Tag: Jhatka Cut

  • ಯುಗಾದಿ ಹಬ್ಬದಂದು ಮತ್ತೆ ಮುನ್ನೆಲೆಗೆ ಬಂತು ಹಲಾಲ್ ಬಾಯ್ಕಾಟ್ ಅಭಿಯಾನ

    ಯುಗಾದಿ ಹಬ್ಬದಂದು ಮತ್ತೆ ಮುನ್ನೆಲೆಗೆ ಬಂತು ಹಲಾಲ್ ಬಾಯ್ಕಾಟ್ ಅಭಿಯಾನ

    ಬೆಂಗಳೂರು: ಹಲಾಲ್ ಬಾಯ್ಕಾಟ್ (Halal Boycott) ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದ್ದು, ಹಲಾಲ್ ಮುಕ್ತ ಯುಗಾದಿ (Yugadi) ಹಬ್ಬದ ಆಚರಣೆಗಾಗಿ ರಾಜಧಾನಿಯಲ್ಲಿ ಮಂಗಳವಾರದಿಂದ ಹಲಾಲ್ ಬಾಯ್ಕಾಟ್ ಅಭಿಯಾನ ಶುರುವಾಗಲಿದೆ.

    ಹಿಂದೂಪರ ಸಂಘಟನೆಯ ಕಾರ್ಯಕರ್ತರು ಈ ಅಭಿಯಾನವನ್ನು ಪ್ರಾರಂಭಿಸಿದ್ದು, ಮಧ್ಯಾಹ್ನ ೧ ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹಲಾಲ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಎರಡು ಗಂಟೆಗೆ ಸರಿಯಾಗಿ ಬೆಂಗಳೂರು (Bengaluru) ನಗರದ ಜಿಲ್ಲಾಧಿಕಾರಿಗಳ ಮೂಲಕ ಹಲಾಲ್ ಸರ್ಟಿಫಿಕೇಟ್ ಬ್ಯಾನ್ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ 6 ವರ್ಷವಿದ್ದು ಮಗು ಮಾಡಿಕೊಂಡಿದ್ದ ಮಹಿಳೆ – ವಿಷಯ ತಿಳಿಯುತ್ತಲೇ ಪತಿಯಿಂದ ಪತ್ನಿ ಕೊಲೆ

    ಸಂಜೆ ನಾಲ್ಕು ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರೋಡಿನಲ್ಲಿ ಅಭಿಯಾನವನ್ನು ನಡೆಸಲಿದ್ದು, ನಗರದಾದ್ಯಂತ ಭಿತ್ತಿಪತ್ರ ಹಂಚುವ ಮೂಲಕ ಹಲಾಲ್ ಮುಕ್ತ ಯುಗಾದಿ ಹಬ್ಬ ಆಚರಣೆ ಮಾಡುವಂತೆ ಜನರಲ್ಲಿ ಮನವಿ ಮಾಡಲಿದ್ದಾರೆ. ಸಂಜೆ ೫ ಗಂಟೆಗೆ ವಿಜಯನಗರದ (Vijayanagara) ಸಂಕಷ್ಟಹರ ಗಣಪತಿ ದೇವಸ್ಥಾನ ಸೇರಿದಂತೆ ಹಲವೆಡೆ ಅಭಿಯಾನ ನಡೆಸಲಿದ್ದಾರೆ. ಈ ಮೂಲಕ ಗುರುವಾರದ ಹೊಸತೊಡಕಿಗೆ ಹಿಂದೂ ಸಂಪ್ರದಾಯದಂತೆ ಜಟ್ಕಾಕಟ್ (Jhatka Cut) ಮಾಂಸ ಖರೀದಿ ಮಾಡುವಂತೆ ಮನವಿ ಮಾಡಲಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಯುಗಾದಿ ಹಬ್ಬಕ್ಕೆ ಹರಿದ ಸೀರೆ ಹಂಚಿದ್ರಾ ಕಾಂಗ್ರೆಸ್ ಶಾಸಕ?

    ಹಿಂದೂ ಜನಜಾಗೃತಿ ವೇದಿಕೆಯ ಮೋಹನ್ ಗೌಡ, ಹಿಂದೂಪರ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಹಾಗೂ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಶ್ರೀರಾಮಸೇನೆ, ಹಿಂದೂ ದಲಿತ ಸೇನೆ, ಹಿಂದೂ ಜನಜಾಗೃತಿ, ರಾಷ್ಟ್ರ ರಕ್ಷಣಾ ಪಡೆ ಸೇರಿದಂತೆ ಬಜರಂಗದಳದ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಡಿನೋಟಿಫಿಕೇಶನ್‌ ಕೇಸ್‌ – ಅಧಿಕ ರಕ್ತದೊತ್ತಡ ಕಾರಣ ನೀಡಿ ಕೋರ್ಟ್‌ ವಿಚಾರಣೆಗೆ ಎಚ್‌ಡಿಕೆ ಗೈರು

  • ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    ಬೆಂಗಳೂರು: ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಸಜ್ಜಾಗಿದೆ.

