Tag: Jeeva

  • ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ – ಎಸ್‌ಐಟಿ ರಚಿಸಿ ಹೈಕೋರ್ಟ್‌ ಆದೇಶ

    ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ – ಎಸ್‌ಐಟಿ ರಚಿಸಿ ಹೈಕೋರ್ಟ್‌ ಆದೇಶ

    – ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ

    ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ (SIT) ರಚಿಸಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಆದೇಶಿಸಿದೆ.

    ಅಲ್ಲದೇ ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಒಟ್ಟಾರೆ ಮೂವರು ಐಪಿಎಸ್ ಅಧಿಕಾರಿಗಳನ್ನು (ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್) ಎಸ್‌ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್

    ಉದ್ಯಮಿ ಹಾಗೂ ವಕೀಲೆ ಜೀವಾ ಆತ್ಮಹತ್ಯೆ ಪ್ರಕಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು. ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿತು. ಇದನ್ನೂ ಓದಿ: ವಿಜಯೇಂದ್ರ ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದ್ರೆ ಎಲ್ರೂ ಒಪ್ಪಿಕೊಳ್ಳಲೇಬೇಕು: ಯತ್ನಾಳ್‌ಗೆ ಶ್ರೀರಾಮುಲು ಟಾಂಗ್

    ಏನಿದು ಪ್ರಕರಣ?
    ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.

    ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
    ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಮೋಹಕ ತಾರೆ ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ

    11 ಪುಟಗಳ ಡೆತ್ ನೋಟ್?:
    ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 11 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.

  • ಉದ್ಯಮಿ ಜೀವಾ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್‌ FSLಗೆ ಕಳುಹಿಸಲು ಸಿಸಿಬಿ ತಯಾರಿ

    ಉದ್ಯಮಿ ಜೀವಾ ಆತ್ಮಹತ್ಯೆ ಕೇಸ್‌ – ಡೆತ್‌ನೋಟ್‌ FSLಗೆ ಕಳುಹಿಸಲು ಸಿಸಿಬಿ ತಯಾರಿ

    – ಕೋರ್ಟ್‌ ಚಾಟಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

    ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ (High Court) ಚಾಟಿ ಬೀಸಿದ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಘಟನೆ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲು ಸಿಸಿಬಿ ವಿಶೇಷ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಜೀವಾ ತನಿಖೆ ಕರೆಯಲು ಕಾರಣ ಏನು? ಜೀವಾಗೆ ಸಂಬಂಧಿಸಿದ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಆಗಿದ್ಯಾ? ಎಷ್ಟು ಬಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಿದ್ದಾರೆ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಲು, ಅಲ್ಲದೇ ಜೀವಾ ಅವರು ಬರೆದಿದ್ದ ಡೆತ್‌ನೋಟನ್ನ (Death Note) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಕರೆಸಲು‌ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಸರ್ಕಾರಕ್ಕೆ ಕೋರ್ಟ್‌ ಚಾಟಿ:
    ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ (DySP Kanaka Lakshmi) ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್ (Death Note) ಬರೆದಿಟ್ಟು ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ (Jeeva Suicide Case) ಮಾಡಿಕೊಂಡಿರುವ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿತ್ತು. ಇದನ್ನೂ ಓದಿ: ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ‍್ಯಾರಿಗೆ ಎಷ್ಟು ಹಣ?

    ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತು. ಮೃತರು 13 ಪುಟಗಳ ಡೆತ್‌ನೋಟ್ ಬರೆದಿದ್ದಾರೆ. ಇಲ್ಲಿಯವರೆಗೆ ಆರೋಪಿಯನ್ನು ವಿಚಾರಣೆ ಮಾಡಿಲ್ಲ, ಅರೆಸ್ಟ್ ಮಾಡಿಲ್ಲ. ಡಿವೈಎಸ್‌ಪಿ ಎಂಬ ಕಾರಣಕ್ಕೆ ವಿಚಾರಣೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿತ್ತು. ಇದನ್ನೂ ಓದಿ: ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

    ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇದ್ದರೆ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುತ್ತೇನೆ ಎಂದು ಹೇಳಿ ಗರಂ ಆಗಿದೆ. ಇದಕ್ಕೆ ಎಲ್ಲಾ ಪ್ರಕರಣದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡುವುದಿಲ್ಲ. ಈ ಪ್ರಕರಣವನ್ನು ಸಿಸಿಬಿಗೆ ನೀಡಲಾಗಿದೆ ಎಂದು ಸರ್ಕಾರದ ಪರ ವಕೀಲ ಜಗದೀಶ್ ಉತ್ತರಿಸಿದರು. ಡಿವೈಎಸ್‌ಪಿ ಕನಕಲಕ್ಷ್ಮಿ ಪರ ವಾದ ಮಂಡಿಸಿದ ವಕೀಲರು, ನಮ್ಮ ಕಕ್ಷಿದಾರರು ಯಾವುದೇ ಕಿರುಕುಳ ನೀಡಿಲ್ಲ. ತನಿಖೆ ನಡೆದು ಸತ್ಯಾಸತ್ಯತೆ ಬರಲಿ. ಕನಕಲಕ್ಷ್ಮಿ ಲಾಟರಿ ಹಗರಣದಲ್ಲಿದ್ದರು ಎಂದು ಇವರು ಆರೋಪ ಮಾಡುವುದು ಸರಿಯಲ್ಲ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ನವೆಂಬರ್ 29ಕ್ಕೆ ಕಾಯ್ದಿರಿಸಿದೆ.

    ಏನಿದು ಪ್ರಕರಣ?
    ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಲಿವ್ ಇನ್ ಗೆಳತಿಯ ಮೇಲೆ ರೇಪ್; 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕಿರಾತಕ

  • ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ‍್ಯಾರಿಗೆ ಎಷ್ಟು ಹಣ?

    ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ‍್ಯಾರಿಗೆ ಎಷ್ಟು ಹಣ?

    – ಅಕ್ರಮ ಹಣ ವರ್ಗಾವಣೆಯಲ್ಲಿ ಉದ್ಯಮಿ ಜೀವಾ ಪಾತ್ರ ಇತ್ತಾ?

    ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation Scam) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. 34 ಕೋಟಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದ್ದು, ಇದರಲ್ಲಿ ಉದ್ಯಮಿ ಜೀವಾ ಅವರ ಪಾತ್ರ ಇತ್ತ ಎಂಬ ಅನುಮಾನ ಮೂಡಿದೆ.

    ಅಕ್ರಮವಾಗಿ ಹಣ ವರ್ಗಾವಣೆಯಲ್ಲಿ ಜೀವಾ ಅವರ ಪಾತ್ರ ಇತ್ತ ಎಂಬ ಅನುಮಾನ ಇದ್ದು, ಇದರ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಜೀವಾ ಅವರ ಅನ್ನಿಕಾ ಎಂಟರ್ ಪ್ರೈಸಸ್‌ಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ. ಇದನ್ನೂ ಓದಿ: ಭೋವಿ ನಿಗಮ ಹಗರಣದ ತನಿಖೆ ಎದುರಿಸಿದ್ದ ಮಹಿಳೆ ಆತ್ಮಹತ್ಯೆ ಕೇಸ್ – ಸಿಸಿಬಿಗೆ ವರ್ಗಾವಣೆ

    ಅನ್ನಿಕಾ ಎಂಟರ್ ಪ್ರೈಸಸ್‌ಗೆ 7.16 ಕೋಟಿ ರೂ., ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ ಒಟ್ಟು 10.9 ಕೋಟಿ ರೂ. ವರ್ಗವಾಗಿದೆ. ಇನ್ನುಳಿದ ಮೂರು ಕಂಪನಿಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪರವರ ಆಪ್ತರ ಪಾಲುದಾರಿಕೆ ಇದೆ.

    ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕಿ ಲೀಲಾವತಿ ಅವರ ಸೋದರಿ ಮಂಗಳ ರಾಮು ಅವರಿಗೆ ಹಂತ ಹಂತವಾಗಿ ಕಳ್ಳ ಹಾದಿಯಲ್ಲಿ 1.48 ಕೋಟಿ ರೂ. ಹಣ ವರ್ಗವಾಗಿದೆ. ಇಷ್ಟೆಲ್ಲಾ ಹಣ ವರ್ಗಾವಣೆ ಆಗಿರೋದು ಬಯಲಾಗಿದೆ. ಇದನ್ನೂ ಓದಿ: ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣ – ತನಿಖೆ ಎದುರಿಸಿದ್ದ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ

  • ‘ಅಲೆಕ್ಸಾ’ ಚಿತ್ರಕ್ಕಾಗಿ ತನಿಖಾಧಿಕಾರಿಯಾದ ಅದಿತಿ ಪ್ರಭುದೇವ

    ‘ಅಲೆಕ್ಸಾ’ ಚಿತ್ರಕ್ಕಾಗಿ ತನಿಖಾಧಿಕಾರಿಯಾದ ಅದಿತಿ ಪ್ರಭುದೇವ

    ವನ್ ತೇಜ್ ಹಾಗೂ ಅದಿತಿ ಪ್ರಭುದೇವ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಅಲೆಕ್ಸಾ’ (Alexa)ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಜೀವ (Jeeva) ನಿರ್ದೇಶಿಸಿರುವ ಈ ಚಿತ್ರದ ಟೀಸರ್ (Teaser) ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ವಿ.ಚಂದ್ರು ನಿರ್ಮಾಣದ ಈ ಚಿತ್ರ ನವೆಂಬರ್ ನಲ್ಲಿ ತೆರೆಗೆ ಬರುತ್ತಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಕಥೆ ಕೇಳಿದ ತಕ್ಷಣ ನಿರ್ಮಾಪಕರು ಇಷ್ಟಪಟ್ಟರು. ಇನ್ವೆಸ್ಟಿಕೇಶನ್ ಆಫೀಸರ್ ಆಗಿ ಅದಿತಿ ಪ್ರಭುದೇವ (Aditi Prabhudev) ನಟಿಸಿದ್ದಾರೆ. ಪವನ್ ತೇಜ್ (Pawan Tej) ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಫಾರ್ಮಾಸೆಟಿಕಲ್ ಮಾಫಿಯಾ ಬಗ್ಗೆ ಕೂಡ ಕ್ಲೈಮ್ಯಾಕ್ಸ್ ನಲ್ಲಿ ತೋರಿಸಿದ್ದೇವೆ‌. ಈ ಚಿತ್ರದ ಎರಡನೇ ಭಾಗವನ್ನು ತೆರೆಗೆ ತರುವ ಆಲೋಚನೆ ಇದೆ. ಮೈಸೂರು, ಮಡಿಕೇರಿ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಮೂರು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳು ಚಿತ್ರದಲ್ಲಿದೆ.‌ ಅಕ್ಟೋಬರ್ ಕೊನೆ ಅಥವಾ ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ಬರಲಿದೆ ಎಂದು ನಿರ್ದೇಶಕ ಜೀವ ತಿಳಿಸಿದರು.

    ನನಗೆ ನಿಜಜೀವನದಲ್ಲಿ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸ್ಸಿತ್ತು. ಅದು ಆಗಲಿಲ್ಲ.‌ ನಿರ್ದೇಶಕರು ನೀವು ಈ ಚಿತ್ರದಲ್ಲಿ ಇನ್ವೆಸ್ಟಿಕೇಶನ್ ಆಫೀಸರ್ ಅಂದ ತಕ್ಷಣ ಒಪ್ಪಿಕೊಂಡೆ. ಸಾಹಸ ದೃಶ್ಯಗಳಲ್ಲೂ ಕಾಣಿಸಿಕೊಳ್ಳುವ ಕನಸ್ಸಿತ್ತು. ಅದು ಈ ಚಿತ್ರದಲ್ಲಿ ನನಸ್ಸಾಗಿದೆ. ಸಾಹಸ ನಿರ್ದೇಶಕ ರವಿವರ್ಮ ಹಾಗೂ ಮಾಸ್ ಮಾದ ಅವರು ಸಾಹಸ ಸಂಯೋಜನೆಯಲ್ಲಿ ನಾನು ಅಭಿನಯಿಸಿರುವ ಸಾಹಸ ಸನ್ನಿವೇಶಗಳು ಚೆನ್ನಾಗಿ ಬಂದಿದೆ ಎಂದರು ನಟಿ ಅದಿತಿ ಪ್ರಭುದೇವ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಜೊತೆ ಸಂಪರ್ಕದಲ್ಲಿದ್ದೇನೆ, ಆಕೆಯ ಸಕ್ಸಸ್ ಬಗ್ಗೆ ಖುಷಿಯಿದೆ- ರಕ್ಷಿತ್ ಶೆಟ್ಟಿ

