Tag: jds

  • ಜೆಡಿಎಸ್‌ನಿಂದ ಕಣಕ್ಕೆ ಇಳಿಯುತ್ತಾರಾ ಯೋಗೇಶ್ವರ್‌? – ಕೊನೆ ಕ್ಷಣದ ಕಸರತ್ತು ಆರಂಭ

    ಜೆಡಿಎಸ್‌ನಿಂದ ಕಣಕ್ಕೆ ಇಳಿಯುತ್ತಾರಾ ಯೋಗೇಶ್ವರ್‌? – ಕೊನೆ ಕ್ಷಣದ ಕಸರತ್ತು ಆರಂಭ

    ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ (By Election) ಕಾವು ಜೋರಾಗಿದ್ದು ಅದರಲ್ಲೂ ಚನ್ನಪಟ್ಟಣ (Channapatna) ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ.

    ಕಾಂಗ್ರೆಸ್ (Congress) ಹಾಗೂ ದೋಸ್ತಿ ಪಡೆಗೆ ಪ್ರತಿಷ್ಠೆಯ ಕಣವಾಗಿರುವ ಕಾರಣ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್‌ಗೆ (CP Yogeshwar) ಜೆಡಿಎಸ್ ಮತ್ತೊಂದು ಕೊನೆಯ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.

    ಸಿಪಿ ಯೋಗೇಶ್ವರ್‌ ಅವರನ್ನು ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡಲು ಮನವೊಲಿಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಕಸರತ್ತು ನಡೆಸಿದೆ. ನಾಮಪತ್ರ ಸಲ್ಲಿಕೆ 3 ದಿನ ಇರುವಾಗಲೂ ಯೋಗೇಶ್ವರ್‌ಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ಒತ್ತಡ ಹಾಕಲಾಗ್ತಿದೆ.

    ಕಾಂಗ್ರೆಸ್‌ ಇನ್ನೂ ಅಭ್ಯರ್ಥಿಯ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.  ಈ ಕಾರಣಕ್ಕೆ ದಿನದಿಂದ ದಿನಕ್ಕೆ ಚನ್ನಪಟ್ಟಣ  ಹೈವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ.

    ದೋಸ್ತಿಗಳ ಮಧ್ಯೆ ಇರೋ ಆಯ್ಕೆಗಳೇನು?
    ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧೆ ಮಾಡಿಸುವುಂತೆ ಜೆ.ಪಿ ನಡ್ಡಾ, ಜೋಷಿ ಮೂಲಕ ಸಿಪಿವೈ ಮನವೊಲಿಕೆಗೆ ಯತ್ನ ನಡೆಯುತ್ತಿದೆ. ಜೆಡಿಎಸ್‌ನಿಂದ ಸ್ಪರ್ಧಿಸದೇ ಇದ್ದರೆ ಬಿಜೆಪಿಯಿಂದಲೇ ಟಿಕೆಟ್ ನೀಡಲು ಒಪ್ಪಿಗೆ ನೀಡುವುದು. ಡಿಕೆ ಶಿವಕುಮಾರ್‌ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಖಭಂಗ ಮಾಡಲು ಬಿಜೆಪಿಗೆ ಕ್ಷೇತ್ರ ಬಿಟ್ಟುಕೊಡುವುದು.

    ಜೆಡಿಎಸ್‌ನಿಂದ ಇಳಿಯುತ್ತಾರಾ?
    ಈ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಯೋಗೇಶ್ವರ್‌ ನಿರ್ಣಯ ಏನಿರಬಹುದು ಎಂಬ ಕುತೂಹಲ ಹೆಚ್ಚಾಗಿದೆ.

    ಯೋಗೇಶ್ವರ್‌ ಪ್ರಭಾವಿಯೇ?
    1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್‌ 2004 ಮತ್ತು 2008 ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. 2013 ರಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಯೋಗೇಶ್ವರ್‌ 2018 ಮತ್ತು 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು. 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ 96,592 ಮತಗಳನ್ನು ಪಡೆದರೆ ಯೋಗೇಶ್ವರ್‌ 80,677 ಮತಗಳನ್ನು ಪಡೆದಿದ್ದರು.

    2018ರ ಚುನಾವಣೆಯಲ್ಲಿ ಕುಮಾರಸ್ವಾಮಿ 21,53 ಮತಗಳ ಅಂತರದಿಂದ ಜಯಗಳಿಸಿದ್ದರೆ 2023 ರಲ್ಲಿ 15,915 ಮತಗಳ ಅಂತರದಿಂದ ಗೆದ್ದಿದ್ದರು.

     

  • ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

    ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

    ಬೆಂಗಳೂರು: ಬೆಂಗಳೂರು ಮಳೆಗೆ (Bengaluru Rain) ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಏನು ಇಲ್ಲ. ಇದಾ ಡಿಕೆ ಶಿವಕುಮಾರ್ (DK Shivakumar) ಅವರ ಬ್ರ‍್ಯಾಂಡ್ ಬೆಂಗಳೂರು (Brand Bengaluru) ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ಸರ್ಕಾರ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

    ಬೆಂಗಳೂರಿನ ಮಳೆ ಅವಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿವಕುಮಾರ್ ಹಾಗೂ ನನ್ನ ವಿಷನ್ ಬೇರೆ. ಬ್ರ‍್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಹೇಳುತ್ತಾರೆ. ಡ್ರೈನೇಜ್ ಸಿಸ್ಟಮ್ ಬೆಂಗಳೂರಿನಲ್ಲಿ ಹಾಳಾಗಿದೆ. ಇವರು ಬಂದು ಒಂದೂವರೆ ವರ್ಷ ಆಗಿದೆ. ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ನೂರೆಂಟು ಸಮಸ್ಯೆಗಳು ಅನ್ನಿಸುತ್ತದೆ. ಇಂತಹ ದೊಡ್ಡ ಸಿಟಿ, ಬೇರೆ ದೇಶ ನಮ್ಮ ಕಡೆ ಇನ್ವೆಸ್ಟ್ ಮಾಡೋಕೆ ನೋಡುತ್ತಿದೆ. ಆದರೆ ಒಂದು ದಿನ ಮಳೆ ಬಂದರೂ ಅದನ್ನು ಸರಿ ಮಾಡಲು ಆಗುತ್ತಿಲ್ಲ. ಸರಿಯಾದ ವ್ಯವಸ್ಥೆ ಮಾಡದ ಇವರು ಯಾವ ರೀತಿ ಬ್ರ‍್ಯಾಂಡ್ ಬೆಂಗಳೂರು ಮಾಡುತ್ತಾರೆ? ಈ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇಂತಹ ದೊಡ್ಡ ಸಿಟಿಯಲ್ಲಿ ರಸ್ತೆ, ಚರಂಡಿ ಸರಿಯಾಗಿ ಮಾಡದ ಈ ಸರ್ಕಾರ ನಾಲಾಯಕ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಾಳೆಗರಿಯಲ್ಲಿ ಗದಾಯುದ್ಧ ಬರೆಯಲು ಮುಂದಾದ ಸಂಗಮೇಶ ಕಲ್ಯಾಣಿ