    ಹಿಂದೂಪರ ಸಂಘಟನೆಗಳು ಯುಗಾದಿ ಹೊಸತೊಡುಕು ವೇಳೆ ಹಲಾಲ್ ಕಟ್ ಮಾಂಸವನ್ನು ಬಿಟ್ಟು, ಹಿಂದೂಗಳು ಜಟ್ಕಾ ಕಟ್ ಮಾಂಸವನ್ನು ಖರೀದಿಸಿ ಸೇವೆಸಬೇಕು ಎಂದು ಅಭಿಯಾನ ನಡೆಸಿದ್ದರು. ಅದರಂತೆ ಬುಧವಾರ ಹಲಾಲ್ ಕಟ್ ಮಾಂಸಕ್ಕಿಂತಲೂ ಜಟ್ಕಾ ಕಟ್ ಮಾಂಸವನ್ನು ಜನ ಹೆಚ್ಚಾಗಿ ಖರೀದಿಸಿದ್ದು, ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿದೆ.

    ಇದರ ಬೆನ್ನಲ್ಲೇ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ ಸೌಂಡ್ ಬ್ಯಾನ್ ಮಾಡಲು ಮುಂದಾಗಿದ್ದಾರೆ. ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲು ಹಿಂದೂ ಪರ ಸಂಘಟನೆ ತಯಾರಿ ನಡೆಸಿದೆ. ಇದನ್ನೂ ಓದಿ: ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ: ರಾಜ್ ಠಾಕ್ರೆ

    ಎಂಎನ್‍ಎಸ್ ಹೋರಾಟ
    ಮಸೀದಿಗಳ ಮುಂದೆ ಧ್ವನಿ ವರ್ಧಕಗಳನ್ನು ತೆಗೆಸದಿದ್ದರೆ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರದ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಶನಿವಾರ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಭಾನುವಾರ ಮುಂಬೈನ ಘಾಟ್‍ಕೋಪರ್‍ನಲ್ಲಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಚೇರಿಯಲ್ಲಿ ಧ್ವನಿವರ್ಧಕದಿಂದ ಹನುಮಾನ್ ಚಾಲೀಸ್ ನುಡಿಸಲಾಗಿದೆ.

    ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಠಾಕ್ರೆ ಧ್ವನಿವರ್ಧಕಗಳನ್ನು ಬಳಸುವ ಮಸೀದಿಗಳಿಗೆ ಎಚ್ಚರಿಕೆ ನೀಡುತ್ತೇನೆ. ಧ್ವನಿವರ್ಧಕಗಳನ್ನು ತೆಗೆದು ಹಾಕಿ. ಇಲ್ಲದಿದ್ದರೆ ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದಿದ್ದರು. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾ ಕಟ್ ಎಂದರೇನು?

    ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲೇ ಪ್ರಾರ್ಥನೆ ಮಾಡಬಹುದು. ಆದರೆ ಮಸೀದಿಗಳಲ್ಲಿ ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ, ಮಕ್ಕಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.

  • ಜಟ್ಕಾ ಮೀಟ್ ಅಂಗಡಿ ತೆರೆದು ಹಿಂದೂ ಧರ್ಮದ ಯುವಕರು ಆರ್ಥಿಕವಾಗಿ ಬಲಿಷ್ಠರಾಗಿ: ಕಾಳಿ ಸ್ವಾಮಿ

    ಜಟ್ಕಾ ಮೀಟ್ ಅಂಗಡಿ ತೆರೆದು ಹಿಂದೂ ಧರ್ಮದ ಯುವಕರು ಆರ್ಥಿಕವಾಗಿ ಬಲಿಷ್ಠರಾಗಿ: ಕಾಳಿ ಸ್ವಾಮಿ

    ತುಮಕೂರು: ಹಿಂದೂ ಧರ್ಮದ ಯುವಕರು ಜಟ್ಕಾ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು ಬಲಿಷ್ಠಗೊಳಿಸಬೇಕು ಎಂದು ಕಾಳಿ ಸ್ವಾಮೀಜಿ ಕರೆ ನೀಡಿದರು.

    ತುಮಕೂರಿನ ಟೌನ್‍ಹಾಲ್ ವೃತ್ತದಲ್ಲಿರುವ ನಾಗರಕಟ್ಟೆ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಏಕತೆಯ ಹಿಂದುತ್ವ ಎಲ್ಲರನ್ನು ಒಟ್ಟುಗೂಡಿಸಬೇಕು ಈ ಮೂಲಕ ಆರ್ಥಿಕವಾಗಿ ಹಿಂದೂ ಧರ್ಮದವರು ಬಲಿಷ್ಠರಾಗಬೇಕು. ಹಿಂದೂ ಧರ್ಮದ ಯುವಕರು ಜಿಲ್ಲೆಯಾದ್ಯಂತ ಹಿಂದೂ ಜಟ್ಕಾ ಮೀಟ್ ಅಂಗಡಿಯನ್ನು ತೆರೆಯಬೇಕು ಎಂದರು. ಇದನ್ನೂ ಓದಿ: ಮಸೀದಿ ಸಮೀಪ ಹನುಮಾನ್ ಚಾಲೀಸಾ ಹಾಕಿದ ಎಂಎನ್‌ಎಸ್

    ತುಮಕೂರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಿಂದೂ ಜಟ್ಕಾ ಮೀಟ್ ಅಂಗಡಿಗಳನ್ನು ತೆರೆದು ಹಿಂದೂ ಧರ್ಮವನ್ನು ಜಾಗೃತಗೊಳಿಸಬೇಕಾಗಿದೆ. ಹಿಂದೂ ಧರ್ಮದ ಯುವಕರು ಅಂಗಡಿಗಳನ್ನು ತೆರೆಯಲು ಮುಂದಾದರೆ ಅಂತಹ ಯುವಕರನ್ನು ಗುರುತಿಸಿ ತರಬೇತಿಗಳನ್ನು ನೀಡಿ ಅಂಗಡಿಗಳನ್ನು ತೆರೆಯಲು ಬೇಕಾದ ಸಹಕಾರವನ್ನು ತುಮಕೂರಿನ ಹಿಂದೂಪರ ಸಂಘಟನೆಗಳು ಮಾಡಲಿವೆ. ಈ ಮೂಲಕ ಹಿಂದೂ ಧರ್ಮದ ಯುವಕರ ಉದ್ಯೋಗವನ್ನು ತಾವೇ ಸೃಷ್ಟಿ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರನ್ನು ಇನ್ನು ಯಾರಿಂದಲೂ ಓಡಿಸಲು ಸಾಧ್ಯವಿಲ್ಲ: ಮೋಹನ್ ಭಾಗವತ್

  • ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    ಬೆಂಗಳೂರು(ಆನೇಕಲ್): ಹೊಸತೊಡುಕು ಹಿನ್ನೆಲೆ, ನೇಕಲ್ ಪಟ್ಟಣದಲ್ಲಿ ಮಾಂಸ ಖರೀದಿ ಭರಾಟೆ ಭರ್ಜರಿಯಾಗಿದೆ. ಜಟ್ಕಾ ಕಟ್ ಅಂಗಡಿಗಳ ಮುಂದೆ ಕೇಸರಿ ಧ್ವಜ ಕಟ್ಟಿ ವ್ಯಾಪಾರಸ್ಥರು ಮಾರಾಟ ಮಾಡುತ್ತಿದ್ದಾರೆ.

    ಜಟ್ಕಾ ಕಟ್ ಅಂಗಡಿಗಳ ಮುಂದೆ ಕೇಸರಿ ಧ್ವಜ ಕಟ್ಟಿ ಬನ್ನೇರುಘಟ್ಟದಲ್ಲಿ ಭರ್ಜರಿ ಮಾಂಸ ಮಾರಾಟ ಮಾಡುತ್ತಿದ್ದಾರೆ. ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಪಂಚಾಯಿತಿಯಿಂದ ನೋಟಿಸ್ ನೀಡಿ 650 ರೂ.ಗೆ ಮಾರಾಟ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಬನ್ನೇರುಘಟ್ಟದಲ್ಲಿ 800 ರೂ.ಗೆ ಮಟನ್ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಇದೆಲ್ಲದರ ನಡುವೆ ಕೇಸರಿ ಧ್ವಜ ಅಂಗಡಿಗಳ ಮುಂದೆ ರಾರಾಜಿಸುತ್ತಿದೆ.

    ಹೊಸಕೋಟೆ ಮತ್ತು ಆನೇಕಲ್ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ಮಾಂಸದ ಮಾರುಕಟ್ಟೆಯಲ್ಲಿ ಬೆಳಗ್ಗೆಯಿಂದ ಮಾಂಸ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಹಬ್ಬದ ಬಾಡೂಟಕ್ಕೆ ಚಿಕನ್, ಮಟನ್ ಖರೀದಿಗೆ ಈ ಬಾರಿ ಆನೇಕಲ್‌ ಮತ್ತು ಹೊಸಕೋಟೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಂಸದ ಅಂಗಡಿಗಳನ್ನು ತೆರೆಯಲಾಗಿದೆ.

  • ಬೆಣ್ಣೆನಗರಿಯಲ್ಲಿ ನಾನ್ ವೆಜ್ ಸ್ಟಾಲ್‍ಗಳು ಖಾಲಿ ಖಾಲಿ.. ಏಕೆ ಗೊತ್ತಾ?

    ಬೆಣ್ಣೆನಗರಿಯಲ್ಲಿ ನಾನ್ ವೆಜ್ ಸ್ಟಾಲ್‍ಗಳು ಖಾಲಿ ಖಾಲಿ.. ಏಕೆ ಗೊತ್ತಾ?

    ದಾವಣಗೆರೆ:  ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ಮಾಂಸ ಮಾರಾಟ ಸ್ಥಳಗಳು ಗಿಜಿಗುಡುತ್ತವೆ. ಆದರೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಮಾತ್ರ ಮಟನ್, ಚಿಕನ್ ಮಾರುಕಟ್ಟೆಗಳು ಸಂಪೂರ್ಣ ಖಾಲಿ ಖಾಲಿಯಾಗಿವೆ.

    ಬೆಳಗ್ಗೆ 8 ಗಂಟೆಯಾದರೂ ಜನರು ಮಟನ್, ಚಿಕನ್ ಖರೀದಿಗೆ ಆಗಮಿಸಿಲ್ಲ. ನಿನ್ನೆ ಚಂದ್ರ ದರ್ಶನವಾಗಿದ್ದರೆ ಇಂದು ನಾನ್ ವೆಜ್ ಮಾಡುತ್ತಿದ್ದರು. ಆದರೆ ಚಂದ್ರ ದರ್ಶನವಾಗದ ಹಿನ್ನೆಲೆ ಇಂದು ಕೂಡ ಸಿಹಿ ಮಾಡಿ ಇಂದು ಚಂದ್ರ ದರ್ಶನವಾದರೆ ನಾಳೆ ನಾನ್ ವೆಜ್ ಮಾಡುತ್ತಾರೆ.

