Tag: jersy

  • ಟೀಂ ಇಂಡಿಯಾ ಪ್ರಾಕ್ಟೀಸ್ ಜೆರ್ಸಿ, ಮೆಟ್ರೋ ಸ್ಟೇಷನ್‍ಗೂ ಕೇಸರಿ ಬಣ್ಣ- ಕೇಂದ್ರದ ವಿರುದ್ಧ ದೀದಿ ವಾಗ್ದಾಳಿ

    ಟೀಂ ಇಂಡಿಯಾ ಪ್ರಾಕ್ಟೀಸ್ ಜೆರ್ಸಿ, ಮೆಟ್ರೋ ಸ್ಟೇಷನ್‍ಗೂ ಕೇಸರಿ ಬಣ್ಣ- ಕೇಂದ್ರದ ವಿರುದ್ಧ ದೀದಿ ವಾಗ್ದಾಳಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ಸಿಎಂ ಮಮತಾ ಬ್ಯಾನರ್ಜಿಯವರು (Mamata Banerjee) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟೀಂ ಇಂಡಿಯಾದ ಪ್ರ್ಯಾಕ್ಟೀಸ್ ಜೆರ್ಸಿಯಲ್ಲಿ ಇರುವ ಕೇಸರಿ ಬಣ್ಣವನ್ನು ಕಟುವಾಗಿ ವಿರೋಧಿಸಿದ್ದಾರೆ.

    ಪೊಸ್ತಾ ಬಝಾರ್‍ನಲ್ಲಿ ಜಗಧಾತ್ರಿ ಪೂಜಾದ ಉದ್ಘಾಟನೆ ವೇಳೆ ಮಾತನಾಡಿದ ಅವರು, ಟೀಂ ಇಂಡಿಯಾದ (Team India Jersy) ಅಭ್ಯಾಸ ಜೆರ್ಸಿಗಳಲ್ಲಿ ಕೇಸರಿ ಬಣ್ಣ ಅಲ್ಲದೇ ಮೆಟ್ರೋ ಸ್ಟೇಷನ್‍ಗಳ ಗೋಡೆಗಳಿಗೂ ಕೇಸರಿ ಬಣ್ಣವನ್ನು ಬಳಿಯಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರವು ಹಲವು ಸಂಸ್ಥೆಗಳನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

    ಈ ಹಿಂದೆ ಅವರು ನೀಲಿ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಆದರೆ ಇದೀಗ ಬಿಜೆಪಿಯವರು (BJP) ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಮಗೆ ಹೆಮ್ಮೆ, ಅಭಿಮಾನ ಹೊಂದಿದ್ದೇವೆ. ವಿಶ್ವಕಪ್ ನಲ್ಲಿ ಗೆಲ್ಲುತ್ತಾರೆಂದು ನಂಬುತ್ತೇನೆ. ಆದರೆ ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ. ಇತ್ತ ಮೆಟ್ರೋ ಸ್ಟೇಷನ್‍ಗಳಿಗೂ ಕೇಸರಿ ಬಳಿಯಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.

    ಭಾರತ ದೇಶವು ಇಲ್ಲಿನ ಜನರಿಗೆ ಸೇರಿದ್ದಾಗಿದೆ ಹೊರತು ಕೇವಲ ಬಿಜೆಪಿಯವರಿಗೆ ಸೇರಿದ್ದಲ್ಲ. ಅಧಿಕಾರ ನಿಂತ ನೀರಲ್ಲ, ಬರುತ್ತದೆ ಹೋಗುತ್ತದೆ. ಆದರೆ ಇಂತಹದ್ದೆಲ್ಲಾ ಯಾವ ಕಾರಣಕ್ಕೂ ಫಲ ನೀಡುವುದಿಲ್ಲ ಎಂದು ದೀದಿ ಗುಡುಗಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