    ಬೆಂಗಳೂರಿನ 7 ಜನ ಮಂತ್ರಿಗಳಿಗೆ ಜನರ ಮುಂದೆ ಹೋಗೋಕೆ ಮುಖವಿಲ್ಲ. ಅನುದಾನ ಕೊಡೋಕೆ ಆಗುತ್ತಿಲ್ಲ. ಕಾರ್ಪೊರೇಷನ್ ಎಲೆಕ್ಷನ್ ಮಾಡೋಕೆ ಯೋಗ್ಯತೆ ಇಲ್ಲ. ಸಂವಿಧಾನ ಉಳಿಸುತ್ತೇನೆ ಎನ್ನುತ್ತಾರೆ. ಆದರೆ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಕಾರ್ಪೋರೇಷನ್ ಎಲೆಕ್ಷನ್ ಮಾಡುತ್ತಿಲ್ಲ. ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ

    ಕಾಂಗ್ರೆಸ್ ಶಾಸಕರೇ ಅನುದಾನ ಕೊಡಿ ಇಲ್ಲ ಸಾಯುತ್ತೇನೆ ಅಂತ ಹೇಳೋ ಪರಿಸ್ಥಿತಿ ಬಂದಿರಲಿಲ್ಲ. ಬೆಂಗಳೂರು ಬ್ರ‍್ಯಾಂಡ್ ಬೆಂಗಳೂರು ಮಾಡೋಕೆ ಆಗಿಲ್ಲ. ರಾಮನಗರವನ್ನು ಬೆಂಗಳೂರು ದಕ್ಷಿಣ ಅಂತ ಮಾಡಿದ್ದಾರೆ. ಇದು ವ್ಯಾಪಾರ ಮಾಡೋಕೆ ಅಷ್ಟೇ. ಬೆಂಗಳೂರು ದಕ್ಷಿಣ ಮಾಡಲು ಹೊರಟಿರುವುದು ಅಭಿವೃದ್ಧಿ ಮಾಡಲು ಅಲ್ಲ. ಇವರ ಆಸ್ತಿ ಬೆಲೆ ಜಾಸ್ತಿ ಮಾಡಿಕೊಳ್ಳೋಕೆ ಮಾಡಿದ್ದಾರೆ ಅಷ್ಟೇ ಎಂದರು. ಇದನ್ನೂ ಓದಿ: ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

    ನೀರು ಮನೆಗೆ ನುಗ್ಗಿವೆ. ರಸ್ತೆಯಲ್ಲಿ ವಾಹನಗಳು ಮುಳುಗಿವೆ. ಜನರಿಗೆ ರಕ್ಷಣೆ ಕೊಡೋಕೆ ಆಗುತ್ತಿಲ್ಲ. ಇದು ಕೆಟ್ಟ ಸರ್ಕಾರ. ಕಾಂಗ್ರೆಸ್ ಅವರು ಬೇರೆ ಅವರ ಮೇಲೆ ದೂಷಣೆ ಮಾಡೋಕೆ ಎತ್ತಿದ ಕೈ. ಪರಿಸ್ಥಿತಿ ಸರಿ ಮಾಡೋ ಕೆಲಸ ಮಾಡುತ್ತಿಲ್ಲ. ಈಗಲಾದರೂ ಸರ್ಕಾರ ಗಮನಹರಿಸಲಿ. ಜನರು ನಿಮಗೆ ಒಳ್ಳೆಯ ಸ್ಥಾನವನ್ನ ಕೊಟ್ಟಿದ್ದಾರೆ ಅಂತ ಮನವರಿಕೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾನು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ: ದೂರಿನ ಬೆನ್ನಲ್ಲೇ ಸಚಿವ ಬೋಸರಾಜು ಸ್ಪಷ್ಟನೆ

  • ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್‌. ಅಶೋಕ್‌

    ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್‌. ಅಶೋಕ್‌

    – ಯೋಗೇಶ್ವರ್ ದುಡುಕಲ್ಲ ಎಂಬ ವಿಶ್ವಾಸವಿದೆ

    ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಎನ್‌ಡಿಎ (NDA) ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ (JDS) ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್ (R.Ashok) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನವೊಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ಶಾಸಕರಾಗಿದ್ದರು. ಹೀಗಾಗಿ ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ ಎಂದಿದ್ದಾರೆ.

    ನಿಖಿಲ್‌ ಕುಮಾರಸ್ವಾಮಿಯವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಭಾಗ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.

    ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಹೆಚ್‌ಡಿಕೆ ಪಬ್ಲಿಕ್‌ನಲ್ಲೊಂದು, ಆಂತರಿಕವಾಗಿ ಇನ್ನೊಂದು ಮಾತನಾಡ್ತಾರೆ: ಡಿಕೆಶಿ

