Tag: jds

  • ಪ್ರತಿಭಟನೆ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಪೊಲೀಸರು

    ಪ್ರತಿಭಟನೆ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಪೊಲೀಸರು

    – ಪೊಲೀಸರ ಮೇಲೆ ನಿಖಿಲ್ ಗರಂ

    ರಾಮನಗರ: ಜೆಡಿಎಸ್‍ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ವತಿಯಿಂದ ರಾಮನಗರದಲ್ಲಿ (Ramanagara) ಪ್ರತಿಭಟನೆ ನಡೆದಿದೆ. ಈ ವೇಳೆ ಜೆಡಿಎಸ್ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರನ್ನು (Nikhil Kumaraswamy) ಪೊಲೀಸರು ಎಳೆದಾಡಿದ್ದು, ಪೊಲೀಸರ ವಿರುದ್ಧ ನಿಖಿಲ್ ಗರಂ ಆಗಿದ್ದಾರೆ.

    ರಾಮನಗರ ತಾಲೂಕಿನ ಹಳ್ಳಿಮಾಳ ವ್ಯವಸಾಯೋತ್ಪನ್ನ ಮಾರುಕಟ್ಟೆ ಚುನಾವಣೆಯನ್ನು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಂದೂಡಿಕೆ ಮಾಡಿದ್ದಾರೆ. ಎರಡು ಬಾರಿ ಚುನಾವಣೆ ನಿಗಧಿಯಾಗಿದ್ರೂ ಅಧಿಕಾರಿಗಳು ಚುನಾವಣೆ ನಡೆಸಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿದೆ. ಈ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಸಹಕಾರ ಸಂಘಗಳ ನಿಬಂಧಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

    ಈ ವೇಳೆ ಕಂದಾಯ ಭವನಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದಾರೆ. ಬಳಿಕ ಸಹಕಾರ ಸಂಘಗಳ ನಿಬಂಧಕರ ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದಾರೆ. ಅಲ್ಲದೇ ಕಂದಾಯ ಭವನದ ಗ್ಲಾಸ್ ಪುಡಿಪುಡಿ ಮಾಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ.

  • ಚನ್ನಪಟ್ಟಣದಲ್ಲಿ ಡಿಕೆ ಬ್ರದರ್ಸ್ ಪೈಕಿ ಯಾರೇ ನಿಂತ್ರು ಸೋಲಿಸ್ತೀವಿ: ಆರ್.ಅಶೋಕ್

    ಚನ್ನಪಟ್ಟಣದಲ್ಲಿ ಡಿಕೆ ಬ್ರದರ್ಸ್ ಪೈಕಿ ಯಾರೇ ನಿಂತ್ರು ಸೋಲಿಸ್ತೀವಿ: ಆರ್.ಅಶೋಕ್

    – ಕಾಂಗ್ರೆಸ್‍ನ ಬಿಪಿ, ಶುಗರ್‌ಗೆ ಶಾಕ್ ಟ್ರೀಟ್‍ಮೆಂಟ್ ಕೊಡ್ಬೇಕು!

    ಬೆಂಗಳೂರು: ಚನ್ನಪಟ್ಟಣದ ಉಪಚುನಾವಣೆಯಲ್ಲಿ (Channapatna by election) ಡಿಕೆ ಬ್ರದರ್ಸ್ ಪೈಕಿ ಯಾರೇ ಸ್ಪರ್ಧಿಸಿದರೂ ಸೋಲಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಕಾಂಗ್ರೆಸ್‍ಗೆ (Congress) ಸವಾಲು ಹಾಕಿದ್ದಾರೆ.

    ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುವ ವೇಳೆ, ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಈ ವೇಳೆ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರು ಅನ್ನೋದಕ್ಕಿಂತ ಒಂದೇ ಅಭ್ಯರ್ಥಿ. ಅದು ಬಿಜೆಪಿ ಆಗಬಹುದು ಅಥವಾ ಜೆಡಿಎಸ್ ಆಗಬಹುದು. ಕುಮಾರಸ್ವಾಮಿಯವರ ಜೊತೆ ಈಗಾಗಲೇ ಮಾತುಕತೆ ನಡೆಯುತ್ತಿದೆ. ದೆಹಲಿಗೆ ಹೋದಾಗ ಮಾತುಕತೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: CM ಸ್ಥಾನವನ್ನು ಡಿಕೆಶಿಗೆ ಸಿದ್ದರಾಮಯ್ಯ ಬಿಟ್ಟುಕೊಡಬೇಕು- ಸಿಎಂ ಸಮ್ಮುಖದಲ್ಲೇ ಸ್ವಾಮೀಜಿ ಹೇಳಿಕೆ

    ಕುಮಾರಸ್ವಾಮಿಯವರು ಓಪನ್ ಮೈಂಡ್‍ನಲ್ಲಿ ಇದ್ದಾರೆ. ಅವರು ಹೇಳಿರೋದು ನಾವು ಗೆಲ್ಲಬೇಕು ಅಷ್ಟೇ. ಈ ದುಷ್ಟ ಸರ್ಕಾರ ಹಣದ ಹೊಳೆ ಚನ್ನಪಟ್ಟಣದಲ್ಲಿ ಹರಿಸುತ್ತಾರೆ. ಹೊಳೆ ಹರಿಸೋದನ್ನ ತಡೆದು ಗೆಲ್ಲುವ, ಯಾರೇ ಅಭ್ಯರ್ಥಿ ಆದರೂ ಅವರನ್ನು ಆಯ್ಕೆ ಮಾಡೋಣ ಎಂದಿದ್ದಾರೆ. ನಾವು ಹಾಗೂ ಅವರು ಅಭ್ಯರ್ಥಿಯ ವಿಚಾರದಲ್ಲಿ ಮುಕ್ತವಾಗಿ ಇದ್ದೇವೆ ಎಂದು ಅವರು ತಿಳಿಸಿದ್ದಾರೆ.

