಜಕಾರಣದಿಂದ ಬಂದವರು. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದರೂ ಕೇರಳದ ವಯನಾಡಿನಲ್ಲಿ ಬಂದು ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಈ ಭಾಗದಲ್ಲಿ ಅಭಿವೃದ್ಧಿ ಮಾಡಿರೋ ನಾಯಕರ ಮಗ ಇಲ್ಲಿ ಸ್ಪರ್ಧೆ ಮಾಡೋದು ತಪ್ಪಾ ಎಂದು ಪ್ರಶ್ನೆ ಮಾಡಿ ಕಾಂಗ್ರೆಸ್ ವಿರುದ್ಧ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಯಚೂರು| ಪಟಾಕಿ ಕಿಡಿ ತಗುಲಿ ಅಂಗಡಿಗೆ ಬೆಂಕಿ – ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮ

    ಒಟ್ಟಾರೆ ಶಿಗ್ಗಾಂವಿಯಲ್ಲಿ ಘಟಾನುಘಟಿಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡೋದು ಒಂದೆಡೆ ಆದರೆ ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸಲು ಜೆಡಿಎಸ್ ಸಭೆ ಮೇಲೆ ಸಭೆ ನಡೆಸುತ್ತಿದೆ. ಗೆಲುವು ಯಾರಿಗೆ ಎಂಬುದು ಚುನಾವಣಾ ಫಲಿತಾಂಶದ ದಿನ ತಿಳಿಯಬೇಕಿದೆ. ಇದನ್ನೂ ಓದಿ: ದಶಕಗಳ ಬಳಿಕ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ – ಸಾವಿನ ಸಂಖ್ಯೆ 205ಕ್ಕೆ ಏರಿಕೆ

  • 17 ಕೆರೆ ತುಂಬಿಸಿದವ್ರನ್ನ ಭಗೀರಥ ಅನ್ನೋದಾದ್ರೆ 107 ಕೆರೆ ತುಂಬಿಸಿದ ನನ್ನನ್ನು ಏನಂತೀರಿ? – ಹೆಚ್‌ಡಿಕೆ

    17 ಕೆರೆ ತುಂಬಿಸಿದವ್ರನ್ನ ಭಗೀರಥ ಅನ್ನೋದಾದ್ರೆ 107 ಕೆರೆ ತುಂಬಿಸಿದ ನನ್ನನ್ನು ಏನಂತೀರಿ? – ಹೆಚ್‌ಡಿಕೆ

    – ನಾವು ಭಗೀರಥರು ಎಂದು ಬೋರ್ಡ್ ಹಾಕಿಕೊಂಡು ಓಡಾಡುತ್ತಿದ್ದೇವೆಯೇ?

    ರಾಮನಗರ: ಹದಿನೇಳು ಕೆರೆಗಳಿಗೆ ನೀರು ತುಂಬಿಸಿದ ವ್ಯಕ್ತಿಯನ್ನು ಭಗೀರಥ ಎನ್ನುವುದಾದರೆ, 107 ಕೆರೆಗಳಿಗೆ ನೀರು ತುಂಬಿಸಿದರನ್ನು ಏನೆಂದು ಕರೆಯಬೇಕು? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಪ್ರಶ್ನಿಸಿದ್ದಾರೆ.

    ಚನ್ನಪಟ್ಟಣದಲ್ಲಿ (Channapatna) ಕಾಂಗ್ರೆಸ್‌ನಿಂದ (Congress) ಜೆಡಿಎಸ್ ಸೇರಿದ ಮುಖಂಡರನ್ನು ಬರಮಾಡಿಕೊಂಡ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಮುಖ್ಯಮಂತ್ರಿಯಾಗಿ ಹಾಗೂ ಐದು ವರ್ಷ ಚನ್ನಪಟ್ಟಣ ಶಾಸಕನಾಗಿ ನಾನು 107 ಕೆರೆಗಳಿಗೆ ನೀರು ತುಂಬಿಸಿದ್ದೇನೆ. ಅವರದೇ ಸರ್ಕಾರ ಇದೆ, ಕಡತಗಳನ್ನು ತೆಗೆದು ನೋಡಲಿ. ನಾನು 17 ಕೆರೆಗಳಿಗೆ ನೀರು ತುಂಬಿಸಿದೆ ಎಂದು ಹೇಳುತ್ತಾರೆ. 107 ಕೆರೆಗಳಿಗೆ ನೀರು ತುಬಿಸಿದ್ದನ್ನು ಇವರು ಯಾಕೆ ಮರೆಮಾಚುತ್ತಾರೆ? ನಿಜ ಹೇಳುವುದಕ್ಕೆ ಏನಾಗಿದೆ ಅವರಿಗೆ? ಕಡತ ಇಲ್ಲವೇ? ಆದೇಶಗಳು ಇಲ್ಲವೇ? ತೆರೆದು ನೋಡಲಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.

