Tag: jds

  • ಬಿಜೆಪಿ-ಜೆಡಿಎಸ್ ಪಾದಯಾತ್ರೆ ರಾಜಕೀಯ ನಾಟಕ: ಸಲೀಂ ಅಹಮದ್

    ಬಿಜೆಪಿ-ಜೆಡಿಎಸ್ ಪಾದಯಾತ್ರೆ ರಾಜಕೀಯ ನಾಟಕ: ಸಲೀಂ ಅಹಮದ್

    ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ನಾಯಕರು ಪಾದಯಾತ್ರೆ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ (Saleem Ahmed) ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ‌ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡ್ತಿದ್ದಾರೆ ಗೊತ್ತಿಲ್ಲ.ಇದು ರಾಜಕೀಯ ನಾಟಕ ಯಾತ್ರೆ. ಎರಡು ಹಗರಣಗಳ ಬಗ್ಗೆ ಬಿಜೆಪಿ-ಜೆಡಿಎಸ್ ಹೇಳ್ತಿದ್ದಾರೆ. ಸದನದಲ್ಲಿ ಸಿಎಂ ಉತ್ತರ ಕೊಡಲು ಮುಂದಾದಾಗ ಅವರಿಗೆ ಉತ್ತರ ನೀಡಲು ಅವಕಾಶ ಕೊಡಲಿಲ್ಲ. ಅಧಿವೇಶನದಲ್ಲಿ ಚರ್ಚೆ ಮಾಡದೇ ಬಿಜೆಪಿ-ಜೆಡಿಎಸ್ ಪಲಾಯನ ಮಾಡಿದೆ. ಸದನದ ಬಾವಿಗಳಿದು ಸಿಎಂ ಉತ್ತರ ಕೊಡದಂತೆ ಮಾಡಿ ಸದನದ ಸಮಯ ಹಾಳು ಮಾಡಿದ್ದಾರೆ ಅಂತ ಕಿಡಿಕಾರಿದರು. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

     

    ಬಿಜೆಪಿ-ಜೆಡಿಎಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.4 ವರ್ಷ ಅಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ (Corruption) ‌ಮಾಡಿದ್ದಾರೆ. ಅದಕ್ಕೆ ಜನ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ರಾಜ್ಯದಲ್ಲಿ 40% ಬಿಜೆಪಿ ಸರ್ಕಾರ ಇತ್ತು. ನಿರ್ದಿಷ್ಟ ದಾಖಲೆ ಇಲ್ಲದೇ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ಕುಮಾರಸ್ವಾಮಿ (HD Kumaraswamy) ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಬಿಜೆಪಿ ಶೂಟ್ ಮಾಡಿ ಓಡಿ ಹೋಗೋ ಕೆಲಸ ಮಾಡ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Wayanad Landslides: ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು, ಸಾವಿನ ಸಂಖ್ಯೆ 54ಕ್ಕೆ ಏರಿಕೆ

    40 ವರ್ಷ ರಾಜಕೀಯದಲ್ಲಿ ಯಾವುದೇ ಆರೋಪ ಇಲ್ಲದೆ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ.ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರ. ಕೇಂದ್ರ ಸರ್ಕಾರ ಮೋದಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಷಡ್ಯಂತ್ರ ಮಾಡ್ತಿದ್ದಾರೆ.ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ಮಾಡ್ತಿದೆ. ಇದನ್ನ ಸಹಿಸಲು ಸಾಧ್ಯವಾಗ್ತಿಲ್ಲ.ಕೇಂದ್ರ ಸರ್ಕಾರ ನಮ್ಮ ಮೇಲೆ ಷಡ್ಯಂತ್ರ ಮಾಡ್ತಿದ್ದಾರೆ. ಇದಕ್ಕೆ ನಾವು ಭಯ ಬೀಳೊಲ್ಲ.ಬಿಜೆಪಿ ಭ್ರಷ್ಟಾಚಾರವನ್ನು ಬಯಲಿಗೆಳೆಯೋ ಕೆಲಸ ಮಾಡ್ತೀವಿ.ಬಿಜೆಪಿಯವರ ಅಕ್ರಮ ಬೆತ್ತಲೆ ಮಾಡೋ ಕೆಲಸ ಮಾಡ್ತೀವಿ ಅಂತ ಸವಾಲ್ ಹಾಕಿದ್ರು.

     

    ವಾಲ್ಮೀಕಿ ಹಗರಣ ಗೊತ್ತಾಗದ ಕೂಡಲೇ ಸಿಎಂ SIT ತನಿಖೆ ಆದೇಶ ಮಾಡಿದ್ರು.‌ಮುಡಾ ಕೇಸ್ ನಲ್ಲಿ ಸ್ವತಃ ಸಿಎಂ ಅವರು ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದಾರೆ. ಸಿಎಂ ಈಗಾಗಲೇ ಹೇಳಿದ್ದಾರೆ. ಯಾರೇ ತಪ್ಪು ಮಾಡಿದ್ರು ಕ್ರಮ ತೆಗೆದುಕೊಳ್ತೀವಿ ಅಂತ ಹೇಳಿದ್ದಾರೆ.ಬಿಜೆಪಿ ಅವರು ರಾಜಕೀಯ ಮಾಡಲು ಹೊರಟಿದ್ದಾರೆ.ಬಿಜೆಪಿ-ಜೆಡಿಎಸ್ ಅಕ್ರಮ ಬಯಲಿಗೆ ಎಳೆಯುತ್ತೇವೆ. ಆಗ ಏನ್ ಮಾಡ್ತಾರೆ ನೋಡೋಣ ಅಂತ ಸವಾಲ್ ಹಾಕಿದ್ರು.

    ಬಿಜೆಪಿ ಅವಧಿಯಲ್ಲಿ 21 ಹಗರಣ ಆಗಿದೆ. ಇದರ ಬಗ್ಗೆ ನಾವು ತನಿಖೆ ‌ಮಾಡುತ್ತೇವೆ. ಬಿಜೆಪಿ-ಜೆಡಿಎಸ್ ಕರ್ಮಕಾಂಡ ಮುಚ್ಚಿ ಹಾಕಿಕೊಳ್ಳಲು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ.‌ ಬಿಜೆಪಿ-ಜೆಡಿಎಸ್ ಪಾದಯಾತ್ರೆಯನ್ನು ದೆಹಲಿಗೆ ಮಾಡಲಿ. ರಾಜ್ಯದಿಂದ 19 ಜನ ಸಂಸದರು ಇದ್ದರೂ ಬಜೆಟ್‌ನಲ್ಲಿ ಅನ್ಯಾಯವಾಗಿದೆ. ಹೀಗಾಗಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

     

    ಸುಪ್ರೀಂಕೋರ್ಟ್ ಸೂಚನೆಯ ನಂತರ ಬರ ಪರಿಹಾರ ನೀಡಿದರು. 5 ಜನ ಮಂತ್ರಿಗಳು ಏನ್ ಮಾಡಿದ್ದೀರಿ? ಮಹದಾಯಿ, ಮೇಕೆದಾಟು ಏನು ಆಯ್ತು? ನಿರ್ಮಲಾ ಸೀತಾರಾಮನ್ ತಾಯಿ ಹೃದಯ ಕರಗಲಿಲ್ಲವಾ?

