Tag: Jindal Nature Care

  • ಹೆಚ್‌ಡಿಕೆಗೆ ಅನಾರೋಗ್ಯ – 3 ದಿನಗಳಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ

    ಹೆಚ್‌ಡಿಕೆಗೆ ಅನಾರೋಗ್ಯ – 3 ದಿನಗಳಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ

    ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ತೀವ್ರ ಕಫಾ, ಕೆಮ್ಮಿನಿಂದ ಬಳಲುತ್ತಿರುವ ಹೆಚ್‌ಡಿಕೆ, ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 3-4 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸದ್ಯ ಸ್ವಲ್ಪ ಆರೋಗ್ಯ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭಿಸಿದೆ. ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೂ ಕಫಾ, ಕೆಮ್ಮು ಕಡಿಮೆಯಾಗದ ಹಿನ್ನೆಲೆ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಹೆಚ್‌ಡಿಕೆ ಇಂದು ದೆಹಲಿಗೆ ತೆರಳಬೇಕಿತ್ತು. ಆದರೆ ಅನಾರೋಗ್ಯದ ಕಾರಣ ನಾಳೆ ದೆಹಲಿಗೆ ತೆರಳಲಿದ್ದಾರೆ.