-ಶ್ರೀನಿವಾಸಪುರದ ಮಾಜಿ ಸ್ಪೀಕರ್ ಅರಣ್ಯ ಭೂಮಿ ಒತ್ತುವರಿ ಪ್ರಸ್ತಾಪಿಸಿ ಟಾಂಗ್
ಬೆಂಗಳೂರು: ಕೋರ್ಟ್ ಕೊಟ್ಟಿರುವ ತೀರ್ಪನ್ನು ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.
ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ. ಈ ಕುರಿತು ಸಚಿವ ಈಶ್ವರ್ ಖಂಡ್ರೆಯವರು (Eshwar Khandre) ಮೊದಲು ನೋಡಬೇಕು. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಮೊದಲು ಲೂಟಿ ಹೊಡೆದಿರುವುದನ್ನು ನೋಡಿ, ಎಷ್ಟು ಎಕರೆ ಲೂಟಿ ಆಗಿದೆ? ತಿಳಿದುಕೊಳ್ಳಿ. ಶುಕ್ರವಾರ (ಅ.25) ಐದು ಎಕರೆ ಭೂಮಿಗೆ ಬಲವಂತವಾಗಿ ಹೋಗಿ ಫೆನ್ಸಿಂಗ್ ಹಾಕಿಸಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಹೆಚ್‌ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ ಎಂದು ಆಗ್ರಹಿಸಿದರು.ಇದನ್ನೂ ಓದಿ: ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಕೆಶಿ
ರಾಮನಗರ: ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಇಂದು (ಗುರುವಾರ) ಮುಕ್ತಾಯವಾಗಿದ್ದು, ಉಪಚುನಾವಣೆಗೆ 50 ಮಂದಿ 62 ನಾಮಪತ್ರ ಸಲ್ಲಿಕೆಯಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಮೂರು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 4 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. SDPI ನಿಂದ ಫಾಸಿಜ್, ಕೆಜೆಪಿಯಿಂದ ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್‌ನಿಂದ ಪ್ರೇಮ್ ಕುಮಾರ್ ಸೇರಿ ಇತರ ಪಕ್ಷಗಳು ಹಾಗೂ ಪಕ್ಷೇತರವಾಗಿ 50 ಮಂದಿಯಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅ.28ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.
ಚನ್ನಪಟ್ಟಣ ಉಪಚುನಾವಣೆ ರಣಕಣ:
ಉಪಚುನಾವಣೆ ಕಾವು ಏರುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಇಂದು ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲಿಗೆ ಚನ್ನಪಟ್ಟಣ, ಸತತವಾಗಿ ಎರಡು ಬಾರಿ ಸೋಲುಂಡವರ ನಡುವಿನ ಕದನ ಕಣವಾಗಿ ಮಾರ್ಪಟ್ಟಿದೆ. ನಿಖಿಲ್ ನಾಮಪತ್ರ ಸಲ್ಲಿಕೆಗೆ ಮುನ್ನ ಜೆಡಿಎಸ್-ಬಿಜೆಪಿ ನಾಯಕರ ಜೊತೆಗೂಡಿ ರೋಡ್ ಶೋ ನಡೆಸಿದ್ರು. ಮೈತ್ರಿ ಸಮಾವೇಶ ನಡೆಸಿದ್ರು.. ನಿಖಿಲ್‌ರನ್ನು ನಿಮ್ಮ ಮಡಿಲಿಗೆ ಹಾಕ್ತೇನೆ ಎನ್ನುತ್ತಾ ಕುಮಾರಸ್ವಾಮಿ ಭಾವುಕರಾದ್ರು. ಈ ಕ್ಷೇತ್ರಕ್ಕೆ ಕನಕಪುರ ಬ್ರದರ್ಸ್ ಕೊಡುಗೆ ಏನು ಎಂದು ಪ್ರಶ್ನೆ ಮಾಡಿದ್ರು. ಬಿಜೆಪಿ ನಾಯಕರು, ನಿಖಿಲ್ ಗೆಲ್ಲಿಸುವ ಮಾತಾಡಿದ್ರು. ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ರು. ಈ ಮಧ್ಯೆ, ಕುಮಾರಸ್ವಾಮಿ ಭಾವನಾತ್ಮಕವಾಗಿ ಮಾತನಾಡೋದು, ಅಳೋದು ನೋಡಿ ನೋಡಿ ಜನರಿಗೆ ಸಾಕಾಗಿದೆ. ಇದಕ್ಕೆಲ್ಲ ಜನ ಮಾರುಹೋಗಲ್ಲ ಎಂದು ಸಿಎಂ ಟಕ್ಕರ್ ನೀಡಿದ್ದಾರೆ
ಶಿಗ್ಗಾಂವಿ ಉಪಚುನಾವಣೆ:
ಶಿಗ್ಗಾಂವಿ ಬೈಎಲೆಕ್ಷನ್‌ಗೆ ಟ್ವಿಸ್ಟ್ ಸಿಕ್ಕಿದೆ. ಶಿಗ್ಗಾಂವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ಬಂಡಾಯ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೇನೂ ನಾಮಪತ್ರ ಸಲ್ಲಿಕೆ ಅವಧಿ ಮುಗಿಯಬೇಕು ಎನ್ನುವಾಗ ಬೈಕ್‌ನಲ್ಲಿ ಧಾವಿಸಿದ ಅಜ್ಜಂ ಫೀರ್ ಖಾದ್ರಿ ಉಮೇದುವಾರಿಕೆ ಸಲ್ಲಿಸಿದ್ರು. ಯಾಸೀರ್ ಪಠಾಣ್ ರೌಡಿಶೀಟರ್ ಎಂದು ಆಕ್ರೋಶ ಹೊರಹಾಕಿದ್ರು. ಇದಕ್ಕೂ ಮುನ್ನ, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಯಾಸೀರ್ ಪಠಾಣ್ ನಾಮಪತ್ರ ಸಲ್ಲಿಕೆ ವೇಳೆ ಸಚಿವ ಶಿವಾನಂದ ಪಾಟೀಲ್ ಹೊರತುಪಡಿಸಿ ಪ್ರಮುಖರ‍್ಯಾರು ಕಾಣಿಸಿಕೊಳ್ಳಲಿಲ್ಲ. ಬಳಿಕ ನಡೆದ ರ‍್ಯಾಲಿಯಲ್ಲಿ ಸಚಿವ ಖಂಡ್ರೆ, ಜಮೀರ್, ಜಾರಕಿಹೊಳಿ ಕಾಣಿಸಿಕೊಂಡ್ರು. ಈ ನಡುವೆ ಬಂಡಾಯ ಎದ್ದಿರುವ ಖಾದ್ರಿ ಓಲೈಸಲು ಜಮೀರ್ ನೋಡಿದ್ರೂ, ಸದ್ಯಕ್ಕೆ ಪ್ರಯೋಜನವಾಗಿಲ್ಲ. ಸಿಎಂ ಮಾತ್ರ ಬಂಡಾಯ ಶಮನದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯಾಸೀನ್ ಕಾರ್ ಮೇಲೆ ಖಾದ್ರಿ ಬೆಂಬಲಿಗರು ದಾಳಿ ನಡೆಸಿದ್ದಾರೆ. ಮತ್ತೊಂದ್ದೆಡೆ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕೂಡ ನಾಮಿನೇಷನ್ ಹಾಕಿದ್ರು. ಈ ಕ್ಷಣಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಯಡಿಯೂರಪ್ಪ ಸೇರಿ ಪಕ್ಷದ ಪ್ರಮುಖರು ಸಾಕ್ಷಿಯಾದ್ರು. ಕಾಂಗ್ರೆಸ್ ಟೀಕೆಗಳನ್ನು ಬೊಮ್ಮಾಯಿ ಅಲ್ಲಗಳೆದ್ರು.. ಬಿಜೆಪಿ ಕುಟುಂಬ ರಾಜಕೀಯ ಮಾಡ್ತಿಲ್ಲ ಎಂದು ಜೋಶಿ ಸಮರ್ಥನೆ ಮಾಡಿಕೊಂಡಿದ್ದಾರೆ.
