Tag: jds

  • ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

    ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

    ರಾಮನಗರ: ಲೋಕಸಭೆ ಚುನಾವಣೆ ವೇಳೆ ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.

    ಜೆಡಿಎಸ್ (JDS) ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಯೋಗೇಶ್ವರ್ ಅವರಿಗೆ ಅಥವಾ ಇನ್ಯಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ (BJP) ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ. ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು ಎಂದರು.ಇದನ್ನೂ ಓದಿ: ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್

    ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು. ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

    ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್-ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್‌ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ ಎಂದಿದ್ದೇನೆ ಎಂದು ತಿಳಿಸಿದರು.

    ಮೈತ್ರಿಗೆ ಮೂಲ ಕಾರಣ ಯಾರು ಎಂಬುದನ್ನು ನಾನು ಬೀದಿಯಲ್ಲಿ ಚರ್ಚೆ ಮಾಡಲಾರೆ. ಹಾಗೆ ಮಾಡುವುದು ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದಂತೆ. ಯೋಗೇಶ್ವರ್ ಅವರು ಮೈತ್ರಿ ಬಗ್ಗೆ ಯಾರ ಜೊತೆ ಚರ್ಚೆ ನಡೆಸಿದ್ದರು ಎಂಬುದು ನನಗೆ ಗೊತ್ತಿಲ್ಲ. ಅಭ್ಯರ್ಥಿ ಆಗಬೇಕು ಎಂದ ಯೋಗೇಶ್ವರ್ ಅವರು ಒಮ್ಮೆ ನನ್ನ ಬಳಿ ಬಂದು, ದೆಹಲಿಯಲ್ಲಿ ಚರ್ಚೆ ಮಾಡಿದ್ದರು. ಹಾಗಿದ್ದರೆ ತಾವು ಕ್ಷೇತ್ರದಲ್ಲಿನ ನಮ್ಮ ಮುಖಂಡರ ಜೊತೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದೆ. ಆಮೇಲೆ ನಡೆದಿದ್ದು ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿಯೂ ಅಭ್ಯರ್ಥಿ ಆಗಬೇಕು ಎಂದು ಅನೇಕ ನಾಯಕರು ಇದ್ದಾರೆ ಎಂದು ತಿಳಿಸಿದರು.

    ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಗೆ ನಿಲ್ಲಬೇಕು ಅಥವಾ ನಿಲ್ಲಿಸಬೇಕು ಎಂಬ ಬಗ್ಗೆ ಈ ಕ್ಷಣದವರೆಗೂ ಚರ್ಚೆ ನಡೆದಿಲ್ಲ. ನಾನು ತೀರ್ಮಾನ ಮಾಡಿಲ್ಲ. ನನ್ನ ಉದ್ದೇಶ ಇಲ್ಲಿ ಕಾಂಗ್ರೆಸ್ ಸೋಲಬೇಕು. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಬೇಕು. ಈ ಹಿನ್ನೆಯಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಎರಡೂ ಪಕ್ಷಗಳ ರಾಷ್ಟ್ರ, ರಾಜ್ಯ ನಾಯಕರು ಕೂತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: 3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

  • ದಲಿತ ನಾಯಕನನ್ನ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಮಾಡಲಿ- ಕಾಂಗ್ರೆಸ್‌ಗೆ ಜೆಡಿಎಸ್ ಸವಾಲ್

    ದಲಿತ ನಾಯಕನನ್ನ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಮಾಡಲಿ- ಕಾಂಗ್ರೆಸ್‌ಗೆ ಜೆಡಿಎಸ್ ಸವಾಲ್

    ಬೆಂಗಳೂರು: ಕಾಂಗ್ರೆಸ್‌‌ನಲ್ಲಿ (Congress) ನಡೆಯುತ್ತಿರೋ ಸಿಎಂ ಸ್ಥಾನದ ಚರ್ಚೆಗೆ ಜೆಡಿಎಸ್ (JDS) ಎಂಟ್ರಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಿಡಿಕಾರಿರುವ ಜೆಡಿಎಸ್, ದಲಿತ ನಾಯಕರನ್ನ ಸಿಎಂ ಮಾಡಿ ಅಂತಾ ಸವಾಲ್ ಹಾಕಿದೆ.

    ಈ ಸಂಬಂಧ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದೆ. ದಲಿತರ ಹೆಸರೇಳಿಕೊಂಡು ಬಲಿತಿರುವ, ಬರೋಬ್ಬರಿ 44 ವರ್ಷಗಳ ಕಾಲ ರಾಜ್ಯವನ್ನು ಆಳಿರುವ ಕಾಂಗ್ರೆಸ್‌ ಪಕ್ಷವು ದಲಿತರನ್ನು ಕೇವಲ ಮತಬ್ಯಾಂಕ್‌ ಆಗಿ ಮಾಡಿಕೊಂಡಿದೆ. ನಾವು ದಲಿತರ ಪರ, ಸಾಮಾಜಿಕ ನ್ಯಾಯದ ಪರ ಎಂದು ಬೊಗಳೆ ಬಿಡುವ ಕಾಂಗ್ರೆಸ್ ನಾಯಕರು, ಚುನಾವಣೆಗಳಲ್ಲಿ ದಲಿತರ ಮತ ಪಡೆದು ಗೆದ್ದ ಬಳಿಕ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡದೇ ವಂಚಿಸುತ್ತಲೇ ಬಂದಿದ್ದಾರೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ನಾವು ರಾಜಕೀಯ ಸಭೆ ಮಾಡಿಲ್ಲ, ನಮ್ಮ ಮೇಲಿನ ಆಪಾದನೆಯಿಂದ ಬೇಜಾರಾಗಿದೆ: ಪರಮೇಶ್ವರ್

    ಮುಡಾ ಹಗರಣದಿಂದ ತೆರವಾಗಲಿರುವ ಸಿಎಂ ಕುರ್ಚಿಗಾಗಿ ಮತ್ತೆ ದಲಿತ ಸಿಎಂ ಕೂಗು ಕೇಳಿ ಬರುತ್ತಿದೆ. ಆದರೆ ಹೈಕಮಾಂಡ್‌ ದಲಿತ ಸಿಎಂ ಚರ್ಚೆಗೆ ಕಡಿವಾಣ ಹಾಕಲು ಕೇರಳ ರಾಜ್ಯದ ನಾಯಕನ್ನು ಛೂ ಬಿಟ್ಟಿದೆ. ರಾಜ್ಯದ ದಲಿತ ನಾಯಕರು ಸಿಎಂ ಹುದ್ದೆ ವಿಚಾರವಾಗಿ ಚರ್ಚೆ ನಡೆಸಿದರೆ ಅನ್ಯ ರಾಜ್ಯದ ಕಾಂಗ್ರೆಸ್‌ ಮುಖಂಡರ ಮೂಲಕ ನಿಯಂತ್ರಣ ಹೇರುತ್ತಿದೆ. ದಲಿತ ಸಿಎಂ ಹುದ್ದೆ ಬಗ್ಗೆ ಚರ್ಚೆ ಬಂದಾಗೆಲ್ಲ ಕಾಂಗ್ರೆಸ್ ಹೈಕಮಾಂಡ್‌ ಮಧ್ಯ ಪ್ರವೇಶಿಸಿ ಕಡಿವಾಣ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದೆ.

