Tag: Jill Biden

  • ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ – ಬೈಡನ್ ಪ್ರವಾಸಕ್ಕೂ ಮುನ್ನ ಜಿಲ್ ಬೈಡನ್‍ಗೆ ಕೊರೊನಾ ಸೋಂಕು

    ಜಿ20 ಶೃಂಗಸಭೆಗೆ ಅಮೆರಿಕ ಅಧ್ಯಕ್ಷರ ಪ್ರವಾಸ – ಬೈಡನ್ ಪ್ರವಾಸಕ್ಕೂ ಮುನ್ನ ಜಿಲ್ ಬೈಡನ್‍ಗೆ ಕೊರೊನಾ ಸೋಂಕು

    ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಪತ್ನಿ ಜಿಲ್ ಬೈಡನ್ (72) (Jill Biden) ಅವರಿಗೆ ಕೊರೊನಾ (Covid-19) ಸೋಂಕು ದೃಢಪಟ್ಟಿದೆ. ಅವರಿಗೆ ಸಾಮಾನ್ಯ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಶ್ವೇತಭವನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

    ಅನಾರೋಗ್ಯದ ಹಿನ್ನಲೆ ಸೋಮವಾರ ಸಂಜೆ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಬಗ್ಗೆ ಅವರ ಮಾಧ್ಯಮ ಸಲಹೆಗಾರರಾದ ಎಲಿಜಬೆತ್ ಅಲೆಕ್ಸಾಂಡರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ ಜಿಲ್ ಬೈಡನ್ ಅವರು ಡೆಲವೇರ್‌ನ ರೆಹೋಬೋತ್ ಬೀಚ್‍ನಲ್ಲಿರುವ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಅವರಿಗೆ ಕಳೆದ ವರ್ಷ ಆಗಸ್ಟ್‌ನಲ್ಲೂ ಕೋವಿಡ್ ಸೋಂಕು ಪತ್ತೆಯಾಗಿತ್ತು. ಇದನ್ನೂ ಓದಿ: ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅರ್ಜಿ

    ಜಿಲ್ ಬೈಡನ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಅಧ್ಯಕ್ಷ ಬೈಡನ್ ಅವರಿಗೆ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಶ್ವೇತಭವನ ತಿಳಿಸಿದೆ. ಪರೀಕ್ಷೆಯಲ್ಲಿ ಅಧ್ಯಕ್ಷರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. ಅಧ್ಯಕ್ಷರನ್ನು ಈ ವಾರ ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ. ಈ ವೇಳೆ ರೋಗಲಕ್ಷಣಗಳ ಮೇಲ್ವಿಚಾರಣೆ ಮಾಡಲಾಗುತ್ತದೆ.

    ಸದ್ಯ ಅವರು ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ (G20 Summit) ಭಾಗಿಯಾಗಲಿದ್ದಾರೆ. ಅದಕ್ಕಾಗಿ ಸೆ.7 ರಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆ.8 ರಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದು, 9 ಹಾಗೂ 10 ರಂದು ನಡೆಯಲಿರುವ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್ ಅವರಿಗೆ 2022ರ ಜುಲೈನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಇದನ್ನೂ ಓದಿ: ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾನ್ ಸೀನಾ ಸೈಲ್‌ನಲ್ಲಿ ಮೋದಿ – ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್

    ಜಾನ್ ಸೀನಾ ಸೈಲ್‌ನಲ್ಲಿ ಮೋದಿ – ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್

    – ಮೋದಿ ರಿಯಲ್ ಚಾಂಪಿಯನ್ ಅಂದ್ರು ಫ್ಯಾನ್ಸ್

    ವಾಷಿಂಗ್ಟನ್: 16 ಬಾರಿ WWE ವಿಶ್ವ ಚಾಂಪಿಯನ್ ಆಗಿ ವಿಶ್ವದೆಲ್ಲೆಡೆ ಜನಪ್ರಿಯತೆ ಗಳಿಸಿರುವ ಜಾನ್ ಸೀನಾ (John Cena) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಫೋಟೋವನ್ನ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by John Cena (@johncena)

    ಅಧ್ಯಕ್ಷ ಜೋ ಬೈಡನ್ (Joe Biden) ಅವರ ಆಹ್ವಾನದ ಮೇರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ, ಜೋ ಬೈಡನ್ ಹಾಗೂ ಜಿಲ್ ಬೈಡನ್ ಅವರೊಂದಿಗೆ ಮಾತನಾಡುತ್ತಿದ್ದ ವೇಳೆ ಜಾನ್ ಸೀನಾ ಸ್ಟೈಲ್‌ನಲ್ಲಿ ಆಕ್ಷನ್ ಮಾಡಿರುವುದು ಕಂಡುಬಂದಿದೆ. ಈ ಫೋಟೋವನ್ನ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಸೀನಾ `ನೀವು ನನ್ನನ್ನ ನೋಡಲು ಸಾಧ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