    ಈ ಬಗ್ಗೆ ಇಲ್ಲಿನ ಮಟನ್ ವ್ಯಾಪಾರಸ್ಥರು ಮಾತನಾಡಿ, ಜಟ್ಕಾ ಕಟ್, ಹಲಾಲ್ ವಿವಾದ ಇಲ್ಲಿ ಇಲ್ಲ. ಮುಂದೆ ಹೇಗೆ ಬರುತ್ತೋ ನೋಡಿಕೊಂಡು ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಇಲ್ಲಿಯವರೆಗೂ ಯಾವುದೇ ಆ ರೀತಿಯ ವಿವಾದ ಇಲ್ಲಿಗೆ ಬಂದಿಲ್ಲ. ಎಲ್ಲರೂ ಕೂಡ ಸೌಹಾರ್ದಯುತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಚಿಕನ್ ಸ್ಟಾಲ್‍ಗಳು ಕೂಡ ಸಂಪೂರ್ಣ ಖಾಲಿ ಖಾಲಿಯಾಗಿವೆ. ಕೆಲ ಚಿಕನ್ ಅಂಗಡಿಗಳನ್ನು ಮುಚ್ಚಿದ್ದಾರೆ. ಪ್ರತಿವರ್ಷ ಕಾಲಿಡಲು ಕೂಡ ಜಾಗ ಇರುತ್ತಿರಲಿಲ್ಲ. ಆದರೆ ಈ ಬಾರಿ ಖಾಲಿ ಖಾಲಿಯಾಗಿದೆ. ನಾಳೆ ಏನಾದರೂ ವ್ಯಾಪಾರ ವಹಿವಾಟು ಆಗಬಹುದೆಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: 13ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

  • ಕುರಿ, ಕೋಳಿ ಪ್ರಜ್ಞೆ ತಪ್ಪಿಸುವುದು ಹೇಗೆ: ಸ್ಟನ್ನಿಂಗ್ ನಿಯಮಕ್ಕೆ ಡಿಕೆಶಿ ಕಿಡಿ

    ಕುರಿ, ಕೋಳಿ ಪ್ರಜ್ಞೆ ತಪ್ಪಿಸುವುದು ಹೇಗೆ: ಸ್ಟನ್ನಿಂಗ್ ನಿಯಮಕ್ಕೆ ಡಿಕೆಶಿ ಕಿಡಿ

    ಬೆಂಗಳೂರು: ರೈತರ ಬದುಕಿನ ಮೇಲೆ ಗದಾಪ್ರಹಾರ ನಡೆಯುತ್ತಿದೆ. ಸಮಾಜದಲ್ಲಿ ಅಶಾಂತಿ ಮೂಡಿಸಲು, ರಾಜಕೀಯದ ಗುರಿ ಇಟ್ಟುಕೊಂಡು ಒಂದು ಧರ್ಮದ ಮೇಲೆ ಪ್ರಯೋಗ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸದಾಶಿವನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಕಳೆದ ಕೆಲ ವರ್ಷಗಳಿಂದ ನಾವು ಕೋವಿಡ್‍ನಿಂದ ನರಳಿದ್ದೇವೆ. ಹೊಸ ವರ್ಷಕ್ಕೆ ಕಾಲಿಟ್ಟಿದ್ದು, ಎಲ್ಲರ ಬದುಕು ಆರೋಗ್ಯಕರವಾಗಿ ಉತ್ತಮವಾಗಲಿ. ವ್ಯಾಪಾರ-ವಹಿವಾಟು, ಶಿಕ್ಷಣ, ಉದ್ಯೋಗ, ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಕಳೆದುಕೊಂಡವರೆಲ್ಲರಿಗೂ ಈ ವರ್ಷ ಭಾಗ್ಯ ಮರುಕಳಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಇದನ್ನೂ ಓದಿ: ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಮಗುವಿನ ನೆರವಿಗೆ ಬಂದ ರೈಲ್ವೆ ಅಧಿಕಾರಿಗಳು

    ಕಳೆದ ಒಂದು ವಾರದಿಂದ ರೈತರ ಬದುಕಿನ ಮೇಲೆ ಗದಾಪ್ರಹಾರ ನಡೆಯುತ್ತಿದೆ. ಸಮಾಜದಲ್ಲಿ ಅಶಾಂತಿ ಮೂಡಿಸಲು, ರಾಜಕೀಯದ ಗುರಿ ಇಟ್ಟುಕೊಂಡು ಒಂದು ಧರ್ಮದ ಮೇಲೆ ಪ್ರಯೋಗ ನಡೆಸಲಾಗುತ್ತಿದೆ. ನಿನ್ನೆ ಪಶುಸಂಗೋಪನಾ ಇಲಾಖೆಯಿಂದ ಆದೇಶ ಹೊರಡಿಸಿ, ಪೊಲೀಸ್ ಹಾಗೂ ಇತರ ಅಧಿಕಾರಿಗಳು ಸೇರಿ ಕೋಳಿ, ಕುರಿ ವ್ಯಾಪಾರ ನಡೆಸುತ್ತಿರುವವರ ಮೇಲೆ ನಿಯಂತ್ರಣ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