    ಆಂಧ್ರ, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಸರ್ಕಾರ ಉಳಿಸಿದ್ದಕ್ಕೆ ನೀಡಿದ್ದಾ? ಮೋದಿ 400 ಸ್ಥಾನ ಸಿಗಲಿದೆ ಎಂದರು. ಆದರೆ ಜನ 200ಕ್ಕೆ ಇಳಿಸಿದರು. ಕೊನೆದಾಗಿ ಜೆಡಿಯು, ಟಿಡಿಪಿ ಬೆಂಬಲ ಪಡೆದು ಸರ್ಕಾರ ರಚನೆ ಮಾಡಿದರು. ಕೇಂದ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

    2028ರವರೆಗೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ‌ಇರಲಿದೆ. ಬಿಜೆಪಿ-ಜೆಡಿಎಸ್ ಷಡ್ಯಂತ್ರಗಳಿಗೆ ನಾವು ಉತ್ತರ ನೀಡುತ್ತೇವೆ. ಬಿಜೆಪಿ-ಜೆಡಿಎಸ್ ಕಾಲದ ಹಗರಣಗಳನ್ನ ರಾಜ್ಯದ ಜನರಿಗೆ ಹೇಳುತ್ತೇವೆ ಎಂದರು.

  • ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ

    ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ

    ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 3ರಿಂದ (ಶನಿವಾರ) ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.

    ಮೈಸೂರು ಪಾದಯಾತ್ರೆಯ ರೂಪುರೇಷೆ ಸಂಬಂಧ ಮೈತ್ರಿ ನಾಯಕರು ಭಾನುವಾರ ಜಂಟಿ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಶನಿವಾರದಂದು ಬೆಂಗಳೂರಿನ (Bengaluru) ನೈಸ್ ರಸ್ತೆಯಿಂದ ಪಾದಯಾತ್ರೆ ಆರಂಭಿಸಲಿದ್ದು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹೆಚ್.ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ಮೈಸೂರಿನಲ್ಲಿ (Mysuru) ಪಾದಯಾತ್ರೆ ಸಮಾರೋಪಕ್ಕೆ ಜೆ.ಪಿ ನಡ್ಡಾ ಅವರನ್ನು ಕರೆಸಲು ದೋಸ್ತಿ ನಾಯಕರು ಪ್ಲ್ಯಾನ್ ಮಾಡಿದ್ದಾರೆ. ಪಾದಯಾತ್ರೆಯ ಮಾರ್ಗ ಮಧ್ಯೆ ಕೆಲವು ಕಡೆ ಜನ ಸೇರಿಸಿ ಮೈತ್ರಿ ಪಕ್ಷಗಳು ಸಮಾವೇಶ ನಡೆಸಲಿವೆ. ಶನಿವಾರದಿಂದ ಒಂದು ವಾರಗಳ ಕಾಲ ಪಾದಯಾತ್ರೆ ನಡೆಯಲಿದ್ದು, ದಿನಕ್ಕೆ 20 ಕಿಮೀ ವರೆಗೆ ಪಾದಯಾತ್ರೆ ನಡೆಯಲಿದೆ ಎಂದು ಸಭೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: Women’s Asia Cup 2024: ಲಂಕಾ ಚಾಂಪಿಯನ್‌ – 20 ವರ್ಷಗಳ ಬಳಿಕ ಟ್ರೋಫಿ ಗೆದ್ದ ಸಿಂಹಳಿಯರು

    ಸಭೆ ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮಾಧ್ಯಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ಇದೆ. ಮುಡಾ, ವಾಲ್ಮೀಕಿ ನಿಗಮಗಳಲ್ಲಿ ಹಗರಣ, ಎಸ್ಸಿ-ಎಸ್ಟಿ ಹಣ ದುರ್ಬಳಕೆ ವಿಚಾರ ಇಟ್ಟುಕೊಂಡು ಪಾದಯಾತ್ರೆ ಬಗ್ಗೆ ಚರ್ಚೆ ಮಾಡಿದ್ದೇವೆ. ಮುಂದಿನ ಶನಿವಾರ ನಮ್ಮ ಪಾದಯಾತ್ರೆ ಆರಂಭವಾಗಲಿದೆ. ಆಗಸ್ಟ್ 3ರ ಶನಿವಾರದಿಂದ 7 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಆಗಸ್ಟ್ 10ರಂದು ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ಇರಲಿದೆ. ಅಂದು ರಾಷ್ಟ್ರೀಯ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

  • ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ: ನಿಖಿಲ್

    ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ: ನಿಖಿಲ್

    ರಾಮನಗರ: ಬ್ರ್ಯಾಂಡ್ ಬೆಂಗಳೂರು (Brand Bengaluru) ಹೆಸರಲ್ಲಿ ರಾಮನಗರದ (Ramanagara) ಇತಿಹಾಸ ಅಳಿಸುವ ಕೆಲಸ ಆಗುತ್ತಿದೆ. ಜಿಲ್ಲೆಯ ಜನತೆ ಇದರ ವಿರುದ್ಧವಾಗಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

    ರಾಮನಗರ ಹೆಸರು ಬದಲಾವಣೆಗೆ ಸಂಪುಟ ಅನುಮೋದನೆ ಕುರಿತು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ರಾಮನ ಪಾದಸ್ಪರ್ಶದ ಪುಣ್ಯಕ್ಷೇತ್ರ. ಆದರೆ ರಾಜಕೀಯ ಉದ್ದೇಶಕ್ಕೆ ಹೆಸರು ಬದಲಾವಣೆ ಮಾಡಲಾಗುತ್ತಿದೆ. ರಾಮನಗರ ಜಿಲ್ಲೆ ಸ್ಥಾಪನೆ ಆದಾಗಾ ಯಾರೂ ಇದಕ್ಕೆ ನಕಾರ ಎತ್ತಲಿಲ್ಲ. ರಾಮನಗರ ಹೆಸರಿಗೆ ಯಾರೂ ವಿರೋಧ ಮಾಡಲಿಲ್ಲ ಎಂದರು. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್‌ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!

    ಹೆಸರು ಬದಲಾವಣೆ ಆದರೆ ಜನರಿಗೆ ಸಾಕಷ್ಟು ಸಮಸ್ಯೆ ಆಗಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ರೆವೆನ್ಸೂ ದಾಖಲಾತಿ ಬದಲಾವಣೆ ಮಾಡಬೇಕು. ಸಾಕಷ್ಟು ಟೆಕ್ನಿಕಲ್ ಸಮಸ್ಯೆಗಳು ಎದುರಾಗುತ್ತವೆ. ಜನತೆ ನಿತ್ಯ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗುತ್ತದೆ. ಈ ಬಗ್ಗೆ ದೊಡ್ಡಮಟ್ಟದ ಹೋರಾಟಕ್ಕೆ ಚರ್ಚೆ ಮಾಡುತ್ತಿದ್ದೇವೆ. ಭಾನುವಾರ (ಜು.28) ಕೇಂದ್ರ ಸಚಿವ ಕುಮಾರಣ್ಣ ಹಾಗೂ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಲೇಡಿಸ್‌ ಪಿಜಿಯಲ್ಲಿ ಯುವತಿಯ ಹತ್ಯೆ – ಆರೋಪಿ 10 ದಿನ ಪೊಲೀಸ್‌ ಕಸ್ಟಡಿಗೆ

    ಹೆಸರು ಬದಲಾವಣೆಗೆ ಹಾಸನದವರ ವಿರೋಧ ಎಂಬ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರ ಕುರಿತು ಮಾತನಾಡಿದ ಅವರು, ಜನರ ಅಭಿಪ್ರಾಯ ತಿಳಿಯದೇ ಏಕಾಏಕಿ ಆದೇಶ ಮಾಡೋದು ಸರಿಯಲ್ಲ. ಈ ಬಗ್ಗೆ ರಾಮನಗರದ ಟೋಕನ್ ಶಾಸಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡುಹೊಡೆಯೋದು ಬಿಟ್ಟು ಮೊದಲು ಜನರ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದರು.‌ ಇದನ್ನೂ ಓದಿ: ಬೆಂಗಳೂರಿನ ಹೋಟೆಲ್‌, ಪಬ್‌, ಬಾರ್‌ & ರೆಸ್ಟೋರೆಂಟ್‌ಗಳಿಗೆ ಹೊಸ ರೂಲ್ಸ್‌ – ಇಲ್ಲಿದೆ ಡೀಟೆಲ್ಸ್

  • ಸಾಲ ಮಾಡ್ಕೊಂಡು ರಾಜಕಾರಣ ಮಾಡಿದ್ದೇನೆ, ನನ್ನಂಥ ರಾಜಕಾರಣಿ ದೇಶದಲ್ಲೇ ಇಲ್ಲ: ಜಿಟಿಡಿ

    ಸಾಲ ಮಾಡ್ಕೊಂಡು ರಾಜಕಾರಣ ಮಾಡಿದ್ದೇನೆ, ನನ್ನಂಥ ರಾಜಕಾರಣಿ ದೇಶದಲ್ಲೇ ಇಲ್ಲ: ಜಿಟಿಡಿ

    -1985ರಲ್ಲಿ ಲಾಟರಿಯಲ್ಲಿ ನನಗೆ ಸೈಟ್ ಬಂದಿದೆ ಎಂದ ಶಾಸಕ

    ಮೈಸೂರು: ನನ್ನಂಥ ರಾಜಕಾರಣಿ (Politician) ಈ ರಾಜ್ಯದಲ್ಲಿ ಮಾತ್ರವಲ್ಲ, ದೇಶದಲ್ಲೇ ಯಾರೂ ಇಲ್ಲ. ನಾನು ಯಾವುದೇ ಭ್ರಷ್ಟಾಚಾರ (Corruption) ಮಾಡಿಲ್ಲ. ಸಾಲ ಮಾಡಿಕೊಂಡು ರಾಜಕಾರಣ ಮಾಡಿದ್ದೇನೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ.ಟಿ ದೇವೇಗೌಡ (GT Deve Gowda) ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವರು ಜಿ.ಟಿ ದೇವೇಗೌಡರಿಗೆ ಮುಡಾ ಸೈಟ್ (MUDA Site) ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಗೃಹ ಮಂಡಳಿಯಲ್ಲಿ ನಾನು ಒಂದೇ ಒಂದು ನಿವೇಶನ ಪಡೆದಿಲ್ಲ. ನಾನು ಯಾವುದೇ ಚೌಟ್ರಿ, ಹೋಟೆಲ್, ವಿದ್ಯಾಸಂಸ್ಥೆ, ವಾಣಿಜ್ಯ ಕಟ್ಟಡ ಯಾವುದನ್ನೂ ಕಟ್ಟಿಲ್ಲ. ನನ್ನ ಸ್ವಂತ ಊರಲ್ಲಿ ಒಂದಿಷ್ಟು ಕೃಷಿ ಭೂಮಿ ಖರೀದಿ ಮಾಡಿದ್ದೇನೆ. ಅಲ್ಲಿ ಕೃಷಿ ಮಾಡುತ್ತಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲಿಗೆ ಕತ್ತರಿ!

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಒಂದೇ ಒಂದು ನಿವೇಶನ ಪಡೆದಿಲ್ಲ. ಪ್ರಾಮಾಣಿಕವಾಗಿ ರಾಜಕೀಯ ಮಾಡಿದ್ದೇನೆ. 1985ರಲ್ಲಿ ಗೋವಿಂದರಾಜು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾಗ ಸೈಟ್‌ಗೆ ಅರ್ಜಿ ಹಾಕಿದ್ದೆ. ಆಗ ಲಾಟರಿಯಲ್ಲಿ ಒಂದು ಸೈಟ್ ಬಂದಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಮಂತ್ರಿಗಳು ಜವಾಬ್ದಾರಿಯಿಂದ ಇಲಾಖೆ ನಡೆಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಮಾದಗಳ್ಳಿ, ಈರನಗೆರೆ ಜಮೀನು ವಿಚಾರದಲ್ಲಿ ರೈತರಿಗೆ ಪರಿಹಾರ ಕೊಡುವಂತೆ ಪತ್ರ ಕೊಟ್ಟಿದ್ದೇನೆ. ರೈತರು ಕೇಳಿದ್ದಕ್ಕೆ ಪತ್ರ ಕೊಟ್ಟಿದ್ದೆ ಅಷ್ಟೇ. ಸಚಿವರು ನಾನು ಕೊಟ್ಟ ಶಿಫಾರಸು ಪತ್ರ ನೋಡಿ ನನಗೆ ಸೈಟ್ ಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Paris Olympics 2024: ಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