    ಹೆಚ್‌ಡಿಕೆ ಪಬ್ಲಿಕ್‌ನಲ್ಲೊಂದು, ಆಂತರಿಕವಾಗಿ ಇನ್ನೊಂದು ಮಾತನಾಡ್ತಾರೆ: ಡಿಕೆಶಿ

    ಬೆಂಗಳೂರು: ಕುಮಾರಸ್ವಾಮಿಯವರ (H.D Kumaraswamy) ಪಕ್ಷದ ರಾಜಕಾರಣ ಬೇರೆ, ವೈಯುಕ್ತಿಕ ರಾಜಕಾರಣ ಬೇರೆ. ಅವರು ಎರಡೆರಡು ರೀತಿಯ ರಾಜಕಾರಣ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ರಾಜಕಾರಣ ಅವರಿಗೆ ಗೊತ್ತು. ಅವರದ್ದು ವೈಯಕ್ತಿಕ ರಾಜಕಾರಣ ಒಂದು, ಪಾರ್ಟಿ ರಾಜಕಾರಣನೇ ಒಂದು. ನಾನು ಯೋಗೇಶ್ವರ್ ಅವರ ಭೇಟಿ ಮಾಡಿಲ್ಲ. ಅವರ ಜೊತೆ ಮಾತನಾಡಿಯೂ ಇಲ್ಲ. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಅವರಿಗೆ ಶಾಸಕರಿಗೆ ಕೊಡುವ ಗೌರವ ಕೊಡಲಾಗಿದೆ. ‌ಅಷ್ಟು ಬಿಟ್ಟರೆ ಬೇರೆ ಏನೂ ಇಲ್ಲ. ನನಗೂ ಬೇಕಾದಷ್ಷು ಮಾಹಿತಿ ಇದೆ. ಅವರು ಎನ್‌ಡಿಎ ಇಂದಲೇ ಎಂಎಲ್ಸಿ ಇದ್ದಾರೆ. ಕೆಲವರಿಗೆ ಸಲಹೆ ಕೊಡಬಹುದು. ಅವರಲ್ಲಿ ಗೊಂದಲ ಇರೋದು ಗೊತ್ತಿಲ್ಲ ಎಂದಿದ್ದಾರೆ.

    ಜೆಡಿಎಸ್ ಕ್ಷೇತ್ರ ಬಿಜೆಪಿಗೆ ಕೊಟ್ಟರೆ ಜೆಡಿಎಸ್‌ನವರ ಅಸ್ತಿತ್ವ ಇರಲ್ಲ. ಕುಮಾರಸ್ವಾಮಿಯವರು ಅಲ್ಲಿನ ಎಂಎಲ್ಎ ಆಗಿದ್ದರು. ಹಿಂದೆ ಅವರ ಭಾಮೈದನರನ್ನ ಬೇರೆ ಚಿಹ್ನೆಯಿಂದ ಗೆಲ್ಲಿಸಿದ್ದು ಗೊತ್ತಿದೆ. ಜೆಡಿಎಸ್ ವೀಕ್ ಇದೆ ಎನ್ನುವಷ್ಟು ಮೂರ್ಖ ಅಲ್ಲಾ ನಾನು. ಆದರೆ ಕುಮಾರಸ್ವಾಮಿ ಇಷ್ಟು ವೀಕ್ ಆಗಬಾರದಿತ್ತು. ನಾನು ಎನ್‌ಡಿಎ ವಿಚಾರ ಯೋಗೇಶ್ವರ್ ವಿಚಾರಕ್ಕೆ ಹೋಗಲ್ಲ. ಕುಮಾರಸ್ವಾಮಿ ಏನು ಮಾತನಾಡ್ತಾರೆ. ಅವರ ಮಾತಿಗೆ ಅವರೇ ಸ್ಟ್ಯಾಂಡ್ ಕೊಡಲ್ಲ. ಅವರಿಗೆಲ್ಲ ನಾನು ಉತ್ತರ ಕೊಡಲು ಹೋಗಲ್ಲ. ಅದು ಅವರ ಡ್ಯೂಟಿ ಅಥವಾ ಪಕ್ಷದ ತಂತ್ರ ಇರಬಹುದು ಎಂದಿದ್ದಾರೆ.

    ಕುಮಾರಸ್ವಾಮಿಯವರು ಪಬ್ಲಿಕ್‌ನಲ್ಲಿ ಒಂದು ಮಾತನಾಡ್ತಾರೆ, ಆಂತರಿಕವಾಗಿ ಒಂದು ಮಾತನಾಡ್ತಾರೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಪಾಳಯದಲ್ಲಿ ನನ್ನದೇ ಮುಖ ನಾನೆ ಅಭ್ಯರ್ಥಿ. ಕುಮಾರಸ್ವಾಮಿ ಎಲ್ಲರ ಹತ್ತಿರ ಮಾತನಾಡಿ ಕೈ ಕಟ್ಟಿ, ಬಿಜೆಪಿ ಅವರನ್ನ ರಿಕ್ವೆಸ್ಟ್ ಮಾಡಿ ಅವರೊಬ್ಬ ಸೆಂಟ್ರಲ್ ಮಿನಿಸ್ಟರ್ ಇಷ್ಟೊಂದು ವೀಕ್ ಅಂತಾ ಗೊತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ I wish them all the best ಎಂದಿದ್ದಾರೆ.

  • ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ – ಸಿದ್ದರಾಮಯ್ಯ

    ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ – ಸಿದ್ದರಾಮಯ್ಯ

    ಚಿತ್ರದುರ್ಗ: ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಉಪಚುನಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

    ಜಿಲ್ಲೆಯ ಚಳ್ಳಕೆರೆ (Challakere) ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಗೇಶ್ವರ್‌ಗೆ ಕಾಂಗ್ರೆಸ್ (Congress) ಸರ್ಕಾರ ಗಾಳ ಹಾಕುತ್ತಿದೆ ಎಂದು ಜೆಡಿಎಸ್ (JDS) ಆರೋಪಿಸುತ್ತಿರುವ ವಿಚಾರವಾಗಿ ಜೆಡಿಎಸ್‌ನವರು ಬಾಯಿಗೆ ಬಂದಂತೆ ಮಾತಾಡುತ್ತಾರೆ. ಮೊದಲು ಜೆಡಿಎಸ್‌ನವರು ಅಭ್ಯರ್ಥಿ ಘೋಷಣೆ ಮಾಡಲಿ. ಇಂದು ಸಂಜೆ ಅಥವಾ ನಾಳೆ ನಾವು ಅಭ್ಯರ್ಥಿ ಘೋಷಿಸುತ್ತೇವೆ. ನೂರಕ್ಕೆ ನೂರರಷ್ಟು ಮೂರು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ:ಗುಜರಾತ್‌ ವಿವಿ ಮಾನಹಾನಿ ಕೇಸ್‌ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

    ಇನ್ನೂ ಕಾಂಗ್ರೆಸ್ ನಾಯಕರನ್ನು ಯೋಗೇಶ್ವರ್ ಭೇಟಿಯಾಗಿದ್ದಾರೆ ಎಂದು ಜೆಡಿಎಸ್‌ನವರು ಆರೋಪಿಸುತ್ತಿದ್ದಾರೆ. ಜೆಡಿಎಸ್‌ನವರು ಬಾಯಿಗೆ ಬಂದಂತೆ ಮಾತನಾಡುತ್ತಿದೆ. ಮೊದಲು ನೀವು ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದರು.