    ಬೆಂಗಳೂರು ಹಾಗೂ ಇತರ ಎಲ್ಲಾ ಕಡೆಗಳಲ್ಲಿ ಇನ್ನು ಮುಂದೆ ಮಾಂಸದ ವ್ಯಾಪಾರ ಮಾಡುವವರು ಪ್ರಾಣಿ ವಧೆ ಮಾಡುವ ಮುನ್ನ ಸ್ಟನ್ನಿಂಗ್ (ಪ್ರಜ್ಞೆ ತಪ್ಪಿಸುವ) ಮಾಡಬೇಕು. ಇನ್ನು ಮುಂದೆ ಎಲ್ಲ ವ್ಯಾಪಾರಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ವ್ಯವಸ್ಥೆ ಇದ್ದರಷ್ಟೇ ಇನ್ನು ಮುಂದೆ ಪರವಾನಗಿ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಇಡೀ ರಾಜ್ಯದ ರೈತರು ಕೋಳಿ, ಕುರಿ, ಮೇಕೆಗಳನ್ನು ಸಾಕುತ್ತಾರೆ. ಅದು ಅನೇಕರ ಉಪ ಕಸುಬಾಗಿದೆ. ಮಾಂಸದ ವ್ಯಾಪಾರ ಮಾಡುವವರಿಗೆ ರೈತರು ತಾವು ಸಾಕಿದ ಕೋಳಿ, ಕುರಿಗಳನ್ನು ಮಾರಾಟ ಮಾಡುತ್ತಾರೆ. ಕೆಲವರು ಹಲಾಲ್ ಮಾಡುತ್ತಾರೆ. ಮತ್ತೆ ಕೆಲವರು ಹಲಾಲ್ ಮಾಡುವುದಿಲ್ಲ. ಇದು ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದರು. ಇದನ್ನೂ ಓದಿ: RSS, ಬಿಜೆಪಿಯವರಿಗೆ ಯಾರೂ ಹೆದರಬೇಡಿ, ಕಾಂಗ್ರೆಸ್ ನಿಮ್ಮೊಂದಿಗಿದೆ: ಡಿಕೆಶಿ

    ಈ ದೇಶದಲ್ಲಿ ಯಾರು ಹೇಗೆ ಬದುಕಬೇಕು, ಯಾರು ಏನನ್ನು ತಿನ್ನಬೇಕು ಎಂಬುದು ಸಾವಿರಾರು ವರ್ಷಗಳಿಂದ ಪರಂಪರೆಯಾಗಿ ನಡೆದುಕೊಂಡು ಬಂದಿದೆ. ಅವರೆಲ್ಲ ಅನಾದಿ ಕಾಲದಿಂದ ವ್ಯಾಪಾರ ಮಾಡಿಕೊಂಡು ಬಂದಿದ್ದಾರೆ. ಈ ಹಿಂದೆ ವಸ್ತುಗಳ ವಿನಿಮಯ ವ್ಯಾಪಾರ ಪದ್ಧತಿ ಕೂಡ ಇತ್ತು ಎಂದು ತಿಳಿಸಿದರು.

    ರಾಜ್ಯದ ವಿವಿಧ ಕಡೆಗಳಿಂದ ರೈತರು ಕರೆ ಮಾಡಿ, ಸರ್ಕಾರದ ಈ ಆದೇಶದಿಂದ ನಮ್ಮ ಕುರಿ, ಕೋಳಿಗಳನ್ನು ಕೊಳ್ಳುವವರಿಲ್ಲದಂತಾಗಿದೆ. ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಒಂದು ಪಕ್ಷದ ಅಧ್ಯಕ್ಷನಾಗಿ ನೀವು ಯಾಕೆ ಸುಮ್ಮನೆ ಕೂತಿದ್ದೀರಿ ಅಂತ ಕೇಳುತ್ತಿದ್ದಾರೆ ಎಂದು ಹೇಳಿದರು.

    ಹಳ್ಳಿಗಳಲ್ಲಿ ಪಶು ಸಂಗೋಪನೆ ಮಾಡಿ ಎಂದು ಉತ್ತೇಜನ ನೀಡಿದವರು ಯಾರು? ಆಂಧ್ರ ಪ್ರದೇಶದ ಗಡಿ ಪ್ರದೇಶದಲ್ಲಿ ಹೆಚ್ಚಾಗಿ ಇದನ್ನೇ ಅವಲಂಬಿಸಿದ್ದಾರೆ. ಈ ಕೋಳಿ, ಕುರಿಗಳು ಸರಿಯಾದ ಸಮಯಕ್ಕೆ ಮಾರಾಟವಾಗದಿದ್ದರೆ, ಅವುಗಳಿಗೆ ನಿತ್ಯ ಹಾಕುವ ಮೇವು, ಸಾಕಣೆ ಮಾಡುವವನಿಗೆ ಹೊರೆಯಾಗುತ್ತದೆ ಎಂದು ನುಡಿದರು.