    20 ವರ್ಷಗಳಿಂದ ಚನ್ನಪಟ್ಟಣಕ್ಕೆ ಅವರು ಹೋಗೇ ಇಲ್ಲ. ಈಗ ನಾಟಕ ಮಾಡ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬಂದಿದ್ದು 20 ಸಾವಿರ ಮತ. ಬಿಜೆಪಿ-ಜೆಡಿಎಸ್‍ಗೆ ಒಂದು ಲಕ್ಷದ ಮೇಲೆ ಮತಗಳು ಬಂದಿತ್ತು. 20 ಸಾವಿರ ಮತ ಬಂದಿರೋದಕ್ಕೆ ಅಲ್ಲಿಗೆ ಹೋಗ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳ್ತಾರೆ. 20 ಸಾವಿರ ಮತ ಹಾಕೋರಿಗೆ ನಮಸ್ಕಾರ ಹಾಕೋಕೆ ಹೋಗ್ತಾರಂತೆ. ಹಾಕಲಿ ಎಷ್ಟು ನಮಸ್ಕಾರ ಹಾಕ್ತಾರೆ ಅಂತ. ಬೆಲೆ ಏರಿಕೆ ಮಾಡಿರೋದ್ರಿಂದ ಈ ಬೈ ಎಲೆಕ್ಷನ್‍ನಲ್ಲಿ ಜನ ಇವರಿಗೆ 3 ನಾಮ ಹಾಕಬೇಕು. ಈ ಮೂರು ಬೈ ಎಲೆಕ್ಷನ್‍ನಲ್ಲಿ ಜನ ಕಾಂಗ್ರೆಸ್‍ಗೆ ಮೂರು ನಾಮ ಹಾಕಿದ್ರೆ ಬೆಲೆಗಳೆಲ್ಲ ಇಳಿದು ಹೋಗುತ್ತೆ. ರಾಜ್ಯದ ಜನರಿಗೆ ಮನವಿ ಮಾಡ್ತೀನಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಸಿ ಬೆಲೆ ಇಳಿಕೆ ಆಗುತ್ತದೆ ಎಂದು ಅವರು ಮನವಿ ಮಾಡಿದ್ದಾರೆ.

    ಕಾಂಗ್ರೆಸ್‍ಗೆ ಬಿಪಿ ಹಾಗೂ ಶುಗರ್ ಲೆವಲ್ ಜಾಸ್ತಿ ಆಗಿದೆ. ಅವರ ಬಿಪಿ, ಶುಗರ್‌ಗೆ ಮದ್ದು ಏನು ಎಂದರೆ ಸ್ವಲ್ಪ ಶಾಕ್ ಟ್ರೀಟ್‍ಮೆಂಟ್ ಕೊಡಬೇಕು. ಶಾಕ್ ಟ್ರೀಟ್‍ಮೆಂಟ್ ಕೊಟ್ರೆ ಬಿಪಿ, ಶುಗರ್ ಕಡಿಮೆ ಆಗುತ್ತದೆ. ಆಗ ಅವರು ಜನರ ಕಡೆ ನೋಡ್ತಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣಕ್ಕೆ ಸಚಿವರ ದಂಡು-ಕ್ಷೇತ್ರ ಗೆಲ್ಲಲು ಡಿಕೆಶಿ ಮಾಸ್ಟರ್ ಪ್ಲಾನ್

  • ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಿಂದ ಹೆಚ್.ಡಿ ರೇವಣ್ಣ ಕಿಕ್ ಔಟ್!

    ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಿಂದ ಹೆಚ್.ಡಿ ರೇವಣ್ಣ ಕಿಕ್ ಔಟ್!

    ಮಂಡ್ಯ: ಜೆಡಿಎಸ್ ಫ್ಲೆಕ್ಸ್ ಗಳಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ (HD  DeveGowda)) ಹಿರಿಯ ಮಗ ಹೆಚ್.ಡಿ ರೇವಣ್ಣ ಅವರನ್ನು ಕಿಕ್ ಔಟ್ ಮಾಡಲಾಗಿದೆ.

    ಹೌದು. ಕುಮಾರಸ್ವಾಮಿ (hD Kumaraswamy) ಕೇಂದ್ರ ಸಚಿವರಾದ ಬಳಿಕ ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಜೆಡಿಎಸ್‍ನಿಂದ ಬೃಹತ್ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಆದರೆ ಈ ಫ್ಲೆಕ್ಸ್ ಗಳಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಫೋಟೋವೇ ಇಲ್ಲ. ಈ ಮೂಲಕ ಮುಜುಗರದಿಂದ ಪಾರಾಗಲು ದಳಪತಿಗಳು ಕ್ರಮ ಕೈಗೊಂಡ್ರಾ ಎಂಬ ಪ್ರಶ್ನೆ ಎದ್ದಿದೆ.

    ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಜೊತೆಗೆ ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರ ಫೋಟೋಗಳನ್ನು ಬಳಸಲಾಗಿದೆ. ಜೊತೆಗೆ ಮಾಜಿ ಸಂಸದೆ ಸುಮಲತಾ, ಮಾಜಿ ಸಚಿವ ಹೆಚ್.ವಿಶ್ವನಾಥ್ ಫೋಟೋಗೂ ಪ್ಲೆಕ್ಸ್ ನಲ್ಲಿ ಸ್ಥಾನ ಕಲ್ಪಿಸಲಾಗಿದೆ. ಆದರೆ ರೇವಣ್ಣ (HD Revanna) ಫೋಟೋವನ್ನು ಮಾತ್ರ ಮಂಡ್ಯ ಜೆಡಿಎಸ್ ನಾಯಕರು ಕೈಬಿಟ್ಟಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

    ಪಕ್ಷದಿಂದ ಉಚ್ಛಾಟನೆ ಮಾಡದಿದ್ರೂ ನಾಯಕರು ಅಂತರ ಕಾಯ್ದುಕೊಂಡಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ. ರೇವಣ್ಣ & ಫ್ಯಾಮಿಲಿ ಸಾಲು ಸಾಲು ಆರೋಪಗಳನ್ನು ಎದುರಿಸುತ್ತಿದೆ. ಕಿಡ್ನಾಪ್ ಕೇಸ್ ನಲ್ಲಿ ರೇವಣ್ಣ ಜೈಲಿಗೆ ಹೋಗಿ ಬಂದರೆ, ಪತ್ನಿ ಭವಾನಿ ರೇವಣ್ಣ ಜಾಮೀನು ಪಡೆದಿದ್ದಾರೆ. ಇನ್ನೊಂದೆಡೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ, ಮತ್ತೊಂದೆಡೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ. ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿದ್ದಾರೆ. ಇದರಿಂದ ದೇವೇಗೌಡರ ಕುಟುಂಬದ ಜೊತೆಗೆ ಪಕ್ಷಕ್ಕೂ ಡ್ಯಾಮೇಜ್ ಆಗಿದೆ.

    ಈ ಡ್ಯಾಮೆಜ್ ಕಂಟ್ರೋಲ್ ಗೆ ರೇವಣ್ಣರಿಂದ ದಳಪತಿಗಳು ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆ ಪಕ್ಷದ ಪ್ರತೀ ಫ್ಲೆಕ್ಸ್ ಗಳಲ್ಲೂ ರೇವಣ್ಣ ಫೋಟೋ ಕಡ್ಡಾಯವಾಗಿ ಇರುತ್ತಿತ್ತು. ರೇವಣ್ಣ ಜೊತೆಗೆ ಪ್ರಜ್ವಲ್, ಸೂರಜ್ ಫೋಟೋ ಕೂಡ ಬಳಸಲಾಗುತ್ತಿತ್ತು. ಒಟ್ಟಿನಲ್ಲಿ ಮಂಡ್ಯದಲ್ಲಿ ತಮ್ಮದೇ ಪ್ರಭಾವ ಹೊಂದಿದ್ದ ರೇವಣ್ಣ ಕುಟುಂಬವನ್ನು ಇದೀಗ ದಳಪತಿಗಳು ದೂರ ಇಟ್ಟಿರುವುದು ಫ್ಲೆಕ್ಸ್ ವಿಚಾರದಲ್ಲಿ ಎದ್ದು ಕಾಣುತ್ತಿದೆ.

  • ಸ್ಫೋಟಕ ಟ್ವಿಸ್ಟ್‌ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ‌!

    ಸ್ಫೋಟಕ ಟ್ವಿಸ್ಟ್‌ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ‌!

    ಹಾಸನ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದೆ. ಸೂರಜ್‌ ರೇವಣ್ಣ (Suraj Revanna) ಪರವಾಗಿ ಸಂತ್ರಸನ ವಿರುದ್ಧ ದೂರು ನೀಡಿದ್ದ ದೂರುದಾರನೇ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಹೊಳೆನರಸೀಪುರ ನಗರ ಠಾಣೆಯಲ್ಲಿ (Holenarasipura City Police) ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ಜೂನ್‌ 21ರಂದು ದೂರು ನೀಡಿದ್ದರು. ಶಿವಕುಮಾರ್‌ ದೂರಿನ ಆಧಾರದ ಮೇಲೆಯೇ ಪೊಲೀಸರು ಸಂತ್ರಸ್ತನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಆದರೀಗ ದೂರು ನೀಡಿರುವ ಸಂತ್ರಸ್ತ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶಿವಕುಮಾರ್‌ (Shivakumar) ಫೋನ್‌ ಸಹ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರುದಾರನ ನಡೆ ಬಗ್ಗೆಯೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.

    ಶಿವಕುಮಾರ್‌ ನೀಡಿದ ದೂರಿನಲ್ಲಿ ಏನಿತ್ತು?
    ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್‌ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ.

    ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್‌ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್‌ ರೇವಣ್ಣ ಕೇಳಿದ್ದರು.

    ಜೂನ್‌ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.

    ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.

  • ಇಳಿವಯಸ್ಸಲ್ಲೂ ದೇವೇಗೌಡರಿಗೆ ಕೊಡಬಾರದ ನೋವು ಕೊಡ್ತಿದ್ದಾರೆ: ಹೆಚ್‍ಡಿಕೆ

    ಇಳಿವಯಸ್ಸಲ್ಲೂ ದೇವೇಗೌಡರಿಗೆ ಕೊಡಬಾರದ ನೋವು ಕೊಡ್ತಿದ್ದಾರೆ: ಹೆಚ್‍ಡಿಕೆ

    – ನನ್ನ ಕೈಯಲ್ಲಿ ಅಧಿಕಾರಿಗಳು ಸಿಕ್ಕಿ ಹಾಕಿಕೊಳ್ಳುವುದಿಲ್ವಾ?