    ಚಿತ್ರದಲ್ಲಿ ಗಂಡ – ಹೆಂಡತಿ ಕೊಲೆ ಆಗಿರುತ್ತದೆ. ಆ‌ ಕೊಲೆಯ ತನಿಖೆಯ ಸುತ್ತ ಕಥೆ ಸಾಗುತ್ತದೆ ಎಂದು ಮಾತನಾಡಿದ ನಾಯಕ ಪವನ್ ತೇಜ್ ಅದಿತಿ ಪ್ರಭುದೇವ ಅವರ ಜೊತೆ ನಟಿಸುವ ಹಂಬಲವಿತ್ತು. ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ಮಾಪಕ ವಿ.ಚಂದ್ರು. ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಹಾಗೂ ಚಿತ್ರದ ವಿತರಕರಾದ ರಿಲಯನ್ಸ್ ಎಂಟರ್ಟೈನ್ಮೆಂಟ್ ಅವರು ‘ಅಲೆಕ್ಸಾ’ ಬಗ್ಗೆ ಮಾತನಾಡಿದರು.

    ಪವನ್ ತೇಜ್, ಅದಿತಿ ಪ್ರಭುದೇವ, ನಾಗಾರ್ಜುನ್, ಮೇಘಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.  ಸತೀಶ್ ಬಿ  ಅವರ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ  ಸಂಕಲನ ಅಲೆಕ್ಸಾ ಚಿತ್ರದಲ್ಲಿ ಸುಂದರವಾಗಿ ಮೂಡಿಬಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಬಯೋಪಿಕ್: ಹೀರೋ ತಮಿಳು ನಟ?

    ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಬಯೋಪಿಕ್: ಹೀರೋ ತಮಿಳು ನಟ?

    ಹೋರಾಟದ ಮೂಲಕವೇ ಗೆದ್ದು ಆಂಧ್ರ ಪ್ರದೇಶದ ಸಿಎಂ ಹುದ್ದೆ ಅಲಂಕರಿಸಿರುವ ಜಗನ್ ಮೋಹನ್ ರೆಡ್ಡಿ (Jagan Mohan Reddy) ಕುರಿತಾಗಿ ಸಿನಿಮಾವೊಂದು ಮೂಡಿ ಬರಲಿದೆ. ಈಗಾಗಲೇ ಚಿತ್ರಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಚಿತ್ರಕ್ಕೆ ‘ಯಾತ್ರಾ 2’ ಎಂದು ಹೆಸರಿಡಲಾಗಿದೆ. ತೆಲುಗು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದ್ದರೂ ಜಗನ್ ಪಾತ್ರ ಮಾಡುವುದು ತಮಿಳಿನ ಹೆಸರಾಂತ ನಟ ಎಂದು ಹೇಳಲಾಗುತ್ತಿದೆ.

    ಜಗನ್ ತಂದೆ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ (Rajashekhar Reddy) ಅವರ ಬಯೋಪಿಕ್ (Biopic) ಕೂಡ  ಈ ಹಿಂದೆ ರಿಲೀಸ್ ಆಗಿತ್ತು. ಆ ಚಿತ್ರಕ್ಕೆ ‘ಯಾತ್ರಾ’ ಎಂದು ಹೆಸರಿಡಲಾಗಿತ್ತು. ಮಗನ ಚಿತ್ರಕ್ಕೆ ‘ಯಾತ್ರಾ 2’ ಎಂದು ಹೆಸರಿಟ್ಟಿರುವುದಾಗಿ ನಿರ್ದೇಶಕ ಮಹಿ ವಿ ರಾಘವ್ (Mahi V Raghav) ತಿಳಿಸಿದ್ದಾರೆ. ಯಾತ್ರಾ ಸಿನಿಮಾವನ್ನು ಇವರೇ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಮತ್ತು ವೈಎಸ್ ಆರ್ ವಿರೋಧಿಗಳು ವಿರೋಧಿಸಿದ್ದರು. ಇದನ್ನೂ ಓದಿ:‘ಭಜರಂಗಿ’ ಹೆಸರಿನಲ್ಲಿ ನಟಿಸಿ, ಬಜರಂಗದಳದ ನಿಷೇಧದ ಬಗ್ಗೆ ನಿಮ್ಮ ನಡೆಯೇನು? ಶಿವಣ್ಣಗೆ ಸಂಬರ್ಗಿ ಕೌಂಟರ್

