Tag: jignesh mevani

  • Gujarat Election Result: ಜಿಗ್ನೇಶ್‌ ಮೇವಾನಿಗೆ ಜಯ

    Gujarat Election Result: ಜಿಗ್ನೇಶ್‌ ಮೇವಾನಿಗೆ ಜಯ

    ಗಾಂಧಿನಗರ: ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದ ಯುವ ನಾಯಕ ಜಿಗ್ನೇಶ್‌ ಮೇವಾನಿ(Jignesh Mevani) ಎರಡನೇ ಬಾರಿ ಜಯಗಳಿಸಿದ್ದಾರೆ.

    ಗುಜರಾತ್‌ನ ವಡ್ಗಾಂ ಕ್ಷೇತ್ರದಿಂದ ಕಾಂಗ್ರೆಸ್‌(Congress) ಅಭ್ಯರ್ಥಿ ಮೇವಾನಿಗೆ ಬಿಜೆಪಿ ಅಭ್ಯರ್ಥಿ ಮಣಿಲಾಲ್ ವಘೇಲಾ ಭಾರೀ ಸ್ಪರ್ಧೆ ನೀಡಿದ್ದರು. ಆದರೆ ಅಂತಿಮವಾಗಿ 2 ಸಾವಿರಕ್ಕೂ ಹೆಚ್ಚು ಮತಗಳಿಂದ ಮೇವಾನಿ ವಿಜಯದ ನಗೆ ಬೀರಿದ್ದಾರೆ. ಇದನ್ನೂ ಓದಿ: ಆಪ್‌, ಓವೈಸಿ ಪಕ್ಷ ಕೊಟ್ಟ ಹೊಡೆತಕ್ಕೆ ಕಾಂಗ್ರೆಸ್‌ ಪಲ್ಟಿ

    ಕಳೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೇವಾನಿ ಬಿಜೆಪಿ 19ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಸ್ಪರ್ಧೆ ಮಾಡಿದ ಮೊದಲ ಚುನಾವಣೆಯಲ್ಲೇ ಗೆಲ್ಲುವ ಮೂಲಕ ಸುದ್ದಿಯಾಗಿದ್ದರು. 2021ರಲ್ಲಿ ಮೇವಾನಿ ಕಾಂಗ್ರೆಸ್‌ ಪಕ್ಷ ಸೇರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು

    ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು

    ಗಾಂಧಿನಗರ: 2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ನಾಯಕ, ಶಾಸಕ ಜಿಗ್ನೇಶ್ ಮೇವಾನಿ (Jignesh Mevani)ಮತ್ತು ಇತರ 18 ಮಂದಿಗೆ ಅಹಮದಾಬಾದ್ ನ್ಯಾಯಾಲಯವು (Ahmedabad Court) 6 ತಿಂಗಳು ಜೈಲು (Jail) ಶಿಕ್ಷೆ ವಿಧಿಸಿದೆ.

    ಗುಜರಾತ್ ವಿಶ್ವವಿದ್ಯಾನಿಲಯದ ಕಾನೂನು ಭವನ (Gujarat Universitys Law Bhavan) ಕಟ್ಟಡಕ್ಕೆ ಡಾ.ಬಿ.ಆರ್. ಅಂಬೇಡ್ಕರ್ (BR Ambedker) ಅವರ ಹೆಸರನ್ನು ಮರುನಾಮಕರಣ ಮಾಡುವಂತೆ 2016ರಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಓರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಉಳಿದ 19 ಮಂದಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ – ನಲಪಾಡ್ ಅಕಾಡೆಮಿಗೆ ಬಿಗ್ ರಿಲೀಫ್

    ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಜಿಗ್ನೇಶ್ ಮೇವಾನಿ ಮೇಲೆ ಹಲ್ಲೆ ನಡೆದಿತ್ತು. ಬಳಿಕ ರಾಜ್ಯದ ಮಾಜಿ ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಅವರ ಗೂಂಡಾಗಳಿಂದ ದಾಳಿ ನಡೆಸಲಾಗಿದೆ ಎಂದು ಮೇವಾನಿ ಅವರ ತಂಡವು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

    ಗುಜರಾತ್‍ ಶಾಸಕ ಜಿಗ್ನೇಶ್ ಮೇವಾನಿ ಮೇಲೆ ಗೂಂಡಾಗಳಿಂದ ಹಲ್ಲೆ

    ಗಾಂಧಿನಗರ: ಸಾರ್ವಜನಿಕ ಸಭೆ ವೇಳೆ ದಲಿತ ಮುಖಂಡ ( Dalit leader) ಮತ್ತು ಗುಜರಾತ್‍ನ ವಡ್ಗಾಮ್(Vadgam) ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ ( Jignesh Mevani ) ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

    ಈ ಕುರಿತಂತೆ ಜಿಗ್ನೇಶ್ ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ ಅವರ ಬೆಂಬಲಿಗರು, ಈ ದಾಳಿಯನ್ನು ರಾಜ್ಯದ ಮಾಜಿ ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಅವರಿಗೆ ಸೇರಿದ ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊಹಿನೂರ್‌ ವಜ್ರ ಜಗನ್ನಾಥ ದೇವರಿಗೆ ಸೇರಿದ್ದು; ಬ್ರಿಟನ್‌ನಿಂದ ವಾಪಸ್‌ ತರಿಸಿ – ರಾಷ್ಟ್ರಪತಿಗೆ ಮನವಿ