ಸಂಡೂರು ಉಪಚುನಾವಣೆ:
ಸಂಡೂರು ಉಪಸಮರದ ಕಾವೇರುತ್ತಿದೆ. ಇಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಭರ್ಜರಿ ರೋಡ್ ಶೋ ನಡೆಸಿದ್ರು. ವಿಜಯೇಂದ್ರ, ಜನಾರ್ದನ ರೆಡ್ಡಿ ಜೊತೆಗೆ ಶ್ರೀರಾಮುಲು ಕೂಡ ಕಾಣಿಸಿಕೊಂಡ್ರು. ಈ ವೇಳೆ ಬಳ್ಳಾರಿ ಲೋಕಸಭೆ ಎಲೆಕ್ಷನ್‌ಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿರೋ ಆರೋಪವನ್ನೇ ಮುಂದಿಟ್ಟು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿಗರು ವಾಗ್ದಾಳಿ ನಡೆಸಿದ್ರು. ಸಂಸದ ತುಕಾರಾಂ ಅವರಿಗೆ ಇದು ಕೊನೆ ಚುನಾವಣೆ. ಲೋಕಸಭೆ ಚುನಾವಣೆಯಲ್ಲಿ ಸಂಡೂರು ಜನರನ್ನ ಮರುಳು ಮಾಡಿ ಕಾಂಗ್ರೆಸ್ ಗೆದ್ದಿದೆ. ಈ ಬಾರಿ ಗೆದ್ದು ತೋರಿಸಲಿ ನೋಡೋಣ ಅಂತ ಸವಾಲ್ ಹಾಕಿದ್ರು. ಸಂಡೂರಿನಲ್ಲಿ ಈ ಬಾರಿ ಕಮಲ ಅರಳಿಸುವ ವಿಶ್ವಾಸವನ್ನು ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.
ರಾಮನಗರ: ಚನ್ನಪಟ್ಟಣ ಉಪಚುನಾವಣೆಯ (Channapatna Bypoll) ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ.
ಬಿಬಿಎ ಪದವೀಧರನಾಗಿರುವ ನಿಖಿಲ್ ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ.
ರಾಮನಗರ: ಚನ್ನಪಟ್ಟಣ ಉಪಚುನಾವಣಾ (Channapatna By Election) ಕಣ ರಂಗೇರಿದ್ದು, ಎನ್‌ಡಿಎ (NDA) ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ
ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ನಿಖಿಲ್‌ಗೆ ಹೆಚ್‌ಡಿಕೆ, ಆರ್.ಅಶೋಕ್, ಸದಾನಂದಗೌಡ, ಬಿ.ವೈ.ರಾಘವೇಂದ್ರ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
ಬೆಂಗಳೂರು: ನಿಖಿಲ್ ಕುಮಾರಸ್ವಾಮಿಯವರನ್ನು (Nikhil Kumaraswamy) ಚನ್ನಪಟ್ಟಣದ (Channapatna) ಎನ್‍ಡಿಎ ಅಭ್ಯರ್ಥಿ ಎಂದು ಘೋಷಿಸಿದ್ದೇವೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಇದೆ. ಮೋದಿಯವರ ಪಕ್ಷದಿಂದ ಬೆಂಬಲ ಇರುವ ಕಾರಣ ಅವರಿಗೆ ಗೆಲುವು ಖಚಿತ. ಕುಮಾರಸ್ವಾಮಿ, ಅಶೋಕ್ ಅವರು ಮತ್ತು ಎಲ್ಲಾ ಮುಖಂಡರು ಒಟ್ಟಾಗಿ ಸೇರಿದ್ದೇವೆ. ಇದು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯಲ್ಲ. ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿಖಿಲ್ ಕುಮಾರಸ್ವಾಮಿಯವರು ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಎನ್‍ಡಿಎ ಪಕ್ಷಗಳಾದ ಬಿಜೆಪಿ- ಜೆಡಿಎಸ್ ಪಕ್ಷಗಳ ಎಲ್ಲಾ ಪ್ರಮುಖರು ಒಟ್ಟಾಗಿ ಅಲ್ಲಿ ಪ್ರವಾಸ ಮಾಡುತ್ತೇವೆ. ನಂಬಿಕೆ ದ್ರೋಹಿಗಳಿಗೆ ಜನ ಪಾಠ ಕಲಿಸ್ತಾರೆ. ನಾನು ಬೇರೆಯವರ ಬಗ್ಗೆ ಒಂದು ಶಬ್ದ ಮಾತನಾಡಲು ಇಷ್ಟ ಪಡುವುದಿಲ್ಲ. ಪಕ್ಷಾಂತರ ಮಾಡಿದವರ ಬಗ್ಗೆ ಮಾತನಾಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.
ಈ ವೇಳೆ, ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಜೆಡಿಎಸ್ ಪಕ್ಷದ ನಾಯಕ ಸುರೇಶ್ ಬಾಬು, ಬಿಜೆಪಿ-ಜೆಡಿಎಸ್ ಪ್ರಮುಖರು ಇದ್ದರು.
