ರಾಮನಗರ: ಎರಡು ಬಾರಿ ನಾನು ಚುನಾವಣೆಯಲ್ಲಿ ಸೋತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರಾದೃಷ್ಟನೋ ಗೊತ್ತಿಲ್ಲ ಎಂದು ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಣ್ಣೀರು ಹಾಕಿದ್ದಾರೆ.
ತಾಲೂಕಿನ ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾವುಕರಾದರು. ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ. ನಾನು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಬಾರಿ ಈ ಯುವಕನನ್ನು ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಸೇನಾ ವಾಪಸಾತಿ ಬಳಿಕ ಗಡಿಯಲ್ಲಿ ದೀಪಾವಳಿ ಸಿಹಿ ಹಂಚಿಕೊಂಡ ಭಾರತ-ಚೀನಾ ಸೈನಿಕರು
ಕಳೆದ ಭಾರಿ ಲೋಕಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡಬೇಕು ಎಂಬುದು ಕಾರ್ಯಕರ್ತರ ಭಾವನೆಯಾಗಿತ್ತು. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಎಂದು ಎಲ್ಲರಿಗೂ ಗೊತ್ತು. ಆಗ ನಾನು ದೇವೇಗೌಡರಿಗೆ ಸಾಹೇಬರಿಗೆ ಮನವಿ ಮಾಡಿದೆ. ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೆ, ರೈತ ಪರವಾಗಿ ಕಾಳಜಿ ಇಟ್ಟುಕೊಂಡು ಈ ಪಕ್ಷವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ, ಇಲ್ಲದೇ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಸರ್ಕಾರ ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ
ರಾಮನಗರ: ಕಾಂಗ್ರೆಸ್‍ನ ಹಗರಣ, ಭ್ರಷ್ಟಾಚಾರದ ವಿಚಾರ ದಿಕ್ಕು ತಪ್ಪಿಸಲು ವಕ್ಫ್ ವಿಚಾರ ಮುನ್ನೆಲೆಗೆ ಬಂದಿದೆ. ಈ ಮೂಲಕ ವಾಲ್ಮೀಕಿ ಮತ್ತು ಮುಡಾ ಹಗರಣ ಮುಚ್ಚಿಹಾಕಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಆರೋಪಿಸಿದ್ದಾರೆ.
ತಿಟ್ಟಮಾರನಹಳ್ಳಿಯಲ್ಲಿ ಚುನಾವಣಾ ಪ್ರಚಾರದ (Channapatna bypoll) ವೇಳೆ ಅವರು ಮಾತನಾಡಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ ಸ್ವಯಂ ಅಪರಾಧಗಳಿಂದ ಪಥನವಾಗಲಿದೆ. ಸರ್ಕಾರವನ್ನು ಬೇರೆ ಯಾರು ಬೀಳಿಸುವುದಿಲ್ಲ ಸ್ವತಃ ಆತ್ಮಹತ್ಯೆ ಮಾಡಿಕೊಳ್ಳಲಿದೆ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಗ್ಯಾರಂಟಿ ನಿಲ್ಲಿಸಲು ಈ ಮೂಲಕ ಮೊದಲ ಹೆಜ್ಜೆ ಇಟ್ಟಿದ್ದಾರೆ. ಶಕ್ತಿ ಯೋಜನೆ ಬೇಡ ಅಂತ ಯಾರು ಹೇಳ್ತಾರೆ. ಈಗಾಗಲೇ ಅನ್ನಭಾಗಕ್ಕೂ ಸಾಕಷ್ಟು ನಿಯಮ ಜಾರಿ ಮಾಡಿದ್ದಾರೆ. ರೇಷನ್ ಕಾರ್ಡ್ ಗಳನ್ನು ಡಿಲಿಟ್ ಮಾಡುತ್ತಿದ್ದಾರೆ. ಹಂತಹಂತವಾಗಿ ಗ್ಯಾರಂಟಿ ನಿಲ್ಲಿಸುತ್ತಾರೆ. ಅದನ್ನೆ ಡಿಕೆಶಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ ಎಂದರು.
ಚನ್ನಪಟ್ಟಣದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ನನಗೆ ನನ್ನ ಕ್ಷೇತ್ರದಲ್ಲಿ ಎಷ್ಟು ಕೆರೆ ಇದೆ ಎಂದು ಗೊತ್ತಿಲ್ಲ ಎಂದಿದ್ದಾರೆ. ಬಹುಶಃ ನನಗೆ ಗೊತ್ತಿರುವಷ್ಟು ಅವರಿಗೆ ಗೊತ್ತಿಲ್ಲ. ಇಗ್ಗಲೂರು ಜಲಾಶಯ ಇಲ್ಲದಿದ್ರೆ ಕಾಂಗ್ರೆಸ್‍ನವರು ನೀರು ಎಲ್ಲಿ ತುಂಬಿಸುತ್ತಿದ್ದರು? ಯಾರು ಸ್ವಯಂ ಘೋಷಿತ ಆಧುನಿಕ ಭಗೀರಥ ಅಂತೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ನೀಡಿದ್ದೇನೆ. ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೇನೆ. ತಿಟ್ಟಮಾರನಹಳ್ಳಿ ನನಗೆನೂ ಹೊಸದೇನಲ್ಲ. ಇಲ್ಲಿನ ಜನ ಮನೆಯ ಮಗನ ರೀತಿ ಆಶೀರ್ವಾದ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ನಿಮ್ಮ ತೀರ್ಮಾನಕ್ಕೆ ಅವನನ್ನ ಬಿಟ್ಟಿದ್ದೇನೆ. ನಾವೇನಾದ್ರೂ ರೈತರ ಪರವಾಗಿ ಕೆಲಸ ಮಾಡಿದ್ದರೆ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ಇದೇ ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ (BY Election) ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ (JDS) ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ. ಆದ್ರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33,000 ಸಾವು – ಬೆಂಗ್ಳೂರಿನ ಸ್ಥಿತಿ ಏನು?
ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು. ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಕ್ಫ್ ಕ್ಯಾತೆ ವಿರೋಧಿಸಿ ರೈತರ ಹೋರಾಟ – ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು
ಪ್ರಮುಖ ಸ್ಟಾರ್ ಪ್ರಚಾರಕರು:
ದೇವೇಗೌಡ – ರಾಷ್ಟ್ರೀಯ ಅಧ್ಯಕ್ಷ
ಕುಮಾರಸ್ವಾಮಿ – ಕೇಂದ್ರ ಸಚಿವ, ರಾಜ್ಯಾಧ್ಯಕ್ಷ.
ಸುರೇಶ್ ಬಾಬು – ಶಾಸಕಾಂಗ ನಾಯಕ
ಅನಿತಾ ಕುಮಾರಸ್ವಾಮಿ – ಮಾಜಿ ಶಾಸಕಿ.
ಸಾ.ರಾ. ಮಹೇಶ್- ಮಾಜಿ ಸಚಿವ
ಪುಟ್ಟರಾಜು – ಮಾಜಿ ಸಚಿವ
ಹರೀಶ್ ಗೌಡ – ಶಾಸಕ, ಜಟಿಡಿ ಪುತ್ರ
ಮಲ್ಲೇಶ್ ಬಾಬು – ಸಂಸದ
ರಾಮನಗರ: ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ (By Election) ದಿನಗಣನೆ ನಡೆಯುತ್ತಿರುವಾಗಲೇ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್ (Congress) ಬಿಗ್ ಶಾಕ್ ನೀಡಿದೆ.
ಚನ್ನಪಟ್ಟಣ ನಗರಸಭೆಗೆ ಬಿಜೆಪಿಯಿಂದ ಗೆದ್ದಿದ್ದ 7 ಸದಸ್ಯರ ಪೈಕಿ 6 ಮಂದಿ ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh) ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 6 ಮಂದಿ ನಗರಸಭೆ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ನಗರಸಭಾ ಸದಸ್ಯರಾದ ಚಂದ್ರು, ಮಂಗಳಮ್ಮ, ಮನೋಹರ್, ಕಮಲ, ಜಯಮಾಲ, ಕಸ್ತೂರಿ ಕಾಂಗ್ರೆಸ್ ಸೇರಿದ್ದಾರೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ
2021-22ರಲ್ಲಿ ಇವರು ನಗರಸಭೆಗೆ ಬಿಜೆಪಿಯಿಂದ ಆಯ್ಕೆ ಆಗಿದ್ದರು. ಒಟ್ಟು 31 ಸದಸ್ಯರ ಪೈಕಿ 07 ಮಂದಿ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್‌ನಿಂದ ಗೆದ್ದಿದ್ದರು. ಎರಡು ತಿಂಗಳ ಹಿಂದೆ 13 ಮಂದಿ ಜೆಡಿಎಸ್ ಸದಸ್ಯರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. ಇದನ್ನೂ ಓದಿ: ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ
ಬೆಂಗಳೂರು: ಯಾರನ್ನೋ ಓಲೈಸಲು ಸರ್ಕಾರದ ಆಸ್ತಿ ಲೂಟಿ ಹೊಡೆಯುವವರಿಗೆ ರಕ್ಷಣೆ ಕೊಟ್ಟರೆ ಮುಂದೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರ, ಧಾರವಾಡದ (Dharawada) ರೈತರ ಜಮೀನಿಗೆ ವಕ್ಫ್ ಬೋರ್ಡ್ (Waqf Board) ನೋಟಿಸ್ ನೀಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಕ್ಯಾಬಿನೆಟ್‌ನಲ್ಲಿ ವಕ್ಫ್‌ಗೆ ಸಂಬಂಧಿಸಿದಂತೆ ಚರ್ಚೆ ಆಗಿದೆ. ವಕ್ಫ್ ಬಗ್ಗೆ ಚರ್ಚೆ ಆಗಬೇಕು ಎಂದು ಕೇಂದ್ರದಲ್ಲಿ ತೀರ್ಮಾನ ಆಗಿದೆ. ಇವತ್ತು ಕರ್ನಾಟಕದಲ್ಲಿ ವಾತಾವರಣದಿಂದ ರೈತರು ಭಯಭೀತರಾಗಿದ್ದಾರೆ. ಮೊನ್ನೆ ವಿಜಯಪುರ ಆಯ್ತು, ನಿನ್ನೆ ಧಾರವಾಡದಲ್ಲಿ ಇದೇ ಸಮಸ್ಯೆ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರ ಟೀಕೆಗೆ ನ.23ಕ್ಕೆ ಉತ್ತರ ಕೊಡ್ತೀನಿ: ಹೆಚ್‌ಡಿಕೆ
