Tag: Jemimah Rodrigues

  • ಜೆಮಿಮಾ ಶತಕದ ಮಿಂಚು – ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್ ಫೈನಲ್‌ಗೆ ಲಗ್ಗೆ!

    ಜೆಮಿಮಾ ಶತಕದ ಮಿಂಚು – ಭಾರತಕ್ಕೆ ವಿಶ್ವದಾಖಲೆಯ ಜಯ; 3ನೇ ಬಾರಿ ಮಹಿಳಾ ವಿಶ್ವಕಪ್ ಫೈನಲ್‌ಗೆ ಲಗ್ಗೆ!

    -‌ ಪಂದ್ಯ ಗೆಲ್ಲಿಸಿ ಮೈದಾನದಲ್ಲೇ ಕಣ್ಣೀರಿಟ್ಟ ರೋಡ್ರಿಗ್ಸ್‌

    ಮುಂಬೈ: ಜೆಮಿಮಾ ರೋಡ್ರಿಗ್ಸ್‌ ಅವರ ಅಜೇಯ ಶತಕ ಮತ್ತು ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಜವಾಬ್ದಾರಿಯುತ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡ ಹಾಲಿ ವಿಶ್ವಚಾಂಪಿಯನ್ ಆಸ್ಟ್ರೇಲಿಯಾವನ್ನ 5 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ 3ನೇ ಬಾರಿಗೆ ಐಸಿಸಿ ಮಹಿಳಾ ವಿಶ್ವಕಪ್‌ ಫೈನಲ್ ಪ್ರವೇಶಿಸಿದೆ. 2008ರಲ್ಲಿ ಭಾರತ ಮೊದಲ ಬಾರಿ ಫೈನಲ್‌ ಪ್ರವೇಶಿಸಿದಾಗ ಆಸೀಸ್‌ ವಿರುದ್ಧವೇ 98 ರನ್‌ಗಳಿಂದ ಸೋತಿತ್ತು. 2017ರಲ್ಲಿ ಇಂಗ್ಲೆಂಡ್‌ ವಿರುದ್ಧ 9 ರನ್‌ಗಳ ವಿರೋಚಿತ ಸೋಲು ಕಂಡಿತ್ತು. ಇದೀಗ ಸೆಮಿಸ್‌ನಲ್ಲಿ ಸೋಲಿಸಿ ಆಸೀಸ್‌ ತಂಡವನ್ನ ಮನೆಗೆ ಕಳುಹಿಸಿದೆ.

    ಈ ಮೂಲಕ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅನುಭವಿಸಿದ್ದ ಆಘಾತಕಾರಿ ಸೋಲಿಗೆ ಇದೇ ಟೂರ್ನಿಯಲ್ಲಿ ಭಾರತ ತಕ್ಕ ಉತ್ತರ ನೀಡಿದೆ. ನವೆಂಬರ್ 2ರಂದು ನಡೆಯುವ ಫೈನಲ್ ನಲ್ಲಿ ಭಾರತ ತಂಡ ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಬೇಕಿದೆ.

    ವಿಶ್ವದಾಖಲೆಯ ಜಯ
    ಗುರುವಾರ ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 49.5 ಓವರ್ ಗಳಲ್ಲಿ 338 ರನ್ ಗಳಿಗೆ ಆಲೌಟ್ ಆಯಿತು. ಇದನ್ನು ಭಾರತ ತಂಡ ಕೇವಲ 5 ವಿಕೆಟ್ ಕಳೆದುಕೊಂಡು ಇನ್ನೂ 48.3 ಓವರ್‌ಗಳಲ್ಲೇ 341 ರನ್‌ ಗಳಿಸಿ ಗೆಲುವು ಸಾಧಿಸಿತು. ವಿಶ್ವಕಪ್ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತ ಚೇಸಿಂಗ್‌ ಮಾಡಿ ಗೆಲುವು ಸಾಧಿಸಿದ ಹೆಗ್ಗಳಿಕೆ ಇದೀಗ ಭಾರತದ ವನಿತೆಯರ ಪಾಲಾಗಿದೆ.

    ಕಠಿಣ ಗುರಿ ಬೆನ್ನಟ್ಟಿದ ಭಾರತ ತಂಡ ಆರಂಭಿಕ 2 ವಿಕೆಟ್‌ ಕಳೆದುಕೊಂಡು ಆಘಾತಕ್ಕೆ ಸಿಲುಕಿತ್ತು. ಆದರೆ, ಜೆಮಿಮಾ ರೊಡ್ರಿಗಸ್‌ (127*) ಹಾಗೂ ಹರ್ಮನ್‌ಪ್ರೀತ್‌ ಕೌರ್‌ (89 ರನ್‌) ಅವರ 167 ರನ್‌ಗಳ ದೊಡ್ಡ ಜೊತೆಯಾಟದ ತಂಡಕ್ಕೆ ಬಲ ನೀಡಿತು.

    ಜೆಮಿಮಾ ರೋರಿಂಗ್‌ ಶತಕ
    ಭಾರತ ತಂಡ, 13 ರನ್‌ ಇದ್ದಾಗ ಶಫಾಲಿ ವರ್ಮಾ ಹಾಗೂ 59 ರನ್‌ಗೆ ಸ್ಮೃತಿ ಮಂಧಾನಾ ಅವರ ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು. ಆದರೆ, 3ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು ಕೊನೆಯವರೆಗೂ ಅಜೇಯರಾಗಿ ಹೋರಾಡಿದ ಜೆಮಿಮಾ ರೊಡ್ರಿಗ್ಸ್‌ 134 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 127* ರನ್‌ ಗಳಿಸಿ ಭಾರತ ತಂಡವನ್ನ ಗೆಲುವಿನ ದಡ ಸೇರಿಸಿದರು. ಅಲ್ಲದೇ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಜೊತೆಗೂಡಿ 167 ರನ್‌ಗಳ ನಿರ್ಣಾಯಕ ಜೊತೆಯಾಟ ನೀಡಿದರು. ಇದರೊಂದಿಗೆ ದೀಪ್ತಿ ಶರ್ಮಾ 24 ರನ್‌, ರಿಚಾ ಘೋಷ್‌ 26 ರನ್‌, ಅಮನ್‌ ಜೋತ್‌ ಕೌರ್‌ 15 ರನ್‌ ಕೊಡುಗೆ ನೀಡಿದರು.