    cm jagan mohan reddy

    ಜಗನ್ ಬಯೋಪಿಕ್ ತೆಲುಗಿನಲ್ಲಿ ಮೂಡಿ ಬರುತ್ತಿರುವ ತಮಿಳಿನ ನಟರೊಬ್ಬರು ಜಗನ್ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ತಮಿಳಿನ ನಟ ಜೀವ (Jeeva) ಈ ಸಿನಿಮಾದ ಹೀರೋ ಎಂದು ಹೇಳಲಾಗುತ್ತಿದೆ. ಈ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡದೇ ಇದ್ದರೂ, ಜೀವ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಅಲ್ಲದೇ, ಜೀವ ಜೊತೆ ನಿರ್ದೇಶಕರು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ.

    ವೈಎಸ್ ಆರ್ ಪಾತ್ರವನ್ನು ಮಮ್ಮುಟ್ಟಿ ನಿರ್ವಹಿಸಿದ್ದರು. ನಲವತ್ತು ಕೋಟಿಗೂ ಅಧಿಕ ಲಾಭ ಚಿತ್ರಕ್ಕೆ ಬಂದಿತ್ತು. ಈ ಬಾರಿಯೂ ಅಂಥದ್ದೊಂದು ರೆಸ್ಪಾನ್ಸ್ ಸಿಗಲಿದೆ ಎಂದು ಹೇಳಲಾಗುತ್ತಿದೆ. ಮುಂಬರುವ ವಿಧಾನ ಸಭೆ ಚುನಾವಣೆಗೂ ಮುನ್ನ ಚಿತ್ರ ತಯಾರಾಗಿ, ಬಿಡುಗಡೆ ಮಾಡುವ ಪ್ಲ್ಯಾನ್ ಕೂಡ ಹಾಕಿಕೊಳ್ಳಲಾಗಿದೆಯಂತೆ.

  • ಚೆನ್ನೈ ಟೈಟಲ್ ವಿಕ್ಟರಿ ಬಳಿಕ ಪುತ್ರಿಯ ಆಸೆ ಈಡೇರಿಸಿದ ಧೋನಿ- ವಿಡಿಯೋ ನೋಡಿ

    ಚೆನ್ನೈ ಟೈಟಲ್ ವಿಕ್ಟರಿ ಬಳಿಕ ಪುತ್ರಿಯ ಆಸೆ ಈಡೇರಿಸಿದ ಧೋನಿ- ವಿಡಿಯೋ ನೋಡಿ

    ಮುಂಬೈ: ಐಪಿಎಲ್ ಗೆ ಎರಡು ವರ್ಷಗಳ ಬಳಿಕ ಕಮ್ ಬ್ಯಾಕ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕಪ್ ಗೆಲ್ಲುವ ಮೂಲಕ ತನ್ನ ಅಭಿಮಾನಿಗಳಿಗೆ ಅದ್ಧೂರಿ ಗಿಫ್ಟ್ ನೀಡಿದೆ. ಇದೇ ವೇಳೆ ಧೋನಿ ತಮ್ಮ ಪುತ್ರಿ ಕೇಳಿದ್ದ ಆಸೆಯನ್ನು ಈಡೇರಿಸಿದ್ದಾರೆ.

    ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಫೋಸ್ಟ್ ಮಾಡಿರುವ ಧೋನಿ, ಮೊದಲಿಗೆ ಅಭಿಮಾನಿಗಳ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ವ್ಯಾಟ್ಸನ್ ಶಾಕಿಂಗ್ ಆಟ ಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು, ಆದರೆ ಜೀವಾ ಇವುಗಳನ್ನು ಬದಿಗೊತ್ತಿ ತನ್ನ ಪಾಡಿಗೆ ತಾನು ಮೈದಾನದಲ್ಲಿ ಆಟವಾಡಲು ಬಯಸಿದ್ದಳು. ಪಂದ್ಯ ಮುಗಿದ ನಂತರ ಆಕೆ ಮೈದಾನದಲ್ಲಿ ಆಡಿ ತನ್ನ ಆಸೆ ಪೂರ್ಣಗೊಳಿಸಿದ್ದಾಳೆ ಎಂದು ಬರೆದುಕೊಂಡಿದ್ದಾರೆ.

    https://instagram.com/p/BjSyjBfnmma/?utm_source=ig_embed

    ಸಿಎಸ್‍ಕೆ ಆಟಗಾರರು ಟ್ರೋಫಿ ಗೆದ್ದ ಸಂಭ್ರಮದಲ್ಲಿದ್ದಾರೆ. ಜೀವಾ ಕ್ರೀಡಾಂಗಣದ ಹುಲ್ಲು ಹಾಸಿನ ಮೇಲೆ ಇತರರೊಂದಿಗೆ ಆಟವಾಡುತ್ತ ಕಾಲ ಕಳೆದಿದ್ದಳು. ಸದ್ಯ ಧೋನಿ ಪುತ್ರಿಯ ತುಂಟಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

    ಪಂದ್ಯದ ಬಳಿಕ ಮಾತನಾಡಿ ತಂಡದ ಧೋನಿ, ಪ್ರತಿ ಆಟಗಾರರ ಶ್ರಮ ಕಪ್ ಗೆಲುವಿನ ಹಿಂದಿನ ಗುಟ್ಟು ಎಂದು ತಿಳಿಸಿದರು. ಹಲವರು ಇಂದು ದಿನಾಂಕ 27, ತನ್ನ ಜರ್ಸಿ ನಂ.7, ಚೆನ್ನೈ ತಂಡ 7ನೇ ಬಾರಿಗೆ ಪ್ರವೇಶ ಎಂದು ಎಲ್ಲವುಗಳ ಕುರಿತು ಮಾತನಾಡುತ್ತಾರೆ. ಆದರೆ ಇವು ಯಾವುದು ಕಾರಣವಲ್ಲ, ನಾವು ಕಪ್ ಗೆದ್ದಿದ್ದೇವೆ ಎಂಬುವುದು ಅಂತ್ಯ ಎಂದು ಹೇಳಿದರು.

    ವಾಟ್ಸನ್ ದಾಖಲೆ: ಈ ಪಂದ್ಯದಲ್ಲಿ ಬೀರುಸಿನ ಆಟ ಪ್ರದರ್ಶಿಸಿ ತಂಡದ ಗೆಲುವುವಿಗೆ ಕಾರಣರಾದ ವ್ಯಾಟ್ಸನ್ ಅಜೇಯ 117 ರನ್ (57 ಎಸೆತ, 11 ಬೌಂಡರಿ, 8 ಸಿಕ್ಸರ್) ಸಿಡಿಸಿ ಸಂಭ್ರಮಿಸಿದರು. ಪಂದ್ಯದ ಆರಂಭದಲ್ಲಿ ಮೊದಲ 1 ರನ್ ಗಳಿಸಲು 10 ಎಸೆತ ಎದುರಿಸಿದ 36 ವರ್ಷದ ವಾಟ್ಸನ್ ಬಳಿಕ 51 ಎಸೆತಗಳಲ್ಲಿ ಶತಕ ಸಿಡಿಸಿದರು. ಈ ಮೂಲಕ ಐಪಿಎಲ್ ಫೈನಲ್ ನಲ್ಲಿ ಶತಕ ಗಳಿಸಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆ ಪಡೆದರು.

    https://www.instagram.com/p/BjTmn8cjSyj/?utm_source=ig_embed

    https://twitter.com/VIDtweetshere/status/1000805748467646464?

    https://twitter.com/welldone1venkat/status/1000832358772236288?

    https://twitter.com/azazdr/status/1000815973144788992?