ರೈತರ ಭೂಮಿ ಆಗಲಿ, ಸರ್ಕಾರದ ಭೂಮಿ ಆಗಲಿ ವಕ್ಫ್ ಹೆಸರಿನಲ್ಲಿ ಯಾರೋ ನಾಲ್ಕು ಜನ, ಆ ಸಮಾಜಕ್ಕೆ ಸೇರಿದವರು ಅಥವಾ ಭೂಗಳ್ಳರು ಆ ಭೂಮಿಯನ್ನ ಸ್ವೇಚ್ಛಾಚಾರವಾಗಿ ಕಾನೂನು ಬಾಹಿರವಾಗಿ ಲಪಟಾಯಿಸುತ್ತಿದ್ದಾರೆ. ಆ ಸತ್ಯಾಂಶಗಳು ಹೊರಗೆ ಬರಬೇಕು ಅನ್ನೋದು ನನ್ನ ಅಭಿಪ್ರಾಯ ಎಂದರು. ಇದನ್ನೂ ಓದಿ: ಉಪಚುನಾವಣೆ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ವಕ್ಫ್ ವಿವಾದ ಮಾಡ್ತಿವೆ: ಪ್ರಿಯಾಂಕ್ ಖರ್ಗೆ
ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ. ಈ ರೀತಿ ಯಾರನ್ನೋ ಓಲೈಸುವಂತಹ ಕೆಲಸ ಮಾಡಿ ಸರ್ಕಾರದ ಆಸ್ತಿಯನ್ನ ಲೂಟಿ ಹೊಡೆಯೋರಿಗೆ ರಕ್ಷಣೆ ಕೊಡುವುದಕ್ಕೆ ಹೋದರೆ ಅದಕ್ಕೆ ದೊಡ್ಡ ಮಟ್ಟದ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ – ಆರೋಪಿ ಅರೆಸ್ಟ್
ಬೆಂಗಳೂರು: ನವೆಂಬರ್ 23ರ ಉಪಚುನಾವಣೆ (By Election) ಫಲಿತಾಂಶದ ನಂತರ ಕಾಂಗ್ರೆಸ್ (Congress) ನಾಯಕರ ಮಾತಿಗೆ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇವೇಗೌಡ, ಕುಮಾರಸ್ವಾಮಿ, ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ (Channapatna) ಉಪಚುನಾವಣೆ ಬೇರೆ ಕ್ಷೇತ್ರಗಳಿಗಿಂತ ಗಮನ ಸೆಳೆದಿದೆ. ಕಾಂಗ್ರೆಸ್ ನಾಯಕರು ಏನೇನು ಮಾತನಾಡುತ್ತಿದ್ದಾರೆ ಎಂದು ನೋಡುತ್ತಿದ್ದೇನೆ. ಕಾಂಗ್ರೆಸ್ ಅವರ ಪರ ಪ್ರಯೋಗ ನೋಡಿದ್ದೇನೆ. ನನ್ನ ಮೇಲೆ ಮತ್ತು ಬಿಜೆಪಿ (BJP) ನಾಯಕರ ಮೇಲೆ ಆರೋಪ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರ ಎಲ್ಲಾ ಆರೋಪಗಳನ್ನು ನೋಟ್ ಮಾಡಿ ಇಟ್ಟುಕೊಂಡಿದ್ದೇನೆ. ನವೆಂಬರ್ 13 ರಂದು ಚುನಾವಣೆ ನಡೆಯುತ್ತದೆ. ನವೆಂಬರ್ 23ರಂದು ಫಲಿತಾಂಶ ಬರಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲರಿಗೂ ನಾನು ಉತ್ತರ ಕೊಡುತ್ತೇನೆ ಎಂದು ಹರಿಹಾಯ್ದರು. ಇದನ್ನೂ ಓದಿ: ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ – ಆರೋಪಿ ಅರೆಸ್ಟ್
ದೇವೇಗೌಡರ ಆರೋಗ್ಯದ ಬಗ್ಗೆಯಿಂದ ಹಿಡಿದು, ನಮ್ಮ ಪಕ್ಷದ ನಿರ್ಧಾರಗಳ ಬಗ್ಗೆ ಮಾತಾಡಿದ್ದಾರೆ. ನಮ್ಮ ಸಮಾಜದ ಹಲವಾರು ನಾಯಕರ ಬಗ್ಗೆ ಮಾತಾಡಿದ್ದಾರೆ. ನಮ್ಮಿಂದ ಅನಾನುಕೂಲಗಳು ಆಗಿವೆ. ಅವರ ಬೆಳವಣಿಗೆಗೆ ತೊಂದರೆ ಅಗಿದೆ ಅಂತ ಹೇಳಿದ್ದಾರೆ. ಕುಮಾರಸ್ವಾಮಿ ಒಬ್ಬರೇ ಒಕ್ಕಲಿಗರಾ? ನಾವೇನು ಒಕ್ಕಲಿಗರು ಅಲ್ಲವಾ ಅಂತ ಮಾತಾಡಿದ್ದಾರೆ. ಎಲ್ಲವನ್ನೂ ನೋಟ್ ಮಾಡಿಕೊಂಡಿದ್ದೇನೆ. ಎಲ್ಲದಕ್ಕೂ ನವೆಂಬರ್ 23ರ ಫಲಿತಾಂಶ ಬರಲಿ. ಆಮೇಲೆ ಮಾತನಾಡುತ್ತೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: Waqf Row| ಬಿಜೆಪಿ ಅವಧಿಯಲ್ಲಿ ರೈತರಿಗೆ ನೋಟಿಸ್ – ಕಾಂಗ್ರೆಸ್ ದಾಖಲೆ ಬಿಡುಗಡೆ
