ರಾಂಚಿ: ಇಲ್ಲಿನ ಜೆಎಸ್‍ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯ ನೋಡಲು ಧೋನಿ ಬರುತ್ತಾರೆ ಎಂದು ಕ್ರೀಡಾಭಿಮಾನಿಗಳು ಕಾಯುತ್ತಿದ್ದರೆ ಮಾಜಿ ನಾಯಕ ಭಾರತೀಯ ಸೇನೆ ಬಳಸುತ್ತಿರುವ ಜೀಪ್ ಖರೀದಿಸಿ ರೌಂಡ್ಸ್ ಹೊಡೆಯುತ್ತಿದ್ದಾರೆ.
ಕ್ರಿಕೆಟ್ ಜೊತೆಗೆ ಧೋನಿಗೆ ಕಾರು, ಬೈಕ್ ಖರೀದಿರುವ ಕ್ರೇಝ್ ಸ್ವಲ್ಪ ಹೆಚ್ಚೇ ಇದೆ. ಧೋನಿ ಅವರ ಮನೆಯಲ್ಲಿ ದುಬಾರಿ ಹಮ್ಮರ್ ಕಾರು ಸೇರಿದಂತೆ ಹಲವು ಕಾರುಗಳಿವೆ. ಇತ್ತೀಚೆಗಷ್ಟೇ ಜೀಪ್ ಕಂಪಾಸ್ ಚೆರೋಕಿ ಟ್ರಾಕ್‍ವಾಕ್ ಕಾರನ್ನು ಖರೀಸಿದ್ದರು. ಈ ಬೆನ್ನಲ್ಲೇ ಅವರ ಮನೆ ಹೊಸ ಅತಿಥಿಯಾಗಿ ನಿಸ್ಸಾನ್ ಕಂಪನಿಯ ಜೊಂಗಾ ಜೀಪ್ ಬಂದಿದೆ.
ತಮ್ಮ ನೂತನ ಜೀಪ್‍ನಲ್ಲಿ ಜಾಲಿ ರೈಡ್ ಮಾಡಿದ್ದ ಧೋನಿ ಸ್ಥಳೀಯ ಪೆಟ್ರೋಲ್ ಬಂಕ್‍ಗೆ ಬಂದಿದ್ದಾರೆ. ಈ ವೇಳೆ ಧೋನಿ ಅವರನ್ನು ನೋಡಿದ ಅಭಿಮಾನಿಗಳು ಆಟೋಗ್ರಾಫ್‍ಗೆ ಮುಗಿಬಿದ್ದಿದ್ದಾರೆ. ಅಭಿಮಾನಿಗಳನ್ನು ನಿರಾಶೆಗೊಳಿಸದ ಧೋನಿ, ಪ್ರತಿಯೊಬ್ಬರಿಗೂ ಆಟೋಗ್ರಾಫ್ ನೀಡಿ ಸೆಲ್ಫಿ ತೆಗೆಸಿಕೊಂಡಿದ್ದಾರೆ.
ವಿಶ್ವಕಪ್ ಬಳಿಕ ಧೋನಿ ನಿವೃತ್ತಿಯ ಕುರಿತು ಭಾರೀ ಚರ್ಚೆಗಳು ನಡೆದಿದ್ದು, ಬಿಸಿಸಿಐ ಬಾಂಗ್ಲಾದೇಶದ ಟೂರ್ನಿಗೂ ಅವರನ್ನು ಆಯ್ಕೆ ಮಾಡಿಲ್ಲ. ಪರಿಣಾಮ ಅವರು ಮುಂದಿನ ಅವಧಿಯಲ್ಲಿ ಟೀಂ ಇಂಡಿಯಾ ಪರ ಧೋನಿ ಆಡುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಆದರೆ ಧೋನಿ ಆಪ್ತ ವಲಯದಲ್ಲಿರುವ ದಿವಾಕರ್ ಕೂಡ, ನಿವೃತ್ತಿಯ ಬಗ್ಗೆ ಇದುವರೆಗೂ ಯಾವುದೇ ಮಾತುಕತೆ ನಡೆದಿಲ್ಲ ಎಂದಿದ್ದಾರೆ. ಅಲ್ಲದೇ ಧೋನಿ ಅವರ ತೀರ್ಮಾನಗಳ ಬಗ್ಗೆ ಭವಿಷ್ಯ ನುಡಿಯುವುದು ಕಷ್ಟಸಾಧ್ಯ ಎಂದು ಹೇಳಿದ್ದಾರೆ. ಅಂದಹಾಗೇ ಧೋನಿ ಟೆಸ್ಟ್ ಕ್ರಿಕೆಟ್‍ಗೆ 2014ರಲ್ಲಿ ನಿವೃತ್ತಿ ಘೋಷಿಸಿದ್ದು, ಸಿಮೀತ ಓವರ್ ಗಳ ಕ್ರಿಕೆಟ್‍ನಲ್ಲಿ ಮಾತ್ರ ಈಗ ಆಡುತ್ತಿದ್ದಾರೆ.

ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಲ್ಲಿ ವಶಕ್ಕೆ ಪಡೆದಿದ್ದು, ರಾಂಚಿ ಪಂದ್ಯವನ್ನು ಗೆಲ್ಲಲು 2 ವಿಕೆಟ್‍ಗಳ ಅಗತ್ಯವಿದೆ.