    338 ರನ್‌ ಕಲೆ ಹಾಕಿದ್ದ ಆಸ್ಟ್ರೇಲಿಯಾ
    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದ ಆಸ್ಟ್ರೇಲಿಯಾ ತಂಡ ದೊಡ್ಡ ಮೊತ್ತವನ್ನೇ ಕಲೆ ಹಾಕಿತ್ತು. ಫೋಬೆ ಲಿಚ್‌ಫೀಲ್ಡ್‌ 119 ರನ್‌, ಎಲಿಸ್‌ ಪೆರ್ರಿ 77 ರನ್‌ ಹಾಗೂ ಆಶ್ಲೆ ಗಾರ್ಡ್ನರ್ ಸ್ಫೋಟಕ 63 ರನ್‌ಗಳ ನೆರವಿನಿಂದ ಆಸೀಸ್‌ ವನಿತಾ ತಂಡ 49.5 ಓವರ್‌ಗಳಿಗೆ 338 ರನ್‌ ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ಭಾರತ ಮಹಿಳಾ ತಂಡಕ್ಕೆ 339 ರನ್‌ಗಳ ಕಠಿಣ ಗುರಿ ನೀಡಿತ್ತು.

    ಸಂಕ್ಷಿಪ್ತ ಸ್ಕೋರ್
    ಆಸ್ಟ್ರೇಲಿಯಾ
    49.5 ಓವರ್ ಗಳಲ್ಲಿ 338/10, ಲಿಚ್ ಫೀಲ್ಡ್ 119(93), ಎಸಿಸ್ ಪೆರ್ರಿ 77(88), ಆ್ಯಶ್ಲೆ ಗಾರ್ಡನರ್ 63 (45), ಶ್ರೀಚರಣಿ 49ಕ್ಕೆ 2, ದೀಪ್ತಿ ಶರ್ಮಾ 73ಕ್ಕೆ 2

    ಭಾರತ ತಂಡ
    48.3 ಓವರ್ ಗಳಲ್ಲಿ 341/1, ಜೆಮಿಮಾ ರೋಡ್ರಿಗಸ್ ಅಜೇಯ 127 (134), ಹರ್ಮನ್ ಪ್ರೀತ್ ಕೌರ್ 89(88), ಕಿಮ್ ಗರ್ಥ್ 46ಕ್ಕೆ 2, ಅನಾಬೆಲ್ ಸದರ್ ಲ್ಯಾಂಡ್ 69ಕ್ಕೆ 2

  • ಜೆಮಿಮಾ ಭರ್ಜರಿ ಶತಕ – ಐರ್ಲೆಂಡ್‌ ವಿರುದ್ಧ ಟೀಂ ಇಂಡಿಯಾಗೆ 116 ರನ್‌ಗಳ ಜಯ; ಸರಣಿ ಕೈವಶ

    ಜೆಮಿಮಾ ಭರ್ಜರಿ ಶತಕ – ಐರ್ಲೆಂಡ್‌ ವಿರುದ್ಧ ಟೀಂ ಇಂಡಿಯಾಗೆ 116 ರನ್‌ಗಳ ಜಯ; ಸರಣಿ ಕೈವಶ

    ರಾಜ್‌ಕೋಟ್‌: ಜೆಮಿಮಾ ರೋಡ್ರಿಗಸ್‌ ಭರ್ಜರಿ ಶತಕ ಹಾಗೂ ಕ್ಯಾಪ್ಟನ್‌ ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಪ್ರತೀಕಾ ರಾವಲ್ ಫಿಫ್ಟಿ ಆಟದ ನೆರವಿನಿಂದ ಮಹಿಳೆಯರ ಏಕದಿನ ಸರಣಿಯ ಎರಡನೇ ಪಂದ್ಯದಲ್ಲೂ ಐರ್ಲೆಂಡ್‌ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಟೀಂ ಇಂಡಿಯಾ ಮೂರು ದಿನದ ಸರಣಿಯನ್ನು ಕೈವಶ ಮಾಡಿಕೊಂಡಿದೆ.

    ರಾಜ್‌ಕೋಟ್‌ನಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಐರ್ಲೆಂಡ್‌ ವಿರುದ್ಧ ಭಾರತ ತಂಡ 116 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ 2-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿತು. ಆರಂಭಿಕರಾಗಿ ಫೀಲ್ಡಿಗಿಳಿದ ಸ್ಮೃತಿ ಮಂಧಾನ ಮತ್ತು ಪ್ರತೀಕಾ ರಾವಲ್‌ ಜೋಡಿ 156 ರನ್‌ಗಳ ಜೊತೆಯಾಟವಾಗಿ ಗಮನ ಸೆಳೆಯಿತು. ಕ್ಯಾಪ್ಟನ್‌ ಆಗಿ ಉತ್ತಮ ಲಯದಲ್ಲಿರುವ ಸ್ಮೃತಿ ಮಂಧಾನ ಅರ್ಧಶತಕ ಬಾರಿಸಿ (73 ರನ್‌, 54 ಬಾಲ್‌, 10 ಫೋರ್‌, 2 ಸಿಕ್ಸರ್‌) ಜವಾಬ್ದಾರಿಯುತ ಆಟವಾಡಿದರು.

    ಪ್ರತೀಕಾ ರಾವತ್‌ 67, ಹರ್ಲೀನ್ ಡಿಯೋಲ್ 89 ರನ್‌ ಗಳಿಸಿ ತಂಡಕ್ಕೆ ಮತ್ತಷ್ಟು ಬೂಸ್ಟ್‌ ನೀಡಿದರು. ಜೆಮಿಮಾ ರೋಡ್ರಿಗಸ್ ಭರ್ಜರಿ ಶತಕ ಸಿಡಿಸಿ ಗಮನ ಸೆಳೆದರು. 102 ರನ್‌ (91 ಬಾಲ್‌, 12 ಫೋರ್‌) ಬಾರಿಸಿ ಮಿಂಚಿದರು. ಜೆಮಿಯಾ ಮತ್ತು ಡಿಯೋಲ್‌ ಜೋಡಿ 168 ಬಾಲ್‌ಗಳಿಗೆ 183 ರನ್‌ಗಳಿಸಿ ತಂಡದ ಮೊತ್ತ 300 ಗಡಿ ದಾಟಲು ಸಹಕಾರಿಯಾದರು.