– ನಿಖಿಲ್‌ಗೆ ಜೆಡಿಎಸ್-ಬಿಜೆಪಿ ಶಾಲು ಹೊದಿಸಿದ ಯಡಿಯೂರಪ್ಪ
– ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ‘ಮೈತ್ರಿ’ ನಾಯಕರು
ಬೆಂಗಳೂರು: ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಂತಾ ಘೋಷಣೆ ಮಾಡಿದ್ದೇವೆ. ಅವರ ಮೇಲೆ ಮೋದಿ ಆಶೀರ್ವಾದ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ತಿಳಿಸಿದರು.
ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಯಡಿಯೂರಪ್ಪ ಘೋಷಿಸಿದರು. ಬಳಿಕ ನಿಖಿಲ್‌ಗೆ ಹೂಗುಚ್ಛ ನೀಡಿ ನೀಡಿದರು. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಶಾಲನ್ನು ನಿಖಿಲ್‌ಗೆ ಯಡಿಯೂರಪ್ಪ ಹಾಕಿದರು. ಹೂವಿನ ಹಾರ ಹಾಕಿ ಅಭಿನಂದಿಸಿದರು. ಜೊತೆಗೆ ಎಲ್ಲಾ ನಾಯಕರು ವಿಕ್ಟರಿ ಸಿಂಬಲ್ ತೋರಿಸಿ ಪರಸ್ಪರ ಕೈ ಕುಲುಕಿದರು. ಇದನ್ನೂ ಓದಿ: ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ: ಹೆಚ್‌ಡಿಡಿ
ಈ ವೇಳೆ ಮಾತನಾಡಿದ ಬಿಎಸ್‌ವೈ, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಅಂತಾ ಘೋಷಣೆ ಮಾಡಿದ್ದೇವೆ. ಮೋದಿ ಆಶೀರ್ವಾದ ಇದೆ. ನಿಖಿಲ್ ಕುಮಾರಸ್ವಾಮಿ ನೂರಕ್ಕೆ ನೂರು ಗೆಲ್ತಾರೆ. ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಆಯ್ಕೆ ಮಾಡಿದ್ದೇವೆ. ಮೋದಿಯವರ ಆಶೀರ್ವಾದ, ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.
ನಾವೆಲ್ಲ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಗೆಲ್ತೇವೆ, ಬಂದು ಭೇಟಿ ಮಾಡ್ತೇವೆ. ಎನ್‌ಡಿಎ ನಾಯಕರು ಪ್ರವಾಸ ಮಾಡ್ತೀವಿ. ಪಕ್ಷಾಂತರ ಮಾಡಿದವರ ಬಗ್ಗೆ ಮಾತಾಡೊಲ್ಲ. ನಾವು ನಮ್ಮ ಅಭ್ಯರ್ಥಿ ಪರ ಕೆಲಸ ಮಾಡ್ತೀವಿ. ನಾವೆಲ್ಲ ಒಟ್ಟಾಗಿ ಕೆಲಸ ಮಾಡ್ತೀವಿ ಎಂದು ಹೇಳಿದರು. ಇದನ್ನೂ ಓದಿ: ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ದೊಡ್ಡ ಅಂತರದಲ್ಲಿ ನಿಖಿಲ್ ಗೆಲ್ತಾರೆ. ಯೋಗೇಶ್ವರ್ ಬಗ್ಗೆ ನಾನು ಮಾತಾಡೊಲ್ಲ. ನಿಖಿಲ್‌ಗೆ ನಾವು ಬೆಂಬಲ ಕೊಡ್ತೀವಿ ಎಂದು ತಿಳಿಸಿದರು.