    ಕಲೆಕ್ಷನ್ ಮಾಡಲು ಜೊತೆಗಿಟ್ಟುಕೊಂಡವರು ನೀಡಿದ ಮಾಹಿತಿ ನೋಡಿ ಸಚಿವರು ಸುಳ್ಳು ಆರೋಪ ಮಾಡಿದ್ದಾರೆ. ನಗರಾಭಿವೃದ್ಧಿ ಸಚಿವರ ಇಂತಹ ನಡವಳಿಕೆಯಿಂದ ಸಿಎಂಗೆ ಕಪ್ಪು ಮಸಿ ಬಿದ್ದಿದೆ. ನನಗೆ ಏಳು ದಿವಸದೊಳಗೆ ಸಚಿವರು ಈ ವಿಚಾರದಲ್ಲಿ ಸ್ಪಷ್ಟೀಕರಣ ಕೊಡಬೇಕು. ಇಲ್ಲದೇ ಇದ್ದರೆ ನಾನೇ ಸಚಿವರಿಗೆ ನೋಟಿಸ್ ಕೊಡುತ್ತೇನೆ. ಸಚಿವರು ನನಗೆ ಸೈಟ್ ಕೊಟ್ಟಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಬೇಕು. ಮಾತಾಡೋರೆಲ್ಲ ಸತ್ಯ ಹರಿಶ್ಚಂದ್ರರು ಆಗಿದ್ದಾರೆ. 50 ವರ್ಷದಲ್ಲಿ ನನ್ನ ಕುಟುಂಬದ ಆಸ್ತಿ ಎಷ್ಟಿದೆ. ನಿನ್ನೆ ಮೊನ್ನೆ ಶಾಸಕರಾದವರ ಆಸ್ತಿ ಎಷ್ಟಿದೆ? ಎಂಬ ಬಗ್ಗೆ ಧಮ್ ಇದ್ದರೆ ತನಿಖೆ ಮಾಡಿಸಿ. ಒಂದು ವಾರದಲ್ಲಿ ಸ್ಪಷ್ಟೀಕರಣ ಕೊಡದೇ ಇದ್ದರೆ ಸಚಿವರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಒಂದೂವರೆ ವರ್ಷದಲ್ಲಿ ಮನೆ ಮುರುಕರು ಯಾರು ಅಂತ ಜನರಿಗೆ ಗೊತ್ತಾಗಿದೆ: ಬೊಮ್ಮಾಯಿ ಕಿಡಿ

    ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ತಪ್ಪಿದ ಕುರಿತು ಪ್ರತಿಕ್ರಿಯಿಸಿ, ಎಲ್ಲರೂ ಒಕ್ಕಲಿಗರೇ ಆಗುತ್ತಾರೆಂದು ಕುರುಬ ಸಮುದಾಯದವರಿಗೆ ಸ್ಥಾನ ನೀಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಒಕ್ಕಲಿಗರೇ ಆಗಿದ್ದಾರೆ. ಈಗ ಜೆಡಿಎಸ್ ಶಾಸಕಾಂಗ ಪಕ್ಷ ಸ್ಥಾನ ನೀಡಿದರೆ ಹೇಗೆ? ಎಲ್ಲಾ ಸಮುದಾಯಕ್ಕೂ ಸಾಮಾಜಿಕ ನ್ಯಾಯ ನೀಡಬೇಕು. ಹಾಗಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಅಹಿಂದ ಸಮುದಾಯಕ್ಕೆ ಸೇರುವ ಕುರುಬ ಸಮುದಾಯಕ್ಕೆ ನೀಡಿದ್ದಾರೆ. ನಾನೇ ಅವರನ್ನು ಅಭಿನಂಧಿಸಿದ್ದೇನೆ. ಇದರಲ್ಲಿ ನನಗೆ ಯಾವ ಬೇಸರವೂ ಇಲ್ಲ. ನನಗೆ ಯಾಕೆ ತಪ್ಪಿತು ಎಂದು ಈಗ ಹೋಗಿ ನಾನು ಕೇಳಲು ಆಗುತ್ತಾ? ಈಗ ಕುಮಾರಸ್ವಾಮಿ ಕೇಂದ್ರ ಮಂತ್ರಿ. ಅವರನ್ನ ಯಾಕೆ, ಏನು ಎಂದು ಪ್ರಶ್ನೆ ಮಾಡಲು ಸಾಧ್ಯನಾ? ಕುಮಾರಸ್ವಾಮಿ ದೊಡ್ಡವರು ಎಂದು ಮಾರ್ಮಿಕವಾಗಿ ಉತ್ತರಿಸಿದರು. ಇದನ್ನೂ ಓದಿ: ಮಾತನಾಡುವ ವೇಳೆ ಮೈಕ್‌ ಮ್ಯೂಟ್‌ – ಮಮತಾ ಆರೋಪ ಸುಳ್ಳೆಂದ ಪಿಐಬಿ ಫ್ಯಾಕ್ಟ್‌ ಚೆಕ್‌

  • ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿ

    ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿ

    ಬಿಪಿ, ಶುಗರ್ ಸರಿಪಡಿಸಿಕೊಳ್ಳಲು ಪಾದಯಾತ್ರೆ ಮಾಡಬಹುದು ಮಾಡಲಿ

    ಬೆಂಗಳೂರು: ನಿಜವಾದ ಹೋರಾಟ ಮಾಡುವುದಾದರೆ ಮೊದಲಿನಿಂದ ಮಾಡುತ್ತಿದ್ದರು. ಈಗ ಊಟ ಕೊಡ್ತಾರೆ, ಹಾಸಿಗೆ ಕೊಡ್ತಾರೆ ಎಂದು ಮಲಗಿ ಹೋಗೋಣ ಅಂತಾ ಪ್ರತಿಭಟನೆ (Protest) ಮಾಡ್ತಿದ್ದಾರೆ ಎಂದು ದೋಸ್ತಿ ನಾಯಕರನ್ನು ಕಾಂಗ್ರೆಸ್ (Congress) ಶಾಸಕ ಲಕ್ಷ್ಮಣ ಸವದಿ (Laxman Savadi) ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಮುಡ ಹಗರಣ (MUDA scam) ನಡೆದಿದೆ ಎನ್ನುತ್ತಿರುವುದು ಯಾವಾಗ? ಹಗರಣ ನಡೆದಿದ್ದರೆ ಯಾರ ಅವಧಿ? ಈಗ ಯಾಕೆ ಆರೋಪ ಮಾಡ್ತಿದ್ದಾರೆ? ಅವರೆ ಸಿಎಂ ಆಗಿದ್ದರು, ಕಂದಾಯ ಸಚಿವರು ಆಗಿದ್ದರು. ಆಗ ಏನು ಮಾಡುತ್ತಿದ್ದರು? ದೊಡ್ಡ ಹಗರಣ ಆಗಿದ್ದರೆ ಮೊದಲೇ ಯಾಕೆ ತಡೆಯಲಿಲ್ಲ. ಕೊನೆಯೆ ಎರಡು ದಿನ ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.