    ರಾಮನಗರ: ಇಳಿವಯಸ್ಸಲ್ಲೂ ದೇವೇಗೌಡರಿಗೆ (H.D Devegowda) ಕೊಡಬಾರದ ನೋವು ಕೊಡ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ (Channapatna) ಮಾತನಾಡಿದ ಅವರು, ನಮ್ಮನ್ನು ಮುಗಿಸಲು ಏನೇನೋ ಕೆಲಸ ಮಾಡ್ತಾರೆ. ಇಳಿವಯಸ್ಸಿನಲ್ಲಿಯೂ ದೇವೇಗೌಡರಿಗೆ ಕೊಡಬಾರದ ನೋವು ಕೊಡ್ತಿದ್ದಾರೆ. ಮಕ್ಕಳು ತಪ್ಪು ಮಾಡಿದ್ರೆ ದೊಡ್ಡವರು ಏನು ಮಾಡ್ತಾರೆ? ನಿಮ್ಮ ಮನೆಯಲ್ಲಿ ಮಕ್ಕಳಿಲ್ವಾ? ಇದರಲ್ಲಿ ದೇವೇಗೌಡರಿಗೆ ಪ್ರಶ್ನೆ ಮಾಡ್ತೀರಿ. ಅವನ್ಯಾರೋ ಮಾಧ್ಯಮದವನು ದೇವೇಗೌಡರಿಗೆ ಏಕವಚನದಲ್ಲಿ ಮಾತನಾಡ್ತಾನೆ ಎಂದು ಅವರು ಹರಿಹಾಯ್ದಿದ್ದಾರೆ. ಈ ಮೂಲಕ ಭಾಷಣದಲ್ಲಿ ಪರೋಕ್ಷವಾಗಿ ಸೂರಜ್ ರೇವಣ್ಣ ಅವರ ವಿಚಾರವನ್ನು ಅವರು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಗಣಿಗಾರಿಕೆಗೆ ಸಹಿ‌ ಹಾಕಿರೋದು ಸರ್ಕಾರದ ಸಂಸ್ಥೆ, ಅವರು ಕಿಕ್‌ಬ್ಯಾಕ್ ನೀಡಲ್ಲ: ರಾಜ್ಯ ಸರ್ಕಾರದ ವಿರುದ್ಧ ಸಿಟಿ ರವಿ ಕಿಡಿ

    ಇದ್ಯಾವುದಕ್ಕೂ ನಾವು ಕುಗ್ಗಲ್ಲ. ನಮ್ಮ ಅಧಿಕಾರಿಗಳು ಗುಲಾಮರಾಗಿ ಕೆಲಸ ಮಾಡಲು ಇತಿಮಿತಿ ಇದೆ. ನಾವೇನು ನಾಳೆಯೇ ರಾಜಕೀಯ ನಿವೃತ್ತಿ ಹೊಂದಲ್ಲ. ನನ್ನ ಕೈಯಲ್ಲಿ ಅಧಿಕಾರಿಗಳು ಸಿಕ್ಕಿ ಹಾಕಿಕೊಳ್ಳುವುದಿಲ್ವಾ? ನಾನು ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದೇನೆ. ಇವತ್ತಲ್ಲ ನಾಳೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ದುರಹಂಕಾರದಲ್ಲೇ ಈ ಮಾತನ್ನ ಹೇಳುತ್ತಿದ್ದೇನೆ ಎಂದುಕೊಳ್ಳಿ. ಈ ಇಬ್ಬರು ಮಹಾನುಭಾವರು ಏನು ಮಾಡ್ತಿದ್ದಾರೆ ಗೊತ್ತಿದೆ. ಅಧಿಕಾರಿಗಳು ಈ ಗುಲಾಮತನ ಬಿಟ್ಟು, ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ರಾಜ್ಯದ ಅಧಿಕಾರಿಗಳಿಗೆ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

    ಅದ್ಯಾವುದೋ ನಟ ಅರೆಸ್ಟ್ ಆದ್ರೆ ಅದಕ್ಕೂ ನಾನೇ ಕಾರಣ ಅಂತಾರೆ. ಏನೇನೋ ನನ್ನ ಮೇಲೆ ಇಲ್ಲಸಲ್ಲದ ವಿಚಾರ ಹರಿಬಿಡ್ತಾರೆ. ನನ್ನ ಮೇಲೆ ಯಾವುದೋ ಚಾನಲ್‍ನವನು ಏನೇನೋ ಮಾತಾಡ್ತಾನೆ. ಆ ರೀತಿ ಈ ಅಣ್ಣತಮ್ಮನ ಬಗ್ಗೆ ಮಾತನಾಡಿದ್ರೆ ಇಷ್ಟೊತ್ತಿಗೆ ಆ ಸ್ಟುಡಿಯೋಗೆ ಬೆಂಕಿ ಹಾಕ್ತಿದ್ರು ಎಂದು ಅವರು ಹೇಳಿದರು.

    ನನ್ನನ್ನು ಮುಗಿಸಲು ಏನೇನೋ ಮಾಡ್ತಿದ್ದಾರೆ. ಅಣ್ಣತಮ್ಮ ಸೇರಿ ನಮ್ಮ ಪಕ್ಷ ಮುಗಿಸಿಬಿಟ್ಟೆವು ಎಂದು ಏನೇನೋ ಲೆಕ್ಕಾಚಾರ ಇಟ್ಕೊಂಡಿದ್ದರು. ಪಾಪ ನಿದ್ದೆಯನ್ನೂ ಮಾಡ್ತಿಲ್ಲ. ದೇವೇಗೌಡರ ಕುಟುಂಬ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಜನರ ಆಶೀರ್ವಾದ ಇರುವವರೆಗೂ ನಮ್ಮನ್ನ ಯಾರೂ ಏನೂ ಮಾಡಲು ಆಗಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರೇವಣ್ಣ ಕುಟುಂಬಕ್ಕೆ ಕಾನೂನು ಸಂಕಷ್ಟ – ಯಾರ ವಿರುದ್ಧ ಏನೇನು ಪ್ರಕರಣ?