ಬೆಂಗಳೂರು: ಬಿಜೆಪಿ-ಜೆಡಿಎಸ್‌ಗೆ (BJP-JDS) ಉಪಚುನಾವಣೆಯಲ್ಲಿ ಸೋಲುವ ಭೀತಿಯಿದೆ ಅದಕ್ಕಾಗಿ ವಕ್ಫ್ ಬೋರ್ಡ್ ರೈತರ ಜಮೀನು ಕಬಳಿಕೆ ಮಾಡಲು ಮುಂದಾಗಿದೆ ಎಂದು ಸುಳ್ಳು ಹೇಳ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ (Ponnanna) ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವಿಜಯಪುರ (Vijayapura) ರೈತರಿಗೆ ವಕ್ಫ್ ಬೋರ್ಡ್ನಿಂದ ನೋಟಿಸ್ ನೀಡಿರುವ ಬಿಜೆಪಿ-ಜೆಡಿಎಸ್ ವಿರುದ್ಧ ಮಾತನಾಡಿ, ರಾಜಕೀಯ ಪ್ರೇರಿತ ಹೇಳಿಕೆಗಳನ್ನು ಬಿಜೆಪಿ-ಜೆಡಿಎಸ್ ನಾಯಕರು ಕೊಡುತ್ತಿದ್ದಾರೆ. ಎರಡು ಪಕ್ಷಗಳಿಗೆ 3 ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲುವ ಭೀತಿ ಕಾಡುತ್ತಿದೆ. ಚುನಾವಣೆ ಬಂದಾಗ ಸಮಾಜ ವಿಭಜನೆ ಮಾಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಬಿಜೆಪಿ ಮಾಡುತ್ತಿದೆ. ಚುನಾವಣೆಗಳಲ್ಲಿ ಧರ್ಮ, ಜಾತಿ ಆಧಾರದಲ್ಲಿ ಮತ ವಿಭಜನೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಸೊಲಿನ ಭೀತಿಯಲ್ಲಿ ಇಂತಹ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ತೀರ್ಪು ಸಿಎಂ ಪಾದಯಾತ್ರೆಗೆ ಸಿಕ್ಕ ಫಲ – ಹೆಚ್.ಕೆ ಪಾಟೀಲ್
ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದೆ. ಅವರ ಜಮೀನು ಪಡೆಯಲು ಮುಂದಾಗಿದೆ ಎನ್ನುವುದು ಸುಳ್ಳು. ಬಿಜೆಪಿ-ಜೆಡಿಎಸ್‌ನವರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಚುನಾವಣೆ ಸಮಯದಲ್ಲಿ ನೇರವಾಗಿ ಜನರ ಮುಂದೆ ಹೋಗಬೇಕು. ಸರ್ಕಾರದ ವೈಫಲ್ಯಗಳ ಬಗ್ಗೆ ಹೇಳಬೇಕು. ಅದನ್ನು ಬಿಟ್ಟು ಹೀಗೆ ಸುಳ್ಳು ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.
ಯಾರು ಏನೇ ಹೇಳಿದರೂ ದಾಖಲೆಯಲ್ಲಿ ಇರಬೇಕು. 15 ಸಾವಿರ ಎಕರೆ ಎಂದು ಯಾರು ಹೇಳಿದ್ದು? ದಾಖಲಾತಿ ತೋರಿಸಿ. ಸಚಿವರೇ ಹೇಳಿದ್ದರೂ ಅವರೇನು ದೇವರಲ್ಲ. ಇವತ್ತಿನ ಕ್ಯಾಬಿನೆಟ್‌ನಲ್ಲಿ ಈ ವಿಷಯ ಚರ್ಚೆ ಆಗುತ್ತದೆ. ಇದಕ್ಕೆ ಸ್ಪಷ್ಟನೆಯನ್ನು ಕೊಡುತ್ತಾರೆ. ಈಗಾಗಲೇ ಡಿಸಿ, ಕಂದಾಯ ಅಧಿಕಾರಿಗಳಿಂದ ದಾಖಲೆಗಳನ್ನು ಕ್ಯಾಬಿನೆಟ್‌ಗೆ ತರಿಸಿದ್ದಾರೆ. ಚರ್ಚೆ ಮಾಡಿ ಸರ್ಕಾರದ ಕಡೆಯಿಂದ ಸ್ಪಷ್ಟನೆ ಕೊಡುತ್ತಾರೆ ಎಂದು ಹೇಳಿದರು.ಇದನ್ನೂ ಓದಿ: ನನ್ನ ವೃತ್ತಿ, ಸಂಭಾವನೆ ಎಲ್ಲ ಬಿಟ್ಟು ಬಂದಿದ್ದೇನೆ: ವಿಜಯ್ ಪವರ್‌ಫುಲ್ ಸ್ಪೀಚ್
ಹಾಸನ: ಚನ್ನಪಟ್ಟಣದಲ್ಲಿ (Channapatna) ಮಗ ಗೆಲ್ಲುವಂತೆ ಮಾಡು ಎಂದು ಕುಮಾರಸ್ವಾಮಿ (HD Kumaraswamy) ದಂಪತಿ ಹಾಸನದ ಹಾಸನಂಬೆ ಮತ್ತು ಸಿದ್ದೇಶ್ವರ ಸ್ವಾಮಿಯ (Siddeshwara Swamy) ಮೊರೆ ಹೋಗಿದ್ದರು. ಈ ವೇಳೆ ಸಿದ್ದೇಶ್ವರ ಸ್ವಾಮೀಜಿಯ ಬಲಗಡೆಯಿಂದ ಹೂ ಕೆಳಗೆ ಬಿದ್ದಿದೆ.
