Tag: jds

  • ಕುಂಟು ನೆಪ ಹೇಳಿ ಕರ್ನಾಟಕ ಐಪಿಎಸ್ ಕೇಡರ್‌ನಲ್ಲಿ ವಿಲೀನ: ಚಂದ್ರಶೇಖರ್‌ ಅಮಾನತಿಗೆ ಜೆಡಿಎಸ್‌ ದೂರು

    ಕುಂಟು ನೆಪ ಹೇಳಿ ಕರ್ನಾಟಕ ಐಪಿಎಸ್ ಕೇಡರ್‌ನಲ್ಲಿ ವಿಲೀನ: ಚಂದ್ರಶೇಖರ್‌ ಅಮಾನತಿಗೆ ಜೆಡಿಎಸ್‌ ದೂರು

    ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ವಿರುದ್ದ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಐಜಿಪಿ, ಐಪಿಎಸ್‌ ಅಧಿಕಾರಿ ಚಂದ್ರಶೇಖರ್ (Chandrashekar) ವಿರುದ್ದ ಜೆಡಿಎಸ್ (JDS) ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ನೇತೃತ್ವದ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದೆ.

    ದೂರಿನಲ್ಲಿ ಏನಿದೆ?
    ಭ್ರಷ್ಟಾಚಾರ, ದುರ್ನಡತೆ ಮತ್ತು ಸುಲಿಗೆ ಮುಂತಾದ ಕ್ರಿಮಿನಲ್ ಕೇಸುಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಾಯುಕ್ತ (Lokayukta) ವಿಶೇಷ ತನಿಖಾದಳ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ್ ಅವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಬೇಕು. ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೇಡರ್ ಸೆಂಟ್ರಲ್ ಪ್ರಾಧಿಕಾರಿಯಾಗಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಕ್ತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನೊಂದಿಗೆ ಕಳುಹಿಸಬೇಕು. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ಭಾರತೀಯ ಪೊಲೀಸ್ ಸೇವೆಗೆ ಸೇರಿರುವ ಚಂದ್ರಶೇಖರ್ ಕರ್ನಾಟಕ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ಹಿಮಾಚಲ ಪ್ರದೇಶ (Himachal Pradesh) ಐಪಿಎಸ್‌ ಕೇಡರ್‌ಗೆ ಸೇರಿದವರಾಗಿದ್ದಾರೆ. ತದನಂತರ ತನ್ನ ಪತ್ನಿಯ ಅನಾರೋಗ್ಯ ಮತ್ತು ಹಿಮಾಚಲ ಪ್ರದೇಶದ ವಾತಾವರಣ ಮತ್ತು ಹವಾಗುಣ ಹೊಂದುವುದಿಲ್ಲ ಎನ್ನುವ ಕುಂಟು ನೆಪ ಹೇಳಿ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಗೂ ರಾಜಕೀಯ ಪ್ರಭಾವ ಬೀರಿ ಕರ್ನಾಟಕ ರಾಜ್ಯಕ್ಕೆ ವರ್ಗಾವಣೆಗೊಂಡು, ತದನಂತರ ಕರ್ನಾಟಕ ಐಪಿಎಸ್ ಕೇಡರ್‌ನಲ್ಲಿ ವಿಲೀನಗೊಂಡಿದ್ದಾರೆ.

    ಚಂದ್ರಶೇಖರ್‌ ವಿರುದ್ಧ ಹಲವಾರು ಕೋರ್ಟ್ ಪ್ರಕರಣಗಳಲ್ಲಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಚಂದ್ರಶೇಖರ್‌ ಅವರೇ ಆಗಸ್ಟ್‌ 21 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಶ್ರೀಧರ್ ವಿರುದ್ಧ ಕೇಸು ದಾಖಲಿಸಿ ಮಧ್ಯಂತರ ಆದೇಶ ಪಡೆದಿದ್ದಾರೆ.

     

    ರಾಜ್ಯದ ಪೊಲೀಸ್ ಅಧಿಕಾರಿಯ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮಕೈಗೊಂಡಿದೆ ಮತ್ತು ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಯಾವ ವರದಿಯನ್ನು ಸಲ್ಲಿಸಿದೆ ಎನ್ನುವುದನ್ನು ಇದುವರೆಗೂ ಯಾರಿಗೂ ತಿಳಿದಿಲ್ಲ. ಹೀಗಾಗಿ ಎಂ.ಚಂದ್ರಶೇಖರ್ ರವರ ವಿರುದ್ಧ ಈ ಮೇಲೆ ತಿಳಿಸಿದಂತೆ ದಾಖಲಾಗಿರುವ ದೂರುಗಳು ಎಫ್‌ಐಆರ್‌ ಕೋರ್ಟ್ ಪ್ರಕರಣಗಳು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ರವರ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ. ಹೀಗಾಗಿ ಚಂದ್ರಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತುಗೊಳಿಸಿ ಇವರ ವಿರುದ್ದ ಉನ್ನತ ಮಟ್ಟದ ತನಿಖೆ ನಡೆಸಲು ಅಗತ್ಯವಿರುವ ದಾಖಲಾತಿಗಳೊಂದಿಗೆ ಭಾರತೀಯ ಪೊಲೀಸ್ ಸೇವೆಗಳ ವೃಂದದ ಪ್ರಾಧಿಕಾರವಾಗಿರುವ ಕೇಂದ್ರ ಗೃಹ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ.

     

  • 136 ಶಾಸಕರಿಗೆ 1 ರೂಪಾಯಿ ಅನುದಾನ ಕೊಟ್ಟಿಲ್ಲ, ಇನ್ನೂ ಚನ್ನಪಟ್ಟಣಕ್ಕೆ 500 ಕೋಟಿ ಎಲ್ಲಿಂದ ಬರುತ್ತೆ?- ನಿಖಿಲ್

    136 ಶಾಸಕರಿಗೆ 1 ರೂಪಾಯಿ ಅನುದಾನ ಕೊಟ್ಟಿಲ್ಲ, ಇನ್ನೂ ಚನ್ನಪಟ್ಟಣಕ್ಕೆ 500 ಕೋಟಿ ಎಲ್ಲಿಂದ ಬರುತ್ತೆ?- ನಿಖಿಲ್

    ರಾಮನಗರ: ರಾಜ್ಯದ 136 ಜನ ಶಾಸಕರಿಗೆ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ ಅಭಿವೃದ್ಧಿಗೆ, ಈಗ ಚನ್ನಪಟ್ಟಣದ (Channapatna) ಅಭಿವೃದ್ಧಿಗೆ 500 ಕೋಟಿ ರೂ. ಎಲ್ಲಿಂದ ತರ್ತಾರೆ ಎಂದು ಜೆಡಿಎಸ್‌ (JDS) ಯುವಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಪ್ರಶ್ನೆ ಮಾಡಿದ್ದಾರೆ.

    ಚನ್ನಪಟ್ಟಣ ಅಭಿವೃದ್ಧಿಗೆ ಕಾಂಗ್ರೆಸ್ (Congress) 500 ಕೋಟಿ ಅನುದಾನ ಕೊಟ್ಟಿದ್ದೇವೆ ಎಂಬ ವಿಚಾರ ಕುರಿತು ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಅಭಿವೃದ್ಧಿಗೆ ತಂದಿರುವ 500 ಕೋಟಿ ಯಾವುದಕ್ಕೆ ಕೊಡ್ತಾರೆ? ಎಲ್ಲಿಗೆ ಕೊಡ್ತೀರಾ? ಎಂದು ಜನರ ಮುಂದೆ ಇಡಿ ಎಂದು ಆಗ್ರಹಿಸಿದರು.ಇದನ್ನೂ ಓದಿ: BBK 11: 1 ಲಕ್ಷಕ್ಕೂ ಅಧಿಕ ವೋಟ್ ಗಳಿಸಿ ದೊಡ್ಮನೆ ಸ್ವರ್ಗಕ್ಕೆ ಕಾಲಿಟ್ಟ ಗೌತಮಿ

    ರಾಜ್ಯದ 136 ಜನ ಶಾಸಕರಿಗೆ ಒಂದು ರೂ. ಅನುದಾನ ಕೊಟ್ಟಿಲ್ಲ ಅಭಿವೃದ್ಧಿಗೆ, ಈಗ 500 ಕೋಟಿ ಎಲ್ಲಿಂದ ತರುತ್ತಾರೆ. ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷ ಐದು ತಿಂಗಳು ಆಯ್ತು, ಚನ್ನಪಟ್ಟಣ ತಾಲ್ಲೂಕು ಎಲ್ಲಿದೆ ಅಂತ ಕಾಂಗ್ರೆಸ್ ನಾಯಕರಿಗೆ ಗೊತ್ತಿರಲಿಲ್ಲ. ಈಗ ಕುಮಾರಣ್ಣ (HD Kumaraswamy) ಕೇಂದ್ರ ಸ್ವ ಕ್ಷೇತ್ರ ತೆರವು ಆದ ಮೇಲೆ ಕಾಂಗ್ರೆಸ್‌ನವರು ಕ್ಷೇತ್ರದ ಮೇಲೆ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಇನ್ನೂ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಟಿಕೆಟ್ ವಿಚಾರದಲ್ಲಿ ಜನತಾದಳ ಪಕ್ಷದ ಕಡೆಯಿಂದ ಯಾವುದೇ ಗೊಂದಲ ಆಗುವುದಿಲ್ಲ. ನಾವು ಅದಕ್ಕೆ ಆಸ್ಪದ ಕೊಡುವ ಪ್ರಶ್ನೆಯೇ ಇಲ್ಲ. ಜೊತೆಯಲ್ಲಿ ಸಿಪಿ ಯೋಗೇಶ್ವರ್ ಅವರ ಬೆಂಬಲಿಗರಿಗೆ ಎನ್‌ಡಿಎ ಅಭ್ಯರ್ಥಿ ಪರವಾಗಿ ಕೆಲಸ ಮಾಡಿ ಎಂದು ಸಲಹೆ ಮತ್ತು ಸೂಚನೆ ಕೊಡುತ್ತಿದ್ದಾರೆ. ಒಟ್ಟಾರೆಯಾಗಿ ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ. ಜನ ಆಶೀರ್ವಾದ ಮಾಡುತ್ತಾರೆ ಎಂದು ಭವಿಷ್ಯ ನುಡಿದರು.

    ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಒಂದು ಕಡೆ ಜನಪ್ರತಿನಿಧಿಗಳು, ಮತ್ತೊಂದು ಕಡೆ ಅಧಿಕಾರಿಗಳು ಯಾವ ರೀತಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಕುಮಾರಣ್ಣ ನೇರವಾಗಿ ಮಾತನಾಡುತ್ತಾರೆ. ಕೆಲವೊಂದು ವಿಷಯಗಳನ್ನ ರಾಜ್ಯ ಸರ್ಕಾರ ಜೀರ್ಣಸಿಕೊಳ್ಳುವುದಿಲ್ಲ. ಅದಕ್ಕೆ ಎಜಿಡಿಪಿ ಕಡೆಯಿಂದ ಪತ್ರ ಬಂದಿರುವುದು. ಇದು ಅವರ ಹುದ್ದೆಗೆ ಶೋಭೆ ತರುವುದಿಲ್ಲ, ಇದನ್ನ ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದರಲ್ಲಿ ಯಾವುದೇ ಅನುಮಾನವಿಲ್ಲ, ಸಾಕಷ್ಟು ಜನ ಕಾನೂನು ಸಲಹೆಗಾರರು, ಕಾನೂನು ತಜ್ಞರು, ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು, ಮಂತ್ರಿ ಮಂಡಲದ ಜೊತೆ ಇದ್ದಾರೆ. ಒಂದಷ್ಟು ಪತ್ರಗಳನ್ನ ಬರೆಸಿ, ಅವರ ಮೂಲಕ ಸಹಿ ಮಾಡಿಸಿ ರಾಜ್ಯಕ್ಕೆ ಸಂದೇಶಕೊಡಿಸುವಂತ ಕೆಲಸ ಮಾಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು : ಮಂಜುನಾಥ ಸಾವಂತ

  • ಪಕ್ಷ ವಿರೋಧಿಗಳನ್ನ ಉಚ್ಚಾಟನೆ ಮಾಡಲಿ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಪಕ್ಷ ವಿರೋಧಿಗಳನ್ನ ಉಚ್ಚಾಟನೆ ಮಾಡಲಿ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನ ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ.

    ಯತ್ನಾಳ್ ಟೀಂ ವಿರುದ್ಧ ಸಭೆ ಮಾಡಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ವಿರೋಧ ಚಟುವಟಿಕೆ ಮಾಡುವವರನ್ನ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಎಷ್ಟು ಪಾರ್ಟಿ ಬದಲಾವಣೆ ಮಾಡಿಕೊಂಡು ಬಂದರು ಇವತ್ತು ಮಾತಾಡುತ್ತಾರೆ. ಬಿಜೆಪಿ ಬಗ್ಗೆ ನಿಯತ್ತು ಇಲ್ಲದೇ ಜೆಡಿಎಸ್‌ಗೆ ಹೋಗಿದ್ದರು. ಯಡಿಯೂರಪ್ಪ ಅವರನ್ನ ಇಳಿಸಿ ಯಡಿಯೂರಪ್ಪ ಬೇರೆ ಪಕ್ಷ ಮಾಡಿದಾಗ ಬಿಜೆಪಿ ಪಕ್ಷ ನಡೆಸಲು ಆಗಲಿಲ್ಲ. ಪಕ್ಷ ಶಕ್ತಿ ಕಳೆದುಕೊಂಡಿತ್ತು. ಮತ್ತೆ ಯಡಿಯೂರಪ್ಪ ಬಂದರು ಅಧಿಕಾರಕ್ಕೆ ಮತ್ತೆ ಪಕ್ಷ ಬಂತು. ಇದು ಯಡಿಯೂರಪ್ಪನವರ ಶಕ್ತಿ. ಯಡಿಯೂರಪ್ಪ ಇನ್ನು ಶಕ್ತಿ ಉಳಿಸಿಕೊಂಡಿದ್ದಾರೆ. ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಎಲ್ಲರನ್ನು ಪದಾಧಿಕಾರಿಗಳನ್ನಾಗಿ ಮಾಡಲು ಸಾಧ್ಯವಿಲ್ಲ. ಪಾರ್ಟಿ ನಿಯಮಾನುಸಾರ ಯಾರನ್ನು ಮಾಡಲು ಸಾಧ್ಯವೋ ಅವರನ್ನು ಮಾಡುತ್ತಾರೆ. ಕಾಂಗ್ರೆಸ್ ರೀತಿ ದೊಡ್ಡದಾಗಿ ಪದಾಧಿಕಾರಿಗಳು ಮಾಡಲು ಆಗುವುದಿಲ್ಲ. ಕೇಂದ್ರದ ಸೂಚನೆ ಪ್ರಕಾರ ಮಾಡಿದ್ದೇವೆ. ಶಕ್ತಿ ಇರೋರು ಎಲ್ಲಿ ಇದ್ದರೆ ಏನು. ಅವರನ್ನ ಮಾಡಿದ್ರು, ಇವರನ್ನು ಮಾಡಿದ್ರು ಅಂದರೆ ಹೇಗೆ. ಸಮಯ ಅನುಕೂಲ, ಸಂದರ್ಭದಲ್ಲಿ ಪದಾಧಿಕಾರಿಗಳನ್ನ ಮಾಡುತ್ತಾರೆ. ನಾವು ಪಕ್ಷದ ಪರವಾಗಿ ನಿಲ್ಲುತ್ತೇವೆ. ವಿಜಯೇಂದ್ರ ಅಧ್ಯಕ್ಷರಾಗಿರೋವರೆಗೂ ನಾವು ಪಕ್ಷದ ಪರ ಇರುತ್ತೇವೆ. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಆಗಿದ್ದೆ. ಟಿಕೆಟ್ ಸಿಕ್ಕಿಲ್ಲ. ಆದರೆ ಪಕ್ಷ ಹೇಳಿತು ನಾವು ಪಕ್ಷದ ಕೆಲಸ ಮಾಡಿದೆವು. ಇದು ಪಕ್ಷ ನಿಷ್ಠೆ. ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

    ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಬೇಕು ಎಂದು ಹೇಳುವುದಕ್ಕೆ ಅವರೇನು ಹೈಕಮಾಂಡಾ? ಹೈಕಮಾಂಡ್ ಹೇಳಿದರೆ ವಿಜಯೇಂದ್ರ ಅಧ್ಯಕ್ಷರಾಗಿ ಇರೊದಿಲ್ಲ. ಈಗ ಯಾರು ಮಾತಾಡುತ್ತಿದ್ದಾರೆ ಅವರು ಮಾತಾಡೋದು ಜಾಸ್ತಿ ಕೆಲಸ ಕಡಿಮೆ. ವಿಜಯೇಂದ್ರ ಇಳಿಯಲ್ಲ. ಪಕ್ಷ ಕಟ್ಟುತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ಈಗಾಗಲೇ ಹೈಕಮಾಂಡ್ ಯಾರಿಗೆ ಸೂಚನೆ ಕೊಡಬೇಕೋ ಕೊಟ್ಟಿದೆ. ಯಾವುದೋ ಆರ್‌ಸಿಬಿ, ಎಲ್‌ಬಿಸಿ ಅಂತೆಲ್ಲ ಹೊರಟಿದ್ದಾರೆ. ಅದು ಹೇಗೆ ಮಾಡುತ್ತಾರೋ ಮಾಡಲಿ. ಹಿಂದೆ ಹೀಗೆ ಮಾಡಿದವರು ಕೈ ಸುಟ್ಟಿಕೊಂಡು ಮನೆಗೆ ಹೋದರು ಮತ್ತೆ ಅದೇ ಆಗುತ್ತೆ ಎಂದು ಯತ್ನಾಳ್ ಟೀಂ ವಿರುದ್ಧ ಕಟ್ಟಾ ವಾಗ್ದಾಳಿ ನಡೆಸಿದರು.

  • ಸಿದ್ದರಾಮಯ್ಯ ರಾಜೀನಾಮೆ ಕೇಳೋ ವಿಪಕ್ಷಗಳಿಗೆ ನೈತಿಕತೆ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿದ್ದರಾಮಯ್ಯ ರಾಜೀನಾಮೆ ಕೇಳೋ ವಿಪಕ್ಷಗಳಿಗೆ ನೈತಿಕತೆ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಕೇಳೋ ವಿಪಕ್ಷಗಳ ನಾಯಕರಿಗೆ ನೈತಿಕತೆ ಇದೆಯಾ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹೈಕೋರ್ಟ್‌ನಿಂದ ಸಿಎಂ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಇದು ರಾಜಕೀಯ ಪಿತೂರಿ. ಹೈಕೋರ್ಟ್‌ನಿಂದ ತೀರ್ಪು ಬಂದಿದೆ. ನಮಗೆ ಮುಂದೆ ಅನೇಕ ಆಯ್ಕೆಗಳು ಇವೆ. ನಾವು ಕಾನೂನು ಹೋರಾಟ ಮಾಡುತ್ತೇವೆ. ನಾವೆಲ್ಲ ಸಿಎಂ ಜೊತೆ ಇದ್ದೇವೆ ಎಂದು ತಿಳಿಸಿದರು.

    ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಡ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಪಕ್ಷಗಳಿಗೆ ಹೇಳಿ ಸಮ್ಮಿಶ್ರ ಸರ್ಕಾರದಲ್ಲಿ ಎಷ್ಟು ಜನರ ಮೇಲೆ ಕೇಸ್ ಇದೆ. ಎಫ್‌ಐಆರ್ ದಾಖಲು ಆಗಿದೆ. ಎಷ್ಟು ಜನ ಬೇಲ್ ಮೇಲೆ ಇದ್ದಾರೆ. ಮೊದಲು ಅವರ ಬಳಿ ರಾಜೀನಾಮೆ ಪಡೆಯಲಿ. ಆಮೇಲೆ ಸಿಎಂ ಅವರ ರಾಜೀನಾಮೆ ಕೇಳಲಿ ಎಂದು ಆಕ್ರೋಶ ಹೊರ ಹಾಕಿದರು.

    ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಕೂಡಾ ಬೇಲ್ ಮೇಲೆ ಇದ್ದಾರೆ ಅನ್ನೋ ಪ್ರಶ್ನೆ ಅಲ್ಲ. ಬಿಜೆಪಿಯೇತರ ಸರ್ಕಾರ ಅಸ್ಥಿರ ಮಾಡಲು ಇಂತಹ ಅಸ್ತ್ರಗಳನ್ನ ಅವರು ಬಿಡುತ್ತಿದ್ದಾರೆ. ದೇಶದ ದುರಂತ ಅಂದರೆ ಪ್ರಜಾಪ್ರಭುತ್ವದ ಅಸ್ತಿತ್ವ ಅಲುಗಾಡುತ್ತಿದೆ. ಚುನಾಯಿತ ಪ್ರತಿನಿಧಿಗಳನ್ನ ಈ ರೀತಿ ಸೇಡಿನ ರಾಜಕೀಯ ಮಾಡಿ ಸರ್ಕಾರವನ್ನ ಅಸ್ಥಿರ ಮಾಡೋ ಪ್ರಯತ್ನ ಆಗುತ್ತಿದೆ. ಕರ್ನಾಟಕದ ಜನ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದಾರೆ. ಇದು ಬಿಜೆಪಿ-ಜೆಡಿಎಸ್ ಅವರಿಗೆ ಸಹಿಸಲು ಆಗುತ್ತಿಲ್ಲ. ಅದಕ್ಕಾಗಿ ಇಂತಹ ನಾಟಕವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.

    ಸಿಎಂ ರಾಜೀನಾಮೆ ಕೇಳುವವರಿಗೆ ಮೊದಲು ವಿಪಕ್ಷದವರಿಗೆ ನೈತಿಕತೆ ಇದೆಯಾ ಕೇಳಿ. ಅವರಿಗೆ ನೈತಿಕತೆ ಇದೆಯಾ ಅವರನ್ನ ಅವರು ಮೊದಲು ಪ್ರಶ್ನೆ ಮಾಡಿಕೊಳ್ಳಲಿ. ವಿಪಕ್ಷದ ಎಷ್ಟು ಜನರ ಮೇಲೆ ಕೇಸ್ ಇಲ್ಲ. ಇದು ದ್ವೇಷದ ರಾಜಕೀಯ ಇದನ್ನ ನಾವು ರಾಜಕೀಯವಾಗಿಯೇ ಎದುರಿಸುತ್ತೇವೆ. ಹೈಕೋರ್ಟ್‌ನಲ್ಲಿ ಹಿನ್ನಡೆ ಆಗಿರಬಹುದು. ವಿಭಾಗೀಯ ಪೀಠ ಇದೆ. ಸುಪ್ರೀಂ ಕೋರ್ಟ್ ಇದೆ. ಕಾನೂನು ಹೋರಾಟ ಮಾಡುತ್ತೇವೆ. ನಾವೆಲ್ಲ ಸಿಎಂ ಜೊತೆ ಇದ್ದೇವೆ. ನೀವು ಹೆದರಬೇಡಿ. ನಿಮ್ಮ ನಾಯಕತ್ವ ರಾಜ್ಯ ಒಪ್ಪಿದೆ. ಮಂತ್ರಿ ಮಂಡಲ ಒಪ್ಪಿದೆ. ನಾವೆಲ್ಲರೂ ಸಿಎಂ ಜೊತೆ ಗಟ್ಟಿಯಾಗಿ ಇದ್ದೇವೆ ಎಂದು ಹೇಳಿದರು.

  • MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

    MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

    ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ (JDS) ನಾಯಕರು ಪ್ರತಿಭಟನೆ ನಡೆಸಿದ್ದಾರೆ.

    ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ನ ಬೆಂಗಳೂರು ನಗರಾಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಸಿಎಂ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ: ಪರಮೇಶ್ವರ್

    ರಮೇಶ್ ಗೌಡ ಮಾತನಾಡಿ, ಸಿಎಂ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ಮಾಡ್ತಿದೆ ಅಂತಾ ಹೇಳ್ತಾ ಇದ್ದಾರೆ. ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆಂದು ಸಿಎಂ ಹೇಳಿದ್ರು. ನ್ಯಾಯಾಲಯ ಅವರ ವಿರುದ್ದ ತೀರ್ಪು ನೀಡಿದೆ. ಬಿಜೆಪಿ ಜೆಡಿಎಸ್‌ಗೆ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಹೇಳ್ತಾ ಇದ್ರಿ. ನಿಮಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡಿ ಎಂದು ಸವಾಲು ಹಾಕಿದರು.

    ರಾಜಭವನ ದುರುಪಯೋಗ ಮಾಡಿಕೊಳ್ತಾ ಇದ್ದಾರೆ ಅಂತ ಹೇಳ್ತಾ ಇದ್ರಿ. ಈಗ ನ್ಯಾಯಾಲಯ ಮುಡಾ ವಿಚಾರವಾಗಿ ತನಿಖೆ ಆಗಬೇಕು ಅಂತ ಹೇಳುತ್ತಿದೆ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ – ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

    ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾ ಮಾಡಿತು.

    ರಾಜ್ಯಪಾಲರು ತಮ್ಮ ವಿವೇಚನೆ ಬಳಸಿ ಸೂಕ್ತ ನಿರ್ಧಾರವನ್ನೇ ಕೈಗೊಂಡಿದ್ದಾರೆ. ಹೀಗಾಗಿ, ಅರ್ಜಿದಾರ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ ಎಂದು ನ್ಯಾಯಾಲಯ ತಿಳಿಸಿತ್ತು.

  • MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

    MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

    – ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದೆ
    – ನನ್ನ ವಿರುದ್ಧ ರಾಜಕೀಯ ಸಂಚು

    ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

    ಸಿಎಂ ಹೇಳಿದ್ದೇನು?
    ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

    ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.

    ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ (BJP, JDS) ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

    ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?

    ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

    ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.

    ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

    ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.

    ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ.

    ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.

  • ಮುನಿರತ್ನ ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ – ನಿಖಿಲ್

    ಮುನಿರತ್ನ ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ – ನಿಖಿಲ್

    – ಕಾಂಗ್ರೆಸ್ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡುತ್ತಿದೆ

    ಬೆಂಗಳೂರು: ಶಾಸಕ ಮುನಿರತ್ನ (Munirathna) ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ. ಆದರೆ ಈ ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಟಾರ್ಗೆಟ್ ರಾಜಕೀಯ ಮಾಡ್ತಿದೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ನಗರದ ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುನಿರತ್ನ ಕೇಸ್ ವಿಚಾರವಾಗಿ ತನಿಖೆ ಆಗುತ್ತಿದೆ. ತನಿಖೆ ನಡೆಯುವ ಸಮಯದಲ್ಲಿ ಮಾತನಾಡುವುದು ಸರಿಯಲ್ಲ. ತನಿಖೆಯಾಗಲು ಸತ್ಯಾಸತ್ಯತೆ ಹೊರಗೆ ಬರಲಿ. ಕಾನೂನಿಗಿಂತ ಯಾರು ದೊಡ್ಡವರು ಅಲ್ಲ. ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ತಿರುಪತಿ ಲಡ್ಡು ವಿಚಾರ ತನಿಖೆ ಆಗಲಿ: ಎಂ.ಬಿ ಪಾಟೀಲ್

    ಪರಶುರಾಮ್ ಕೇಸ್‌ನ್ನು ಮುಚ್ಚಿ ಹಾಕಲು ಸರ್ಕಾರ ಹೇಗೆ ಪ್ರಯತ್ನ ಮಾಡಿತ್ತು ಎಂದು ಎಲ್ಲರಿಗೂ ಗೊತ್ತಿದೆ. ವಾಲ್ಮೀಕಿ ಹಗರಣ ಕೇಸ್‌ನಲ್ಲಿ ನಾಗೇಂದ್ರ ವಿಚಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ಹೇಗೆ ತನಿಖೆ ಮಾಡಿತು ಎಂದು ಜಗಜ್ಜಾಹೀರಾಗಿದೆ. ಮುನಿರತ್ನ ವಿಚಾರದಲ್ಲಿ ಎಫ್‌ಎಸ್‌ಎಲ್ ವರದಿ ಬರಬೇಕು. ಅವರ ಧ್ವನಿಯೋ ಅಲ್ಲವೋ ಎಂದು ತಿಳಿಯಬೇಕು. ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧನ ಮಾಡಿದ್ದಾರೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡುತ್ತಿದೆ ಎಂದು ಅನ್ನಿಸುತ್ತಿದೆ ಎಂದರು.

    ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಬೇರೆ ಅವರ ಮೇಲೆ ತಪ್ಪು ಹೊರಿಸುವ ಕೆಲಸ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಸ್ವಾತಂತ್ರ‍್ಯ ಬಂದಾಗಿನಿಂದ ಅನೇಕ ಸರ್ಕಾರಗಳು ಕೆಲಸ ಮಾಡಿವೆ ಆದರೆ ಈ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡಿಕೊಂಡು, ದ್ವೇಷದ ರಾಜಕೀಯ ಮಾಡಿಕೊಂಡು ಹೊರಟಿದ್ದಾರೆ. ಇದನ್ನು ರಾಜ್ಯದ ಜನರು ಮೆಚ್ಚುವುದಿಲ್ಲ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಜಾತಿ ಆಧಾರದಲ್ಲಿ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತಿದೆ. ಇಲ್ಲಿ ಒಕ್ಕಲಿಗ ಟ್ಯಾಗ್, ಓಬಿಸಿ ಟ್ಯಾಗ್, ಲಿಂಗಾಯತರ ಟ್ಯಾಗ್, ಮುಸ್ಲಿಂ ಟ್ಯಾಗ್ ಹಾಕಿ ರಾಜಕೀಯ ಮಾಡುವುದು ಸೂಕ್ತ ಅಲ್ಲ. ಯಾವುದೋ ಸಮುದಾಯ ಒಲೈಕೆ ಮಾಡಿಕೊಳ್ಳಲು ಈ ರೀತಿ ಟಾರ್ಗೆಟ್ ರಾಜಕೀಯ ಮಾಡುತ್ತಿದ್ದಾರೆ. ಇವೆಲ್ಲ ಬಿಟ್ಟು ಮೂರು ಮುಕ್ಕಾಲು ವರ್ಷ ಸಮಯ ಇದೆ. ಜನ ಅಧಿಕಾರ ಮಾಡಲು ಅವಕಾಶ ಕೊಟ್ಟಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ಕೊಡಲಿ. ಸರ್ಕಾರ ಬಂದೂ ಇಷ್ಟು ದಿನ ಆದರೂ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಈ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಶುರುವಾಗಿದೆ. ನಾಳೆ ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರವನ್ನ ರಾಜ್ಯದ ಜನ ತಿರಸ್ಕಾರ ಮಾಡುತ್ತಾರೆ. ಆ ಮಟ್ಟದ ವಾತಾವರಣ ಸರ್ಕಾರದ ವಿರುದ್ದ ಇದೆ. ಅವರ ತಪ್ಪು ಮುಚ್ಚಿಕೊಳ್ಳಲು ನಿತ್ಯ ಹಗರಣಗಳು, ಅಕ್ರಮಗಳು ನಡೆಯುತ್ತಿವೆ. ನಾವು ವಿರೋಧ ಪಕ್ಷವಾಗಿ ಪ್ರಜಾಪ್ರಭುತ್ವದಲ್ಲಿ ನಮಗೆ ಹಕ್ಕು ಕೊಟ್ಟಿದ್ದಾರೆ. ಅದನ್ನು ಬಯಲಿಗೆ ಎಳೆಯೋದೇ ತಪ್ಪಾ ಎಂದು ಪ್ರಶ್ನೆ ಮಾಡಿದರು.ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಗುಂಡಿ ಮುಚ್ಚೋ ಕೆಲಸ ಮಾಡ್ತಿದ್ದಾರೆ: ಡಿಕೆಶಿ

  • ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

    ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಚನ್ನಪಟ್ಟಣದಲ್ಲಿ ಎನ್‌ಡಿಎ (NDA) ಮೈತ್ರಿ ಅಭ್ಯರ್ಥಿಯಾಗುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ.

    ಚನ್ನಪಟ್ಟಣ (Channapatna) ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಟಿಕೆಟ್ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಬಿಜೆಪಿ-ಜೆಡಿಎಸ್ ನಾಯಕರು ದೆಹಲಿಯಲ್ಲಿ ಮಾತನಾಡಿದ್ದಾರೆ. ಇನ್ನು ಚುನಾವಣೆ ಘೋಷಣೆ ಆಗಿಲ್ಲ. ಉಪ ಚುನಾವಣೆ ದಿನಾಂಕ ಘೋಷಣೆ ಆಗಲಿ. ಎನ್‌ಡಿಎ ಅಭ್ಯರ್ಥಿ ಅವರೇ ಚನ್ನಪಟ್ಟಣದ ಅಭ್ಯರ್ಥಿ ಆಗುತ್ತಾರೆ. ಯೋಗೇಶ್ವರ್ ಅವರು ಕೂಡಾ ಹೇಳಿದ್ದಾರೆ. ಅವರು ಅವರ ಬೆಂಬಲಿಗರ ಜೊತೆ ಸಭೆ ಮಾಡಿ ಎನ್‌ಡಿಎ ಅಭ್ಯರ್ಥಿಗೆ ಶಕ್ತಿ ತುಂಬಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನ: ರಾಮಲಿಂಗಾ ರೆಡ್ಡಿ

    ಚನ್ನಪಟ್ಟಣದಲ್ಲಿ ಜೆಡಿಎಸ್ ನಗರ ಸಭೆ ಸದಸ್ಯರು ಕಾಂಗ್ರೆಸ್‌ಗೆ ಆಪರೇಷನ್ ಆಗಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶುಕ್ರವಾರ ನಾನು ನಗರಪಾಲಿಕೆ ಸದಸ್ಯರ ಜೊತೆ ಮಾತುಕತೆ ಮಾಡಿದ್ದೇನೆ. ಸಾಕಷ್ಟು ಜನ ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅವರು ಆಮಿಷ ಒಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇವೆಲ್ಲವನ್ನು ಸರಿ ಮಾಡೋಕೆ ಶುಕ್ರವಾರ ತೋಟದ ಮನೆಯಲ್ಲಿ ಸಭೆ ಮಾಡಿದ್ದೇನೆ. ಅತೀ ಶೀಘ್ರದಲ್ಲೇ ಕೆಲವು ಗುಡ್ ನ್ಯೂಸ್ ಕೊಡುತ್ತೇನೆ. ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು. ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಗ್ರಾಮ ತೊರೆದು ಬಂಧನ ಭೀತಿಯಲ್ಲಿ ಯುವಕ ಸಾವು

  • ಮಾಗಡಿ ಪುರಸಭೆ ಗದ್ದುಗೆ ಏರಿದ ಕಾಂಗ್ರೆಸ್

    ಮಾಗಡಿ ಪುರಸಭೆ ಗದ್ದುಗೆ ಏರಿದ ಕಾಂಗ್ರೆಸ್

    -ಬಹುಮತ ಇದ್ರೂ ಜೆಡಿಎಸ್ ಗೆ ಮುಖಭಂಗ

    ರಾಮನಗರ: ಬುಧವಾರ ನಡೆದ ಮಾಗಡಿ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಶಾಸಕ ಹೆಚ್.ಸಿ.ಬಾಲಕೃಷ್ಣ (H C Balakrishna) ನೇತೃತ್ವದಲ್ಲಿ ಹೈಜಾಕ್ ಆಪರೇಷನ್ ನಡೆದಿದ್ದು, ಈ ಮೂಲಕ ಕಾಂಗ್ರೆಸ್ (Congress) ಪುರಸಭೆ ಗದ್ದುಗೆ ಏರಿದೆ.

    ಮಾಗಡಿ ಪುರಸಭೆ (Magadi Municipality) ಒಟ್ಟು 23 ಸದಸ್ಯ ಸ್ಥಾನವಿದ್ದು, ಜೆಡಿಎಸ್ (JDS) 12, ಬಿಜೆಪಿ(BJP) 1, ಕಾಂಗ್ರೆಸ್ (Congress) 10 ಸದಸ್ಯರ ಸಂಖ್ಯಾಬಲ ಹೊಂದಿತ್ತು. ಅಧಿಕಾರ ಹಿಡಿಯಲು ಕಾಂಗ್ರೆಸ್ ಮೂವರು ಜೆಡಿಎಸ್ ಸದಸ್ಯರ ಹೈಜಾಕ್ ಮಾಡಿಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಗೆಲ್ಲಲು ತಂತ್ರಗಾರಿಕೆ ನಡೆಸಿತು. ಕಳೆದ ಮೂರು ದಿನಗಳಿಂದ ಜೆಡಿಎಸ್‌ನ ಮೂವರು ಸದಸ್ಯರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದನ್ನೂ ಓದಿ: ಶಾಸಕ ಮುನಿರತ್ನ ಕೇಸ್‌ನಲ್ಲಿ ದ್ವೇಷದ ರಾಜಕೀಯ ಮಾಡ್ತಿಲ್ಲ: ಸಿದ್ದರಾಮಯ್ಯ

    ಬಾಲಕೃಷ್ಣ ತಂತ್ರಗಾರಿಕೆಯಿಂದ ಜೆಡಿಎಸ್ ಸದಸ್ಯರ ಆಪರೇಷನ್ ಮೂಲಕ ಕಾಂಗ್ರೆಸ್ ವಿಜಯ ಸಾಧಿಸಿದೆ. 11 ಸದಸ್ಯರ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದರು. ಇದರಿಂದ ಬಹುಮತ ಇದ್ದರೂ ಜೆಡಿಎಸ್ ಅಧಿಕಾರ ಕಳೆದುಕೊಂಡಿತು. ಕಾಂಗ್ರೆಸ್ ಹೈಜಾಕ್ ಮಾಡಿದ್ದ 4 ಮಂದಿ ಜೆಡಿಎಸ್ ಸದಸ್ಯರು ಚುನಾವಣೆಯಲ್ಲಿ ತಟಸ್ಥರಾಗಿದ್ದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆಯಿಂದ ಕೋಟ್ಯಂತರ ಹಣ ಉಳಿತಾಯ: ಅಶೋಕ್

    ಕಾಂಗ್ರೆಸ್‌ನ ರಮ್ಯ ನರಸಿಂಹಮೂರ್ತಿಗೆ ಅಧ್ಯಕ್ಷ ಸ್ಥಾನ, ರಿಯಾಜ್ ಅಹಮ್ಮದ್‌ಗೆ ಉಪಾಧ್ಯಕ್ಷ ಸ್ಥಾನ ಒಲಿದಿದೆ. ಬಾಲಕೃಷ್ಣ ನೂತನ ಅಧ್ಯಕ್ಷೆ, ಉಪಾಧ್ಯಕ್ಷರಿಗೆ ಸಿಹಿ ತಿನ್ನಿಸಿ ಶುಭಕೋರಿದರು. ಇದನ್ನೂ ಓದಿ: ಹೃದಯಾಘಾತದಿಂದ ಬಹುಭಾಷಾ ನಟಿ ಶಕುಂತಲಾ ನಿಧನ

  • ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್, ಪೊಲೀಸರ ಲೋಪ ಮುಚ್ಚಿ ಹಾಕಲು ಸಿಕ್ಕ ಸಿಕ್ಕವರು ಅರೆಸ್ಟ್: ಹೆಚ್‌ಡಿಕೆ

    ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್, ಪೊಲೀಸರ ಲೋಪ ಮುಚ್ಚಿ ಹಾಕಲು ಸಿಕ್ಕ ಸಿಕ್ಕವರು ಅರೆಸ್ಟ್: ಹೆಚ್‌ಡಿಕೆ

    – ಹಿಂದೆ ವೀರೇಂದ್ರ ಪಾಟೀಲ್‌ರನ್ನು ಇಳಿಸಲು ಕಾಂಗ್ರೆಸ್‌ನವರೇ ಬೆಂಕಿ ಹಚ್ಚಿದ್ರು
    – ಮೆರವಣಿಗೆಗೆ ಅನುಮತಿ ನೀಡಿ ಈಗ ಸಂಘಟಕರನ್ನೇ ಆರೋಪಿ ಮಾಡೋದು ಎಷ್ಟು ಸರಿ?

    ಮಂಡ್ಯ: ನಾಗಮಂಗಲದ (Nagamangala) ಕೃತ್ಯದ ಹಿಂದೆ ಕಾಂಗ್ರೆಸ್ (Congress) ಇದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

    ನಾಗಮಂಗಲದ ಗಲಭೆ ಪೀಡಿತ ಸ್ಥಳಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ಇಳಿಸಲು ರಾಮನಗರ, ಚನ್ನಪಟ್ಟಣದಲ್ಲಿ ಗಲಾಟೆ ನಡೆದಿತ್ತು. ಆಗ ಕಾಂಗ್ರೆಸ್‌ನವರೇ ಬೆಂಕಿ ಹಚ್ಚಿ ಗಲಾಟೆ ಮಾಡಿಸಿದ್ದರು. ಅದು ಕೋಮು ಗಲಭೆ ಆಗಿರಲಿಲ್ಲ. ಮುಂದೆ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ. ಅದಕ್ಕಾಗಿ ಹೀಗೆ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ನಾಗಮಂಗಲ ಗಲಭೆ | ಎಲ್ಲರನ್ನೂ A1 ಮಾಡಲು ಅಗುತ್ತಾ?: ಬಿಜೆಪಿ ನಾಯಕರಿಗೆ ಚಲುವರಾಯಸ್ವಾಮಿ ತಿರುಗೇಟು

    ಗಣೇಶ ಕೂರಿಸಿದವರನ್ನೇ ಎಫ್‌ಐಆರ್‌ನಲ್ಲಿ ಎ1 ಆರೋಪಿಯನ್ನಾಗಿ ಮಾಡಿದ್ದೀರಾ. ಇದು ನಿಮ್ಮ ನಡವಳಿಯನ್ನು ತೋರಿಸುತ್ತೆ. ಪೊಲೀಸರ ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ಹಾಳು ಮಾಡಿಕೊಳ್ಳುವುದು ಬೇಡ. ಅಮಾಯಕರನ್ನು ಬಂಧಿಸಿರೋದು ತಪ್ಪು. ಆ ಅಮಾಯಕರು ಜೈಲಿನಿಂದ ಬರೋದು ಯಾವಾಗ? ಹಿಂದೆ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಗಲಭೆಯ ಸ್ಪಾನ್ಸರ್ ಕಾಂಗ್ರೆಸ್ ನಾಯಕರು. ಅಲ್ಲಿ ಜೈಲಿಗೆ ಹೋದವರು ಈಗ ಏನು ಮಾಡುತ್ತಾ ಇದ್ದಾರೆ. ಈ ರೀತಿ ನಾಗಮಂಗಲದಲ್ಲೂ ಆಗಬೇಕಾ ಎಂದು ಪ್ರಶ್ನಿನಿಸಿದರು.

    ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿ, ನಷ್ಟವಾದ ವ್ಯಾಪರಿಗಳಿಗೆ ವೈಯಕ್ತಿಕವಾಗಿ ನಾನು ಆರ್ಥಿಕ ಸಹಾಯ ಮಾಡುತ್ತೇನೆ. ನನ್ನ ಕೈಯಲ್ಲಿ ಆದಷ್ಟು ಸಹಾಯ ಮಾಡುತ್ತೇನೆ. ಎಲ್ಲರೂ ಸಮಾನವಾಗಿ ಪರಿಹಾರ ನೀಡುತ್ತೇನೆ. ನಾನು ಎರಡು ಧರ್ಮದವರಿಗೂ ಸಹಾಯ ಮಾಡುತ್ತೇನೆ ಎಂದರು. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

    ಗಲಭೆಯ ಎಫ್‌ಐಆರ್ ಓದಿದ ಹೆಚ್‌ಡಿಕೆ ಕಳೆದ ವರ್ಷವೂ ಇಲ್ಲಿ ಗಲಾಟೆ ಆಗಿತ್ತು. ಈಗ ಮೆರವಣಿಗೆ ಆಗುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾಗಿತ್ತು. ಎಲ್ಲಾ ಕಡೆ ಮೆರವಣಿಗೆಯಲ್ಲಿ ಡಿಜೆ ಹಾಕುತ್ತಾರೆ. ಅಲ್ಲಿ ಒಂದೊಂದು ಕೋಮಿನವರು ಘೋಷಣೆ ಕೂಗುತ್ತಾರೆ. ಘೋಷಣೆಗಳನ್ನು ಕೂಗುವಾಗ ಒಂದೊಂದು ಬಾರಿ ಘರ್ಷಣೆ ಆಗುತ್ತೆ. ರಾಜ್ಯದಲ್ಲಿ ಒಂದೆರಡು ಜಿಲ್ಲೆಯನ್ನು ಹೊರತುಪಡಿಸಿ ಸಾಮರಸ್ಯ ಇದೆ. ಹೊಂದಾಣಿಕೆಯಿಂದ ಹೋಗುವ ರಾಜ್ಯ ಇದು. ಒಂದೊಂದು ಪಕ್ಷಗಳು ಒಂದೊಂದು ಕೋಮುಗಳನ್ನು ಓಲೈಸಿಕೊಳ್ಳುತ್ತವೆ. ನಾನು ಜನಪ್ರತಿನಿಧಿಯಾಗಿ ವೈಯಕ್ತಿಕವಾಗಿ ಯಾರನ್ನು ಓಲೈಸಿಕೊಂಡಿಲ್ಲ. ಒಬ್ಬರ ಪರ ನಾನು ಎಂದು ನಿಂತಿಲ್ಲ ಎಂದರು.

    ಕಾಂಗ್ರೆಸ್ ನಾಯಕರು ನಿಮ್ಮ ನಡವಳಿಕೆಯನ್ನು ನೋಡಿಕೊಳ್ಳಬೇಕು. ಹಳೆ ಮೈಸೂರು ಭಾಗದಲ್ಲಿ ಎರಡು ಸಮಾಜದವರು ಸೌಹಾರ್ದತೆಯಿಂದ ಜೀವನ ಮಾಡುತ್ತಾ ಇದ್ದಾರೆ. ರಾಜಕೀಯ ಸಂಘಟನೆಗಾಗಿ ಜನರ ಬದುಕು ಛಿದ್ರ ಮಾಡಬೇಡಿ. ಗೃಹ ಸಚಿವರು ಇದು ಸಣ್ಣ ವಿಷಯ, ಇದಕ್ಕೆ ಮಹತ್ವ ಕೋಡೋದು ಬೇಡಾ ಅಂತಾರೆ. ಈ ರೀತಿ ಹೇಳಿಕೆ ಮೂಲಕ ಜನರಿಗೆ ಯಾವ ಸಂದೇಶ ಕೊಡುತ್ತೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಬರೆಯುವ ಸಮಯ ಕಡಿತ ಮಾಡಿದ ಸರ್ಕಾರ

    ಮೆರವಣಿಗೆಗೆ ಅನುಮತಿ ಕೊಟ್ಟಿದ್ದು ನೀವು. ಮೆರವಣಿಗೆಗೆ ಭದ್ರತೆ ಕೊಡಬೇಕಾಗಿದ್ದು ನೀವು. ಗಣೇಶನ ಮೆರವಣಿಗೆ ವೇಳೆ ಗಣಪತಿಗೆ ಜೈಕಾರ ಹಾಕಿದ್ದಾರೆ. ಆಗ ಮಸೀದಿ ಬಳಿ ಇನ್ನೊಂದು ಜನಾಂಗ ಅವರ ಘೋಷಣೆ ಕೂಗಿದ್ದಾರೆ. ಆಲ್ಲಿ ಎಷ್ಟು ಜನ ಪೊಲೀಸರನ್ನು ಆಯೋಜಿಸಿದ್ದೀರಿ? ಇದನ್ನು ನೋಡಿದ್ರೆ ಈ ಘಟನೆ ಪೂರ್ವನಿಯೋಜಿತ ಅನ್ನಿಸುತ್ತದೆ. ಘಟನೆಗೂ ಮುನ್ನ ಇಲ್ಲಿದ್ದ ಸಿಆರ್‌ಪಿಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಘಟನೆಯಾದ ಒಂದು ಗಂಟೆಗೆ ಮಾಧ್ಯಮದವರಿಗೆ ಗೊತ್ತಾಗುತ್ತದೆ. ಪೊಲೀಸರಿಗೆ ಯಾಕೆ ಗೊತ್ತಾಗಿಲ್ಲ. ಇದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

    ಮಸೀದಿ ಬಳಿ 10 ನಿಮಿಷ ಡ್ಯಾನ್ಸ್ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡ್ತಾ ಇದ್ದರು. ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು. ಮೆರವಣಿಗೆ ವೇಳೆ ಪಿಐ, ಎಎಸ್ಪಿ ಯಾರು ಇರಲಿಲ್ಲ. ಆದರೆ ಎಫ್‌ಐಆರ್‌ನಲ್ಲಿ ಅವರು ಇದ್ದರು ಎಂದು ಇದೆ. ದೂರು ನೀಡಿರುವ ಪಿಇ ರವಿಗೆ ಹೇಗೆ ರಾತ್ರಿ 1.30ರಲ್ಲಿ ಎಫ್‌ಐಆರ್‌ನಲ್ಲಿರುವ ವ್ಯಕ್ತಿಗೆ ಹೆಸರು ಹೇಗೆ ಗೊತ್ತು. ಆತನಿಗೆ ಎಷ್ಟು ನೆನಪಿನ ಶಕ್ತಿ ಇದೆ. ಎಫ್‌ಐಆರ್‌ನಲ್ಲಿ ದೊಡ್ಡ ಗುಂಪು ಗಲಾಟೆ ಮಾಡಿದೆ ಎಂದು ಇದೆ. ಆದರೆ ಗೃಹ ಸಚಿವರು ಏನು ಆಗಿಲ್ಲ ಎನ್ನುತ್ತಾರೆ. ಇದನ್ನೂ ಓದಿ: Manipur | ರಾಕೆಟ್‌ ದಾಳಿ ಬೆನ್ನಲ್ಲೇ ಮಷೀನ್ ಗನ್‌ ಬಳಕೆಗೆ ಮುಂದಾದ ಪೊಲೀಸರು – ಕಾಂಗ್ರೆಸ್‌ ವಿರೋಧ

    ಈ ಎಫ್‌ಐಆರ್ ನೋಡಿದರೆ ಪರಮೇಶ್ವರ್‌ನನ್ನು (G Parameshwar) ಗೃಹ ಸಚಿವ ಅನ್ನುವುದಕ್ಕೆ ಆಗುತ್ತಾ ಎಂದು ಟೀಕಿಸಿದರು. ಸ್ಥಳೀಯ ಪೊಲೀಸರ ವೈಫಲ್ಯ ಇಲ್ಲಿ ಎದ್ದು ಕಾಣ್ತಾ ಇದೆ. ಪ್ರತಿಯೊಂದು ರಾಜಕೀಯ ಎಂದು ಕಾಂಗ್ರೆಸ್ ಹೇಳೋದು ಸರಿಯಲ್ಲ. ಅಮಾಯಕ ಜನರ ಬದುಕು ಬೀದಿಗೆ ಬಂದಿದೆ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ಇದು. ನಾನು ಎರಡು ಕೋಮುಗಳ ಬಗ್ಗೆ ಮಾತಾಡಲ್ಲ. ಇದರ ಮಧ್ಯ ಕಂದಕ ತೋಡುವುದನ್ನು ಬಿಡಬೇಕು. ಎಸ್‌ಐಟಿ ತನಿಖೆ ಸರಿಯಲ್ಲ. ಇದು ಸಿದ್ದರಾಮಯ್ಯ, ಶಿವಕುಮಾರ್ ಇನ್ವೇಸ್ಟಿಕೇಶ್ ಟೀಮ್ ಅಂತ ನಾನು ಹೇಳಿದ್ದು. ಅದೇ ರೀತಿಯಾಗಿಯೇ ನಡೆದುಕೊಳ್ಳುತ್ತಿದ್ದಾರೆ. ತಲ್ವಾರ್ ಇಟ್ಟುಕೊಂಡು ಓಡಾಡುತ್ತಾರೆ. ಪೆಟ್ರೋಲ್ ಬಾಂಬ್ ಎಸೆಯುತ್ತಾರೆ ಎಂದರೆ ಎಷ್ಟು ಧೈರ್ಯ ಇರಬೇಕು ಎಂದು ಪ್ರಶ್ನಿಸಿದರು.

    ಮಂಡ್ಯದ (Mandya) ನಾಗಮಂಗಲ ಉದ್ವಿಗ್ನ ಹಿನ್ನೆಲೆ ಇಂದು ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿ, ಕಿಡಿಗೇಡಿಗಳ ಕೃತ್ಯದಿಂದ ನಷ್ಟಕ್ಕೆ ಒಳಗಾದವರಿಗೆ ಸಾಂತ್ವನ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಸಂಗ್ರಹ ಮಾಡಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಚ್‌ಡಿಕೆಗೆ ಮಾಜಿ ಶಾಸಕ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಜೆಡಿಎಸ್ ಮುಖಂಡರು ಸೇರಿದಂತೆ ಇನ್ನಿತರರು ಸಾಥ್ ಕೊಟ್ಟರು. ಇದನ್ನೂ ಓದಿ: ನಾಗಮಂಗಲ ಗಲಭೆ| ಅಂಗಡಿ ಮುಗ್ಗಟ್ಟುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಹೆಚ್‌ಡಿಕೆ