    ಬೆಂಗಳೂರಲ್ಲಿ ಮಳೆ ಜಾಸ್ತಿಯಾಗಿದೆ. ಆದರೆ ಬೆಳೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ನಮ್ಮ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ನಮ್ಮ ಸರ್ಕಾರ ಬೀಳಿಸಲು ಸಾವಿರ ಕೋಟಿ ರೂ. ಖರ್ಚೆಂದು ಯತ್ನಾಳ್ ಹೇಳಿದ್ದರು. ಸಾವಿರ ಕೋಟಿ ಬ್ಲಾಕ್ ಮನಿ ಅಲ್ಲವೇ? ಅಷ್ಟೊಂದು ಹಣ ಎಲ್ಲಿಂದ ತರುತ್ತಾರೆ? ಜೆಪಿಯವರು ಬ್ಲಾಕ್ ಮನಿ ಮಾಡಿದ್ದಾರೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಅತ್ಯಾಚಾರ ಕೇಸ್‌- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

  • ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

    ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ: ಸಿಪಿ ಯೋಗೇಶ್ವರ್

    – ಜೆಡಿಎಸ್‌ನಿಂದ ನಿಂತರೇ ಕಷ್ಟ, ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ
    – ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿಲ್ಲ

    ಬೆಂಗಳೂರು: ಜೆಡಿಎಸ್‌ನಿಂದ (JDS) ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಟಿಕೆಟ್ ಸಿಗದೇ ಇದ್ದರೆ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ (CP Yogeshwar) ಹೇಳಿದರು.

    ನಗರದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ವಿಚಾರವಾಗಿ ನಾನು ಅವಕಾಶ ಕೊಟ್ಟರೆ ಎನ್‌ಡಿಎ (NDA) ಅಭ್ಯರ್ಥಿ ಆಗುತ್ತೇನೆ. ಆದರೆ ಅವಕಾಶ ಸಿಗಬೇಕು ಅಷ್ಟೇ. ನಾನು ನನ್ನ ಪಾರ್ಟನರ್ ಕುಮಾರಸ್ವಾಮಿ (HD Kumaraswamy) ಮೂರು ದಿನಗಳಿಂದ ಚರ್ಚೆ ಮಾಡುತ್ತಿದ್ದೇವೆ. ನಾನು ಜೆಡಿಎಸ್‌ನಿಂದ ನಿಂತರೇ ಕಷ್ಟ ಆಗುತ್ತದೆ. ಬಿಜೆಪಿಯಿಂದಲೇ ನಿಲ್ಲಬೇಕೆಂಬ ಆಸೆ ಇದೆ. ಆದರೆ ಅವರು ಆಗಲ್ಲ ಅಂತಿದ್ದಾರೆ. ಕುಮಾರಸ್ವಾಮಿ ಮನಸ್ಸಿನಲ್ಲಿ ಅವರ ಮಗನಿಗೆ ಟಿಕೆಟ್ ಕೊಡಬೇಕು ಎಂದು ಆಸೆ ಇದೆ. ಅವರ ಮನಸಲ್ಲೇ ಆತರಹ ಇದ್ದರೆ ಏನು ಮಾಡೋದಕ್ಕೆ ಆಗುತ್ತದೆ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿಗಳಿಕೆ ಕೇಸ್‌ – ಲೋಕಾ ತನಿಖೆ ಪ್ರಶ್ನಿಸಿ ಸಿಬಿಐನಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

    ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರು ಅವರ ಕುಟುಂಬದವರಿಗೇ ಟಿಕೆಟ್ ಕೊಡಬೇಕು ಎಂದು ಆಸೆಯಿದೆ. ತಾವು ರಾಜೀನಾಮೆ ಕೊಟ್ಟ ನಂತರದಿಂದಲೂ ನಿಖಿಲ್‌ಗೆ ನಿಲ್ಲಿಸಬೇಕು ಎಂದು ಅವರ ಮನಸಿನಲ್ಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತಿದ್ದಾರೆ. ಮನಸಲ್ಲಿ ಆ ಭಾವನೆ ಇರುವಾಗ ಏನು ಬಲವಂತ ಸಾಧ್ಯ? ಜೆಡಿಎಸ್ ಚಿನ್ಹೆಯಲ್ಲಿ ನಿಲ್ಲಿ ಎಂದು ಅವರು ಮುಕ್ತವಾಗಿ ಹೇಳಿಲ್ಲ. ಅವರ ಪಕ್ಷದ ಮುಖಂಡರು ಬಂದಾಗ ಹೇಳಿದ್ದರೂ ಅಷ್ಟೇ. ನಾನು ನನ್ನ ತಾಲೂಕಿನ ಜನರ ಜೊತೆಗೂ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. ಬಹಳ ಭಿನ್ನಾಭಿಪ್ರಾಯ ಬಂದಿದೆ. ಇಷ್ಟು ವರ್ಷ ವಿರೋಧ ಮಾಡಿಕೊಂಡು ಬಂದಿದ್ದೀರಿ, ಈಗ ಮೈತ್ರಿ ಆಗಿದೆ. ಈಗ ಅನಾವಶ್ಯಕವಾಗಿ ಜೆಡಿಎಸ್‌ಗೆ ಹೋಗುವುದು ಬೇಡ ಅಂತ ತಾಲೂಕಿನಲ್ಲಿ ಅಭಿಪ್ರಾಯ ಬಂದಿದೆ. ಮೊದಲೇ ನನಗೆ ಪಕ್ಷಾಂತರಿ ಎಂದು ಕರೆಯುತ್ತಾರೆ. ಹಾಗಾಗಿ ಬಿಜೆಪಿಯಿಂದಲೇ ನಿಲ್ಲಿ ಎಂದು ಹೇಳುತ್ತಿದ್ದಾರೆ. ನಾನು ಬಿಜೆಪಿಯಿಂದಲೇ ನಿಲ್ಲಲು ನಿರ್ಧರಿದ್ದೇನೆ. ಆದರೆ ನನಗೆ ಯಾರೂ ಬೆಂಬಲ ಕೊಡುತ್ತಿಲ್ಲ ಎಂದು ಹೇಳಿದರು.