ಇದನ್ನು ಗಮನಿಸಿದ ಅನಿತಾ ಅವರು ಕುಮಾರಸ್ವಾಮಿಗೆ ಇದನ್ನು ತಿಳಿಸಿದ್ದಾರೆ. ದರ್ಶನದ ಬಳಿಕ ಮಾತನಾಡಿದ ಹೆಚ್‌ಡಿಕೆ, ಈ ಬಾರಿಯಾದರೂ ಮಗನಿಗೆ ಗೆಲುವು ಸಿಗಲಿ ಎಂದು ಪಾರ್ಥಿಸಿದ್ದೇನೆ ಎಂದರು. ಇಂದಿನಿಂದ ಪ್ರಚಾರ ಕಾರ್ಯ ಆರಂಭಿಸಿರುವ ನಿಖಿಲ್ ಕುಮಾರಸ್ವಾಮಿ, ಮಾಕಳಿ, ನಾಗವಾರ, ದಶವಾರ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ತೆರೆದ ವಾಹನದ ಮೂಲಕ ಕ್ಯಾಂಪೇನ್ ಮಾಡಿದರು. ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 60ಕ್ಕೂ ಅಧಿಕ ರೈಲ್ವೆ ಯೋಜನೆಗಳ ಕುರಿತು ಸಂಸದ ಸುಧಾಕರ್ ಚರ್ಚೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 27, 2024
ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ಮೂಲ-ವಲಸಿಗ ಅಂತ ಚರ್ಚೆ ಜೋರಾಗಿದೆ. ಹೀಗಾಗಿ, ಕೋಡಂಬಳ್ಳಿಯಲ್ಲಿ ಯೋಗೇಶ್ವರ್-ಡಿಕೆ ಸುರೇಶ್ ಕಾರ್ಯಕರ್ತರ ಸಮನ್ವಯ ಸಭೆ ನಡೆಸಿದ್ದಾರೆ. ಸಿಪಿವೈ ಮಾತನಾಡಿ, ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು. ಕಣ್ಣೀರು ಹಾಕೋಕೆ, ನಾಟಕ ಮಾಡೋಕೆ ನನಗೆ ಬರಲ್ಲ. ಮೊನ್ನೆ 500 ಬಸ್ ಮಾಡಿ ಜನ ಸೇರಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಎಷ್ಟಾದರೂ ಹಣ ತಂದು ಚುನಾವಣೆ ಮಾಡಲು ನಿಂತಿದ್ದಾರೆ. ಅಲ್ಲದೇ ಕುಮಾರಸ್ವಾಮಿಗೆ ಚನ್ನಪಟ್ಟಣದಲ್ಲಿ ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ. ನಾನು, ಸುರೇಶ್ ಸೇರಿ ಕೆಆರ್‌ಎಸ್‌ನಿಂದ ಮಾರ್ಕೋನಹಳ್ಳಿ ಡ್ಯಾಂ ಮೂಲಕ ಕಣ್ವ, ಇಗ್ಗಲೂರು ಡ್ಯಾಮ್‌ಗೆ ನೀರು ತರಬಹುದು ಎಂದರು. ಇದನ್ನೂ ಓದಿ: ತುಮಕೂರು| ರಾಜಕೀಯಕ್ಕಿಂತ ಅಭಿವೃದ್ಧಿ ಮುಖ್ಯ, ಕೊಟ್ಟ ಮಾತು ಉಳಿಸಿಕೊಳ್ಳುವೆ: ಸೋಮಣ್ಣ
ಇನ್ನು, ಶಾಸಕ ಹೆಚ್‌ಸಿ ಬಾಲಕೃಷ್ಣ ಮಾತನಾಡಿ, ಕುಮಾರಸ್ವಾಮಿ ಮನೆದೇವರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನು ಹೇಳಿದ್ದು ಇದೇ ಯಡಿಯೂರಪ್ಪ. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ ಎಂದು ಟೀಕಿಸಿದರು. ಈ ಮಧ್ಯೆ, ಚನ್ನಪಟ್ಟಣ ಸೂಕ್ಷ್ಮಾತಿ ಸೂಕ್ಷ್ಮ ಕ್ಷೇತ್ರ ಆಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಪೊಲೀಸರು, ಅರೆಸೇನಾ ಪಡೆ ಪಥ ಸಂಚಲನ ನಡೆಸಿತು. ಇದನ್ನೂ ಓದಿ: ವರ್ಷಕ್ಕೊಮ್ಮೆ ದರ್ಶನ ನೀಡುವ ಕಾಫಿನಾಡ ʻಬಿಂಡಿಗ ದೇವೀರಮ್ಮʼ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ!