    ದಾಳಿ ವೇಳೆ ಅಹಮದಾಬಾದ್‍ನ ವಸ್ತ್ರಾಲ್‍ನಲ್ಲಿರುವ ನರ್ಮದಾ ಅಪಾರ್ಟ್‍ಮೆಂಟ್‍ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಜಿಗ್ನೇಶ್ ಮೇವಾನಿ ಮತ್ತು ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಹಿತೇಂದ್ರ ಪಿತಾಡಿಯಾ(Hitendra Pithadiya) ಉಪಸ್ಥಿತರಿದ್ದರು. ಇದನ್ನೂ ಓದಿ: ರಸ್ತೆ ಬದಿಯಲ್ಲಿ ಬೆಂಕಿಗಾಹುತಿಯಾದ ಕಾರು – ಸಹಾಯಕ್ಕೆ ಧಾವಿಸಿದ ಮಹಾರಾಷ್ಟ್ರ ಸಿಎಂ

    ಮತ್ತೊಂದೆಡೆ ಈ ಘಟನೆ ಸಂಬಂಧ ಹಿತೇಂದ್ರ ಪಿತಾಡಿಯಾ ಅವರು ಟ್ವೀಟ್ ಮಾಡಿದ್ದು, ಪ್ರದೀಪ್‍ಸಿನ್ಹ್ ಜಡೇಜಾ(Pradipsinh Jadeja) ಅವರ ಗೂಂಡಾ ಲಾಭು ದೇಸಾಯಿ, ಜಿಗ್ನೇಶ್ ಮೇವಾನಿ ಮೇಲೆ ದಾಳಿ ಮಾಡಿ ಸಭೆಯನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಅಲ್ಲದೇ ಪೊಲೀಸರ ಸಮ್ಮುಖದಲ್ಲಿಯೇ ದಾಳಿ ನಡೆಸಲಾಗಿದೆ ಎಂದು ಹೇಳುವ ಮೂಲಕ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿಷ್ಟ್ರಯೋಜಕ ಬಿಜೆಪಿ ಸರ್ಕಾರಕ್ಕೆ ಮತ ಹಾಕಬೇಡಿ: ಜಿಗ್ನೇಶ್ ಮೇವಾನಿ

    ನಿಷ್ಟ್ರಯೋಜಕ ಬಿಜೆಪಿ ಸರ್ಕಾರಕ್ಕೆ ಮತ ಹಾಕಬೇಡಿ: ಜಿಗ್ನೇಶ್ ಮೇವಾನಿ

    ಗಾಂಧಿನಗರ: ಈಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಆಡಳಿತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರವನ್ನು `ನಿಷ್ಟ್ರಯೋಜಕ’ ಸರ್ಕಾರ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ನಿನ್ನೆ ಸಂಜೆ ಗುಜರಾತ್‌ನ ಅಹಮದಾಬಾದ್‌ಗೆ ಆಗಮಿಸಿದ ಮೇವಾನಿಗೆ ಬೆಂಬಲಿಗರಿಂದ ಅದ್ಧೂರಿ ಸ್ವಾಗತ ದೊರೆಯಿತು. ಬಂಧನದ ಸಂದರ್ಭದಲ್ಲಿ ಹೊರಬರಲು ಬೆಂಬಲ ನೀಡಿದ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಹಾಗೂ ಅಸ್ಸಾಂನ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS

     

    jignesh mevani

    ಬರುತ್ತಿದ್ದಂತೆ ವಾಗ್ದಾಳಿ ನಡೆಸಿದ ಮೇವಾನಿ, ಗುಜರಾತ್ ಸರ್ಕಾರ ನಿಷ್ಪ್ರೈೋಜಕ ಎನ್ನಲು ಬಯಸುತ್ತೇನೆ. ಇನ್ಮುಂದೆ ರಾಜ್ಯದ ಜನತೆ ಬಿಜೆಪಿಗೆ ಮತ ಹಾಕುವುದಿಲ್ಲ, ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸಭೆಗೆ ಎಂದಿಗೂ ಹಾಜರಾಗುವುದಿಲ್ಲವೆಂದು ಪ್ರತಿಜ್ಞೆ ಸ್ವೀಕರಿಸುವಂತೆ ಕರೆ ನೀಡಿದರು. ಇದನ್ನೂ ಓದಿ: 2 ವರ್ಷಗಳ ಬಳಿಕದ ದಾಖಲೆ – ಅಕ್ಷಯ ತೃತೀಯದಂದು ಭರ್ಜರಿ ಸೇಲ್

    ಒಬ್ಬ ಶಾಸಕನನ್ನು ಅಪಹರಣ ಮಾಡಿದರೂ ಏನೂ ಮಾಡದ ಈ ಸರ್ಕಾರ ಅತ್ಯಂತ ನಿಷ್ಟ್ರಯೋಜಕ. ಗುಜರಾತ್‌ನಲ್ಲಿ ಅಸ್ಸಾಂ ಪೊಲೀಸರು ಬಂಧಿಸುವ ಮೂಲಕ ಇಲ್ಲಿನ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    jignesh mevani

    ಈಚೆಗೆ ಪ್ರಧಾನಿ ನರೇಂದ್ರಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಮೇಲೆ ಮೇವಾನಿ ಅವರನ್ನು ಅಸ್ಸಾಂನ ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ಜಾಮೀನಿನ ಮೇಲೆ ನ್ಯಾಯಾಲಯ ಬಿಡುಗಡೆಗೊಳಿಸಿತ್ತು. ನಿನ್ನೆ ಗುಜರಾತ್‌ಗೆ ಆಗಮಿಸುತ್ತಿದ್ದಂತೆ ವಾಗ್ದಾಳಿ ನಡೆಸಲು ಮುಂದಾಗಿದ್ದಾರೆ.