    ಜಾಲತಾಣದಲ್ಲಿ ಈ ಫೋಟೋ ಭಾರೀ ಸದ್ದು ಮಾಡುತ್ತಿದ್ದು, 4 ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಈ ಫೋಟೋಗೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು `ಮೋದಿ ರಿಯಲ್ ಚಾಂಪಿಯನ್’ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ಮೋದಿಗಾಗಿ ಬೃಹತ್‌ ಔತಣ ಕೂಟ – ಮುಖೇಶ್‌ ಅಂಬಾನಿ, ಸುಂದರ್‌ ಪಿಚೈ ಸೇರಿ ಹಲವು VIP ಗಣ್ಯರು ಭಾಗಿ: ಇಲ್ಲಿದೆ ಫುಲ್‌ ಲಿಸ್ಟ್‌

    ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದರು. ಅದಕ್ಕೂ ಮುನ್ನಾ ದಿನ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದರ ಗೌರವಾರ್ಥವಾಗಿ ಅಧ್ಯಕ್ಷ ಜೋ ಬೈಡನ್ ಆಯೋಜಿಸಿದ್ದ ಬೃಹತ್ ಔತಣ ಕೂಟದಲ್ಲಿ ಭಾಗಿಯಾಗಿದ್ದರು. ಈ ಔತಣ ಕೂಟದಲ್ಲಿ ಭಾರತ ಮೂಲದ ಗೂಗಲ್ ಸಿಇಒ ಸುಂದರ್ ಪಿಚೈ, ಉದ್ಯಮಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಆನಂದ್ ಮಹೀಂದ್ರಾ ಸೇರಿದಂತೆ ಘಟಾನುಘಟಿ ಉದ್ಯಮಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಬೆಂಗಳೂರಲ್ಲೇ ಸಿಗಲಿದೆ ಅಮೆರಿಕ ವೀಸಾ – ಸಿಲಿಕಾನ್ ಸಿಟಿಯಲ್ಲಿ ರಾಯಭಾರ ಕಚೇರಿ ತೆರೆಯಲು US ನಿರ್ಧಾರ

  • ಕೊರೊನಾದಿಂದ US ಅಧ್ಯಕ್ಷ ಜೋ ಬೈಡನ್ ಗುಣಮುಖ – ಪತ್ನಿಗೆ ಸೋಂಕು

    ಕೊರೊನಾದಿಂದ US ಅಧ್ಯಕ್ಷ ಜೋ ಬೈಡನ್ ಗುಣಮುಖ – ಪತ್ನಿಗೆ ಸೋಂಕು

    ವಾಷಿಂಗ್ಟನ್: ಯುಎಸ್ ಅಧ್ಯಕ್ಷ ಜೋ ಬೈಡನ್ ಇಂದು ಕೊರೊನಾದಿಂದ ಗುಣಮುಖರಾಗಿದ್ದಾರೆ. ಆದರೆ ಜೋ ಬೈಡನ್ ಪತ್ನಿ ಹಾಗೂ ಯುಎಸ್ ಪ್ರಥಮ ಮಹಿಳೆಯೂ ಆಗಿರುವ ಜಿಲ್ ಬೈಡನ್ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

    ಸೌಮ್ಯ ಲಕ್ಷಣಗಳು ಕಂಡುಬಂದಿದ್ದು, ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದಾಗಿ ಇಂದು ಶ್ವೇತಭವನ ತಿಳಿಸಿದೆ. ಇದನ್ನೂ ಓದಿ: ಹಣ ಕೊಡದಿದ್ರೆ ಗನ್‍ನಲ್ಲಿ ಶೂಟ್ ಮಾಡೋ ಬೆದರಿಕೆ- 100 ರೂ. ಕೊಡುವಂತೆ ಲಾರಿ ಚಾಲಕನಿಗೆ ಡಿಮ್ಯಾಂಡ್

    ಅಮೆರಿಕದ ದಕ್ಷಿಣ ಕೆರೊಲಿನಾದಲ್ಲಿ ಜೋ ಬೈಡನ್ ಅವರೊಂದಿಗೆ ನಿನ್ನೆ ರಜೆಯಲ್ಲಿದ್ದಾಗ ಸೌಮ್ಯ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಬಂದಿದೆ. ಸದ್ಯ ಅವರಿಗೆ ಆಂಟಿವೈರಲ್ ಪಾಕ್ಸ್ಲೋವಿಡ್ ಔಷಧವನ್ನು ಶಿಫಾರಸು ಮಾಡಲಾಗಿದೆ. ಕನಿಷ್ಠ 5 ದಿನಗಳ ಕಾಲ ಪ್ರತ್ಯೇಕವಾಗಿರಲಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಾಧೀಶರಿಗೆ ಪ್ರಮಾಣವಚನ ಬೋಧಿಸಿದ ರಾಜ್ಯಪಾಲರು

    ಜೋ ಬೈಡನ್‌ಗೆ ಇಂದು ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಆದರೂ ರೋಗ ನಿಯಂತ್ರಣದ ಸಲುವಾಗಿ 10 ದಿನಗಳ ಕಾಲ ಮನೆಯಲ್ಲೇ ಇರಲಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಿದ್ದಾರೆ ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]