ರಾಮನಗರ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಚನ್ನಪಟ್ಟಣದ ಬಸವನಗುಡಿ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಬೃಹತ್ ರೋಡ್ ಶೋ ನಡೆಸಿ ದೋಸ್ತಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಶಕ್ತಿಪ್ರದರ್ಶನ ಮಾಡಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ, ಶಾಸಕರಾದ ಹೆಚ್‌ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್, ಕದಲೂರ್ ಉದಯ್, ಕುಣಿಗಲ್ ರಂಗನಾಥ್, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿ ಪ್ರಮುಖ ನಾಯಕರು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಈ ರೋಡ್ ಶೋನಲ್ಲಿ ಸುಮಾರು 20,000 ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವು
ಬೃಹತ್ ರೋಡ್ ಶೋ ಬಳಿಕ ಚುನಾವಣಾಧಿಕಾರಿ ಬಿನೋಯ್ ಅವರಿಗೆ ಸಿಪಿ ಯೋಗೇಶ್ವರ್ 2 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದೇನೆ. ಸಿಎಂ, ಡಿಸಿಎಂ ಕಾಂಗ್ರೆಸ್ ಶಾಸಕರ ಜೊತೆಗೂಡಿ ಸಲ್ಲಿಕೆ ಮಾಡಿದ್ದೇನೆ. ನನಗೆ ಆತ್ಮವಿಶ್ವಾಸ ಇದೆ, ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ. ರಾಷ್ಟ್ರೀಯ ಪಕ್ಷದ ಚಿಹ್ನೆಯಡಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಮೆಡಿಕಲ್ ರಿರ್ಪೋಟ್‌ನಲ್ಲಿ ದರ್ಶನ್‌ಗೆ L5 S1ನಲ್ಲಿ ಸಮಸ್ಯೆ ಇರುವುದು ದೃಢ- ನಾಳೆ ಜೈಲಿಗೆ ಪತ್ನಿ ಭೇಟಿ
ನಾನು ಎರಡು ಬಾರಿ ಸೋತಿದ್ದೇನೆ. ಅಭಿವೃದ್ಧಿ ಮಾಡಿದರೂ ತಾಂತ್ರಿಕ ಕಾರಣಗಳಿಂದ ಸೋತಿದ್ದೆ ಅಷ್ಟೇ. ನನ್ನನ್ನು ಪಕ್ಷಾಂತರಿ ಅಂತೀರಾ ಇದು ಬಹಳ ನೋವಾಗುತ್ತೆ. ನನಗೆ ಟಿಕೆಟ್ ಸಿಗಲ್ಲ ಎಂದು ಲೋಕಸಭಾ ಚುನಾವಣೆಯ ಬಳಿಕ ಕುಮಾರಸ್ವಾಮಿ ನಡವಳಿಕೆಯಿಂದ ಗೊತ್ತಾಯಿತು. ಕೊನೆಯ ತಂತ್ರಗಾರಿಕೆಯಂತೆ ಭಾವನಾತ್ಮಕವಾಗಿ ಚುನಾವಣೆ ಮಾಡೋಕೆ ಹೊರಟಿದ್ದಾರೆ. ಅವರು ಅಂದುಕೊಂಡಂತೆ ಅವರ ಮಗನನ್ನೇ ಸ್ಪರ್ಧೆ ಮಾಡಿಸುತ್ತಿದ್ದಾರೆ. ಮೊದಲಿಂದಲೂ ಅವರಿಗೆ ಮಗನನ್ನೇ ನಿಲ್ಲಿಸಬೇಕು ಅಂತಾ ಇತ್ತು. ಅದೇ ರೀತಿ ಇವಾಗ ನಿಖಿಲ್ ಕುಮಾರಸ್ವಾಮಿಯನ್ನು ಸ್ಪರ್ಧೆ ಮಾಡಿಸುತ್ತಿದ್ದಾರೆ. ಭಾವನಾತ್ಮಕ, ಕಣ್ಣೀರು ಹಾಕಿ ಮಗನನ್ನು ಗೆಲ್ಲಿಸೋಕೆ ತಂತ್ರ ಮಾಡಿದ್ದಾರೆ. ನಾನು ಅವರ ಬಗ್ಗೆ ಜಾಸ್ತಿ ಮಾತಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದ ಜೊತೆ ಚೇಷ್ಟೆ – ಶೀಘ್ರವೇ ಜಸ್ಟಿನ್ ಟ್ರುಡೋ ರಾಜೀನಾಮೆ?