    ಆರೋಪ ಮಾಡಬೇಡಿ
    ಯೋಗೀಶ್ವರ್ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದಾರೆಂಬ ಹೆಚ್‌ಡಿಕೆ ಆರೋಪ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿಯವರೇ ನನ್ನ ಮೇಲೆ ಅನಾವಶ್ಯಕವಾಗಿ ಆರೋಪ ಮಾಡುವ ಅಗತ್ಯ ಇಲ್ಲ. ಟಿಕೆಟ್ ಕೊಡದಿದ್ದರೆ ನಿಮ್ಮ ಮಗನಿಗೇ ಕೊಡಿ. ಆದರೆ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದೆ ಎಂದು ಅನಾವಶ್ಯಕ ಆರೋಪ ಮಾಡುವುದು ಬೇಡ. ನಾನು ಇಲ್ಲಿಯವರೆಗೆ ಕಾಂಗ್ರೆಸ್‌ನ ಯಾವ ನಾಯಕರನ್ನೂ ಭೇಟಿ ಮಾಡಿಲ್ಲ. ಭೇಟಿ ಮಾಡಿದರೂ ತಪ್ಪೇನಿಲ್ಲ ಆದರೆ ಇಲ್ಲಿಯವರೆಗೆ ಯಾರನ್ನೂ ಭೇಟಿ ಮಾಡಿಲ್ಲ. ಭೇಟಿ ಆಗುವುದಾದರೇ ಭೇಟಿ ಆಗುತ್ತೇನೆ. ಮುಚ್ಚುಮರೆ ಮಾಡಲ್ಲ. ಆದರೆ ಈವರೆಗೆ ಯಾರನ್ನೂ ಭೇಟಿ ಮಾಡಿಲ್ಲ ಎಂದರು.

    ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದು ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಈ ಸಂದರ್ಭದಲ್ಲಿ ಯಡಿಯೂರಪ್ಪನವರು ಈ ಹೇಳಿಕೆ ಕೊಡುವ ಅಗತ್ಯವಿರಲಿಲ್ಲ. ಅವರೇ ತೀರ್ಮಾನ ಮಾಡಬೇಕು. ಆದರೆ ಕುಮಾರಸ್ವಾಮಿ ಅವರಿಗೆ ದೊಡ್ಡ ಮನಸು ಇದ್ದಿದ್ದರೆ ಅನುಕೂಲ ಆಗುತ್ತಿತ್ತು. ಅವರು ಉದ್ದೇಶಪೂರ್ವಕ ಈ ಹೇಳಿಕೆ ಕೊಟ್ಟಿದ್ದಾರೆ. ಇದರ ಹಿಂದೆ ದುರುದ್ದೇಶ ಇದೆ ಎಂದು ಕಿಡಿಕಾರಿದರು.

    ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ಜೆಡಿಎಸ್ ಆಫರ್‌ನ್ನು ತಿರಸ್ಕರಿಸಿ, ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡು ಇದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ದಾಂಪತ್ಯ ವಿರಸ- ಮೂವರು ಮಕ್ಕಳಿಗೆ ವಿಷ ಕುಡಿಸಿ, ಆತ್ಮಹತ್ಯೆಗೆ ಯತ್ನಿಸಿದ ತಾಯಿ

  • ಚನ್ನಪಟ್ಟಣ ಉಪಕಣ; ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ

    ಚನ್ನಪಟ್ಟಣ ಉಪಕಣ; ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ

    – ‘ಮೈತ್ರಿ’ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ?

    ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದೆ. ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ ಮಾಡಿಕೊಂಡಿದ್ದಾರೆ.

    ಗುರುವಾರ ಅಥವಾ ಶುಕ್ರವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ತಯಾರಿದ್ದಾರೆ. ಅದಕ್ಕಾಗಿ ಎರಡು ಸೆಟ್ ಅಫಿಡವಿಟ್ ಸಿದ್ಧ ಮಾಡಿಕೊಂಡಿದ್ದಾರೆ. ಸಿಪಿವೈ ನಡೆಯಿಂದ ಎನ್‌ಡಿಎ ನಾಯಕರು ಕಂಗಾಲಾಗಿದ್ದಾರೆ.

    ಒಂದು ಬಿಜೆಪಿ ಅಭ್ಯರ್ಥಿಯಾಗಿ, ಮತ್ತೊಂದು ಪಕ್ಷೇತರ ಅಭ್ಯರ್ಥಿಯಾಗಿ ಅಫಿಡವಿಟ್ ಸಿದ್ಧಪಡಿಸಿಕೊಂಡಿದ್ದಾರೆ. ಮೈತ್ರಿ ಟಿಕೆಟ್ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧೆ, ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಿಪಿವೈ ಮುಂದಾಗಿದ್ದಾರೆ.

    ಇತ್ತ, ಚನ್ನಪಟ್ಟಣ ಕ್ಷೇತ್ರ ಜೆಡಿಎಸ್‌ಗೆ ಬಹುತೇಕ ಫಿಕ್ಸ್ ಆದಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರಿಗೆ ಯಾರು ಅವರಿಗೆ ಟಿಕೆಟ್ ಘೋಷಣೆ ಮಾಡ್ತಾರೆ ಎಂದು ಬಿಎಸ್‌ವೈ ಪ್ರತಿಕ್ರಿಯಿಸಿದ್ದಾರೆ.

    ಜೆಡಿಎಸ್ ಚಿಹ್ನೆಯಿಂದಲೇ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕೆಂದು ಸಿ.ಪಿ.ಯೋಗೇಶ್ವರ್‌ಗೆ ಆಹ್ವಾನ ನೀಡಲಾಗಿತ್ತು. ಆದರೆ ಸಿಪಿವೈ ಅದಕ್ಕೆ ಒಪ್ಪಿಲ್ಲ. ಬಿಜೆಪಿ ಚಿಹ್ನೆಯಿಂದ ಸ್ಪರ್ಧೆಗೆ ಬಿಗಿಪಟ್ಟು ಹಿಡಿದಿದ್ದಾರೆಂದು ಮೂಲಗಳು ತಿಳಿಸಿವೆ.

  • ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್‌ ನಮಗೇ ಬರಬೇಕು: ಹೆಚ್‌ಡಿಕೆ ಪಟ್ಟು

    ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್‌ ನಮಗೇ ಬರಬೇಕು: ಹೆಚ್‌ಡಿಕೆ ಪಟ್ಟು

    ಮಂಡ್ಯ: ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಚನ್ನಪಟ್ಟಣ (Channapatna) ಜೆಡಿಎಸ್‌ ಭದ್ರಕೋಟೆ ಅನ್ನೋದು ದೆಹಲಿ ಮಟ್ಟದಲ್ಲೂ ಗೊತ್ತಿದೆ. ನ್ಯಾಯಯುತವಾಗಿ ಚರ್ಚೆ ಮಾಡೋದಾದ್ರೆ ಚನ್ನಪಟ್ಟಣ ಟಿಕೆಟ್‌ ನಮಗೆ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು.