    ಬಟ್ಟೆ ಹೊಲಿಯುವವನು ಬಟ್ಟೆ ಹೊಲಿಯುತ್ತಾನೆ, ಮೊಟ್ಟೆ ಮಾರುವವನು ಮೊಟ್ಟೆ ಮಾರುತ್ತಾನೆ. ಹೀಗೆ ಒಬ್ಬೊಬ್ಬರು ಒಂದೊಂದು ವ್ಯಾಪಾರ ಮಾಡುತ್ತಿದ್ದಾರೆ. ಒಬ್ಬರು ತಮ್ಮ ವ್ಯಾಪಾರ ಬಿಟ್ಟು ಬೇರೆಯದನ್ನು ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ನಮ್ಮ ರೈತರು, ವರ್ತಕರು, ಅವರು ಯಾವುದೇ ಸಮುದಾಯದವರಿರಲಿ, ತಮ್ಮ ಬದುಕನ್ನು ಯಾವ ರೀತಿ ನಡೆಸಿಕೊಂಡು ಹೋಗುತ್ತಿದ್ದಾರೋ ಅದರಂತೆ ಸಾಗಲು ಸರ್ಕಾರ ಅವಕಾಶ ನೀಡಬೇಕು. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ಹಾಳು ಮಾಡುವುದು ಬೇಡ. ಈ ಹೊಸ ತೊಡುಕು ಆಚರಣೆಯನ್ನು ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ಮಾತನಾಡಿದರು.

    ಹಲಾಲ್ ಕಟ್‍ಗೆ ಅವಕಾಶ ನೀಡಬಾರದು ಎಂದು ಕೆಲವು ಸಂಘಟನೆಗಳು ಆಗ್ರಹಿಸುತ್ತಿವೆ ಎಂಬ ಪ್ರಶ್ನೆಗೆ, ‘ಕೋಳಿ ಮತ್ತು ಕುರಿಗಳಿಗೆ ಪ್ರಜ್ಞೆ ತಪ್ಪಿಸಬೇಕಂತೆ. ಹೇಗೆ ತಪ್ಪಿಸಬೇಕು? ತಲೆಗೆ ಹೊಡೆದರೆ ಅವು ಸಾಯುವುದಿಲ್ಲವೇ? ಅದು ಹಿಂಸೆ ಅಲ್ಲವೇ? ಮಾಂಸ ವ್ಯಾಪಾರದಲ್ಲೂ ಅನೇಕ ಉಪ ವ್ಯಾಪಾರಗಳಿವೆ. ಇವು ಸಾಮಾಜಿಕವಾಗಿ ಬೆಸೆದುಕೊಂಡಿರುವ ವ್ಯಾಪಾರಗಳು. ನಾನು ಈ ವಿಚಾರದಲ್ಲಿ ಧ್ವನಿ ಎತ್ತದಿದ್ದರೆ ನನ್ನ ಸ್ಥಾನ ಹಾಗೂ ಜವಾಬ್ದಾರಿಗೆ ದ್ರೋಹ ಬಗೆದಂತಾಗುತ್ತದೆ. ಮುಖ್ಯಮಂತ್ರಿಗಳು ಸಂಜೆ ಒಳಗಾಗಿ ಉತ್ತರ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದರು.

  • ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಹೊರಡಿಸಿಲ್ಲ: ಪ್ರಭು ಚವ್ಹಾಣ್

    ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಹೊರಡಿಸಿಲ್ಲ: ಪ್ರಭು ಚವ್ಹಾಣ್

    ಬೀದರ್: ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಸ್ಟನ್ನಿಂಗ್ ಕಡ್ಡಾಯ ಮಾಡಿದ ಆದೇಶವನ್ನು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಳ್ಳಿ ಹಾಕಿದ್ದಾರೆ.

    ಸ್ಟನ್ನಿಂಗ್ ಕಡ್ಡಾಯ ಆದೇಶದ ಕುರಿತಾಗಿ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸಚಿವರು, ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ನಮ್ಮ ಇಲಾಖೆ ಉಪನಿರ್ದೇಶಕರು (ಡಿಡಿ) ಹಲಾಲ್ ಮಾಡಬಾರದು‌, ಸ್ಟನ್ನಿಂಗ್ ಮಾಡಬೇಕು ಎಂದು ಪತ್ರ ಬರೆದಿದ್ದಾರೆ. 2001 ಕಾಯ್ದೆ ಪ್ರಕಾರ ಹಲಾಲ್ ಮಾಡಬಾರದು, ಸ್ಟನ್ನಿಂಗ್ ಮಾಡಬೇಕು ಎಂದು ಇದೆ ಎಂದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಪ್ರಾಣಿಗಳ ವಧೆಗೆ ಸ್ಟನ್ನಿಂಗ್ ಕಡ್ಡಾಯ

    ನಾನು ಈ ಬಗ್ಗೆ ಸಮಗ್ರವಾದ ಮಾಹಿತಿ ಪಡೆದು ನಮ್ಮ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಏನು ಮಾಡಬೇಕು ಎಂದು ನಿರ್ಧಾರ ಮಾಡುತ್ತೇನೆ. ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ಡಿಡಿ ಪತ್ರ ಬರೆದಿದ್ದಾರೆ ಅಷ್ಟೇ ಎಂದು‌ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