ಹಾವೇರಿ: ಸಿಪಿ ಯೋಗೇಶ್ವರ್ (CP Yogeshwar) ಮನವೊಲಿಸಲು ಬಹಳ ಪ್ರಯತ್ನ ಮಾಡಿದ್ದೇವೆ. ಆದರೆ ಆಗಲಿಲ್ಲ. ಅವರು ಕಾಂಗ್ರೆಸ್ (Congress) ಸೇರಿರೋದು ದುರ್ದೈವದ ಸಂಗತಿ. ಕಾಂಗ್ರೆಸ್‌ಗೆ ಅಲ್ಲಿ ಅಭ್ಯರ್ಥಿಯೇ ಇರಲಿಲ್ಲ. ಅಲ್ಲಿ ಸುಲಭವಾಗಿ ಗೆಲ್ಲಬಹುದಿತ್ತು. ಆದರೂ ಚೆನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರ (HD Kumaraswamy) ದೊಡ್ಡ ಪ್ರಭಾವ ಇದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಈ ಕುರಿತು ಮಾತನಾಡಿದ ಅವರು, ಕಳೆದ ಬಾರಿ ಅಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಕುಮಾರಸ್ವಾಮಿ ಗೆದ್ದಿದ್ದರು. ಖಂಡಿತವಾಗಿ ಅಲ್ಲಿ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ. ಮೈತ್ರಿ ಅಭ್ಯರ್ಥಿ ಯಾರು ಅಂತ ನೀವು ಕುಮಾರಸ್ವಾಮಿಯವರನ್ನೇ ಕೇಳಬೇಕು. ಡಿಕೆ ಸುರೇಶ್ ಕಣಕ್ಕೆ ಇಳಿಸುವ ಬಗ್ಗೆ ಏನು ಗೊತ್ತಿಲ್ಲ. ಆದರೆ ಕಾಂಗ್ರೆಸ್‌ಗೆ ಅಲ್ಲಿ ಬೇಸ್ ಇಲ್ಲ ಅನ್ನೋದಂತೂ ಸ್ಪಷ್ಟ ಎಂದರು. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನು ವಿದ್ಯುತ್ ತಂತಿಗೆ ನೂಕಿ ಹತ್ಯೆ ಆರೋಪ
ವಿನಯ್ ಕುಲಕರ್ಣಿ ಪುತ್ರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿ, ಯಾರೇ ಆಗಲಿ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿನೇ. ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿಯೇ ಎದುರಿಸುತ್ತೇವೆ. ಸೌಹಾರ್ದ ಚುನಾವಣೆ ಮಾಡುತ್ತೇವೆ. ಅಸಮಾಧಾನ ಪ್ರತಿ ಚುನಾವಣೆಯಲ್ಲಿ ಇರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ತುಮಕೂರು| ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು
ಬೆಂಗಳೂರು: ಯೋಗೇಶ್ವರ್ (C P Yogeshwar) ಕಾಂಗ್ರೆಸ್ ಸೇರ್ಪಡೆ ಆಗಿರೋದು ಆಶ್ಚರ್ಯ ಏನು ಇಲ್ಲ. ಇದು ನಿರೀಕ್ಷಿತವೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ.
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಗಾಳಿಯಲ್ಲಿ ಗುಂಡು ಹೊಡೆಯೋ ಆರೋಪ ಅಲ್ಲ. ಅವರು ಯಾವಾಗ ಬಿಜೆಪಿ ಪರಿಷತ್ ಸ್ಥಾನಕ್ಕೆ ತರಾತುರಿಯಲ್ಲಿ ರಾಜೀನಾಮೆ ಕೊಟ್ರೋ ಆಗಲೇ ರಾಜಕೀಯ ವಿದ್ಯಮಾನಗಳ ಬೆಳವಣಿಗೆ ಬಗ್ಗೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುತ್ತಾರೆ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವಿಲ್ಲ ಎಂದರು. ಇದನ್ನೂ ಓದಿ: ಲಕ್ಷಾಂತರ ರೂ. ಬೆಲೆ ಬಾಳುವ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಇಬ್ಬರು ಅಂದರ್