  • ಪ್ರಧಾನಿ ಮೋದಿಗೆ ‘ನಮೋ’ ಜೆರ್ಸಿ ಗಿಫ್ಟ್ ನೀಡಿದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್

    ಪ್ರಧಾನಿ ಮೋದಿಗೆ ‘ನಮೋ’ ಜೆರ್ಸಿ ಗಿಫ್ಟ್ ನೀಡಿದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶನಿವಾರ) ಉತ್ತರ ಪ್ರದೇಶದ (Uttar Pradesh) ವಾರಣಾಸಿಯಲ್ಲಿ (Varanasi) ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ (International Cricket Stadium) ಶಂಕುಸ್ಥಾಪನೆ ಮಾಡಿದ್ದಾರೆ. ಈ ಸಂದರ್ಭ ಭಾರತದ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ (Sachin Tendulkar), ನರೇಂದ್ರ ಮೋದಿಯವರಿಗೆ ಭಾರತೀಯ ಕ್ರಿಕಟ್ ತಂಡದ ಜೆರ್ಸಿಯನ್ನು (Jersy) ಉಡುಗೊರೆಯಾಗಿ ನೀಡಿದರು.

    ಈ ಸಂದರ್ಭ ರವಿಶಾಸ್ತ್ರಿ, ಸುನಿಲ್ ಗವಾಸ್ಕರ್ ಮತ್ತು ದಿಲೀಪ್ ಉಪಸ್ಥಿತರಿದ್ದರು. ಜೆರ್ಸಿ ಹಿಂಭಾಗದಲ್ಲಿ ‘ನಮೋ’ ಎಂದು ಬರೆಯಲಾಗಿದೆ. ತೆಂಡೂಲ್ಕರ್ ಮೋದಿಗೆ ಜೆರ್ಸಿ ಉಡುಗೊರೆ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ

    ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಕೂಡಾ ಭಾಗವಹಿಸಿದ್ದು, ಪ್ರಧಾನಿ ಮೋದಿಯವರು ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಾರಣಾಸಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಅಡಿಪಾಯ ಹಾಕಿದ್ದಾರೆ. ರಾಜ್ಯದ ಪ್ರತಿಯೊಬ್ಬ ಕ್ರೀಡಾ ಉತ್ಸಾಹಿ ಪರವಾಗಿ ನಾನು ಮೋದಿಯವರನ್ನು ಸ್ವಾಗತಿಸುತ್ತೇನೆ ಎಂದರು. ಇದನ್ನೂ ಓದಿ: ICC Ranking: ಭಾರತ ನಂ.1 – ಕ್ರಿಕೆಟ್‌ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ

    ವಾರಣಾಸಿಯಲ್ಲಿ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಮಿಷನ್ ಸಹಾಯದಿಂದ ಒಂದು ಕ್ರೀಡಾಂಗಣ ನಿರ್ಮಾಣ ಹಂತದಲ್ಲಿದೆ. ಇದು ಉತ್ತರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ಕ್ರೀಡಾಂಗಣವಾಗಿದ್ದು, ಬಿಸಿಸಿಐ ಮೇಲ್ವಿಚಾರಣೆಯಲ್ಲಿ ನಿರ್ಮಿಸಲಾದ ಮೊದಲ ಕ್ರೀಡಾಂಗಣ ಇದಾಗಿದೆ. ಯುಪಿಗೆ ಈ ಉಡುಗೊರೆ ನೀಡಿದ್ದಕ್ಕಾಗಿ ಬಿಸಿಸಿಐ ಮತ್ತು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ವಿಶ್ವಕಪ್‌ ಟೂರ್ನಿಯಲ್ಲಿ ಗೆದ್ದರೂ ಸೋತರೂ ದುಡ್ಡೋ ದುಡ್ಡು – ಬಹುಮಾನದ ಮೊತ್ತ ಪ್ರಕಟಿಸಿದ ICC

