Tag: JhatkaCut

  • ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ: ಈಶ್ವರಪ್ಪ

    ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ: ಈಶ್ವರಪ್ಪ

    ಉಡುಪಿ: ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ. ಹಿಂದೂಗಳು ಜಟ್ಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ, ಅವರವರು ಅವರವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ದೇಶದಲ್ಲೇ ಪ್ರಪ್ರಥಮ ಅತಿದೊಡ್ಡ ಘನ ತ್ಯಾಜ್ಯ ಸಂಸ್ಕರಣ ಘಟಕ ಉದ್ಘಾಟನೆ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿ, ಮುಸಲ್ಮಾನರು ನಮ್ಮ ಮನೆಗೆ ಬಂದು ಏನು ಒತ್ತಡ ಹಾಕುವುದಿಲ್ಲ. ನಾವು ಯಾರೂ ಮುಸಲ್ಮಾನರ ಮನೆಗೆ ಹೋಗಿ ಒತ್ತಡ ಹಾಕುವುದಿಲ್ಲ. ಹಲಾಲ್ ವಿಷಯದಲ್ಲಿ ಸಮಾಜವನ್ನು ಒಡೆಯುವ ದಿಕ್ಕಿನಲ್ಲಿ ಕುತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

    ಹಲಾಲ್, ಜಟ್ಕಾ ಇಂಥದ್ದನ್ನೆಲ್ಲ ಕೆಲವು ವ್ಯಕ್ತಿಗಳು, ಪಕ್ಷಗಳು ಸೃಷ್ಟಿ ಮಾಡಿದ್ದಾರೆ. ಕೆಲ ವ್ಯಕ್ತಿಗಳು ಆಡುತ್ತಿರುವ ಆಟ ಇದು. ಕರ್ನಾಟಕದಲ್ಲಿ ಜನ ಅನುಭವಿಸುತ್ತಿದ್ದಾರೆ. ಯಾರು ಯಾವುದನ್ನು ಪೂಜೆ ಮಾಡುತ್ತಾರೋ ಅದನ್ನು ಮಾಡಿಕೊಳ್ಳಬೇಕು. ಅವರವರು ಅವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಹೇಳಿದರು. ಇದನ್ನೂ ಓದಿ: ಹಲಾಲ್ ಕಟ್ ಮಾಂಸ ಖರೀದಿ ಉತ್ತೇಜಿಸಲು ಅಭಿಯಾನ: ದೇವನೂರ ಮಹಾದೇವ ನೇತೃತ್ವ

    ಈ ತರಹದ ವಿಚಾರದಲ್ಲಿ ನಾನು ರಾಜಕಾರಣ ಮಾಡಲು ಇಷ್ಟಪಡಲ್ಲ. ಚುನಾವಣೆ ಬಂದಾಗ ಒಬ್ಬರಿಗೊಬ್ಬರು ಬಹಿರಂಗವಾಗಿ ತೊಡೆತಟ್ಟೋಣ. ಚುನಾವಣೆ ಬಂದಾಗ ನಾನೇನು ಮಾಡಿದ್ದೇನೆ, ನೀವ್ ಏನ್ ಮಾಡಿದ್ದೀರಿ ಎಂದು ಜನ ಮುಂದೆ ಇಡೋಣ ಎಂದು ಹೇಳಿದರು.

    ಯುಗಾದಿ ದಿನ ನಾನು ಮಾಂಸ ತಿನ್ನಲ್ಲ. ಭಾನುವಾರ ನನ್ನ ಮನೆದೇವರು. ಅವತ್ತು ಕೂಡ ಮಾಂಸ ತಿನ್ನಲ್ಲ. ಸೋಮವಾರ ಮಾಂಸ ತಿನ್ನುವ ಅಭ್ಯಾಸ ಇಲ್ಲ. ಆದ್ರೆ ಮಂಗಳವಾರ ಮಾಂಸ ಬಿಡುವುದೇ ಇಲ್ಲ ಅಂತ ಹಾಸ್ಯಚಟಾಕಿ ಹಾರಿಸಿದರು. ಇದನ್ನೂ ಓದಿ: ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