ಚನ್ನಪಟ್ಟಣಕ್ಕೆ (Channapatna) ನನ್ನ ಹೆಸರು 2 ತಿಂಗಳಿಂದ ಚಾಲ್ತಿಯಲ್ಲಿದೆ. ಪಕ್ಷದ ಕಾರ್ಯಕರ್ತರು ನಿಖಿಲ್‌ಗೆ ಟಿಕೆಟ್ ಸಿಕ್ಕರೆ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು. ನಾನು ಸ್ಪರ್ಧೆ ಮಾಡೋದಕ್ಕೆ ಧೈರ್ಯದ ಪ್ರಶ್ನೆ ಅಲ್ಲ. ಯಾವುದೇ ಸ್ಪರ್ಧೆ ಅಂತಿಮವಾಗಬೇಕಾದರೆ ಎನ್‌ಡಿಎ ಕಡೆಯಿಂದ ಘೋಷಣೆ ಆಗಬೇಕಿದೆ. ಕುಮಾರಸ್ವಾಮಿ ಅವರು ನಿನ್ನೆ ಹೇಳಿದ್ದಾರೆ ತಾಳಿದವನು ಬಾಳಿಯಾನು ಎಂದು ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇಷ್ಟು ದಿನ ಅತ್ಯಂತ ತಾಳ್ಮೆಯಿಂದ ನಾವು ಕಾದಿದ್ದೇವೆ. ಈಗಲೂ ಕೂಡಾ ಬಿಜೆಪಿ (BJP) ರಾಜ್ಯದ ನಾಯಕರು ನಮ್ಮ ಪಕ್ಷದ ನಾಯಕರು ಕೂಡಿ ಚರ್ಚೆ ಮಾಡಿ ಯಾರು ಎನ್‌ಡಿಎ ಅಭ್ಯರ್ಥಿ ಆಗಬೇಕು ಎಂದು ತೀರ್ಮಾನ ಮಾಡುತ್ತೇವೆ. ಅಭ್ಯರ್ಥಿ ಯಾರು ಅಂತ ಎನ್‌ಡಿಎ ಘೋಷಣೆ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಕಟ್ಟಡ ಕುಸಿತ- ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಮಾಲೀಕ ಅರೆಸ್ಟ್
ನಿಖಿಲ್ ನಿಲ್ಲಬೇಕು ಅಂತ ಕಾರ್ಯಕರ್ತರು ಹೇಳಿದರೆ ಅಯ್ಯೋ ರಾಮ ದೇವೇಗೌಡರ ಕುಟುಂಬ ಬಿಟ್ಟರೆ ಇನ್ಯಾರು ಸ್ಪರ್ಧೆ ಮಾಡೋಕೆ ಆಗುವುದಿಲ್ಲವಾ ಎಂದು ಪ್ರಶ್ನೆ ಕೇಳುತ್ತಾರೆ. ಮತ್ತೊಂದು ಕಡೆ ಧೈರ್ಯದ ಪ್ರಶ್ನೆಯೂ ಕೇಳುತ್ತಾರೆ. ಇದಕ್ಕೆ ನಾನು ಏನು ಉತ್ತರ ಕೊಡಲಿ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಉತ್ತರ ಪ್ರದೇಶ | ಅಕ್ರಮ ಸಂಬಂಧದ ಶಂಕೆ – ಕತ್ತು ಸೀಳಿ ಪತ್ನಿಯ ಕೊಲೆಗೈದ ಪತಿ
ರಾಮನಗರ ಜೆಡಿಎಸ್ (JDS) ಮುಕ್ತ ಮಾಡಲು ಈ ಆಪರೇಷನ್ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶ ಹಳೆ ಮೈಸೂರು ಭಾಗದಲ್ಲಿ ನೋಡಿದ್ದೇವೆ. 14 ಕ್ಷೇತ್ರಗಳ ಪೈಕಿ 12 ಸ್ಥಾನ ಜನರು ಕೊಟ್ಟರು. 12 ಸೀಟು ಬರಲು ಜೆಡಿಎಸ್ ಮತ್ತು ಕುಮಾರಸ್ವಾಮಿ ಕಾರಣ. ಇದು ಬಿಜೆಪಿ ರಾಷ್ಟ್ರೀಯ ನಾಯಕರ ಗಮನದಲ್ಲೂ ಇದೆ. ಕಾಂಗ್ರೆಸ್‌ನವರಿಗೆ ರಾಜ್ಯದಲ್ಲಿ ಟಾರ್ಗೆಟ್ ಇರೋದು ಕುಮಾರಸ್ವಾಮಿ ಅವರು. ಕಳೆದ ಚುನಾವಣೆ ಫಲಿತಾಂಶ ಬಳಿಕ ಆಗಿರೋ ಕೆಲ ಘಟನೆಗಳು ಎಲ್ಲರಿಗೂ ಗೊತ್ತು. ಕುಮಾರಸ್ವಾಮಿ ಟಾರ್ಗೆಟ್ ಆಗಿದ್ದಾರೆ. ಆದರೆ ಇವೆಲ್ಲವನ್ನು ಮೆಟ್ಟಿ ನಿಲ್ಲುವ ಶಕ್ತಿ ಚನ್ನಪಟ್ಟಣ ಜನತೆ ನಮಗೆ ಕೊಡುತ್ತಾರೆ ಅನ್ನೋ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ಜೈಲು ನಿಯಮ ಉಲ್ಲಂಘನೆ – ದರ್ಶನ್ ಒಳಿತಿಗೆ ಪತ್ನಿ ಕಟ್ಟಿದ್ದ ದಾರ ತೆಗೆಸುವ ಸಾಧ್ಯತೆ