    ಶತಮಾನದ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ ದಲಿತರನ್ನು ಕೇವಲ ಬಳಸಿ ಬಿಸಾಡುವಂತೆ ನಡೆಸಿಕೊಳ್ಳುತ್ತಲೇ ಇದೆ. ಕಾಂಗ್ರೆಸ್‌ ಹೈಕಮಾಂಡ್‌, ಗುಲಾಮಗಿರಿ ಬಿಟ್ಟು ಈಗಾಲಾದರೂ ರಾಜ್ಯದಲ್ಲಿ ದಲಿತ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಮಾಡಿ ನ್ಯಾಯ ಒದಗಿಸಲಿ ಎಂದು ಜೆಡಿಎಸ್‌ ಸವಾಲು ಹಾಕಿದೆ. ಇದನ್ನೂ ಓದಿ: ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷ ದಲಿತ ಕಾರ್ಡ್ ಪ್ಲೇ ಮಾಡ್ತಿದೆ – ಛಲವಾದಿ ನಾರಾಯಣಸ್ವಾಮಿ

  • ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್‌ಗೆ ಮಾತೃ ವಿಯೋಗ

    ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್‌ಗೆ ಮಾತೃ ವಿಯೋಗ

    ವಿಜಯಪುರ: ದೇವರಹಿಪ್ಪರಗಿ (Devarahipparagi) ಕ್ಷೇತ್ರದ ಜೆಡಿಎಸ್ (JDS) ಶಾಸಕ ರಾಜುಗೌಡ ಪಾಟೀಲ್ (Rajugouda Patil) ಅವರ ತಾಯಿ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ.

    ಶಾಸಕ ರಾಜೂಗೌಡ ತಾಯಿ ನೀಲಮ್ಮಗೌಡತಿ ಪಾಟೀಲ್ (NeelammaGoudti Patil) ತಮ್ಮ 70ನೇ ವಯಸ್ಸಿನಲ್ಲಿ ನಿಧನ ಹೊಂದಿದರು. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬಸವನ ಬಾಗೇವಾಡಿ (Basavana Bagewad) ತಾಲೂಕಿನ ಸ್ವಗ್ರಾಮ ಕುದರಿಸಾಲವಾಡಗಿ (Kudari Salawadgi) ನಿವಾಸದಲ್ಲಿ ಕೊನೆಯುಸಿರೆಳೆದರು.ಇದನ್ನೂ ಓದಿ: ಜಗಳವಾಡಿಕೊಂಡು ತವರು ಮನೆ ಸೇರಿದ್ದ ಹೆಂಡತಿ – ಅತ್ತೆಯನ್ನೇ ಕೊಂದು ಅಳಿಯ ಎಸ್ಕೇಪ್‌

    ಶಾಸಕ ರಾಜುಗೌಡ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ವಿವಿಧ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (MB Patil), ಸಚಿವ ಶಿವಾನಂದ ಪಾಟೀಲ್ (Shivanand Patil) ಇತರೆ ಜನಪ್ರತಿನಿಧಿಗಳ ಸಂತಾಪ ಸೂಚಿಸಿದ್ದಾರೆ.

    ಗುರುವಾರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಕುದರಿಸಾಲವಾಡಗಿ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.ಇದನ್ನೂ ಓದಿ: ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ಮತ್ತೆ ಶಾಕ್ – ವಿಚಾರಣೆ ನಾಳೆಗೆ ಮುಂದೂಡಿಕೆ

  • ಚನ್ನಪಟ್ಟಣದಲ್ಲಿ ಟಿಕೆಟ್ ಕಗ್ಗಂಟು – ಟಿಕೆಟ್‌ಗಾಗಿ ದೆಹಲಿಗೆ ಸಿಪಿವೈ ಯಾತ್ರೆ

    ಚನ್ನಪಟ್ಟಣದಲ್ಲಿ ಟಿಕೆಟ್ ಕಗ್ಗಂಟು – ಟಿಕೆಟ್‌ಗಾಗಿ ದೆಹಲಿಗೆ ಸಿಪಿವೈ ಯಾತ್ರೆ

    ರಾಮನಗರ: ಚನ್ನಪಟ್ಟಣ ಉಪಚುನಾವಣೆ (Channapatna By Election) ಕಣ ರಂಗೇರಿದ್ದು, ಮೈತ್ರಿ ಪಕ್ಷದಲ್ಲಿ ಟಿಕೆಟ್ ಕಗ್ಗಂಟು ಮುಂದುವರೆದಿದೆ. ಈಗಾಗಲೇ ಕ್ಷೇತ್ರದಲ್ಲಿ ದಳಪತಿಗಳು ಅಲರ್ಟ್‌ ಆಗಿದ್ದು, ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸ್ಪರ್ಧೆಗಿಳಿಸಲು ಜೆಡಿಎಸ್ ನಾಯಕರು ಸಿದ್ಧತೆ ಆರಂಭಿಸಿದ್ದಾರೆ.

    ಭಾನುವಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದ ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅಭ್ಯರ್ಥಿ ಆಯ್ಕೆ ಬಗ್ಗೆ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದರು. ಇದನ್ನೂ ಓದಿ: ಪೋಕ್ಸೋ ಕೇಸ್ – ಮುರುಘಾ ಶ್ರೀಗೆ ಜಾಮೀನು ಮಂಜೂರು

    ಈ ವೇಳೆ ನಿಖಿಲ್ ಸ್ಪರ್ಧೆಗೆ ಸಾಕಷ್ಟು ಒತ್ತಡ ಕೇಳಿಬಂದಿದೆ. ಈಗ ಮಾಜಿ ಸಚಿವ ಸಿಪಿವೈಗೆ ಟಿಕೆಟ್‌ ಕೈ ತಪ್ಪುವ ಆತಂಕ ಹೆಚ್ಚಾಗಿದ್ದು, ಮೈತ್ರಿ ಟಿಕೆಟ್ ಗಿಟ್ಟಿಸಿಕೊಳ್ಳಲು ದೆಹಲಿ ದಂಡಯಾತ್ರೆ ಮಾಡಿದ್ದಾರೆ.

    ಇಂದು ದೆಹಲಿಗೆ ತೆರಳಿರುವ ಮಾಜಿ ಸಚಿವ ಸಿಪಿ ಯೋಗೆಶ್ವರ್ ( CP Yogeshwar) ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. ಮೈತ್ರಿ ಟಿಕೆಟ್ ಕೈತಪ್ಪಿದರೆ ಮುಂದಿನ ನಡೆಯ ಬಗ್ಗೆಯೂ ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ.

    ಎರಡ್ಮೂರು ದಿನಗಳಲ್ಲಿ ಬೆಂಬಲಿಗರು, ಆಪ್ತರ ಬೃಹತ್ ಸಮಾವೇಶ ನಡೆಸಲು ಸಿಪಿವೈ ತಯಾರಿ ನಡೆಸುತ್ತಿದ್ದು ಎಲ್ಲದಕ್ಕೂ ರೆಡಿ ಇರಿ ಎಂದು ಬೆಂಬಲಿಗರಿಗೆ ಸಂದೇಶ ರವಾನಿಸಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಈ ಟಿಕೆಟ್ ಕಗ್ಗಂಟನ್ನು ಹೈಕಮಾಂಡ್ ನಾಯಕರು ಹೇಗೆ ಬಿಡಿಸುತ್ತಾರೆ ಎನ್ನುವುದೇ ಸದ್ಯದ ಕುತೂಹಲ.

     

  • ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ, ನಿಮ್ಮ ಮನೆ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ: ಹೆಚ್‌ಡಿಕೆ ಭಾವುಕ

    ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ, ನಿಮ್ಮ ಮನೆ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ: ಹೆಚ್‌ಡಿಕೆ ಭಾವುಕ

    – ಚನ್ನಪಟ್ಟಣಕ್ಕೆ ನಿಖಿಲ್‌ ನಿಲ್ಲಿಸುವಂತೆ ಕಾರ್ಯಕರ್ತರು ಪಟ್ಟು

    ರಾಮನರಗ: ನಾನು ಎಂದೂ ಯಾರಿಗೂ ದ್ರೋಹ ಮಾಡಿಲ್ಲ. ನನ್ನನ್ನ ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ. ನಿಮ್ಮ ಮನೆ ಮಗ ನಾನು, ನಿಮ್ಮ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಭಾವ ನಾತ್ಮಕ ಭಾಷಣ ಮಾಡಿದರು.

    ಚನ್ನಪಟ್ಟಣ (Channapatna) ಚುನಾವಣಾ ಕಣ ರಂಗೇರಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ.‌ ಸಂಜೆವರೆಗೂ ಐದು ಜಿಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಾಗುತ್ತಿದೆ. ‌ಅದರಂತೆ ಚನ್ನಪಟ್ಟಣದ ಕೋಡಂಬಳ್ಳಿ, ಇಗ್ಗಲೂರು ಗ್ರಾಮಗಳಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಹೆಚ್‌ಡಿಕೆ ಭಾವುಕ ಭಾಷಣ ಮಾಡಿದರು. ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ: ಜೆಡಿಎಸ್ ಕಾರ್ಯಕರ್ತ ಜಯಮುತ್ತು

    ನಾನು ಎಂದೂ ಯಾರಿಗೂ ದ್ರೋಹ ಮಾಡಿಲ್ಲ. ನನ್ನನ್ನ ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಈ ಬಾರಿ ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ. ಜಾತಿ, ಪಕ್ಷ ನೋಡದೇ ನಾನು ಕೆಲಸ ಮಾಡಿದ್ದೇನೆ. ನೀವು ಬೆಳಿಸಿದ ನಿಮ್ಮ ಮನೆ ಮಗ ನಾನು. ನೀವು ಬೆಳೆಸಿದ ನಿಮ್ಮ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ. ನಾನು ಒಳ್ಳೆಯ ಕೆಲಸ ಮಾಡಿದ್ರೆ, ಜನಪರ ಯೋಜನೆ ತಂದಿದ್ರೆ ಬೆಂಬಲ ನೀಡಿ. ಎನ್‌ಡಿಎ ಅಭ್ಯರ್ಥಿಯನ್ನ ಇಲ್ಲಿ ಹಾಕ್ತೇವೆ, ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.

    ಈ ವೇಳೆ ಅಭ್ಯರ್ಥಿ ಹೆಸರು ಘೋಷಣೆ ಮಾಡುವಂತೆ ಕಾರ್ಯಕರ್ತರ ಪಟ್ಟು ಹಿಡಿದರು. ನಿಖಿಲ್‌ ಅವರನ್ನೇ ನಿಲ್ಲಿಸುವಂತೆ ಜೆಡಿಎಸ್‌ ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಈಗಾಗಲೇ ಈ ಬಗ್ಗೆ ಮೀಟಿಂಗ್ ಮಾಡಿದ್ದೀವಿ, ಇನ್ನೊಂದು ವಾರದಲ್ಲಿ ಮೈತ್ರಿ ಅಭ್ಯರ್ಥಿ ಘೋಷಣೆ ಮಾಡ್ತೀವಿ ಎಂದು ಕಾರ್ಯಕರ್ತರನ್ನು ಸಮಾಧಾನಪಡಿದರು. ಇದನ್ನೂ ಓದಿ: ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