– ಕಣ್ಣೀರು ಹಾಕಿ ನಾಟಕ ಮಾಡಲು ನನಗೆ ಬರಲ್ಲ ಎಂದ ಯೋಗೇಶ್ವರ್
ರಾಮನಗರ: ಕಣ್ಣೀರು ಹಾಕಲು ನನಗೆ ಬರಲ್ಲ. ನಾನು ಕಣ್ಣಿರು ಹಾಕಲ್ಲ. ನನಗೆ ನಾಟಕ ಮಾಡಲು ಬರಲ್ಲ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (CP Yogeshwar) ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಕೋಡಂಬಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸಮನ್ವಯ ಸಭೆ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ ತಾಲೂಕಿನಲ್ಲಿ ಇದು ನನ್ನ 10ನೇ ಚುನಾವಣೆ. ಈ ಉಪಚುನಾವಣೆ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಕುಮಾರಸ್ವಾಮಿ (HD Kumaraswamy) ರಾಜಕೀಯ ಮಹತ್ವಾಕಾಂಕ್ಷೆಯಿಂದ ಬೈ ಎಲೆಕ್ಷನ್ ಬಂತು. ಎಂಎಲ್‌ಎ ಆಗಿ ಅವರು ಒಮ್ಮೆಯೂ ಕ್ಷೇತ್ರಕ್ಕೆ ಬಂದಿಲ್ಲ. ಮೊನ್ನೆ 150 ಕೆರೆ ತುಂಬಿಸಿದ್ದೇವೆ ಎನ್ನುತ್ತಿದ್ದರು. ಅವರಿಗೆ ಚನ್ನಪಟ್ಟಣದಲ್ಲಿ (Channapatna) ಎಷ್ಟು ಕೆರೆ ಇದೆ ಅಂತ ಗೊತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಈಗ ಐರನ್ ಮ್ಯಾನ್ – 70.3 ರೇಸ್‌ನಲ್ಲಿ ವಿಜೇತರಾದ ಪ್ರಥಮ ಜನಪ್ರತಿನಿಧಿ!
ನಾನು, ಸುರೇಶ್ ಸೇರಿ ಒಂದು ಹೊಸ ಯೋಜನೆ ಬಗ್ಗೆ ಆಲೋಚನೆ ಮಾಡಿದ್ದೇವೆ. ಕೆಆರ್‌ಎಸ್‌ನಿಂದ ಮಾರ್ಕೋನಹಳ್ಳಿ ಡ್ಯಾಂಗೆ ನೀರು ತಂದು ಅದನ್ನು ಕಣ್ವ, ಇಗ್ಗಲೂರು ಡ್ಯಾಂಗೆ ತರಬಹುದು. ಕುಮಾರಸ್ವಾಮಿ ಎರಡು ಬಾರಿ ಗೆದ್ದರೂ ಒಂದು ಕೆರೆ ತುಂಬಿಸಲಿಲ್ಲ. ಶಿವಲಿಂಗೇಗೌಡರಿಗೆ ಅವರ ಎಲ್ಲಾ ಮರ್ಮಗಳು ಗೊತ್ತು. ಅವರ ಪ್ಲಾನ್‌ಗಳು ನಮ್ಮ ಬಹುತೇಕ ನಾಯಕರಿಗೆ ಗೊತ್ತು. ನನ್ನ ಮೇಲೆ ಅವರ ಮನೆಯವರು ಯಾಕೆ ಹೀಗೆ ಮುಗಿಬೀಳುತ್ತಿದ್ದಾರೋ ಗೊತ್ತಿಲ್ಲ. ನಾನೇನು ತಪ್ಪು ಮಾಡಿದ್ದೀನಿ? ನನ್ನ ಮೇಲೆ ಯಾಕೆ ಹೀಗೆ ಬೀಳ್ತಾರೆ? ಕುಮಾರಸ್ವಾಮಿ ಬಂದ್ರು, ಅವರ ಪತ್ನಿ ಬಂದ್ರು ಈಗ ಮಗ ಬಂದ್ರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಕ್ಫ್ ಆಸ್ತಿ ವಿವಾದ | 1964-1974ರ ದಾಖಲೆ ಪರಿಶೀಲಿಸಿ ಕ್ರಮವಹಿಸಲು ಟಾಸ್ಕ್ ಫೋರ್ಸ್ ರಚನೆ
ಮೊನ್ನೆ 500 ಬಸ್ ಮಾಡಿ ಜನ ಸೇರಿಸಿ ನಾಮಪತ್ರ ಸಲ್ಲಿಕೆ ಮಾಡಿದರು. ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ಎಷ್ಟಾದ್ರೂ ಹಣ ತಂದು ಚುನಾವಣೆ ಮಾಡೋಕೆ ನಿಂತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದೆ. ಈಗ ಚುನಾವಣಾ ಆಯೋಗ ಕೇಸ್ ಹಾಕಿ 96 ಬಸ್ ಸೀಜ್ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಸಕ್ರಿಯವಾಗಿದ್ದ ಕೇರಳ ದಂಪತಿ ಮನೆಯಲ್ಲಿ ಶವವಾಗಿ ಪತ್ತೆ; ಕಾರಣ ನಿಗೂಢ