  • ನೂತನ ಕೇಂದ್ರ ಸಚಿವರು, ಸಂಸದರಿಗೆ ಬಿಜೆಪಿಯಿಂದ ಸನ್ಮಾನ, ಅಭಿನಂದನೆ; ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ದೋಸ್ತಿ ನಾಯಕರು

    ನೂತನ ಕೇಂದ್ರ ಸಚಿವರು, ಸಂಸದರಿಗೆ ಬಿಜೆಪಿಯಿಂದ ಸನ್ಮಾನ, ಅಭಿನಂದನೆ; ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ದೋಸ್ತಿ ನಾಯಕರು

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಗೆದ್ದ ಬಿಜೆಪಿ-ಜೆಡಿಎಸ್ ಸಂಸದರಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‌ಡಿಎ (NDA) ಸಂಸದರ ಸನ್ಮಾನ, ರಾಜ್ಯದ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ದೋಸ್ತಿ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಕ್ಸಮರ ನಡೆಸಿದರು.

    ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಬಿಜೆಪಿ- ಜೆಡಿಎಸ್ (BJP-JDS) ಒಟ್ಟಾಗಿರುವುದಕ್ಕೆ ರಾಜ್ಯದ ಜನರ ಆಶೀರ್ವಾದ ಲಭಿಸಿದೆ. ರಾಜ್ಯದಲ್ಲಿ 19 ಜನ ಎನ್‌ಡಿಎ ಸಂಸದರ ಆಯ್ಕೆಗೆ ಕಾರಣಕರ್ತರಾದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಇದನ್ನೂ ಓದಿ: ತಲೆಕೆಡಿಸಿಕೊಳ್ಳಬೇಡಿ ಸರ್- ಜೈಲುಪಾಲಾದ ದರ್ಶನ್‌ಗೆ ಧೈರ್ಯ ಹೇಳಿದ ಅಭಿಮಾನಿ

    ಕಾಂಗ್ರೆಸ್ ಪಕ್ಷದ ಸಾಕಷ್ಟು ಅಪಪ್ರಚಾರದ ನಡುವೆ, ಆಮಿಷಗಳ ನಡುವೆ ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಆಶೀರ್ವಾದ ಮಾಡಿದ್ದಾರೆ. ರಾಜ್ಯದ ನೂತನ ಸಂಸದರಿಗೆ ಅಭಿನಂದನೆಗಳು. ಹಿಂದೆ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷ ಈಗ 9 ಸ್ಥಾನ ಗೆದ್ದಿರಬಹುದು. ಆದರೆ ಮತ್ತೊಂದು ಕಡೆ ರಾಜ್ಯದಲ್ಲಿ 145ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಸಚಿವರಿರುವ ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಲೀಡ್ ಪಡೆದಿದ್ದಾರೆ ಎಂದು ವಿವರಿಸಿದರು.

    ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದಲ್ಲಿ ಹಿನ್ನಡೆ:
    ಮುಂದಿನ 4 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕರ್ನಾಟಕವು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿತ್ತು. ಆದರೆ ಕಳೆದ ಒಂದು ವರ್ಷದ ಕಾಂಗ್ರೆಸ್ ದುರಾಡಳಿತದಲ್ಲಿ ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲೂ ಹಿನ್ನಡೆ ಸಾಧಿಸುವಂತಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು. ಇದನ್ನೂ ಓದಿ: 13 ವರ್ಷಗಳ ನಂತರ ‘ದಾಸ’ ಮತ್ತೆ ಜೈಲುಪಾಲು!

    ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ ಎಂದರೆ ಸುಳ್ಳು ಗ್ಯಾರಂಟಿ, ಭ್ರಷ್ಟಾಚಾರ, ದುರಾಡಳಿತ ಮತ್ತು ಅಭಿವೃದ್ಧಿ ಶೂನ್ಯತೆ ಎಂಬುದನ್ನು ಜನರಿಗೆ ಮನವರಿಕೆ ಮಾಡಲು ಮನವಿ ಮಾಡಿದರು. ಸದ್ಯವೇ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ನಾವು ಜೆಡಿಎಸ್ ಪಕ್ಷದ ಜೊತೆಗೂಡಿ ಇವುಗಳಲ್ಲಿ ಗೆಲುವು ಸಾಧಿಸಿ ನಮ್ಮ ಶಕ್ತಿಯನ್ನು ತೋರಿಸಬೇಕು ಎಂದು ತಿಳಿಸಿದರು. ಕಾರ್ಯಕರ್ತರ ಪರಿಶ್ರಮದಿಂದ ಈ ದೊಡ್ಡ ಸಂಖ್ಯೆಯಲ್ಲಿ ಸಂಸದರು ಆಯ್ಕೆಯಾಗಿದ್ದಾರೆ ಎಂದರು.

    ರಾಜ್ಯ ಚುನಾವಣಾ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ಸಿನದು ತಪ್ಪು ನೀತಿಗಳ ಜನವಿರೋಧಿ ಸರ್ಕಾರ. ಡೀಸೆಲ್, ಪೆಟ್ರೋಲ್ ದರ ಏರಿಕೆ ಸೇರಿ ಎಲ್ಲಾ ವಸ್ತುಗಳ ದರ ಏರಿಸಿದ್ದಾರೆ ಎಂದು ಟೀಕಿಸಿದರು. ವಾಲ್ಮೀಕಿ (ಎಸ್‌ಟಿ) ನಿಗಮದ ಹಗರಣ ಸಂಬಂಧ ಕೇವಲ ಒಬ್ಬ ಸಚಿವರು ರಾಜೀನಾಮೆ ಕೊಟ್ಟರೆ ಸಾಲದು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ದಾಖಲೆ ಕೇಳಿದ ಟ್ರಾಫಿಕ್‌ ಪೊಲೀಸಪ್ಪನನ್ನೇ ಕೆಲ ಮೀಟರ್‌ ಎಳೆದೊಯ್ದ ಚಾಲಕ!

    ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಬಿಜೆಪಿ- ಜೆಡಿಎಸ್ ಹೊಂದಾಣಿಕೆಯಿಂದ ಕರ್ನಾಟಕದಲ್ಲಿ ಅಭೂತಪೂರ್ವ ಜಯವನ್ನು ಸಾಧಿಸಲಾಗಿದೆ. 20 ಸ್ಥಾನ ಗೆಲ್ಲುವುದಾಗಿ ಕಾಂಗ್ರೆಸ್ ಪಕ್ಷವು ಹೇಳುತ್ತಿತ್ತು. ಆದರೆ ಕಾಂಗ್ರೆಸ್ ಪಕ್ಷವನ್ನು ಜನರು ಕಸದ ಬುಟ್ಟಿಗೆ ಎಸೆದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಪೆಟ್ರೋಲ್- ಡೀಸೆಲ್ ದರ ಏರಿಸಿದ ಕಾಂಗ್ರೆಸ್ಸಿಗೆ ಈಗ ಕೇಡುಗಾಲ ಬಂದಿದೆ ಎಂದು ಹೇಳಿದರು.

    ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ವಿಧಾನಸಭೆ ಚುನಾವಣೆ ನಡೆದು ಕೇವಲ ಒಂದು ವರ್ಷದೊಳಗೆ ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಅಹಂಕಾರಕ್ಕೆ ಜನರು ಸ್ಪಷ್ಟವಾದ ಕಪಾಳಮೋಕ್ಷ ಮಾಡಿದ್ದಾರೆ ಎಂದು. ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಇದರಲ್ಲಿ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದಗಳು ಎಂದರು. ಇದನ್ನೂ ಓದಿ: 17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ಕೊಡಬೇಕಿತ್ತು. ಭ್ರಷ್ಟ, ಹಿಂದೂ ವಿರೋಧಿ, ಬೆಲೆ ಏರಿಕೆಗಳ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ನಾವು ಶ್ರಮಿಸಬೇಕಿದೆ. ಕಾಂಗ್ರೆಸ್ ಅಪಪ್ರಚಾರದ ಅಬ್ಬರದಲ್ಲೂ ಎನ್‌ಡಿಎ ಪ್ರಚಂಡ ವಿಜಯ ಸಾಧಿಸಿದೆ. ನೆಹರೂ ಅವರ ಬಳಿಕ ಸತತ ಮೂರನೇ ಬಾರಿಗೆ ಪ್ರಧಾನಿಯಾದ ವ್ಯಕ್ತಿ ನರೇಂದ್ರ ಮೋದಿಯವರು ಎಂಬುದನ್ನು ಮರೆಯಬಾರದು. ಕೇರಳ, ಪಶ್ಚಿಮ ಬಂಗಾಳ, ದೆಹಲಿ ಮತ್ತಿತರ ಕಡೆ ಪರಸ್ಪರ ಬಡಿದಾಡುವ ಪಕ್ಷಗಳ ಇಡೀ ಇಂಡಿ ಒಕ್ಕೂಟ ಸೇರಿ 230 ಸೀಟು ಪಡೆದಿವೆ. ಬಿಜೆಪಿಯೊಂದೇ 240 ಸ್ಥಾನಗಳನ್ನು ಪಡೆದಿದೆ ಎಂದು ವಿವರಿಸಿದರು.

    ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಎಲ್ಲಾ ಪ್ರಭಾವ, ಹಣದ ಹೊಳೆ, ಎಲ್ಲ ಆಮಿಷಗಳ ನಡುವೆ ರಾಜ್ಯದ ಜನರು ನಮ್ಮನ್ನು ಗೆಲ್ಲಿಸಿದ್ದಾರೆ. ಮೋದಿಯವರ ನೇತೃತ್ವದಲ್ಲಿ ಸರ್ಕಾರ ರಚನೆ ಆಗಬಾರದೆಂದು ದೇಶೀಯ ಶಕ್ತಿಗಳು ಮಾತ್ರವಲ್ಲದೆ, ವಿದೇಶೀಯ ಶಕ್ತಿಗಳೂ ಕೆಲಸ ಮಾಡಿದ್ದವು ಎಂದು ಆರೋಪಿಸಿದರು. ಅತ್ಯುತ್ಸಾಹದಿಂದ ಕೆಲಸ ಮಾಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದರು. ರಾಜ್ಯ ಸರ್ಕಾರದ ಒಂದು ವಿಕೆಟ್ ಬಿದ್ದಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಿಎಂ, ಡಿಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಜು. 4 ರವರೆಗೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜೈಲು

    ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಾತನಾಡಿ, ಈ ಗೆಲುವಿಗೆ ಬಿಜೆಪಿ ಕೊಡುಗೆ ಮಾತ್ರವಲ್ಲದೆ, ಜೆಡಿಎಸ್ ಮುಖಂಡರು, ಕಾರ್ಯಕರ್ತರ ಕೊಡುಗೆಯೂ ಇದೆ ಎಂದರು. ಸದಾ ವಂಚನೆ ಮಾಡುತ್ತಿರುವ ಕಾಂಗ್ರೆಸ್ಸಿನ ನಡೆಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

    ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಎರಡೂ ಪಕ್ಷಗಳ ಕಾರ್ಯಕರ್ತರ ಶ್ರಮ, ನಾಡಿನ ಜನತೆಯ ಆಶೀರ್ವಾದಕ್ಕೆ ಧನ್ಯವಾದಗಳನ್ನು ತಿಳಿಸಿದರು. ನಾನು ಜನರಿಗೆ ಪರಿಚಯವಾಗಲು 2006ರಲ್ಲಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದ ಯಡಿಯೂರಪ್ಪನವರೇ ಕಾರಣ ಎಂದು ವಿಶ್ಲೇಷಿಸಿದರು. ಜೆಡಿಎಸ್- ಬಿಜೆಪಿ ಮೈತ್ರಿ ಅತ್ಯಂತ ಸಹಜವಾದುದು ಎಂದು ನುಡಿದ ಅವರು, ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಹೊಂದಾಣಿಕೆಯನ್ನು ಮುಕ್ತ ಮನಸ್ಸಿನಿಂದ ಒಪ್ಪಿ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು. ವಿಶ್ವದಲ್ಲೇ ಮೋದಿಯವರ ಬಗ್ಗೆ ಅತ್ಯಂತ ಗೌರವ- ವಿಶ್ವಾಸದ ಭಾವನೆ ಇದೆ. ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂಬಂತೆ ಕಾಂಗ್ರೆಸ್ ಸರ್ಕಾರ ವರ್ತಿಸುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 55 ಮಂದಿ ಸಾವು ಪ್ರಕರಣ – ಪ್ರಮುಖ ಆರೋಪಿ ಅರೆಸ್ಟ್‌

    ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೋರ್ ಕಮಿಟಿ ಸದಸ್ಯರು, ನೂತನ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಜೆಡಿಎಸ್ ಮುಖಂಡರು, ಎರಡೂ ಪಕ್ಷಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

    ಭಾರತ ಮಾತೆ, ಪಕ್ಷದ ಸ್ಥಾಪಕರಿಗೆ ಪುಷ್ಪಾರ್ಚನೆ ಮಾಡಿ, ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಸ್ವಾಗತಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ, ಹಿರಿಯ ಮುಖಂಡ ಭಾನುಪ್ರಕಾಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಇದನ್ನೂ ಓದಿ: ತೈಲ ಬೆಲೆ ಏರಿಕೆಗೂ ಗ್ಯಾರಂಟಿ ಯೋಜನೆಗೂ ಸಂಬಂಧವಿಲ್ಲ: ಡಿಕೆಶಿ

  • ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಕೇಳ್ಬೇಡಿ – ಕೇಂದ್ರ ಸಚಿವ ಹೆಚ್‌ಡಿಕೆ ಗರಂ!

    ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ನನ್ನ ಬಳಿ ಕೇಳ್ಬೇಡಿ – ಕೇಂದ್ರ ಸಚಿವ ಹೆಚ್‌ಡಿಕೆ ಗರಂ!

    ಚಿಕ್ಕಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Kempegowda International Airport) ಮಾತನಾಡುತ್ತಾ, ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ, ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ. ಅದರ ಅವಶ್ಯಕತೆ ಏನಿದೆ? ಕಾನೂನು ಇದೆ ಕಾನೂನಿನ ಅಡಿ ಎಲ್ಲವೂ ನಡೆಯಲಿದೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ನನ್ನ ಬಳಿ ಆ ತರಹದ ಪ್ರಶ್ನೆಗಳನ್ನ ಕೇಳಬೇಡಿ ಎಂದು ಹೇಳಿದ್ದಾರೆ.

    ಏನಿದು ಪ್ರಕರಣ?
    ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ (Shivakumar) ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.

    5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್‌ 384, 506 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

    ಡಿಕೆಶಿ ಜೊತೆಗೆ ಯಾರಾದ್ರೂ ನಿಲ್ಲಲ್ಲಿ:
    ಇದೇ ವೇಳೆ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿಕೆಶಿ ಸ್ಪರ್ಧೆ ವಿಚಾರ ಕುರಿತು ಮಾತನಾಡಿದ ಹೆಚ್‌ಡಿಕೆ, ಚನ್ನಪಟ್ಟಣದಲ್ಲಿ ಯಾರು ಬೇಕಾದರೂ ನಿಲ್ಲಲಿ. ಡಿಕೆ ಶಿವಕುಮಾರ್‌ ಆದ್ರೂ ನಿಲ್ಲಲಿ, ಅಥವಾ ಅವರ ಜೊತೆಗೆ ಇನ್ನೂ 4 ಜನನ್ನ ಕರ್ಕೊಂಡು ಬಂದು ನಿಲ್ಲಿಸಿಕೊಳ್ಳಲಿ. ನಿಲ್ಲಬಾರದು ಅಂತ ಹೇಳಲು ಆಗುತ್ತಾ? ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ನಿಲ್ಲಬಹುದು. ಅದಕ್ಕೆ ದೊಡ್ಡ ಮಹತ್ವ ಕೊಡೋದು ಬೇಡ. ನಮ್ಮ ಕ್ಯಾಂಡಿಡೇಟ್ ಬಗ್ಗೆ ಕಾಲವೇ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.

  • ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ದೂರು ಬಂದ ಮೇಲೆ ಕ್ರಮ: ಜಿ. ಪರಮೇಶ್ವರ್

    ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ದೂರು ಬಂದ ಮೇಲೆ ಕ್ರಮ: ಜಿ. ಪರಮೇಶ್ವರ್

    ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ (Suraj Revanna) ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಹೇಳಿದ್ದಾರೆ.

    ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಗೃಹ ಸಚಿವ ಪರಮೇಶ್ವರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅವರನ್ನ ಭೇಟಿಯಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ವಿರುದ್ಧ ಆರೋಪ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ದರ್ಶನ್ ಜೊತೆ ಬಂಧನವಾಗಿರೋ ಆರೋಪಿಗಳ ಕುಟುಂಬದ ಸ್ಥಿತಿ ಶೋಚನೀಯ!