    ಟೀ ಇಂಡಿಯಾ 50 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 370 ರನ್‌ ಬಾರಿಸಿದರು. ಐರ್ಲೆಂಡ್‌ ಪರ ಓರ್ಲಾ ಪ್ರೆಂಡರ್‌ಗ್ಯಾಸ್ಟ್, ಅರ್ಲೀನ್ ಕೆಲ್ಲಿ ತಲಾ 2 ಹಾಗೂ ಜಾರ್ಜಿನಾ ಡೆಂಪ್ಸೆ 1 ವಿಕೆಟ್‌ ಕಿತ್ತರು.

    ವನಿತೆಯರ ಭಾರತ ತಂಡ ನೀಡಿದ 371 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಐರ್ಲೆಂಟ್‌ ಸೋಲನುಭವಿಸಿತು. 50 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 254 ರನ್‌ ಗಳಿಸಲಷ್ಟೇ ಶಕ್ತವಾಯಿತು.

    ಸಾರಾ ಫೋರ್ಬ್ಸ್ 38, ಕ್ರಿಸ್ಟಿನಾ ಕೌಲ್ಟರ್ ರೀಲಿ 80, ಲಾರಾ ಡೆಲಾನಿ 37, ಲಿಯಾ ಪೌಲ್‌ 27 (ಔಟಾಗದೆ) ಗಳಿಸಿದರು. ಟೀಂ ಇಂಡಿಯಾ ಪರವಾಗಿ ದೀಪ್ತಿ ಶರ್ಮಾ 3 ವಿಕೆಟ್‌ ಕಿತ್ತು ಮಿಂಚಿದರು. ಪ್ರಿಯಾ ಮಿಶ್ರಾ 2, ಟೈಟಾಸ್‌ ಸಾಧು ಮತ್ತು ಸಯಾಲಿ ಸತ್ಘರೆ ತಲಾ 1 ವಿಕೆಟ್‌ ಕಿತ್ತರು.

  • ಮೆಗ್‌ ಲ್ಯಾನಿಂಗ್‌, ರಾಡ್ರಿಗಾಸ್‌ ಫಿಫ್ಟಿ; ಮುಂಬೈ ವಿರುದ್ಧ ಡೆಲ್ಲಿಗೆ 29 ರನ್‌ಗಳ ಗೆಲುವು

    ಮೆಗ್‌ ಲ್ಯಾನಿಂಗ್‌, ರಾಡ್ರಿಗಾಸ್‌ ಫಿಫ್ಟಿ; ಮುಂಬೈ ವಿರುದ್ಧ ಡೆಲ್ಲಿಗೆ 29 ರನ್‌ಗಳ ಗೆಲುವು

    ನವದೆಹಲಿ: ಮೆಗ್‌ ಲ್ಯಾನಿಂಗ್‌ (Meg Lanning) ಮತ್ತು ಜೆಮಿಮಾ ರಾಡ್ರಿಗಾಸ್‌ (Jemimah Rodrigues) ಅಮೋಘ ಅರ್ಧಶತಕ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 29 ರನ್‌ಗಳ ಭರ್ಜರಿ ಜಯ ಸಾಧಿಸಿತು.

    ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) 4 ವಿಕೆಟ್‌ ನಷ್ಟಕ್ಕೆ 192 ರನ್‌ ಗಳಿಸಿತು. 193 ಸವಾಲಿನ ರನ್‌ ಗುರಿ ಬೆನ್ನತ್ತಿದ ಮುಂಬೈ ತಂಡವು (Mumbai Indians) 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 163 ರನ್‌ ಅಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಫ್ರೀ.. ಫ್ರೀ.. ಈ ಬಾರಿಯ ಐಸಿಸಿ ಟಿ20 ವಿಶ್ವಕಪ್ ಡಿಸ್ನಿ+ ಹಾಟ್‍ಸ್ಟಾರ್‌ನಲ್ಲಿ ಫ್ರೀ

    ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ಉತ್ತಮ ಶುಭಾರಂಭ ನೀಡಿತು. ಆರಂಭಿಕರಾಗಿ ಫೀಲ್ಡಿಗಿಳಿದ ಮೆಗ್‌ ಲ್ಯಾನಿಂಗ್‌ ಅರ್ಧಶತಕ (53 ರನ್‌, 6 ಫೋರ್‌, 2 ಸಿಕ್ಸ್‌) ಬಾರಿಸಿ ಗಮನ ಸೆಳೆದರು.

    ಮತ್ತೆ ಜೆಮಿಮಾ ರಾಡ್ರಿಗಾಸ್‌ ಕೂಡ ಔಟಾಗದೇ (69 ರನ್‌, 8 ಫೋರ್‌, 3 ಸಿಕ್ಸ್‌) ಫಿಫ್ಟಿ ಬಾರಿಸಿ ಮಿಂಚಿದರು. ಇವರ ಜೊತೆಗೆ ಶಫಾಲಿ ವರ್ಮಾ 28, ಆಲಿಸ್ ಕ್ಯಾಪ್ಸಿ 19, ಮರಿಜಾನ್ನೆ ಕಪ್ 11 ರನ್‌ ಸಿಡಿಸಿ ತಂಡದ ಗೆಲುವಿಗೆ ನೆರವಾದರು. ಇದನ್ನೂ ಓದಿ: WPL 2024 – ಆರ್‌ಸಿಬಿಗೆ 23 ರನ್‌ಗಳ ಭರ್ಜರಿ ಜಯ

    193 ರನ್‌ ಗುರಿ ಬೆನ್ನತ್ತಿದ ಮುಂಬೈ ತಂಡ ಆರಂಭಿಕ ಆಘಾತ ಎದುರಿಸಿತು. ಬ್ಯಾಟಿಂಗ್‌ ವೈಫಲ್ಯದಿಂದಾಗಿ ಡೆಲ್ಲಿ ವಿರುದ್ಧ ಸೋಲನುಭವಿಸಿತು. ಅಮನ್ಜೋತ್ ಕೌರ್ (42), ಹೇಲಿ ಮ್ಯಾಥ್ಯೂಸ್ (29), ಸಜೀವನ್ ಸಜನ (24 ರನ್‌ ಔಟಾಗದೆ) ಬಿಟ್ಟರೆ ಬೇರೆ ಯಾವ ಬ್ಯಾಟರ್‌ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ.