ಡಾ.ಮಂಜುನಾಥ್ ಪತ್ನಿ ಅನಸೂಯ ಅಭ್ಯರ್ಥಿ ಆಗೋ ಬಗ್ಗೆ ಕಾದು ನೋಡಿ ಎಂದು ಕುತೂಹಲವಿಟ್ಟರು. ಕುಮಾರಸ್ವಾಮಿ ಬಿಜೆಪಿಯಲ್ಲಿ (BJP) ಒಕ್ಕಲಿಗ ನಾಯಕರನ್ನ ಬೆಳೆಯಲು ಬಿಡುತ್ತಿಲ್ಲ ಎಂಬ ಯೋಗೇಶ್ವರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್ ಅವರು ಪತ್ರಿಕೆಗೆ ಸಂದರ್ಶನ ಕೊಟ್ಟಿದ್ದರು. ಅದರಲ್ಲಿ ಬಿಜೆಪಿಯ ಒಕ್ಕಲಿಗ ನಾಯಕರನ್ನ ಕುಮಾರಸ್ವಾಮಿ ತುಳಿಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈಗ ಯೋಗೇಶ್ವರ್ ಇಂತಹ ಹೇಳಿಕೆ ಕೊಡಲು, ಕುಮ್ಮಕ್ಕು ಕೊಡಲು ಯಾರು ಅನ್ನೋದು ನಮಗೆ ಮೊದಲೇ ಅರ್ಥ ಆಗಿತ್ತು. ಈಗ ರಾಜ್ಯದ ಜನರಿಗೆ ಅರ್ಥ ಆಗಿದೆ ಎಂದು ಕಾಂಗ್ರೆಸ್ ಮತ್ತು ಯೋಗೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ – ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ
ಬೆಂಗಳೂರು: ಈ ಬಾರಿ ರಾಮನಗರ (Ramanagara) ಜಿಲ್ಲೆಯಲ್ಲಿ ಆಪರೇಷನ್ ಆಲೌಟ್ ಜೆಡಿಎಸ್ (JDS) ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸಿಎಂ ಮುಂದೆ ಶಪಥ ಮಾಡಿದ್ದಾರೆ.
ಸಿಪಿ ಯೋಗೇಶ್ವರ್ (CP Yogeshwar ) ಅವರನ್ನು ಸಿಎಂ ನಿವಾಸಕ್ಕೆ ಕರೆ ತಂದ ಬಳಿಕ ಡಿಕೆಶಿ, ಈ ಚುನಾವಣೆ ನನ್ನ ಸೋಲು ಗೆಲುವು ಅಲ್ಲ, ಇದು ಆಪರೇಷನ್ ಆಲೌಟ್ ಎಂದು ಹೇಳಿದ್ದಾರೆ. ಈ ಮೂಲಕ ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಜೆಡಿಎಸ್ ಆಲೌಟ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಸಲ ಆಲೌಟ್ ಬಿಡಿ ಎಂದು ಧ್ವನಿಗೂಡಿಸಿದ್ದಾರೆ. ಇದನ್ನೂ ಓದಿ: ಮಿಡ್‌ನೈಟ್ ಆಪರೇಷನ್ ಸಕ್ಸಸ್: ಕಾಂಗ್ರೆಸ್‌ಗೆ ಯೋಗೇಶ್ವರ್ ಸೇರ್ಪಡೆ
ರಾಮನಗರದಲ್ಲಿ ಒಟ್ಟು 4 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್, ಮಾಗಡಿಯಲ್ಲಿ ಬಾಲಕೃಷ್ಣ, ರಾಮನಗರದಲ್ಲಿ ಇಕ್ಬಾಲ್ ಹುಸೇನ್ ಇದ್ದಾರೆ. ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಇರುವ ಕಾರಣ ಈ ಕೋಟೆಯನ್ನು ಒಡೆಯಲು ಡಿಕೆಶಿಗೆ ಸಾಧ್ಯವಾಗಿರಲಿಲ್ಲ.
2018ರ ಚುನಾವಣೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರದಲ್ಲಿ ಗೆದ್ದ ಬಳಿಕ ರಾಮನಗರ ಕ್ಷೇತ್ರಕ್ಕೆ ಹೆಚ್‌ಡಿಕೆ ರಾಜೀನಾಮೆ ನೀಡಿದ್ದರು, ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಜಯಗಳಿಸಿದ್ದರು. 2023ರ ಚುನಾವಣೆಯಲ್ಲಿ ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿ ಸೋತಿದ್ದರು.