    ಮಂಡ್ಯದ (Mandya) ಪಾಂಡವಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲ ಏನು ಇಲ್ಲ. ಯೋಗೇಶ್ವರ್ ಸಹ ನಿಲ್ಲಬೇಕು ಅಂತಾ ಹೇಳ್ತಾರೆ. ನ್ಯಾಯಯುತವಾಗಿ ಚರ್ಚೆ ಮಾಡೋದಾದ್ರೆ ಚನ್ನಪಟ್ಟಣ ನಮಗೆ ಬರಬೇಕು. ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ (BJP Candidate) ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣ ವಿಚಾರದಲ್ಲಿ ನಮ್ಮ ಪಕ್ಷದ ಪರವಾಗಿ ನಿರ್ಧಾರ ಮಾಡಬೇಕು. ಅದೇ ನಿಟ್ಟಿನಲ್ಲಿ ಚರ್ಚೆಯಾಗುತ್ತಿದೆ. ಇಂದು ಈ ಬಗ್ಗೆ ಸಭೆ ಇದೆ. ಇಂದೇ ಅಭ್ಯರ್ಥಿ ಘೋಷಣೆ ಆಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಹಲವು ವರ್ಷಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ರೆಡ್ಡಿ-ರಾಮುಲು

    ಚನ್ನಪಟ್ಟಣ ಜೆಡಿಎಸ್‌ ಭದ್ರಕೋಟೆ:
    ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಟಿಕೆಟ್ ಸಮಸ್ಯೆ ಇಲ್ಲ. ಕಳೆದ ಎರಡು ಬಾರಿ ಚನ್ನಪಟ್ಟಣದಲ್ಲಿ ನಾನು ಪ್ರತಿನಿಧಿಸಿದ್ದೇನೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಗೊತ್ತಿದೆ. ಮೂರು ಉಪಚುನಾವಣೆ ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ. ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಟ್ಟುಕೊಟ್ಟೆವು. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಔದಾರ್ಯ ಅವರ ಕಡೆಯಿಂದಲೂ ಬರಬೇಕು ಎನ್ನುತ್ತಾ ಪರೋಕ್ಷವಾಗಿ ಸಿಪಿವೈ ಜೆಡಿಎಸ್ ಚಿಹ್ನೆಯಡಿ ನಿಲ್ಲಲಿ ಎಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಸರೋಜಕ್ಕ ಸಾಕ್ಷಾತ್ ಅನ್ನಪೂರ್ಣೇಶ್ವರಿ ಆಗಿದ್ದರು: ನಟ ಸುದೀಪ್ ತಾಯಿ ನಿಧನಕ್ಕೆ ಬೊಮ್ಮಾಯಿ ಸಂತಾಪ

    ನಮ್ಮಲ್ಲಿ ಒಡಕು ಮೂಡಲಿ ಅಂತ ಕಾಂಗ್ರೆಸ್‌ ಭಕಪಕ್ಷಿ ರೀತಿ ಕಾಯ್ತಿದೆ:
    ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸುತ್ತಿರುವ ವಿಚಾರ ಕುರಿತು ಮಾತನಾಡಿದ ಹೆಚ್‌ಡಿಕೆ, ನಾಮಪತ್ರ ಸಲ್ಲಿಸುವ ವಿಚಾರ ನನ್ನೊಂದಿಗೆ ಚರ್ಚೆಯಾಗಿಲ್ಲ. ನನ್ನ ಮುಂದೆ ಆ ಕುರಿತು ಪ್ರಸ್ತಾಪವೂ ಬಂದಿಲ್ಲ. ಮಾಧ್ಯಮಗಳಲ್ಲಿ ವರದಿ ಬಂದಿರುವುದನ್ನು ನೋಡಿದ್ದೇನೆ. ಕಾಂಗ್ರೆಸ್ ನಾಯಕರನ್ನ ಭೇಟಿ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗ್ತಾರೆ ಎಂಬ ವಿಚಾರ 15 ದಿವಸದಿಂದ ಓಡಾಡ್ತಿದೆ. ಕಾಂಗ್ರೆಸ್ ನವರು ತಮ್ಮ ಪಕ್ಷಕ್ಕೆ ಕರೆದುಕೊಂಡು ಹೋಗಿ ನಿಲ್ಲಿಸಲು ಕಾಯ್ತಿದ್ದಾರೆ. ನಮ್ಮಲ್ಲಿ ಒಡಕು ಮೂಡಲಿ ಎಂದು ಭಕಪಕ್ಷಿ ರೀತಿ ಕಾಯ್ತಿದ್ದಾರೆ. ಸ್ವತಂತ್ರವಾಗಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕ್ತಿದ್ದಾರೆ. ಅಂತಹ ಅವಕಾಶ ಕಲ್ಪಿಸಬಾರದೆಂದು ತಾಳ್ಮೆಯಲ್ಲಿದ್ದೇನೆ. ಇನ್ನೂ 4 ದಿನ ಇದೆ, ಕೂತು ಚರ್ಚೆ ಮಾಡ್ತೇವೆ ಎಂದು ತಿಳಿಸಿದ್ದಾರೆ.

    ಚನ್ನಪಟ್ಟಣವನ್ನು ಜೆಡಿಎಸ್ ಬಿಟ್ಟಿದೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕಾರ ಮಾಡಿದ್ದೀವಾ? ನಾವು ಚುನಾವಣೆ ಗೆಲ್ಲಲು ಏನು ನಿರ್ಧಾರ ಮಾಡಬೇಕು ಮಾಡ್ತೀನಿ ಎಂದು ಹೇಳಿದರು. ಇದನ್ನೂ ಓದಿ: 36 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್‌ ಗೆದ್ದ ಕಿವೀಸ್‌ – ಟೀಂ ಇಂಡಿಯಾ ಸೋಲಿಗೆ ಕಾರಣಗಳೇನು?

    ಮಾಜಿ ಸಂಸದ ಡಿ.ಕೆ.ಸುರೇಶ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುರೇಶ್ ಸಂಸ್ಕೃತಿಯ ಬಗ್ಗೆ ನಾನು ಮಾತಡಲ್ಲ. ಅವರು ಏನೇ ಚರ್ಚೆ ಮಾಡಿದ್ರೂ ನನಗೆ ಸಂಬಂಧ ಇಲ್ಲ. ಜನರು ಬಹುನಿರೀಕ್ಷೆ ಇಟ್ಟು ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌ಗೆ 136 ಸೀಟ್‌ಗಳನ್ನು ಕೊಟ್ಟಿರೋದು ನಿಜ. ಈ ಕಾಂಗ್ರೆಸ್ ರಾಜ್ಯದಲ್ಲಿ ಯಾವ ರೀತಿ ಕೆಲಸ ಮಾಡ್ತಾ ಇದೆ. ದಿನವೂ ಒಂದೊಂದು ಅಕ್ರಮಗಳು ಬೆಳಕಿಗೆ ಬರ್ತಾ ಇವೆ. ಸಿಎಂ ನನಗೆ ಮಣ್ಣಿನ ಮೇಲೆ ಆಸೆ ಇಲ್ಲ ಅಂತಾ ಪದೇ ಪದೇ ಹೇಳ್ತಾರೆ. ಈಗ ಒಂದೊಂದೇ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಮುಂದೆ ಏನು ಬೇಕಾದರೂ ಆಗಬಹುದಾಗಿದೆ ಎಂದು ಭವಿಷ್ಯ ನುಡಿದರು.

    ನನಗೆ 5 ವರ್ಷದ ಪೂರ್ಣ ಬಹುಮತದ ಸರ್ಕಾರ ಜನರು ನೀಡಬಹುದು ಎಂಬ ವಿಶ್ವಾಸವಿದೆ. ನಾನು ವಿಶ್ವಾಸ ಇಟ್ಟುಕೊಳ್ಳಲು ಅವರ ಪರ್ಮಿಷನ್ ತಗೋ ಬೇಕಾ? 5 ವರ್ಷದ ಸರ್ಕಾರ ಬಂದ್ರೆ ನನದ್ದೇ ಆದ ಅಭಿವೃದ್ಧಿ ಕೆಲಸಗಳು ಇವೆ. ಜನರ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ಹಾಕಿಕೊಂಡಿದ್ದೇನೆ. ನಮ್ಮ ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಕರ್ನಾಟಕ ಸಂಪದ್ಬರಿತವಾದ ರಾಜ್ಯ. ಆದ್ರೆ ಈಗ ಸರ್ಕಾರದ ದುಡ್ಡು ಪೋಲು ಮಾಡ್ತಾ ಇದ್ದಾರೆ. ಇದಕ್ಕೆ ಕಡಿವಾಣ ಹಾಕಿ ಜನರ ನೆಮ್ಮದಿ ಬದುಕಿಗಾಗಿ ನನಗೆ ಅವಕಾಶ ನೀಡುತ್ತಾರೆ ಎನ್ನೋದು ತಪ್ಪಾ? ನನ್ನ ಮಾತಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ತೀರ್ಮಾನದಲ್ಲೂ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

  • ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ

    ಚನ್ನಪಟ್ಟಣ ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು – ದೋಸ್ತಿ ನಾಯಕರಲ್ಲಿ ಮೂಡದ ಒಮ್ಮತದ ನಿರ್ಧಾರ

    – ಟಿಕೆಟ್ ಆಯ್ಕೆ ಹೈಕಮಾಂಡ್‌ಗೆ ಬಿಡಲು ತೀರ್ಮಾನ

    ರಾಮನಗರ: ಚನ್ನಪಟ್ಟಣ (Channapatna) ಮೈತ್ರಿ ಟಿಕೆಟ್ ಆಯ್ಕೆ ಕಗ್ಗಂಟು ಮುಂದುವರಿದಿದೆ. ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ದೋಸ್ತಿ ನಾಯಕರಲ್ಲಿ ಒಮ್ಮತದ ನಿರ್ಧಾರ ಮೂಡಿಲ್ಲ. ಹೀಗಾಗಿ ಟಿಕೆಟ್ ಆಯ್ಕೆಯನ್ನು ಹೈಕಮಾಂಡ್‌ಗೆ ಬಿಡಲು ತೀರ್ಮಾನ ಮಾಡಲಾಗಿದೆ. ಹೆಚ್‌ಡಿ ಕುಮಾರಸ್ವಾಮಿ, ಆರ್ ಅಶೋಕ್, ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಮ್ಮತ ಮೂಡಿಲ್ಲ.

    ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಅಂತಿಮ ನಿರ್ಣಯ ಮಾಡಲು ತೀರ್ಮಾನಿಸಲಾಗಿದೆ. ಮೈತ್ರಿ ಧರ್ಮದಂತೆ 2+1 ಸೂತ್ರಕ್ಕೆ ಜೆಡಿಎಸ್ (JDS) ಪಟ್ಟು ಹಿಡಿದಿದೆ. ಮೈತ್ರಿ ಅಭ್ಯರ್ಥಿ ಜೆಡಿಎಸ್‌ನಿಂದಲೇ ಆಯ್ಕೆ ಮಾಡಬೇಕು. ಜೆಡಿಎಸ್ ಅಭ್ಯರ್ಥಿ ಪರ ಸಿಪಿವೈ ಕೆಲಸ ಮಾಡುವಂತೆ ಸೂಚಿಸಬೇಕು ಎಂದು ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ದಳಪತಿಗಳು ಡಿಮ್ಯಾಂಡ್ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈವರೆಗೂ ಅಭ್ಯರ್ಥಿ ಯಾರಾಗುತ್ತಾರೆ ಎಂದು ರಿವೀಲ್ ಮಾಡದ ಜೆಡಿಎಸ್ ನಾಯಕರು, ಚನ್ನಪಟ್ಟಣ ಟಿಕೆಟ್ (Channapatna By Election) ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಬಿಗಿಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: Kodagu| ಬಿಜೆಪಿ ಮುಖಂಡನ ಹತ್ಯೆ ಕೇಸ್‌- ಇಬ್ಬರಿಗೆ ಜೀವಾವಧಿ ಶಿಕ್ಷೆ, 10 ಸಾವಿರ ದಂಡ

    ಈ ಮಧ್ಯೆ ಜೆಡಿಎಸ್‌ನಿಂದಲೇ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಆಗುತ್ತಾರೆ. ಹೆಚ್‌ಡಿಕೆ ಯಾರನ್ನಾದರೂ ನಿಲ್ಲಿಸಲಿ ಎಂದು ಹೈಕಮಾಂಡ್ ಹೇಳಿದೆ ಅಂತ ಜೆಡಿಎಸ್ ನಾಯಕ ಸುರೇಶ್ ಬಾಬು ಹೇಳಿಕೆ ನೀಡಿದ್ದಾರೆ. ಶಿಗ್ಗಾಂವಿ ಸಂಡೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    ಶಿಗ್ಗಾಂವಿ, ಸಂಡೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಶಿಗ್ಗಾಂವಿಯಿಂದ ಭರತ್ ಬೊಮ್ಮಾಯಿಗೆ ಟಿಕೆಟ್ ಸಿಕ್ಕಿದೆ. ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬೊಮ್ಮಾಯಿ ಸಕ್ಸಸ್ ಆಗಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ವರಿಷ್ಟರು ಆಂತರಿಕ ಸಮೀಕ್ಷೆ ನಡೆಸಿದ್ದರು. ಆಂತರಿಕ ಸಮೀಕ್ಷೆಯಲ್ಲಿ ಭರತ್ ಬೊಮ್ಮಾಯಿ ಪರ ಮತದಾರರ ಒಲವು ಇದ್ದ ಕಾರಣ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ: ಸುರೇಶ್ ಬಾಬು

    ಇನ್ನು ಸಂಡೂರಿನಿಂದ ಬಂಗಾರು ಹನುಮಂತುಗೆ ಟಿಕೆಟ್ ಒಲಿದಿದೆ. ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿರುವ ಬಂಗಾರು ಹನುಮಂತುಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಆಪ್ತನಿಗೆ ಟಿಕೆಟ್ ಕೊಡಿಸುವಲ್ಲಿ ಜನಾರ್ಧನರೆಡ್ಡಿ ಯಶಸ್ವಿಯಾಗಿದ್ದಾರೆ. ಚನ್ನಪಟ್ಟಣ ಮಾತ್ರ ಬಿಜೆಪಿ ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಗ್ರೆನೇಡ್ ದಾಳಿ ನಡೆಸಿದ್ದ ಇಬ್ಬರು ಉಗ್ರರು ಅರೆಸ್ಟ್‌

    ಅತ್ತ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ತುಕಾರಾಂ ಪತ್ನಿಗೆ ಕಾಂಗ್ರೆಸ್ ಟಿಕೆಟ್ ಸಾಧ್ಯತೆ ಇದೆ. ಅನ್ನಪೂರ್ಣಗೆ ಟಿಕೆಟ್ ನೀಡಿ ನಾಳೆಯೇ ಅಧಿಕೃತ ಘೋಷಣೆ ಸಾಧ್ಯತೆ ಇದೆ. ಇದನ್ನೂ ಓದಿ: ಸಂಡೂರು ಉಪಚುನಾವಣೆ| ಬಿಜೆಪಿ ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು?

  • ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ: ಸುರೇಶ್ ಬಾಬು

    ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ: ಸುರೇಶ್ ಬಾಬು

    ಬೆಂಗಳೂರು: ಚನ್ನಪಟ್ಟಣದಲ್ಲಿ (Channapatna) ಜೆಡಿಎಸ್ (JDS) ಪಕ್ಷದಿಂದಲೇ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ಈ ವಿಚಾರ ಭಾನುವಾರ ಫೈನಲ್‌ ಆಗಬಹುದು ಎಂದು ಜೆಡಿಎಸ್‌ ನಾಯಕ ಸುರೇಶ್ ಬಾಬು ತಿಳಿಸಿದ್ದಾರೆ.

    ನಗರದ ಖಾಸಗಿ ಹೊಟೆಲ್‌ನಲ್ಲಿ ನಡೆದ ಸಭೆ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಮೂರು ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹಾಕಿ ಗೆಲ್ಲಬೇಕು ಎಂದು ಚರ್ಚೆ ಮಾಡಿದ್ದೇವೆ. ಎರಡು ಕ್ಷೇತ್ರದ ಟಿಕೆಟ್ ಈಗ ಘೋಷಣೆ ಆಗಿದೆ. ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ.

    ಕುಮಾರಸ್ವಾಮಿಯವರು (H.D Kumaraswamy) ಯಾರನ್ನಾದರೂ ನಿಲ್ಲಿಸಲಿ ಎಂದು ಹೈಕಮಾಂಡ್ ಹೇಳಿದ್ದಾರೆ. ಅವರು ಎಲ್ಲಾ ಸಾಧಕ ಭಾದಕಗಳನ್ನು ನೋಡಿಕೊಂಡು, ಮೈತ್ರಿ ಭದ್ರವಾಗಬೇಕು ಎಂದು ತೀರ್ಮಾನಕ್ಕೆ ಬರುತ್ತಾರೆ. ಈ ಮೂಲಕ ಜೆಡಿಎಸ್‌ನಿಂದಲೇ ಎನ್‌ಡಿಎ ಅಭ್ಯರ್ಥಿ ಸ್ಪರ್ಧಿಸುತ್ತಾರೆ. ಎರಡು ಪಕ್ಷದವರು ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂದಿದ್ದಾರೆ.

    ವಿಜಯೆಂದ್ರ ಅವರು ಈ ಸ್ಥಾನ ನಿಮ್ಮ ಜನತಾದಳದ್ದು, ಕುಳಿತುಕೊಂಡು ತೀರ್ಮಾನ ಕೊಡಿ ಎಂಬ ಅಭಿಪ್ರಾಯವನ್ನು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ನಿಲ್ಲಿಸುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಸೃಷ್ಟಿಯಾಗದ ಹಾಗೆ ಕಾಂಗ್ರೆಸ್ ಸರ್ಕಾರವನ್ನು ಹೊಗಲಾಡಿಸಲಾಗುತ್ತದೆ ಎಂದಿದ್ದಾರೆ.

    ಮೂರು ಉಪಚುನಾವಣೆಗೆ ಮೈತ್ರಿ ಧರ್ಮದಂತೆ 2+1 ಸೂತ್ರಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿತ್ತು. ಜೆಡಿಎಸ್ ಅಭ್ಯರ್ಥಿ ಪರ ಯೋಗೀಶ್ವರ್ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಸೂಚಿಸಬೇಕು ಎಂದು ದಳ ನಾಯಕರು ತಿಳಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.