    ಜೆಸ್ ಜೊನಾಸೆನ್ ಮಿಂಚು
    ಡೆಲ್ಲಿ ತಂಡದ ಪರ ಬೌಲರ್‌ ಜೆಸ್ ಜೊನಾಸೆನ್ 3 ವಿಕೆಟ್‌ ಕಿತ್ತು ಮಿಂಚಿದರು. ಸಂಘಟಿತ ಬೌಲಿಂಗ್‌ ನೆರವಿನಿಂದ ಮುಂಬೈ ವಿರುದ್ಧ ಡೆಲ್ಲಿ ಗೆಲುವು ದಾಖಲಿಸಿತು. ಮರಿಜಾನ್ನೆ ಕಪ್ 2 ಹಾಗೂ ಶಿಖಾ ಪಾಂಡೆ, ಟಿಟಾಸ್ ಸಾಧು, ರಾಧಾ ಯಾದವ್ ತಲಾ 1 ಒಂದು ವಿಕೆಟ್‌ ಕಿತ್ತರು. ಇದನ್ನೂ ಓದಿ: ಸ್ಮೃತಿ, ಪೆರ್ರಿ ಸ್ಫೋಟಕ ಫಿಫ್ಟಿ; ಆರ್‌ಸಿಬಿ ಅಬ್ಬರಕ್ಕೆ ಸುಸ್ತಾದ ವಾರಿಯರ್ಸ್ – ಯುಪಿ ಗೆಲುವಿಗೆ 199 ರನ್‌ಗಳ ಗುರಿ

    ಅಂಕಪಟ್ಟಿಯಲ್ಲಿ ಡೆಲ್ಲಿ ಅಗ್ರಸ್ಥಾನ
    ಮಹಿಳೆಯರ ಪ್ರೀಮಿಯರ್‌ ಲೀಗ್‌ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಅಗ್ರ ಸ್ಥಾನದಲ್ಲಿದೆ. ಮುಂಬೈ ತಂಡ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.

  • Women’s Hundred: ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ – ಹೊಸ ದಾಖಲೆ ಬರೆದ ಬ್ರೇವ್‌ ಗರ್ಲ್‌ ಸ್ಮೃತಿ ಮಂಧಾನ

    Women’s Hundred: ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ – ಹೊಸ ದಾಖಲೆ ಬರೆದ ಬ್ರೇವ್‌ ಗರ್ಲ್‌ ಸ್ಮೃತಿ ಮಂಧಾನ

    ಸೌತಾಂಪ್ಟನ್: ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ಅಗ್ರ ಕ್ರಮಾಂಕದ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಮಹಿಳೆಯರ ʻದಿ ಹಂಡ್ರೆಂಡ್‌ʼ (The Women’s Hundred) ಟೂರ್ನಿಯಲ್ಲಿ ‌ಬ್ಯಾಕ್‌ ಟು ಬ್ಯಾಕ್‌ ಅರ್ಧಶತಕ ಸಿಡಿಸುವ ಮೂಲಕ ವಿಶೇಷ ದಾಖಲೆಯೊಂದನ್ನ ಹೆಗಲಿಗೇರಿಸಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ 5 ಅರ್ಧಶತಕಗಳೊಂದಿಗೆ 500 ರನ್‌ ಬಾರಿಸಿ, ಈ ಸಾಧನೆ ಮಾಡಿದ ಮೊದಲ ಮಹಿಳಾ ಕ್ರಿಕೆಟರ್‌ (Women Cricketer) ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

    ದಿ ವುಮೆನ್ಸ್‌ ಹಂಡ್ರೆಡ್‌ ಟೂರ್ನಿಯ 3ನೇ ಆವೃತ್ತಿಯಲ್ಲಿ ಸೌಥೆರ್ನ್‌ ಬ್ರೇವ್ (Southern Brave) ತಂಡದ ಪರ ಆಡುತ್ತಿರುವ ಸ್ಮೃತಿ ಮಂಧಾನಾ, 17 ಪಂದ್ಯಗಳಿಂದ 503 ರನ್ ಬಾರಿಸಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕಗಳನ್ನ ಸಿಡಿಸಿದ್ದಾರೆ. 2021ರಲ್ಲಿ 8 ಪಂದ್ಯಗಳಿಂದ 167 ಹಾಗೂ 2022ರಲ್ಲಿ 211 ರನ್ ಬಾರಿಸಿದ್ದ ಮಂಧಾನಾ, ಈ ಟೂರ್ನಿಯಲ್ಲಿ 500 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೇ ಟೀಂ ಇಂಡಿಯಾದ ಮತ್ತೋರ್ವ ಆಟರ್ಗಾತಿ ಜೆಮಿಮಾ ರೊಡ್ರಿಗಸ್‌ ಸಿಡಿಸಿದ್ದ 4 ಅರ್ಧಶತಕಗಳ ದಾಖಲೆಯನ್ನೂ ಮುರಿದಿದ್ದಾರೆ. ಇದನ್ನೂ ಓದಿ: ಹೊಸ ಕೋಚ್ ನೇಮಿಸಿದ RCB – ಮುಂದಿನ ಸಲ ಕಪ್ ನಮ್ದೆ ಅಂತಿದ್ದಾರೆ ಫ್ಯಾನ್ಸ್

    ಶುಕ್ರವಾರ ವೆಲ್ಷ್ ಫೈರ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದ ಸ್ಮೃತಿ ಮಂಧಾನ 33 ಎಸೆತಗಳಲ್ಲಿ 50 ರನ್‌ ಬಾರಿಸಿದರು. 166.66 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಮಂಧಾನ 42 ಎಸೆತಗಳಲ್ಲಿ 70 ರನ್‌ ಚಚ್ಚಿದರೂ ಪಂದ್ಯವನ್ನು ಗೆಲ್ಲಿಸುವಲ್ಲಿ ವಿಫಲರಾದರು. ಮೊದಲು ಬ್ಯಾಟಿಂಗ್‌ ಮಾಡಿದ ವೆಲ್ಷ್ ಫೈರ್ ತಂಡವು 100 ಎಸೆತಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 165 ರನ್‌ ಸಿಡಿಸಿದ್ರೆ, ಸೌಥೆರ್ನ್ಸ್‌ 100 ಎಸೆತಗಳಲ್ಲಿ 161 ರನ್‌ ಗಳಿಸಿ 4 ರನ್‌ಗಳ ವಿರೋಚಿತ ಸೋಲನುಭವಿಸಿತು.

    ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಟ್ರೆಂಟ್ ರಾಕೆಟ್ಸ್ ವಿರುದ್ಧ ಕಣಕ್ಕಿಳಿದಿದ್ದ ಮಂಧಾನ 36 ಎಸೆತಗಳಲ್ಲಿ 152.77 ಸ್ಟ್ರೈಕ್‌ರೇಟ್‌ನೊಂದಿಗೆ 55 ರನ್‌ ಗಳಿಸಿ ತಂಡವನ್ನ ಗೆಲ್ಲಿಸಿದ್ದರು. ಇದನ್ನೂ ಓದಿ: ಸೂಪರ್ ಸ್ಟಾರ್ ಸ್ಮೃತಿ ಮಂಧಾನಗೆ ICC ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಮುಂಬೈ: ಸಂಘಟಿತ‌ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಯುಪಿ ವಾರಿಯರ್ಸ್‌ (UP Warriorz) ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ನೇರವಾಗಿ WPL ಫೈನಲ್‌ ಪ್ರವೇಶಿಸಿದೆ.

    ಮಂಗಳವಾರ ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆದ ಲೀಗ್‌ ಸುತ್ತಿನ ಕೊನೆಯ ಪಂದ್ಯದಲ್ಲಿ ಜಯ ದಾಖಲಿಸುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದು, ನೇರವಾಗಿ ಫೈನಲ್‌ ಪ್ರವೇಶಿಸಿದೆ. ಕ್ರಮವಾಗಿ 2-3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್‌ ಹಾಗೂ ಯುಪಿ ವಾರಿಯರ್ಸ್‌ ಎಲಿಮಿನೇಟರ್‌ ಪಂದ್ಯದಲ್ಲಿ ಸೆಣಸಲಿವೆ. ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. ಇದನ್ನೂ ಓದಿ: WPL 2023: ಮುಂಬೈಗೆ ಜಯ – RCB ಸೋಲಿನ ವಿದಾಯ

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಯುಪಿ ವಾರಿಯರ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 138 ರನ್‌ ಗಳಿಸಿತ್ತು. 139‌ ರನ್‌ ಗುರಿ ಪಡೆದ ಡೆಲ್ಲಿ 17.5 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 142 ರನ್‌ ಗಳಿಸಿ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

    ಆರಂಭಿಕರಾಗಿ ಕಣಕ್ಕಿಳಿದ ನಾಯಕಿ ಮೆಗ್‌ ಲ್ಯಾನಿಂಗ್‌ (Meg Lanning), ಶಫಾಲಿ ವರ್ಮಾ ಉತ್ತಮ ಆರಂಭ ನೀಡಿದರು. ಶಫಾಲಿ 16 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ 21 ರನ್‌ ಗಳಿಸಿದರೆ, ಮೆಗ್‌ ಲ್ಯಾನಿಂಗ್‌ 23 ಎಸತೆಗಳಲ್ಲಿ 39 ರನ್‌ (5 ಬೌಂಡರಿ, 2 ಸಿಕ್ಸರ್‌) ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಅಲಿಸ್‌ ಕ್ಯಾಪ್ಸಿ 34 ರನ್‌ (4 ಬೌಂಡರಿ, 1 ಸಿಕ್ಸರ್‌) ಗಳಿಸಿದರೆ, ಆಲ್‌ರೌಂಡರ್‌ ಮಾರಿಜಾನ್ನೆ ಕಪ್‌ 31 ಎಸೆತಗಳಲ್ಲಿ 34 ರನ್‌ (4 ಬೌಂಡರಿ, 1 ಸಿಕ್ಸರ್‌) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

    ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ 20 ಓವರ್‌ಗಳಲ್ಲಿ ಯುಪಿ ವಾರಿಯರ್ಸ್ ತಂಡ 6 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಪರವಾಗಿ ತಹಿಲಾ ಮೆಕ್‌ಗ್ರಾಥ್ ಅಜೇಯ 58 ರನ್‌ ಗಳಿಸಿ ಏಕಾಂಗಿ ಹೋರಾಟ ನಡೆಸಿದರು. ಇದರೊಂದಿಗೆ ನಾಯಕಿ ಅಲಿಸ್ಸಾ ಹೀಲಿ ಅವರ 36 ರನ್‌ಗಳ ಕೊಡುಗೆ ತಂಡಕ್ಕೆ ನೆರವಾಯಿತು. ಉಳಿದಂತೆ ಯಾರೊಬ್ಬರೂ ಸ್ಥಿರವಾಗಿ ನಿಲ್ಲದ ಕಾರಣ ವಾರಿಯರ್ಸ್‌ ತಂಡ ಸಾಧಾರಣ ಮೊತ್ತವನ್ನಷ್ಟೇ ಗಳಿಸಲು ಶಕ್ತವಾಯಿತು.

    ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಬೌಲಿಂಗ್‌ನಲ್ಲಿ ಅಲಿಸ್‌ ಕ್ಯಾಪ್ಸಿ 3 ವಿಕೆಟ್ ಕಿತ್ತರೆ, ರಾಧಾ ಯಾದವ್ 2 ವಿಕೆಟ್, ಜೆಸ್ ಜೊನಾಸನ್‌ 1 ವಿಕೆಟ್‌ ಪಡೆದು ಮಿಂಚಿದರು.

  • ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಆರ್‌ಸಿಬಿ ಬಹುತೇಕ ಟೂರ್ನಿಯಿಂದ ಔಟ್‌

    ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಆರ್‌ಸಿಬಿ ಬಹುತೇಕ ಟೂರ್ನಿಯಿಂದ ಔಟ್‌

    ಮುಂಬೈ: ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ (WPL 2023) ಸತತ 5 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ಆರ್‌ಸಿಬಿ ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಸೋಮವಾರ ಮುಂಬೈನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಆರ್‌ಸಿಬಿ ವಿರುದ್ಧ ರೋಚಕ ಜಯ ಸಾಧಿಸಿದ್ದು, ಆರ್‌ಸಿಬಿ (RCB) ತಂಡದ ಗೆಲುವಿನ ಕನಸಿಗೆ ತಣ್ಣೀರು ಎರಚಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸ್ಮೃತಿ ಮಂದಾನ ನಾಯಕತ್ವದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 150 ರನ್‌ ಗಳಿಸಿತ್ತು. 151 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 19.4 ಓವರ್‌ಗಳಲ್ಲಿ 154 ರನ್‌ ಬಾರಿಸಿ ರೋಚಕ ಜಯ ಸಾಧಿಸಿದೆ.

    ಕೊನೆಯ ಓವರ್‌ನಲ್ಲಿ ಡೆಲ್ಲಿ ತಂಡದ ಗೆಲುವಿಗೆ 9 ರನ್‌ಗಳ ಅಗತ್ಯವಿತ್ತು. ಈ ವೇಳೆ ಮೊದಲ ಎರಡು ಎಸೆತದಲ್ಲಿ ಒಂದೊಂದು ರನ್‌ ತಂಡಕ್ಕೆ ಸೇರ್ಪಡೆಯಾಯಿತು. ನಂತರ ಕ್ರೀಸ್‌ನಲ್ಲಿ ಉಳಿದ ಜೆಸ್‌ ಜೋನಾಸೆನ್‌ 3ನೇ ಎಸೆತವನ್ನು ಸಿಕ್ಸ್‌ಗೆ, 4ನೇ ಎಸೆತವನ್ನು ಬೌಂಡರಿಗಟ್ಟಿ ಇನ್ನೂ ಎರಡು ಎಸೆತಗಳು ಬಾಕಿಯಿರುವಂತೆ ತಂಡವನ್ನು ಗೆಲ್ಲಿಸಿ ನಗೆಬೀರಿದರು. ಇದನ್ನೂ ಓದಿ: ಕೊನೆಯ ಪಂದ್ಯ ಡ್ರಾ – ಆಸೀಸ್ ವಿರುದ್ಧ ಸರಣಿ ಗೆದ್ದ ಭಾರತ

    ಆರಂಭಿಕ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಮೂರು ಮತ್ತು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಲಿಸ್ ಕ್ಯಾಪ್ಸಿ ಮತ್ತು ಜೆಮಿಮಾ ರೊಡ್ರಿಗಸ್‌ (Jemimah Rodrigues) ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾದರು. ಕ್ಯಾಪ್ಸಿ 24 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 38 ರನ್‌ ಗಳಿಸಿದರೆ, ಜೆಮಿಮಾ 28 ಎಸೆತಗಳಲ್ಲಿ 3 ಬೌಂಡರಿಗಳೊಂದಿಗೆ 32 ರನ್‌ ಕಲೆಹಾಕಿ ತಂಡಕ್ಕೆ ನೆರವಾದರು.

    ನಂತರ ಮಾರಿಜಾನ್ನೆ ಕಪ್‌ ಹಾಗೂ ಜೆಸ್‌ ಜೊನಾಸೆನ್‌ (Jess Jonassen) ಜವಾಬ್ದಾರಿಯು ಬ್ಯಾಟಿಂಗ್‌ ನಿಂದ ತಂಡವನ್ನು ಗೆಲುವಿನ ಹಾದಿಗೆ ತಲುಪಿಸಿದರು. ತಾಳ್ಮೆಯ ಆಟವಾಡಿದ ಈ ಜೋಡಿ ಮುರಿಯದ 5ನೇ ವಿಕೆಟ್‌ಗೆ 45 ರನ್‌ ಕಲೆಹಾಕಿತು. ಮಾರಿಜಾನ್ನೆ ಕಪ್‌ 32 ಎಸೆತಗಳಲ್ಲಿ 32 ರನ್‌ (3 ಬೌಂಡರಿ, 1 ಸಿಕ್ಸರ್‌) ಗಳಿಸಿದ್ರೆ, ಜೊನಾಸೆನ್‌ 15 ಎಸೆತಗಳಲ್ಲಿ ಭರ್ಜರಿ 29 ರನ್‌ (4 ಬೌಂಡರಿ, 1 ಸಿಕ್ಸರ್‌) ಚಚ್ಚಿ ಮಿಂಚಿದರು.

    ಡೆಲ್ಲಿ ತಂಡದ ಪರ ನಾಯಕಿ ಮೆಗ್‌ ಲ್ಯಾನಿಂಗ್‌ (Meg Lanning) 15 ರನ್‌ ಗಳಿಸಿದ್ರೆ, ಶಫಾಲಿ ವರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ಆರ್‌ಸಿಬಿ ಪರ ಸೋಭಾನ ಆಶಾ 2 ವಿಕೆಟ್‌ ಪಡೆದರೆ, ಮೇಗನ್ ಶುಟ್ ಹಾಗೂ ಪ್ರೀತಿ ಬೋಸ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಸಿಕ್ಸರ್, ಬೌಂಡರಿ ಆಟ – ಹರ್ಮನ್‌ಪ್ರೀತ್ ಕೌರ್ ಫಿಫ್ಟಿ; ಮುಂಬೈಗೆ 8 ವಿಕೆಟ್‌ಗಳ ಜಯ

    ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂದಾನ (Smriti Mandhana) ಮತ್ತೊಮ್ಮೆ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿ ಟೀಕೆಗೆ ಗುರಿಯಾದರು. 15 ಎಸೆತಗಳಲ್ಲಿ 8 ರನ್ ಗಳಿಸಿ ಮಂದಾನ ವಿಕೆಟ್‌ ಒಪ್ಪಿಸಿದರು. ಈ ಬೆನ್ನಲ್ಲೇ ಸೋಫಿ ಡಿವೈನ್ 21 ರನ್‌ ಗಳಿಸಿ ಔಟಾದರು. ನಂತರ ಬಂದ ಎಲ್ಲಿಸ್ ಪೆರ್ರಿ 52 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಿಂದ 67 ರನ್ ಬಾರಿಸಿ ತಂಡಕ್ಕೆ ನೆರವಾದರು. ಈ ವೇಳೆ ಜೊತೆಗೂಡಿದ ರಿಚಾ ಘೋಷ್‌ 16 ಎಸೆತಗಳಲ್ಲಿ ಸ್ಫೋಟಕ 37 ರನ್ (3 ಬೌಂಡರಿ, 3 ಸಿಕ್ಸರ್‌) ಬಾರಿಸಿದರೆ, ಕೊನೆಯಲ್ಲಿ ಬಂದ ಶ್ರೇಯಾಂಕ ಪಾಟೀಲ್ 4 ರನ್ ಗಳಿಸಿದರು. ಹೀದರ್ ನೈಟ್ 11 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

    ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಶಿಖಾ ಪಾಂಡೆ 4 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರೆ, ತಾರಾ ನಾರ್ರಿಸ್ 3 ಓವರ್‌ಗಳಲ್ಲಿ 25 ರನ್ ನೀಡಿ 1 ವಿಕೆಟ್ ಪಡೆದರು.

  • ಡೆಲ್ಲಿಗೆ ಡಿಚ್ಚಿ – ಬೌಲರ್‌ಗಳ ಆಟದಲ್ಲಿ ಮುಂಬೈಗೆ 8 ವಿಕೆಟ್‌ಗಳ ಸುಲಭ ಜಯ

    ಡೆಲ್ಲಿಗೆ ಡಿಚ್ಚಿ – ಬೌಲರ್‌ಗಳ ಆಟದಲ್ಲಿ ಮುಂಬೈಗೆ 8 ವಿಕೆಟ್‌ಗಳ ಸುಲಭ ಜಯ

    ಮುಂಬೈ: ಸಾಂಘಿಕ ಬೌಲಿಂಗ್‌ ಪ್ರದರ್ಶನದಿಂದ ಮುಂಬೈ ಇಂಡಿಯನ್ಸ್‌ (Mumbai Indians) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 8 ವಿಕೆಟ್‌ಗಳ ಸುಲಭ ಜಯ ಸಾಧಿಸಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ 18 ಓವರ್‌ಗಳಲ್ಲಿ 105 ರನ್‌ಗಳಿಗೆ ಸರ್ವಪತನ ಕಂಡಿತು. 106 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ನಾಯಕತ್ವದ ಮುಂಬೈ ಇಂಡಿಯನ್ಸ್‌ ತಂಡ 15 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 109 ರನ್‌ ಗಳಿಸಿ ಸುಲಭ ಜಯ ಸಾಧಿಸಿತು. ಈ ಮೂಲಕ ಪಾಯಿಂಟ್ಸ್‌ ಟೇಬಲ್‌ ಪಟ್ಟಿಯಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿ ಅಗ್ರ ಸ್ಥಾನಕ್ಕೇರಿತು.

    ಆರಂಭಿಕರಾಗಿ ಕಣಕ್ಕಿಳಿದ ಹೇಲಿ ಮ್ಯಾಥ್ಯೂಸ್‌ (Hayley Matthews), ಯಸ್ತಿಕಾ ಭಾಟಿಯಾ ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದರೂ ಉತ್ತಮ ರನ್‌ ಕಲೆಹಾಕುವಲ್ಲಿ ಯಶಸ್ವಿಯಾದರು. ಮುಂಬೈ ಮೊದಲ ವಿಕೆಟ್‌ ಪತನಕ್ಕೆ 8.5 ಓವರ್‌ಗಳಲ್ಲಿ 65 ರನ್‌ ಕಲೆಹಾಕಿತು. ಈ ವೇಳೆ ಯಸ್ತಿಕಾ ಭಾಟಿಯಾ 32 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 41 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ಹೇಲಿ ಮ್ಯಾಥ್ಯೂಸ್‌ ಸಹ 31 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 32 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ನಂತರ ಜೊತೆಗೂಡಿದ ನ್ಯಾಟ್ ಸ್ಕಿವರ್-ಬ್ರಂಟ್ ಹಾಗೂ ಹರ್ಮನ್‌ಪ್ರೀತ್‌ ಕೌರ್‌ ಜೋಡಿ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಯಿತು. ಸ್ಕಿವರ್‌ 19 ಎಸೆತಗಳಲ್ಲಿ 4 ಬೌಂಡರಿ ಸಹಿತ 23 ರನ್‌ ಚಚ್ಚಿದರೆ, ಕೌರ್‌ 11 ರನ್‌ ಗಳಿಸಿದರು. ಇತರೇ ರೂಪದಲ್ಲಿ 2 ರನ್‌ ತಂಡಕ್ಕೆ ಸೇರ್ಪಡೆಯಾಯಿತು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಮುಂಬೈ ಬೌಲರ್‌ಗಳ ದಾಳಿಗೆ ತತ್ತರಿಸಿತು. ಶಫಾರ್ಲಿ ವರ್ಮಾ (Shafali Verma) ಕೇವಲ 2 ರನ್‌ಗಳಿಸಿ ಔಟಾಗುವ ಮೂಲಕ ಡೆಲ್ಲಿ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಬಳಿಕ ಏಕಾಂಗಿ ಹೋರಾಟ ನಡೆಸಿದ ನಾಯಕಿ ಮೆಗ್‌ ಲ್ಯಾನಿಂಗ್‌ 41 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 43 ರನ್‌ ಗಳಿಸಿದರು. ಇದರೊಂದಿಗೆ ಜೆಮಿಮಾ ರೊಡ್ರಿಗಸ್‌ 25 ರನ್‌ (18 ಎಸೆತ, 3 ಬೌಂಡರಿ) ಗಳಿಸಿ ಸಾತ್‌ ನೀಡಿದರು. ಕೊನೆಯಲ್ಲಿ ಕ್ರೀಸ್‌ಗಿಳಿದ ರಾಧಾ ಯಾದವ್‌ 10 ರನ್‌ ಗಳಿಸಿದ್ರೆ, ಉಳಿದ ಎಲ್ಲ ಬ್ಯಾಟರ್‌ಗಳು ಒಂದಂಕಿ ರನ್‌ಗಳಿಸಿ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿದರು.