  • ಹಲಾಲ್ ಕಟ್ ಮಾಂಸ ಖರೀದಿ ಉತ್ತೇಜಿಸಲು ಅಭಿಯಾನ: ದೇವನೂರ ಮಹಾದೇವ ನೇತೃತ್ವ

    ಹಲಾಲ್ ಕಟ್ ಮಾಂಸ ಖರೀದಿ ಉತ್ತೇಜಿಸಲು ಅಭಿಯಾನ: ದೇವನೂರ ಮಹಾದೇವ ನೇತೃತ್ವ

    ಮೈಸೂರು: ಹೊಸತೊಡಕು ಹಿನ್ನೆಲೆಯಲ್ಲಿ ಮಾಂಸ ಖರೀದಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಸ್ಲಿಂ ಬಾಂಧವರ ನಡುವೆ ಸಾಮರಸ್ಯ ಸಾರಿ, ಹಲಾಲ್ ಕಟ್ ಮಾಂಸ ಖರೀದಿಗೆ ಉತ್ತೇಜನ ನೀಡಲು ಪ್ರಗತಿಪರರು ವಿಶೇಷ ಅಭಿಯಾನವನ್ನೇ ಆರಂಭಿಸಿದ್ದಾರೆ. ಮಾಂಸದ ಅಂಗಡಿಗಳಲ್ಲೂ ಬೇವು-ಬೆಲ್ಲ ಹಂಚಿ ಸಂಭ್ರಮಿಸುತ್ತಿದ್ದಾರೆ.

    ಮೈಸೂರಿನಲ್ಲಿ ಸಕಲೆಂಟು ಜಾತಿ ಸಹಬಾಳ್ವೆ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಸೇರಿದಂತೆ ಪ್ರತಿಪರ ಸಂಘಟನೆಗಳಿಂದ ಮೈಸೂರಿನ ಉದಯಗಿರಿ ರಸ್ತೆಯಲ್ಲಿರುವ ಮುಸ್ಲಿಂ ಅಂಗಡಿಯಲ್ಲಿ ಶಾಂತಿ ಸೌಹಾರ್ದತೆ, ಸಹಬಾಳ್ವೆಯ ಸಂದೇಶ ಸಾರುವ ಕಾರಣಕ್ಕಾಗಿ ಮಾಂಸ ಖರೀದಿಸುವ ಅಭಿಯಾನವೂ ನಡೆದಿದೆ. ಇದನ್ನೂ ಓದಿ: ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    DEVANURA MAHADEVA

    ಸಾಹಿತಿ ದೇವನೂರ ಮಹಾದೇವ, ಸಮಾಜವಾದಿ ಪ.ಮಲ್ಲೇಶ್, ಬಡಗಲಪುರ ನಾಗೇಂದ್ರ, ಗುರುಪ್ರಸಾದ್ ಕೆರಗೋಡು, ಆಲಗೂಡು ಶಿವಕುಮಾರ್, ಶಂಭುಲಿಂಗಸ್ವಾಮಿ, ಪಿ.ಮರಂಕಯ್ಯ, ಬಸವರಾಜು, ಕಲ್ಲಹಳ್ಳಿ ಕುಮಾರ ಅವರು ಅಜೀಜ್ ಸೇಠ್ ಮುಖ್ಯ ರಸ್ತೆಯಲ್ಲಿನ ಸೈಯ್ಯದ್ ರಿಜ್ವಾನ್ ಅವರ ಕರ್ನಾಟಕ ಮಟನ್ ಅಂಡ್ ಚಿಕನ್ ಸ್ಟಾಲ್‌ನಲ್ಲಿ ಸಾಮೂಹಿಕವಾಗಿ ಹಲಾಲ್ ಕಟ್ ಮಾಂಸವನ್ನು ಖರೀದಿಸಿದ್ದಾರೆ.

  • ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಬೆಂಗಳೂರು: ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಾಂಸ ಮಾರಾಟ ಜೋರಾಗಿದೆ. ಮಾಂಸದ ಮಳಿಗೆಗಳಲ್ಲಿ ಜನರ ದಂಡೇ ನೆರೆದಿದೆ. ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ ಮಾಂಸ ಮಾರಾಟ ಭರ್ಜರಿಯಾಗಿ ಸಾಗಿದೆ.

    ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಧ್ಯರಾತ್ರಿಯಿಂದಲೇ ಮಾಂಸ ಮಾರಾಟ ಅಂಗಡಿಗಳಲ್ಲಿ ಸಿದ್ಧತೆ ನಡೆದಿತ್ತು. ಬೆಳಗ್ಗೆ ಮಾಂಸದಂಗಡಿಗಳತ್ತ ಜನರ ದಂಡು ಬರಲಾರಂಭಿಸಿತು. ಸರತಿ ಸಾಲಿನಲ್ಲಿ ನಿಂತು ಮಾಂಸ ಖರೀದಿಗೆ ಮುಗಿಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು. ಇದನ್ನೂ ಓದಿ: ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ: ಗುಜರಾತ್‌ ಸಿಎಂ ಸಮರ್ಥನೆ 

    NONVEG

    ಬೆಂಗಳೂರಿನ ಯಶವಂತ ಮಾರುಕಟ್ಟೆ, ಮೈಸೂರಿನ ಪಾಪಣ್ಣ ಮಟನ್ ಸ್ಟಾಲ್, ಕೆ.ಜಿ.ಕೊಪ್ಪಲಿನಲ್ಲಿ ಗುಡ್ಡೆ ಮಾಂಸ ಖರೀದಿ, ತುಮಕೂರಿನ ಹಿಂದೂ ಮೀಟ್ ಮಾರ್ಟ್ ಸೇರಿದಂತೆ ವಿವಿಧ ಜಿಲ್ಲೆಯ ಪ್ರಮುಖ ಮಾರುಕಟ್ಟೆಗಳಲ್ಲಿ ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಕೆಲ ಮಳಿಗೆಗಳಲ್ಲಿ ಹಲಾಲ್ ಕಟ್, ಜಟ್ಕಾ ಕಟ್ ಎಂಬ ಬೋರ್ಡ್‍ಗಳನ್ನೂ ಹಾಕಿದ್ದು, ಜಟ್ಕಾಕಟ್‍ಗೆ ಬೇಡಿಕೆ ಹೆಚ್ಚಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದಲೂ ನಿರಾಶೆಗೊಂಡಿದ್ದ ವ್ಯಾಪಾರಿಗಳ ಮೊಗದಲ್ಲೂ ಹರುಷ ತುಂಬಿದೆ. ಬರುವ ಗ್ರಾಹಕರಿಗೆ ಸಂತಸದಿಂದಲೇ ಮಾಂಸ ನೀಡಿ ಗಲ್ಲಾ ಪೆಟ್ಟಿಗೆ ತುಂಬಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಹನುಮ ಹುಟ್ಟಿದ ದಿನ ಗೊತ್ತಾ, ಸುಮ್ನೆ ತಿನ್ಲಾ- ಮಾಂಸಾಹಾರ ಭೋಜನ ಸವಿದ ಸಿದ್ದು

    NONVEG

    ದಾವಣಗೆರೆಯಲ್ಲಿ ವ್ಯಾಪಾರಿಗಳಿಗೆ ನಿರಾಶೆ
    ಯುಗಾದಿ ಹಬ್ಬದಂದು ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ದಾವಣೆಗೆರೆ ಜಿಲ್ಲೆಯ ಜನರು ಚಿಕನ್, ಮಟನ್ ಖರೀದಿಗೆ ನಿರುತ್ಸಾಹ ತೋರಿದ್ದಾರೆ. ಪ್ರತಿ ವರ್ಷ ಹೊಸ ತೊಡಕಿನ ಸಂದರ್ಭದಲ್ಲಿ ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿರುತ್ತಿತ್ತು. ಆದರೆ, ಇಂದು ಭಾನುವಾರವಾದರೂ ಮಾರುಕಟ್ಟೆ ಖಾಲಿ-ಖಾಲಿ ಹೊಡೆಯುತ್ತಿದೆ. ಇದರಿಂದ ಅಲಾಲ್ ಕಟ್, ಜಟ್ಕಾ ಕಟ್ ವಿವಾದ ಇಲ್ಲದಂತಾಗಿದೆ. ಚಂದ್ರದರ್ಶನವಾಗಿದ್ದರೆ ವ್ಯಾಪಾರ ಜಾತ್ರೆಯಂತಿರುತ್ತಿತ್ತು. ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಮಾಂಸ ಖರೀದಿಗೆ ಜನ ಹಿಂದೇಟು ಹಾಕಿದ್ದಾರೆ. ಮುಂದೆ ಎಲ್ಲರೂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದೇ ರೀತಿ ನಾವು ವ್ಯಾಪಾರ ಮಾಡುತ್ತೇವೆ. ಎಲ್ಲರೂ ಸಾಮರಸ್ಯದಿಂದ ಹಳೇ ಪದ್ದತಿಯಲ್ಲೇ ವ್ಯಾಪಾರ ವಹಿವಾಟು ನಡೆಸುತ್ತೇವೆ ಎನ್ನುತ್ತಾರೆ ಇಲ್ಲಿನ ವ್ಯಾಪಾರಸ್ಥರು.