  • ನನ್ನ ಬಂಧನದ ಹಿಂದೆ ಪ್ರಧಾನಿ ಕಾರ್ಯಾಲಯದ ಗೋಡ್ಸೆ ಭಕ್ತರ ಕೈವಾಡವಿದೆ: ಜಿಗ್ನೇಶ್‌ ಮೇವಾನಿ

    ನನ್ನ ಬಂಧನದ ಹಿಂದೆ ಪ್ರಧಾನಿ ಕಾರ್ಯಾಲಯದ ಗೋಡ್ಸೆ ಭಕ್ತರ ಕೈವಾಡವಿದೆ: ಜಿಗ್ನೇಶ್‌ ಮೇವಾನಿ

    ಗಾಂಧೀನಗರ: ನನ್ನ ಬಂಧನದ ಹಿಂದೆ ಪ್ರಧಾನಿ ಕಾರ್ಯಾಲಯದ (PMO) ಕೆಲ ಗೋಡ್ಸೆ ಭಕ್ತರು ಕೈವಾಡವಿದೆ ಎಂದು ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ಗಂಭೀರ ಆರೋಪ ಮಾಡಿದ್ದಾರೆ.

    ಅಸ್ಸಾಂ ಜೈಲಿನಿಂದ ಬಿಡುಗಡೆಯಾದ ನಂತರ ಜಿಗ್ನೇಶ್‌ ಮೇವಾನಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ಬಂಧನದ ಹಿಂದೆ ಪೂರ್ವನಿಯೋಜಿತ ಪಿತೂರಿ ನಡೆದಿತ್ತು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ದುರಾಡಳಿತ: ರಾಹುಲ್ ಗಾಂಧಿ ವಾಗ್ದಾಳಿ

    MODi

    ನಾನು ಹೂವಲ್ಲ, ಬೆಂಕಿ ಎಂದು ʻಪುಷ್ಪʼ ಚಿತ್ರದ ಡೈಲಾಗ್‌ ಹೊಡೆದಿರುವ ಜಿಗ್ನೇಶ್‌ ಮೇವಾನಿ, ನನ್ನ ತಂಡದ ಸದಸ್ಯರ ಮೊಬೈಲ್‌ ಫೋನ್‌ ಮತ್ತು ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಗುಜರಾತ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಆದರೆ ಯಾವುದೇ ಪ್ರಕರಣ ದಾಖಲಾಗಿಲ್ಲ, ಯಾವುದೇ ಬಂಧನವಾಗಿಲ್ಲ. ಈ ಸಂಬಂಧ ಯಾವುದೇ ತನಿಖೆ ಕೂಡ ನಡೆಸಲಾಗಿಲ್ಲ. ಮುಂದ್ರಾ ಬಂದರಿನಲ್ಲಿ ನಡೆದ ಬೃಹತ್ ಮಾದಕ ದ್ರವ್ಯ ಸಾಗಣೆಯ ಬಗ್ಗೆ ಯಾವುದೇ ತನಿಖೆಯಾಗಲಿಲ್ಲ. ದಲಿತ ಮಹಿಳೆಯೊಬ್ಬರು ಗುಜರಾತ್ ಸಚಿವರ ವಿರುದ್ಧ ಅತ್ಯಾಚಾರದ ಆರೋಪದ ಬಗ್ಗೆ ತನಿಖೆ ಅಥವಾ ಬಂಧನ ಕೂಡ ಆಗಿಲ್ಲ ಧರ್ಮ ಸಂಸದ್‌ನಿಂದ ನಿರ್ದಿಷ್ಟ ಸಮುದಾಯದ ನರಮೇಧಕ್ಕೆ ಕರೆ ನೀಡಲಾಯಿತು. ಅಂತಹವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗುಜರಾತ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಾಬರಿ ಧ್ವಂಸ ವೇಳೆ ಶಿವಸೇನೆ ಎಲ್ಲಿತ್ತು ಎಂದು ನಿಮ್ಮ ನಾಯಕರನ್ನು ಕೇಳಿ: ಬಿಜೆಪಿಗೆ ರಾವತ್ ತಿರುಗೇಟು