    ಇವತ್ತು ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆ ಕರೆದಿದ್ದೇನೆ. ಜಿಪಂ ವ್ಯಾಪ್ತಿಯ 5 ಭಾಗದಲ್ಲಿ ಸಭೆ ಮಾಡ್ತಿದ್ದೇನೆ. 10ನೇ ತಾರೀಖು ಮತ್ತೆ ಚನ್ನಪಟ್ಟಣದಲ್ಲಿ ಸಭೆ ಮಾಡುತ್ತಿದ್ದೇನೆ. ಸಭೆ ಮಾಡ್ತಿರೋ ಉದ್ದೇಶವೇ ಜನಾಭಿಪ್ರಾಯ ಪಡೆಯಲು. ಇಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಲು ಏನೇನು ಅಭಿಪ್ರಾಯ ಸಿಗುತ್ತೆ ಸಂಗ್ರಹಿಸುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 136 ಶಾಸಕರಿಗೆ 1 ರೂಪಾಯಿ ಅನುದಾನ ಕೊಟ್ಟಿಲ್ಲ, ಇನ್ನೂ ಚನ್ನಪಟ್ಟಣಕ್ಕೆ 500 ಕೋಟಿ ಎಲ್ಲಿಂದ ಬರುತ್ತೆ?- ನಿಖಿಲ್

    ಒಬ್ಬ 300 ಕೋಟಿ, ಮತ್ತೊಬ್ಬ 500ಕೋಟಿ ಅಂತಾನೆ:
    ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣಕ್ಕೆ ಡಿಕೆಶಿ ಅನುದಾನ ತಂದಿದ್ದೇನೆ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಎಲ್ಲಿದೆ ಅನುದಾನ? ಎಲ್ಲಿ ತಂದವ್ರೆ, ಯಾವುದೋ ಬೋರ್ಡ್‌ಗಳಲ್ಲಿ ಮಾತ್ರವಾ? ನಮ್ಮ ಕಾಲದಲ್ಲಿ ಏನು ಆಗಿಲ್ಲ ಅಂತಾರಲ್ಲ. ಎಲ್ಲಾ ದಾಖಲೆಗಳನ್ನ ಬಿಡುಗಡೆ ಮಾಡ್ತೀನಿ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಚನ್ನಪಟ್ಟಣಕ್ಕೆ ಅನುದಾನ ತಂದಿರೋದು ನಾನು. ಮೂರು ತಿಂಗಳಲ್ಲಿ ಚನ್ನಪಟ್ಟಣಕ್ಕೆ ಇವರ ಕೊಡುಗೆ ಏನು.? ನಾನು ಸೇತುವೆಗಳ ನಿರ್ಮಾಣಕ್ಕೆ ಅನುಮತಿ ಕೊಡಿಸಿದ್ದೆ, ಅದಕ್ಕೆ ಚೆಕ್ ಡ್ಯಾಂ ಅಂತ ಪಕ್ಕದಲ್ಲಿ ಬೋರ್ಡ್ ಹಾಕೊಂಡು ಓಡಾಡ್ತಿದ್ದಾರೆ. ಮೂರು ತಿಂಗಳಲ್ಲಿ 20 ದಿನ ಬಂದಿದ್ದೇನೆ ಅಂತಿರಲ್ಲ. ಏನು ಮಾಡಿದ್ದೀರಿ ಪಟ್ಟಿ ಕೊಡಿ. ಒಬ್ಬ 300 ಕೋಟಿ ಇನ್ವೆಸ್ಟ್ ಮಾಡಿದ್ದೀವಿ ಅಂತಾನೆ, ಮತ್ತೊಬ್ಬ 500ಕೋಟಿ ಅಂತಾನೆ. ಎಲ್ಲಿದೆ ಹಣ? ಇವರ ಕೈಯಲ್ಲಿ ರಸ್ತೆ ಗುಂಡಿ ಮುಚ್ಚಲು ಆಗಿಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

  • ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ: ಜೆಡಿಎಸ್ ಕಾರ್ಯಕರ್ತ ಜಯಮುತ್ತು

    ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ: ಜೆಡಿಎಸ್ ಕಾರ್ಯಕರ್ತ ಜಯಮುತ್ತು

    – ಚನ್ನಪಟ್ಟಣ ‘ದೋಸ್ತಿ’ ಅಭ್ಯರ್ಥಿ ಫೈನಲ್?
    – ಕುಮಾರಸ್ವಾಮಿ ಮುಂದೆಯೇ ಜೆಡಿಎಸ್ ಕಾರ್ಯಕರ್ತರ ಒತ್ತಾಯ

    ರಾಮನಗರ: ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ಗೆಲ್ಲಿಸಿಕೊಂಡು ಬರೋಣ ಎಂದು ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತ ಜಯಮುತ್ತು ಹೇಳಿಕೆ ನೀಡಿರುವುದು ಚರ್ಚೆ ಹುಟ್ಟುಹಾಕಿದೆ. ಚನ್ನಪಟ್ಟಣ ‘ದೋಸ್ತಿ’ ಅಭ್ಯರ್ಥಿ ಫೈನಲ್ ಆಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

    ಚನ್ನಪಟ್ಟಣ (Channapatna) ಚುನಾವಣಾ ಕಣ ರಂಗೇರಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ. ಸಂಜೆವರೆಗೂ ಐದು ಜಿಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಾಗುತ್ತಿದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಇದನ್ನೂ ಓದಿ: ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ ನಾಯಕರೇ ಹೇಳಿದ್ದಾರೆ: ಶರಣ ಪ್ರಕಾಶ್ ಪಾಟೀಲ್

    ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತ ಜಯಮುತ್ತು ಮಾತನಾಡಿ, ಚನ್ನಪಟ್ಟಣ ಉಪಚುನಾವಣೆ ಬರ್ತಿದೆ. ಇದು ಜೆಡಿಎಸ್‌ನ ಕ್ಷೇತ್ರ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಬೈಎಲೆಕ್ಷನ್ ನಡೀತಿದೆ. ಹಾಗಾಗಿ ಈ ಕ್ಷೇತ್ರ ಉಳಿಸಿಕೊಳ್ಳಬೇಕಾದ ಅನಿವಾರ್ಯವಿದೆ. ಈ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿ ಮಾಡೋಣ. ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಅದನ್ನ ಬಿಟ್ಟು ಒಗ್ಗಟ್ಟಾಗಿ ಕೆಲಸ ಮಾಡಿ. ನಿಖಿಲ್ ಕುಮಾರಸ್ವಾಮಿ ಅವರನ್ನ ಗೆಲ್ಲಿಸಿಕೊಂಡು ಬರೋಣ ಎಂದು ಹೇಳಿದರು.

    ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಾತನಾಡಿ, 2019ರ ಲೋಕಸಭಾ ಚುನಾವಣೆಯ ಒಂದು ಕಹಿ ಘಟನೆ ಇತ್ತು. ಈ ಘಟನೆ ಮರೆಯಲು ಮತ್ತೊಮ್ಮೆ ಮಂಡ್ಯದಲ್ಲಿ ಜೆಡಿಎಸ್ ಬಾವುಟ ಹಾರಬೇಕು ಎಂಬ ಭಾವನೆ ಇತ್ತು. ಮಂಡ್ಯದ ಕಾರ್ಯಕರ್ತರು, ಮುಖಂಡರು ಕುಮಾರಣ್ಣ ಅವರ ಮೇಲೆ ಸಾಕಷ್ಟು ಒತ್ತಡ ಹೇರಿದ್ರು. ಹಾಗಾಗಿ ಕುಮಾರಣ್ಣ ಅವ್ರು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕಾದ ಅನಿವಾರ್ಯ ಬಂತು ಎಂದರು. ಇದನ್ನೂ ಓದಿ: ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ಜಮೆ; ಪಿಎಂ ಕಿಸಾನ್ ಯೋಜನೆ ರೈತರ ಸಂಜೀವಿನಿ ಎಂದ ಜೋಶಿ

    ಮಂಡ್ಯದಲ್ಲಿ ಗೆದ್ದ ಬಳಿಕ ಕುಮಾರಣ್ಣ ಮೋದಿಯವರ ಸಂಪುಟದಲ್ಲಿ ಕೆಲಸ ಮಾಡ್ತಿದ್ದಾರೆ. ಮಂಡ್ಯ ಜಿಲ್ಲೆಯ ಜನರ ಆಶೀರ್ವಾದದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ಸಾಕಷ್ಟು ಯುವಜನತೆ ವಿದ್ಯಾವಂತರಿದ್ದಾರೆ. ಅವರಿಗೆ ಸಮರ್ಪಕ ಉದ್ಯೋಗಾವಕಾಶಗಳಿಲ್ಲ. ಇದೆಲ್ಲವನ್ನೂ ಕುಮಾರಸ್ವಾಮಿ ಅವರು ಮನಸ್ಸಿಗೆ ತೆಗೆದುಕೊಂಡು ಕಾರ್ಯೋನ್ಮುಖರಾಗಿದ್ದಾರೆ. ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ. ಹಲವಾರು ಕೈಗಾರಿಕೆಗಳ ಸ್ಥಾಪನೆಗೆ ಕೆಲಸ ಮಾಡ್ತಿದ್ದಾರೆ. ಚನ್ನಪಟ್ಟಣದಲ್ಲಿ ದೇವೇಗೌಡರು ಇಗ್ಗಲೂರು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಇದು ತಾಲೂಕನ ರೈತಾಪಿ ವರ್ಗಕ್ಕೆ ದೇವೇಗೌಡರು ನೀಡಿರುವ ಕೊಡುಗೆ. ಇದನ್ನ ಜನ ಪ್ರತಿದಿನ ನೆನಪು ಮಾಡಿಕೊಳ್ತಾರೆ ಎಂದು ತಿಳಿಸಿದರು.

    ಕುಮಾರಣ್ಣ ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗಲು ಚನ್ನಪಟ್ಟಣದ ಜನತೆ ಕಾರಣ. ಚನ್ನಪಟ್ಟಣ ತಾಲೂಕಿಗೆ ಒಂದೂವರೆ ಸಾವಿರ ಕೋಟಿ ಅನುದಾನ ತಂದಿದ್ರು. ಇದನ್ನ ಯಾರೂ ತಿರುಚಲು ಸಾಧ್ಯವಿಲ್ಲ. ರಾಜ್ಯದ ಉಪಮುಖ್ಯಮಂತ್ರಿಗಳಿಗೆ ಚನ್ನಪಟ್ಟಣ ತಾಲೂಕು ಗೊತ್ತಿರಲಿಲ್ಲ. ಈಗ ಉಪಚುನಾವಣೆ ಇರೋದ್ರಿಂದ ಚನ್ನಪಟ್ಟಣಕ್ಕೆ ನಿರಂತರ ಪ್ರವಾಸ ಮಾಡ್ತಿದ್ದಾರೆ. ಏನೋ ಅನುದಾನ ತಂದಿದ್ದೀವಿ ಅಂತ ದೊಡ್ಡ ದೊಡ್ಡ ಫ್ಲೆಕ್ಸ್ ಹಾಕಿಸ್ತಿದ್ದಾರೆ. ಕುಮಾರಸ್ವಾಮಿ ಅವರು ತಾವು ತಂದ 1,500 ಕೋಟಿ ಅನುದಾನದ ಬಗ್ಗೆ ಜಾಹೀರಾತು ಕೊಟ್ಟಿರಲಿಲ್ಲ. ಪಾಪ ಈಗ ಉಪಮುಖ್ಯಮಂತ್ರಿಗಳಿಗೆ ಚನ್ನಪಟ್ಟಣದ ಮೇಲೆ ಮಮಕಾರ ಬಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್‌ ಸ್ಫೋಟಕ ಹೇಳಿಕೆ

    ಐದು ಗ್ಯಾರಂಟಿ, ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ರಾಜ್ಯದ ಜನತೆ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ. ಕೇವಲ ಒಂದೂವರೆ ವರ್ಷದಲ್ಲಿ ಸರ್ಕಾರ ನಡವಳಿಕೆ ಗೊತ್ತಾಗ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187 ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ. ಸ್ವತಃ ಸಿಎಂ ಅವರೇ ಇದನ್ನ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಇದರ ಮಧ್ಯೆ ಪಾಪ ಡಿಸಿಎಂಗೆ ಚನ್ನಪಟ್ಟಣ ನೆನಪಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿಗೆ ಕಾಂಗ್ರೆಸ್ ಕೊಡುಗೆ ಏನು? ಇದನ್ನ ನೀವು ಪ್ರಶ್ನೆ ಮಾಡಬೇಕು. ಕೇವಲ ಚುನಾವಣೆಗೋಸ್ಕರ ಮಾಡ್ತಿರೋ ದೊಂಬರಾಟ ಇದು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

  • ಕುಮಾರಸ್ವಾಮಿ ಕೇಂದ್ರ ಸಚಿವರಾದ್ರೂ ರಾಜ್ಯಕ್ಕೆ ಪ್ರಯೋಜನ ಆಗ್ತಿಲ್ಲ: ಕೃಷ್ಣಬೈರೇಗೌಡ ಟಕ್ಕರ್‌

    ಕುಮಾರಸ್ವಾಮಿ ಕೇಂದ್ರ ಸಚಿವರಾದ್ರೂ ರಾಜ್ಯಕ್ಕೆ ಪ್ರಯೋಜನ ಆಗ್ತಿಲ್ಲ: ಕೃಷ್ಣಬೈರೇಗೌಡ ಟಕ್ಕರ್‌

    ಬೆಂಗಳೂರು: ಕುಮಾರಸ್ವಾಮಿ (H.D.Kumaraswamy) ಕೇಂದ್ರ ಸಚಿವರಾದರೂ ರಾಜ್ಯಕ್ಕೆ ಪ್ರಯೋಜನ ಆಗ್ತಾ ಇಲ್ಲ ಎಂದು ಸಚಿವ ಕೃಷ್ಣ‌ಬೈರೇಗೌಡ (Krishna Byre Gowda) ಟಕ್ಕರ್ ಕೊಟ್ಟರು.