    ಸ್ಟನ್ನಿಂಗ್  ಎಂದರೇನು? ಎಷ್ಟು ವಿಧ?:
    `ಸ್ಟನ್ನಿಂಗ್’ ಅಂದ್ರೆ ಪ್ರಾಣಿವಧೆಗೆ ಮೊದಲು ಪ್ರಜ್ಞೆ ತಪ್ಪಿಸುವುದು. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗೆ ಹೆಚ್ಚು ಹಿಂಸೆಯಾಗುವುದಿಲ್ಲ. ಹಾಗಾಗಿ ಇನ್ಮುಂದೆ ಪ್ರಾಣಿವಧೆಗೂ ಮುನ್ನ ಸ್ಟನ್ನಿಂಗ್ ಕಡ್ಡಾಯಗೊಳಿಸಲಾಗಿದ್ದು, ಸ್ಟನ್ನಿಂಗ್ ಇಲ್ಲದಿದ್ದರೆ ಹೊಸ ಅಂಗಡಿಗಳಿಗೆ ಅನುಮತಿ ಇಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿತ್ತು.

    ಸ್ಟನ್ನಿಂಗ್ ಪ್ರಾಣಿವಧೆಯಲ್ಲಿ ಎರಡು ವಿಧಾನಗಳಿದ್ದು, ಪ್ರಜ್ಞೆ ತಪ್ಪಿಸಿ ಪ್ರಾಣಿಗಳ ವಧೆ ಮಾಡುವುದು ಮೊದಲನೇ ವಿಧಾನ. ಮೊದಲನೇ ವಿಧಾನದ ಮೂಲಕ ಪ್ರಾಣಿಯ ತಲೆಗೆ ಬಲವಾಗಿ ಹೊಡೆಯುವುದು. ತಲೆಗೆ ಬಲವಾಗಿ ಹೊಡೆದ್ರೆ ಪ್ರಜ್ಞೆ ತಪ್ಪಲಿದೆ ಅಥವಾ ತಲೆಗೆ ಹೊಡೆದಾಗ ಮೆದುಳು ನಿಷ್ಕ್ರಿಯವಾಗಲಿದೆ. ಈ ವೇಳೆ ರಕ್ತ ಸೋರಿಕೆ ಆಗದಂತೆ ಪ್ರಾಣಿಗಳ ವಧೆ ಮಾಡುವುದಾಗಿದೆ. ಈ ಮೂಲಕ ಪ್ರಾಣಿವಧೆ ಪರಿಣತರಾದವರು ಮಾತ್ರ ಮಾಡಬಹುದುದಾಗಿದೆ. ಇದನ್ನೂ ಓದಿ: RSS, ಬಿಜೆಪಿಯವರಿಗೆ ಯಾರೂ ಹೆದರಬೇಡಿ, ಕಾಂಗ್ರೆಸ್ ನಿಮ್ಮೊಂದಿಗಿದೆ: ಡಿಕೆಶಿ

    ಎಲೆಕ್ಟ್ರಿಕ್ ಶಾಕ್ ಕೊಟ್ಟು ಪ್ರಾಣಿಗಳ ವಧೆ ಮಾಡುವುದು ಎರಡನೇ ವಿಧಾನ. ಪ್ರಾಣಿಗಳ ತಲೆಗೆ ಹೊಡೆಯುವ ಬದಲು ಎಲೆಕ್ಟ್ರಿಕ್ ಶಾಕ್ ಕೊಟ್ಟು ಪ್ರಜ್ಞೆ ತಪ್ಪಿಸುವುದು. ಈ ಮೂಲಕ ಪ್ರಾಣಿಗಳು ಹಿಂಸೆ ಅನುಭವಿಸೋ ಬದಲು ಮೂರ್ಛೆ ತಪ್ಪಿಸುವುದಾಗಿದೆ.

  • ಇನ್ಮುಂದೆ ಪ್ರಾಣಿಗಳ ವಧೆಗೆ ಸ್ಟನ್ನಿಂಗ್ ಕಡ್ಡಾಯ

    ಇನ್ಮುಂದೆ ಪ್ರಾಣಿಗಳ ವಧೆಗೆ ಸ್ಟನ್ನಿಂಗ್ ಕಡ್ಡಾಯ

    ಬೆಂಗಳೂರು: ನಗರದಲ್ಲಿ ಕುರಿ-ಕೋಳಿ ವಧೆಗೆ ಸ್ಟನ್ನಿಂಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಹಲಾಲ್ ಆಗಲೀ, ಜಟ್ಕಾವಾಗಲೀ ಸ್ಟನ್ನಿಂಗ್ ರೂಲ್ಸ್ ಪಾಲಿಸಬೇಕು ಎಂದು ಬಿಬಿಎಂಪಿಗೆ ಪಶು ಸಂಗೋಪನಾ ಇಲಾಖೆ ಸೂಚನೆ ನೀಡಿದೆ.