ಯಥೇಚ್ಛವಾಗಿ ಹಣ ಸುರಿದು ಚುನಾವಣೆ ಮಾಡೋದು ಕುಮಾರಸ್ವಾಮಿಗೆ ಇರುವ ಒಂದೇ ಅಸ್ತ್ರ. ನನ್ನ ಬಳಿ ಅಷ್ಟು ಹಣ ಇಲ್ಲ, ಎರಡು ಬಾರಿ ಸೋತಿದ್ದೇನೆ. ಜನರೇ ನನ್ನ ಪರವಾಗಿ ಚುನಾವಣೆ ಮಾಡುತ್ತಾರೆ. ನನ್ನ ಎಲ್ಲರೂ ಪಕ್ಷಾಂತರಿ ಎನ್ನುತ್ತಾರೆ. ಯಾಕೆ ಕಾಂಗ್ರೆಸ್ ಬಿಟ್ಟು ಹೋಗಿದ್ರಿ ಎಂದು ಕೇಳುತ್ತಾರೆ. ಅವತ್ತು ನೀರಾವರಿ ಯೋಜನೆಗಾಗಿ ಪಕ್ಷ ಬಿಟ್ಟು ಹೋಗಿದ್ದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಪಕ್ಷಾಂತರ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್ ಸುಪ್ರೀಂ ಲೀಡರ್
ಸರ್ಕಾರದಲ್ಲಿ ನಾನು ಶಾಸಕನಾಗಿ ಸೇರಿಕೊಂಡ ನಂತರ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾರೆ. ನಾನು ಡಿಕೆ ಸುರೇಶ್ ಸೇರಿಕೊಂಡು ನೀರಾವರಿ ಯೋಜನೆಗೆ ಹೆಚ್ಚು ಒತ್ತು ಕೊಡುತ್ತೇವೆ. ನಾನು ಎರಡು ಬಾರಿ ಸೋತು ಸುಣ್ಣ ಆಗಿದ್ದೇನೆ. ಹಾಗಾಗಿ ನೀವು ಈ ಬಾರಿ ನನಗೆ ಆಶೀರ್ವಾದ ಮಾಡಬೇಕು. ನನ್ನ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಆಧಾರದ ಮೇಲೆ ಹಳ್ಳಿಕಾರ್ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ
ರಾಮಮನಗರ: ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ ಎಂದು ಚಿನ್ನಪಟ್ಟಣ ಕ್ಷೇತ್ರದ ಜನತೆ ಮುಂದೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಡಿಕೊಂಡರು.
ಉಪಚುನಾವಣೆ ಹಿನ್ನೆಲೆ ಮಾಕಳಿ ಗ್ರಾಮದ ಪ್ರಚಾರದಲ್ಲಿ ನಿಖಿಲ್, ಕುಮಾರಣ್ಣನ ನಾಯಕತ್ವಕ್ಕೆ ಇದು ಅಗ್ನಿ ಪರೀಕ್ಷೆ. ಇಲ್ಲಿ ನಿಖಿಲ್ ಪ್ರಶ್ನೆ ಅಲ್ಲ. ಎಲ್ಲವೂ ನಿಮ್ಮ ಕೈಯಲ್ಲಿದೆ. ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ. ದೇವೇಗೌಡರು, ಕುಮಾರಣ್ಣ ಅವ್ರು ಕೆಲಸ ಮಾಡಿದ್ದಾರೆ. ನನ್ನ ಕೊನೆ ಉಸಿರಿರೋವರೆಗೂ ನಿಮ್ಮ ಜೊತೆ ಇರ್ತೇನೆ. ಒಂದು ಅವಕಾಶ ಕೊಡಿ. ಈ ಜಿಲ್ಲೆಯಲ್ಲಿ ನಾವು ಹುಟ್ಟದೇ ಇರಬಹುದು. ಈ ಜಿಲ್ಲೆಗೆ ಹಲವಾರು ವರ್ಷದ ನಂಟಿದೆ. ದೇವೇಗೌಡರು ಇಗ್ಗಲೂರು ಬ್ಯಾರೇಜ್ ಕಟ್ಟದೆ ಹೋದ್ರೆ ಎಲ್ಲಿ ಕೆರೆಗೆ ನೀರು ತುಂಬಿಸುತ್ತಿದ್ದರು? ಗೋಲಿಬಾರ್ ಆಗಿ ಇಬ್ರು ತೀರಿಕೊಂಡ್ರು. ನಾನು ಆಗ ಚಿಕ್ಕ ಹುಡುಗ, ದೇವೇಗೌಡರು ಪಾಠ ಮಾಡಿದ್ದಾರೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ವಕ್ಫ್ ಬೋರ್ಡ್ ಜೊತೆ ಸೇರಿ ರೈತರ 15 ಸಾವಿರ ಎಕ್ರೆ ಭೂಮಿ ಕಬಳಿಸಲು ಸರ್ಕಾರದಿಂದ ಹುನ್ನಾರ: ಗೋವಿಂದ ಕಾರಜೋಳ
ಕುಮಾರಸ್ವಾಮಿ ದೇವೇಗೌಡರು ಕಣ್ಣಲ್ಲಿ ನೀರಾಕ್ತಾರೆ ಮರಳಾಗಬೇಡಿ ಅಂತಾರೆ. ಅವ್ರು ಕಣ್ಣೀರಾಕೋದು ನನಗಾಗಿ ಅಲ್ಲ. ರೈತರ ಪರವಾಗಿ, ನಾಡಿನ ಜನರು ನೋವಿನಲ್ಲಿದ್ದಾಗ ಕಣ್ಣಲ್ಲಿ ನೀರಾಕಿದ್ದಾರೆ. ಅದನ್ನ ಹೊರತುಪಡಿಸಿ ಅವರು ನನಗಾಗಿ ಕಣ್ಣೀರು ಹಾಕಲಿಲ್ಲ. ನನಗೆ ಆತ್ಮವಿಶ್ವಾಸ ತುಂಬಿ ದೇವೇಗೌಡ್ರು ಕಳುಹಿಸಿದ್ದಾರೆ. ನಿಮ್ಮ ಸಹಕಾರ ಇರಲಿ ಎಂದು ಜನತೆಯಲ್ಲಿ ಕೇಳಿಕೊಂಡರು.