    ವಿರೋಧ ಪಕ್ಷದಲ್ಲಿ ನಾಯಕರಿಲ್ಲ, ಅದು ನಿಷ್ಕ್ರಿಯ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇವರು ಡ್ರಾಮಾ ಮಾಡ್ತಿದ್ದಾರೆ. ಇದು ಅಹೋರಾತ್ರಿ ಧರಣಿ ಅಲ್ಲ ಡ್ರಾಮಾ ಅಷ್ಟೇ. ವಿಪಕ್ಷದವರು ನಾವು ಜೀವಂತವಾಗಿ ಇದ್ದೇವೆ ಎಂದು ತೋರಿಸಿಕೊಳ್ಳಲು ಈ ಧರಣಿ. ಇನ್ನೂ ಸಾಕಷ್ಟು ಜನರಿಗೆ ಬಿಪಿ, ಶುಗರ್ ಇದೆ. ಆರೋಗ್ಯ ಸರಿಪಡಿಸಿಕೊಳ್ಳಲು ಪಾದಯಾತ್ರೆ ಮಾಡಬಹುದು ಮಾಡಲಿ. ಇನ್ನೂ 20 ವರ್ಷ ಅವರೆಲ್ಲಾ ರಾಜಕಾರಣ ಮಾಡಲು ಫಿಟ್ ಇರಬೇಕು ಎಂದು ವ್ಯಂಗ್ಯವಾಡಿದ್ದಾರೆ.

    ಮುಡದಲ್ಲಿ 200% ಯಾವುದೇ ಹಗರಣ ನಡೆದಿಲ್ಲ. ಮುಖ್ಯಮಂತ್ರಿಗಳ ಧರ್ಮ ಪತ್ನಿಗೆ ಅವರ ಕುಟುಂಬದಿಂದ ಆಸ್ತಿ ಬಂದಿದೆ. ಈಗ ಕೇಂದ್ರ ಬಜೆಟ್ ವೈಫಲ್ಯ ಮುಚ್ಚಿಕೊಳ್ಳಲು ಮೇಲಿನಿಂದ ಸೂಚನೆ ಬಂದಿದೆ. ಅದಕ್ಕೆ ಇಲ್ಲಿ ಧರಣಿ ನಡೆಯುತ್ತಿದೆ. ಈ ಡ್ರಾಮಾದ ಹಿಂದಿರುವವರು ಯಾರು ಎಂಬುದನ್ನು ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

  • ವಾಲ್ಮೀಕಿ ನಿಗಮ, ಮುಡಾ ಹಗರಣ; ಸರ್ಕಾರದ ವಿರುದ್ಧ ವಿಪಕ್ಷ ನಾಯಕರಿಂದ ಅಹೋರಾತ್ರಿ ಧರಣಿ

    ವಾಲ್ಮೀಕಿ ನಿಗಮ, ಮುಡಾ ಹಗರಣ; ಸರ್ಕಾರದ ವಿರುದ್ಧ ವಿಪಕ್ಷ ನಾಯಕರಿಂದ ಅಹೋರಾತ್ರಿ ಧರಣಿ

    – ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು
    – ಬೆಳ್ಳಂಬೆಳಗ್ಗೆ ವಿಧಾನಸೌಧದ ಮುಂಭಾಗ ಪ್ರತಿಭಟನಾಕಾರರ ವಾಕಿಂಗ್, ಯೋಗ

    ಬೆಂಗಳೂರು: ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ವಿಪಕ್ಷಗಳು ಅಹೋರಾತ್ರಿ ಧರಣಿ ನಡೆಸಿದವು.

    ಪ್ರತಿಭಟನೆ ಭಾಗವಾಗಿ ರಾತ್ರಿ ವಿಧಾನಸೌಧದ ಒಳಗೆ ಮಲಗಿ ಬಿಜೆಪಿ-ಜೆಡಿಎಸ್ ನಾಯಕರು ಧರಣಿ ನಡೆಸಿದ್ದಾರೆ. ಮತ್ತೆ ಬೆಳಗ್ಗೆ ಎದ್ದು ನಿತ್ಯಕರ್ಮ ಮುಗಿಸಿ ವಾಕಿಂಗ್ ಮಾಡಿದ್ದಾರೆ. ವಿಧಾನಸೌಧ ಆವರಣ ಮತ್ತು ಸುತ್ತಮುತ್ತ ವಾಕಿಂಗ್ ಮಾಡಿದ್ದಾರೆ. ಇದನ್ನೂ ಓದಿ: ದರೋಡೆ ಕೇಸ್ – ಅಗ್ನಿವೀರ್ ಸೇರಿದಂತೆ ಮೂವರು ಅರೆಸ್ಟ್

    ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಮಾಜಿ ಸಚಿವ ಪ್ರಭು ಚೌಹಾಣ್, ಚರ್ಚೆಗೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ಇಂದು ಕೂಡ ಧರಣಿ ಮಾಡುತ್ತೇವೆ. ಮುಡಾ ಹಗರಣ ಬಹು ದೊಡ್ಡ ಹಗರಣ. ಈ ವಿಚಾರದಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೇವೆ. ಸ್ವೀಕರ್ ಅವರು ಚರ್ಚೆಗೆ ಅವಕಾಶ ನೀಡಿಲ್ಲ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್ ನ ಶಾಸಕರು ಪರಿಷತ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

    ಮಾಜಿ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ಅಹೋರಾತ್ರಿ ಧರಣಿ ನಡೆಸಲಾಗಿದೆ. ಗಂಭೀರವಾದ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡಿಲ್ಲ. ಹೀಗಾಗಿ ಬಿಜೆಪಿ-ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದೇವೆ. ಮುಡಾ ವಿಚಾರದಲ್ಲಿ ಸದನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮುಂದೆ ಏನು ಮಾಡಬೇಕು ಎಂದು ಪಕ್ಷದ ಎಲ್ಲರೂ ಸಭೆ ಸೇರಿ ನಿರ್ಧಾರ ಮಾಡಲಾಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯ

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚರ್ಚೆಗೆ ಅವಕಾಶ ನೀಡಬೇಕು. ಒಂದು ವಾರದಿಂದ ಎರಡು ವಿಷಯಗಳ ಬಗ್ಗೆ ನಿಲುವಳಿಗೆ ಪಶ್ನೆ ಮಾಡಿದ್ದೇವೆ. ಮುಡಾ ಹಗರಣಗಳನ್ನ ಮುಚ್ಚಿಹಾಕಲು ಯತ್ನ. ಮುಡಾ ವಿಚಾರದಲ್ಲಿ ಎಲ್ಲಾ ದಾಖಲೆ ಸೃಷ್ಟಿ ಮಾಡಿದ್ದಾರೆ. ಬಿಜೆಪಿ ಮೇಲೆ ಹಗರಣ ಆರೋಪ ಮಾಡಿದ್ದಾರೆ. ಬಿಜೆಪಿ ಇರಲಿ ಯಾರೇ ಹಗರಣದಲ್ಲಿ ಭಾಗಿಯಾದ್ರೆ ಹಿಡಿದು ಜೈಲಿಗೆ ಹಾಕ್ರಿ. ಕರ್ನಾಟಕ ಸ್ವಚ್ಛತಾ ಆಗುತ್ತೆ. ಅಂಬಿ ಚುಪ್ ತುಂಬಿ ಚುಪ್ ಕೊನೆಗೆ ಕರ್ನಾಟಕ ಸಂಪನ್ಮೂಲ ಲೂಟಿ ಎಲ್ಲಾ ಕಡೆ ಆಸ್ತಿ ಮಾಡುತ್ತಾರೆ. ಸದನದಲ್ಲಿ ಸಿದ್ದರಾಮಯ್ಯ ಸುಮ್ಮನೆ ಕೂತಿರುತ್ತಾರೆ. ಎಲ್ಲಿಗೆ ಬಂತೋ ಸಿದ್ರಾಮೋ. ವಿಧಾನಸಭೆ, ಲೋಕಸಭೆ, ಎಲ್ಲಾ ತನಿಖೆ ಮಾಡಿಸಲಿ ಒತ್ತಾಯಿಸಿದ್ದಾರೆ.