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕ್ರೀಡಾಂಗಣಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು 121 ಕೋಟಿ ರೂ. ಖರ್ಚು ಮಾಡಿದ್ದು, ಬಿಸಿಸಿಐ ಅದರ ನಿರ್ಮಾಣಕ್ಕೆ 330 ಕೋಟಿ ರೂ.ಗಳನ್ನು ಖರ್ಚು ಮಾಡಲಿದೆ. ಇದನ್ನೂ ಓದಿ: ಚಂದ್ರಯಾನ-3 ಲ್ಯಾಂಡರ್‌, ರೋವರ್‌ನಿಂದ ಸಿಗ್ನಲ್‌ ಸಿಗ್ತಿಲ್ಲ: ಇಸ್ರೋ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೀಂ ಭಾರತ್ ಅಂತಾ ಜೆರ್ಸಿ ಬದಲಿಸಿ – ಬಿಸಿಸಿಐಗೆ ಸೆಹ್ವಾಗ್ ಆಗ್ರಹ

    ಟೀಂ ಭಾರತ್ ಅಂತಾ ಜೆರ್ಸಿ ಬದಲಿಸಿ – ಬಿಸಿಸಿಐಗೆ ಸೆಹ್ವಾಗ್ ಆಗ್ರಹ

    ನವದೆಹಲಿ: `ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ (Republic Of Bharat) ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ ಬೆನ್ನಲ್ಲೇ ಈಗ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ (Virender Sehwag) ಅವರು ಬಿಸಿಸಿಐಗೆ ಆಗ್ರಹವೊಂದನ್ನು ಮಾಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಸೆಹ್ವಾಗ್, ಟೀಂ ಇಂಡಿಯಾದ (Team India) ಜೆರ್ಸಿಯಲ್ಲಿ ಹೆಸರು ಬದಲಾವಣೆ ಮಾಡಿ. ಟೀಂ ಇಂಡಿಯಾ ಬದಲಿಗೆ ಟೀಂ ಭಾರತ್ (Team Bharat) ಅಂತ ಜೆರ್ಸಿ ಬದಲಿಸುವಂತೆ ಬಿಸಿಸಿಐಗೆ (BCCI) ಮಾಜಿ ಕ್ರಿಕೆಟಿಗ ಒತ್ತಾಯಿಸಿದ್ದಾರೆ. ಅಲ್ಲದೆ ಈ ವಿಶ್ವಕಪ್‍ನಲ್ಲಿ ನಾವು ಕೊಹ್ಲಿ, ರೋಹಿತ್, ಬುಮ್ರಾ, ಜಡೇಜಾ ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತೀಯರು ಎಂಬುದೇ ಇರಲಿ ಮತ್ತು ಆಟಗಾರರು `ಭಾರತ್’ ಇರುವ ಜೆರ್ಸಿಯನ್ನು ಧರಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

    ವೀರೇಂದ್ರ ಸೆಹ್ವಾಗ್‌ ಮೊದಲೇ ಭಾರತ್‌ ಹೆಸರನ್ನು ಟ್ವೀಟ್‌ ಮಾಡಿದ್ದರು. ಭಾರತ- ಪಾಕಿಸ್ತಾನ (India Pakistan) ನಡುವಿನ ಏಷ್ಯಕಪ್‌ (Asia Cup) ಕ್ರಿಕೆಟ್‌ ಪಂದ್ಯದ ವೇಳೆ #BHAvsPAK ಎಂಬ ಹ್ಯಾಶ್‌ಟ್ಯಾಗ್‌ ಬಳಸಿದ್ದರು.

    ಇತ್ತ Board of Control for Cricket in India (BCCI) ಬದಲು Board of Control for Cricket in BHARAT (BCCB) ಎಂಬುದಾಗಿ ಬದಲಾಯಿಸಬೇಕು ಎಂಬ ಕೂಗು ಕೂಡ ಎದ್ದಿದೆ. ಒಟ್ಟಿನಲ್ಲಿ `ಇಂಡಿಯಾ’ ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]