ಕುಮಾರಸ್ವಾಮಿ ಅವ್ರನ್ನ ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಕುಮಾರಣ್ಣ ಅವ್ರು ಬಡವರ, ದಲಿತರ, ಯುವಕರು, ರೈತರ ಪರವಾಗಿ ಕೆಲಸ ಮಾಡಿದ್ದಾರೆ. ಕುಮಾರಣ್ಣರನ್ನು ಮುಖ್ಯಮಂತ್ರಿ ಮಾಡಿದ ಕೀರ್ತಿ ಚನ್ನಪಟ್ಟಣ ಜನತೆಗೆ ಸೇರಬೇಕು. ಮಂಡ್ಯದಲ್ಲಿ ಕುಮಾರಣ್ಣ ಲೋಕಸಭೆ ಗೆದ್ದಮೇಲೆ ತೆರವಾಗಿದೆ. ನಿನ್ನೆ ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ಈಗ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿರುವ ವ್ಯಕ್ತಿ, ಚುನಾವಣೆಯಲ್ಲಿ ನಿಲ್ಲಬೇಕು ಅಂತಾ ಕೇಳಿದ್ರು. ಆಗ ಕುಮಾರಣ್ಣ, ಮೊದಲು ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ರಾಷ್ಟ್ರೀಯ ನಾಯಕರ ಜೊತೆ ಹೋಗಿ ಮಾತಾಡೋಣ ಅಂದಿದ್ರು. ಅದಾದ ನಂತರ ಬೆಳವಣಿಗೆ ನೀವೆ ನೋಡಿದ್ದೀರಿ. ಬೆಂಗಳೂರು ಖಾಸಗಿ ಹೋಟೆಲ್‌ನಲ್ಲಿ ಅವರ ಜೊತೆ ಚರ್ಚೆ ಮಾಡಿದ್ವಿ. ಜೆಡಿಎಸ್ ಸಾಂಪ್ರದಾಯಿಕ ಮತಗಳಿವೆ, ಜೆಡಿಎಸ್‌ನಿಂದ ನಿಂತ್ಕೊಳ್ಳಿ ಅಂತಾ ನಮ್ಮ ನಾಯಕರು ಹೇಳಿದ್ರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇದ್ರೂ ನಮ್ಮ ನಾಯಕರು ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಅಂತಾ ಕೇಳಿದ್ರು. ಆದಾದ ಮೇಲೆ ಏನೆಲ್ಲ ಮಾತಾಡಿದ್ರು ನೋಡಿದ್ದೀರಿ. ಏನೇ ನೋವಿದ್ರು ಸಹಿಸ್ಕೊಂಡ್ವಿ. ತರಾತರಿಯಲ್ಲಿ ರಾಜೀನಾಮೆ ಕೊಟ್ಟು ಹೋಗಿ ಕಾಂಗ್ರೆಸ್ ಸೇರಿಕೊಂಡರು ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕ ಸೈಬರ್ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಮನ್ ಕಿ ಬಾತ್‌ನಲ್ಲಿ ಮೋದಿ ಜಾಗೃತಿ
ಬಿಜೆಪಿ ಅಷ್ಟೆಲ್ಲ ಸ್ಥಾನ ಕೊಟ್ಟಿದ್ರು ಹೋದ್ರು. ಅವ್ರು ಯಾವ ಪಕ್ಷದಲ್ಲೂ ಉಳಿದುಕೊಳ್ಳಲ್ಲ. ಡಿ.ಕೆ.ಶಿವಕುಮಾರ್ ಮಾತು ಬಹಳ ಬೇಸರ ಆಗಿದೆ. ಹಿಂದೆ ದೇವೇಗೌಡರಿಗೆ ಮೋಸಮಾಡಿ ನಮ್ಮ ಪಕ್ಷದ ಕಾರ್ಯಕರ್ತರು ನಿಮ್ಮನ್ನ ಸಂಸದರಾಗಿ ಮಾಡಿದ್ರು. ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದುಕೊAಡಿರಲಿಲ್ಲ. ರಾಜ್ಯದಲ್ಲಿ ಸಭೆ ಮಾಡಿ ಸಂಘಟನೆ ಮಾಡ್ತಿದ್ದೆ. ಈಗ ಒಬ್ಬ ವ್ಯಕ್ತಿ ತೆಗೆದುಕೊಂಡ ತೀರ್ಮಾನ, ಇಡಿ ಸಚಿವ ಸಂಪುಟ ಇಲ್ಲಿ ಬೀಡು ಬಿಟ್ಟಿದ್ದರಿಂದ ಕಾರ್ಯಕರ್ತ ಒತ್ತಾಯ ಮಾಡಿದ್ರು. ರಾಮನಗರ, ಮಂಡ್ಯ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ರಾಮನಗರದಲ್ಲಿ ಕೂಪನ್ ಕಾರ್ಡ್ ಕೊಟ್ಟಿದ್ರು. ಅದಕ್ಕೆ ಉತ್ತರ ಕೊಡಬೇಕಲ್ವಾ? ನಾವು ಕುತಂತ್ರ ಮಾಡಿ ರಾಜಕಾರಣ ಮಾಡಿದವರಲ್ಲ ಎಂದು ಮಾತನಾಡಿದರು.