    ಸ್ಟನ್ನಿಂಗ್  ಎಂದರೇನು? ಎಷ್ಟು ವಿಧ?:
    `ಸ್ಟನ್ನಿಂಗ್’ ಅಂದ್ರೆ ಪ್ರಾಣಿವಧೆಗೆ ಮೊದಲು ಪ್ರಜ್ಞೆ ತಪ್ಪಿಸುವುದು. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗೆ ಹೆಚ್ಚು ಹಿಂಸೆಯಾಗುವುದಿಲ್ಲ. ಹಾಗಾಗಿ ಇನ್ಮುಂದೆ ಪ್ರಾಣಿವಧೆಗೂ ಮುನ್ನ ಸ್ಟನ್ನಿಂಗ್ ಕಡ್ಡಾಯಗೊಳಿಸಲಾಗಿದ್ದು, ಸ್ಟನ್ನಿಂಗ್ ಇಲ್ಲದಿದ್ದರೆ ಹೊಸ ಅಂಗಡಿಗಳಿಗೆ ಅನುಮತಿ ಇಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಕುತ್ತಿಗೆ ತಿರುವಿ, ಕೊಂಬಿನಲ್ಲಿ ಎಳೆದಾಡಿ ಕಾರ್ಕಳ ರಸ್ತೆಯಲ್ಲಿ ಗೋವು ಕಳ್ಳತನ

    ಸ್ಟನ್ನಿಂಗ್ ಪ್ರಾಣಿವಧೆಯಲ್ಲಿ ಎರಡು ವಿಧಾನಗಳಿದ್ದು, ಪ್ರಜ್ಞೆ ತಪ್ಪಿಸಿ ಪ್ರಾಣಿಗಳ ವಧೆ ಮಾಡುವುದು ಮೊದಲನೇ ವಿಧಾನ. ಮೊದಲನೇ ವಿಧಾನದ ಮೂಲಕ ಪ್ರಾಣಿಯ ತಲೆಗೆ ಬಲವಾಗಿ ಹೊಡೆಯುವುದು. ತಲೆಗೆ ಬಲವಾಗಿ ಹೊಡೆದ್ರೆ ಪ್ರಜ್ಞೆ ತಪ್ಪಲಿದೆ ಅಥವಾ ತಲೆಗೆ ಹೊಡೆದಾಗ ಮೆದುಳು ನಿಷ್ಕ್ರಿಯವಾಗಲಿದೆ. ಈ ವೇಳೆ ರಕ್ತ ಸೋರಿಕೆ ಆಗದಂತೆ ಪ್ರಾಣಿಗಳ ವಧೆ ಮಾಡುವುದಾಗಿದೆ. ಈ ಮೂಲಕ ಪ್ರಾಣಿವಧೆ ಪರಿಣತರಾದವರು ಮಾತ್ರ ಮಾಡಬಹುದುದಾಗಿದೆ. ಇದನ್ನೂ ಓದಿ: ಕುರಿದೊಡ್ಡಿಗೆ ನುಗ್ಗಿ 30 ಕುರಿಗಳನ್ನು ಕದ್ದೊಯ್ದ ಖದೀಮರು – ಕುರಿಗಾಯಿ ಕಣ್ಣೀರು

    ಎಲೆಕ್ಟ್ರಿಕ್ ಶಾಕ್ ಕೊಟ್ಟು ಪ್ರಾಣಿಗಳ ವಧೆ ಮಾಡುವುದು ಎರಡನೇ ವಿಧಾನ. ಪ್ರಾಣಿಗಳ ತಲೆಗೆ ಹೊಡೆಯುವ ಬದಲು ಎಲೆಕ್ಟ್ರಿಕ್ ಶಾಕ್ ಕೊಟ್ಟು ಪ್ರಜ್ಞೆ ತಪ್ಪಿಸುವುದು. ಈ ಮೂಲಕ ಪ್ರಾಣಿಗಳು ಹಿಂಸೆ ಅನುಭವಿಸೋ ಬದಲು ಮೂರ್ಛೆ ತಪ್ಪಿಸುವುದಾಗಿದೆ.

    ಇದೀಗ ನಗರದಲ್ಲಿ ಸ್ಟನ್ನಿಂಗ್ ಸೂಚನೆ ಬಗ್ಗೆ ಮಾಂಸ ಮಾರಾಟಗಾರರು ಬೇಸರ ವ್ಯಕ್ತಪಡಿಸಿದ್ದು, ಬಿಬಿಎಂಪಿಯ ಕಸಾಯಿಖಾನೆಗಳಲ್ಲೂ ಸ್ಟನ್ನಿಂಗ್ ವ್ಯವಸ್ಥೆ ಇಲ್ಲ. ಬಿಬಿಎಂಪಿ ಟ್ರೇಡ್ ಲೈಸೆನ್ಸ್ ಕೊಟ್ಟಿದೆ. ಅದರಲ್ಲಿ ಇದ್ಯಾವುದೂ ಇಲ್ಲ. ಸಡನ್ ಆಗಿ ಮಾಡಿ ಅಂದ್ರೇ ಅವೆಲ್ಲ ಆಗಲ್ಲ. ಮೊದಲು ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಅದನ್ನು ಶುರು ಮಾಡಲಿ. ನಮಗೆ ಸ್ಟನ್ನಿಂಗ್ ಮಾಡುವ ವಿಧಾನ ಡೆಮೋ ಕೊಡಲಿ. ಅದನ್ನು ಬಿಟ್ಟು ಸ್ಟನ್ನಿಂಗ್ ಮಾಡಿ ಅಂದ್ರೆ ಹೇಗೆ ಪಾಲಿಸಲು ಸಾಧ್ಯ. ಸ್ಟನ್ನಿಂಗ್ ವ್ಯವಸ್ಥೆ ಬಗ್ಗೆ ಮೊದಲು ತಿಳಿಸಿಕೊಡಿ ಎಂಬ ಅಭಿಪ್ರಾಯ ಕೇಳಿಬಂದಿದೆ.