    ಪರಿಣಾಮ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ರನ್‌ ಕಲೆಹಾಕಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 105 ಗಳಿಸಿ ಮುಂಬೈಗೆ ಸುಲಭ ತುತ್ತಾಯಿತು.

    ಬೌಲರ್‌ಗಳ ಕಮಾಲ್‌: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸಾಂಘಿಕ ಪ್ರದರ್ಶನ ನೀಡಿದ ಬೌಲರ್‌ಗಳು ಅತ್ಯಲ್ಪ ಮೊತ್ತಕ್ಕೆ ಡೆಲ್ಲಿ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಸೈಕಾ ಇಶಾಕ್, ಇಸೀ ವಾಂಗ್ ಹಾಗೂ ಹೇಲಿ ಮ್ಯಾಥ್ಯೂಸ್ ತಲಾ 3 ವಿಕೆಟ್ ಕಬಳಿಸಿದರೆ, ಪೂಜಾ ವಸ್ತ್ರಾಕರ್ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಮಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ

    ಪಾಕ್ ಬೌಲರ್‌ಗಳ ಬೆವರಿಳಿಸಿದ ಜೆಮಿಮಾಗೆ ಸ್ಫೂರ್ತಿಯಾಗಿದ್ದು ಕೊಹ್ಲಿ ಇನ್ನಿಂಗ್ಸ್ǃ

    ಕೇಪ್‌ಟೌನ್: ಭಾರತ ಮಹಿಳಾ ಕ್ರಿಕೆಟ್ ತಂಡದ ಜೆಮಿಮಾ ರಾಡ್ರಿಗಸ್ (Jemimah Rodrigues) ಹಾಗೂ ರಿಚಾ ಘೋಷ್ (Richa Ghosh) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ T20 ಮಹಿಳಾ ವಿಶ್ವಕಪ್ ಟೂರ್ನಿಯ (ICC Women’s T20 World Cup) ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಜಯ ಸಾಧಿಸಿತು.

    ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಅಬ್ಬರಿಸಿದ ಜೆಮಿಮಾ 38 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ ಅಜೇಯ 53 ರನ್ ಸಿಡಿಸಿದರು. ಇದೀಗ ತನ್ನ ಭರ್ಜರಿ ಆಟಕ್ಕೆ ಸ್ಫೂರ್ತಿಯಾಗಿದ್ದು, ಕೊಹ್ಲಿ (Virat Kohli) ಇನ್ನಿಂಗ್ಸ್ ಅನ್ನೋದನ್ನ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಜೆಮಿಮಾ, ರಿಚಾ ಭರ್ಜರಿ ಬ್ಯಾಟಿಂಗ್‌ – ಪಾಕ್‌ ವಿರುದ್ಧ 7 ವಿಕೆಟ್‌ಗಳ ಜಯ

    ಹೌದು… ಕಳೆದ ವರ್ಷ ಟಿ20 ಪುರುಷರ ವಿಶ್ವಕಪ್ (T20 World Cup) ಆರಂಭಿಕ ಪಂದ್ಯದಲ್ಲೇ ಪಾಕಿಸ್ತಾನದ ಎದುರು ವಿರಾಟ್ ಕೊಹ್ಲಿ (Virat Kohli) 53 ಎಸೆತಗಳಲ್ಲಿ 82 ರನ್ ಚಚ್ಚಿದ್ದರು. ಕೊನೆಯ 20 ನಿಮಿಗಳಲ್ಲಿ ಕೊಹ್ಲಿಯ ಇನ್ನಿಂಗ್ಸ್ ಅತ್ಯಂತ ಸ್ಫೂರ್ತಿದಾಯಕವಾಗಿತ್ತು. ಕೊಹ್ಲಿ ಅವರ ಬಿರುಸಿನ ಬ್ಯಾಟಿಂಗ್ ನನಗೆ ಸ್ಫೂರ್ತಿದಾಯಕವಾಯಿತು. ಭಾನುವಾರದ ಪಂದ್ಯ ನನಗೆ ಆ ಒಂದು ನೆನಪನ್ನ ನೆನಪಿಸಿತು ಎಂದು ಜೆಮಿಮಾ ಹೇಳಿಕೊಂಡಿದ್ದಾರೆ.

    ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಗಳು ಯಾವಾಗಲೂ ವಿಶೇಷ ಮತ್ತು ರೋಚಕತೆಯಿಂದ ಕೂಡಿರುತ್ತವೆ. ಈ ಬಗ್ಗೆ ನಾವು ತಂಡದಲ್ಲೂ ಮಾತನಾಡಿದ್ದೇವೆ. ನಾವು ಯಾವಾಗಲೂ ಈ ಪಂದ್ಯಗಳನ್ನು ನೋಡುತ್ತಿದ್ದೇವು. ಅದರಲ್ಲೂ ವಿರಾಟ್ ಕೊಹ್ಲಿ ಅವರ ಪಂದ್ಯ ವೀಕ್ಷಿಸಿದ್ದು ನನಗೆ ಈಗಲೂ ನೆನಪಿದೆ ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: `ನನ್ನ ಹೆಂಡತಿಗಿಂತ ಹೆಚ್ಚಾಗಿ ವಿರಾಟ್ ಕೊಹ್ಲಿಯನ್ನ ಪ್ರೀತಿಸುತ್ತೀನಿ’ – ಅಭಿಮಾನಿ ಪೋಸ್ಟರ್‌ಗೆ ನೆಟ್ಟಿಗರು ಫಿದಾ

    ಕೊನೆಯ 10, T20 ಅಂತಾರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ ಜೆಮಿಮಾ 30ಕ್ಕಿಂತಲೂ ಕಡಿಮೆ ರನ್ ಗಳಿಸಿದ್ದರು. ಆದರೆ ಪಾಕ್ ಎದುರು ವಿಶ್ವಾಸದಿಂದ ಕಣಕ್ಕಿಳಿದ್ದ ತಾರೆ, ಬೌಂಡರಿಗಳ ಮಳೆ ಸುರಿಸಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.

    ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಸಹ ಟ್ವೀಟ್ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k