    ನನಗೆ ಯಾವುದೇ ಪತ್ರ ಬಂದಿಲ್ಲ, ದೂರು ಕೂಡ ಬಂದಿಲ್ಲ. ಸೂರಜ್ ರೇವಣ್ಣ ಆಗಲಿ, ಆ ದೂರುದಾರ ಆಗಲಿ ಎಲ್ಲಿಯೂ ದೂರು ಕೊಟ್ಟಿಲ್ಲ. ಯಾವುದೇ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ. ಸೂರಜ್ ರೇವಣ್ಣ ಪರ ಶಿವಕುಮಾರ್ ಎಂಬುವವರು ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ಸಂತ್ರಸ್ತನ ವಿರುದ್ಧವೇ ಕೇಸ್‌ ದಾಖಲು

    ಪತ್ರ ಬರೆದ ಮಾತ್ರಕ್ಕೆ ಆಗಲ್ಲ:
    ಇನ್ನೂ ಈ ಸೂರಜ್ ಪ್ರಕರಣವನ್ನು ಸಿಐಡಿಗೆ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲು ದೂರು ಕೊಡಬೇಕು. ಪತ್ತ ಬರೆದ ತಕ್ಷಣ ಆಗಲ್ಲ. ಅವರು ಪತ್ರ ಬರೆದಿದ್ದೇವೆ ಅಂತಾರೆ, ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣ ಏನಾಗುತ್ತೆ ಅಂತಾ ಕಾದು ನೋಡೋಣ, ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಸಿಐಡಿಗೆ ಕೊಡುವ ನಿರ್ಧಾರ ಮಾಡ್ತೇವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ : ಎಂ ಬಿ ಪಾಟೀಲ್‌

  • ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ಸಂತ್ರಸ್ತನ ವಿರುದ್ಧವೇ ಕೇಸ್‌ ದಾಖಲು

    ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ಸಂತ್ರಸ್ತನ ವಿರುದ್ಧವೇ ಕೇಸ್‌ ದಾಖಲು

    ಹಾಸನ: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ (Holenarsupra Police Station) ಎಫ್‌ಐಆರ್ (FIR) ದಾಖಲಾಗಿದೆ.

    ಅರಕಲಗೂಡು ಮೂಲದ ಸಂತ್ರಸ್ತ ಯುವಕ  ಬೆಂಗಳೂರಿನಲ್ಲಿ ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ.  ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ (Shivakumar) ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.

    5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ  ಎಂದು ಆರೋಪಿಸಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್‌ 384, 506 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.


    ದೂರಿನಲ್ಲಿ ಏನಿದೆ?
    ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್‌ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ.

    ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್‌ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್‌ ರೇವಣ್ಣ ಕೇಳಿದ್ದರು.

     

    ಜೂನ್‌ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.

    ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

  • ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!

    ಹೆಚ್‌ಡಿಕೆ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಅಭಿಮಾನಿ – ಮಹಿಳೆ ವಿರುದ್ಧ ಮಂಡ್ಯದಲ್ಲಿ ದೂರು!

    ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ದರ್ಶನ್ ಮಹಿಳಾ ಅಭಿಮಾನಿ (Darshan Fans) ವಿರುದ್ಧ ಮಂಡ್ಯದ (Mandya) ಕೆ.ಆರ್.ಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

    ಕೆ.ಆರ್.ಪೇಟೆ ತಾಲೂಕು ಜೆಡಿಎಸ್ (JDS) ಘಟಕದ ಅಧ್ಯಕ್ಷ ಜಾನಕೀರಾಮ್ ಅವರು, ಮಂಗಳಾ ಎಂಬ ಮಹಿಳೆ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: NEET ಪರೀಕ್ಷೆ ಅಕ್ರಮ ಕೇಸ್‌: ಇದು ಮೋದಿ ಸರ್ಕಾರದ ದೊಡ್ಡ ಹಗರಣ: ಶರಣಪ್ರಕಾಶ ಪಾಟೀಲ್

    ದರ್ಶನ್ ಅಭಿಮಾನಿ ಆಗಿರುವ ಮಂಗಳಾ ಇತ್ತೀಚೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು. ಇದನ್ನೂ ಓದಿ: ಡಿ ಗ್ಯಾಂಗ್ ಕೊಲೆ ಕೇಸ್: ನಾನು, ಸಿಎಂ ಯಾರಿಗೂ ಸೊಪ್ಪು ಹಾಕಲ್ಲ: ಗೃಹ ಸಚಿವ ಪರಮೇಶ್ವರ್

    ದರ್ಶನ್ ವಿರುದ್ಧ ಕೊಲೆ ಅಪರಾಧ ಬರುವಂತೆ ಕುಮಾರಸ್ವಾಮಿ ಮಾಡಿದ್ದಾರೆ, ದುಡ್ಡು ಕೊಟ್ಟು ದರ್ಶನ್ ವಿರುದ್ಧ ಧಿಕ್ಕಾರ ಕೂಗಿಸಿದ್ದಾರೆ. ಸುಮಲತಾ (Sumalatha) ನಿಮಗೆ ಮಂಡ್ಯದಲ್ಲಿ ಸ್ಪರ್ಧಿಸೋಕೆ ಚಾನ್ಸ್ ಕೊಟ್ಟಿದ್ದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕಿದ್ದಾರೆ. ಸುಮಲತಾರಿಂದ ಭಿಕ್ಷೆ ಹಾಕಿಸಿಕೊಂಡವರು ಅವರು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡಿತ್ತು.

    ದರ್ಶನ್ ಅಭಿಮಾನಿ ಮಾತಿನಿಂದ ಸಿಟ್ಟಿಗೆದ್ದ ಕಾರ್ಯಕರ್ತರು ಕೆ.ಆರ್.ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸಿ ಮಹಿಳಾ ಅಭಿಮಾನಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧೆ ಅಂತೇನಿಲ್ಲ; ಬೇರೆ ಆಯ್ಕೆ ಇವೆ: ಪರಮೇಶ್ವರ್