    ನನ್ನ ಟ್ವೀಟ್ ಸರಳವಾಗಿತ್ತು. ಶಾಂತಿ ಮತ್ತು ಸೌಹಾರ್ದತೆಗಾಗಿ ಪ್ರಧಾನಿ ಬಳಿ ಮನವಿ ಮಾಡಿದ್ದೆ. ಅಷ್ಟಕ್ಕೇ ಅವರು ನನ್ನನ್ನು ಬಂಧಿಸಿದರು. ಇದು ಏನನ್ನು ಸೂಚಿಸುತ್ತದೆ? ಇದು ನನ್ನನ್ನು ನಾಶ ಮಾಡಲು ಪೂರ್ವ ಯೋಜಿತ ಸಂಚು. ನನಗೆ ಎಫ್‌ಐಆರ್‌ನ ಪ್ರತಿ ನೀಡಿಲ್ಲ. ನನ್ನ ವಿರುದ್ಧದ ಸೆಕ್ಷನ್‌ಗಳನ್ನು ನನಗೆ ಬಹಿರಂಗಪಡಿಸಲಾಗಿಲ್ಲ. ನನ್ನ ವಕೀಲರೊಂದಿಗೆ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ. ಶಾಸಕನಾಗಿ ನನ್ನ ವಿಶೇಷತೆಯನ್ನು ಕಡೆಗಣಿಸಲಾಗಿದೆ. ನನ್ನ ಬಂಧನದ ಬಗ್ಗೆ ಗುಜರಾತ್ ಅಸೆಂಬ್ಲಿಯ ಸ್ಪೀಕರ್‌ಗೂ ಮಾಹಿತಿ ನೀಡಿರಲಿಲ್ಲ. ಇದರಿಂದ ಗುಜರಾತ್‌ನ ಹೆಮ್ಮೆಗೆ ಧಕ್ಕೆಯಾಗಿದೆ. ಗುಜರಾತ್ ಸರ್ಕಾರಕ್ಕೂ ನಾಚಿಕೆಯಾಗಬೇಕು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

  • ಜಾಮೀನು ಸಿಕ್ಕ ಖುಷಿಯಲ್ಲಿ ʼಪುಷ್ಪʼ ಸ್ಟೈಲ್‌ ಅನುಕರಿಸಿದ ಜಿಗ್ನೇಶ್‌ ಮೇವಾನಿ

    ಜಾಮೀನು ಸಿಕ್ಕ ಖುಷಿಯಲ್ಲಿ ʼಪುಷ್ಪʼ ಸ್ಟೈಲ್‌ ಅನುಕರಿಸಿದ ಜಿಗ್ನೇಶ್‌ ಮೇವಾನಿ

    ಗುವಾಹಟಿ: ಅಲ್ಲು ಅರ್ಜುನ್‌ ಅಭಿನಯದ ʻಪುಷ್ಪʼ ಸಿನಿಮಾದ ದೃಶ್ಯಗಳನ್ನು ಮೆಚ್ಚಿ ಸೆಲೆಬ್ರಿಟಿಗಳು, ಕ್ರಿಕೆಟಿಗರು, ಜನರು ಅನುಸರಿಸುತ್ತಿರುವುದನ್ನು ನೋಡಿದ್ದೇವೆ. ಈಚೆಗೆ ಅಸ್ಸಾಂ ಪೊಲೀಸರಿಗೆ ಬಂಧನಕ್ಕೊಳಗಾಗಿ ಕೋರ್ಟ್‌ನಿಂದ ಜಾಮೀನು ಪಡೆದ ಶಾಸಕ ಜಿಗ್ನೇಶ್‌ ಮೇವಾನಿ ಕೂಡ ಖುಷಿಗೆ ಪುಷ್ಪ ದೃಶ್ಯವನ್ನು ಅನುಸರಿಸಿ ಗಮನ ಸೆಳೆದಿದ್ದಾರೆ.

    ಶಾಸಕ ಜಿಗ್ನೇಶ್‌ ಮೇವಾನಿಗೆ ಕೋರ್ಟ್‌ ಜಾಮೀನು ನೀಡಿದೆ. ಜಾಮೀನು ಪಡೆದ ಖುಷಿ ಹಾಗೂ ಗೆಲುವಿನ ಹಿನ್ನೆಲೆಯಲ್ಲಿ ಮೇವಾನಿ ಅವರು ಪುಷ್ಪ ಸಿನಿಮಾ ದೃಶ್ಯ ಅನುಕರಿಸಿ ಅಲ್ಲು ಅರ್ಜುನ್‌ ರೀತಿ ಗಡ್ಡ ಸವರಿದರು. ಈ ದೃಶ್ಯ ಎಲ್ಲೆಡೆ ವೈರಲ್‌ ಆಗಿದೆ.

    ಜಾಮೀನು ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಂದಿಗೂ ತಲೆ ಬಾಗುವುದಿಲ್ಲ ಎಂದು ಬಿಜೆಪಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಹನುಮಾನ್‌ ಚಾಲೀಸಾ ಪಠಿಸಿದವರನ್ನು ಬಂಧಿಸಿದ್ದಕ್ಕೆ ಬಾಳಾ ಠಾಕ್ರೆ ನೊಂದಿದ್ದಾರೆ: ಕೇಂದ್ರ ಸಚಿವ

    ನನ್ನ ಬಂಧನ ಅಷ್ಟು ಸುಲಭದ ಮಾತಲ್ಲ. ಪ್ರಧಾನ ಮಂತ್ರಿ ಕಚೇರಿಯಲ್ಲಿನ ರಾಜಕೀಯ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಇದನ್ನು ಮಾಡಿರಬೇಕು ಎಂದು ಮೇವಾನಿ ಟೀಕಿಸಿದ್ದಾರೆ.

    ನಾನು ಮಾಡಿದ ಟ್ವೀಟ್ ಬಗ್ಗೆ ಈಗಲೂ ಹೆಮ್ಮೆ ಇದೆ. ಟ್ವೀಟ್‌ನಲ್ಲಿ ನಾನು ಮೂಲಭೂತವಾಗಿ ಕೋಮು ಗಲಭೆಗಳು ಸಂಭವಿಸಿದಂತೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಪ್ರಧಾನ ಮಂತ್ರಿಯನ್ನು ಕೇಳಿಕೊಂಡಿದ್ದೇನೆ. ಭಾರತದ ಪ್ರಜೆಯಾಗಿ ಇದನ್ನು ಕೇಳುವ ಹಕ್ಕು ನನಗಿದೆ. ಒಬ್ಬ ಶಾಸಕನಾಗಿ ನನ್ನ ಕರ್ತವ್ಯವೇನು? ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸುವ ಕೆಲಸ ಮಾಡಿದ್ದೇನೆ ಎಂದು ತಮ್ಮ ಟ್ವೀಟ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ.

    ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ, ಮಹಿಳೆಯೊಬ್ಬರನ್ನು ಬಳಸಿಕೊಂಡು ಕಥೆ ಹೆಣೆದು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದರು. ನನ್ನ ವಿರುದ್ಧ ಮಹಿಳೆಯನ್ನು ಬಳಸಿಕೊಂಡ ಸರ್ಕಾರ ಹೇಡಿಯಾಗಿದೆ. ಇದು ಹೇಡಿತನದ ಕೃತ್ಯ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಇದೊಂದು ಷಡ್ಯಂತ್ರ. ಇದನ್ನು ದಲಿತರಲ್ಲಿ, ಗುಜರಾತ್‌ನ ಜನರು ಸಹಿಸುವುದಿಲ್ಲ. ಇಂತಹ ಕೃತ್ಯಗಳಿಗೆ ಬಿಜೆಪಿಯವರು ಹಣ ಕೊಡುತ್ತಾರೆ. ನನ್ನ ವಿರುದ್ಧದ ಎರಡೂ ಪ್ರಕರಣಗಳು ಸುಳ್ಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಭೇಟಿಯಾದ ಶರದ್ ಪವಾರ್

    ಗುಜರಾತ್‌ ಚುನಾವಣೆ ಬರುತ್ತಿದೆ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಈ ಕುತಂತ್ರವನ್ನು ಜನ ಅರ್ಥ ಮಾಡಿಕೊಂಡಿದ್ದಾರೆ. ನನ್ನನ್ನು ಗುಜರಾತಿಗೆ ಕರೆದೊಯ್ದ ಕ್ಷಣ, ಅವರು ನನ್ನನ್ನು ಬೇರೆ ಬೇರೆ ಪ್ರಕರಣಗಳಲ್ಲಿ ಸಿಲುಕಿಸಲು ಯೋಜಿಸುತ್ತಿದ್ದಾರೆಂದು ನನಗೆ ತಿಳಿದಿತ್ತು. ಅಸ್ಸಾಂನಲ್ಲಿ ಗುಜರಾತ್‌ನ ಶಾಸಕರೊಬ್ಬರನ್ನು ಟಾರ್ಗೆಟ್ ಮಾಡಿರುವುದು ದೊಡ್ಡ ಸಂಚಿನ ಭಾಗವಾಗಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.

    ತಮ್ಮನ್ನು (ಬಿಜೆಪಿ) ಪ್ರಶ್ನಿಸುವವರ ವಿರುದ್ಧ, ಸತ್ಯದ ಪರವಾಗಿ ಮಾತನಾಡುವವರ ವಿರುದ್ಧ ಅವರು ಕೇಸ್ ಹಾಕುತ್ತಾರೆ. ಅಸ್ಸಾಂ ಮತ್ತು ಕಾಂಗ್ರೆಸ್‌ನ ಜನರು ನನಗೆ ಬೆಂಬಲ ನೀಡಿದ್ದು, ಅವರಿಗೆ ಕೃತಜ್ಞ ಎಂದು ಮೇವಾನಿ ಹೇಳಿದ್ದಾರೆ.

    ಪ್ರಧಾನಿ ವಿರುದ್ಧ ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಹಾಕಿದ್ದ ಆರೋಪದಡಿ ಶಾಸಕ ಜಿಗ್ನೇಶ್‌ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು. ಬಂಧನದ ವೇಳೆ ಮೇವಾನಿ ಅವರು ನನ್ನ ಮೇಲೆ ಹಲ್ಲೆ ನಡೆಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆಂದು ಮಹಿಳಾ ಪೊಲೀಸ್‌ ಅಧಿಕಾರಿ ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ

  • ಭಿನ್ನಾಭಿಪ್ರಾಯ ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ: ಮೋದಿಗೆ ರಾಹುಲ್‌ ತಿರುಗೇಟು

    ಭಿನ್ನಾಭಿಪ್ರಾಯ ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ: ಮೋದಿಗೆ ರಾಹುಲ್‌ ತಿರುಗೇಟು

    ನವದೆಹಲಿ: ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತೀಕ್ಷ್ಣವಾಗಿ ತಿವಿದಿದ್ದಾರೆ.

    ಶಾಸಕ ಜಿಗ್ನೇಶ್‌ ಮೇವಾನಿ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿರುವ ರಾಹುಲ್‌ ಗಾಂಧಿ, ಈ ಕ್ರಮ ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಾಂವಿಧಾನಿಕ. ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ ಜನತೆಗೆ ಮಾಡಿದ ಅವಮಾನ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂ ಪೊಲೀಸರಿಂದ ಗುಜರಾತ್ MLA ಜಿಗ್ನೇಶ್ ಮೇವಾನಿ ಬಂಧನ

    ಮೋದಿ ಜೀ, ನೀವು ರಾಜ್ಯ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಯತ್ನಿಸಬಹುದು. ಆದರೆ ನೀವು ಎಂದಿಗೂ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿಯನ್ನು ಅಸ್ಸಾಂ ಪೊಲೀಸರು ಬಂಧಿಸಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ. ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ ಜನರಿಗೆ ಮಾಡಿದ ಅವಮಾನ. ಇಂತಹ ದಬ್ಬಾಳಿಕೆ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ದನಿ ಎತ್ತಬೇಕು ಎಂದು ಟ್ವೀಟ್‌ ಮಾಡಿ ಕರೆ ನೀಡಿದ್ದಾರೆ. ಇದನ್ನೂ ಓದಿ: 5-12 ವರ್ಷದ ಮಕ್ಕಳಿಗೂ ಶೀಘ್ರದಲ್ಲಿ ವ್ಯಾಕ್ಸಿನ್?

    MODi

    ಅಸ್ಸಾಂ ಪೊಲೀಸರು ಮಧ್ಯರಾತ್ರಿ ಜಿಗ್ನೇಶ್ ಮೇವಾನಿ ಅವರನ್ನು ಕಾನೂನುಬಾಹಿರ ಮತ್ತು ಅಸಂವಿಧಾನಿಕವಾಗಿ ಬಂಧಿಸಿರುವುದು ಬಿಜೆಪಿಯ ಅಧಿಕಾರ ದಬ್ಬಾಳಿಕೆಯ ಇತ್ತೀಚಿನ ಪುರಾವೆಯಾಗಿದೆ. ಜನಪ್ರತಿನಿಧಿಯ ಟೀಕೆಗಳ ಭಯಕ್ಕೆ ಬಂಧಿಸಲಾಗಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೂ ದಾಳಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

    ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‍ನ ಪಾಲನ್‍ಪುರದ ಸರ್ಕ್ಯೂಟ್ ಹೌಸ್‍ನಿಂದ ಬಂಧಿಸಿದ್ದಾರೆ.

  • ಅಸ್ಸಾಂ ಪೊಲೀಸರಿಂದ ಗುಜರಾತ್ MLA ಜಿಗ್ನೇಶ್ ಮೇವಾನಿ ಬಂಧನ

    ಅಸ್ಸಾಂ ಪೊಲೀಸರಿಂದ ಗುಜರಾತ್ MLA ಜಿಗ್ನೇಶ್ ಮೇವಾನಿ ಬಂಧನ

    ಗಾಂಧಿನಗರ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‍ನ ಪಾಲನ್‍ಪುರದ ಸರ್ಕ್ಯೂಟ್ ಹೌಸ್‍ನಿಂದ ಬಂಧಿಸಿದ್ದಾರೆ.

    ದಲಿತ ನಾಯಕ ಮತ್ತು ರಾಜಕೀಯ ಪಕ್ಷದ ರಾಷ್ಟ್ರೀಯ ದಲಿತ ಅಧಿಕಾರ ಮಂಚ್‍ನ ಸಂಚಾಲಕರಾಗಿರುವ ಜಿಗ್ನೇಶ್ ಮೇವಾನಿ ಇತ್ತೀಚೆಗಷ್ಟೇ ಮಾಡಿದ್ದ ಕೆಲವು ಟ್ವೀಟ್‍ಗಳಿಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗುಂಡಿಕ್ಕಿ ಬಿಜೆಪಿ ಮುಖಂಡ ಜೀತು ಚೌಧರಿ ಹತ್ಯೆ

    ಏಪ್ರಿಲ್ 18ರಂದು ಜಿಗ್ನೇಶ್ ಅವರು ಭಾರತದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು, ಗೋಡ್ಸೆಯನ್ನು ದೇವರಾಗಿ ಕಾಣುತ್ತಾರೆ ಹಾಗೂ ಪೂಜಿಸುತ್ತಾರೆ. ಕೋಮು ಗಲಭೆ ನಡೆದಿರುವ ಹಿಮ್ಮತ್‍ನಗರ, ಕಂಭಾತ್ ಹಾಗೂ ವೆರಾವಲ್‍ನಲ್ಲಿ ಜನರು ಶಾಂತಿ ಮತ್ತು ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಪ್ರಧಾನಿ ಏಪ್ರಿಲ್ 20ಕ್ಕೆ ಗುಜರಾತ್‍ಗೆ ಭೇಟಿ ನೀಡಿದಾಗ ಆಗ್ರಹಿಸಬೇಕು ಎಂದು ಟ್ವೀಟ್ ಮಾಡಿದ್ದರು ಎಂದು ಕಂಡಿರುವುದಾಗಿ ದೂರುದಾರ ಅನುಪ್ ಕುಮಾರ್ ಡೇ ತಿಳಿಸಿದ್ದಾರೆ.

    ನಿನ್ನೆ ರಾತ್ರಿ ಜಿಗ್ನೇಶ್ ಮೇವಾನಿ ಅವರನ್ನು ಪೊಲೀಸರು ಬಂಧಿಸುವ ವೇಳೆ ಅವರ ಬಳಿ ಎಫ್‍ಐಆರ್ ಕಾಪಿ ಇರಲಿಲ್ಲ ಎಂದು ಬೆಂಬಲಿಗರು ತಿಳಿಸಿದ್ದಾರೆ. ಸದ್ಯ ಜಿಗ್ನೇಶ್ ಮೇವಾನಿ ಅವರನ್ನು ಪೊಲೀಸರು ಅಹಮದಾಬಾದ್‍ಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಅಸ್ಸಾಂ ಪೊಲೀಸರು ಅವರನ್ನು ರೈಲಿನಲ್ಲಿ ಗುವಾಹಟಿಗೆ ಕರೆದೊಯ್ಯಲಿದ್ದಾರೆ. ಇದನ್ನೂ ಓದಿ:  2023ರ ವಿಧಾನಸಭಾ ಚುನಾವಣೆ ಮೇಲೆ ಕೇಜ್ರಿವಾಲ್ ಚಿತ್ತ – ಬೆಂಗಳೂರಿನಲ್ಲಿ ಭಾಷಣ

    ಜಿಗ್ನೇಶ್ ಮೇವಾನಿ ಗುಜರಾತ್‍ನ ವಡ್ಗಾಮ್‍ನ ವಿಧಾನಸಭೆಯ ಶಾಸಕರಾಗಿದ್ದು, ವಕೀಲ ಕಾರ್ಯಕರ್ತ ಮತ್ತು ಮಾಜಿ ಪತ್ರಕರ್ತರು ಆಗಿದ್ದಾರೆ. ಅವರು ಪಕ್ಷೇತರ ಶಾಸಕರಾಗಿದ್ದರೂ ಕಾಂಗ್ರೆಸ್‍ಗೆ ಬೆಂಬಲ ನೀಡಿದ್ದಾರೆ.

  • ಸೆ.28 ರಂದು ಕಾಂಗ್ರೆಸ್ ಸೇರಲಿದ್ದಾರೆ ಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್

    ಸೆ.28 ರಂದು ಕಾಂಗ್ರೆಸ್ ಸೇರಲಿದ್ದಾರೆ ಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್

    ಅಹ್ಮದಾಬಾದ್: ಗುಜರಾತ್‍ನಲ್ಲಿ ಪಕ್ಷೇತರ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಹಾಗೂ ಕಮ್ಯೂನಿಸ್ಟ್ ಪಕ್ಷದ ನಾಯಕ ಕನ್ಹಯ್ಯ ಕುಮಾರ್ ಸೆಪ್ಟೆಂಬರ್ 28ರಂದು ಕಾಂಗ್ರೆಸ್ ಸೇರುತ್ತಿರುವ ಕುರಿತು ಘೋಷಿಸಿದ್ದಾರೆ.

    ಭಗತ್ ಸಿಂಗ್ ಜನ್ಮದಿನಾಚರಣೆಯಂದು ಕಾಂಗ್ರೆಸ್ ಸೇರಲು ಪ್ಲ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿಗ್ನೇಶ್ ಮೇವಾನಿ ಗುಜರಾತ್‍ನ ವಡ್ಗಮ್ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದಾರೆ. ಜಿಗ್ನೇಶ್ ಕಾಂಗ್ರೆಸ್ ಸೇರುತ್ತಿದ್ದಂತೆ ಗುಜರಾತ್‍ನ ಕಾರ್ಯಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಯೋಜಿಸಿದೆ. ಇದನ್ನೂ ಓದಿ: ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಕನ್ಹಯ್ಯ ಕುಮಾರ್ ಈ ಹಿಂದೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷರಾಗಿದ್ದಾರೆ. ಕನ್ಹಯ್ಯ ಅವರ ಜೊತೆಗೆ ಇನ್ನಷ್ಟು ಎಡಪಂಥೀಯ ನಾಯಕರನ್ನು ಕಾಂಗ್ರೆಸ್‍ಗೆ ಸೇರಿಸುವ ನಿರೀಕ್ಷೆ ಇದೆ.

    ಮುಂದಿನ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಹೊಸ ಯುವ ನಾಯಕರ ಮುಖ ಪರಿಚಯಿಸುವ ಉದ್ದೇಶದಿಂದ ಕಾಂಗ್ರೆಸ್ ಈ ಪ್ರಯೋಗ ಮಾಡುತ್ತಿದೆ. ದೆಹಲಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಹಾರ್ದಿಕ್ ಪಟೇಲ್ ಸಹ ಭಾಗವಹಿಸುತ್ತಿದ್ದಾರೆ.

  • ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ – ಚಿತ್ರದುರ್ಗ ಕೋರ್ಟಿನಿಂದ ಮೇವಾನಿಗೆ ಜಾಮೀನು

    ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ – ಚಿತ್ರದುರ್ಗ ಕೋರ್ಟಿನಿಂದ ಮೇವಾನಿಗೆ ಜಾಮೀನು

    ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ 1ನೇ ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ಆರೋಪಿಗಳಿಗೆ ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಇಂದು ಚಿತ್ರದುರ್ಗದ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮೇವಾನಿ ಅವರಿಗೆ 25 ಸಾವಿರದ ಬಾಂಡ್ ಹಾಗೂ ವ್ಯಕ್ತಿಯೊಬ್ಬರು ನೀಡಿದ ಶ್ಯೂರಿಟಿ ಮೇರೆಗೆ ನ್ಯಾಯಾಧೀಶರಾದ ಶಂಕರಪ್ಪ.ಬಿ.ಮಾಲಾಶೆಟ್ಟಿ ಜಾಮೀನು ಮಂಜೂರು ಮಾಡಿದರು. ಪ್ರಕರಣದ ವಿಚಾರಣೆಯನ್ನು ಕೋರ್ಟ್ ಜನವರಿ 2ಕ್ಕೆ ಮುಂದೂಡಿಕೆಯಾಗಿದೆ.

    ಏನಿದು ಪ್ರಕರಣ?
    ಕಳೆದ ವಿಧಾನಸಭೆ ಚುನಾವಣೆ ವೇಳೆ ಏಪ್ರಿಲ್ 6, 2018 ರಂದು ಚಿತ್ರದುರ್ಗದಲ್ಲಿ ನಡೆದ ಸಂವಾದದಲ್ಲಿ ಮತನಾಡುವಾಗ ಮೋದಿ ಸಮಾವೇಶಕ್ಕೆ ತೆರಳಿ, ಅವರ ಮೇಲೆ ಕುರ್ಚಿ ಎಸೆದು ಗಲಾಟೆ ಮಾಡಿ ಎಂದು ಮೇವಾನಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಹೀಗಾಗಿ ಕಾರ್ಯಕ್ರಮ ಸಂಘಟಕ ಟಿ.ಶಫಿವುಲ್ಲಾ ಹಾಗೂ ಜಿಗ್ನೆಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ನಗರ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

    ಈ ಸಂಬಂಧ ಚಿತ್ರದುರ್ಗ ನ್ಯಾಯಾಲಯಕ್ಕೆ ಜಿಗ್ನೇಶ್ ಮೇವಾನಿ ಹಾಜರಾಗಿದ್ದರು. ಈ ವೇಳೆ ಮಾತನಾಡಿದ ಅವರು, ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ನಾನು ಆ ರೀತಿ ಹೇಳಿಲ್ಲ, ಅಸಲಿಗೆ ನನಗೆ ಮೋದಿ ಯಾರು ಎನ್ನುವುದೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

    ಬಿಜೆಪಿ ವಿರುದ್ಧ ಕಿಡಿ:
    ಹಿಂದೂ ತುಷ್ಠೀಕರಣಕ್ಕಾಗಿ ಟಿಪ್ಪು ಹೆಸರು ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಆರೆಸ್ಸೆಸ್, ಬಿಜೆಪಿಯವರ ಹಿಡನ್ ಅಜೆಂಡಾ ಇದಾಗಿದ್ದು, ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆಯುವ ಮೂಲಕ ಮುಸ್ಲಿಂ ಸಮುದಾಯವನ್ನು ದಮನ ಮಾಡುವ ಕಾರ್ಯ ನಡೆಯುತ್ತಿದೆ. ಅಲ್ಲದೆ ಹಿಂದೂ ಮುಸ್ಲಿಂ ಸಮುದಾಯಗಳನ್ನು ವಿಭಜಿಸಲಾಗುತ್ತಿದ್ದು, ಆರೆಸ್ಸೆಸ್ ಕೋಮುವಾದಿ ಮನಸ್ಥಿತಿಯಿಂದ ಕೆಲಸ ಮಾಡುತ್ತಿದೆ. ವೈವಿಧ್ಯತೆಯಲ್ಲೂ ಏಕತೆಯಿಂದಿರುವುದೇ ದೇಶದ ಸೌಂದರ್ಯವಾಗಿದೆ. ಏಕತೆಯನ್ನು ನಾವು ಪಾಲಿಸಬೇಕಿದೆ ಎಂದರು.

    ದೇಶದಲ್ಲಿ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ತಾಂಡವಾಡುತ್ತಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಬಳಿ ಯಾವುದೇ ಉತ್ತರವಿಲ್ಲ. ಹೀಗಾಗಿ ದೇಶದ ಜನರ ಗಮನ ಬೇರೆಡೆಗೆ ಸೆಳೆಯಲು ಇಂಥ ತಂತ್ರ ಹೂಡುತ್ತಿದ್ದಾರೆ. ಪ್ರಧಾನಿ ಮೋದಿ ಚಹಾ ಮಾರಿದ ಮಾತು ಚೈಲ್ಡಿಶ್, ಜೋಕ್ ಆಫ್ ದಿ ಸೆಂಚೂರಿ. ಚಹಾ ಮರಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಈಗ ದೇಶ ಮಾರುತ್ತಿದ್ದಾರೆ. ಆರೆಸ್ಸೆಸ್, ಬಿಜೆಪಿಗೆ ದಲಿತರು, ಮುಸ್ಲಿನರು 2ನೇ ದರ್ಜೆ ನಾಗರೀಕರು. ಕೆಲಸಕ್ಕೆ ಮಾತ್ರ ಬಳಸಿಕೊಳ್ಳುವುದು ಅವರ ಅಜೆಂಡಾ ಎಂದು ವಾಗ್ದಾಳಿ ನಡೆಸಿದರು.