    ದೇವೇಗೌಡರು ಇಗ್ಗಲೂರು ಜಲಾಶಯ ಕಟ್ಟಿಸದಿದ್ದರೆ ಇವರು 17 ಕೆರೆಗಳಿಗೆ ನೀರು ತುಂಬಿಸಲು ಸಾಧ್ಯ ಆಗುತ್ತಿತ್ತಾ? ಇವತ್ತು ಚನ್ನಪಟ್ಟಣ, ರಾಮನಗರ ತಾಲ್ಲೂಕಿನ ಜನರಿಗೆ ಆ ಜಲಾಶಯ ಜೀವನಾಧಾರವಾಗಿದೆ. ಅದನ್ನೇಕೆ ಇವರು ಹೇಳುವುದಿಲ್ಲ? ಹಾಗಾದರೆ ಒಂದು ಬೃಹತ್ ಜಲಾಶಯವನ್ನೇ ಕಟ್ಟಿಸಿದ ದೇವೇಗೌಡರನ್ನು ಏನೆಂದು ಕರೆಯಬೇಕು? 107 ಕೆರೆಗಳಿಗೆ ನೀರು ತುಂಬಿಸಿದ ನನ್ನನ್ನು ಏನೆಂದು ಕರೆಯಬೇಕು? ನಾವು ಭಗೀರಥರು ಎಂದು ಬೋರ್ಡ್ ಹಾಕಿಕೊಂಡು ಓಡಾಡುತ್ತಿದ್ದೇವೆಯೇ ಎಂದು ಸಿ.ಪಿ ಯೋಗೇಶ್ವರ್‌ಗೆ ತಿರುಗೇಟು ನೀಡಿದ್ದಾರೆ.

    ಚನ್ನಪಟ್ಟಣ ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಸಂಸದ ಸುರೇಶ್ ಸವಾಲಿನ ವಿಚಾರಕ್ಕೆ, ಚನ್ನಪಟ್ಟಣಕ್ಕೆ ಸುರೇಶ್ ಕೊಡುಗೆ ಏನು? ದಿನವೂ ರಾತ್ರಿ ಮತ್ತಿಕೆರೆ ಹತ್ತಿರ ಲೋಡುಗಟ್ಟಲೇ ಕಲ್ಲು ಬರುತ್ತೇ, ಹೊರದೇಶಕ್ಕೆ ಕಳಿಸುವುದಕ್ಕೆ ಅದೇ ಅವರ ಕೊಡುಗೆ. ಅಂತಹವರ ಜೊತೆ ನಾನು ಬಹಿರಂಗ ಚರ್ಚೆಗೆ ಬರಬೇಕಾ? ಎಂದು ಆಕ್ರೋಶ ಹೊರಹಾಕಿದ್ದಾರೆ.

    ನಿಖಿಲ್ ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದ್ದನ್ನು ಲೇವಡಿ ಮಾಡಿದ ಕಾಂಗ್ರೆಸ್ ನಾಯಕರ ವಿಚಾರಕ್ಕೆ, ಅವರಿಗೆ ಕಣ್ಣೀರೇ ಬರುವುದಿಲ್ಲವೇ? ಕಣ್ಣೀರು ಬರದಿದ್ದರೆ ಅವರು ಮನುಷ್ಯರೇ ಅಲ್ಲ. ಮನುಷ್ಯತ್ವ ಇರುವವರಿಗೆ ಮಾತ್ರ ಕಣ್ಣೀರು ಬರುತ್ತದೆ ಎಂದಿದ್ದಾರೆ.