    ಬೆಂಗಳೂರಿನಲ್ಲಿ (Bengaluru) ಮಾತಾಡಿದ ಕೃಷ್ಣ‌ಬೈರೇಗೌಡ, ನಮ್ಮ ಸರ್ಕಾರ ಬೀಳಿಸ್ತೀವಿ ಅಂತಾ ಹೊರಟಿರೋದು ಅವರು. ಕೇಂದ್ರ ಸಚಿವರಾಗಿರುವ ಅವರಿಂದ ರಾಜ್ಯಕ್ಕೆ ಏನಾದರೂ ಉಪಯೋಗ ಆಗಿದೆಯಾ? ಮೇಕೆದಾಟು, ಮಹದಾಯಿ, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನ್ಯಾಯ ಆಗ್ತಿದೆ. ನಮ್ಮ ರಾಜ್ಯದಿಂದ ಸಚಿವರಾಗಿ ಇರೋ ಇವರು ಏನ್ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿಎಂ ಏನ್ ದೆವ್ವನಾ ನಾನು ಹೆದರೋಕೆ – ಸಿದ್ದರಾಮಯ್ಯಗೆ ಹೆಚ್‌ಡಿಕೆ ತಿರುಗೇಟು

    ನಮ್ಮ ರಾಜ್ಯದ ಕೇಂದ್ರ ಸಚಿವರಿಗೆ ರಾಜ್ಯಕ್ಕೆ ಅನ್ಯಾಯ ಆಗ್ತಿರೋದು ಕಾಣಿಸ್ತಿಲ್ವಾ? ರಾಜ್ಯಕ್ಕೆ ಹೊಡೆತಗಳು ಬಿಳ್ತಿವೆ. ಅನ್ಯಾಯ ಆಗ್ತಿದ್ರೂ ಇವರು ನ್ಯಾಯ ಕೊಡಿಸುವಲ್ಲಿ ವಿಫಲ ಆಗಿದ್ದಾರೆ. ರಾಜ್ಯದ ಹಿತ ಮುಖ್ಯ ಅಲ್ವಾ ಅವರಿಗೆ? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸೋದು ಮುಖ್ಯನಾ ಇವರಿಗೆ? ಕಾಂಗ್ರೆಸ್ ಸರ್ಕಾರ ಉರುಳಿಸಿದರೆ ನಿಮಗೆ ರಾಜಕೀಯ ಲಾಭ ಆಗಬಹುದು‌. ಆದರೆ ರಾಜ್ಯಕ್ಕೆ, ರಾಜ್ಯದ ಜನಕ್ಕೆ ಏನ್ ಲಾಭ? ಆಗ್ತಿರುವ ಅನ್ಯಾಯ ಸರಿ ಮಾಡಲಿ. ರಾಜ್ಯದ ಜನರ ಮೇಲೆ ಸೇಡು ತೀರಿಸ್ಕೋತಿದ್ದೀರಾ ಎಂದು ವಾಗ್ದಾಳಿ ನಡೆಸಿದರು‌.

    ದುರುದ್ದೇಶದಿಂದ ತಮ್ಮ ಮೇಲೆ ಎಫ್ಐಆರ್ ಹಾಕಿಸಲಾಗಿದೆ ಎಂಬ ಹೆಚ್ಡಿಕೆ ಹೇಳಿಕೆ ಬಗ್ಗೆ ಮಾತನಾಡಿ, ಹೆಚ್ಡಿಕೆ ವಿರುದ್ಧ ದೂರು ಕೊಟ್ಟವರು ಕಾಂಗ್ರೆಸ್‌ನವ್ರಲ್ಲ. ದೂರುದಾರರು ಜೆಡಿಎಸ್‌ನಲ್ಲಿ ಪದಾಧಿಕಾರಿ ಆಗಿದ್ದವರು. ನಾವು ಅವರಿಗೆ ಹೇಳಿ ದೂರು ಕೊಡಿಸಲು ಆಗುತ್ತಾ? ಸುಮ್ಮನೆ ರಾಜಕೀಯಕ್ಕಾಗಿ ಕುಮಾರಸ್ವಾಮಿ ಮಾತಾಡೋದು ಬೇಡ. ಸತ್ಯ ಇದರಿಂದ ಮರೆಯಾಗಲ್ಲ. ತನಿಖೆ ಆಗಲಿ, ಸತ್ಯ ಗೊತ್ತಾಗುತ್ತೆ ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಕಾಂಗ್ರೆಸ್‌ನದ್ದು 80 ಪರ್ಸೆಂಟ್‌ ಭ್ರಷ್ಟಾಚಾರ ಸರ್ಕಾರ: ಕಟೀಲ್‌ ವಾಗ್ದಾಳಿ