    ವಿಧಾನಸೌಧದ ಮುಂಭಾಗದಲ್ಲಿ ಬೆಳ್ಳಂಬೆಳಗ್ಗೆ ಶಾಸಕರು ಯೋಗಾದಲ್ಲಿ ನಿರತರಾದರು. ತಲೆ ಮೇಲೆ ದಿಂಬು, ಬೆಡ್‌ಶೀಟ್ ಹೊತ್ತು ಮಾಜಿ ಸಚಿವ ಪ್ರಭು ಚೌಹಾಣ್ ಹೊರಟರು.

  • ನನ್ನ ಕುಟುಂಬದ ತೇಜೋವಧೆಗೆ ಷಡ್ಯಂತ್ರ – ಬಿಡುಗಡೆ ಬಳಿಕ ಸೂರಜ್ ರೇವಣ್ಣ ಫಸ್ಟ್ ರಿಯಾಕ್ಷನ್

    ನನ್ನ ಕುಟುಂಬದ ತೇಜೋವಧೆಗೆ ಷಡ್ಯಂತ್ರ – ಬಿಡುಗಡೆ ಬಳಿಕ ಸೂರಜ್ ರೇವಣ್ಣ ಫಸ್ಟ್ ರಿಯಾಕ್ಷನ್

    ಬೆಂಗಳೂರು: ನನ್ನ ಕುಟುಂಬ ಹಾಗೂ ನನ್ನ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡುವ ದುರುದ್ದೇಶದಿಂದ ಪ್ರಕರಣ ದಾಖಲಿಸಿದ್ದಾರೆ. ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ ಆದಷ್ಟು ಬೇಗ ಹೊರಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದ್ದಾರೆ.

    ಎರಡು ಪ್ರಕರಣದಲ್ಲಿ ಜಾಮೀನು ಸಿಕ್ಕಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara) ಇಂದು ಸೂರಜ್ ರೇವಣ್ಣ (Suraj Revanna) ಬಿಡುಗಡೆಯಾದರು. ಬಿಡುಗಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ರಾಜಕಾರಣ ಏನಿದೆ ಅದು ನಡೆದೇ ನಡೆಯುತ್ತದೆ. ಸತ್ಯವನ್ನು ಯಾರಿಂದಲೂ ಮುಚ್ಚಿಡಲು ಸಾಧ್ಯವಿಲ್ಲ. ಕುತಂತ್ರ ಮಾಡಿ ನಮ್ಮ ಕುಟುಂಬ ಮುಗಿಸಲು ಹೊರಟಿದ್ದಾರೆ. ಪ್ರತಿಯೊಂದು ವಿಚಾರಕ್ಕೂ ಎರಡು ಮೂರು ದಿನದಲ್ಲಿ ಪತ್ರಿಕಾಗೋಷ್ಠಿ ಕರೆದು ಸ್ಪಷ್ಟೀಕರಣ ಕೊಡುತ್ತೇನೆ ಎಂದಿದ್ದಾರೆ.

    ಎಲ್ಲಾ ತನಿಖೆಗೂ ನಾನು ಸಹಕಾರ ಕೊಟ್ಟಿದ್ದೇನೆ. ಕಾನೂನಿನ ಮೇಲೆ ನನಗೆ ವಿಶ್ವಾಸ ಇದೆ. ಹೆದರಿ ಓಡಿ ಹೋಗುವುದಿಲ್ಲ. ಇದು ನನ್ನ ಮೇಲೆ ನಡೆದಿರುವ ಷಡ್ಯಂತ್ರ ಎಂದೇ ಹೇಳ್ತೀನಿ. ಶಿವಕುಮಾರ್ ನನ್ನಕಾರು ಚಾಲಕ ಅಲ್ಲ. ನನಗೆ ಇರುವುದು ಲೋಕೇಶ್ ಒಬ್ಬನೇ ಕಾರು ಚಾಲಕ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

    ಏನಿದು ಪ್ರಕರಣ?
    ಅಸಹಜ ಲೈಂಗಿಕ ಪ್ರಕರಣ ಸಂಬಂಧ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377ರ ಅಡಿ ದಾಖಲಾಗಿದ್ದ ಎಫ್‍ಐಆರ್‍ನಲ್ಲಿ ಸೂರಜ್ ರೇವಣ್ಣ ಅವರನ್ನು ಜೂ.23 ರಂದು ಸಿಐಡಿ ಅರೆಸ್ಟ್ ಮಾಡಿತ್ತು.

    ಮೊದಲ ಪ್ರಕರಣದ ಹೊತ್ತಲ್ಲೇ ಸೂರಜ್ ರೇವಣ್ಣ ಕಾರ್ ಚಾಲಕ ಎರಡನೇ ದೂರು ದಾಖಲಿಸಿದ್ದರು. ಆದರೆ ಈ ಪ್ರಕರಣದಲ್ಲಿ ಬಂಧನ ಆಗಿರಲಿಲ್ಲ. ಹೀಗಾಗಿ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಜು.22 ರಂದು ಷರತ್ತು ಬದ್ಧ ಜಾಮೀನು ನೀಡಿತ್ತು.

  • ಬೆಂಗ್ಳೂರಲ್ಲಿ ಕಸ ತೆಗೆಯಲು 30 ವರ್ಷಕ್ಕೆ ಗುತ್ತಿಗೆ – 45 ಸಾವಿರ ಕೋಟಿ ಟೆಂಡರ್‌ನಲ್ಲಿ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌: ಹೆಚ್‌ಡಿಕೆ ಬಾಂಬ್‌

    ಬೆಂಗ್ಳೂರಲ್ಲಿ ಕಸ ತೆಗೆಯಲು 30 ವರ್ಷಕ್ಕೆ ಗುತ್ತಿಗೆ – 45 ಸಾವಿರ ಕೋಟಿ ಟೆಂಡರ್‌ನಲ್ಲಿ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌: ಹೆಚ್‌ಡಿಕೆ ಬಾಂಬ್‌