  • Breaking | ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

    Breaking | ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

    ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ (Vijaya Tata) ಎಂಬುವರು ದೂರು ನೀಡಿದ್ದರು. ಈ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    FIR ನಲ್ಲಿ ಏನಿದೆ?
    * 2018 ರಿಂದ ಜೆಡಿಎಸ್ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ
    * ನನ್ನ ಕಾರ್ಯ ಅಭಿನಂಧಿಸಿ ಪಕ್ಷದ ಸೋಷಿಯಲ್ ಮೀಡಿಯಾ ವಿಂಗ್‌ಗೆ ಉಪಾಧ್ಯಕ್ಷನಾಗಿ ಮಾಡಿದ್ರು
    * ನಾನು ಉಪಾಧ್ಯಕ್ಷನಾದ ಬಳಿಕ ದೇವೇಗೌಡರು, ‌ಕುಮಾರಸ್ವಾಮಿ ಸೇರಿ ಸಭೆ ಮಾಡಿರುತ್ತೇವೆ
    * ಸಾಮಾಜಿಕ ಜಾಲತಾಣ ಸೇರಿದಂತೆ ಪಕ್ಷದ ಏಳಿಗೆ ಬಗ್ಗೆ ಚರ್ಚೆಗಳನ್ನ ನಡೆಸಿರುತ್ತೇವೆ
    * 2019 ರಲ್ಲಿ ಮಂಡ್ಯ ಲೋಕಸಭಾ ಎಲೆಕ್ಷನ್ ಸಂಧರ್ಭದಲ್ಲಿ ನಿಖಿಲ್ ಪರವಾಗಿ ಸಾಕಷ್ಟು ಅಭಿಯಾನ ಮಾಡಿದ್ದೇವೆ
    * ಈ ಅಭಿಯಾನಗಳಿಗೆ ನಾನು ವೈಯುಕ್ತಿಕವಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ
    * ಇದಾದ ಬಳಿಕ ನಾನು ಕೆಲ ವರ್ಷಗಳಿಂದ ನನ್ನ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನ ಹರಿಸಿದ್ದೇ
    * ಹೀಗಾಗಿ ಪಕ್ಷದ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ
    * ಕಳೆದ ಒಂದು ತಿಂಗಳಿನಿಂದ ನನ್ನ ಮನೆಗೆ ಆಗಮಿಸಿದ್ದ ಮಾಜಿ ಎಂಎಲ್‌ಸಿ ರಮೇಶ್ ಗೌಡ, ಪಕ್ಷದ ಕಾರ್ಯಗಳಲ್ಲಿ ಪುನಃ ತೊಡಗಿಸಿಕೊಳ್ಳುವಂತೆ ಕೋರಿದ್ರು.
    * ಕುಮಾರಣ್ಣ ಪಕ್ಷದ ಸಂಘಟನೆಯ ಜವಾಬ್ಧಾರಿ ವಹಿಸಿಕೊಳ್ಳುವಂತೆ ಕೋರಿದ್ರು
    * ರಮೇಶ್ ಗೌಡ 2024ರ ಆಗಸ್ಟ್ 24 ರಂದು ರಾತ್ರಿ 10 ಗಂಟೆಗೆ ಮನೆಗೆ ಆಗಮಿಸಿದ್ರು
    * ನಮ್ಮ ಜೊತೆಯಲ್ಲಿ ಕೂತು ಊಟ ಮಾಡುತ್ತಾ ಚೆನ್ನಪಟ್ಟಣ ಉಪ ಚುನಾವಣೆ ಬಗ್ಗೆ ವಿವರಿಸತೊಡಗಿದ್ರು
    * ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡೋದು ಅಂತಿಮವಾಗಿದ್ದು, ಈ ಬಾರಿ ಚುನಾವಣಾ ಕಾರ್ಯದಲ್ಲಿ ಸಕ್ರಿಯವಾಗಿರಲು ಮನವಿ ಮಾಡಿದ್ರು
    * ಇದೇ ವೇಳೆ ತಮ್ಮ ಮೊಬೈಲ್ ನಿಂದ ಹೆಚ್.ಡಿ ಕುಮಾರಸ್ವಾಮಿ ಕರೆ ಮಾಡಿದ್ರು
    * ಕುಮಾರಸ್ವಾಮಿ ಜೊತೆಯಲ್ಲಿ ಮಾತನಾಡುತ್ತಾ ರಮೇಶ್ ಗೌಡ ನಮ್ಮ ಮನೆಗೆ ಬಂದಿರೋದಾಗಿ ತಿಳಿಸಿದ್ರು
    * ಆನಂತರ ನನಗೆ ಕುಮಾರಸ್ವಾಮಿ ಜೊತೆ ಮಾತನಾಡಲು ಫೋನ್ ಕೊಟ್ಟರು
    * ಕುಶಲೋಪರಿ ವಿಚಾರಿಸಿದ ಕುಮಾರಸ್ವಾಮಿ ಚೆನ್ನಪಟ್ಟಣ ಉಪಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ರು
    * ಉಪಚುನಾವಣೆ ಅನಿವಾರ್ಯ ನಮಗೆ, ಖರ್ಚಿಗೆ 50 ಕೋಟಿ ರೂ. ಕೊಡಬೇಕಾಗುತ್ತೆ ಎಂದ್ರು
    * ಸರ್ ನನ್ನ ಬಳಿ ಅಷ್ಟೊಂದು ಹಣವಿಲ್ಲ ಎಂದೆ
    * ನನ್ನ ಮಾತಿನಿಂದ ಕೋಪಗೊಂಡ ಕುಮಾರಸ್ವಾಮಿ 50 ‌ಕೋಟಿ ರೆಡಿ ಮಾಡು ಇಲ್ಲದೇ ಹೋದ್ರೆ ನಾನೇನ್ ಮಾಡ್ತಿನೊ ಗೊತ್ತಿಲ್ಲ ಎಂದು ಬೆದರಿಕೆ ಹಾಕಿದ್ರು.
    * ಬೆಂಗಳೂರಿನಲ್ಲಿ ರಿಯಲ್ ಎಷ್ಟೇಟ್ ಉದ್ಯಮ ನಡೆಸೋದು ಮಾತ್ರವಲ್ಲ ಬದುಕೋದು ಕಷ್ಟ ಎಂದು ಬೆದರಿಕೆ ಹಾಕಿದ್ರು
    * ರಮೇಶ್ ಗೌಡ 50 ಕೋಟಿ ರೆಡಿ ಮಾಡಿಕೊಳ್ಳಿ ಜೊತೆಗೆ ದೇವಸ್ಥಾನ, ಶಾಲೆ ಕಟ್ಟಿಸುತ್ತಿದ್ದು ಅದಕ್ಕೆ 5 ಕೋಟಿ ನೀಡುವಂತೆ ಒತ್ತಾಯಿಸಿದ್ರು
    * ಈ ಹಣ ನೀಡದೇ ಇದ್ರೆ ನಿಮಗೆ ತೊಂದರೆ ಎದುರಾಗುತ್ತೆ ಎಂದು ಧಮ್ಕಿ ಹಾಕಿದ್ರು
    * ಇದಕ್ಕೆ ಸಂಬಂಧಿಸಿದಂತೆ ರಮೇಶ್‌ ಗೌಡ ಅವರು ವಾಟ್ಸಪ್ ಸಂದೇಶ ಕೂಡ ಕಳಿಸಿದರು
    * ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ರಚಿಸಿ ಹಣಕ್ಕಾಗಿ ಬೇಡಿಕೆ ಇಟ್ಟು ಜೀವಬೆದರಿಕೆ ಒಡ್ಡುತ್ತಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.