    ಮಂಡ್ಯ: ಬೆಂಗಳೂರಿನಲ್ಲಿ ಕಸ ತೆಗೆಯಲು ಬ್ಲಾಕ್‌ ಲಿಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಸಚಿವರೊಬ್ಬರು ಟೆಂಡರ್ (Garbage Tender) ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್‌ಗೆ (ಬೋಗ್ಯ) ಕೊಟ್ಟಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್‌ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಮಂಡ್ಯದ (Mandya) ಪಾಂಡವಪುರ ಪಟ್ಟಣದಲ್ಲಿ ತಮಗೆ ನಡೆದ ಅಭಿನಂದನಾ ಹಾಗೂ ಕೃತಜ್ಞತಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಸ ಎತ್ತಲು ಬ್ಲಾಕ್‌ ಲಿಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ. 30 ವರ್ಷಕ್ಕೆ ಲೀಸ್‌ಗೆ (ಬೋಗ್ಯ) ಕೊಟ್ಟಿದ್ದಾರೆ. ಅದರಲ್ಲೂ 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ತೆಗೆದುಕೊಂಡಿದ್ದಾರೆ. 45 ಸಾವಿರ ಕೋಟಿ ರೂ.ಗೆ ಟೆಂಡರ್‌ ಕೊಟ್ಟು, 15 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ. 30 ವರ್ಷಕ್ಕೆ ನಾವು ನೀವು ಬದುಕಿರುತ್ತೀವೋ ಇಲ್ಲವೋ ಎಂದು ಬಾಂಬ್‌ ಸಿಡಿಸಿದ್ದಾರೆ. ಇದನ್ನೂ ಓದಿ: Karnataka Assembly Session| ಟಾರ್ಗೆಟ್‌ ಸಿದ್ದರಾಮಯ್ಯ – ಪ್ರತಿಪಕ್ಷಗಳಿಗೆ ಸಿಕ್ಕಿವೆ 3 ಬ್ರಹ್ಮಾಸ್ತ್ರಗಳು

    ಪೇಪರ್ ಪೆನ್ನು ಕೇಳಿದವರಿಗೂ ಮಂಡ್ಯ ಜನ 6 ಸ್ಥಾನ ಕೊಟ್ಟರು. ಈಗ ಏನಾಗಿದೆ, ಕಿಕ್ ಬ್ಯಾಕ್ ತೆಗೆದುಕೊಳ್ಳುವುದರಲ್ಲಿ ಉಪಯೋಗ ಮಾಡ್ತಿದ್ದಾರೆ. ನೀವು ನನಗೆ ಕೊಟ್ಟ ಶಕ್ತಿ ರಾಜ್ಯದ ಅಭಿವೃದ್ಧಿಗೆ ಮುಡಿಪು. ನನಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಬೇಡ. ಜನರ ಋಣ ತೀರಿಸಿ ಮಣ್ಣಲ್ಲಿ ಮಣ್ಣಾಗುತ್ತೇನೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

    ಇದಕ್ಕೂ ಮುನ್ನ ಮಾತನಾಡಿದ ಹೆಚ್‌ಡಿಕೆ, ಅಲ್ಲದೇ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಇದು ನನ್ನ ಮನಸ್ಸಿಗೆ ಹೆಚ್ಚಿನ ನೋವುಂಟು ಮಾಡಿದೆ. ಕೇಂದ್ರ ಸಚಿವನಾದ ನಂತರ ಮಂಡ್ಯದಲ್ಲಿ ಜನತಾ ದರ್ಶನ ಮಾಡಿದೆ. ಅಂದು ಸಂದಾಯವಾದ ಅರ್ಜಿಗಳಲ್ಲಿ 400ಕ್ಕೂ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು. ಆರ್ಥಿಕ ನೆರವಿಗೆ ಕೋರಿ 300ಕ್ಕೂ ಹೆಚ್ಚು ಅರ್ಜಿಗಳು, ನಿರುದ್ಯೋಗ ಸಮಸ್ಯೆ ಕುರಿತ 300ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮನೆ ಹಾಗೂ ನಿವೇಶನ ಕೋರಿದ ಅರ್ಜಿಗಳು ಬಂದಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್‌. ಅಶೋಕ್‌ ಬೆಂಬಲ!

    ಜನ ನೀಡಿದ ಅರ್ಜಿಗಳ ವಿಲೇವಾರಿಗೆ ಮಂಡ್ಯದಲ್ಲಿ ಡಿಸಿ ಆಗಿ ಕೆಲಸ ಮಾಡಿದ್ದ ಕೃಷ್ಣಯ್ಯ ಅವ್ರನ್ನ ವಿಶೇಷಾಧಿಕಾರಿಯಾಗಿ ನೇಮಕ ಮಾಡಿದ್ದೇನೆ. ಅವರು ನಿಮ್ಮ ಸಮಸ್ಯೆ ಆಲಿಸಿ ನನ್ನ ಗಮನಕ್ಕೆ ತರುತ್ತಾರೆ. ಪ್ರತಿ ಮಂಗಳವಾರ, ಬುಧವಾರ ಸಂಸದರ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜನರಿಗೆ ಭರವಸೆ ನೀಡಿದರು.

  • Karnataka Assembly Session| ಟಾರ್ಗೆಟ್‌ ಸಿದ್ದರಾಮಯ್ಯ – ಪ್ರತಿಪಕ್ಷಗಳಿಗೆ ಸಿಕ್ಕಿವೆ 3 ಬ್ರಹ್ಮಾಸ್ತ್ರಗಳು

    Karnataka Assembly Session| ಟಾರ್ಗೆಟ್‌ ಸಿದ್ದರಾಮಯ್ಯ – ಪ್ರತಿಪಕ್ಷಗಳಿಗೆ ಸಿಕ್ಕಿವೆ 3 ಬ್ರಹ್ಮಾಸ್ತ್ರಗಳು

    – ಜುಲೈ 15ರಿಂದ ಜುಲೈ 26ರ ತನಕ ನಡೆಯಲಿದೆ ಅಧಿವೇಶನ
    – ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುವುದೇ ಮೊದಲ ಅಜೆಂಡಾ

    ಬೆಂಗಳೂರು: ಸೋಮವಾರದಿಂದ 9 ದಿನಗಳ ಕಾಲ ವಿಧಾನಮಂಡಲದ ಅಧಿವೇಶನ (Karnataka Legislative Assembly Session) ನಡೆಯಲಿದೆ. ಪ್ರತಿಪಕ್ಷಗಳಿಗೆ 3 ಬ್ರಹ್ಮಾಸ್ತ್ರಗಳು ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಬಳಸಲು ತಯಾರಿ ನಡೆಸಿವೆ. ಇದೊಂದು ರೀತಿಯಲ್ಲಿ ಟಾರ್ಗೆಟ್ ಸದನವಾಗಿದ್ದು, 3 ಪ್ರಕರಣಗಳಲ್ಲೂ ಸಿದ್ದರಾಮಯ್ಯ ಅವರೇ ಟಾರ್ಗೆಟ್ ಆಗುವ ಸಾಧ್ಯತೆ ಇದೆ.

    ಜುಲೈ 15ರಿಂದ ಜುಲೈ 26ರ ತನಕ ನಡೆಲಿರುವ ಕಲಾಪದಲ್ಲಿ ಕಾಂಗ್ರೆಸ್ ಸರ್ಕಾರವನ್ನು (Congress Government) ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ-ಜೆಡಿಎಸ್ (BJP-JDS) ಜಂಟಿ ಹೋರಾಟಕ್ಕಿಳಿಯಲಿವೆ. ವಾಲ್ಮೀಕಿ (Valmiki Scam) ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಅಕ್ರಮ, ಮುಡಾ ಅಕ್ರಮ (Muda Scam) ಆರೋಪ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಸಿಕೊಂಡಿದ್ದೇ ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಬಲ ತಂದಿದೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ವರೆಗೂ ಹೋಗೋಣ – ರಾಜ್ಯ ಸರ್ಕಾರಕ್ಕೆ ಆರ್‌. ಅಶೋಕ್‌ ಬೆಂಬಲ!

    ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುವುದೇ ಮೊದಲ ಅಜೆಂಡಾ ಆಗಿದೆ ಎನ್ನಲಾಗಿದೆ. ಅಲ್ಲದೆ ಪೆಟ್ರೋಲ್, ಡಿಸೇಲ್ ದರ ಏರಿಕೆ, ಡೆಂಗ್ಯೂ ಹೆಚ್ಚಳ ವಿಚಾರ, ಕಾವೇರಿ ನೀರು ಬಿಡುವ ನಿರ್ಧಾರದ ವಿಚಾರಗಳು ಸಹ ಹೆಚ್ಚು ಸದ್ದು ಮಾಡುವ ಸಾಧ್ಯತೆ ಇದೆ. ಅಲ್ಲದೇ ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಗೆ ನಿಯಮ 60ರ ಅಡಿ ನಿಲುವಳಿ ಸೂಚನೆ ಮಂಡಿಸಲು ಬಿಜೆಪಿ ನಿರ್ಧರಿಸಿದೆ.

    ಸಿಎಂ, ದದ್ದಲ್ ರಾಜೀನಾಮೆಗೆ ಆಗ್ರಹಿಸಿ ಶಾಸಕರ ಭವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವಿಧಾನಸೌಧದವರೆಗೆ ಬಿಜೆಪಿಗರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಪ್ರತಿಪಕ್ಷಗಳ ಆರೋಪವನ್ನು ಎದುರಿಸಲು ಸಿಎಂ ಸಿದ್ದರಾಮಯ್ಯ ಕೂಡ ತಯಾರಿ ನಡೆಸಿದ್ದು, ಪ್ರಕರಣಗಳಿಗೆ ಹಿರಿಯ ಸಚಿವರ ಟೀಂ ಮಾಡಿ ಎದುರಿಸಲು ಸಿದ್ಧವಾಗಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ

    ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ, ಮಾಜಿ ಎಂಎಲ್‌ಎಸ್ ಡಿ.ಎಸ್. ವೀರಯ್ಯ ಬಂಧನ, ಶಿವಮೊಗ್ಗ ಪ್ರಾಧಿಕಾರದ ಸೈಟ್ ಹಂಚಿಕೆ ಗೋಲ್ಮಾಲ್, ಗೌಡರ ಕಾಲದಲ್ಲಿ ಮುಡಾ ಸೈಟ್ ಹಂಚಿಕೆ ಅಕ್ರಮ, ಹೆಚ್ಡಿಕೆಗೆ 60 ಸಾವಿರ ಅಡಿ ನಿವೇಶನ ಅಸ್ತ್ರ ಪ್ರಯೋಗಿಸಲಿದ್ದಾರೆ.

     

  • ರಾಮನಗರ ಹೆಸರು ಮರುನಾಮಕರಣಕ್ಕೆ ಜೆಡಿಎಸ್ ವಿರೋಧ ಇಲ್ಲ, ಹಾಸನದವರ ವಿರೋಧ ಇದೆ: ಹೆಚ್‌ಸಿ ಬಾಲಕೃಷ್ಣ

    ರಾಮನಗರ ಹೆಸರು ಮರುನಾಮಕರಣಕ್ಕೆ ಜೆಡಿಎಸ್ ವಿರೋಧ ಇಲ್ಲ, ಹಾಸನದವರ ವಿರೋಧ ಇದೆ: ಹೆಚ್‌ಸಿ ಬಾಲಕೃಷ್ಣ

    ರಾಮನಗರ: ಜಿಲ್ಲೆ ಮರುನಾಮಕರಣಕ್ಕೆ ವಿರೋಧ ಮಾಡುತ್ತಿರುವುದು ಜೆಡಿಎಸ್‌ನವರಲ್ಲ (JDS), ಬದಲಾಗಿ ಹಾಸನದವರು ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ (HD Kumaraswamy) ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ  (HC Balakrishna) ತಿರುಗೇಟು ನೀಡಿದ್ದಾರೆ.

    ರಾಮನಗರ (Ramanagara) ಜಿಲ್ಲೆ ಮರುನಾಮಕರಣಕ್ಕೆ ಜೆಡಿಎಸ್ ವಿರೋಧ ವಿಚಾರ ಕುರಿತು ಮಾಗಡಿಯಲ್ಲಿ ಮಾತನಾಡಿದ ಅವರು, ಹಾಸನದವರಿಗೆ ಬೆಂಗಳೂರಿನ ಗಮ್ಮತ್ತು ಗೊತ್ತಿಲ್ಲ. ಆದ್ದರಿಂದ ಇದಕ್ಕೆ ವಿರೋಧ ಮಾಡುತ್ತಿದ್ದಾರೆ. ನಮಗೂ ಬೆಂಗಳೂರಿಗೂ ಅವಿನಾಭಾವ ಸಂಬಂಧ ಇದೆ. ನಾವು ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯವರೇ. ರಾಮನಗರ ಹೆಸರು ಬದಲಾವಣೆ ಆದರೆ ಕಚೇರಿಗಳು ಎಲ್ಲೂ ಹೋಗಲ್ಲ. ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಎಂಬ ಹೆಸರು ಬದಲಾವಣೆಗೆ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ – ಜನಜೀವನ ಅಸ್ತವ್ಯಸ್ತ

    ಇನ್ನೂ ಮುಡಾ ಬಹುಕೋಟಿ ಹಗರಣ ವಿಚಾರ ಕುರಿತು ಮಾತನಾಡಿ, ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಮುಡಾ ಭೂಸ್ವಾಧೀನ ಮಾಡಿದ ಬಳಿಕ ಜಾಗದ ಮಾಲೀಕರಿಗೆ 50:50 ಅನುಪಾತದಲ್ಲಿ ಸೈಟ್ ಹಂಚುತ್ತಾರೆ. ಅದೇ ರೀತಿ ಸಿಎಂ ಕೂಡ ಸೈಟ್ ಪಡೆದಿದ್ದಾರೆ. ಇಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಂತೆ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