    ವಿಜಯ್ ಟಾಟಾ ನೀಡಿದ ದೂರಿನಲ್ಲಿ ಏನಿತ್ತು? 
    ಚನ್ನಪಟ್ಟಣ ಉಪಚುನಾವಣೆಗೆ (Channapatna By Election) ನಿಖಿಲ್ ಕುಮಾರಸ್ವಾಮಿ (Nikhil Kumaraswami) ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ.

    ಮಾಜಿ ಎಂಎಲ್‌ಸಿ ರಮೇಶ್ ಗೌಡ 50 ಕೋಟಿ ರೂ. ಹಣ ಹೊಂದಿಸಿಕೊಡು. ನಾನು ದೇವಸ್ಥಾನ, ಶಾಲೆ ಅಭಿವೃದ್ಧಿ ಮಾಡುತ್ತಿದ್ದು ನನಗೂ 5 ಕೋಟಿ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ಕೊಡದೇ ಹೋದರೆ ನಿಮಗೂ ತೊಂದರೆಗಳು ಎದುರಾಗಲಿದೆ. ರಮೇಶ್ ಗೌಡ ನನಗೆ ಆಗಸ್ಟ್ 30, ಸೆಪ್ಟೆಂಬರ್ 06, ಮತ್ತು 11 ರಂದು ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ.

    ಹೆಚ್‌ಡಿ ಕುಮಾರ ಸ್ವಾಮಿ ಮತ್ತು ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ಮಾಡಿ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಮೇಶ್ ಗೌಡ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

  • 50 ಕೋಟಿ ನೀಡುವಂತೆ ಬೆದರಿಕೆ – ಹೆಚ್‌ಡಿಕೆ, ರಮೇಶ್ ಗೌಡ ವಿರುದ್ಧ ದೂರು

    50 ಕೋಟಿ ನೀಡುವಂತೆ ಬೆದರಿಕೆ – ಹೆಚ್‌ಡಿಕೆ, ರಮೇಶ್ ಗೌಡ ವಿರುದ್ಧ ದೂರು

    –  ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಜಯ್ ಟಾಟಾ ದೂರು

    ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ (Ramesh Gowda) ವಿರುದ್ಧಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ (Vijaya Tata) ಎಂಬುವರು ದೂರು ನೀಡಿದ್ದಾರೆ.

    ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ
    ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ

    ದೂರಿನಲ್ಲಿ ಏನಿದೆ?
    ಚನ್ನಪಟ್ಟಣ ಉಪಚುನಾವಣೆಗೆ (Channapatna By Election) ನಿಖಿಲ್ ಕುಮಾರಸ್ವಾಮಿ (Nikhil Kumaraswami) ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.

    ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್‌ ಡಿಟೇಲ್ಸ್‌

    ಮಾಜಿ ಎಂಎಲ್‌ಸಿ ರಮೇಶ್ ಗೌಡ 50 ಕೋಟಿ ರೂ. ಹಣ ಹೊಂದಿಸಿಕೊಡು. ನಾನು ದೇವಸ್ಥಾನ, ಶಾಲೆ ಅಭಿವೃದ್ಧಿ ಮಾಡುತ್ತಿದ್ದು ನನಗೂ 5 ಕೋಟಿ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ಕೊಡದೇ ಹೋದರೆ ನಿಮಗೂ ತೊಂದರೆಗಳು ಎದುರಾಗಲಿದೆ. ರಮೇಶ್ ಗೌಡ ನನಗೆ ಆಗಸ್ಟ್ 30, ಸೆಪ್ಟೆಂಬರ್ 06, ಮತ್ತು 11 ರಂದು ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ.

    ಹೆಚ್‌ಡಿ ಕುಮಾರ ಸ್ವಾಮಿ ಮತ್ತು ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ಮಾಡಿ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಮೇಶ್ ಗೌಡ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

     

  • ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗದಗದಲ್ಲಿ ಜೆಡಿಎಸ್ ಪ್ರೊಟೆಸ್ಟ್

    ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗದಗದಲ್ಲಿ ಜೆಡಿಎಸ್ ಪ್ರೊಟೆಸ್ಟ್

    ಗದಗ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumaraswamy) ಅವರ ವಿರುದ್ಧ ಪತ್ರದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಇಂದು (ಮಂಗಳವಾರ) ಗದಗ (Gadaga) ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ಮಾಡಿದರು.

    ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ (ADGP Chandrashekhar) ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿ ಚಂದ್ರಶೇಖರ್ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ

    ಹೆಚ್‌ಡಿಕೆ ವಿರುದ್ಧ ಅಸಂವಿಧಾನಿಕ ಪದ ಬಳಕೆ ಚಂದ್ರಶೇಖರ್ ಅವರು ಮಾಡಿದ್ದಾರೆ. ಇಂತಹ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕುಮಾರಸ್ವಾಮಿಗೆ ಹಾಗೂ ನಾಡಿನ ಜನತೆಗೆ ಕೂಡಲೆ ಕ್ಷಮೆ ಕೇಳಬೇಕು. ಅಧಿಕಾರಿಯಾಗಿದ್ದು ನಾಲಿಗೆ ಮೇಲೆ ಹಿಡಿತವಿಟ್ಟುಕೊಳ್ಳಬೇಕು. ಭ್ರಷ್ಟಾಚಾರ ಆರೋಪ ಬಗ್ಗೆ ತನಿಖೆ ಆಗಬೇಕೆಂದು ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು. ಇದನ್ನೂ ಓದಿ: ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

    ನಂತರ ಗದಗ ತಹಶೀಲ್ದಾರ್ ಮೂಲಕ ರಾಜ್ಯಪಾಲರು, ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ, ಬಸವರಾಜ್ ಅಪ್ಪನ್ನವರ್, ಸಂತೋಷ್ ಪಾಟೀಲ, ಪ್ರಫುಲ್ ಪುಣೇಕರ್, ದೇವಪ್ಪ ಮಲ್ಲಸಮುದ್ರ, ರಮೇಶ್ ಹುಣಶಿಮರದ, ಕುಮಾರ್ ಜಿಗಳೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: 14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು